Breaking News

Yearly Archives: 2023

ರಾಹುಕಾಲದಲ್ಲೇ ನಾಮಪತ್ರ,ಪ್ರಚಾರಕ್ಕೂ ಸ್ಮಶಾನ ದಲ್ಲೇ ಚಾಲನೆ‌: ಸತೀಶ ಜಾರಕಿಹೊಳಿ

ಬೆಳಗಾವಿ: ಈ ಬಾರಿಯೂ ರಾಹುಕಾಲದಲ್ಲಿಯೇ ನಾಮಪತ್ರ ಸಲ್ಲಿಸುತ್ತೇನೆ. ಚುನಾವಣಾ ಪ್ರಚಾರದ ವಾಹನಕ್ಕೆ ಶ್ಮಶಾನದಿಂದಲೇ ಚಾಲನೆ ನೀಡುತ್ತೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ತಿಳಿಸಿದರು. ನಗರದಲ್ಲಿ ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎ.13ರಿಂದ 20ರ ಮಧ್ಯೆ ರಾಹುಕಾಲದಲ್ಲೇ ನಾಮಪತ್ರ ಸಲ್ಲಿಸುತ್ತೇನೆ. ಇದು ಕೆಟ್ಟದ್ದು ಅಂತ ಯಾರು ಹೇಳುತ್ತಾರೆ. ಇದು ನಮ್ಮ ವಿಚಾರ. ಕಳೆದ ಮೂವತ್ತು ವರ್ಷಗಳಿಂದ ಬಸವಣ್ಣನವರು, ಡಾ|ಬಾಬಾಸಾಹೇಬ ಅಂಬೇಡ್ಕರ್‌, ಬುದ್ಧ ತೋರಿಸಿದ ದಾರಿಯಲ್ಲಿ ನಡೆಯುತ್ತಿದ್ದೇವೆ. ಮೊದಲಿನಿಂದಲೂ ಈ ಸತ್ಯದ …

Read More »

ನ್ಯಾಯಯುತ ಚುನಾವಣೆ ನಡೆಯುವುದು ಅನುಮಾನ ಎಂದ ಸಿದ್ದರಾಮಯ್ಯ

ಬೆಂಗಳೂರು: ಚುನಾವಣಾ ಪ್ರಕ್ರಿಯೆ ಚಾಲನೆಯಲ್ಲಿರುವಾಗಲೇ ನಗರದಲ್ಲಿ ಅತ್ಯಾಚಾರ, ಕೊಲೆಗಳು ನಿರ್ಭೀತಿಯಿಂದ ನಡೆಯುತ್ತಿವೆ. ಇದು ಕಳವಳಕಾರಿ ಸಂಗತಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಈ ಸರ್ಕಾರದಲ್ಲಿ ನ್ಯಾಯಯುತವಾಗಿ ಚುನಾವಣೆ ನಡೆಯುವುದು ಅನುಮಾನ. ಚುನಾವಣಾ ಆಯೋಗ ಈ ಬೆಳವಣಿಗೆಗಳನ್ನು ಗಂಭೀರವಾಗಿ ಪರಿಗಣಿಸಲಿ ಎಂದು ಆಗ್ರಹಿಸಿದ್ದಾರೆ.     ಗೋರಕ್ಷಣೆಯ ಹೆಸರಲ್ಲಿ ನಡೆದ ಹತ್ಯೆ ಕೇವಲ ಹುಚ್ಚಾಟ ಆಗಿರಲಾರದು. ಇದು ಚುನಾವಣಾ ದಿನಗಳಲ್ಲಿ ಕೋಮುದ್ವೇಷವನ್ನು ಬಡಿದೆಬ್ಬಿಸುವ ಯೋಜಿತ ಸಂಚಿನ‌ …

Read More »

ಐದು ಬಾರಿಯ ಚಾಂಪಿಯನ್ ವಿರುದ್ಧ ಆರ್​​ಸಿಬಿ ಭರ್ಜರಿ ಜಯ

ಬೆಂಗಳೂರು: ರಾಯಲ್ ಚಾಲೆಂಜರ್ಸ್​ ಬೆಂಗಳೂರು (ಆರ್​ಸಿಬಿ) ಐಪಿಎಲ್​-16ರ ಆರಂಭದಲ್ಲೇ ಐದು ಬಾರಿಯ ಚಾಂಪಿಯನ್​ ಮುಂಬೈ ಇಂಡಿಯನ್ಸ್ ತಂಡವನ್ನು ಸೋಲಿಸಿ ಭರ್ಜರಿ ಜಯ ಗಳಿಸಿದೆ. ಈ ಮೂಲಕ ಮೂರು ವರ್ಷಗಳ ಬಳಿಕ ಆರ್​ಸಿಬಿ ತವರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯವಾಡಿದ್ದು, ಈ ಸ್ಟೇಡಿಯಮ್​ಗೂ ಗೆಲುವು ಮರುಕಳಿಸಿದೆ.   ಮಾಜಿ ನಾಯಕ ವಿರಾಟ್​ ಕೊಹ್ಲಿ (82*ರನ್​, 49 ಎಸೆತ, 6 ಬೌಂಡರಿ, 5 ಸಿಕ್ಸರ್​) ಮತ್ತು ನಾಯಕ ಫಾಫ್​ ಡು ಪ್ಲೆಸಿಸ್​ (73 ರನ್​, 43 …

Read More »

ವಿನಯ್ ಧಾರವಾಡ ಗ್ರಾಮೀಣದಿಂದಲೇ ಸ್ಪರ್ಧಿಸಬೇಕು: ರಕ್ತದಲ್ಲಿ ಪತ್ರ ಬರೆದ ಅಭಿಮಾನಿಗಳ ಧರಣಿ

ಧಾರವಾಡ : ಧಾರವಾಡ ಗ್ರಾಮೀಣ- 71 ವಿಧಾನಸಭಾ ಮತಕ್ಷೇತ್ರ ಬಿಟ್ಟು ಹೋಗದೇ, ಈ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುವಂತೆ ಆಗ್ರಹಿಸಿ ಇಲ್ಲಿಯ ಬಾರಾಕೋಟ್ರಿಯಲ್ಲಿ ಇರುವ ಮಾಜಿ ಸಚಿವ ವಿನಯ ಕುಲಕರ್ಣಿ ಸ್ವಗೃಹದ ಎದುರು ಬ್ಲಾಕ್ ಕಾಂಗ್ರೆಸ್- 71ರ ನೇತೃತ್ವದಲ್ಲಿ ಅವರ ಅಭಿಮಾನಿಗಳು ರವಿವಾರ ಧರಣಿ ಸತ್ಯಾಗ್ರಹ ನಡೆಸಿದರು.   ಸಿಎಂ ಎದುರು ಸ್ಪರ್ಧೆಗಾಗಿ ಶಿಗ್ಗಾಂವಿ ಮತಕ್ಷೇತ್ರದಿಂದ ಸ್ಪರ್ಧೆ ಮಾಡುವ ಕುರಿತಂತೆ ಚರ್ಚೆ ಆಗುತ್ತಿದ್ದು, ಇದರಿಂದ ಕಾರ್ಯಕರ್ತರಲ್ಲಿ ಗೊಂದಲ ಉಂಟಾಗಿದೆ. ಯಾವುದೇ ಕಾರಣಕ್ಕೂ ಧಾರವಾಡ …

Read More »

ಬೈಲಹೊಂಗಲ ರಾಣಿ ಚನ್ನಮ್ಮ ಸೊಸೈಟಿಯಲ್ಲಿ ಐಟಿ ಅಧಿಕಾರಿಗಳ ಪರಿಶೀಲನೆ

ಬೆಳಗಾವಿ: ಜಿಲ್ಲೆಯ ಕಾಂಗ್ರೆಸ್ ಮುಖಂಡರಿಗೆ ಸೇರಿದ ಬ್ಯಾಂಕ್ ನಲ್ಲಿ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಬೈಲಹೊಂಗಲ ಪಟ್ಟಣದಲ್ಲಿರುವ ಕಿತ್ತೂರು ರಾಣಿ ಚನ್ನಮ್ಮ ಸೊಸೈಟಿಯಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ. ಕಾಂಗ್ರೆಸ್ ಮುಖಂಡ ವಿ.ಎಸ್ ಸಾಧುನವರ ಒಡೆತನದ ಸೊಸೈಟಿ ಲಾಕರ್ ಗಳಲ್ಲಿ ಯಾರೆಲ್ಲ ಚಿನ್ನ, ಹಣ ಇಟ್ಟಿದ್ದಾರೆ ಎಂದು ಮಾಹಿತಿ ಸಂಗ್ರಹ ಮಾಡಲಾಗುತ್ತಿದೆ. ನಿನ್ನೆ ರಾತ್ರಿ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ 2018ರ ಲೋಕಸಭೆ ಚುನಾವಣೆಯಲ್ಲಿ ವಿ.ಎಸ್. ಸಾಧುನವರ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರು.

Read More »

ಶಿವಲಿಂಗೇಗೌಡ ಶಾಸಕ ಸ್ಥಾನಕ್ಕೆ ರಾಜಿನಾಮೆ

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಪಕ್ಷಾಂತರ ಪರ್ವ ಚುರುಕುಗೊಂಡಿದ್ದು, ದಳಪತಿಗಳಿಗೆ ಮತ್ತೊಂದು ಆಘಾತ ಎದುರಾಗಿದೆ. ಜೆಡಿಎಸ್ ಹಿರಿಯ ಶಾಸಕ ಶಿವಲಿಂಗೇಗೌಡ ತಮ್ಮ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಅರಸಿಕೆರೆ ಕ್ಷೇತ್ರದ ಜೆಡಿಎಸ್ ಶಾಸಕ ಶಿವಲಿಂಗೇಗೌಡ 400ಕ್ಕೂ ಹೆಚ್ಚು ಕಾರ್ಯಕರ್ತರ ಜೊತೆ ಉತ್ತರ ಕನ್ನಡ ಜಿಲ್ಲೆ ಶಿರಸಿಯಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಭೇಟಿಯಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಶಿವಲಿಂಗೇಗೌಡ ಅಪಾರ ಬೆಂಬಲಿಗರೊಂದಿಗೆ ಕಾಂಗ್ರೆಸ್ ಸೇರಲು ಸಜ್ಜಾಗಿದ್ದು, ಅರಸಿಕೆರೆಯಿಂದ ಕೈ …

Read More »

ಬೆಳಗಾವಿಯಲ್ಲಿ 10ರಿಂದ 12 ಸೀಟು ಗೆಲುವು ನಿಶ್ಚಿತ; ಸತೀಶ್‌ ಜಾರಕಿಹೊಳಿ

ಬೆಳಗಾವಿ: ಕಾಂಗ್ರೆಸ್‌ನ 1ನೇ ಪಟ್ಟಿ ಈಗಾಗಲೇ ಬಿಡುಗಡೆಯಾಗಿದ್ದು, 2ನೇ ಪಟ್ಟಿಯನ್ನು ಏ. 10ರೊಳಗೆ ಬಿಡುಗಡೆಗೊಳಿಸಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಅವರು ಹೇಳಿದರು. ನಗರದ ಕಾಂಗ್ರೆಸ್ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ 12 ಕ್ಷೇತ್ರವನ್ನು ಕಾಂಗ್ರೆಸ್ ಗೆಲ್ಲುವ ಗುರಿ ಇಟ್ಟುಕೊಂಡಿದ್ದೇವೆ. 10ರಲ್ಲಿ ಗೆಲವು ಸಾಧಿಸುವುದು ನಿಶ್ಚಿತ. ಮೂರು ಕ್ಷೇತ್ರದಲ್ಲಿ ಗೊಂದಲ ಇದೆ. ಅದನ್ನು ಶೀಘ್ರ ಇತ್ಯರ್ಥ ಪಡಿಸಲಾಗುವುದು. ಮೊದಲನೇ ಹಂತದಲ್ಲಿ ಹಾಲಿ, ಮಾಜಿ ಶಾಸಕರೂ ಇದ್ದಾರೆ. ರಾಯಬಾಗ, …

Read More »

ಅತ್ತ ಮಾಡಾಳ್​ಗೆ 14 ದಿನಗಳ ನ್ಯಾಯಾಂಗ ಬಂಧನ; ಇತ್ತ ಬಿಜೆಪಿ ಕೋರ್​ ಕಮಿಟಿ ಸಭೆ, ಭಾರಿ ಚರ್ಚೆ

ಬೆಂಗಳೂರು: ಭ್ರಷ್ಟಾಚಾರ ಪ್ರಕರಣದಲ್ಲಿ ಸಿಲುಕಿಕೊಂಡಿರುವ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅತ್ತ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದು, ಇತ್ತ ಬಿಜೆಪಿ ಕೋರ್​ ಕಮಿಟಿ ಸಭೆಯಲ್ಲಿ ಬಿರುಸಿನ ಚರ್ಚೆ ನಡೆಯುತ್ತಿದೆ. 2023ರ ರಾಜ್ಯ ಸಾರ್ವತ್ರಿಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರಿನ ಹೊರವಲಯದ ರೆಸಾರ್ಟೊಂದರಲ್ಲಿ ಇಂದು ಜಿಲ್ಲಾವಾರು ಬಿಜೆಪಿ ಕೋರ್ ಕಮಿಟಿ ಸಭೆ ನಡೆಯುತ್ತಿದೆ. ಘಟಾನುಘಟಿ ನಾಯಕರ ಸಮ್ಮುಖದಲ್ಲಿ ನಡೆಯುತ್ತಿರುವ ಈ ಸಭೆಯಲ್ಲಿ 16 ಜಿಲ್ಲೆಗಳ ಜಿಲ್ಲಾ ಸಮಿತಿ ಸದಸ್ಯರು ಭಾಗಿಯಾಗಿದ್ದಾರೆ. ಸಿಎಂ …

Read More »

ವಿಧಾನಸಭಾ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ JDS ಶಾಸಕ ಕೆ.ಎಂ. ಶಿವಲಿಂಗೆ ಗೌಡ

ಶಿರಸಿ: ಚುನಾವಣೆ ಘೋಷಣೆಯಾದ ಬಳಿಕ ಪಕ್ಷಾಂತರ ಹೆಚ್ಚಾಗಿದೆ. ಜೆಡಿಎಸ್‌ನ ಶಾಸಕ ಕೆ. ಎಂ. ಶಿವಲಿಂಗೆ ಗೌಡ ವಿಧಾನಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಇಂದು ಶಿರಸಿಯ ಗೃಹ ಕಚೇರಿಯಲ್ಲಿ ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಭೇಟಿ ಮಾಡಿದ ಅರಸೀಕರೆಯ ಜೆಡಿಎಸ್ ಶಾಸಕ ಕೆ. ಎಂ. ಶಿವಲಿಂಗೆ ಗೌಡ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಅರಸೀಕರೆಯಲ್ಲಿ ಕಳೆದ ತಿಂಗಳು ಜೆಡಿಎಸ್ ಪಕ್ಷದ ಬೃಹತ್ ಸಮಾವೇಶ ನಡೆದಿತ್ತು. ಪಕ್ಷದ ಚಟುವಟಿಕೆಗಳಿಂದ ದೂರ ಇದ್ದ ಅರಸೀಕರೆಯ …

Read More »

ಬಸ್ ನಿಲ್ದಾಣಕ್ಕೆ ಅವರೇ ಹೋಗಿ ಸರ್ಕಾರಿ ಕಾರು ಕೊಟ್ಟು ಬಂದ್ರು; ಡಾ. ಕೇಲಗಾರ ಕಾರ್ಯಕ್ಕೆ ಸಿಬ್ಬಂದಿ ಶ್ಲಾಘನೆ

ರಾಣೆಬೆನ್ನೂರ: ಚುನಾವಣೆ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಎನ್‌ಡಬ್ಲೂೃಕೆಎಸ್‌ಆರ್‌ಟಿಸಿ ಅಧ್ಯಕ್ಷ ಡಾ. ಬಸವರಾಜ ಕೇಲಗಾರ ತಮಗೆ ನೀಡಿದ ಸರ್ಕಾರದ ಕಾರನ್ನು ತಾವೇ ಸ್ವತಃ ಬಸ್ ನಿಲ್ದಾಣಕ್ಕೆ ತೆಗೆದುಕೊಂಡು ಹೋಗಿ ಸರಿಯಾಗಿ ಬೆಳಗ್ಗೆ 11.30ಕ್ಕೆ ಅಧಿಕಾರಿಗಳಿಗೆ ಹಸ್ತಾಂತರ ಮಾಡುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ.   ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದ ಮೇಲೆ ಡಾ. ಬಸವರಾಜ ಕೇಲಗಾರ ಅವರನ್ನು ಆರಂಭದಲ್ಲಿ ಎನ್‌ಡಬ್ಲೂೃಕೆಎಸ್‌ಆರ್‌ಟಿಸಿ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿತ್ತು. ಕಳೆದ ಎರಡ್ಮೂರು ತಿಂಗಳ ಹಿಂದೆ ಅಧ್ಯಕ್ಷರನ್ನಾಗಿ …

Read More »