ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮೂರು ದಿನಗಳ ಪ್ರವಾಸ ಕೈಗೊಂಡಿರುವ ಕೇಂದ್ರ ಚುನಾವಣಾ ಆಯೋಗದ ಅಧಿಕಾರಿಗಳು ಚುನಾವಣೆ ಪೂರ್ವ ಸಿದ್ಧತೆ ಬಗ್ಗೆ ಸಭೆ ನಡೆಸಿದರು. ರಾಜ್ಯದಲ್ಲಿ ಶಾಂತಿಯುತ ಮಾತದಾನವಾಗುವ ವಿಶ್ವಾಸವಿದೆ ಎಂದರು. ವಿಕಾಸಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಮುಖ್ಯ ಚುನವಣಾ ಆಯುಕ್ತ ರಾಜೀವ್ ಕುಮಾರ್, ಚುನಾವಣೆ ತಯಾರಿ ಬಗ್ಗೆ ಮಾಹಿತಿ ನೀಡಿದರು. ಮೇ 24ಕ್ಕೆ 15ನೇ ಈ ಸರ್ಕಾರದ ಅವಧಿ ಮುಗಿಯಲಿದೆ. ಸಾರ್ವತ್ರಿಕ ಚುನಾವಣೆಯ ಕುರಿತು ರಾಜಕೀಯ ಪಕ್ಷಗಳ ಪ್ರತಿನಿಧಿಗಳು, ಚುನಾವಣಾಧಿಕಾರಿಗಳು, …
Read More »Yearly Archives: 2023
ಮಾರ್ವಲಸ್ ಬೆಳಗಾಂ ಅಡ್ಮಿನ್ ರಾಖೇಶ್ ನಂದಗಡಕರ್&ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ವಿಶಾಲ ಕಂಟ್ರಿ ಸೈಡ್ ಹೊಟೆಲ್ ಸಿಬ್ಬಂದಿ
ಬೆಳಗಾವಿ: ಊಟ ಮಾಡಲು ಹೋದ ತಮ್ಮ ತಂಡದ ಮೇಲೆ ಹೊಟೆಲ್ ಸಿಬ್ಬಂದಿ ತೀವ್ರತರವಾಗಿ ಹಲ್ಲೆ ನಡೆಸಿದ್ದಾರೆ ಎಂದು ಬೆಳಗಾವಿಯ ಸೋಶಿಯಲ್ ಮೀಡಿಯಾ ಮಾರ್ವಲಸ್ ಬೆಳಗಾಂ ಅಡ್ಮಿನ್ ರಾಖೇಶ್ ನಂದಗಡಕರ್ ಪೊಲೀಸ್ ದೂರು ದಾಖಲಿಸಿದ್ದಾರೆ. ಸುಳಗಾದ ವಿಶಾಲ ಕಂಟ್ರಿ ಸೈಡ್ ಎನ್ನುವ ಹೊಟೆಲ್ ಗೆ ಮಾರ್ಚ್ 9ರ ರಾತ್ರಿ ತಾವು ಸುಮಾರು 25 ಜನರು ಊಟಕ್ಕೆ ತೆರಳಿದ್ದಾಗಿಯೂ, ಆ ವೇಳೆ ಅಲ್ಲಿನ ಸಿಬ್ಬಂದಿ ಅತ್ಯಂತ ಕೆಟ್ಟದಾಗಿ ನಡೆದುಕೊಂಡಿದ್ದಲ್ಲದೆ, ಜಗಳ ಮಾಡಿ ಹೊಟೆಲ್ ಪಾತ್ರೆಗಳಿಂದ …
Read More »ರಾಜ್ಯಕ್ಕೆ ಆಗಮಿಸಿದ ಚುನಾವಣಾ ಆಯೋಗ ಅಧಿಕಾರಿಗಳ ತಂಡ
ಬೆಂಗಳೂರು: ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಸಿದ್ಧತೆ ಪರಿಶೀಲಿಸಲು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ನೇತೃತ್ವದ ಅಧಿಕಾರಿಗಳ ತಂಡ ಗುರುವಾರ ನಗರಕ್ಕೆ ಆಗಮಿಸಿದೆ. ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ವಿಕಾಸಸೌಧದಲ್ಲಿ ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಮೀನಾ ಅವರೊಂದಿಗೆ ಸಭೆ ನಡೆಸಿದೆ. ತಂಡವು ವಿವಿಧ ರಾಜಕೀಯ ಪಕ್ಷಗಳೊಂದಿಗೆ ಸಭೆ ನಡೆಸಲಿದ್ದು, ಅಭಿಪ್ರಾಯಗಳನ್ನು ಆಲಿಸಲಿದೆ. ಚುನಾವಣಾ ಆಯುಕ್ತರಾದ ಅನೂಪ್ ಚಂದ್ರ ಪಾಂಡೆ, ಅರುಣ್ ಗೋಯಲ್ ಇದ್ದರು.
Read More »ರೆಡ್ಡಿ ಅಕ್ರಮ ಹಣ ಗಳಿಕೆ: ವಿದೇಶಿ ಹೂಡಿಕೆ ಮಾಹಿತಿ ಸಂಗ್ರಹಕ್ಕೆ ಕೋರ್ಟ್ ಅಸ್ತು
ಬೆಂಗಳೂರು: ‘ಕಬ್ಬಿಣದ ಅದಿರನ್ನು ಅಕ್ರಮವಾಗಿ ಮಾರಾಟ ಮಾಡುವ ಮೂಲಕ ಗಳಿಸಿದ್ದ ಹಣವನ್ನು ವಿದೇಶಗಳಲ್ಲಿ ಇರಿಸಿದ್ದಾರೆ’ ಎಂಬ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ವಿರುದ್ಧದ ಆರೋಪಕ್ಕೆ ಸಂಬಂಧಿಸಿದ ಮಾಹಿತಿ ಹಾಗೂ ದಾಖಲೆಗಳನ್ನು ಪಡೆಯಲು ನೆರವಾಗುವಂತೆ ನಾಲ್ಕು ದೇಶಗಳ ಸಕ್ಷಮ ಪ್ರಾಧಿಕಾರಗಳಿಂದ ಮಾಹಿತಿ ಸಂಗ್ರಹಕ್ಕಾಗಿ ಸಿಬಿಐ ಸಲ್ಲಿಸಿದ್ದ ಕೋರಿಕೆಯನ್ನು ವಿಶೇಷ ನ್ಯಾಯಾಲಯ ಮಾನ್ಯ ಮಾಡಿದೆ. ಸಿಬಿಐ ಈ ಕುರಿತು ಸಲ್ಲಿಸಿದ್ದ ಮನವಿಯನ್ನು ವಿಶೇಷ ನ್ಯಾಯಾಲಯದ ನ್ಯಾಯಾಧೀಶೆ ಇ.ಚಂದ್ರಕಲಾ ಪುರಸ್ಕರಿಸಿದ್ದಾರೆ. ಸ್ವಿಟ್ಜರ್‌ಲೆಂಡ್, ಸಿಂಗಪುರ, …
Read More »ಮೋದಿಯನ್ನು ನರಹಂತಕ ಎಂದರೆ ಸಿದ್ದರಾಮಯ್ಯ ನಾಲಿಗೆ ಸೀಳುತ್ತೇವೆ: ಈಶ್ವರಪ್ಪ
ಗೋಣಿಕೊಪ್ಪಲು (ಕೊಡಗು ಜಿಲ್ಲೆ): ‘ಪ್ರಧಾನಿ ನರೇಂದ್ರ ಮೋದಿಯವರನ್ನು ಇನ್ನೊಮ್ಮೆ ನರಹಂತಕ ಎಂದು ಕರೆದರೆ ಸಿದ್ದರಾಮಯ್ಯ ಅವರ ನಾಲಿಗೆ ಸೀಳುತ್ತೇವೆ’ ಎಂದು ಶಾಸಕ ಕೆ.ಎಸ್.ಈಶ್ವರಪ್ಪ ಎಚ್ಚರಿಕೆ ನೀಡಿದರು. ಇಲ್ಲಿ ಶುಕ್ರವಾರ ರಾತ್ರಿ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯಲ್ಲಿ ಮಾತನಾಡಿ, ‘ಮೊಟ್ಟೆಯಲ್ಲಿ ಹೊಡೆಸಿಕೊಂಡ ಸಿದ್ದರಾಮಯ್ಯ ಕೊಡಗಿಗೆ ಮತ್ತೊಮ್ಮೆ ಬರುವುದಾಗಿ ಸವಾಲೆಸೆದಿದ್ದರು. ಆದರೆ ಬರಲಿಲ್ಲ. ಬಂದರೆ ಕೋಳಿಮೊಟ್ಟೆಯಲ್ಲಿ ಹೊಡೆಯಬಾರದು, ಬದಲಿಗೆ ಬಿಜೆಪಿಗೇ ಮತ ಹಾಕಬೇಕು’ ಎಂದರು
Read More »ನವ ಕರ್ನಾಟಕ ಶೃಂಗ | ಕೃಷಿ ಉತ್ಪನ್ನ ಮೌಲ್ಯವರ್ಧನೆ ಮಾಡಿ: ಡಾ.ಪಿ.ಎಲ್.ಪಾಟೀಲ
ಹುಬ್ಬಳ್ಳಿ: ‘ಕೃಷಿ ಉತ್ಪನ್ನಗಳನ್ನು ಮೌಲ್ಯವರ್ಧನೆ ಮಾಡಿ, ಆಕರ್ಷಕ ಬ್ರ್ಯಾಂಡ್ ಮೂಲಕ ಮಾರಾಟ ಮಾಡಿದರೆ ರೈತರ ಆದಾಯ ಹತ್ತಾರುಪಟ್ಟು ಹೆಚ್ಚುತ್ತದೆ’ ಎಂದು ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ.ಪಿ.ಎಲ್. ಪಾಟೀಲ ಹೇಳಿದರು. ‘ರೈತರು ಮತ್ತು ನೀರಾವರಿ ಅಭಿವೃದ್ಧಿ’ ಕುರಿತು ಮಾತನಾಡಿದ ಅವರು, ‘ಹಸಿರು ಕ್ರಾಂತಿ ಆದ ನಂತರ ಕೃಷಿ ಉತ್ಪಾದನೆ ಹತ್ತು ಪಟ್ಟು ಹೆಚ್ಚಾಗಿದೆ. ಆದರೆ, ರೈತರ ಆದಾಯ ಮಾತ್ರ ಏರಿಕೆ ಆಗಿಲ್ಲ. ರೈತರ ಆದಾಯ ದ್ವಿಗುಣಗೊಳಿಸಬೇಕು ಎಂಬುದು ಪ್ರಧಾನಿ ನರೇಂದ್ರ …
Read More »ಅಪಘಾತ- ವಾಹನಕ್ಕೆ ವಿಮೆ ಇರದಿದ್ದರೆ ಪರಿಹಾರ ಮಾಲೀಕರ ಹೆಗಲಿಗೆ: ಹೈಕೋರ್ಟ್
ಬೆಂಗಳೂರು: ‘ಅಪಘಾತ ನಡೆದ ಸಂದರ್ಭದಲ್ಲಿ ಘಟನೆಗೆ ಕಾರಣವಾದ ವಾಹನಕ್ಕೆ ವಿಮೆ ನವೀಕರಣವಾಗಿಲ್ಲ ಎಂದಾದರೆ ನಷ್ಟಕ್ಕೆ ಒಳಗಾದವರಿಗೆ ಮಾಲೀಕರೇ ಪರಿಹಾರ ನೀಡಬೇಕು’ ಎಂದು ಹೈಕೋರ್ಟ್ ಆದೇಶಿಸಿದೆ. ‘ರಸ್ತೆ ಅಪಘಾತ ಪ್ರಕರಣವೊಂದರಲ್ಲಿ ವಾಹನದ ಮಾಲೀಕರೇ ಪರಿಹಾರ ನೀಡಬೇಕು’ ಎಂಬ ವಿಚಾರಣಾ ನ್ಯಾಯಾಲಯದ ಆದೇಶ ಪ್ರಶ್ನಿಸಲಾದ ಅರ್ಜಿಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಕೆ. ಸೋಮಶೇಖರ್ ಮತ್ತು ನ್ಯಾಯಮೂರ್ತಿ ಉಮೇಶ್ ಎಂ. ಅಡಿಗ ಅವರಿದ್ದ ವಿಭಾಗೀಯ ಈ ಆದೇಶ ನೀಡಿದೆ. ‘ಅಪಘಾತ ನಡೆಯುವ ಮುನ್ನವೇ ವಿಮೆ ನವೀಕರಣವಾಗಿದ್ದರೂ, ಅದು …
Read More »ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವ ನಾರಾಯಣ (60) ಹೃದಯಾಘಾತದಿಂದನಿಧನ
ಮೈಸೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವ ನಾರಾಯಣ (60) ಹೃದಯಾಘಾತದಿಂದ ಶನಿವಾರ ನಿಧನರಾಗಿದ್ದಾರೆ. ನಗದಲ್ಲಿನ ಅವರ ಮನೆಯಲ್ಲಿ ಶುಕ್ರವಾರ ತಡರಾತ್ರಿಯಲ್ಲಿ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು ಎಂದು ಮೂಲಗಳು ತಿಳಿಸಿವೆ. 1983 ರಲ್ಲಿ ಕಾಂಗ್ರೆಸ್ ಸೇರುವ ಮೂಲಕ ರಾಜಕೀಯ ರಂಗಕ್ಕೆ ಪ್ರವೇಶಿಸಿದ್ದ ಅವರು, ಸಂತೇಮರಹಳ್ಳಿ ಕ್ಷೇತ್ರದಿಂದ ಒಂದು ಶಾಸಕರಾಗಿ ಆಯ್ಕೆಯಾಗಿದ್ದರು. 2004 ರಲ್ಲಿ ಈ ಕ್ಷೇತ್ರದಿಂದ ಸ್ಪರ್ಧಿಸಿದ್ದ ಅವರು 1 ಮತದ ಅಂತರದಿಂದ ಗೆದ್ದಿದ್ದರು. 2008 ರಲ್ಲಿ ಎರಡನೇ ಬಾರಿ ಕೊಳ್ಳೇಗಾಲ …
Read More »ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ
ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲೂಕಿನ ಹಿರೇಬೂದನೂರ ಗ್ರಾಮದಲ್ಲಿ ಶ್ರೀ ಡೆಂಗಿ ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ …
Read More »3 ಪಟ್ಟು ಅಧಿಕ ದರಕ್ಕೆ ಕಸ ಗುಡಿಸುವ ಯಂತ್ರ ಖರೀದಿ!
ಬೆಂಗಳೂರು: ಶುಭ್ರ ಬೆಂಗಳೂರು ಯೋಜನೆ ಅಡಿಯಲ್ಲಿ ಬಿಬಿಎಂಪಿ ತಲಾ 2 ಕೋಟಿ ರೂ. ಮೊತ್ತದ 30 ಮೆಕ್ಯಾನಿಕಲ್ ಸ್ವೀಪಿಂಗ್ ವಾಹನ ಖರೀದಿಗೆ ಮುಂದಾಗಿದೆ. ಆದರೆ, ಯಂತ್ರಗಳಿಗೆ ನಿಗದಿ ಮಾಡಿರುವ ಮೊತ್ತದ ಬಗ್ಗೆ ಇದೀಗ ಅಪಸ್ವರ ಎದ್ದಿದೆ. ನಗರದಲ್ಲಿ 587.58 ಕಿ.ಮೀ. ಉದ್ದದ 156 ಮುಖ್ಯ ರಸ್ತೆಗಳು ಹಾಗೂ 735.50 ಕಿ.ಮೀ. ಉದ್ದದ 316 ಉಪಮುಖ್ಯ ರಸ್ತೆಗಳಿವೆ. ಅವುಗಳಲ್ಲಿ ಶೇಖರಣೆಯಾಗುವ ದೂಳನ್ನು ಗುಡಿಸಿ ಸ್ವತ್ಛಗೊಳಿಸುವ ಸಲುವಾಗಿ ಮೆಕ್ಯಾನಿಕಲ್ ಸ್ವೀಪಿಂಗ್ ಯಂತ್ರಗಳನ್ನು ಖರೀದಿಸಲಾಗುತ್ತಿದೆ. ಕಳೆದ …
Read More »