ಬೆಳಗಾವಿ: ನಗರದಲ್ಲಿ ಆಂಗ್ಲ ಭಾಷೆಯಲ್ಲಿ ಬ್ಯಾನರ್ಗಳನ್ನು ಅಳವಡಿಸಿದ್ದರಿಂದ ರೊಚ್ಚಿಗೆದ್ದ ಕರವೇ ಕಾರ್ಯಕರ್ತರು ಬ್ಯಾನರ್ಗಳನ್ನು ಹರಿದು ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ರಾಣಿ ಚನ್ನಮ್ಮ ವೃತ್ತದ ಬಳಿಯಿದ್ದ ಬ್ಯಾನರ್ಗಳನ್ನು ತೆರವುಗೊಳಿಸುವಂತೆ ಆಗ್ರಹಿಸಿ ನಾರಾಯಣಗೌಡ ಬಣದ ಕಾರ್ಯಕರ್ತರು ಮೊದಲು ಧರಣಿ ನಡೆಸಿದರು. ಬಳಿಕ ಒಂದೊಂದೇ ಬ್ಯಾನರ್ಗಳನ್ನು ಹರಿದು ಹಾಕಲು ಮುಂದಾದ ಕಾರ್ಯಕರ್ತರನ್ನು ಪೊಲೀಸರು ತಡೆಯಲು ಮುಂದಾದರು. ಪೊಲೀಸರ ಕೈಯಿಂದ ತಪ್ಪಿಸಿಕೊಂಡು ಹೋದ ಕೆಲ ಕಾರ್ಯಕರ್ತರು, ಬ್ಯಾನರ್ಗಳನ್ನು ಹರಿದು ಹಾಕಿದರು. ಕಪ್ಪು ಮಸಿ ಬಳಿಯಲು ತಂದಿದ್ದ ಬಾಟಲಿಗಳನ್ನು …
Read More »Yearly Archives: 2023
ದಾಖಲೆ ಇಲ್ಲದೇ ಸಾಗಿಸುತ್ತಿದ್ದ 8 ಕೋಟಿ ರೂಪಾಯಿಪೊಲೀಸರ ವಶಕ್ಕೆ
ಚಿತ್ರದುರ್ಗ: ಇನ್ನೋವಾ ಕಾರಿನಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 8 ಕೋಟಿ ರೂಪಾಯಿ ನಗದನ್ನು ಹೊಳಲ್ಕೆರೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚಿತ್ರದುರ್ಗದಿಂದ ಶಿವಮೊಗ್ಗದತ್ತ ತೆರಳುತ್ತಿದ್ದ ಕಾರನ್ನು ಮಲ್ಲಾಡಿಹಳ್ಳಿ ಸಮೀಪ ಪರಿಶೀಲಿಸಿದಾಗ ಅಪಾರ ಪ್ರಮಾಣದ ನಗದು ಪತ್ತೆಯಾಗಿದೆ. ಕಾರು ಚಾಲಕ ಸಚಿನ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇದು ಚಿತ್ರದುರ್ಗದ ಅಡಿಕೆ ವರ್ತಕರೊಬ್ಬರ ಹಣವಾಗಿದ್ದು, ಶಿವಮೊಗ್ಗದ ಇನ್ನೋರ್ವ ಅಡಿಕೆ ವರ್ತಕರಿಗೆ ನೀಡಲು ಹೊರಟಿದ್ದಾಗಿ ಎಂದು ಚಾಲಕ ಪೊಲೀಸರಿಗೆ ತಿಳಿಸಿದ್ದಾರೆ. ಹಣದ ಬಗ್ಗೆ …
Read More »ಎಲ್ಐಸಿಯಿಂದ ಹೊಸ ಪಾಲಿಸಿ: 5 ವರ್ಷ ಕಟ್ಟಿದ್ರೆ ಸಾಕು, ಜೀವನ ಪೂರ್ತಿ ಆದಾಯ!
ಹೈದರಾಬಾದ್: ನೀವು ಕಷ್ಟಪಟ್ಟು ದುಡಿದ ಹಣಕ್ಕೆ ಭದ್ರತೆ ಮತ್ತು ಪ್ರತಿಫಲವನ್ನು ಬಯಸುವುದು ಸಹಜ. ಆದರೆ ಕುಟುಂಬದ ಹಿರಿಯ ವ್ಯಕ್ತಿಗೆ ಏನಾದರೂ ಅಹಿತಕರ ಘಟನೆ ಸಂಭವಿಸಿದರೆ ಅಥವಾ ಆತನಿಂದ ಕುಟುಂಬ ಪೋಷಿಸಲು ಸಾಧ್ಯವಾಗದೇ ಇದ್ದರೆ ಅವರ ಜೀವನ ತುಂಬಾ ಕಷ್ಟಕರವಾಗುತ್ತದೆ. ಅದಕ್ಕಾಗಿ ಕುಟುಂಬಕ್ಕೆ ಆರ್ಥಿಕ ಭದ್ರತೆ ಒದಗಿಸಲು ವಿಮೆ ಮಾಡಿಸುವುದು ಅತಿ ಅಗತ್ಯ. ಸರ್ಕಾರಿ ಸ್ವಾಮ್ಯದ ಜೀವ ವಿಮಾ ಕಂಪನಿ LIC ಈಗಾಗಲೇ ಅನೇಕ ಪಾಲಿಸಿಗಳನ್ನು ಈ ನಿಟ್ಟಿನಲ್ಲಿ ಹೊರತಂದಿದೆ. ಆದರೂ ಹೂಡಿಕೆದಾರರು …
Read More »ಆಸ್ತಿ ವಿವರ ಸಲ್ಲಿಸದ ಜನಪ್ರತಿನಿಧಿಗಳು: ಪತ್ರಿಕಾ ಪ್ರಕಟಣೆ ಹೊರಡಿಸಿದ ಲೋಕಾಯುಕ್ತ
ಬೆಂಗಳೂರು: ಲೋಕಾಯುಕ್ತ ಇಲಾಖೆ ಆಸ್ತಿ ವಿವರ ಸಲ್ಲಿಸದೇ ಇರುವ ಜನಪ್ರತಿನಿಧಿಗಳಿಗೆ ಆಸ್ತಿ ವಿವರ ದಾಖಲಿಸುವಂತೆ ಜನಪ್ರತಿನಿಧಿಗಳ ಹೆಸರು ಸಮೇತ ದಿನಪತ್ರಿಕೆಗಳಲ್ಲಿ ಪತ್ರಿಕಾ ಪ್ರಕಟಣೆ ಹೊರಡಿಸಿದೆ. 2020-22ರ ಸಾಲಿನಲ್ಲಿ ಆಸ್ತಿ ವಿವರ ಸಲ್ಲಿಸದೆ ಜನಪ್ರತಿನಿಧಿಗಳು ಲೋಪವೆಸಗಿದ್ದಾರೆ. ಹಲವು ಬಾರಿ ಆಸ್ತಿ ವಿವರ ಸಲ್ಲಿಸುವಂತೆ ಕಾಲಾವಕಾಶ ನೀಡಿದರೂ ಶಾಸಕ-ಸಚಿವರು ಮಾತ್ರ ಆಸ್ತಿ ಘೋಷಣೆ ವಿವರ ಸಲ್ಲಿಸಿಲ್ಲ. ಹೀಗಾಗಿ ಕಾನೂನು ಪ್ರಕಾರ ದಿನಪತ್ರಿಕೆಗಳಲ್ಲಿ 81 ಮಂದಿ ಜನಪ್ರತಿನಿಧಿಗಳ ಹೆಸರುಗಳ ಸಮೇತ ಪತ್ರಿಕಾ ಪ್ರಕಟಣೆ ಹೊರಡಿಸಿದೆ. ಜೂನ್ …
Read More »ಲಕ್ಷ್ಮೀ ಎಜುಕೇಷನ್ ಟ್ರಸ್ಟ್ ಶಿಕ್ಷಣ ಸಂಸ್ಥೆಯಲ್ಲಿ ದಾಸ ಶ್ರೇಷ್ಠರಾದ ಕನಕದಾಸರ ಜಯಂತಿ ಆಚರಣೆ..!
ಲಕ್ಷ್ಮೀ ಎಜುಕೇಷನ್ ಟ್ರಸ್ಟ್ ಶಿಕ್ಷಣ ಸಂಸ್ಥೆಯಲ್ಲಿ ದಾಸ ಶ್ರೇಷ್ಠರಾದ ಕನಕದಾಸರ ಜಯಂತಿ ಆಚರಣೆ..! ಗೋಕಾಕ : ನಗರದ ಲಕ್ಷ್ಮೀ ಎಜುಕೇಷನ್ ಟ್ರಸ್ಟ್ ಶಿಕ್ಷಣ ಸಂಸ್ಥೆಯಲ್ಲಿ ಸಂತ ಶ್ರೇಷ್ಠ ಶ್ರೀ ಭಕ್ತ ಕನಕದಾಸರ ಜಯಂತಿ ಆಚರಣೆ ಮಾಡಿದರು. ಈ ಸಮಯದಲ್ಲಿ ವ್ಯವಸ್ಥಾಪಕ ನಿರ್ದೇಶಕರಾದ ಸನತ್ ಜಾರಕಿಹೊಳಿ ಅವರು ಮಾತನಾಡಿ ಕರ್ನಾಟಕ ಕೀರ್ತನಾ ಸಾಹಿತ್ಯದ ಮೂಲಕ ಮನುಜ ಕುಲವನ್ನು ಸನ್ಮಾರ್ಗದತ್ತ ಕೊಂಡೊಯ್ದು, ಸಮ ಸಮಾಜ ನಿರ್ಮಾಣಕ್ಕಾಗಿ ಅರಿವು ಮೂಡಿಸಿದವರು. ಕೀರ್ತನಕಾರರಾಗಿ, ಸಂತರಾಗಿ, ದಾರ್ಶನಿಕರಾಗಿ, …
Read More »ಬೆಂಗಳೂರು: ಪ್ರತಿಷ್ಠಿತ ಬ್ರ್ಯಾಂಡ್ ಹೆಸರಿನಡಿ ನಕಲಿ ಬಟ್ಟೆ ತಯಾರಿಕೆ; ₹1.5 ಕೋಟಿ ಮೌಲ್ಯದ ಮಾಲು ವಶಕ್ಕೆ
ಬೆಂಗಳೂರು: ಬೊಮ್ಮನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರತಿಷ್ಠಿತ ಬ್ರ್ಯಾಂಡ್‌ನ ಹೆಸರಿನಡಿ ನಕಲಿ ಬಟ್ಟೆಗಳನ್ನು ತಯಾರಿಸಿ ಮಾರುತ್ತಿದ್ದ ವ್ಯಾಪಾರಸ್ಥರ ಅಂಗಡಿ, ಗೋದಾಮುಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ ಮಾಲು ವಶಕ್ಕೆ ಪಡೆದಿದ್ದಾರೆ. ಅರ್ಮಾನಿ, ಬರ್ಬರಿ, ಗ್ಯಾಂಟ್ ಸೇರಿದಂತೆ ಹೆಸರಾಂತ ಕಂಪನಿಗಳ ಬಟ್ಟೆ ಎಂದು ಗ್ರಾಹಕರನ್ನು ನಂಬಿಸುತ್ತಿದ್ದ ಆರೋಪಿಗಳು ಅಕ್ರಮ ಮಾರಾಟದಲ್ಲಿ ತೊಡಗಿದ್ದರು. ಈ ಕುರಿತ ಖಚಿತ ಮಾಹಿತಿ ಮೇರೆಗೆ ಬೊಮ್ಮನಹಳ್ಳಿಯ ಪಟೇಲ್ ಎಕ್ಸ್‌ಪರ್ಟ್ ಹಾಗೂ ಆರ್‌ಬಿ ಫ್ಯಾಷನ್ ಗೋಡೌನ್‌ಗಳ ಮೇಲೆ ದಾಳಿ …
Read More »ಸ್ಮಾರ್ಟ್‌ಸಿಟಿ-2ನಲ್ಲಿ ಆಯ್ಕೆಗಾಗಿ ಬೆಳಗಾವಿ ಕಸರತ್ತು
ಬೆಳಗಾವಿ: ಬೆಳಗಾವಿ ಸೇರಿದಂತೆ ದೇಶದ 100 ಸ್ಮಾರ್ಟ್‌ಸಿಟಿಗಳ ಪೈಕಿ 18 ನಗರಗಳನ್ನು ಸ್ಮಾರ್ಟ್ ಸಿಟಿ-2ರ ಯೋಜನೆಗೆ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಎರಡನೇ ಹಂತದಲ್ಲಿಯೂ ಬೆಳಗಾವಿ ಸ್ಥಾನ ಪಡೆದುಕೊಳ್ಳಲು ಹಲವು ಕಸರತ್ತು ನಡೆಸಿದೆ. ಸೂಕ್ತ ಪ್ರಸ್ತಾವನೆ ಸಲ್ಲಿಸಿದರೆ 2024 ಜನೇವರಿ 20ರಂದು ಆಯ್ಕೆ ಪಟ್ಟಿಯಲ್ಲಿ ಬೆಳಗಾವಿಯ ಹೆಸರು ಭದ್ರವಾಗುವುದರಲ್ಲಿ ಸಂದೇಹವೇ ಇಲ್ಲ. 18 ನಗರಗಳನ್ನು ಸ್ಮಾರ್ಟ್‌ಸಿಟಿ-2 ಯೋಜನೆಗೆ ಆಯ್ಕೆ ಮಾಡುವ ಪ್ರಕ್ರಿಯೆ ಆರಂಭಗೊಂಡಿದ್ದು, ಈ ಬಗ್ಗೆ ಇತ್ತೀಚೆಗೆ ದೆಹಲಿಯಲ್ಲಿ ದೇಶದ 100 …
Read More »60 ಸಾವಿರ ಲಂಚ ಪಡೆಯುವಾಗ ಬೈಲಹೊಂಗಲ ಉಪವಿಭಾಗ ಕಚೇರಿಯ ಎಸ್‌ಡಿಸಿ ಮಂಜನಾಥ ಅಂಗಡಿ ಲೋಕಾಯುಕ್ತ ಬಲೆಗೆ
ಬೆಳಗಾವಿ: ಪಹಣಿ ಪತ್ರದಲ್ಲಿ ತಿದ್ದುಪಡಿ ಮಾಡಲು 60 ಸಾವಿರ ಲಂಚ ಪಡೆಯುವಾಗ ಬೈಲಹೊಂಗಲ ಉಪವಿಭಾಗ ಕಚೇರಿಯ ಎಸ್‌ಡಿಸಿ ಮಂಜನಾಥ ಅಂಗಡಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಪಹಣಿ ಪತ್ರದ ತಿದ್ದುಪಡಿಗೆ ಮಂಜುನಾಥ 60 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ರಾಮದುರ್ಗ ತಾಲೂಕಿನ ಚಿಕ್ಕೊಪ್ಪ ಎಸ್‌ಕೆ ಗ್ರಾಮದ ರವಿ ಅಜ್ಜಿ, ಪಹಣಿ ಪತ್ರ ತಿದ್ದುಪಡಿಗೆ ಅರ್ಜಿ ಸಲ್ಲಿಸಿದ್ದರು. ಪಹಣಿ ಪತ್ರ ತಿದ್ದುಪಡಿ ಮಾಡಲು ಮಂಜುನಾಥ 60 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ಬೆಳಗಾವಿ …
Read More »ಅಂಕ ಗಳಿಕೆಗೆ ಓದುವುದಕ್ಕಿಂತ ಜ್ಞಾನ ಗಳಿಕೆಗೆ ಓದಿ- ಶೆಟ್ಟರ್
ಹಿರೇಬಾಗೇವಾಡಿ: ವಿದ್ಯಾರ್ಥಿಗಳು ಧನಾತ್ಮಕ ಚಿಂತನೆ ಮಾಡಬೇಕು. ವಿದ್ಯಾರ್ಥಿ ಜೀವನದಲ್ಲಿ ಯಶಸ್ಸು ಗಳಿಸಲು ತಂದೆ-ತಾಯಿ ಮತ್ತು ಶಿಕ್ಷಕರ ಮಾರ್ಗದರ್ಶನ ಅವಶ್ಯ ಎಂದು ರಾಣೇಬೆನ್ನೂರಿನ ನಂದೀಶ್ವರ ನೈಪುಣ್ಯ ಕೌಶಲ್ಯ ಸಂಸ್ಥೆ ಅಧ್ಯಕ್ಷ ಹಾಗೂ ಜೀವನ ಕೌಶಲ್ಯ ತರಬೇತುದಾರ ನಂದೀಶ ಬಿ ಶೆಟ್ಟರ್ ಹೇಳಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಕರ್ನಾಟಕ ಬಾಲ ವಿಕಾಸ ಅಕಾಡೆಮಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಹಾಗೂ ಬೆಳಗಾವಿ ಗ್ರಾಮಾಂತರ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ರಾಣೇಬೆನ್ನೂರು …
Read More »ಪ್ರತಿಭೆಗಳು ರಾಜ್ಯ-ರಾಷ್ಟ್ರ ಮಟ್ಟದಲ್ಲಿ ಹೆಸರು ಮಾಡಲಿ-ಸಚಿವ ಸತೀಶ ಜಾರಕಿಹೊಳಿ
ಯಮಕನಮರಡಿ: ಸತೀಶ ಪ್ರತಿಭಾ ಪುರಸ್ಕಾರದಲ್ಲಿ ಭಾಗವಹಿಸಿದ್ದ ಕೆಲವು ಮಕ್ಕಳು ಗೆದ್ದಿರಬಹುದು, ಕೆಲವರು ಸೋತಿರಬಹುದು. ಆದರೆ ಸೋತ ಮಕ್ಕಳು ಚಿಂತಿಸುವ ಅವಶ್ಯಕತೆ ಇಲ್ಲ. ಮುಂದಿನ ವರ್ಷ ಮತ್ತೆ ನಿಮಗೆ ಗೆಲ್ಲುವ ಅವಕಾಶ ಸಿಗುತ್ತದೆ ಎಂದು ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಅವರು ರವಿವಾರ ಯಮಕನಮರಡಿ ಎನ್ ಎಸ್‌ಎಫ್ ಶಾಲಾ ಆವರಣದಲ್ಲಿ ಪ್ರಾಥಮಿಕ, ಪ್ರೌಢ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ 10ನೇ ಸತೀಶ್ ಪ್ರತಿಭಾ …
Read More »