ಬೆಳಗಾವಿ: ದಾಖಲೆ ಇಲ್ಲದೇ ಸಾಗಿಸುತ್ತಿದ್ದ 40 ಲಕ್ಷ ರೂ ಮೌಲ್ಯದ ಚೆನ್ನಾಭರಣವನ್ನು ಖಾನಾಪುರ ತಾಲೂಕಿನ ನಂದಗಡ ಚೆಕ್ ಪೋಸ್ಟ್ ನಲ್ಲಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಹಳಿಯಾಳದಿಂದ ಕಕ್ಕೇರಿಗೆ ಕಾರಿನಲ್ಲಿ ಸಾಗಿಸುತ್ತಿದ್ದ ಚಿನ್ನಾಭರಣ ಹಾಗೂ ಬೆಳ್ಳಿ ಆಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. 21.25 ಲಕ್ಷ ರೂ.ಮೌಲ್ಯದ 395 ಗ್ರಾಂ ಚಿನ್ಮಾಭರಣ ಹಾಗೂ 19 ಲಕ್ಷ ರೂ.ಮೌಲ್ಯದ 28 ಕೆ.ಜಿ. ಬೆಳ್ಳಿಯ ಆಭರಣ, ಕಾರು ವಶಕ್ಕೆ ಪಡೆದುಕೊಂಡಿದ್ದಾರೆ. ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಬೆಳಗಾವಿಯ ಹಲವು ಕಡೆಗಳಲ್ಲಿ …
Read More »Yearly Archives: 2023
ಚುನಾವಣಾ ಆಯೋಗದ ಮಾರ್ಗಸೂಚಿ ಪ್ರಕಾರ ಜಿಲ್ಲೆಯ 18ಮತಕ್ಷೇತ್ರಗಳಿಗೆ ಬಿಗಿಭದ್ರತೆಯೊಂದಿಗೆ EVM ರವಾನೆ :ನಿತೇಶ್ ಪಾಟೀಲ
ಬೆಳಗಾವಿ : ಪ್ರಥಮ ರ್ಯಾಂಡಮೈಜೇಷನ್ ಬಳಿಕ ಕ್ಷೇತ್ರವಾರು ಹಂಚಿಕೆಯಾಗಿರುವ ವಿದ್ಯುನ್ಮಾನ ಮತಯಂತ್ರಗಳನ್ನು(ಇವಿಎಂ) ಚುನಾವಣಾ ಆಯೋಗದ ಮಾರ್ಗಸೂಚಿ ಪ್ರಕಾರ ಜಿಲ್ಲೆಯ ಹದಿನೆಂಟು ಮತಕ್ಷೇತ್ರಗಳಿಗೆ ಬಿಗಿಭದ್ರತೆಯೊಂದಿಗೆ ರವಾನೆ ಮಾಡಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು. ಇಲ್ಲಿನ ಹಿಂಡಲಗಾ ಗ್ರಾಮದಲ್ಲಿ ಇರುವ ಭಾರತ ಚುನಾವಣಾ ಆಯೋಗದ ಇವಿಎಂ ಉಗ್ರಾಣದಲ್ಲಿ ಇರುವ ಇವಿಎಂ ಗಳನ್ನು ರ್ಯಾಂಡಮೈಜೇಷನ್ ಪ್ರಕಾರ ಆಯಾ ಕ್ಷೇತ್ರಗಳಿಗೆ ರವಾನಿಸುವ ಪ್ರಕ್ರಿಯೆಯನ್ನು ಬುಧವಾರ (ಏ.5) ಪರಿಶೀಲಿಸಿದ ಬಳಿಕ ಅವರು ಮಾತನಾಡಿದರು. …
Read More »ಬಣ ರಾಜಕೀಯ ಮಾಡಿದರೆ ಶಾಸ್ತಿ; ಬೆಳಗಾವಿ ಮುಖಂಡರಿಗೆ ಜೋಶಿ ಎಚ್ಚರಿಕೆ
ಬೆಳಗಾವಿ: ಯಾವುದೇ ಕಾರಣಕ್ಕೂ ಗುಂಪುಗಾರಿಕೆ ರಾಜ ಕಾರಣ, ಬಣ ರಾಜಕೀಯಕ್ಕೆ ಅವಕಾಶ ಇಲ್ಲ. ಇನ್ನೊಬ್ಬರ ಕ್ಷೇತ್ರದಲ್ಲಿ ಹಸ್ತಕ್ಷೇಪ ಮಾಡುವಂತಿಲ್ಲ. ಎಲ್ಲರೂ ಒಂದಾಗಿ ಚುನಾವಣೆ ಎದುರಿಸಿ ಜಿಲ್ಲೆಯಿಂದ ಕನಿಷ್ಠ 15 ಸ್ಥಾನಗಳನ್ನು ಗೆಲ್ಲಬೇಕು. ಏನೇ ಅಸಮಾಧಾನ ಇದ್ದರೂ ನಮ್ಮ ಜತೆ ನೇರವಾಗಿ ಮಾತನಾಡಬೇಕು. – ಇದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಬೆಳಗಾವಿ ಜಿಲ್ಲೆಯ ಬಿಜೆಪಿ ಮುಖಂಡ ರಿಗೆ ನೀಡಿದ ಖಡಕ್ ಸೂಚನೆ.ಚುನಾವಣೆ ಸಂದರ್ಭದಲ್ಲಿ ಬಣ ರಾಜಕೀಯಕ್ಕೆ ಅಂತ್ಯ ಹಾಡ …
Read More »ಶ್ರೀರಾಮುಲು ವಿರುದ್ಧ ಕೆಆರ್‌ಪಿಪಿ ಅಭ್ಯರ್ಥಿ ಸ್ಪರ್ಧೆ ಖಚಿತ: ಜನಾರ್ದನ ರೆಡ್ಡಿ
ಜಮಖಂಡಿ: ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಸಚಿವ ಶ್ರೀರಾಮುಲು ಯಾವ ಕ್ಷೇತ್ರದಿಂದ ಸ್ಪಧಿ ìಸುತ್ತಾರೋ ಆ ಕ್ಷೇತ್ರದಲ್ಲಿ ನಮ್ಮ ಪಕ್ಷದ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗುವುದು ಎಂದು ಕರ್ನಾಟಕ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಗಾಲಿ ಜನಾರ್ದನರೆಡ್ಡಿ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಳ್ಳಾರಿ ಜಿಲ್ಲೆಯ ಮತಕ್ಷೇತ್ರದಲ್ಲಿ ಎಲ್ಲ ಸ್ಥಾನಗಳಲ್ಲಿ ನಮ್ಮ ಪಕ್ಷ ಗೆಲುವು ದಾಖಲಿಸಲಿದೆ. ರಾಜ್ಯದಲ್ಲಿ 30ಕ್ಕೂ ಹೆಚ್ಚು ಸ್ಥಾನ ಪಡೆಯಲು ಪ್ರಯತ್ನ ನಡೆಸಲಾಗುತ್ತಿದೆ. ಬಿಜೆಪಿ ತಮ್ಮನ್ನು ಈ ರೀತಿ ನಡೆಸಿಕೊಂಡಿರುವ …
Read More »ಬಿಜೆಪಿ ಮುಖಂಡ ರವೀಂದ್ರ ಹಂಜಿ ಅವರ ವಿರುದ್ಧ ಸರ್ಕಾರ ಕ್ರಿಮಿನಲ್ ಕೇಸ್ ದಾಖಲಿಸಿ,: ಕಿರಣ ರಜಪೂತ್
ಯಮಕನಮರಡಿ(ಬೆಳಗಾವಿ) : ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹತ್ತರಗಿ ಗ್ರಾಮದ ಸರ್ವೇ ನಂ. 445 ರಲ್ಲಿ ಸರ್ಕಾರಿ ಜಾಗವನ್ನು ಅತಿಕ್ರಮಣ ಮಾಡಿದ ಯಮಕನಮರಡಿ ಅರ್ಬನ್ ಬ್ಯಾಂಕ್ ಅಧ್ಯಕ್ಷ, ಬಿಜೆಪಿ ಮುಖಂಡ ರವೀಂದ್ರ ಹಂಜಿ ಅವರ ವಿರುದ್ಧ ಸರ್ಕಾರ ಕ್ರಿಮಿನಲ್ ಕೇಸ್ ದಾಖಲಿಸಿ, ಕಠಿಣ ಕ್ರಮ ಕೈಗೊಳ್ಳಬೇಕೆಂದು ಕಾಂಗ್ರೆಸ್ ಮುಖಂಡ ಕಿರಣ ರಜಪೂತ್ ಆಗ್ರಹಿಸಿದರು. ಪಟ್ಟಣದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಮಕನಮರಡಿ ಅರ್ಬನ್ ಬ್ಯಾಂಕ್, ರಾಜೀವ್ ಗಾಂಧಿ ಆಸ್ಪತ್ರೆ, ವಿದ್ಯಾ ವರ್ಧಕ್ …
Read More »ಖಾಸಗಿ ಬಸ್’ನಲ್ಲಿ ಸಾಗಿಸುತ್ತಿದ್ದ 2 ಕೋ.ರೂ. ನಗದು ವಶ.!
ಬೆಳಗಾವಿ : ಬೆಳಗಾವಿ ಜಿಲ್ಲೆಯ ಹಿರೇಬಾಗೇವಾಡಿ ಟೋಲ್ ಗೇಟ್ ನಲ್ಲಿ ಸೂಕ್ತ ದಾಖಲೆಗಳಿಲ್ಲದೇ ಖಾಸಗಿ ಬಸ್ ನಲ್ಲಿ ಸಾಗಿಸಲಾಗುತ್ತಿದ್ದ ಎರಡು ಕೋಟಿ ರೂಪಾಯಿ ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಈ ಖಾಸಗಿ ಬಸ್ (KA 70 1459) ಮುಂಬೈಯಿಂದ ಬೆಂಗಳೂರಿಗೆ ಹೊರಟಿತ್ತು ಎಂದು ತಿಳಿದುಬಂದಿದೆ. ಇಂದು ನಸುಕಿನಜಾವ 3.30 ರ ವೇಳೆಗೆ ಚುನಾವಣಾ ಕಾರ್ಯನಿರತ ಎಫ್‌ಎಸ್ ಟಿ ಹಾಗೂ ಪೊಲೀಸ್ ಅಧಿಕಾರಿಗಳ ತಂಡ ಜಂಟಿಯಾಗಿ ಪರಿಶೀಲನೆ ನಡೆಸಿದಾಗ ಅಕ್ರಮ ಹಣ ಪತ್ತೆಯಾಗಿದೆ.ಈ ಕುರಿತು …
Read More »ಚುನಾವಣಾ ಅಕ್ರಮ: ರಾಜ್ಯದಲ್ಲಿ ಒಟ್ಟು ₹ 47.43 ಕೋಟಿ ಮೌಲ್ಯದ ನಗದು, ವಸ್ತುಗಳ ವಶ
ಬೆಂಗಳೂರು: ರಾಜ್ಯದಲ್ಲಿ ಚುನಾವಣಾ ನೀತಿಸಂಹಿತೆ ಜಾರಿಯಾದ ದಿನದಿಂದ ಈವರೆಗೆ ಚುನಾವಣಾ ಅಕ್ರಮಕ್ಕೆ ಸಂಬಂಧಿಸಿದಂತೆ ₹ 47.43 ಕೋಟಿ ಮೌಲ್ಯದ ನಗದು, ಮದ್ಯ, ಮತದಾರರಿಗೆ ಆಮಿಷ ಒಡ್ಡಲು ಬಳಸುವ ವಸ್ತುಗಳು, ಮಾದಕವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಕುರಿತು ಪ್ರಕಟಣೆ ನೀಡಿರುವ ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ, ಒಟ್ಟು ₹ 12.82 ಕೋಟಿ ನಗದು ವಶಪಡಿಸಿಕೊಳ್ಳಲಾಗಿದೆ. ₹ 16.02 ಕೋಟಿ ಮೌಲ್ಯದ 2.78 ಲಕ್ಷ ಲೀಟರ್ ಮದ್ಯ, ₹ 6.72 ಕೋಟಿ ಮೌಲ್ಯದ …
Read More »ಪಿಎಸ್‌ಐ ಅಕ್ರಮದ ಪ್ರಮುಖ ಆರೋಪಿ ಪಾಟೀಲ ಕಲ್ಯಾಣ ರಾಜ್ಯ ಪ್ರಗತಿ ಪಕ್ಷಕ್ಕೆ ಸೇರ್ಪಡೆ
ಅಫಜಲಪುರ (ಕಲಬುರಗಿ ಜಿಲ್ಲೆ): ಪಿಎಸ್‌ಐ ಅಕ್ರಮ ನೇಮಕಾತಿ ಹಗರಣದಲ್ಲಿ ಸದ್ಯ ಜೈಲಿನಲ್ಲಿರುವ ಪ್ರಮುಖ ಕಿಂಗ್‌ಪಿನ್ ಆರ್.ಡಿ. ಪಾಟೀಲ ಜನಾರ್ದನರೆಡ್ಡಿ ನೇತೃತ್ವದ ಕಲ್ಯಾಣ ಕರ್ನಾಟಕ ಪ್ರಗತಿ ಪಕ್ಷ ಸೇರ್ಪಡೆಯಾಗಲಿದ್ದು, ಆ ಪಕ್ಷದಿಂದಲೇ ಅಫಜಲಪುರ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಅವರ ಸಹೋದರ, ಕಾಂಗ್ರೆಸ್ ಮುಖಂಡರಾಗಿದ್ದ ಮಹಾಂತೇಶ ಪಾಟೀಲ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಏಪ್ರಿಲ್ 10ರಂದು ಪಟ್ದಣದ ನ್ಯಾಷನಲ್ ಫಂಕ್ಷನ್ ಹಾಲ್‌ನಲ್ಲಿ ನಡೆಯುವ ಕಲ್ಯಾಣ ಕರ್ನಾಟಕ ಪ್ರಗತಿ ಪಕ್ಷದ ಸಮಾವೇಶದಲ್ಲಿ …
Read More »ಜೆಡಿಎಸ್ ಕುಟುಂಬ ರಾಜಕಾರಣದ ವಂಶವೃಕ್ಷ
ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿಯ ‘ಆಪರೇಷನ್’ನಿಂದ ಪಕ್ಷವನ್ನು ಉಳಿಸಿಕೊಳ್ಳಲು ಜೆಡಿಎಸ್ ಆಯ್ದುಕೊಂಡಿದ್ದ ‘ಕುಟುಂಬ ರಾಜಕಾರಣ’ದ ಮಾದರಿಯೇ ಈಗ ಆ ಪಕ್ಷಕ್ಕೆ ಮುಳುವಾಗ ಲಾರಂಭಿಸಿದೆ. ಹಲವು ವಿಘಟನೆಗಳ ನಂತರವೂ ಕೆಲವು ಜಿಲ್ಲೆಗಳಲ್ಲಿ ಪಕ್ಷದ ಬಲ ಕುಗ್ಗದಂತೆ ತಡೆದಿದ್ದ ಸಹೋದರರೇ ಈಗ ಟಿಕೆಟ್ ಹಂಚಿಕೆಯಲ್ಲಿ ಜಟಾಪಟಿಗೆ ಇಳಿದಿರುವುದು ಈ ಚುನಾವಣೆಯ ಹೊಸ ಬೆಳವಣಿಗೆ. ಹಾಸನ ವಿಧಾನಸಭಾ ಕ್ಷೇತ್ರದ ಟಿಕೆಟ್ ಗಾಗಿ ಎಚ್.ಡಿ. ರೇವಣ್ಣ ಕುಟುಂಬ ಮತ್ತು ಎಚ್.ಡಿ. ಕುಮಾರಸ್ವಾಮಿ ಮಧ್ಯೆ ನಡೆಯುತ್ತಿರುವ …
Read More »ದೆಹಲಿಯಲ್ಲಿ ಬೈರತಿ ಸುರೇಶ್ ಅವರಿಂದ ಮಾಧ್ಯಮ ಪ್ರತಿನಿಧಿ ಮೇಲೆ ಹಲ್ಲೆಗೆ ಯತ್ನ?
ನವದೆಹಲಿ: ಇಲ್ಲಿನ ಹೋಟೆಲ್‌ನಲ್ಲಿ ತಂಗಿದ್ದ ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಪ್ರತಿಕ್ರಿಯೆ ಪಡೆಯುತ್ತಿದ್ದ ವೇಳೆ ಪತ್ರಕರ್ತರೊಬ್ಬರ ಮೇಲೆ ಹೆಬ್ಬಾಳ ಶಾಸಕ ಬೈರತಿ ಸುರೇಶ್ ಹಲ್ಲೆಗೆ ಯತ್ನಿಸಿದರು. ಇದಕ್ಕೆ ಪತ್ರಕರ್ತರು ಆಕ್ರೋಶವ್ಯಕ್ತಪಡಿಸಿದರು. ಸಿದ್ದರಾಮಯ್ಯ ಮಾತನಾಡುತ್ತಿದ್ದ ವೇಳೆ ಪತ್ರಕರ್ತರು ಮೊಬೈಲ್‌ನಲ್ಲಿ ವಿಡಿಯೊ ಮಾಡಿಕೊಳ್ಳುತ್ತಿದ್ದರು. ಪತ್ರಕರ್ತರ ಮೊಬೈಲ್ ತನ್ನ ಕುತ್ತಿಗೆಗೆ ತಾಗಿತು ಎಂದು ಕುಪಿತಗೊಂಡ ಬೈರತಿ ಏಕವಚನದಲ್ಲಿ ನಿಂದಿಸಿದರು. ಇದಕ್ಕೆ ಪತ್ರಕರ್ತರು ಆಕ್ಷೇಪ ವ್ಯಕ್ತಪಡಿಸಿದರು. ‘ನಿನಗೇನು ತಲೆ ಸರಿ …
Read More »