ಬೆಂಗಳೂರು: ವೆಬ್‌ಸೈಟ್ ಮೂಲಕ ಪರಿಚಯವಾದ ವ್ಯಕ್ತಿಗಳನ್ನು ಮನೆಗೆ ಕರೆಸಿಕೊಂಡು ಹನಿಟ್ರ್ಯಾಪ್ ಮಾಡುತ್ತಿದ್ದ ಇಬ್ಬರು ಯುವತಿಯರು ಸೇರಿ 6 ಮಂದಿಯ ತಂಡವನ್ನು ಬೇಗೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಮೈಸೂರಿನ ಅನಿಲ್ ಕುಮಾರ್ (37), ತುಮಕೂರಿನ ಗಿರೀಶ್ (36), ಬ್ಯಾಟರಾಯನಪುರ ನಿವಾಸಿ ಶಿವಶಂಕರ್(50) ಮತ್ತು ರಾಜಾಜಿನಗರ ನಿವಾಸಿ ರಾಮಮೂರ್ತಿ(37) ಹಾಗೂ ಇಬ್ಬರು ಯುವತಿ ಯರನ್ನು ಬಂಧಿಸಲಾಗಿದೆ. ಆರೋಪಿಗಳು 39 ವರ್ಷದ ರಾಜಶ್ರೀಲೇಔಟ್ ನಿವಾಸಿ ಶ್ರೀನಿವಾಸ್ ಎಂಬುವರಿಗೆ 10 ಲಕ್ಷ ರೂ.ಗೆ ಬೇಡಿಕೆ ಇಟ್ಟು, …
Read More »Yearly Archives: 2023
ಯಲ್ಲಮ್ಮನ ಕೊಳ್ಳದಿಂದ ಬನಶಂಕರಿಯವರೆಗೂ ಮಹದಾಯಿ ನೀರು:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಗದಗ, ನರಗುಂದ: ಕಳಸಾ ಬಂಡೂರಿ, ಮಹಾದಾಯಿ ಯೋಜನೆಗೆ ನಮ್ಮ ಪ್ರಧಾನಮಂತ್ರಿಗಳು ಈಗಾಗಲೇ ಡಿಪಿಆರ್ ಗೆ ಒಪ್ಪಿಗೆ ಕೊಟ್ಟಿದ್ದಾರೆ. ಶೀಘ್ರವೇ ಪರಿಸರ ಅನುಮತಿ ದೊರೆಯಲಿದ್ದು, ಯಲ್ಲಮ್ಮನ ಕೊಳ್ಳದಿಂದ ಬನಶಂಕರಿಯವರೆಗೂ ಮಹದಾಯಿ ನೀರು ಮಲಪ್ರಭಾ ನದಿಗೆ ಹರಿಸದೇ ನಾವು ವಿಶ್ರಮಿಸುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು. ಇಂದು ನರಗುಂದದಲ್ಲಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕಳಸಾ- ಬಂಡೂರಿ, ಮಹದಾಯಿ ಯೋಜನೆಗಾಗಿ ಕಲ್ಲು-ಮುಳ್ಳು, ಹಳ್ಳ ನೋಡದೇ ನಾನು ನರಗುಂದದಲ್ಲಿ …
Read More »ಲೋಕಾರ್ಪಣೆಗೆ ಸಿದ್ಧಗೊಂಡ ಎಂ.ಬಿ.ಪಾಟೀಲ್ ಕಂಚಿನ ಪ್ರತಿಮೆ
ವಿಜಯಪುರ : ಜಿಲ್ಲೆಯ ಬಬಲೇಶ್ವರ ಕ್ಷೇತ್ರದ ಶಾಸಕರೂ ಆಗಿರುವ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ ಅವರ ಕಂಚಿನ ಪುತ್ಥಳಿ ಲೋರ್ಕಾಪಣೆಗೆ ಸಿದ್ಧಗೊಂಡಿದೆ. ಜಲಸಂಪನ್ಮೂಲ ಸಚಿವರಾಗಿ ತಾವು ಪ್ರತಿನಿಧಿಸುವ ಬಬಲೇಶ್ವರ ಕ್ಷೇತ್ರದಲ್ಲಿ ಸಮಗ್ರ ನೀರಾವರಿ ಸೌಲಭ್ಯ ಕಲ್ಪಿಸಿರುವ ಕೃತಜ್ಞತೆಗಾಗಿ ಬಬಲೇಶ್ವರ ತಾಲೂಕಿನ ಸಂಗಾಗಪುರ ಎಸ್.ಎಚ್.ಗ್ರಾಮದ ಜನರು ಎಂ.ಬಿ.ಪಾಟೀಲ ಅವರ ಪುತ್ಥಳಿ ನಿರ್ಮಿಸಲು ಮುಂದಾಗಿದ್ದಾರೆ. ಈಗಾಗಲೇ ಎಂ.ಬಿ.ಪಾಟೀಲ ಅವರ ಕಂಚಿನ ಪ್ರತಿಮೆ ಪೂರ್ಣಗೊಂಡಿದ್ದು, ಮಾ.17 ರಂದು ಲೋಕಾರ್ಪಣೆಗೆ ಸಿದ್ಧಗೊಂಡಿದೆ. ಪುತ್ಥಳಿ ಅನಾವರಣ …
Read More »ರಬಕವಿ-ಬನಹಟ್ಟಿ: ನಗರಸಭೆಯ ಕಡತಗಳು ರಸ್ತೆಯಲ್ಲಿ ತಿರುಗಾಡುತ್ತಿವೆ
ರಬಕವಿ-ಬನಹಟ್ಟಿ: ನಗರಸಭೆಯ ಸಿಬ್ಬಂದಿ ವರ್ಗದ ಬೇಜವಾಬ್ದಾರಿಯಿಂದ ಮತ್ತು ಅಸಹಾಯಕತೆಯಿಂದಾಗಿ ನಗರಸಭೆಯ ಪ್ರಮುಖ ಕಡತಗಳು ಇಂದು ರಸ್ತೆಯಲ್ಲಿ ತಿರುಗಾಡುತ್ತಿವೆ. ಮುಂದಿನ ದಿನಗಳಲ್ಲಿ ಈ ಕುರಿತು ಸಿಬ್ಬಂದಿ ವರ್ಗದವರ ಮೇಲೆ ಸೂಕ್ತ ಕ್ರಮ ತೆಗೆದುಕೊಳ್ಳುವುದರ ಜೊತೆಗೆ ನಗರಸಭೆಯ ಕಡತಗಳು ಸೋರಿಕೆಯಾಗದಂತೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ರಬಕವಿ ಬನಹಟ್ಟಿ ನಗರಸಭೆಯ ಆಡಳಿತ ಪಕ್ಷದ ಸದಸ್ಯರಾದ ಯಲ್ಲಪ್ಪ ಕಟಗಿ, ಅರುಣ ಬುದ್ನಿ, ಪ್ರಭಾಕರ ಮುಳೇದ ಮತ್ತು ಶಿವಾನಂದ ಬುದ್ನಿ ಅಧಿಕಾರಿಗಳಿಗೆ ತಿಳಿಸಿದರು. ಶುಕ್ರವಾರ ನಡೆದ …
Read More »ದೇವಲತ್ತಿ ಲೋಕೋಳಿ- ಲಕ್ಕೇಬೈಲ್ ಮಾರ್ಗದಿಂದ ವಿದ್ಯುತ್ ಸರಬರಾಜು:ಡಾ. ಸೋನಾಲಿ
ಬೆಳಗಾವಿ: ಖಾನಾಪುರ ತಾಲ್ಲೂಕಿನ ದೇವಲತ್ತಿ ಗ್ರಾಮದ ಜನರ ಬಹುದಿನಗಳ ಬೇಡಿಕೆಯನ್ನು ಕೊನೆಗೂ ಈಡೇರಿಸಿ ಕೊಡುವಲ್ಲಿ ಬಿಜೆಪಿ ಗ್ರಾಮೀಣ ಉಪಾಧ್ಯಕ್ಷೆ ಡಾ. ಸೋನಾಲಿ ಸರ್ನೋಬತ್ ಯಶಸ್ವಿಯಾಗಿದ್ದಾರೆ. ಖಾನಾಪುರ ತಾಲ್ಲೂಕಿನ ದೇವಲತ್ತಿ ಗ್ರಾಮಕ್ಕೆ ವಿದ್ಯುತ್ ಸರಬರಾಜು ಆಗುತ್ತಿದ್ದರೂ ಈ ಮಾರ್ಗ ಪದೇ ಪದೇ ದುರಸ್ತಿಗೆ ಈಡಾಗುತ್ತಿರುವುದರಿಂದ ದೇವಲತ್ತಿ ಗ್ರಾಮದವರು ತೀವ್ರ ಸಮಸ್ಯೆ ಅನುಭವಿಸುವಂತಾಗಿತ್ತು. ಈ ಭಾಗದ ವಿದ್ಯಾರ್ಥಿಗಳು ವ್ಯಾಸಂಗಕ್ಕೆ ಪಡಿಪಾಟಲು ಪಡುವಂತಾಗಿತ್ತು. ಹಾಗಾಗಿ ಈ ಜನರ ಸಮಸ್ಯೆ ಬಗ್ಗೆ ತಿಳಿದು ಜನರ ನೋವಿಗೆ ಸ್ಪಂದಿಸಿದ …
Read More »5 ಮತ್ತು 8ನೇ ತರಗತಿ ಪಬ್ಲಿಕ್ ಪರೀಕ್ಷೆಯನ್ನು ಹೈಕೋರ್ಟ್ ಏಕಸದಸ್ಯಪೀಠ ರದ್ದುಗೊಳಿಸಿ ಆದೇಶ
ಬೆಂಗಳೂರು: 5 ಮತ್ತು 8ನೇ ತರಗತಿ ಪಬ್ಲಿಕ್ ಪರೀಕ್ಷೆಯನ್ನು ಹೈಕೋರ್ಟ್ ಏಕಸದಸ್ಯಪೀಠ ರದ್ದುಗೊಳಿಸಿ ಆದೇಶ ಹೊರಡಿಸಿದೆ. ಮಾರ್ಚ್ 13ರಿಂದ 5 ಹಾಗೂ 8ನೇ ತರಗತಿಗಳಿಗೆ ಪರೀಕ್ಷೆಗಳು ಆರಂಭವಾಗಬೇಕಿತ್ತು. ಆದರೆ ಪಬ್ಲಿಕ್ ಪರೀಕ್ಷೆ ನಡೆಸದಂತೆ ಹೈಕೋರ್ಟ್ ಸರ್ಕಾರಕ್ಕೆ ಆದೇಶ ನೀಡಿದೆ. 5 ಹಾಗೂ 8ನೇ ತರಗತಿಯ ವಾರ್ಷಿಕ ಪರೀಕ್ಷೆ ವಿರೋಧಿಸಿ ಪೋಷಕರು ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಹಿನ್ನೆಲೆಯಲ್ಲಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯಪೀಠ ಪರೀಕ್ಷೆಗೆ ತಡೆ ನೀಡಿದೆ. ನಿಯಮಗಳಿಗೆ ಅನುಸಾರವಾಗಿ …
Read More »ಸಂಜಯ್ ಗೂಡಾವತ್ ಗ್ರೂಪ್ ವತಿಯಿಂದ ಉಚಿತ ಅಡಿಗೆ ಎಣ್ಣೆ ಪೂರೈಕೆ
ಸಂಜಯ ಗೂಡಾವಥ ಗ್ರೂಪ್ 2013 ರಿಂದ ಪ್ರಾರಂಭವಾಗಿದ್ದು ತನ್ನ ಗ್ರಾಹಕ ಕೇಂದ್ರ ವ್ಯಾಪಾರ ನೀತಿಗಳ ಮೂಲಕ ಸಂಸ್ಥೆ ಲಕ್ಷಾಂತರ ಜನರಿಗೆ ಪ್ರೀಯವಾಗಿದೆ. ಈ ಸಂಸ್ಥೆಯಿಂದ ಕರ್ನಾಟಕ ದಲ್ಲಿ ಕಿರಾಣಿ ಅಂಗಡಿಗಳ ಸಮಕಾಲೀನ ವ್ಯಾಪಾರಿಗಳು ಹಾಗೂ ಲೇಔಟ್ ಮೂಲಕ ತನ್ನ ಉತ್ಪನ್ನಗಳ ಲಾಭ ಆಗುವಂತೆ ಮಾಡುವ ಜಿಸಿಎಲ್ ತನ್ನ ಗ್ರಾಹಕರ ಮಾರುಕಟ್ಟೆ ವ್ಯಾಪ್ತಿಯನ್ನು ಹೆಚ್ಚಿಸಲು ಉದ್ದೇಶಿಸಿದೆ, ಜಿ ಸಿ ಎಲ್ ನಿರಂತರ ಉತ್ಪನ್ನ ನಾಮಿನೇತೇ ಸ್ಪರ್ಧಾತಕ ಬೆಲೆ ಮತ್ತು ಗುಣಮಟ್ಟವನ್ನು ಸೃಷ್ಟಿಸುವ …
Read More »ಸಾರಿಗೆ ನೌಕರರ ವೇತನ ಶೇ10 ರಷ್ಟು ಹೆಚ್ಚಿಸಲು ಕ್ರಮ: ಸಚಿವ ಬಿ.ಶ್ರೀರಾಮುಲು
ರಾಯಚೂರು: ಆರ್ಥಿಕ ಇಲಾಖೆ ಮತ್ತು ಮುಖ್ಯಮಂತ್ರಿಯೊಂದಿಗೆ ಸಮಾಲೋಚಿಸಿ ಸಾರಿಗೆ ನೌಕರರ ವೇತನವನ್ನು ಶೇ 10 ರಷ್ಟು ಹೆಚ್ಚಿಸಲು ಕ್ರಮ ವಹಿಸಲಾಗುವುದು ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಹೇಳಿದರು. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ನೌಕರರ ಸಂಘದೊಂದಿಗೆ ಮಾತುಕತೆ ನಡೆಸಿದ್ದು, ಶೀಘ್ರದಲ್ಲೆ ಸಿಹಿ ಸುದ್ದಿ ನೀಡಲಾಗುವುದು ಎಂದರು. ಬೆಂಗಳೂರಿನಲ್ಲಿ ಸಜೀವವಾಗಿ ದಹನವಾಗಿರುವ ಬಸ್ ಚಾಲಕನ ಕುಟುಂಬಕ್ಕೆ ತಕ್ಷಣ ₹5 ಲಕ್ಷ ಪರಿಹಾರ ನೀಡಬೇಕು, ವಿಮಾ ಪರಿಹಾರ …
Read More »ಕುಮಟಳ್ಳಿಗೆB,J,P. ಟಿಕೆಟ್ ಸಿಗದಿದ್ದರೆ ನಾನು ಗೋಕಾಕ ನಲ್ಲಿ ಸ್ಪರ್ಧಿಸಲ್ಲ: ರಮೇಶ್ ಜಾರಕಿಹೊಳಿ
ವಿಜಯಪುರ: ಬೆಳಗಾವಿ ಜಿಲ್ಲೆಯ ಅಥಣಿ ಕ್ಷೇತ್ರದಿಂದ ಸ್ಪರ್ಧಿಸಲು ಮಹೇಶ ಕುಮಟಳ್ಳಿ ಅವರಿಗೆ ಬಿಜೆಪಿ ಟಿಕೆಟ್ ಸಿಗದಿದ್ದರೆ ನಾನು ಗೋಕಾಕ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಿಲ್ಲ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ. ವಿಜಯಪುರ ಜಿಲ್ಲೆಯಲ್ಲಿ ನಡೆಯುತ್ತಿರುವ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ಪಾಲ್ಗೊಳ್ಳಲು ಶುಕ್ರವಾರ ವಿಜಯಪುರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಅಥಣಿ ಕ್ಷೇತ್ರದಿಂದ ಮಹೇಶ ಕುಮಟಳ್ಳಿ ಟಿಕೆಟ್ ನೀಡಲೇಬೇಕು ಎಂದು ಪರೋಕ್ಷವಾಗಿ ಕೇಸರಿ ವರಿಷ್ಠರಿಗೆ ಸಂದೇಶ …
Read More »ಬೆಳಗಾವಿ: ಮೂರು ಹೆಣ್ಣುಮಕ್ಕಳ ಹೆತ್ತಿದ್ದೇ ತಪ್ಪಾಯಿತೇ…
ಬೆಳಗಾವಿ: ‘ಗಂಡ ಸಾಲ ಮಾಡಿ ಓಡಿಹೋದ. ಸಾಲ ಕೊಟ್ಟವರು ದಿನವೂ ಕಾಡತೊಡಗಿದರು. ಎಳೆಯ ಮಕ್ಕಳು ಹಸಿವಿನಿಂದ ಅಳುತ್ತಿದ್ದವು. ಹೆಣ್ಣು ಹೆತ್ತಿದ್ದೇನೆ ಎಂಬ ಕಾರಣಕ್ಕೆ ಅತ್ತೆ-ಮಾವನೂ ದೂರ ಮಾಡಿದ್ದಾರೆ. ತವರಿನಲ್ಲೂ ಕಷ್ಟವಿದೆ. ಬದುಕು ಬೀದಿಗೆ ಬಿತ್ತು. ಈ ಜೀವ ಇಟ್ಟು ಇನ್ನೇನು ಮಾಡುವುದು ಎಂದು ಸಾಯಲು ಹೊರಟೆ. ನಾನು ಹೋದ ಮೇಲೆ ಮಕ್ಕಳು ಹಸಿವಿನಿಂದ ಸಾಯಬಾರದು ಎಂದು ಅವರಿಗೂ ಫಿನೈಲ್ ಕುಡಿಸಿದೆ…’ ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿರುವ ಸರಸ್ವತಿ ಅದೃಶ್ಯಪ್ಪ ಹಂಪಣ್ಣವರ (40) ತಮ್ಮ …
Read More »