ಬೆಂಗಳೂರು: ರಾಜ್ಯದಲ್ಲಿ ಪಕ್ಷದ ಪರ ಅಲೆ ಎಬ್ಬಿಸಲು ಬಿಜೆಪಿಯು ಮಾರ್ಚ್ 1 ರಿಂದ ‘ವಿಜಯ ಸಂಕಲ್ಪ ಯಾತ್ರೆ’ ಆರಂಭಿಸಲಿದೆ. ಮಾ.1 ರಂದು ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಮಾ. 2 ರಂದು ಬೆಳಗಾವಿ ಜಿಲ್ಲೆಯ ನಂದಗಢದಲ್ಲಿರುವ ಸಂಗೊಳ್ಳಿ ರಾಯಣ್ಣ ಸ್ಮಾರಕದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಮಾ.3 ರಂದು ಬೀದರ್ ಜಿಲ್ಲೆ ಬಸವಕಲ್ಯಾಣ ಅನುಭಮಂಪಟದ ಸ್ಥಳದಿಂದ ಕೇಂದ್ರ ಗೃಹ ಸಚಿವ ಅಮಿತ್ …
Read More »Yearly Archives: 2023
ಚಾಮುಂಡೇಶ್ವರಿ ಆಶೀರ್ವಾದ ಇದೆ, ಮತ್ತೆ ನಾನೇ ಮುಖ್ಯಮಂತ್ರಿ: H.D.K.
ಚನ್ನಪಟ್ಟಣ: ನಾಡಿನ ಅಧಿದೇವತೆ ಚಾಮುಂಡೇಶ್ವರಿ ಆಶೀರ್ವಾದವಿದ್ದು, ಈ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರರಷ್ಟು ಖಚಿತ. ನಾನೇ ಮುಖ್ಯಮಂತ್ರಿ ಆಗಲಿದ್ದೇನೆ ಎಂದು ಎಚ್.ಡಿ.ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು. ಬೊಂಬೆನಗರಿ ಚನ್ನಪಟ್ಟಣದಲ್ಲಿ ನಡೆದ ಬಮೂಲ್ ಉತ್ಸವದಲ್ಲಿ ಬೃಹತ್ ವೇದಿಕೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ತರುವ ಉದ್ದೇಶದಿಂದ ಈಗಾಗಲೇ ರಾಜ್ಯಾದ್ಯಂತ 73ಕ್ಕೂ ಹೆಚ್ಚು ವಿಧಾನಸಭಾ ಕ್ಷೇತ್ರಗಳಿಗೆ ಭೇಟಿ ನೀಡಿ 15ರಿಂದ 18 ಗಂಟೆಗಳ ಕಾಲ ನಿರಂತರ ಪಂಚರತ್ನ ಯಾತ್ರೆ …
Read More »ಬೆಳಗಾವಿ ಗ್ರಾಮೀಣ ಕ್ಷೇತ್ರ ಈಗ ಇಡೀ ರಾಜ್ಯದ ಗಮನ ಸೆಳೆದಿದೆ.
ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ತಮ್ಮ ರಾಜಕೀಯ ವೈರಿ, ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರ ವಿರುದ್ಧ ನೇರವಾಗಿ ಅಖಾಡಕ್ಕೆ ಇಳಿದಿರುವ ಪರಿಣಾಮ ಬೆಳಗಾವಿ ಗ್ರಾಮೀಣ ಕ್ಷೇತ್ರ ಈಗ ಇಡೀ ರಾಜ್ಯದ ಗಮನ ಸೆಳೆದಿದೆ. ರಮೇಶ್ ಈ ಕ್ಷೇತ್ರದ ಅಭ್ಯರ್ಥಿಯಲ್ಲ. ಆದರೆ ಹೆಬ್ಟಾಳ್ಕರ್‌ಅವರನ್ನು ಸೋಲಿಸಲೇಬೇಕು ಎಂದು ಪಣ ತೊಟ್ಟಿರುವ ಕಾರಣ ಚುಣಾವಣ ಕಣ ರಣರಂಗವಾಗಿ ಬದಲಾಗಿದೆ. ಆರೋಪ-ಪ್ರತ್ಯಾರೋಪ ಪರಾಕಾಷ್ಠೆ ಮುಟ್ಟಿದೆ. ಕ್ಷೇತ್ರ ಪುನರ್ ವಿಂಗಡಣೆಯಿಂದ 2008ರಲ್ಲಿ ಉದಯವಾದ ಬೆಳಗಾವಿ ಗ್ರಾಮೀಣ ಕ್ಷೇತ್ರ …
Read More »ಮನಸ್ಸಿಗೆ ಬಂದಂತೆ ಇತಿಹಾಸ ಬದಲಿಸಲಾಗದು: ಸುಪ್ರೀಂಕೋರ್ಟ್
ನವದೆಹಲಿ:“ಭಾರತದ ಮೇಲೆ ವಿದೇಶಿಗರು ಆಕ್ರಮಣ ನಡೆಸಿ, ಆಳಿದ್ದರು ಎಂಬುದು ಇತಿಹಾಸದ ಸತ್ಯ. ನಮಗೆ ಬೇಕಾದಂತೆ ಇತಿಹಾಸವನ್ನು ಬದಲಿಸಲು ಸಾಧ್ಯವಿಲ್ಲ. ಯಾವುದೇ ದೇಶದ ಇತಿಹಾಸವು ಆ ದೇಶದ ವರ್ತಮಾನ ಹಾಗೂ ಭವಿಷ್ಯದ ಪೀಳಿಗೆಯನ್ನು ಕಾಡುವಂತಿರಬಾರದು’ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯ ಪಟ್ಟಿದೆ. ವಿದೇಶಿ ಆಕ್ರಮಣಕಾರರಿಂದ ಹೆಸರು ಬದಲಾಗಿರುವ ದೇಶದ ಸಾಂಸ್ಕೃತಿಕ, ಪ್ರಾಚೀನ ಹಾಗೂ ಧಾರ್ಮಿಕ ಕ್ಷೇತ್ರಗಳ ಮೂಲ ಹೆಸರನ್ನೇ ಮತ್ತೆ ಇಡಲು ಮರು ನಾಮಕರಣ ಆಯೋಗ ರಚಿಸಬೇಕು ಎಂದು ಕೋರಿ ವಕೀಲ …
Read More »ಅಸಾಧ್ಯವನ್ನು ಸಾಧ್ಯವಾಗಿಸಿದ ಮೋದಿ: ಸಿಎಂ ಬೊಮ್ಮಾಯಿ
ಬೆಳಗಾವಿ: ಪ್ರಧಾನಿ ಮೋದಿ ದೇಶವನ್ನು ಅಸಾಧ್ಯದಿಂದ ಸಾಧ್ಯದ ಕಡೆಗೆ, ಅನಿಶ್ಚಿತತೆಯಿಂದ ನಿಶ್ಚಿತತೆಯೆಡೆಗೆ ತೆಗೆದುಕೊಂಡು ಹೋಗಿದ್ದಾರೆ. ಸಂಶಯವನ್ನು ಸಂಕಲ್ಪ ಮಾಡಿದ್ದಾರೆ. ಸಂಕಲ್ಪವನ್ನು ಸಿದ್ಧಿ ಮಾಡಿ ತೋರಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಣ್ಣಿಸಿದರು. ನಗರದ ಮಾಲಿನಿ ಸಿಟಿ ಮೈದಾನದಲ್ಲಿ ಸೋಮವಾರ ನಡೆದ 2,240 ಕೋಟಿ ರೂ. ವೆಚ್ಚದ ವಿವಿಧ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಸಮಾರಂಭದಲ್ಲಿ ಮಾತನಾಡಿ, ಮೋದಿ ಆಸೆಯಂತೆ ನವ ಭಾರತ ಮತ್ತು ನವ ಕರ್ನಾಟಕ ನಿರ್ಮಾಣಕ್ಕೆ ನಾವು ಸಿದ್ಧರಾಗಿದ್ದೇವೆ. …
Read More »ವಿಧಾನಸಭೆ ಚುನಾವಣೆ: ಉತ್ತರದಲ್ಲಿ ಗುಜರಾತ್ ಮಾದರಿ: ಹಳಬರಿಗೆ ಕೊಕ್, ಹೊಸಬರಿಗೆ ಟಿಕೆಟ್
ಬೆಂಗಳೂರು: ಹೊಸ ಮುಖಗಳಿಗೆ ಅವಕಾಶ ಸೃಷ್ಟಿಸುವ “ಗುಜರಾತ್ ಮಾದರಿ’ ಪ್ರಯೋಗವನ್ನು ಈ ಬಾರಿ ಉತ್ತರ ಕರ್ನಾಟಕ ಭಾಗದಲ್ಲಿ ನಡೆಸಲು ಬಿಜೆಪಿ ವರಿಷ್ಠರು ಚಿಂತನೆ ನಡೆಸಿದ್ದು, ಇದಕ್ಕೆ ಪೂರಕವಾದ ಕ್ಷೇತ್ರ-ಕಾರ್ಯ, ಸಮೀಕ್ಷೆ ಸದ್ದಿಲ್ಲದೆ ಪ್ರಾರಂಭಗೊಂಡಿದೆ. ರಾಜ್ಯದಲ್ಲಿ ಗುಜರಾತ್ ಮಾದರಿಯಲ್ಲಿ ಹಿರಿಯರಿಗೆ ಟಿಕೆಟ್ ತಪ್ಪಿಸುವ ಸಾಧ್ಯತೆ ಇಲ್ಲ ಎಂದು ಬಿಜೆಪಿಯ ಒಂದು ವಲಯ ವದಂತಿ ಹಬ್ಬಿಸುತ್ತಿದ್ದರೂ ಉತ್ತರ ಕರ್ನಾಟಕ ಭಾಗದಲ್ಲಿ ಹೊಸಬರಿಗೆ ಅವಕಾಶ ಕೊಡಲೇಬೇಕೆಂಬ ವಾದ ಬಲವಾಗತೊಡಗಿದೆ. ಸಿಎಂ ಬಸವರಾಜ ಬೊಮ್ಮಾಯಿ ನಿವಾಸದಲ್ಲಿ …
Read More »ನಾಳೆಯಿಂದ ಸರ್ಕಾರಿ ನೌಕರರ ಮುಷ್ಕರ
ಬೆಂಗಳೂರು: ವೇತನ ಭತ್ಯೆ ಪರಿಷ್ಕರಣೆ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಸರ್ಕಾರಿ ನೌಕರರ ಸಂಘ ಮಾ.1ರಿಂದ ಅನಿರ್ಧಿಷ್ಟಾವಧಿಯ ಮುಷ್ಕರಕ್ಕೆ ಮುಂದಾಗಿದ್ದು, ಮುಷ್ಕರದ ವೇಳೆ ಉಪವಾಸ, ಧರಣಿ ಸತ್ಯಾಗ್ರಹ ಹಾಗೂ ಘೋಷಣೆ ಕೂಗುವುದನ್ನು ನಿರ್ಬಂಧಿಸಲಾಗಿದೆ. ಮುಷ್ಕರ ಯಶಸ್ವಿಗೊಳಿಸುವ ಸಂಬಂಧ ಸಂಘ ಸೋಮವಾರ ಮಾರ್ಗಸೂಚಿ ಪ್ರಕಟಿಸಿದೆ. ಶಾಂತಿಯುತ ಹೋರಾಟಕ್ಕೆ ಸೂಚನೆ ನೀಡಲಾಗಿದೆ. ಜಾಲತಾಣ ಮತ್ತು ಮಾಧ್ಯಮಗಳಲ್ಲಿ ಯಾವುದೇ ಜನಪ್ರತಿನಿಧಿಗಳನ್ನು ಟೀಕಿಸದಂತೆ ತಾಕೀತು ಮಾಡಿದೆ. ಆರೋಗ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ತುರ್ತು …
Read More »ನಿರ್ಮಾಣ ಹಂತದಲ್ಲೇ ಬೆಂಗಳೂರು-ಮೈಸೂರು ದಶಪಥ ಉದ್ಘಾಟನೆ?
ಬೆಂಗಳೂರು-ಮೈಸೂರು ದಶಪಥ ನಿರ್ಮಾಣ ಕಾರ್ಯವು ಮಂಡ್ಯ, ಮೈಸೂರು ವ್ಯಾಪ್ತಿಯ ವಿವಿಧೆಡೆ ಸಂಪೂರ್ಣ ಮುಗಿಯದಿದ್ದರೂ ಉದ್ಘಾಟನೆಗೆ ದಿನಾಂಕ ನಿಗದಿಗೊಳಿಸಿರುವುದು ಅನುಮಾನಕ್ಕೆ ಕಾರಣವಾಗಿದೆ. ಮೊದಲ ಹಂತದ ಕಾಮಗಾರಿ ಬೆಂಗಳೂರಿನ ಕ್ರೈಸ್ಟ್ ಕಾಲೇಜಿನಿಂದ ಜಿಲ್ಲೆಯ ನಿಡಘಟ್ಟದವರೆಗೆ ಪೂರ್ಣಗೊಂಡಿದೆ.
Read More »ಬಿಎಸ್ ವೈ ಬಿಟ್ಟು ಚುನಾವಣೆ ಇಲ್ಲ ಎಂಬ ಸಂದೇಶ ನೀಡಿದರಾ ಮೋದಿ?
ಬೆಂಗಳೂರು: ಚುನಾವಣಾ ರಾಜಕಾರಣದಿಂದ ನಿವೃತ್ತಿ ಘೋಷಣೆ ಮಾಡಿದ್ದರೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಪ್ರಧಾನಿ ನರೇಂದ್ರ ಮೋದಿ ಮತ್ತೆ ಹೊಗಳಿರುವುದು ಈಗ ರಾಜಕೀಯ ವಲಯದಲ್ಲಿ ಅದರಲ್ಲೂ ಮುಖ್ಯವಾಗಿ ಬಿಜೆಪಿಯಲ್ಲಿ ತೀವ್ರ ಅಚ್ಚರಿಗೆ ಕಾರಣವಾಗಿದೆ. ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಗೆ ಆಗಮಿಸಿದ್ದ ಪ್ರಧಾನಿ ಮೋದಿ ಈ ವೇದಿಕೆಯಲ್ಲಿ ಯಡಿಯೂರಪ್ಪ ಅವರ ಸಾಧನೆಯನ್ನು ಶ್ಲಾಘಿಸಿದ್ದಾರೆ. ಯಡಿಯೂರಪ್ಪ ಅವರ ರಾಜಕೀಯ ಕರ್ಮಭೂಮಿಯಲ್ಲಿ ಆಡಿದ ಈ ಹೊಗಳಿಕೆಯ ಮಾತುಗಳು ಚುನಾವಣಾ ಹೊತ್ತಿನಲ್ಲಿ ಪ್ರಬಲ ವೀರಶೈವ- …
Read More »ಮೋದಿ- ಶಾ ಚುನಾವಣಾ ಏಜೆಂಟ್ ಗಳಾಗಿದ್ದಾರೆ: ಸಿದ್ದರಾಮಯ್ಯ
ಬೆಂಗಳೂರು: ಕರ್ನಾಟಕದ ವಿಚಾರದಲ್ಲಿ ಸುಳ್ಳು ಹೇಳಿರುವ ಮೋದಿಯವರು ಜನರ ಕ್ಷಮೆ ಕೇಳಬೇಕು. ರಾಜ್ಯದ ಪಾಲಿನ ಅನುದಾನಗಳನ್ನು ನ್ಯಾಯಯುತವಾಗಿ ಕೊಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ನಮ್ಮ ರಾಜ್ಯದ ಜನರಿಂದ ದೋಚಿಕೊಂಡ ಸಂಪತ್ತನ್ನು ಪ್ರವಾಹ, ಬರ, ಕೋವಿಡ್ ನಂತಹ ಮಾರಕ ಕಾಯಿಲೆಗಳಿಗೆ ಹಾಗೂ ಅಭಿವೃದ್ಧಿ ಕಾರ್ಯಗಳಿಗೆ, ಜನರ ಕಲ್ಯಾಣಕ್ಕೆ ಖರ್ಚು ಮಾಡುವ ಬದಲು ಚುನಾವಣಾ ಪ್ರಚಾರಗಳಿಗೆ ಖರ್ಚು ಮಾಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ. ನಾನು ಮೋದಿಯವರು ರಾಜ್ಯಕ್ಕೆ ಬಂದಾಗಲೆಲ್ಲ ಕರ್ನಾಟಕದ ಜನರಿಂದ …
Read More »