ಬೆಂಗಳೂರು : ವರುಣಾ ಕ್ಷೇತ್ರದಿಂದ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸಚಿವ ವಿ.ಸೋಮಣ್ಣ ಅವರನ್ನು ಕಣಕ್ಕಿಳಿಸಲು ಬಿಜೆಪಿ ಚಿಂತನೆ ನಡೆಸಿದೆ ಎನ್ನಲಾಗಿದ್ದು, ಈ ಕುರಿತು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ವರುಣಾ ಕ್ಷೇತ್ರದಿಂದ ಸಿದ್ದರಾಮಯ್ಯ ವಿರುದ್ಧ ಬಿ.ಎಸ್. ಯಡಿಯೂರಪ್ಪ ಪುತ್ರ ಬಿ.ವೈ. ವಿಜಯೇಂದ್ರ ಸ್ಪರ್ಧಿಸಲಿದ್ದಾರೆ ಎನ್ನಲಾಗಿತ್ತು.ಆದರೆ ವಿಜಯೇಂದ್ರ ಅವರು ಶಿಕಾರಿಪುರ ಕ್ಷೇತ್ರದಿಂದಲೇ ಸ್ಪರ್ಧಿಸುವುದು ಖಚಿತವಾಗಿದ ಹಿನ್ನೆಲೆಯಲ್ಲಿ ವರುಣಾದಲ್ಲಿ ಸಿದ್ದರಾಮಯ್ಯ ವಿರುದ್ಧ ವಿ.ಸೋಮಣ್ಣಗೆ ಬಿಜೆಪಿ ಟಿಕೆಟ್ ನೀಡಲು …
Read More »Yearly Archives: 2023
ಪ್ರಚಾರದಲ್ಲಿ ಪಾಲ್ಗೊಳ್ಳುವ ಸಿನೆಮಾ ಕಲಾವಿದರ ‘ಕಾರ್ಯಕ್ರಮ ಪ್ರಸಾರ’ ನಿಲ್ಲಿಸುವಂತೆ ‘KRS ಪಕ್ಷ’ ಆಗ್ರಹ
ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ( Karnataka Assembly Election 2023 ) ರಂಗೇರಿದೆ. ಈ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳುವ ಸಿನೆಮಾ ಕಲಾವಿದರ ಕಾರ್ಯಕ್ರಮಗಳ ಪ್ರಸಾರವನ್ನು ಚುನಾವಣೆ ಮುಗಿಯುವ ತನಕ ನಿಲ್ಲಿಸುವಂತೆ ಚುನಾವಣಾ ಆಯೋಗಕ್ಕೆ KRS ಪಕ್ಷದ ಆಗ್ರಹಿಸಿದೆ. ಈ ಕುರಿತಂತೆ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾಧಿಕಾರಿಗಳಿಗೆ ಪತ್ರವನ್ನು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಅವರು ಬರೆದಿದ್ದಾರೆ. ಆ ಪತ್ರದಲ್ಲಿ ಚುನಾವಣಾ ಪ್ರಚಾರಕ್ಕೆಂದು …
Read More »ವೈಎಸ್ ವಿ ದತ್ತಾಗೆ ಬಿಗ್ ಶಾಕ್ ಕಡೂರು ಕ್ಷೇತ್ರದಲ್ಲಿ ಕೆ.ಎಸ್. ಆನಂದ್ ಗೆ ಕಾಂಗ್ರೆಸ್ ಟಿಕೆಟ್
ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಗೆ ಈಗಾಗಲೇ 124 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದ ಎಐಸಿಸಿ ಇಂದು 42 ಕ್ಷೇತ್ರಗಳಿಗೆ ಅಭ್ಯರ್ಥಿಗಳ 2 ನೇ ಪಟ್ಟಿ ಬಿಡುಗಡೆ ಮಾಡಿದೆ. ಈ ನಡುವೆ ಜೆಡಿಎಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದ ವೈ.ಎಸ್. ವಿ ದತ್ತಾಗೆ ಬಿಗ್ ಶಾಕ್ ಎದುರಾಗಿದ್ದು, ಕಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಬಯಸಿ ಬಂದ ವೈಎಸ್ ವಿ ದತ್ತಾ ಬದಲು ಕೆ.ಎಸ್ …
Read More »ಬಳ್ಳಾರಿಯಲ್ಲಿ ಪೊಲೀಸರ ಕಾರ್ಯಾಚರಣೆ :10 ಲಕ್ಷ ರೂ. ನಗದು, 131.13 ಲೀ ಮದ್ಯ ವಶ
ಬಳ್ಳಾರಿ: ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ನೀತಿ ಸಂಹಿತೆ ಜಾರಿಯಲ್ಲಿದ್ದು, ಬುಧವಾರದಂದು ನೀತಿ ಸಂಹಿತೆ ಉಲ್ಲಂಘಿಸಿ ದಾಖಲೆಯಿಲ್ಲದೇ ಸಾಗಿಸುತ್ತಿದ್ದ 10 ಲಕ್ಷ ನಗದು ಹಣ ಸೇರಿ 131.13 ಲೀಟರ್ (ರೂ.50,268 ಸಾವಿರ ಬೆಲೆಬಾಳುವ) ಮದ್ಯ ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪವನ್ ಕುಮಾರ್ ಮಾಲಪಾಟಿ ಅವರು ಮಾಹಿತಿ ನೀಡಿದ್ದಾರೆ. ಜಿಲ್ಲೆಯಾದ್ಯಂತ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಜಾರಿಗೊಳಿಸಲು ವಿವಿಧ ತಂಡಗಳನ್ನು ರಚಿಸಲಾಗಿದ್ದು, ಈಗಾಗಲೇ ಕಾರ್ಯಪ್ರವೃತ್ತವಾಗಿದೆ. ಒಟ್ಟು 43 …
Read More »ಕಾಂಗ್ರೆಸ್ ಅಭ್ಯರ್ಥಿಗಳ 2 ನೇ ಪಟ್ಟಿ ರಿಲೀಸ್ : ಯಾವ ಸಮುದಾಯಕ್ಕೆ ಎಷ್ಟು ಟಿಕೆಟ್
ವಿಜಯಪುರ : ಕರ್ನಾಟಕ ವಿಧಾನಸಭೆ ಚುನಾವಣೆಗೆ ಈಗಾಗಲೇ 124 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದ ಎಐಸಿಸಿ ಇಂದು 42 ಕ್ಷೇತ್ರಗಳಿಗೆ ಅಭ್ಯರ್ಥಿಗಳ 2 ನೇ ಪಟ್ಟಿ ಬಿಡುಗಡೆ ಮಾಡಿದೆ. ಕಾಂಗ್ರೆಸ್ ಬಿಡುಗಡೆ ಮಾಡಿರುವ 2 ನೇ ಪಟ್ಟಿಯಲ್ಲಿ ಲಿಂಗಾಯತರಿಗೆ ಹೆಚ್ಚಿನ ಟಿಕೆಟ್ ನೀಡಲಾಗಿದೆ. ಲಿಂಗಾಯತರಿಗೆ 10, ರೆಡ್ಡಿ ಲಿಂಗಾಯ ಸಮುದಾಯಕ್ಕೆ 1 ಟಿಕೆಟ್ ಕೊಟ್ಟರೆ, ಒಕ್ಕಲಿಗ ಸಮುದಾಯಕ್ಕೆ 10 ಕ್ಷೇತ್ರಗಳಲ್ಲಿ ಟಿಕೆಟ್ ನೀಡಲಾಗಿದೆ. ಕುರುಬ ಸಮುದಾಯಕ್ಕೆ …
Read More »ನಾಳೆ ಸಿಎಂ ಬೊಮ್ಮಾಯಿ ದೆಹಲಿ ಪ್ರವಾಸ ನಾಳೆ ಮಧ್ಯಾಹ್ನ 2.30 ಕ್ಕೆ ಬಿಜೆಪಿ ಸಂಭ್ಯಾವ್ಯ ಅಭ್ಯರ್ಥಿಗಳ ಪಟ್ಟಿಯೊಂದಿಗೆ ದೆಹಲಿಗೆ
ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಕಸರತ್ತು ನಡೆಸಿರುವ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಸಂಬಂಧ ನಾಳೆ ಸಿಎಂ ಬಸವರಾಜ ಬೊಮ್ಮಾಯಿ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ನಾಳೆ ಮಧ್ಯಾಹ್ನ 2.30 ಕ್ಕೆ ಬಿಜೆಪಿ ಸಂಭ್ಯಾವ್ಯ ಅಭ್ಯರ್ಥಿಗಳ ಪಟ್ಟಿಯೊಂದಿಗೆ ದೆಹಲಿಗೆ ತೆರಳಲಿದ್ದಾರೆ. ಏಪ್ರಿಲ್ 8 ರಂದು ಬಿಜೆಪಿ ಸಂಸದೀಯ ಮಂಡಳಿಯ ಸಭೆ ನಡೆಯಲಿದ್ದು, ಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭಾಗಿಯಾಗಲಿದ್ದಾರೆ. ಬಿಜೆಪಿ ಸಂಸದೀಯ ಮಂಡಳಿ …
Read More »ಬೊಮ್ಮಾಯಿ ಅಸಾಮರ್ಥ್ಯವೇ ಮಹಾರಾಷ್ಟ್ರದ ಗಡಿ ತಂಟೆಗೆ ಕಾರಣ – ಕಾಂಗ್ರೆಸ್ ವಾಗ್ಧಾಳಿ ನಡೆಸಿದೆ
ಬೆಂಗಳೂರು: ಬಿಜೆಪಿ ಸರ್ಕಾರದ ವೈಫಲ್ಯ, ಬಸವರಾಜ ಬೊಮ್ಮಾಯಿ ಅವರ ಅಸಾಮರ್ಥ್ಯವೇ ಮಹಾರಾಷ್ಟ್ರದ ಗಡಿ ತಂಟೆಗೆ ಕಾರಣ. ಚುನಾವಣೆಗಾಗಿ ಏಕಾಏಕಿ ಕರ್ನಾಟಕದ ಮೇಲೆ ವಿಶೇಷ ಪ್ರೀತಿ ಹುಟ್ಟಿ ವಾರಕ್ಕೊಮ್ಮೆ ಕರ್ನಾಟಕಕ್ಕೆ ಬರುವ ಮೊ-ಶಾ ಜೋಡಿ ಮಹಾರಾಷ್ಟ್ರದಲ್ಲಿನ ತಮ್ಮದೇ ಸರ್ಕಾರದ ಉದ್ಧಟತನಕ್ಕೆ ಕಡಿವಾಣ ಹಾಕುತ್ತಿಲ್ಲವೇಕೆ ಬಿಜೆಪಿ ಎಂದು ಕರ್ನಾಟಕ ಕಾಂಗ್ರೆಸ್ ವಾಗ್ಧಾಳಿ ನಡೆಸಿದೆ.ಈ ಕುರಿತಂತೆ ಟ್ವಿಟ್ ಮಾಡಿದ್ದು, ರಮೇಶ್ ಜಾರಕಿಹೊಳಿ ಬಿಜೆಪಿಗೆ ದುಬಾರಿ ಮನುಷ್ಯನಾಗಿದ್ದಾರೆ, ಒಂದೆಡೆ ಸವದಿ ಜೊತೆ ಕಿರಿಕ್, ಇನ್ನೊಂದೆಡೆ ಈರಣ್ಣ …
Read More »ಕಿಚ್ಚ ಸುದೀಪ್ ಬಿಜೆಪಿ ಪಕ್ಷಕ್ಕೆ ಬೆಂಬಲ ನೀಡಿರುವ ವಿಚಾರವನ್ನು ಸ್ವಾಗತಿಸುತ್ತೇನೆ ಬಿಎಸ್ ವೈ
ಬೆಂಗಳೂರು: ನಟ ಕಿಚ್ಚ ಸುದೀಪ್ ಬಿಜೆಪಿ ಪಕ್ಷಕ್ಕೆ ಬೆಂಬಲ ನೀಡಿರುವ ವಿಚಾರವನ್ನು ಸ್ವಾಗತಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, : ನಟ ಕಿಚ್ಚ ಸುದೀಪ್ ಬಿಜೆಪಿ ಪಕ್ಷಕ್ಕೆ ಬೆಂಬಲ ನೀಡಿರುವ ವಿಚಾರವನ್ನು ಸ್ವಾಗತಿಸುತ್ತೇನೆ ಆದರೆ ಬಿಜೆಪಿಗೆ ಸುದೀಪ್ ಸಪೋರ್ಟ್ ಸಿಗುತ್ತಿರುವುದು ಕಾಂಗ್ರೆಸ್‌ನವರಿಂದ ಸಹಿಸಲು ಸಾಧ್ಯವಾಗುತ್ತಿಲ್ಲ, ಹೀಗಾಗಿ ಟೀಕೆ ವ್ಯಕ್ತಪಡಿಸುತ್ತಿದ್ದಾರೆ. ಅವರಿಗೆ ತಲೆ ಕೆಟ್ಟಿದೆ. ಇದಕ್ಕಾಗಿ ಏನೇನೋ ಮಾತನಾಡುತ್ತಿದ್ದಾರೆ ಎಂದು ಕಿಡಿಕಾರಿದರು. ಇನ್ನು ನಟ …
Read More »2023-24ನೇ ಸಾಲಿನ ‘ವಾರ್ಷಿಕ ಶೈಕ್ಷಣಿಕ ವೇಳಾಪಟ್ಟಿ’ ಪ್ರಕಟ: ‘ಬೇಸಿಗೆ ರಜೆ’ ಬಳಿಕ ‘ಶಾಲೆಗಳು ಆರಂಭ’ಶಿಕ್ಷಣ ಇಲಾಖೆ ಪ್ರಕಟಿಸಿದೆ
ಬೆಂಗಳೂರು: 2023-24ನೇ ಸಾಲಿನ ವಾರ್ಷಿಕ ಶೈಕ್ಷಣಿಕ ವೇಳಾಪಟ್ಟಿಯನ್ನು ( Annual Academic Schedule ) ಸಾರ್ವಜನಿಕ ಶಿಕ್ಷಣ ಇಲಾಖೆಯು ( School Education Department ) ಪ್ರಕಟಿಸಿದೆ. ಅದರಂತೆ ಈ ಬಾರಿ ಬೇಸಿಗೆ ರಜೆಯ ( Summer Holiday ) ಮುಕ್ತಾಯದ ನಂತ್ರ ಮೇ.29ರಿಂದಲೇ ಶಾಲೆಗಳು ಆರಂಭಗೊಳ್ಳಲಿವೆ ( School Open ). ಅ.8ರಿಂದ ದಸರಾ ಹಾಗೂ ದಿನಾಂಕ 11-04-2024ರಿಂದ ಬೇಸಿಗೆ ರಜೆ ಆರಂಭಗೊಳ್ಳಲಿದೆ. ಈ ಕುರಿತಂತೆ ಸಾರ್ವಜನಿಕ ಶಿಕ್ಷಣ …
Read More »ನಟ ಸುದೀಪ್ ಚಿತ್ರಗಳನ್ನು ನಿರ್ಬಂಧಿಸಿ : ರಾಜ್ಯ ಚುನಾವಣಾ ಆಯೋಗಕ್ಕೆ ವಕೀಲ ದೂರು
ಶಿವಮೊಗ್ಗ: ನನ್ನ ಕಷ್ಟ ಕಾಲದಲ್ಲಿ ಸದಾ ನಾನು ಮಾಮ ಎಂಬುದಾಗಿ ಕರೆಯುವಂತ ಸಿಎಂ ಬೊಮ್ಮಾಯಿ ( CM Bommai ) ಆಗಿದ್ದಾರೆ. ಅವರ ಪರವಾಗಿ ನಾನು ಚುನಾವಣೆಯಲ್ಲಿ ಪ್ರಚಾರ ಮಾಡುತ್ತೇವೆ ಎಂಬುದಾಗಿ ನಟ ಕಿಟ್ಟ ಸುದೀಪ್ ( Actor Sudeep ) ಘೋಷಿಸಿದ್ದರು. ಈ ಬೆನ್ನಲ್ಲೇ ವಿಧಾನಸಭಾ ಚುನಾವಣಾ ( Karnataka Assembly Election 2023 ) ನೀತಿ ಸಂಹಿತೆಯಿಂದಾಗಿ ಅವರ ನಟನೆಯ ಚಿತ್ರಗಳನ್ನು ತಡೆ ಹಿಡಿಯುವಂತೆ ರಾಜ್ಯ ಚುನಾವಣಾ …
Read More »