ಬೆಂಗಳೂರು: ಬಳ್ಳಾರಿ ಜಿಲ್ಲೆಯ ಕೂಡ್ಲಿಗಿಯ ಬಿಜೆಪಿ ಶಾಸಕ ಎನ್ ವೈ ಗೋಪಾಲಕೃಷ್ಣ ( BJP MLA N Y Gopalakrishna ) ಇಂದು ಬಿಜೆಪಿಗೆ ರಾಜೀನಾಮೆ ನೀಡಲಿದ್ದಾರೆ ಎಂದು ತಿಳಿದು ಬಂದಿದೆ. ಈ ಬಾರಿ ಬಿಜೆಪಿ ಪಕ್ಷದಿಂದ ಟಿಕೆಟ್ ಕೈ ತಪ್ಪೋ ಭೀತಿ ಎದುರಾಗಿದ್ದು, ಹೀಗಾಗಿಯೇ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎನ್ನಲಾಗುತ್ತಿದೆ. ಶಾಸಕ ಎನ್ ವೈ ಗೋಪಾಲಕೃಷ್ಣ ಅವರು ಇಂದು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದು, ಬಿಜೆಪಿಯನ್ನು ತೊರೆಯಲಿದ್ದಾರೆ …
Read More »Yearly Archives: 2023
ಕೆಆರ್‌ಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಬೆಂಗಳೂರು: ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವ ತನ್ನ 47 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪಕ್ಷದ ಅಧ್ಯಕ್ಷ ರವಿಕೃಷ್ಣಾ ರೆಡ್ಡಿ ಅವರು ಗುರುವಾರ ಬಿಡುಗಡೆ ಮಾಡಿದರು. ತಿಪಟೂರು; ಗಂಗಾಧರ ಕರೀಕೆರೆ, ಕುಣಿಗಲ್; ರಘು ಜಾಣಗೆರೆ, ತುಮಕೂರು ನಗರ; ಗಜೇಂದ್ರ ಕುಮಾರ್ ಗೌಡ, ಕೊರಟಗೆರೆ; ರವಿಕುಮಾರ್. ಕೆ.ಸಿ, ಕೆ.ಆರ್.ಪುರ; ಬೈರತಿ ಆರೋಗ್ಯಸ್ವಾಮಿ, ಯಶವಂತಪುರ; ರವಿಕುಮಾರ್, ಬಸವನಗುಡಿ; ಎಲ್.ಜೀವನ್, ಮಹದೇವಪುರ; ಶಿವಾಜಿ ಆರ್.ಲಮಾಣಿ, ಬೆಂಗಳೂರು ದಕ್ಷಿಣ; ವಿಜಯರಾಘವ ಮರಾಠೆ, ಆನೆಕಲ್; …
Read More »ಒಳ ಮೀಸಲಾತಿ: ತಲೆ ಬೋಳಿಸಿಕೊಂಡು ಶ್ರದ್ಧಾಂಜಲಿ ಸಲ್ಲಿಕೆ
ಗದಗ/ದಾವಣಗೆರೆ/ಕೊಪ್ಪಳ: ಒಳ ಮೀಸಲಾತಿ ವಿರೋಧಿಸಿ ಬಂಜಾರ, ಲಂಬಾಣಿ ವಡ್ಡರ, ಕೊರಚ, ಕೊರಮ ಸೇರಿದಂತೆ ಪರಿಶಿಷ್ಟ ಜಾತಿಯ ವಿವಿಧ ಸಮಾಜದವರು ರಾಜ್ಯದ ವಿವಿಧೆಡೆ ಗುರುವಾರವೂ ಪ್ರತಿಭಟಿಸಿದರು. ಗದಗದಲ್ಲಿ ಬೃಹತ್ ಪ್ರತಿಭಟನೆ ನಡೆಸಿದ ಈ ಸಮುದಾಯಗಳ ಜನರು, ‘ಸಮುದಾಯಕ್ಕೆ ಅನ್ಯಾಯವಾಗುತ್ತಿದ್ದರೂ ಶಾಸಕರು, ಸಂಸದರು ಚಕಾರ ಎತ್ತುತ್ತಿಲ್ಲ. ಇಂತಹ ಶಾಸಕರು ಸಮುದಾಯದ ಪಾಲಿಗೆ ಇಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿ, ಅವರೆಲ್ಲರಿಗೆ ಎಳ್ಳುನೀರು ಬಿಟ್ಟು, ತಲೆ ಬೋಳಿಸಿಕೊಂಡು ಶ್ರದ್ಧಾಂಜಲಿ ಅರ್ಪಿಸಿ ಪಿಂಡಪ್ರದಾನ ಮಾಡಿದರು. ಕಿತ್ತೂರು ರಾಣಿ ಚೆನ್ನಮ್ಮನ …
Read More »ಪೂಜೆ ಸಲ್ಲಿಸಿ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಿದ ಡಾ.ಅಂಜಲಿ ನಿಂಬಾಳಕರ್
ಖಾನಾಪುರ: ಸ್ಥಳೀಯ ಶಾಸಕಿ ಡಾ.ಅಂಜಲಿ ನಿಂಬಾಳಕರ ಗುರುವಾರ ಪಟ್ಟಣದ ಚೌರಾಶಿದೇವಿ ಮತ್ತು ತಾಲೂಕಿನ ಕಕ್ಕೇರಿ ಗ್ರಾಮದ ಬಿಷ್ಠಾದೇವಿ ದೇವಾಲಯಗಳಲ್ಲಿ ಉಭಯ ಶಕ್ತಿದೇವಿಯರಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಮುಂಬರುವ ಚುನಾವಣೆಯ ಪ್ರಚಾರ ಕಾರ್ಯಕ್ಕೆ ವಿದ್ಯುಕ್ತ ಚಾಲನೆ ನೀಡಿದರು. ಕಕ್ಕೇರಿ ಗ್ರಾಮದ ಬಿಷ್ಠಾದೇವಿ ಆಲಯದ ಮುಂಭಾಗದಲ್ಲಿ ತಮ್ಮ ಬೆಂಬಲಿಗರು ಮತ್ತು ಕಾಂಗ್ರೆಸ್ ಮುಖಂಡರೊಂದಿಗೆ ಪಕ್ಷದ ಪ್ರಚಾರ ವಾಹನಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ಅವರು, “ತಾಲೂಕಿನ ವಿವಿಧ ಭಾಗಗಳಲ್ಲಿ ಕಳೆದ 5 ವರ್ಷಗಳಿಂದ ಹಲವು …
Read More »4 ಐಎಎಸ್ ಅಧಿಕಾರಿಗಳ ಹಠಾತ್ ವರ್ಗಾವಣೆ
ಬೆಂಗಳೂರು: ಬೆಳಗಾವಿ ಪ್ರಾದೇಶಿಕ ಆಯುಕ್ತರಾಗಿ ಡಾ. ಗೌತಮ ಬಗಾದಿ ವರ್ಗಾವಣೆಯಾಗಿದ್ದಾರೆ. ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಈ ವರ್ಗಾವಣೆ ಮಾಡಲಾಗಿದೆ. ಪ್ರಾದೇಶಿಕ ಆಯುಕ್ತರಾಗಿದ್ದ ಎಂ.ಜಿ.ಹಿರೇಮಠ ಅವರನ್ನು ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ಮಂಡಳಿಗೆ ವರ್ಗಾಯಿಸಲಾಗಿದೆ. ಧಾರವಾಡ ಜಿಲ್ಲಾ ಪಂಚಾಯತ ಸಿಇಒ ಸುರೇಶ್ ಇಟ್ನಾಳ ಅವರನ್ನು ದಾವಣಗೆರೆ ಜಿಲ್ಲಾ ಪಂಚಾಯತಕ್ಕೆ ವರ್ಗಾಯಿಸಲಾಗಿದೆ. ಧಾರವಾಡ ಜಿಲ್ಲಾ ಪಂಚಾಯತ ಸಿಇಒ ಆಗಿ ಸ್ವರೂಪ ಟಿಕೆ ನೇಮಕಗೊಂಡಿದ್ದಾರೆ.
Read More »ಸ್ವಾತಂತ್ರ್ಯ ಹೋರಾಟದಲ್ಲಿ ರಂಗಭೂಮಿ ಪಾತ್ರ ಮುಖ್ಯ; ಅಜಿತ ವಾರಕರಿ
ಬೆಳಗಾವಿ: ದೇಶಕ್ಕೆ ಸ್ವಾತಂತ್ರ್ಯ ಸಿಗುವಲ್ಲಿ ರಂಗಭೂಮಿಯ ಪಾತ್ರ ಬಹು ಮುಖ್ಯವಾಗಿದೆ. ಸ್ವಾತಂತ್ರ್ಯ ಪೂರ್ವದಲ್ಲಿ ಹೆಚ್ಚು ಜನ ಅನಕ್ಷರಸ್ಥರಿದ್ದರು. ಜನರಲ್ಲಿ ದೇಶಾಭಿಮಾನ ಮೂಡಿಸುವುದು, ದೇಶದ ಸ್ವಾತಂತ್ರ್ಯದ ಅವಶ್ಯಕತೆ ಕುರಿತು ತಿಳಿಸಿಕೊಡುವುದು ಅಷ್ಟೇ ಅಲ್ಲದೆ, ಎಲ್ಲರಲ್ಲಿ ಒಗ್ಗಟ್ಟನ್ನು ಮೂಡಿಸುವುದು ಕಷ್ಟದ ಕೆಲಸವಾಗಿತ್ತು. ಈ ಎಲ್ಲ ಕೆಲಸವನ್ನು ಮಾಡುವಲ್ಲಿ ನಾಟಕ ಪ್ರಮುಖ ಪಾತ್ರ ವಹಿಸಿತು ಎಂದು ಬೆಳಗಾವಿಯ ಭಾರತೀಯ ಜೀವ ವಿಮಾ ನಿಗಮದ ಹಿರಿಯ ವಿಭಾಗಾಧಿಕಾರಿ ಅಜಿತ ವಾರಕರಿ ಹೇಳಿದರು. ವಿಶ್ವ ರಂಗಭೂಮಿ ದಿನಾಚರಣೆ ಅಂಗವಾಗಿ …
Read More »ನೀತಿ ಸಂಹಿತೆ ಉಲ್ಲಂಘನೆ: ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಎಫ್ ಐಆರ್
ಬೆಳಗಾವಿ: ನಿಪ್ಪಾಣಿ ಪಟ್ಟಣದ ಮುನ್ಸಿಪಲ್ ಆವರಣದಲ್ಲಿ ಮಹಿಳೆಯರಿಗಾಗಿ ಹಮ್ಮಿಕೊಂಡಿದ್ದ ಅತಿಶಿನ-ಕುಂಕುಮ ಕಾರ್ಯಕ್ರಮ ವೇಳೆ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ಸಚಿವೆ ಶಶಿಕಲಾ ಜೊಲ್ಲೆ ಸೇರಿ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ. ನಿಪ್ಪಾಣಿ ಪಟ್ಟಣದ ಮುನ್ಸಿಪಲ್ ಆವರಣದಲ್ಲಿ ಮಹಿಳೆಯರಿಗಾಗಿ ಅರಿಶಿನ- ಕುಂಕುಮ ಕಾರ್ಯಕ್ರಮ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ಶಶಿಕಲಾಜೊಲ್ಲೆ ಹಾಗೂ ರಣರಾಗಿನಿ ಮಹಿಳಾ ಮಂಡಳ ಅಧ್ಯಕ್ಷರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಅತಿಶಿನ ಕುಂಕುಮ ಕಾರ್ಯಕ್ರಮದಲ್ಲಿ ಶಶಿಕಲಾ ಜೊಲ್ಲೆ …
Read More »ನಂದಿನಿ ಮೊಸರು ಪಾಕೆಟ್ ಮೇಲೆ ಹಿಂದಿಯ ‘ದಹಿʼ ; HDK ಆಕ್ರೋಶ
ನಂದಿನಿ ಪ್ರೋ ಬಯೊಟಿಕ್ ಮೊಸರು ಪಾಕೆಟ್ ಮೇಲೆ ಹಿಂದಿಯ ‘ದಹಿ’ ಎಂದು ಮುದ್ರಿಸಿರುವುದು ಹಾಗೂ ಅದನ್ನು ಕಡ್ಡಾಯವಾಗಿ ಮುದ್ರಿಸುವಂತೆ ಭಾರತೀಯ ಆಹಾರ ಸುರಕ್ಷತೆ, ಗುಣಮಟ್ಟ ಪ್ರಾಧಿಕಾರವು ಕೆಎಂಎಫ್ ಗೆ ಆದೇಶ ನೀಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತಂತೆ ಟ್ವೀಟ್ ಮಾಡಿರುವ ಅವರು, ಹಿಂದಿ ಹೇರಿಕೆಗೆ ಕನ್ನಡಿಗರ ವಿರೋಧವಿದೆ ಎಂದು ಗೊತ್ತಿದ್ದರೂ ನಂದಿನಿ ಪ್ರೋ ಬಯೊಟಿಕ್ ಮೊಸರು ಪಾಕೆಟ್ ಮೇಲೆ ಹಿಂದಿಯ ‘ದಹಿ’ ಎಂದು ಮುದ್ರಿಸಿರುವುದು,ಅದನ್ನು …
Read More »ರೈತರು ಇದರ ಪ್ರಯೋಜನ ಪಡೆದುಕೊಳ್ಳುವಂತೆ ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.
ಗೋಕಾಕ : ಕೆಎಂಎಫ್ ರೈತರ ಬೃಹತ್ ಸಂಸ್ಥೆಯಾಗಿದ್ದು ರೈತರ ಶ್ರೇಯೋಭಿವೃದ್ಧಿಗೆ ಮತ್ತು ಅವರ ಆರ್ಥಿಕ ಬಲವರ್ಧನೆಗಾಗಿ ಸಾಕಷ್ಟು ಯೋಜನೆಗಳನ್ನು ಅನುಷ್ಠಾನ ಮಾಡಿದ್ದು, ರೈತರು ಇದರ ಪ್ರಯೋಜನ ಪಡೆದುಕೊಳ್ಳುವಂತೆ ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಇತ್ತೀಚೆಗೆ ಇಲ್ಲಿನ ಎನ್‌ಎಸ್‌ಎಫ್ ಅತಿಥಿ ಗೃಹದಲ್ಲಿ ಜಿಲ್ಲಾ ಹಾಲು ಒಕ್ಕೂಟದಿಂದ ಒಟ್ಟು ೮.೬೦ ಲಕ್ಷ ರೂ.ಗಳ ಚೆಕ್‌ಗಳನ್ನು ಫಲಾನುಭವಿಗಳಿಗೆ ವಿತರಿಸಿ ಮಾತನಾಡಿದ ಅವರು, ರೈತರು ಹೈನುಗಾರಿಕೆಗೆ ಹೆಚ್ಚಿನ ಪ್ರೋತ್ಸಾಹ ನೀಡಿದರೆ ಹಾಲು ಉತ್ಪಾದಕರ ಸಂಘಗಳು …
Read More »ಸಿದ್ದರಾಮಯ್ಯ ಅವರ ಬಯೋಪಿಕ್‌ನ ಪೋಸ್ಟರ್ ರಿಲೀಸ್
ಬೆಂಗಳೂರು: ಸ್ಯಾಂಡಲ್ವುಡ್ನಲ್ಲಿ ಜೀವನಾಧರಿತ ಕಥೆಯನ್ನು ಆಧರಿಸಿ ಸಿನಿಮಾಗಳನ್ನು ಮಾಡಲಾಗುತ್ತಿದೆ. ಇದೀಗ ರಾಮನವಮಿ ಹಬ್ಬದ ಶುಭ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಯೋಪಿಕ್‌ನ ಪೋಸ್ಟರ್ ರಿಲೀಸ್ ಆಗಿದೆ. ಚಿತ್ರಕ್ಕೆ ‘ಲೀಡರ್ ರಾಮಯ್ಯ’ ಎಂದು ಹೆಸರಿಡಲಾಗಿದ್ದು, ಸಿದ್ದರಾಮಯ್ಯ ಅಭಿಮಾನಿ ಸಂಘದಿಂದ ಸಿನಿಮಾದ ಮೊದಲ ಪೋಸ್ಟರ್ನ್ನು ಸಿದ್ದರಾಮಯ್ಯ ನಿವಾಸದಲ್ಲಿ ಇಂದು(ಮಾ.30) ಬಿಡುಗಡೆ ಮಾಡಲಾಗಿದೆ. ಈ ಸಿನಿಮಾದಲ್ಲಿ ಸಿದ್ದರಾಮಯ್ಯನವರ ಪಾತ್ರವನ್ನು ತಮಿಳಯ ನಟ ವಿಜಯ್ ಸೇತುಪತಿ ಮಾಡಲಿದ್ದಾರೆ. ಚಿತ್ರವನ್ನು ಸತ್ಯರತ್ನಂ ನಿರ್ದೇಶಿಸಲಿದ್ದಾರೆ. ಹಯಾತ್ ಫೀರ್ …
Read More »