ಗದಗ: ಜಿಲ್ಲಾದ್ಯಂತ ಚುನಾವಣಾ ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದ್ದು, ಜಿಲ್ಲೆಯ ವಿವಿಧೆಡೆ ದಾಖಲೆ ರಹಿತ 95 ಲಕ್ಷ ರೂ. ನಗದು ಹಾಗೂ 80,252 ರೂ ಮೌಲ್ಯದ 188.28 ಲೀ. ಮದ್ಯ ವಶಪಡಿಸಿಕೊಂಡಿರುವ ಘಟನೆ ಬುಧವಾರ ನಡೆದಿದೆ. ಬೆಟಗೇರಿ ಪೊಲೀಸ್ ಠಾಣೆ ವ್ಯಾಪ್ತಿಯ ದಂಡಿನ ದುರ್ಗಮ್ಮ ದೇವಸ್ಥಾನದ ಹತ್ತಿರ ತೆರೆಯಲಾದ ಚೆಕ್‌ಪೋಸ್ಟ್ನಲ್ಲಿ 4 ಪ್ರತ್ಯೇಕ ಪ್ರಕರಣಗಳಲ್ಲಿ ದಾಖಲೆ ರಹಿತ 95 ಲಕ್ಷ ರೂ. ನಗದು ಪತ್ತೆಯಾಗಿದೆ. ನಗದು ಬ್ಯಾಂಕಿಗೆ ಸಂಬಂಧಿಸಿದ್ದಾಗಿದೆಯೇ …
Read More »Yearly Archives: 2023
ಗಂಡನ ಅನೈತಿಕ ಸಂಬಂಧ ಪ್ರಶ್ನಿಸಿದಕ್ಕೆ ಪತ್ನಿಯನ್ನು ಬರ್ಬರವಾಗಿ ಕೊಲೆ
ಬೆಂಗಳೂರು : ಬೆಂಗಳೂರಿನ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದಲ್ಲಿ ಗಂಡನ ಅನೈತಿಕ ಸಂಬಂಧ ಪ್ರಶ್ನಿಸಿದಕ್ಕೆ ಪತ್ನಿಯನ್ನು ಬರ್ಬರವಾಗಿ ಕೊಲೆ ಮಾಡಿದ ಆರೋಪ ಕೇಳಿ ಬಂದಿದೆ. ಮೃತ ಮಹಿಳೆ ಜಯಮಹಲ್ ಲೇಔಟ್ ನಿವಾಸಿ ಜಯಂತಿ ಎಂದು ತಿಳಿದುಬಂದಿದೆ. ಮೃತ ಮಹಿಳೆ ಗಂಡ ಬ್ಯೂಟಿ ಪಾರ್ಲರ್ ಮಹಿಳೆ ಜೊತೆ ಅನೈತಿಕ ಸಂಬಂಧವಿಟ್ಟುಕೊಂಡಿದ್ದನು ಎಂದು ಆರೋಪಿಸಲಾಗಿದೆ. ಅನೈತಿಕ ಸಂಬಂಧವನ್ನು ಪ್ರಶ್ನೆ ಮಾಡಿದ್ದಕ್ಕೆ ಪತಿಯೇ ಪತ್ನಿಯನ್ನು ಕೊಲೆ ಮಾಡಿದ ಬಳಿಕ ಆಕೆಯ ಶವವನ್ನು ಆಸ್ಪತ್ರೆಗೆ ತಂದು …
Read More »ನಮ್ಮ ಭಾಷೆಗಳು ಬೇರೆ-ಬೇರೆಯಾಗಿದ್ದರೂ ಭಾವ ಒಂದೇ: ಜಗತಾಪ
ಸೊಲ್ಲಾಪುರ: ಇದು ಗಡಿನಾಡು ಸಾಹಿತ್ಯ ಸಮ್ಮೇಳನ, ನಮ್ಮ ಗಡಿ ಸಂರಕ್ಷಣೆ ಬಗ್ಗೆ ಸರ್ಕಾರ ಚಿಂತನೆ ಮಾಡಬೇಕು. ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಬರುವ ಪ್ರದೇಶಗಳು ಬರಲೇಬೇಕು. ಅಲ್ಲದೆ ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ ಹೋಗುವ ಪ್ರದೇಶಗಳು ಹೋಗಲೇಬೇಕು. ಆಗ ಮಾತ್ರ ಎರಡು ರಾಜ್ಯಗಳ ಗಡಿ ಸಮಸ್ಯೆ ಬಗೆಹರಿಯುತ್ತದೆ. ಗಡಿನಾಡು ಕನ್ನಡಿಗರಾದ ನಾವೆಲ್ಲ ಬೇಲಿ ಮೇಲಿನ ಹೂಗಳಿದ್ದಂತೆ ಎಂದು ಮಾಜಿ ಸಚಿವೆ ಲೀಲಾದೇವಿ ಆರ್. ಪ್ರಸಾದ್ ಹೇಳಿದರು. ಕನ್ನಡ ಸಾಹಿತ್ಯ ಪರಿಷತ್ ಮಹಾರಾಷ್ಟ್ರ ಗಡಿನಾಡು ಘಟಕದ ವತಿಯಿಂದ ಜತ್ತ …
Read More »ನನ್ನ ಕಾರ್ಯಕರ್ತರೇ ನನಗೆ ಸ್ಟಾರ್ ಕ್ಯಾಂಪೇನರ್; ಎಚ್ಡಿಕೆ
ಬೆಂಗಳೂರು: ನಟರನ್ನು ನೋಡಲು ಅಭಿಮಾನಿಗಳು, ಜನರು ಬರುತ್ತಾರೆ, ಜೈಕಾರ ಹಾಕುತ್ತಾರೆ. ಅವರು ಎಲ್ಲಾ ಪಕ್ಷದ ಪರವಾಗಿಯೂ ಪ್ರಚಾರಕ್ಕೆ ಹೋಗುತ್ತಾರೆ. ಅವರಿಗೆ ಸ್ಥಿರತೆ ಇಲ್ಲ. ವೈಯಕ್ತಿಕ ಬಾಂಧವ್ಯದ ಹಿನ್ನೆಲೆ ಹೋಗಬಹುದು. ಅಂತಿಮವಾಗಿ ಜನ ತೀರ್ಮಾನ ಮಾಡುತ್ತಾರೆ ಎಂದು ಹೇಳುವ ಮೂಲಕ ನಟ ಸುದೀಪ್ ಬೊಮ್ಮಾಯಿ ಪರ ಪ್ರಚಾರಕ್ಕೆ ಬರುವುದಾಗಿ ಘೋಷಣೆ ಮಾಡುತ್ತಿದ್ದಂತೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ. ನಟ ಸುದೀಪ್ ಅವರು ಸಿಎಂ ಬಸವರಾಜ ಬೊಮ್ಮಾಯಿ ಅವರ ಮೇಲಿನ ವಿಶ್ವಾಸದಿಂದ …
Read More »ತಮ್ಮ ಮುಖ ತೋರಿಸಿದರೆ ಮತ ಬರುವುದಿಲ್ಲವೆಂದು ಬೊಮ್ಮಾಯಿ ಚಿತ್ರನಟರ ಮುಂದೆ ಶರಣಾಗಿದ್ದಾರೆ: ಕಾಂಗ್ರೆಸ್ ವ್ಯಂಗ್ಯ
ಬೆಂಗಳೂರು: ಬಿಜೆಪಿ ಅಭ್ಯರ್ಥಿಗಳ ಪರ ನಟ ಸುದೀಪ್ ಪ್ರಚಾರ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಈ ಕುರಿತಾಗಿ ಪರ ಮತ್ತು ವಿರೋಧ ಚರ್ಚೆ ನಡೆಯುತ್ತಿದೆ. ಸುದೀಪ್ ಘೋಷಣೆಗೆ ರಾಜ್ಯ ಕಾಂಗ್ರೆಸ್ ವ್ಯಂಗ್ಯವಾಡಿದೆ. ಮೋದಿ ಮುಖ ತೋರಿಸಿದರೂ ಓಟು ಗಿಟ್ಟುವುದಿಲ್ಲ. ತಮ್ಮ ಮುಖ ತೋರಿಸಿದರೂ ಮತ ಬರುವುದಿಲ್ಲ ಎಂದು ಅರಿತುಕೊಂಡು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಿತ್ರನಟರ ಮುಂದೆ ಶರಣಾಗಿದ್ದಾರೆ. ಬಿಜೆಪಿಗೆ ತೋರಿಸಲು ರಾಜಕೀಯ ನಾಯಕರಿಲ್ಲದ ಕಾರಣ ಸಿನೆಮಾ ನಾಯಕರ ಮೊರೆ ಹೋಗಿದೆ. ಮಾಜಿ …
Read More »ಬಿಜೆಪಿಗೆ ಕಿಚ್ಚ ಸುದೀಪ್ ಬೆಂಬಲ; ಈ ಬಗ್ಗೆ ಮಾಜಿ ಸಿಎಂ HD ಕುಮಾರಸ್ವಾಮಿ ಹೇಳಿದ್ದೇನು..?
ಸ್ಯಾಂಡಲ್ವುಡ್ ಖ್ಯಾತ ನಟ ಕಿಚ್ಚ ಸುದೀಪ್ ಬಿಜೆಪಿ ಪರ ಕ್ಯಾಂಪೇನ್ ಮಾಡುವುದಾಗಿ ಸುದ್ದಿಗೋಷ್ಠಿ ನಡೆಸಿ ಘೋಷಣೆ ಮಾಡಿದ್ದಾರೆ. ಈ ಬೆನ್ನಲ್ಲೇ ಸುದೀಪ್ ಬಿಜೆಪಿಗೆ ಬೆಂಬಲ ನೀಡಿದರ ಬಗ್ಗೆ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಮಾತಾಡಿದ್ದಾರೆ. ಬಿಜೆಪಿ ಪರ ಸುದೀಪ್ ಪ್ರಚಾರ ಮಾಡುವುದರ ಬಗ್ಗೆ ನಾನು ಟೀಕೆ ಮಾಡಲು ಹೋಗುವುದಿಲ್ಲ. ನನ್ನ ಕಾರ್ಯಕರ್ತರೇ ನಮ್ಮ ಪಕ್ಷದ ಸ್ಟಾರ್ ಪ್ರಚಾರಕರು. ಸುದೀಪ್ ಪ್ರಚಾರಕ್ಕೆ ಅಭಿಮಾನಿಗಳು ಜೈಕಾರ ಹಾಕಬಹುದು. ಆದರೆ, ಅದು ಮತವಾಗಿ ಪರಿವರ್ತನೆ …
Read More »ಸಿಎಂ ಬೊಮ್ಮಾಯಿ ಅವರಿಗೆ ಬೆಂಬಲ ಕೊಡಲು ನಾನು ಸಿದ್ಧ: ಕಿಚ್ಚ ಸುದೀಪ್
ಬೆಂಗಳೂರು: ಕಿಚ್ಚ ಸುದೀಪ್ ರಾಜಕೀಯ ವ್ಯಕ್ತಿಯಲ್ಲ, ಅವರು ಚಿತ್ರರಂಗದಲ್ಲಿರುವ ವ್ಯಕ್ತಿ ಅವರಿಂದು ತಮ್ಮ ನಿಲುವು, ಮನದಾಳದ ಮಾತನ್ನು ಹಂಚಿಕೊಳ್ಳಲಿದ್ದಾರೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದರು. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಟ ಕಿಚ್ಚ ಸುದೀಪ್, ಬೊಮ್ಮಾಯಿ ಅವರನ್ನು ಚಿಕ್ಕಂದಿನಿಂದಲೂ ನೊಡಿದ್ದೇನೆ. ಚಿತ್ರರಂಗದ ಕಷ್ಟದ ದಿನಗಳಲ್ಲಿ ಕೆಲವರು ನನ್ನ ಬೆನ್ನಿಗೆ ನಿಂತಿದ್ದರು. ಅವರಲ್ಲಿ ಬೊಮ್ಮಾಯಿ ಕೂಡ ಒಬ್ಬರು. ಸಿಎಂ ಬೊಮ್ಮಾಯಿ ಅವರಿಗೆ ಬೆಂಬಲ ಕೊಡಲು ನಾನು …
Read More »ಏಪ್ರಿಲ್ ನಿಂದ ಕೇಬಲ್ ದರ ಹೆಚ್ಚಳ
ಮೆಟ್ರೋ ಕಾಸ್ಟ್ ನೆಟ್ವರ್ಕ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ನ ಕೇಬಲ್ ದರ ಏಪ್ರಿಲ್ ನಿಂದ ಹೆಚ್ಚಳ ಮಾಡಲಾಗಿದೆ ಗ್ರಾಹಕರು ಸಹಕರಿಸಬೇಕು ಎಂದು ಮೆಟ್ರೋ ಕಾಸ್ಟ್ ನೆಟ್ವಕ್೯ ಇಂಡಿಯಾ ಪ್ರೈ.ಲಿನ ಎಂ.ಡಿ. ನಾಗೇಶ ಛಾಬ್ರಿಯಾ ಹೇಳಿದರು. ಬುಧವಾರ ನಗರದಲ್ಲಿ ಕರೆಯಲಾದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಕಳೆದ 30 ವರ್ಷಗಳಿಂದ ಮೆಟ್ರೋ ಕಾಸ್ಟ್ ಇಂಡಿಯಾ ಕೇಬಲ್ ಸಂಸ್ಥೆ ಕೆಲಸ ಮಾಡುತ್ತಿದೆ. ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕದಲ್ಲಿ ಮೊದಲು ರಿದ್ದಿ ಸಿದ್ಧಿ ಸಂಸ್ಥೆಯಿಂದ …
Read More »ಪ್ರೆಸ್ಟೀಟ್ ಕಿಚನ್ ಗೋಡೌನ್ ಗೆ ಬೆಂಕಿ; ಕೋಟ್ಯಾಂತರ ರೂ. ನಷ್ಟ
ಗಂಗಾವತಿ: ಹಣ್ಣಿನ ಕೋಲ್ಡ್ ಸ್ಟೋರೆಜ್ ಹಾಗೂ ಪ್ರೆಸ್ಟೀಟ್ ಕಿಚನ್ ಸ್ಟೋರ್ ಗೋಡೌನ್ ಗೆ ಬೆಂಕಿ ಆಕಸ್ಮಿಕ ಬೆಂಕಿ ತಗುಲಿ ಕೋಟ್ಯಾಂತರ ರೂ. ನಷ್ಟವಾಗಿರುವ ಘಟನೆ ನಗರದ ಬನ್ನಿಗಿಡದ ಕ್ಯಾಂಪ್ ನಲ್ಲಿ ಏ.5ರ ಬುಧವಾರ ಮುಂಜಾನೆ ಸಂಭವಿಸಿದೆ. ಅಕ್ಬರ್ ಸಾಬ ಹಾಗೂ ರಮೇಶ ಮಾರ್ವಾಡಿ ಎಂಬವವರಿಗೆ ಸೇರಿದ ಹಣ್ಣಿನ ಕೋಲ್ಡ್ ಸ್ಟೋರೆಜ್, ಪ್ರೇಸ್ಟೀಜ್ ಕಿಚನ್ ಹಾಗೂ ಎಲೆಕ್ಟ್ರಾನಿಕ್ ಅಂಗಡಿಗಳು ಎಂದು ತಿಳಿದು ಬಂದಿದೆ. ಗೋಡೌನ್ ನಲ್ಲಿ ಮುಂಜಾನೆ ಬೆಂಕಿ ಅವಘಡ ಸಂಭವಿಸಿದ್ದು, ಇದರಿಂದಾಗಿ …
Read More »ಅನಾಮಧೇಯ ವ್ಯಕ್ತಿಯಿಂದ ಖಾಸಗಿ ವಿಡಿಯೋ ಲೀಕ್ ಮಾಡುವ ಬೆದರಿಕೆ: FIR
ಬೆಂಗಳೂರು: ನಟ ಸುದೀಪ್ ಬಿಜೆಪಿ ಸೇರುತ್ತಾರೆ ಎನ್ನುವ ಸುದ್ದಿ ಚರ್ಚೆಯಲ್ಲಿರುವಾಗಲೇ, ಕಿಚ್ಚ ಸುದೀಪ್ ಅವರಿಗೆ ಅನಾಮಧೇಯ ವ್ಯಕ್ತಿಯೊಬ್ಬರಿಂದ ಬೆದರಿಕೆ ಪತ್ರ ಬಂದಿರುವ ಕುರಿತು ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ ಎಂದು ವರದಿಯಾಗಿದೆ. ಕಿಚ್ಚ ಸುದೀಪ್ ಬುಧವಾರ ಬಿಜೆಪಿ ಸೇರಿ, ಚುನಾವಣಾ ಪ್ರಚಾರದಲ್ಲಿ ಭಾಗಿಯಾಗುತ್ತಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಪರ – ವಿರೋಧ ಚರ್ಚೆಗಳು ನಡೆಯುತ್ತಿದೆ. ಇದರ ನಡುವೆಯೇ ಕಿಚ್ಚ ಸುದೀಪ್ ಅವರಿಗೆ ಅನಾಮಧೇಯ ವ್ಯಕ್ತಿಯಿಂದ ಬೆದರಿಕೆ ಪತ್ರವೊಂದು ಬಂದಿದೆ. …
Read More »