ಚಿಕ್ಕಮಗಳೂರು : ಲಿಂಗಾಯತ ಸಮುದಾಯಕ್ಕೆ ಪ್ರಾಮುಖ್ಯತೆ ಕೊಡಬೇಕಿಲ್ಲ ಎಂಬ ಹೇಳಿಕೆ ಕುರಿತು ವ್ಯಾಪಕ ಚರ್ಚೆಯಾಗುತ್ತಿರುವ ವೇಳೆಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಚಿಕ್ಕಮಗಳೂರು ಶಾಸಕ ಸಿ.ಟಿ.ರವಿ ಸ್ಪಷ್ಟನೆ ನೀಡಿದ್ದು, ”ಕಾಂಗ್ರೆಸ್ ಸುಳ್ಳಿನ ಫ್ಯಾಕ್ಟರಿಯಿಂದ ಸುಳ್ಳಿನ ಸುದ್ದಿ ಹಬ್ಬಿಸಿದ್ದಾರೆ” ಎಂದಿದ್ದಾರೆ. ”ಕನಸಿನಲ್ಲೂ ಕೂಡ ಜಾತಿ ರಾಜಕಾರಣ ಮಾಡಿದವನಲ್ಲ ಜಾತಿಯ ಬಗ್ಗೆ ಯೋಚನೆಯನ್ನು ಮಾಡಲ್ಲ,ಸುಳ್ಳು ಸುದ್ದಿ ಹಬ್ಬಿಸುವ ಮೂಲಕ ಲಿಂಗಾಯತ ವಿರೋಧಿ ಭಾವನೆ ಹುಟ್ಟು ಹಾಕುವ ಕೆಲಸವನ್ನ ಮಾಡುತ್ತಿದ್ದಾರೆ. ಇದರ ಹಿಂದೆ ಕಾಂಗ್ರೆಸ್ …
Read More »Yearly Archives: 2023
ಸಿಡಿಲಿಗೆ ರೈತ, ಹೋರಿ ಬಲಿ: ಓರ್ವನಿಗೆ ಗಾಯ, ದ್ರಾಕ್ಷಿ ಬೆಳೆ ಹಾನಿ
ವಿಜಯಪುರ: ಬೇಸಿಗೆ ಮಳೆಯ ಬಿರುಗಾಳಿ, ಸಿಡಿಲಿಗೆ ಜಿಲ್ಲೆಯಲ್ಲಿ ಓರ್ವ ರೈತ ಹಾಗೂ ಒಂದು ಜಾನುವಾರು ಬಲಿಯಾಗಿದ್ದು, ಮತ್ತೋರ್ವ ರೈತ ಗಾಯಗೊಂಡಿರುವ ಘಟನೆ ವರದಿಯಾಗಿದೆ. ಜಿಲ್ಲೆಯಲ್ಲಿ ಬುಧವಾರ ಮಧ್ಯರಾತ್ರಿಯಿಂದ ಬಿರುಗಾಳಿ, ಗುಡು, ಸಿಡಿಲಿನ ಅಬ್ಬರ ಜೋರಾಗಿದೆ. ಪರಿಣಾಮ ಗೋದಿ ರಾಶಿಯನ್ನು ಮಳೆಯಿಂದ ರಕ್ಷಿಸಲು ತಾಡಪತ್ರಿ ಹೊದಿಸುವಾಗ ಬಬಲೇಶ್ವರ ತಾಲೂಕಿನ ಸಂಗಾಪೂರ ಎಸ್.ಎಚ್. ಗ್ರಾಮದ ಯುವ ರೈತ ಬಸವರಾಜ ಹಣಮಂತ ಹಮಾರಿ ಹಾಗೂ ಸಂಗಪ್ಪ ಹಣಮಂತ ಹಮಾರಿ ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ …
Read More »ಕನ್ನಡದ ಕೀರ್ತಿ ಪತಾಕೆಯನ್ನು ಜಗತ್ತಿನಾದ್ಯಂತ ಮೊಳಗಿಸಿದ “ಕಾಂತಾರ’ ನಟ-ನಿರ್ದೇಶಕ ರಿಷಭ್ ಶೆಟ್ಟಿ
ಜಿನೇವಾ: ಕನ್ನಡದ ಕೀರ್ತಿ ಪತಾಕೆಯನ್ನು ಜಗತ್ತಿನಾದ್ಯಂತ ಮೊಳಗಿಸಿದ “ಕಾಂತಾರ’ ನಟ-ನಿರ್ದೇಶಕ ರಿಷಭ್ ಶೆಟ್ಟಿ ವಿಶ್ವಸಂಸ್ಥೆಯಲ್ಲಿ ಕನ್ನಡದ ದನಿಯನ್ನು ಹೊಮ್ಮಿಸಿದ್ದಾರೆ. ಗುರುವಾರ ವಿಶ್ವಸಂಸ್ಥೆಯ ವಾರ್ಷಿಕ ಸಭೆಯಲ್ಲಿ ಮಾತನಾಡಿದ ರಿಷಭ್, ಭಾರತದ ನಾಗರಿಕ ಸಮಾಜ ತನ್ನ ಪರಿಸರ ವನ್ನು ರಕ್ಷಿಸಲು ಪಣ ತೊಡುತ್ತದೆ. ಇಂಥ ಪ್ರಜ್ಞೆಗೆ ಸಿನೆಮಾ ಮಾಧ್ಯಮವೂ ನೆರವಾಗುತ್ತದೆ ಎಂದು ಹೇಳುತ್ತ ನಿಸರ್ಗ ಮಯ ಚಿತ್ರ ಕಾಂತಾರದ ಮಹತ್ವವನ್ನು ವಿವರಿಸಿದರು. ಭಾರತದ ಹಲವಾರು ಸಿನೆಮಾಗಳು ವಾಸ್ತ ವಿಕ ಮತ್ತು ಕಾಲ್ಪನಿಕ ಕಥೆಗಳ ಮೂಲಕ ಪರಿಸರದ ಮಹತ್ವವನ್ನು ಜಗತ್ತಿಗೆ …
Read More »ಚುನಾವಣೆ ದಿನಾಂಕ ನಿಗದಿಗೆ ದಿನಗಣನೆ: ರಾಜ್ಯಕ್ಕೆ ರಾಷ್ಟ್ರ ನಾಯಕರ ದಾಂಗುಡಿ
ರಾಜ್ಯ ವಿಧಾನಸಭೆಗೆ ಚುನಾವಣೆಗೆ ದಿನಾಂಕ ನಿಗದಿಗೆ ದಿನಗಣನೆ ಆರಂಭವಾಗಿರುವಂತೆಯೇ ವಿವಿಧ ರಾಜಕೀಯ ಪಕ್ಷಗಳ ರಾಷ್ಟ್ರೀಯ ನಾಯಕರು ರಾಜ್ಯದತ್ತ ದಾಂಗುಡಿ ಇಡಲಾರಂಭಿಸಿದ್ದಾರೆ. ಮಹಾ ಸಂಗಮಕ್ಕೆ 10 ಲಕ್ಷ ಮಂದಿ ಬೆಂಗಳೂರು: ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆ ಮಾ. 25ರಂದು ದಾವಣಗೆರೆಯಲ್ಲಿ ಸಮಾಪನಗೊಳ್ಳಲಿದ್ದು, ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿರುವ ಈ “ಮಹಾ ಸಂಗಮ’ದಲ್ಲಿ 10 ಲಕ್ಷ ಮಂದಿ ಭಾಗವಹಿಸುವ ನಿರೀಕ್ಷೆ ಇದೆ. ಈ ಮೂಲಕ ಈ ಹಿಂದೆ ದಾವಣಗೆರೆಯಲ್ಲಿ ನಡೆದ “ಸಿದ್ದರಾಮೋತ್ಸವ’ಕ್ಕೆ ಪ್ರತ್ತಸ್ತ್ರ ಪ್ರಯೋಗಿಸಲು ಬಿಜೆಪಿ …
Read More »ಗಂಡು ಮಗು ಜನಿಸಲಿಲ್ಲವೆಂದು ನೆರೆಮನೆಯ ಗಂಡು ಮಗುವನ್ನು ಕೊಲೆಗೈದ ಮಹಿಳೆಗೆ ಜೀವಾವಧಿ ಶಿಕ್ಷೆ
ಚಿಕ್ಕೋಡಿ: ಗಂಡು ಮಗು ಜನಿಸಲಿಲ್ಲವೆಂದು ಹತಾಶೆಗೊಂಡು ಸಂಬಂಧಿಕರ ಗಂಡು ಮಗುವನ್ನು ನೀರಿನ ಬ್ಯಾರಲ್ ನಲ್ಲಿ ಮುಳುಗಿಸಿ ಕೊಲೆ ಮಾಡಿದ ಆರೋಪಿ ಮಹಿಳೆಗೆ ಚಿಕ್ಕೋಡಿ ಏಳನೆ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಜೀವಾವಧಿ ಶಿಕ್ಷೆ ನೀಡಿ ತೀರ್ಪು ನೀಡಿದೆ. ಕಾಗವಾಡ ತಾಲೂಕಿನ ಶೇಡಬಾಳ ಗ್ರಾಮದ ಜಯಶ್ರೀ ಬಾಹುಬಲಿ ಅಲಾಸೆ ಎಂಬ ಮಹಿಳೆಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ನೀಡಿದೆ. ಕಳೆದ ದಿ.24-8-2018 ರಂದು ಶೇಡಬಾಳ ಗ್ರಾಮದ ಕುರುಬರ ಗಲ್ಲಿಯ ರಾಜು ತಾತ್ಯಾಸಾಬ ಅಲಾಸೆ ಎಂಬುವವರ …
Read More »ಕೌಜಲಗಿ| ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಬಿಜೆಪಿ ಪಣ: ಶಿವರಾಜ ಸಿಂಗ್ ಚವ್ಹಾಣ್
ಕೌಜಲಗಿ: ‘ದೇಶದ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಪ್ರಧಾನಿ ನರೇಂದ್ರ ಮೋದಿ ಸಂಕಲ್ಪ ಮಾಡಿದ್ದಾರೆ. ಹಿಂದುಳಿದ ವರ್ಗಗಳ ಆಯೋಗಕ್ಕೆ ಹೆಚ್ಚಿನ ಶಕ್ತಿ ನೀಡಿದ್ದಾರೆ’ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ ಸಿಂಗ್ ಚವ್ಹಾಣ ಹೇಳಿದರು. ಪಟ್ಟಣದಲ್ಲಿ ಗುರುವಾರ ಜರುಗಿದ ಬಿಜೆಪಿಯ ಬೆಳಗಾವಿ ಲೋಕಸಭಾ ಕ್ಷೇತ್ರದ ಹಿಂದುಳಿದ ವರ್ಗಗಳ ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ‘ಹಿಂದುಳಿದ ವರ್ಗಗಳ ಅಭಿವೃದ್ಧಿ ಕೇವಲ ಬಿಜೆಪಿಯಿಂದ ಸಾಧ್ಯ’ ಎಂದರು. ‘ದೇವರು ಮೋದಿ ಅವರ ರೂಪದಲ್ಲಿ ಈ …
Read More »‘ನಮಗೆ ಮದರಸಾಗಳು ಬೇಕಿಲ್ಲ. ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ
ಬೆಳಗಾವಿ: ‘ನಮಗೆ ಮದರಸಾಗಳು ಬೇಕಿಲ್ಲ. ರಾಷ್ಟ್ರ ನಿರ್ಮಾಣಕ್ಕಾಗಿ ವೈದ್ಯರು, ಎಂಜಿನಿಯರ್‌ಗಳು ಮತ್ತು ವೃತ್ತಿಪರರನ್ನು ಸೃಷ್ಟಿಸುವ ಶಾಲಾ- ಕಾಲೇಜು, ವಿಶ್ವವಿದ್ಯಾಲಯಗಳು ಬೇಕು’ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಸರ್ಮಾ ಹೇಳಿದರು. ಇಲ್ಲಿನ ಶಹಾಪುರದ ಶಿವಾಜಿ ಉದ್ಯಾನ ಬಳಿ ಗುರುವಾರ ನಡೆದ ‘ಶಿವಚರಿತ್ರೆ’ ಕಲಾಕೃತಿಗಳ ಪ್ರದರ್ಶನ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಅಸ್ಸಾಂನಲ್ಲಿರುವ ಎಲ್ಲ ಮದರಸಾಗಳನ್ನು ಶೀಘ್ರ ಮುಚ್ಚಲು ನಿರ್ಧರಿಸಿದ್ದೇನೆ’ ಎಂದೂ ಹೇಳಿದರು. ‘ಕಮ್ಯುನಿಸ್ಟ್ ಇತಿಹಾಸಕಾರರು ಇಡೀ ದೇಶವೇ ಔರಂಗಜೇಬನ ಕೈಯಲ್ಲಿತ್ತು …
Read More »‘ಯುವ ಕ್ರಾಂತಿ’ ರ್‍ಯಾಲಿಗೆ 5 ಲಕ್ಷ ಜನ: ಸಿದ್ದರಾಮಯ್ಯ
ಬೆಳಗಾವಿ: ‘ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಸಿ.ಪಿ.ಇಡಿ ಮೈದಾನದಲ್ಲಿ ಮಾರ್ಚ್ 20ರಂದು ‘ಯುವ ಕ್ರಾಂತಿ ರ್‍ಯಾಲಿ’ ನಡೆಸಲಿದ್ದಾರೆ. ಇದರಲ್ಲಿ 5 ಲಕ್ಷಕ್ಕೂ ಹೆಚ್ಚು ಯುವಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ’ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದರು. ನಗರದಲ್ಲಿ ಗುರುವಾರ ಮಾಧ್ಯಮದವರಿಗೆ ಮಾಹಿತಿ ನೀಡಿದ ಅವರು, ‘ಅಂದು ಬೆಳಿಗ್ಗೆ 11ಕ್ಕೆ ಯುವ ಸಮುದಾಯವನ್ನು ಉದ್ದೇಶಿಸಿ ರಾಹುಲ್ ಅವರು ಭಾಷಣ ಮಾಡುತ್ತಾರೆ. ಯಾವ ಕಾರಣಕ್ಕೆ ಭಾರತ್ ಜೋಡೋ ಯಾತ್ರೆ …
Read More »ಎಸ್.ಯಡಿಯೂರಪ್ಪ ಅವರ ಆಪ್ತ ಮೋಹನ ಲಿಂಬಿಕಾಯಿ ಕಾಂಗ್ರೆಸ್ ಸೇರ್ಪಡೆ
ಬೆಳಗಾವಿ: ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರ ಆಪ್ತರಾಗಿದ್ದ, ವಿಧಾನ ಪರಿಷತ್ ಮಾಜಿ ಸದಸ್ಯ ಮೋಹನ ಲಿಂಬಿಕಾಯಿ ಅವರು ನಗರದಲ್ಲಿ ಗುರುವಾರ ಕಾಂಗ್ರೆಸ್ ಸೇರಿದರು. ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಧ್ವಜ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು. ನಂತರ ಮಾತನಾಡಿದ ಮೋಹನ, ‘ಬಿಜೆಪಿಯಲ್ಲಿ ಉಸಿರುಗಟ್ಟಿದ ವಾತಾವರಣವಿದೆ. ಅಲ್ಲಿ ಕಾರ್ಯಕರ್ತರಿಗೆ ಬೆಲೆ ಉಳಿದಿಲ್ಲ. ಕೆಲವೇ ನಾಯಕರು ಎಲ್ಲ ನಿರ್ಧಾರ …
Read More »ಬೇಲೂರು: ಗ್ರಾಮೀಣರ ಸಬಲೀಕರಣಕ್ಕೆ ಪುಷ್ಪಗಿರಿ ಶ್ರೀಗಳ ಮುನ್ನುಡಿ
ಬೇಲೂರು: ಕೃಷಿಯಿಂದ ರೈತರೇ ದೂರ ಸರಿಯುತ್ತಿರುವ ಈ ಸಂದರ್ಭದಲ್ಲಿ ಇಲ್ಲಿನ ಸ್ವಾಮೀಜಿಗಳ ಕೃಷಿ ಪ್ರೀತಿ ಕಂಡರೆ ನಿಜಕ್ಕೂ ಅಚ್ಚರಿಯೊಂದಿಗೆ ಸಂತಸವೂ ಆಗುತ್ತದೆ. ಮಠದ ಧಾರ್ಮಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಕೆಲಸದ ನಡುವೆ ತಾವೇ ಜಮೀನಿಗೆ ಇಳಿದು ಕೃಷಿ ಕಾಯಕದಲ್ಲಿ ಸಂಪೂರ್ಣ ತೊಡಗಿಕೊಳ್ಳುತ್ತಿರುವ ಶ್ರೀಗಳ ಸಾಹಸಗಾಥೆ ಇಂದಿನ ಯುವ ಸಮುದಾಯಕ್ಕೆ ಮಾದರಿಯಾಗಿದೆ. ಹೌದು! ಕಾಯಕದಿಂದ ಬಂದಿದ್ದು ಕಾರೇ ಸೊಪ್ಪಾದರೂ ಲಿಂಗಕ್ಕೆ ಅರ್ಪಿತ ಎಂಬ ವಚನದಂತೆ ಕಾಯಕ-ದಾಸೋಹದ ಬಗ್ಗೆ ಅಗಮ್ಯ ನಂಬಿಕೆ ಹೊಂದಿದ …
Read More »