ಬೆಳಗಾವಿ ನ.28: ಡಿಸೆಂಬರ್ 4 ರಿಂದ 15 ರವರೆಗೆ ಸುವರ್ಣ ವಿಧಾನಸೌಧದಲ್ಲಿ (Suvarna Soudha) ನಡೆಯಲಿರುವ ರಾಜ್ಯ ವಿಧಾನಮಂಡಲದಚಳಿಗಾಲದ ಅಧಿವೇಶನದ ಭದ್ರತೆಗಾಗಿ 5 ಸಾವಿರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಪೊಲೀಸ್ (Police) ಆಯುಕ್ತ ಎಸ್.ಎನ್.ಸಿದ್ರಾಮಪ್ಪ ಹೇಳಿದರು. ಸೋಮವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ವಿಧಾನಮಂಡಲ ಅಧಿವೇಶನಕ್ಕೆ ಅಗತ್ಯ ಭದ್ರತಾ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಹೇಳಿದರು. 12 ಜನ ಎಸ್ಪಿ, 42 ಡಿವೈಎಸ್ಪಿಗಳು ಮತ್ತು 100 ಜನ ಪೊಲೀಸ್ ಇನ್ಸ್‌ಪೆಕ್ಟರ್‌ಗಳು …
Read More »Yearly Archives: 2023
ಜಮೀರ್ ಅಹ್ಮದ್ ಖಾನ್ ವಿವಾದಾತ್ಮಕ ಹೇಳಿಕೆ: ಡಿಸೆಂಬರ್ 4 ರಂದು ಬೆಳಗಾವಿಯಲ್ಲಿ ಬಿಜೆಪಿ ಪ್ರತಿಭಟನೆ
ತೆಲಂಗಾಣ ಚುನಾವಣಾ ಪ್ರಚಾರದ ವೇಳೆ ಸಚಿವ ಜಮೀರ್ ಅಹ್ಮದ್ ಖಾನ್ ಅವರು, ಮೊದಲ ಬಾರಿಗೆ ಯು.ಟಿ ಖಾದರ್ ಅವರನ್ನು ವಿಧಾನಸಭಾ ಸ್ಪೀಕರ್ ಆಗಿ ನೇಮಿಸಲಾಗಿದೆ. ಈಗ ಬಿಜೆಪಿ ಶಾಸಕರು ಕೂಡ ನಮಸ್ಕಾರ ಸ್ಪೀಕರ್ ಸಾಬ್ ಎನ್ನುತ್ತಾರೆ ಎಂದು ಹೇಳುವ ಮೂಲಕ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದರು. ಬೆಂಗಳೂರು, ನ.28: ಸ್ಪೀಕರ್ ಸ್ಥಾನದ ಕುರಿತು ನೀಡಿದ ವಿವಾದಾತ್ಮಕ ಹೇಳಿಕೆಯನ್ನು ಖಂಡಿಸಿ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುವ ಚಳಿಗಾಲದ ಅಧಿವೇಶನದ ಮೊದಲ ದಿನವೇ ಸಚಿವಜಮೀರ್ ಅಹ್ಮದ್ …
Read More »ವಿಜಯಪುರ ನಗರದಲ್ಲಿ ಹೆಚ್ಚಿದ ಬೀದಿ ನಾಯಿಗಳ ಹಾವಳಿ: ಐದಾರು ಮಕ್ಕಳ ಮೇಲೆ ದಾಳಿ
ವಿಜಯಪುರ, ನವೆಂಬರ್ 28: ವಿಜಯಪುರ ನಗರದಲ್ಲಿ (Vijayapura)ಬೀದಿ ನಾಯಿಗಳ(Street Dogs) ಕಾಟ ಜೋರಾಗಿದೆ. ಗಲ್ಲಿ ಗಲ್ಲಿಗಳಲ್ಲಿ ಬೀಡು ಬಿಟ್ಟಿರೋ ನಾಯಿಗಳು ಪುಟ್ಟ ಪುಟ್ಟ ಮಕ್ಕಳನ್ನೇ ಟಾರ್ಗೆಟ್ ಮಾಡುತ್ತಿವೆ. ಸೋಮವಾರದಿಂದ ನಗರದ ಬಡಿಕಮಾನ್, ಬಾಗಾಯತ್ ಗಲ್ಲಿ, ದೌಲತ್ ಕೋಟೆ ಹಾಗೂ ಭಾಂಗಿ ಆಸ್ಪತ್ರೆ ಪ್ರದೇಶಗಳಲ್ಲಿ ಬೀದಿ ಬದಿಯ ನಾಯಿಗಳು ಆರೇಳು ಮಕ್ಕಳನ್ನು ಕಚ್ಚಿ ಗಾಯಗೊಳಿಸಿವೆ. ನಗರದಲ್ಲಿ ಬೀದಿ ನಾಯಿಗಳ ಹಾವಳಿ ನಿಯಂತ್ರಿಸುವಂತೆ ಕಳೆದ ಆಗಸ್ಟ್ನಲ್ಲೇ ಮಹಾನಗರ ಪಾಲಿಕೆ ಹಾಗೂ ಪುರಾತತ್ವ ಇಲಾಖೆ ಆಧಿಕಾರಿಗಳಿಗೆ ಮನವಿ ಕೊಟ್ಟಿದ್ದರೂ …
Read More »ತಹಶೀಲ್ದಾರ್ ಕಚೇರಿಯಲ್ಲಿನ ರೆಕಾರ್ಡ್ ರೂಮ್ ದಾಖಲೆಗಳನ್ನು ಡಿಜಿಟಲೀಕರಣ ಮಾಡಲು ನಿರ್ಧರಿಸಲಾಗಿದೆ: ಸಚಿವ ಕೃಷ್ಣ ಬೈರೇಗೌಡ
ಬೆಂಗಳೂರು: ತಹಶೀಲ್ದಾರ್ ಕಚೇರಿಯಲ್ಲಿನ ರೆಕಾರ್ಡ್ ರೂಮ್ ದಾಖಲೆಗಳನ್ನು ಡಿಜಿಟಲೀಕರಣ ಮಾಡಲು ನಿರ್ಧರಿಸಲಾಗಿದೆ. ಕೆಲವು ಹಳೆ ದಾಖಲೆಗಳು ಶಿಥಿಲಾವಸ್ಥೆಯಲ್ಲಿವೆ. ಇನ್ನೂ ಕೆಲ ದಾಖಲೆಗಳು ಕಳೆದು ಹೋಗುತ್ತಿವೆ. ಕೆಲವು ಖಾಸಗಿ ವ್ಯಕ್ತಿಗಳು ರೆಕಾರ್ಡ್ ರೂಮ್ಗೆ ಹೋಗಿ ತಿದ್ದುವ ಕೆಲಸ ಮಾಡುತ್ತಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ವಿಕಾಸಸೌಧದಲ್ಲಿ ಮಂಗಳವಾರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ರೆಕಾರ್ಡ್ ರೂಮ್‌ನಲ್ಲಿನ ದಾಖಲೆಗಳನ್ನು ಸ್ಕ್ಯಾನಿಂಗ್ ಮಾಡಲು ನಿರ್ಧರಿಸಿದ್ದೇವೆ. ಇಲ್ಲಿರುವ ಹಳೆ ದಾಖಲೆಗಳು ಶಿಥಿಲಾವಸ್ಥೆಯಲ್ಲಿವೆ. ನಿತ್ಯ ಮಾಹಿತಿ …
Read More »ಪಾರ್ಟ್ಟೈಮ್ ಜಾಬ್ ಕೊಡಿಸುವುದಾಗಿ ಹೇಳಿ ಸಾರ್ವಜನಿಕರನ್ನು ವಂಚಿಸುತ್ತಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು: ಪಾರ್ಟ್ಟೈಮ್ ಜಾಬ್ ಕೊಡಿಸುವುದಾಗಿ ಸಾರ್ವಜನಿಕರನ್ನು ನಂಬಿಸಿ ಹಂತ ಹಂತವಾಗಿ ಹಣ ಪಡೆದು ವಂಚಿಸುತ್ತಿದ್ದ ಜಾಲ ಬೇಧಿಸಿರುವ ನಗರದ ಈಶಾನ್ಯ ವಿಭಾಗದ ಸೆನ್ ಠಾಣೆ ಪೊಲೀಸರು ನಾಲ್ವರು ಸೈಬರ್ ವಂಚಕರನ್ನು ಬಂಧಿಸಿದ್ದಾರೆ. ಸೈಯದ್ ಯೂನಸ್, ಮೊಹಮ್ಮದ್ ಕಲೀಮುಲ್ಲಾ, ಸೈಯ್ಯದ್ ಅರ್ಬಾಜ್ ಹಾಗೂ ಇಬ್ರಾಹಿಂ ಕಲೀಂ ಬಂಧಿತ ಆರೋಪಿಗಳು. ಏನಿದು ಪ್ರಕರಣ?: ವಂಚನೆಗೊಳಗಾದ ಸಾವಂತ್ ಪೂಜಾರಿ ಎಂಬುವರು ಫೇಸ್ಬುಕ್ ನೋಡುವಾಗ ಆನ್ಲೈನ್ ಶಾಪಿಂಗ್ ಆಯಪ್ವೊಂದರಲ್ಲಿ ಪಾರ್ಟ್ ಟೈಮ್ ವರ್ಕ್ ಫ್ರಂ ಹೋಮ್ ಕೆಲಸ ಇರುವುದನ್ನು …
Read More »ನಿಗಮ ಮಂಡಳಿ ನೇಮಕದಲ್ಲಿ ಪಕ್ಷದ ಕಾರ್ಯಕರ್ತರನ್ನು ಪರಿಗಣಿಸುವಂತೆ ಮನವಿ : ಸತೀಶ್ ಜಾರಕಿಹೊಳಿ
ನಿಗಮ ಮಂಡಳಿಗೆ ಅಧ್ಯಕ್ಷರ ನೇಮಕ ವಿಚಾರ: ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ, ಡಿಸಿಎಂ ಜಂಟಿಯಾಗಿ ನಿರ್ಧಾರ ಮಾಡುತ್ತಾರೆ. ಹಿರಿಯ ಶಾಸಕರನ್ನು ಆಯ್ಕೆ ಮಾಡುತ್ತೇವೆ ಎಂದು ತಿಳಿಸಿದ್ದು, ನಾವು ಹಿರಿಯ ಶಾಸಕರ ಜೊತೆ ಕಾರ್ಯಕರ್ತರಿಗೂ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಬೇಕು ಎಂದು ಹೇಳಿದ್ದೇವೆ. ಶೇಕಡಾ 50ರಷ್ಟು ಕಾರ್ಯಕರ್ತರಿಗೆ, ಶೇಕಡಾ 50ರಷ್ಟು ಶಾಸಕರಿಗೆ ನೀಡಲು ಮನವಿ ಮಾಡಿದ್ದೇವೆ. ಕಾರ್ಯಕರ್ತರಿಗೆ ಕೊಟ್ಟರೆ ಒಳ್ಳೆಯದು ಎಂದು ಹೇಳಿದರು. ಚಿಕ್ಕೋಡಿ: ರಾಜ್ಯ ಸರ್ಕಾರದಹಲವು ಇಲಾಖೆಗಳಲ್ಲಿ ಅಧಿಕಾರಿಗಳ ವರ್ಗಾವಣೆ …
Read More »ಸಂಸ್ಕೃತ ಭಾಷೆ ಮಾತನಾಡಿ ದೇಶದ ಗಮನ ಸೆಳೆದ ನಂದೇಶ್ವರ ಗ್ರಾಮ
ಚಿಕ್ಕೋಡಿ : ಭಾರತ ದೇಶದ ಪರಂಪರೆಯಲ್ಲಿ ಮಠ – ಮಂದಿರಗಳು ತನ್ನದೇ ಆದಂತಹ ಪ್ರಮುಖ ಪಾತ್ರ ವಹಿಸಿವೆ. ಆಯಾ ಕಾಲಘಟ್ಟಕ್ಕೆ ಅನುಗುಣವಾಗಿ ಸಮಾಜಕ್ಕೆ ಕೊಡುಗೆಗಳನ್ನು ನೀಡಿ, ತನ್ನ ಸುತ್ತಮುತ್ತಲಿನ ವಾತಾವರಣದಲ್ಲಿ ಶಿಕ್ಷಣ, ಅನ್ನದಾಸೋಹ, ಸಂಸ್ಕೃತಿ, ಉತ್ತಮ ವಿಚಾರಧಾರೆ, ಭಕ್ತಿ ಭಂಡಾರಗಳನ್ನು ಸಾರುತ್ತ ಮಠಗಳ ಚಾರಿತ್ರ್ಯವನ್ನು ಇತಿಹಾಸ ಪುಟಗಳಲ್ಲಿ ಉಳಿಯುವಂತೆ ಹಲವು ಮಠಾಧೀಶರು ಕೂಡಾ ಕಾರ್ಯ ಮಾಡಿದ್ದಾರೆ. ಅದರಂತೆ ಇಲ್ಲಿನ ಗ್ರಾಮವೊಂದು ಸಂಸ್ಕೃತ ಭಾಷೆಯಿಂದಲೇ ಪ್ರಸಿದ್ಧಿ ಹೊಂದಿದೆ. ಆಧುನಿಕ ಯುಗದಲ್ಲಿ ಹಲವು ಮಠಾಧೀಶರುಗಳ …
Read More »28 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬೆಂಡಿಗೇರಿ ಪೊಲೀಸರು
ಹುಬ್ಬಳ್ಳಿ: ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ 28 ವರ್ಷಗಳ ಹಿಂದೆ ಜೈಲು ಸೇರಿ ನಂತರ ಜಾಮೀನಿನ ಮೇಲೆ ಹೊರಗೆ ಬಂದು ನ್ಯಾಯಾಲಯಕ್ಕೂ ಹಾಜರಾಗದೇ ತಲೆಮರೆಸಿಕೊಂಡು ಓಡಾಡುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಬೆಂಡಿಗೇರಿ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ನಗರದ ತಾರಿಹಾಳ ರೋಡ್ ನಿವಾಸಿ ಮಹ್ಮದ್ ಹನೀಫಸಾಬ್ ಹೊಸಮನಿ, (57) ಬಂಧಿತ ಆರೋಪಿ. ಈತ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ 1995ರಲ್ಲಿ ದಾಖಲಾಗಿದ್ದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ 28 ವರ್ಷಗಳಿಂದ ತಲೆಮರೆಸಿಕೊಂಡಿದ್ದ. ನ್ಯಾಯಾಲಯ LPC ಪ್ರಕರಣ ಎಂದು ಪರಿಗಣಿಸಿ ಅವನ …
Read More »ಐಟಿ ದಾಳಿ ವೇಳೆ 42 ಕೋಟಿ ರೂ. ಪತ್ತೆ ಪ್ರಕರಣ: ಹೃದಯಾಘಾತದಿಂದ ಗುತ್ತಿಗೆದಾರ ಅಂಬಿಕಾಪತಿ ಸಾವು
ಬೆಂಗಳೂರು: ಐಟಿ ದಾಳಿಯ ವೇಳೆ ಕೋಟಿ ಕೋಟಿ ಹಣ ಪತ್ತೆಯಾದ ವಿಚಾರದಲ್ಲಿ ಭಾರೀ ಸುದ್ದಿಯಾಗಿದ್ದ ರಾಜ್ಯ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಅಂಬಿಕಾಪತಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಇಂದು ಸಂಜೆ 6.40 ಸುಮಾರಿಗೆ ಹೆಬ್ಬಾಳದ ಖಾಸಗಿ ಆಸ್ಪತ್ರೆಯಲ್ಲಿ ಅಂಬಿಕಾಪತಿ ಮೃತಪಟ್ಟಿದ್ದಾರೆ. ಕಳೆದ ತಿಂಗಳಷ್ಟೇ ಅಂಬಿಕಾಪತಿ ಮನೆಯ ಮೇಲೆ ಐಟಿ ದಾಳಿ ನಡೆದಾಗ 42 ಕೋಟಿ ರೂ. ಹಣ ಪತ್ತೆಯಾಗಿತ್ತು. ಈ ವಿಚಾರ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಯಾಗಿ ಆರೋಪ-ಪ್ರತ್ಯಾರೋಪಗಳಿಗೆ ಎಡೆಮಾಡಿಕೊಟ್ಟಿತ್ತು. ತಮ್ಮ ಮನೆಯಲ್ಲಿದ್ದ ಹಣ …
Read More »ಜಾನಪದ ಲೋಕ ವಿದೇಶಗಳಿಗೂ ಮಾದರಿ: ಚಂದ್ರಶೇಖರ ಕಂಬಾರ ಬಣ್ಣನೆ
ಬೆಂಗಳೂರು ರಾಮನಗರದಲ್ಲಿ ನಾಗೇಗೌಡರು ನಿರ್ಮಿಸಿರುವ ಜಾನಪದ ಲೋಕವು ರಾಜ್ಯ, ದೇಶಕ್ಕೆ ಮಾತ್ರವಲ್ಲದೆ, ವಿದೇಶಗಳಿಗೂ ಮಾದರಿಯಾಗಿದೆ. ಇತ್ತೀಚೆಗೆ ಸ್ಪೇನ್, ಇಂಗ್ಲೆಂಡಿನಿಂದಲೂ ಜಾನಪದ ತಜ್ಞರು ಭೇಟಿ ಮಾಹಿತಿ ಪಡೆದಿದ್ದಾರೆಂದು ಹಿರಿಯ ಸಾಹಿತಿ ಡಾ. ಚಂದ್ರಶೇಖರ ಕಂಬಾರ ಶ್ಲಾಘನೆ ವ್ಯಕ್ತಪಡಿಸಿದರು. ಸೋಮವಾರ ರವೀಂದ್ರ ಕಲಾಕ್ಷೇತ್ರದಲ್ಲಿ ಜಾನಪದ ಪರಿಷತ್ತು ಆಯೋಜಿಸಿದ್ದ ನಾಡೋಜ ಎಚ್.ಎಲ್. ನಾಗೇಗೌಡ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು. ಹಿಂದೊಮ್ಮೆ ಜಾನಪದ ಲೋಕದ ಬಗ್ಗೆ ರಷ್ಯಾದಲ್ಲಿ ಉಲ್ಲೇಖಿಸಿದ್ದ ಸಂದರ್ಭದಲ್ಲಿ ಅಲ್ಲಿನ ಕಲಾವಿದರು …
Read More »