ಶಿರಸಿ: ಉತ್ತರ ಕನ್ನಡ ಸಂಸದ ಅನಂತಕುಮಾರ ಹೆಗಡೆ ಅವರ ಕೋರಿಕೆಯ ಮೇರೆಗೆ ಅಂಕೋಲಾ ಹಾಗೂ ಭಟ್ಕಳ ನಿಲ್ದಾಣಗಳಲ್ಲಿ ಎಕ್ಸ್ ಪ್ರೆಸ್ ರೈಲುಗಳ ನಿಲುಗಡೆಗೆ ರೈಲ್ವೆ ಇಲಾಖೆ ಅನುಮತಿ ನೀಡಿದೆ. ಅಂಕೋಲಾ ನಿಲ್ದಾಣದಲ್ಲಿ ನಾಳೆ(ಮಾ.9)ಯಿಂದ ಕೊಚುವೆಲಿ- ಮುಂಬೈ ಎಕ್ಸ್ ಪ್ರೆಸ್ ರೈಲು ನಿಲುಗಡೆಯಾಗಲಿದೆ. ಭಟ್ಕಳ ನಿಲ್ದಾಣದಲ್ಲಿ ತಿರುವಂತನಪುರ-ಪನವೇಲ್ ನೇತ್ರಾವತಿ ಎಕ್ಸ್ ಪ್ರೆಸ್ ರೈಲು ನಿಲುಗಡೆಯಾಗಲಿದೆ. ಈ ಮೂಲಕ ಅಂಕೋಲಾ ಹಾಗೂ ಭಟ್ಕಳ ಭಾಗದ ಜನರ ದೀರ್ಘ ಕಾಲದ ಬೇಡಿಕೆಯನ್ನು ರೈಲ್ವೆ ಇಲಾಖೆ ಈಡೇರಿಸಿದಂತಾಗಿದೆ. …
Read More »Yearly Archives: 2023
ರಾಜ್ಯಾದ್ಯಂತ ಶಾಲಾ- ಕಾಲೇಜುಗಳ ಪರೀಕ್ಷೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಬಂದ್ ಕರೆ ಹಿಂಪಡೆದ ಕಾಂಗ್ರೆಸ್
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಸೇರಿದಂತೆ ರಾಜ್ಯಾದ್ಯಂತ ಶಾಲಾ- ಕಾಲೇಜುಗಳ ಪರೀಕ್ಷೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರ ಒತ್ತಡದ ಮೇರೆಗೆ ನಾಳೆ ನಡೆಸಬೇಕಿದ್ದ ಸಾಂಕೇತಿಕ ಕರ್ನಾಟಕ ಬಂದ್ ಅನ್ನು ವಾಪಸ್ ತೆಗೆದುಕೊಳ್ಳಲು ಕಾಂಗ್ರೆಸ್ ನಿರ್ಧರಿಸಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ಕಾಂಗ್ರೆಸ್ ಹಿರಿಯ ನಾಯಕರ ಜತೆ ಸಮಾಲೋಚನೆ ನಡೆಸಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ‘ಬಿಜೆಪಿ ಸರ್ಕಾರದ ಮಿತಿಮೀರಿದ ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ …
Read More »BJP 40 ಕ್ಷೇತ್ರಕ್ಕೆ ಕುಸಿದರೂ ಅಚ್ಚರಿಯಿಲ್ಲ ಎಂದ ಡಿ.ಕೆ.ಶಿವಕುಮಾರ್
ಬೆಂಗಳೂರು: ಲೋಕಾಯುಕ್ತ ಸಂಸ್ಥೆಗೆ ನಾವು ಶಕ್ತಿ ತುಂಬಿದ್ದೇವೆ ಎಂದು ಹೇಳಿಕೊಳ್ಳುತ್ತಿರುವ ಬಿಜೆಪಿ ನಾಯಕರು, ಅಧಿಕಾರಕ್ಕೆ ಬಂದ ತಕ್ಷಣ ಎಸಿಬಿ ಕಿತ್ತುಹಾಕಿ ಲೋಕಾಯುಕ್ತರ ನೇಮಕ ಮಾಡಲಿಲ್ಲ ಯಾಕೆ? ಈ ವಿಚಾರವಾಗಿ ಹೈಕೋರ್ಟ್ ನಿರ್ದೇಶನ ನೀಡಿದ ನಂತರ ಎಸಿಬಿ ಸಂಸ್ಥೆ ರದ್ದುಗೊಳಿಸಿ ಲೋಕಾಯುಕ್ತರ ನೇಮಕ ಮಾಡಿದ್ದಾರೆ. ನ್ಯಾಯಾಲಯದ ನಿರ್ದೇಶನದ ಮೇರೆಗೆ ಕ್ರಮ ಕೈಗೊಂಡು ಈಗ ತಮ್ಮ ಸಾಧನೆ ಎಂದು ಹೇಳಿಕೊಳ್ಳುತ್ತಿದ್ದಾರೆ. ಬಿಜೆಪಿ ಸರ್ಕಾರ ಭ್ರಷ್ಟ ಸರ್ಕಾರ ಎಂದು ಜನರಿಗೆ ಸ್ಪಷ್ಟವಾಗಿ ತಿಳಿದಿದೆ ಎಂದು ಕೆಪಿಸಿಸಿ …
Read More »ಡಿಸಿ ಕಚೇರಿಯಲ್ಲಿ ಮೂವರು ಹೆಣ್ಣುಮಕ್ಕಳಿಗೆ ಪಿನಾಯಿಲ್ ಕುಡಿಸಿ, ತಾನೂ ಕುಡಿದ ಮಹಿಳೆ
ಬೆಳಗಾವಿ: ಜೀವನ ನಿರ್ವಹಣೆ ಕಷ್ಟವಾದ ಕಾರಣಕ್ಕೆ ಮಹಿಳೆಯೊಬ್ಬರು ಬುಧವಾರ, ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲೇ ಮೂವರು ಹೆಣ್ಣುಮಕ್ಕಳಿಗೆ ಪಿನೈಲ್ ಕುಡಿಸಿ ತಾವೂ ಕುಡಿದು ಆತ್ಮಹತ್ಯೆಗೆ ಯತ್ನಿಸಿದರು. ತಕ್ಷಣ ಕಾರ್ಯಪ್ರವೃತ್ತರಾದ ಸಿಬ್ಬಂದಿ ನಾಲ್ವರನ್ನೂ ಜಿಲ್ಲಾಸ್ಪತ್ರೆಗೆ ದಾಖಲಿಸಿದರು. ನಗರದ ಅನಗೋಳದ ನಿವಾಸಿ ಸರಸ್ವತಿ ಅದೃಶ್ಯಪ್ಪ ಹಂಪಣ್ಣವರ (40) ಆತ್ಮಹತ್ಯೆಗೆ ಯತ್ನಿಸಿದವರು. ಮಕ್ಕಳಾದ ಸೃಷ್ಟಿ (14), ಸಾಕ್ಷಿ (8) ಹಾಗೂ ಸಾನ್ವಿ (3) ಅವರಿಗೂ ಪಿನೈಲ್ ಕುಡಿಸಿದ್ದರಿಂದ ನಾಲ್ವರೂ ಅಸ್ವಸ್ಥಗೊಂಡಿದ್ದಾರೆ. ಬೈಲಹೊಂಗಲ ಜನತಾ ಪ್ಲಾಟ್‌ನಲ್ಲಿ …
Read More »ರಾಜ್ಯಪಾಲರಿಗೆ ಡಾ.ಕೋರೆ ಪತ್ರ
ಬೆಳಗಾವಿ: ‘ಬೆಳಗಾವಿಯಿಂದ ದೆಹಲಿ, ಮುಂಬೈ, ಪುಣೆ ಮುಂತಾದ ಕಡೆಗೆ ವಿಮಾನ ಹಾರಾಟವನ್ನು ಸ್ಥಗಿತಗೊಳಿಸಲಾಗಿದೆ. ವಿಮಾನ ಸಂಸ್ಥೆಗಳು ಲಾಭದಾಯಕವಾಗಿ ನಡೆಯುತ್ತಿದ್ದರೂ ಹಾರಾಟ ನಿಲ್ಲಿಸಿದ್ದು ಸಮಂಜಸವಲ್ಲ. ಪ್ರಯಾಣಿಕರಿಗೆ ಆಗುತ್ತಿರುವ ತೊಂದರೆ ತಪ್ಪಿಸಲು ಮೊದಲಿದ್ದ ಎಲ್ಲ ವಿಮಾನಗಳನ್ನೂ ಮರು ಹಾರಾಟ ಆರಂಭಿಸಲು ಕ್ರಮ ವಹಿಸಬೇಕು’ ಎಂದು ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ ಅವರು ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರಿಗೆ ಪತ್ರ ಬರೆದಿದ್ದಾರೆ. ಬೆಳಗಾವಿಯನ್ನು ರಾಜ್ಯದ ಎರಡನೇ ರಾಜಧಾನಿ ಎಂದು ಪರಿಗಣಿಸಲಾಗಿದೆ. ಪ್ರತಿ ವರ್ಷ …
Read More »ಪೊಲೀಸರು ತರಬೇತಿಯಲ್ಲಿ ಕಲಿತ ಪ್ರತಿಯೊಂದು ಕೌಶಲ ಮತ್ತು ಸಾಮರ್ಥ್ಯವನ್ನು ವೃತ್ತಿ ಜೀವನದಲ್ಲಿ ನಿರಂತರವಾಗಿ ಕಾಪಾಡಿಕೊಂಡು ಹೋಗಬೇಕು.
ಬೆಳಗಾವಿ: ‘ಪೊಲೀಸರು ತರಬೇತಿಯಲ್ಲಿ ಕಲಿತ ಪ್ರತಿಯೊಂದು ಕೌಶಲ ಮತ್ತು ಸಾಮರ್ಥ್ಯವನ್ನು ವೃತ್ತಿ ಜೀವನದಲ್ಲಿ ನಿರಂತರವಾಗಿ ಕಾಪಾಡಿಕೊಂಡು ಹೋಗಬೇಕು. ಅಂದಾಗ ಮಾತ್ರ ವೃತ್ತಿಯಲ್ಲಿ ಯಶಸ್ಸು ಗಳಿಸುವುದು ಸಾಧ್ಯ’ ಎಂದು ಕರ್ನಾಟಕ ರಾಜ್ಯ ಮೀಸಲು ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಸೀಮಂತ್ ಕುಮಾರ್ ಸಿಂಗ್ ಸಲಹೆ ನೀಡಿದರು. ಇಲ್ಲಿನ ಕಂಗ್ರಾಳಿಯ ಕೆಎಸ್‌ಆರ್‌ಪಿ ತರಬೇತಿ ಶಾಲೆಯ 9ನೇ ತಂಡದ ವಿಶೇಷ ಮೀಸಲು ಪೊಲೀಸ್ ಕಾನ್‌ಸ್ಟೆಬಲ್, ಬ್ಯಾಂಡ್ಸ್‌ಮನ್, ಪ್ರಥಮ ತಂಡದ ಅಗ್ನಿಶಾಮಕ ಪ್ರಶಿಕ್ಷಣಾರ್ಥಿಗಳ ಹಾಗೂ …
Read More »ಜ್ಞಾನ ಸಂಪಾದನೆಗೆ ಗುರು ಅನಿವಾರ್ಯ’
ರಾಯಬಾಗ: ‘ಇಂದಿನ ದಿನಗಳಲ್ಲಿ ಗುರು- ಶಿಷ್ಯರ ಸಂಬಂಧಗಳು ಕದಡುತ್ತಿವೆ. ಶಿಕ್ಷಕರಿಲ್ಲದೇ ತಂತ್ರಜ್ಞಾನದ ಮುಖಾಂತರ ಜ್ಞಾನ ಸಂಪಾದನೆ ಸಾಧ್ಯ ಎನ್ನುವ ಭಾವನೆಯೇ ಇದಕ್ಕೆ ಕಾರಣ. ಆದರೆ, ವಿದ್ಯಾರ್ಥಿಗಳಲ್ಲಿ ತಾಳ್ಮೆ, ವಿನಯ, ಭಕ್ತಿಭಾವ ಮೂಡಲು ಸಾಧ್ಯವಿಲ್ಲ. ಅದಕ್ಕೆ ಗುರುವೇ ಬೇಕು’ ಎಂದು ವಿಜಯಪುರ ಅಕ್ಕ ಮಹಾದೇವಿ ವಿಶ್ವ ವಿದ್ಯಾಲಯದ ಪ್ರಾಧ್ಯಾಪಕ ವಿಷ್ಣು ಶಿಂಧೆ ಹೇಳಿದರು. ಪ್ರೊ.ಯಲ್ಲಪ್ಪ ಹಿಮ್ಮಡಿ ಅವರ ಸೇವಾ ನಿವೃತ್ತ ಪ್ರಯುಕ್ತ ಪಟ್ಟಣದಲ್ಲಿ ಈಚೆಗೆ ಹಮ್ಮಿಕೊಂಡಿದ್ದ ವಿಚಾರ ಸಮರ್ಪಣೆ, ಗುರುವಿಗೆ ವಂದನೆ, ವಿದ್ಯಾರ್ಥಿಗಳಿಗೆ …
Read More »ಬೆಳಗಾವಿ ಜನಪದರು ವಿದ್ವಾಂಸರಿಗಿಂತ ಜ್ಞಾನವಂತರು.
ಬೆಳಗಾವಿ: ‘ಜನಪದರು ವಿದ್ವಾಂಸರಿಗಿಂತ ಜ್ಞಾನವಂತರು. ಅವರು ರೂಪಕ, ಪ್ರತಿಮೆಗಳನ್ನು ಬಹು ಸೊಗಸಾಗಿ ದೈನಂದಿನ ಬದುಕಿನಲ್ಲಿ ಬಳಸುತ್ತಲೇ ಬಂದಿರುವರು. ಅವುಗಳನ್ನೇ ನಾವು ನಾಟಕ, ಸಾಹಿತ್ಯ, ಕಲೆಗಳಲ್ಲಿ ಪುನಃ ರಚಿಸಿ ಹಣ, ಪ್ರಶಸ್ತಿಗಳನ್ನು ಪಡೆಯುತ್ತೇವೆ. ಆದರೆ ನಿಜವಾದ ಕಲಾವಿದರಾದ ಅವರು ಮಾತ್ರ ಸರ್ಕಾರದ ಸಹಾಯ ಧನಕ್ಕೆ ಕೈಚಾಚಿ ನಿಲ್ಲುವಂಥ ಪರಿಸ್ಥಿತಿ ಇರುವುದು ದುರಂತ’ ಎಂದು ನಾಟಕಕಾರ ಡಿ.ಎಸ್.ಚೌಗಲೆ ಬೇಸರ ವ್ಯಕ್ತಪಡಿಸಿದರು. ಇಲ್ಲಿಯ ಮಹಿಳಾ ಅಭಿವೃದ್ಧಿ ಮತ್ತು ಸೇವಾ ಸಂಸ್ಥೆ, ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ …
Read More »ನಾಳೆಯಿಂದ ಪಿಯು ಪರೀಕ್ಷೆ ಆರಂಭ:
ಬೆಂಗಳೂರು: ಮಾರ್ಚ್ 9ರಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಆರಂಭವಾಗುತ್ತಿದ್ದು, ಸುಸೂತ್ರವಾಗಿ ಪರೀಕ್ಷೆಗಳನ್ನು ನಡೆಸಲು ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸಿದ್ಧತೆ ಮಾಡಿಕೊಂಡಿದೆ. ಈ ಬಾರಿ 7,27,387 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಹೆಸರು ನೋಂದಾಯಿಸಿಕೊಂಡಿದ್ದಾರೆ. ಪರೀಕ್ಷೆ ನಡೆಯುವ ರಾಜ್ಯದ 1,109 ಕೇಂದ್ರಗಳಲ್ಲೂ ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗಿದೆ. ಪ್ರಶ್ನೆ ಮತ್ತು ಉತ್ತರ ಪತ್ರಿಕೆಗಳ ಸಾಗಣೆ, ಸಂಗ್ರಹಣೆ, ಮೌಲ್ಯಮಾಪನ ಕೇಂದ್ರಗಳ ಸುತ್ತ ಬಿಗಿ ಭದ್ರತೆ ಒದಗಿಸಲಾಗುತ್ತದೆ. ಪರೀಕ್ಷಾ ಕೇಂದ್ರದ ಸುತ್ತಲೂ ನಿಷೇಧಾಜ್ಞೆ …
Read More »ಕಾಂಗ್ರೆಸಿನ ಗ್ಯಾರಂಟಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ: ಬಿಎಸ್‌ವೈ
ಯಾದಗಿರಿ: ಕಾಂಗ್ರೆಸ್‌ನವರು ನೀಡುತ್ತಿರುವ ಗೃಹಜ್ಯೋತಿ, ಗೃಹಲಕ್ಷ್ಮೀ, ಅನ್ನಭಾಗ್ಯ ಯೋಜನೆಗಳಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಹೇಳಿದರು. ನಗರದಲ್ಲಿ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್, ಜೆಡಿಎಸ್‌ನವರು ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ಹೇಳಿಕೊಳ್ಳುತ್ತಿದ್ದಾರೆ. ಅವರು ಹೇಳಿಕೊಳ್ಳುವುದಕ್ಕೆ ನಾನೇನು ಟೀಕೆ ಮಾಡುವುದಿಲ್ಲ ಎಂದರು. ವಿಜಯಸಂಕಲ್ಪ ಯಾತ್ರೆಯಲ್ಲಿ ಸೇರುವ ಜನರು ನೋಡಿದರೆ ವಿಜಯೋತ್ಸವ ಆಚರಣೆಗೆ ಬರುತ್ತಿದ್ದಾರೆ ಎಂದು ಭಾಸವಾಗುತ್ತದೆ. ಬಿಜೆಪಿಯೇ ಸ್ಪಷ್ಟ …
Read More »