ಬೆಂಗಳೂರು ಕೇಂದ್ರ ಚುನಾವಣ ಆಯೋಗದ ನಿರ್ದೇಶನದಂತೆ ರಾಜ್ಯದ 224 ವಿಧಾನ ಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು ಮರುಪರಿಶೀಲಿಸಿರುವ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ, ಪ್ರತಿಯೊಂದು ಕ್ಷೇತ್ರ ದಲ್ಲೂ ಅಂದಾಜು 20 ಸಾವಿರ ಹೆಸರುಗಳನ್ನು ಸಕಾರಣವಿಲ್ಲದೆ ತೆಗೆದುಹಾಕಿರುವುದನ್ನು ಪತ್ತೆಹಚ್ಚಿದೆ. ಅಂತಿಮ ಮತದಾರರ ಪಟ್ಟಿಯಲ್ಲಿ 10 ಸಾವಿರ ಹೆಸರುಗಳು ತೆಗೆದುಹಾಕಿದ್ದರೆ (ಅಂದರೆ ಶೇ.4ಕ್ಕಿಂತ ಅಧಿಕ) ಅಂತಹ ಕ್ಷೇತ್ರಗಳಲ್ಲಿ ಅಂತಿಮ ಮತದಾರರ ಪಟ್ಟಿಯನ್ನು ಮರು ಪರಿಶೀಲಿಸುವಂತೆ ಚುನಾವಣ ಆಯೋಗ ನಿರ್ದೇಶಿಸಿತ್ತು. ಶೇ.4ಕ್ಕಿಂತ ಹೆಚ್ಚು …
Read More »Yearly Archives: 2023
ಶಾಸಕರ ಆಪ್ತನ ಮಾತೋಶ್ರೀ ನಿಧನ ಇಂದು 10ಗಂಟೆಗೆ ಗೋಕಾಕ ನ ಭಗತ ಸಿಂಗ್ ಸರ್ಕಲ ನಲ್ಲಿರುವ ರುದ್ರ ಭೂಮಿಯಲ್ಲಿ ಅಂತ್ಯಕ್ರಿಯೆ
ಶಾಸಕರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಅವರ ಮಾತೋಶ್ರೀ ನಿಧನಗುರುವಾರದಂದು ಮುಂ. ೧೦ ಗಂಟೆಗೆ ಅಂತ್ಯಕ್ರಿಯೆ. ಗೋಕಾಕ್- ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಅವರ ಮಾತೋಶ್ರೀ ಗಂಗವ್ವ ಲಕ್ಷ್ಮಣ ಶೇಖರಗೋಳ (೮೨) ಅವರು ಬುಧವಾರ ದಿ. ೧.೩.೨೦೨೩ ರಂದು ಸಂಜೆ ೭.೪೫ ಗಂಟೆಗೆ ಅನಾರೋಗ್ಯದಿಂದ ನಿಧನರಾದರು. ಮೃತರಿಗೆ ಮೂವರು ಪುತ್ರರು, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು ಬಳಗವಿದೆ. ಮೃತರ ಅಂತ್ಯಕ್ರಿಯೆಯು ನಾಳೆ …
Read More »ಮುಂಬೈನಲ್ಲಿ ಎಂಇಎಸ್ ಕಿತಾಪತಿ; ಕರ್ನಾಟಕ ಸರ್ಕಾರದ ವಿರುದ್ಧ ಮಹಾರಾಷ್ಟ್ರದಲ್ಲಿ ಪ್ರತಿಭಟನೆ
ಬೆಳಗಾವಿ: ಈಗಾಗಲೇ ಎಲ್ಲ ಚುನಾವಣೆಯಲ್ಲಿಯೂ ಸೋತು ಸುಣ್ಣವಾಗಿರುವ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಮತ್ತೆ ಬಾಲ ಬಿಚ್ಚಿದ್ದು, ಕರ್ನಾಟಕದಲ್ಲಿ ಬೇಳೆ ಬೇಯುತ್ತಿಲ್ಲ ಎಂದು ಮುಂಬೈನಲ್ಲಿ ಮಹಾರಾಷ್ಟ್ರ ಸರ್ಕಾರದ ಬಾಗಿಲು ತಟ್ಟಿದೆ. ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಹೇಗಾದರೂ ಮಾಡಿ ಗೆಲ್ಲಬೇಕೆಂಬ ಹಠಕ್ಕೆ ಬಿದ್ದಿರುವ ಎಂಇಎಸ್ ಗಡಿ ವಿವಾದವನ್ನೇ ಅಸ್ತ್ರವಾಗಿ ಇಟ್ಟುಕೊಂಡು ಮಹಾರಾಷ್ಟ್ರ ರಾಜಧಾನಿ ಮುಂಬೈನಲ್ಲಿ ಮಂಗಳವಾರ ಆಂದೋಲನ ನಡೆಸಿದೆ. ಬೆಳಗಾವಿಯಲ್ಲಿ ನಾಲ್ಕು ಸ್ಥಾನ ಗೆಲ್ಲಲು ಪ್ಲಾನ್ ಮಾಡಿಕೊಂಡು …
Read More »ಮೋದಿ ಸಾವು ಯಾರೂ ಬಯಸಿಲ್ಲ ಸಾವಿಗೆ ಕಾಂಗ್ರೆಸ್ ಜಪ ಮಾಡುತ್ತಿದೆ ಎಂಬುದು ದೊಡ್ಡ ಸುಳ್ಳು: ಸಿದ್ದರಾಮಯ್ಯ
ಬೆಳಗಾವಿ: ‘ಪ್ರಧಾನಿ ನರೇಂದ್ರ ಮೋದಿ ಅವರ ಸಾವಿಗೆ ಕಾಂಗ್ರೆಸ್ ಜಪ ಮಾಡುತ್ತಿದೆ ಎಂಬುದು ದೊಡ್ಡ ಸುಳ್ಳು. ಈ ರೀತಿ ಯಾರೂ ಎಲ್ಲಿಯೂ ಹೇಳಿಲ್ಲ. ತಮ್ಮಷ್ಟಕ್ಕೆ ತಾವೇ ಇಂಥ ಭಾವುಕ ಸನ್ನಿವೇಶ ಹುಟ್ಟುಹಾಕುವುದು ಅವರಿಗೆ ಕರಗತ’ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿದರು. ‘ಸಿದ್ದರಾಮಯ್ಯನನ್ನು ಮುಗಿಸಿಬಿಡಿ ಎಂದು ಅಶ್ವತ್ಥನಾರಾಯಣ ಬಹಿರಂಗವಾಗಿ ಹೇಳಿದರು. ನಮ್ಮ ಭಾವನೆಗಳು ಅವರಷ್ಟು ಕೆಟ್ಟದಾಗಿಲ್ಲ. ಪ್ರಧಾನಿ ಆರೋಗ್ಯವಾಗಿರಲಿ, ಹೆಚ್ಚು ಕಾಲ ಬದುಕಲಿ’ ಎಂದು ಅವರು ನಗರದಲ್ಲಿ ಬುಧವಾರ ಮಾಧ್ಯಮದವರ …
Read More »ಶಿವಮೂರ್ತಿ ಶರಣರ ಅರ್ಜಿ ವಿಚಾರಣೆ ಇಂದು
ಬೆಂಗಳೂರು: ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಶರಣರ ಅಧಿಕಾರ ಚಲಾವಣೆಗೆ ನಿರ್ಬಂಧ ವಿಧಿಸಿರುವ ಚಿತ್ರದುರ್ಗ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಆದೇಶ ಪ್ರಶ್ನಿಸಿದ ರಿಟ್ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರ ಏಕಸದಸ್ಯನ್ಯಾಯಪೀಠದ ಮುಂದೆ ಗುರುವಾರಕ್ಕೆ (ಮಾ.2) ನಿಗದಿ ಮಾಡಲಾಗಿದೆ. ಈ ಸಂಬಂಧ ಎಸ್‌ಜೆಎಂ ವಿದ್ಯಾಪೀಠದ ಅಧ್ಯಕ್ಷ ಎಚ್.ಎಂ.ವಿಶ್ವನಾಥ್ ಮತ್ತು ಮಠದ ತಾತ್ಕಾಲಿಕ ಉಸ್ತುವಾರಿ ಬಸವಪ್ರಭು ಸ್ವಾಮೀಜಿ ಸಲ್ಲಿಸಿರುವ ರಿಟ್ ಅರ್ಜಿ ಸಂಖ್ಯೆ 25316/2022ರ ಮುಂದುವರಿದ ವಿಚಾರಣೆ ಮಧ್ಯಾಹ್ನ …
Read More »ಅಪ್ಪ ಜೈಲಿಗೆ ಹೋಗಿದ್ದ ಕರಾಳ ದಿನಗಳ ಪುಸ್ತಕ ಬಿಡುಗಡೆ: ಬಿಎಸ್‌ವೈ ಪುತ್ರಿ
ಶಿವಮೊಗ್ಗ : ‘ನಮ್ಮ ತಂದೆ (ಬಿ.ಎಸ್.ಯಡಿಯೂರಪ್ಪ) ಜೈಲಿಗೆ ಹೋಗಿದ್ದು ಕರಾಳ ದಿನಗಳು. ಅವರ ಕುರ್ಚಿ ಅಲ್ಲಾಡಿಸಲು ಎಂತಹ ಕೃತ್ಯಗಳು ಮಾಡಿದ್ದರು ಎಂಬುದನ್ನು ಅವರು ಜೈಲಿನಲ್ಲಿದ್ದಾಗ ಡೈರಿ ಬರೆದಿಟ್ಟಿದ್ದಾರೆ. ಸಂದರ್ಭ ಬಂದಾಗ ಬಹಿರಂಗಪಡಿಸಲಾಗುವುದು’ ಎಂದು ಬಿ.ಎಸ್.ಯಡಿಯೂರಪ್ಪ ಅವರ ಪುತ್ರಿ ಬಿ.ವೈ.ಅರುಣಾದೇವಿ ಹೇಳಿದರು. ಯಡಿಯೂರಪ್ಪ ಅವರ 80ನೇ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಆ ಸಂದರ್ಭದಲ್ಲಿ ಅದೊಂದು ರಾಜಕೀಯ ಅಸಹ್ಯ ಅನ್ನಿಸಿತ್ತು. ಡೈರಿಯಲ್ಲಿ ಪ್ರತಿಯೊಂದು ಘಟನೆಯನ್ನು ಉಲ್ಲೇಖಿಸಿದ್ದಾರೆ. ತಮ್ಮ ವಿರುದ್ಧ …
Read More »ಮೋದಿಗೆ ಮರಳಿ ನಮಸ್ಕರಿಸುವ ಸಂಸ್ಕೃತಿ ಗೊತ್ತಿಲ್ಲ: ಎಚ್.ಕೆ.ಪಾಟೀಲ ಕಿಡಿ
ರೋಣ (ಗದಗ ಜಿಲ್ಲೆ): ‘ಮರಳಿ ನಮಿಸುವ ಸಂಸ್ಕೃತಿ ಗೊತ್ತಿಲ್ಲದ ಪ್ರಧಾನಿ ನರೇಂದ್ರ ಮೋದಿ ಅವರು ಈಗ ಕಾಂಗ್ರೆಸ್ ಬಗ್ಗೆ ಮಾತನಾಡುತ್ತಿದ್ದಾರೆ’ ಎಂದು ಶಾಸಕ ಎಚ್.ಕೆ.ಪಾಟೀಲ ತಿರುಗೇಟು ನೀಡಿದರು. ಕಾಂಗ್ರೆಸ್ ಅಧ್ಯಕ್ಷ ಖರ್ಗೆ ಅವರಿಗೆ ಸ್ವಪಕ್ಷದಲ್ಲೇ ಗೌರವ ಸಿಗುತ್ತಿಲ್ಲ ಎಂದು ಹೇಳಿರುವ ಪ್ರಧಾನಿ ಮೋದಿ ಅವರ ಮಾತಿಗೆ ಪ್ರತಿಕ್ರಿಯಿಸಿದ ಅವರು, ‘ಬಿಜೆಪಿ ಹಿರಿಯ ನಾಯಕ ಲಾಲ್‌ಕೃಷ್ಣ ಅಡ್ವಾನಿ ಅವರು ಕೈ ಜೋಡಿಸಿ ನಿಂತಾಗ ಮೋದಿ ಅವರು ಮರಳಿ ನಮಸ್ಕಾರ ಮಾಡಲಿಲ್ಲ. ಈಗ ಅವರು …
Read More »ರೂಪಾ ವಿರುದ್ಧ ₹1 ಕೋಟಿ ಮೊತ್ತದ ಮಾನನಷ್ಟ ಮೊಕದ್ದಮೆ ದಾಖಲಿಸಿದ ರೋಹಿಣಿ ಸಿಂಧೂರಿ
ಬೆಂಗಳೂರು: ‘ಫೇಸ್‌ಬುಕ್, ಪತ್ರಿಕೆ ಮತ್ತು ಎಲೆಕ್ಟ್ರಾನಿಕ್ ಮಾಧ್ಯಮಗಳ ಮುಖಾಂತರ ನನ್ನ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುವ ಮೂಲಕ ನನ್ನ ಮಾನಹಾನಿ ಮಾಡಿರುವ ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿಕೊಂಡು ಕ್ರಮ ಜರುಗಿಸಬೇಕು’ ಎಂದು ಕೋರಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ನಗರದ 24ನೇ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್ ಕೋರ್ಟ್‌ನಲ್ಲಿ ದೂರು ದಾಖಲಿಸಿದ್ದಾರೆ. ಈ ಕುರಿತಂತೆ ವಕಾಲತ್ತು ವಹಿಸಿರುವ ವಕೀಲ ಎಂ.ಆರ್.ಅನಿಲ್ ಅವರು ರೋಹಿಣಿ ಸಿಂಧೂರಿ ಪರವಾದ …
Read More »ನಿವೃತ್ತ ಐಪಿಎಸ್ ಅಧಿಕಾರಿ ಹಾಗೂ ಎಎಪಿ ಉಪಾಧ್ಯಕ್ಷ ರಾಗಿದ್ದ ಭಾಸ್ಕರ್ ರಾವ್ ಬುಧವಾರ ಬಿಜೆಪಿ ಸೇರಿದರು.
ಬೆಂಗಳೂರು: ನಿವೃತ್ತ ಐಪಿಎಸ್ ಅಧಿಕಾರಿ ಹಾಗೂ ಎಎಪಿ ಉಪಾಧ್ಯಕ್ಷ ರಾಗಿದ್ದ ಭಾಸ್ಕರ್ ರಾವ್ ಬುಧವಾರ ಬಿಜೆಪಿ ಸೇರಿದರು. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಉಪಸ್ಥಿತಿ ಯಲ್ಲಿ, ಬಿಜೆಪಿ ಸೇರಿದ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಭಾರತ ಇನ್ನಷ್ಟು ಅಭಿವೃದ್ಧಿ ಹೊಂದಲಿದ್ದು, ಬಿಜೆಪಿ ಯುವ ಜನತೆಯ ಆಶಾ ಕಿರಣವಾಗಿದೆ ಎಂದರು. ಈ ಹಿಂದೆ ಆಮ್ ಆದ್ಮಿ ಪಕ್ಷ ಸೇರಿದಾಗ ಬಿಜೆಪಿಯ ಆರೋಪ ಮಾಡಿದ …
Read More »ರಾಜ್ಯ ಸರ್ಕಾರಿ ನೌಕರರ ವೇತನ ಶೇ 17ರಷ್ಟು ಹೆಚ್ಚಳಕ್ಕೆ ನಿರ್ಧಾರ: ಸಿಎಂ ಬೊಮ್ಮಾಯಿ
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಮಧ್ಯಂತರ ಪರಿಹಾರವಾಗಿ ಶೇಕಡ 17ರಷ್ಟು ವೇತನ ಹೆಚ್ಚಳಕ್ಕೆ ನಿರ್ಧರಿಸಲಾಗಿದೆ. ತಕ್ಷಣದಲ್ಲೇ ಈ ಕುರಿತು ಆದೇಶ ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದರು. ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಮತ್ತು ಹಣಕಾಸು ಇಲಾಖೆ ಅಧಿಕಾರಿಗಳ ಜತೆ ಬುಧವಾರ ಸಭೆ ನಡೆಸಿದ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಏಳನೇ ವೇತನ ಆಯೋಗವನ್ನು ಈಗಾಗಲೇ ನೇಮಿಸಲಾಗಿದೆ. ಅವರಿಂದ ವರದಿ ಪಡೆದು ಶೀಘ್ರದಲ್ಲಿ ವೇತನ ಪರಿಷ್ಕರಣೆಗೆ ಪ್ರಯತ್ನ …
Read More »