Breaking News

Yearly Archives: 2023

₹40 ಸಾವಿರ ಲಂಚ ಪಡೆಯುತ್ತಿದ್ದಾಗ ಪಿಎಸ್‌ಐ, ಕಾನ್‌ಸ್ಟೆಬಲ್‌ ಬಂಧನ

ರಾಣೆಬೆನ್ನೂರು: ವ್ಯಕ್ತಿಯೊಬ್ಬರಿಂದ ಮನೆ ಬಾಡಿಗೆ ವಸೂಲಿ ಮಾಡಿಕೊಡಲು ₹ 40 ಸಾವಿರ ಲಂಚ ಪಡೆಯುತ್ತಿದ್ದಾಗ ಇಲ್ಲಿನ ಅಶೋಕನಗರ ಠಾಣೆ ಪಿಎಸ್‌ಐ ಮತ್ತು ಕಾನ್‌ಸ್ಟೆಬಲ್‌ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಪಿಎಸ್‌ಐ ಸುನೀಲ ತೇಲಿ, ವಾಹನ ಚಾಲಕ ಹಾಗೂ ಕಾನ್‌ಸ್ಟೆಬಲ್‌ ಸಚಿನ್‌ ಓಲೇಕಾರ ಸಿಕ್ಕಿಬಿದ್ದವರು. ಇವರ ಜೊತೆಗೆ ಉಡುಪಿ ಟಿಸ್ಟಾಲ್‌ ಮಾಲೀಕ ಸಂತೋಷ್‌ ಶೆಟ್ಟಿ ಅವರನ್ನು ಲೋಕಾಯುಕ್ತ ಬಂಧಿಸಿದ್ದು, ಕೋರ್ಟ್‌ಗೆ ಹಾಜರುಪಡಿಸಿದ್ದಾರೆ. ದೂರುದಾರ ಸಿದ್ಧೇಶ್ವರ ನಗರದ ಅಫ್ರೋಜ್‌ ಅಹ್ಮದ್‌ ನೂರ ಅಹ್ಮದ್‌ಸಾಬ್‌ ಊದಗಟ್ಟಿ ಅವರಿಗೆ …

Read More »

ಗಡ್ಕರಿ ಕಚೇರಿಗೆ ಬೆಳಗಾವಿಯಿಂದ ಮತ್ತೆ ಕೊಲೆ ಬೆದರಿಕೆ ಕರೆ

ಬೆಳಗಾವಿ: ಕೇಂದ್ರ ಸಚಿವ ನಿತಿನ್‌ ಗಡ್ಕರಿ ಅವರ ನಾಗ್ಪುರದ ಕಚೇರಿಗೆ ಬೆಳಗಾವಿಯಿಂದಲೇ ಮಂಗಳವಾರ ಮತ್ತೆ ಬೆದರಿಕೆ ಕರೆ ಮಾಡಲಾಗಿದೆ. ಆದರೆ, ಈ ಕರೆಯನ್ನು ಸದ್ಯ ಹಿಂಡಲಗಾ ಜೈಲಿನಲ್ಲಿರುವ ಕೈದಿ ಜಯೇಶ್‌ ಪೂಜಾರಿ ಮಾಡಿಲ್ಲ ಎಂದು ಜೈಲಿನ ಅಧಿಕಾರಿಗಳು ತಿಳಿಸಿದ್ದಾರೆ.   ‘ನನಗೆ ₹10 ಕೋಟಿ ಹಣ ನೀಡಬೇಕು. ಇಲ್ಲದಿದ್ದರೆ ನಿತಿನ್‌ ಗಡ್ಕರಿ ಅವರನ್ನು ಕೊಲೆ ಮಾಡುತ್ತೇನೆ’ ಎಂದು ಹೇಳಿಕೊಂಡು ಬೆಳಗಾವಿಯಿಂದ ಜಯೇಶ್‌ ಪೂಜಾರಿ ಎಂಬ ವ್ಯಕ್ತಿ ಕರೆ ಮಾಡಿದ್ದಾಗಿ ನಾಗ್ಪುರ ಪೊಲೀಸರು …

Read More »

ಪೊಲೀಸರ ಮೇಲೇ ಹಲ್ಲೆಗೆ ಮುಂದಾದ ದರೋಡೆಕೋರರು

ಬೀದರ್: ಬಂಧಿಸಲು ಹೋಗಿದ್ದ ಪೊಲೀಸರ ಮೇಲೆಯೇ ದರೋಡೆಕೋರರು ಹಲ್ಲೆ ಮಾಡಲು ಮುಂದಾಗಿದ್ದು, ಬಳಿಕ ಸರ್ಕಲ್ ಪೊಲೀಸ್ ಇನ್​ಸ್ಪೆಕ್ಟರ್​ ಗುಂಡು ಹಾರಿಸಬೇಕಾದ ಪ್ರಸಂಗ ಎದುರಾಗಿತ್ತು. ಬೀದರ್​ನಲ್ಲಿ ಇಂಥದ್ದೊಂದು ಪ್ರಕರಣ ನಡೆದಿದೆ.   ಇಲ್ಲಿನ ಮೈಕೂರ್​ನ ರಿಂಗ್​ರೋಡ್​ನಲ್ಲಿ ಈ ಘಟನೆ ನಡೆದಿದೆ. ಹಲವು ದರೋಡೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಖದೀಮರನ್ನು ತಮಗೆ ಸಿಕ್ಕ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿ ಹೆಡೆಮುರಿ ಕಟ್ಟಲು ಪೊಲೀಸರು ಮುಂದಾಗಿದ್ದ ಸಂದರ್ಭದಲ್ಲಿ ಈ ಹಲ್ಲೆಯತ್ನ ನಡೆದಿದೆ.   ಇಬ್ಬರು ದರೋಡೆಕೋರರು …

Read More »

ಯುಗಾದಿ.. ಅರ್ಥ ಆಚರಣೆ ವಿಶ್ಲೇಷಣೆ

ಭಾರತೀಯ ಸಂಸ್ಕೃತಿಯೇ ಹಾಗೆ! ಜೀವನವನ್ನು, ಮನುಷ್ಯನನ್ನು, ಜೀವನಕ್ರಮವನ್ನು, ಜೀವನಕ್ಕೆ ಆಶ್ರಯ, ಪುಷ್ಟಿ, ತುಷ್ಟಿಗಳನ್ನು ನೀಡುವ ಭೂಮಿ, ನೀರು, ಆಕಾಶ, ಗಾಳಿಗಳನ್ನು, ಇದಕ್ಕೆ ಆಧಾರವಾಗಿ ನಿಲ್ಲುವ ದೇಶ, ಮಾತಾಪಿತೃಗಳು, ಗುರುಹಿರಿಯರು, ರಾಜ, ಪಶುಪಕ್ಷಿಗಳನ್ನು ದೈವೀಕರಿಸಿ ಉದಾತ್ತೀಕರಿಸಿ ಇವುಗಳೆಡೆಗೆ ಉತ್ಸಾಹ, ಹುಮ್ಮಸ್ಸುಗಳು ಪ್ರತಿನಿತ್ಯವೂ ಧುಮ್ಮಿಕ್ಕುವಂತೆ ಇದು ಮಾಡುವುದರ ಪರಿಯನ್ನು ನೋಡಿಯೇ ತಿಳಿಯಬೇಕು. ವೇದಗಳಲ್ಲಿ ಬರುವ ಈ ಜೀವನೋತ್ಸಾಹ ಮತ್ತೆಲ್ಲಿ ಕಾಣಲಾದೀತು! ಪಶ್ಯೇಮ ಶರದಃ ಶತಂ| ಜೀವೇಮ ಶರದಃ ಶತಂ | ಶೃಣುಯಾಮ ಶರದಃ …

Read More »

ಬಿಜೆಪಿ ಉತ್ಸಾಹಕ್ಕೆ ಆಕಾಂಕ್ಷಿಗಳು ಅಡ್ಡಗಾಲು: ರಥಯಾತ್ರೆಗಳಿಗೆ ತಟ್ಟಿದ ಪೈಪೋಟಿಯ ಬಿಸಿ

ಬೆಂಗಳೂರು :ಪ್ರಧಾನಿ ನರೇಂದ್ರ ಮೋದಿ ಸೇರಿ ಕೇಂದ್ರ ನಾಯಕರ ನಿರಂತರ ಭೇಟಿ, ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆಯಿಂದ ಆಡಳಿತ ಬಿಜೆಪಿಯಲ್ಲಿ ಹೆಚ್ಚಿರುವ ಉತ್ಸಾಹಕ್ಕೆ ಪಕ್ಷದ ಟಿಕೆಟ್ ಆಕಾಂಕ್ಷಿಗಳು ಅಡ್ಡಗಾಲಾಗಿದ್ದಾರೆ. ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿ, ಎರಡನೇ ಪಟ್ಟಿಗೆ ಬಿಡುಗಡೆಗೆ ತಯಾರಿ ನಡೆಸಿದೆ. ಪ್ರತಿಪಕ್ಷ ಕಾಂಗ್ರೆಸ್ ಕೂಡ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಪ್ರಾರಂಭಿಸಿ ಮೊದಲ ಪಟ್ಟಿ ತ್ವರಿತವಾಗಿ ಘೋಷಿಸಿ ಕಾರ್ಯಕರ್ತರಲ್ಲಿ ಹುಮ್ಮಸ್ಸು ತುಂಬಲು ಸನ್ನದ್ಧವಾಗಿದೆ. ಆದರೆ ಬಿಜೆಪಿ ಪಾಳೆಯದಲ್ಲಿ ಮೇಲ್ನೋಟಕ್ಕೆ ಯಾವುದೇ …

Read More »

ಸಾರ್ವಜನಿಕರು ಗೂಡ್ಸ್ ವಾಹನಗಳಲ್ಲಿ ಸಂಚರಿಸಬಾರದು:ಜಿಲ್ಲಾಧಿಕಾರಿ ನಿತೇಶ್ ಪಾಟೀಲ

ಬೆಳಗಾವಿ: ಜಿಲ್ಲೆಯಲ್ಲಿ ಗೂಡ್ಸ್ ವಾಹನಗಳಲ್ಲಿ ಪ್ರಯಾಣಿಕರನ್ನು ಕರೆದೊಯ್ಯವುದು ಕಂಡುಬಂದರೆ‌ ಅಂತಹ ವಾಹನಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಎಚ್ಚರಿಕೆ ನೀಡಿದ್ದಾರೆ. ಗೂಡ್ಸ್ ವಾಹನಗಳಲ್ಲಿ ಜನರನ್ನು ಕರೆದೊಯ್ಯುವುದನ್ನು ಚುನಾವಣಾ ಆಯೋಗ ಕೂಡ ಗಂಭೀರವಾಗಿ ಪರಿಗಣಿಸಿದೆ. ಗೂಡ್ಸ್ ವಾಹನಗಳಲ್ಲಿ ಜನರನ್ನು ಕರೆದೊಯ್ಯುವುದನ್ನು ಮೋಟಾರು ವಾಹನ ಕಾಯ್ದೆ ಪ್ರಕಾರ ನಿಷೇಧಿಸಲಾಗಿರುತ್ತದೆ. ಪೊಲೀಸ್ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಇಂದಿನಿಂದ ಜಿಲ್ಲೆಯಾದ್ಯಂತ ತೀವ್ರ ತಪಾಸಣೆ ನಡೆಸಲಿದ್ದಾರೆ. ಕಾನೂನು ಉಲ್ಲಂಘನೆ ಕಂಡುಬಂದರೆ ಕಠಿಣ ಕ್ರಮವನ್ನು …

Read More »

ಖಾನಾಪುರದಲ್ಲಿ ಡಾ.ಸೋನಾಲಿ ಸರ್ನೋಬತ್ ಬಿಜೆಪಿಯ ಪ್ರಬಲ ಆಕಾಂಕ್ಷಿ

ಖಾನಾಪುರ: ಕರ್ನಾಟಕ ವಿಧಾನ ಸಭೆ ಚುನಾವಣೆ ಇನ್ನೇನು ಘೋಷಣೆಯಾಗಲಿದೆ. ಇಡೀ ರಾಜ್ಯದಲ್ಲಿ ಚುನಾವಣೆ ವಾತಾವರಣ ನಿರ್ಮಾಣವಾಗಿದೆ. ಅಘೋಷಿತ ನೀತಿ ಸಂಹಿತೆ ಜಾರಿಯಾಗಿದೆ. ರಾಜಕೀಯ ಪಕ್ಷಗಳು ಕಳೆದ 3 ತಿಂಗಳನಿಂದಲೆ ಚುನಾವಣೆ ಮೂಡ್ ಗೆ ಜಾರಿವೆ. ಪ್ರಮುಖ ಮೂರೂ ಪಕ್ಷಗಳು ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ತೊಡಗಿವೆ. ಪಕ್ಷಾಂತರ ಪರ್ವವೂ ಜೋರಾಗಿದೆ. ಚುನಾವಣೆ ಘೋಷಣೆಯಾಗುತ್ತಿದ್ದಂತೆ ಇನ್ನಷ್ಟು ಘಟಾನುಘಟಿಗಳು ಪಕ್ಷ ಬದಲಾವಣೆ ಮಾಡುವ ಮುನ್ಸೂಚನೆ ಈಗಾಗಲೆ ಕಾಣಿಸಿದೆ. ಪಕ್ಷಾಂತರಿಗಳಿಗಾಗಿ ಮೂರೂ ಪಕ್ಷಗಳು ಕೆಲವು ಸೀಟ್ …

Read More »

ಬೆಳಗಾವಿಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಜಿಲ್ಲೆಯ ಸಂಭಾವ್ಯ ಅಭ್ಯರ್ಥಿಗಳ ಲೇಟೆಸ್ಟ್ ಮಾಹಿತಿ

ಬೆಳಗಾವಿ: ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬುಧವಾರ ಬಿಡುಗಡೆಯಾಗುವ ಸಾಧ್ಯತೆ ಇದೆ. ರಾಜ್ಯದ ಸುಮಾರು 125 – 150 ಕ್ಷೇತ್ರಗಳ ಮೊದಲ ಪಟ್ಟಿ ಬಿಡುಗಡೆಯಾಗಬಹುದು. ಇದರಲ್ಲಿ ಬೆಳಗಾವಿ ಜಿಲ್ಲೆಯ 12-14 ಕ್ಷೇತ್ರಗಳ ಅಭ್ಯರ್ಥಿಗಳ ಘೋಷಣೆ ಸಾಧ್ಯತೆ ಇದೆ. ಬೆಳಗಾವಿ ಜಿಲ್ಲೆಯ 2 -4 ಕಡೆಗಳಲ್ಲಿ ಅಚ್ಛರಿಯ ಅಭ್ಯರ್ಥಿಗಳನ್ನು ಕಾಂಗ್ರೆಸ್ ಕಣಕ್ಕಿಳಿಸುವ ನಿರೀಕ್ಷೆ ಇದೆ. ಬೆಳಗಾವಿ ಜಿಲ್ಲೆಯ ಸಂಭಾವ್ಯ ಅಭ್ಯರ್ಥಿಗಳ ಲೇಟೆಸ್ಟ್ ಮಾಹಿತಿ ಇಲ್ಲಿದೆ: ಬೆಳಗಾವಿ ಗ್ರಾಮೀಣ – ಲಕ್ಷ್ಮೀ ಹೆಬ್ಬಾಳಕರ್ ಬೆಳಗಾವಿ …

Read More »

ಸಿಆರ್‌ಪಿಎಫ್‌ನಲ್ಲಿ 9,212 ಕಾನ್‌ಸ್ಟೆಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು: ಮೆಟ್ರಿಕುಲೇಷನ್ ಅಥವಾ 10 ನೇ ತರಗತಿ ಮುಗಿಸಿ ವಿವಿಧ ಕೌಶಲ್ಯ ಹೊಂದಿರುವವರಿಗೆ ಕೇಂದ್ರ ಸಶಸ್ತ್ರ ಮೀಸಲು ಪೊಲೀಸ್ ಪಡೆಯಲ್ಲಿ (ಸಿಆರ್‌ಪಿಎಫ್) ದೊಡ್ಡ ಪ್ರಮಾಣದ ನೇಮಕಾತಿಗೆ ಚಾಲನೆ ನೀಡಲಾಗಿದೆ. ಸಿಆರ್‌ಪಿಎಫ್‌ನಲ್ಲಿ ಪುರುಷ ಮತ್ತು ಮಹಿಳೆಯರಿಗೆ ‘ಟೆಕ್ನಿಷಿಯನ್’ ಹಾಗೂ ‘ಟ್ರೇಡ್ಸ್‌ಮನ್’ ಕಾನ್‌ಸ್ಟೆಬಲ್ ಎಂಬ ಒಟ್ಟು 9,212 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಇದರಲ್ಲಿ 9,105 ಹುದ್ದೆಗಳು -ಪುರುಷರಿಗೆ ಹಾಗೂ 107 ಹುದ್ದೆಗಳು ಮಹಿಳೆಯರಿಗೆ ಮೀಸಲಿವೆ. ಹುದ್ದೆಗಳು ರಾಜ್ಯವಾರು ಹಂಚಿಕೆಯಾಗಿದ್ದು ಇದೇ ಮಾರ್ಚ್ 27 ರಿಂದ www.crpf.gov.in …

Read More »

ಬೆಳಗಾವಿ: ಎಂಇಎಸ್‌ನಿಂದ ಶಿವಾಜಿ ಪ್ರತಿಮೆ ‘ಶುದ್ಧೀಕರಣ’

ಬೆಳಗಾವಿ: ‘ಬಿಜೆಪಿ ಹಾಗೂ ಕಾಂಗ್ರೆಸ್‌ ಪಕ್ಷಗಳು ರಾಜಕೀಯ ಲಾಭಕ್ಕಾಗಿ ಪ್ರತಿಮೆಯನ್ನು ಬಳಸಿಕೊಂಡು, ಶಿವಾಜಿ ಮಹಾರಾಜರಿಗೆ ಅಪಚಾರ ಎಸಗಿದ್ದಾರೆ’ ಎಂದು ಆರೋಪಿಸಿದ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್‌), ರಾಜಹಂಸಗಡ ಕೋಟೆಯಲ್ಲಿ  ಪ್ರತಿಮೆ ಶುದ್ಧೀಕರಣಗೊಳಿಸಿತು.   ಪಂಚ ನದಿಗಳಿಂದ ನೀರು ತಂದು, ಪ್ರತಿಮೆ ಶುಚಿಗೊಳಿಸಲಾಯಿತು. ನಂತರ ಕ್ಷೀರಾಭಿಷೇಕ ಮಾಡಲಾಯಿತು. ರಾಯಗಡದಿಂದ ಅರ್ಚಕರನ್ನು ಆಹ್ವಾನಿಸಿ, ವಿಶೇಷ ಪೂಜೆ ಸಲ್ಲಿಸಲಾಯಿತು. ಸಾವಿರಾರು ಜನರು ಇದಕ್ಕೆ ಸಾಕ್ಷಿಯಾದರು. ಈಗಾಗಲೇ ಎರಡು ಬಾರಿ ಅನಾವರಣಗೊಂಡಿದ್ದ ಶಿವಾಜಿ ಪ್ರತಿಮೆ ‘ಶುದ್ಧೀಕರಣ’ ನೆಪದಲ್ಲಿ …

Read More »