Breaking News

Yearly Archives: 2023

47 ವರ್ಷದ ನಟಿಯ ಸೌಂದರ್ಯ ನೋಡಿದ ನೆಟ್ಟಿಗರು ಶಾಕ್‌

ರಾತ್ರಿ ಮುಂಬೈನಲ್ಲಿ ನಡೆದ ʼಬಿಗ್ ಇಂಪ್ಯಾಕ್ಟ್ಸ್ ಅವಾರ್ಡ್ಸ್‌ʼನಲ್ಲಿ ಮಲೈಕಾ ಅರೋರಾ, ರೋಹಿಣಿ ಅಯ್ಯರ್, ಹಿನಾ ಖಾನ್ ಮತ್ತು ಸೇರಿದಂತೆ ಹಲವಾರು ಬಿ-ಟೌನ್ ಸೆಲೆಬ್ರಿಟಿಗಳು ಕಾಣಿಸಿಕೊಂಡಿದ್ದರು. ತಾರೆಗಳು ಈವೆಂಟ್‌ನಲ್ಲಿ ಭಾಗವಹಿಸಿದ್ದ ನಟಿಯರ ಗ್ಲಾಮರ್‌ ಲುಕ್‌ ಹೆಚ್ಚಾಗಿ ಟಾಕ್‌ ಆಗುತ್ತಿದೆ. ತುಂಡು ತುಂಡು ಬಟ್ಟೆ ತೊಟ್ಟಿದ್ದ ನಟಿಯರ ಸೊಬಗಿಗೆ ಜನ ಫಿದಾ ಆಗಿದ್ದರು. ಇನ್ನು ಶಿಲ್ಪಾ ಶೆಟ್ಟಿ ಕೂಡಾ ತಮ್ಮದೇ ಸ್ಟೈಲ್‌ನಲ್ಲಿ ಮಿಂಚಿದರು. ಬಿಳಿ ಜಂಪ್‌ಸೂಟ್‌ನಲ್ಲಿ ಜಾಕೆಟ್ ಮತ್ತು ಶೀರ್ ಪ್ಯಾನೆಲಿಂಗ್‌ನೊಂದಿಗೆಶಿಲ್ಪಾ ಶೆಟ್ಟಿಕಾರ್ಯಕ್ರಮಕ್ಕೆ …

Read More »

ಮರ್ಯಾದೆಗೆ ಅಂಜಿ ಮಗಳ ರುಂಡ-ಮುಂಡ ಬೇರ್ಪಡಿಸಿದ ತಂದೆ!

ಆಂಧ್ರಪ್ರದೇಶ : ತಂದೆಯೊಬ್ಬ, ಬೇರೆ ಜಾತಿಯ ಹುಡುಗನನ್ನು ಪ್ರೀತಿಸುತ್ತಿದ್ದ ಮಗಳ ರುಂಡ-ಮುಂಡವನ್ನು ಕತ್ತರಿಸಿ ಕೊಲೆ ಮಾಡಿ ಕಾಡಿನಲ್ಲಿ ಎಸೆದಿದ್ದಾನೆ. ಈ ಮರ್ಯಾದಾ ಹತ್ಯೆ ಪ್ರಕರಣ ಆಂಧ್ರಪ್ರದೇಶದ ನಂದ್ಯಾಲ ಜಿಲ್ಲೆಯ ಪಾಣ್ಯಂ ಮಂಡಲದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.   ಪ್ರಸನ್ನ (21) ಮೃತ ದುರ್ದೈವಿ. ಪಾಣ್ಯಂ ಮಂಡಲ ಆಲಮೂರಿನ ದೇವೇಂದ್ರ ರೆಡ್ಡಿ ಮಗಳನ್ನು ಕೊಂದ ಆರೋಪಿ. ರೆಡ್ಡಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಹಿರಿಯ ಮಗಳಾದ ಪ್ರಸನ್ನಗೆ ಎರಡು ವರ್ಷಗಳ ಹಿಂದೆ ಸಾಫ್ಟ್‌ವೇರ್ ಇಂಜಿನಿಯರ್ …

Read More »

ಇಲ್ಲಿದೆ 20 ವರ್ಷ ಚಿಕ್ಕವರಾಗಿ ಕಾಣುವ ಡಾ. ಮಾರ್ಕ್​ ಹೇಳಿದ ಆರೋಗ್ಯ ಗುಟ್ಟು

ವಯಸ್ಸಾಗುವುದು ಸಹಜ. ಆದರೆ ವಯಸ್ಸಾದರೂ ಯುವಕರಂತೆ ಕಾಣುವುದು ಕಷ್ಟ. ಆದರೆ ಬಹಳಷ್ಟು ಜನರು ತಮ್ಮ ಮೂಲ ವಯಸ್ಸಿಗಿಂತ ಹಲವಾರು ವರ್ಷ ಚಿಕ್ಕವರಂತೆ ಕಾಣುತ್ತಾರೆ ಮತ್ತು ಅವರಲ್ಲಿ ಒಬ್ಬರು 63 ವರ್ಷದ ಡಾ ಮಾರ್ಕ್ ಹೈಮನ್ ಅವರು ಸುಮಾರು 20 ವರ್ಷ ಚಿಕ್ಕವರಾಗಿ ಕಾಣುತ್ತಾರೆ. ಇದರ ರಹಸ್ಯವನ್ನು ಅವರು ಬಹಿರಂಗಪಡಿಸಿದ್ದಾರೆ. ಡಾ ಹೈಮನ್ Instagram ನಲ್ಲಿ 23 ಲಕ್ಷಕ್ಕೂ ಹೆಚ್ಚು ಅನುಯಾಯಿಗಳನ್ನು ಹೊಂದಿದ್ದಾರೆ ಮತ್ತು ಯಂಗ್ ಫಾರೆವರ್ ಪುಸ್ತಕದ ಲೇಖಕರಾಗಿದ್ದಾರೆ. ಒಬ್ಬ …

Read More »

ಬಹು ನಿರೀಕ್ಷಿತ ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ ಹೈವೇ ಮಾರ್ಚ್ 11ರಂದು ಉದ್ಘಾಟನೆ

ಬೆಂಗಳೂರು ಹಾಗೂ ಮೈಸೂರು ನಗರಗಳ ಜನತೆ ಕಾತರದಿಂದ ಕಾಯುತ್ತಿದ್ದ, ಉಭಯ ನಗರಗಳ ನಡುವಿನ ದಶಪಥ ರಾಷ್ಟ್ರೀಯ ಹೆದ್ದಾರಿ ಮಾರ್ಚ್ 11ರಂದು ಲೋಕಾರ್ಪಣೆಯಾಗಲಿದೆ. ಬೆಂಗಳೂರು: ಬೆಂಗಳೂರು ಹಾಗೂ ಮೈಸೂರು ನಗರಗಳ ಜನತೆ ಕಾತರದಿಂದ ಕಾಯುತ್ತಿದ್ದ, ಉಭಯ ನಗರಗಳ ನಡುವಿನ ದಶಪಥ ರಾಷ್ಟ್ರೀಯ ಹೆದ್ದಾರಿ ಮಾರ್ಚ್ 11ರಂದು ಲೋಕಾರ್ಪಣೆಯಾಗಲಿದೆ. ಪ್ರಧಾನಿ ನರೇಂದ್ರ ಮೋದಿ ಇದನ್ನು ಮಂಡ್ಯದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಲೋಕಾರ್ಪಣೆ ಮಾಡಲಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ಧೃಡಪಡಿಸಿದ್ದಾರೆ. ಇದರ ಜೊತೆಗೆ ಪ್ರಧಾನಿ …

Read More »

ಪಂಚಮಹಾಭೂತ ಲೋಕೋತ್ಸವದಲ್ಲಿ ಮಹಿಳೆಯರ ದಂಡು

ಚಿಕ್ಕೋಡಿ: ಕಣ್ಣು ಹಾಯಿಸಿದಷ್ಟು ಜನ ಜಂಗುಳಿ, ಎಲ್ಲಿ ನೋಡಿದರಲ್ಲಿ ವಾಹನಗಳ ಸಾಲು, ಕರ್ನಾಟಕ-ಮಹಾರಾಷ್ಟ್ರ ಬಾಂಧವ್ಯದ ಜೊತೆಗೆಯೇ ಇಡೀ ಭಾರತದ ಸಂತರು, ತಜ್ಞರು ಸಮಾಗಮದಲ್ಲಿ ಮಹಿಳೆಯರದ್ದೇ ಸಿಂಹಪಾಲು. ಕರ್ನಾಟಕ ಗಡಿ ಭಾಗಕ್ಕೆ ಹೊಂದಿಕೊಂಡಿರುವ ಮಹಾರಾಷ್ಟ್ರದ ಕೊಲ್ಲಾಪೂರ ಜಿಲ್ಲೆಯ ಕನೇರಿ ಅದೃಶ್ಯ ಕಾಡಸಿದ್ದೇಶ್ವರ ಮಠದಲ್ಲಿ ಹಮ್ಮಿಕೊಂಡಿರುವ ಬೃಹತ್‌ ಪಂಚಮಹಾಭೂತ ಲೋಕೋತ್ಸವದಲ್ಲಿ ಶುಕ್ರವಾರ ನಡೆದ ಮಹಿಳಾ ಲೋಕೋತ್ಸವದಲ್ಲಿ ಕಂಡು ಬಂದ ಚಿತ್ರಣವಿದು. ಉತ್ತರ ಕರ್ನಾಟಕ ಮತ್ತು ದಕ್ಷಿಣ ಮಹಾರಾಷ್ಟ್ರದ ಲಕ್ಷಾಂತರ ಮಹಿಳೆಯರು ಕನೇರಿ ಮಠದತ್ತ …

Read More »

ವಿದ್ಯಾರ್ಥಿಗಳಿಂದ ತಾಯಂದಿರ ಪಾದಪೂಜೆ-

ಮೂಡಲಗಿ: ವಿದ್ಯಾರ್ಥಿಗಳು ಪಠ್ಯಕ್ರಮದ ಅಭ್ಯಾಸದೊಂದಿಗೆ ಉತ್ತಮ ಸಂಸ್ಕೃತಿ, ಸಂಸ್ಕಾರ ಬೆಳೆಸಿಕೊಂಡು ಭವಿಷ್ಯ ಕಟ್ಟಿಕೊಳ್ಳಬೇಕು. ಅಕ್ಷರದೊಂದಿಗೆ ಉತ್ತಮ ಸಂಸ್ಕಾರವೂ ದೊರೆಯಬೇಕು ಎಂದು ಮುಖ್ಯಾಧ್ಯಾಪಕ ಎ.ವಿ. ಗಿರೆಣ್ಣವರ ಹೇಳಿದರು. ತುಕ್ಕಾನಟ್ಟಿ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ನಡೆದ ತಾಯಂದಿರ ಸಭೆ ಹಾಗೂ ತಾಯಂದಿರ ಪಾದ ಪೂಜೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪಾಲಕರು ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಿಕೊಂಡು ಅವರಿಗೆ ಉತ್ತಮ ಶಿಕ್ಷಣ ಕೊಡಿಸಬೇಕು. ಮಕ್ಕಳ ಶಿಕ್ಷಣಕ್ಕೆ ಬಡತನ ಅಡ್ಡಿಯಾಗಬಾರದು ಎಂದು ಸಲಹೆ ನೀಡಿದರು. …

Read More »

ವಿಶ್ವೇಶ್ವರಯ್ಯ ತಾಂತ್ರಿಕ ವಿ.ವಿ.; 18 ಚಿನ್ನದ ಪಡೆದ ವಿದ್ಯಾರ್ಥಿಗೆ ಶಿಕ್ಷಕನಾಗುವ ಆಸೆ

ಬೆಳಗಾವಿ: ಬೆಂಗಳೂರು ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿಯ ಸಿವಿಲ್‌ ಎಂಜಿನಿಯರಿಂಗ್‌ ವಿಭಾಗದಲ್ಲಿ 18 ಚಿನ್ನದ ಪದಕ ಪಡೆದಿರುವ ಮುರಳಿ ಎಸ್‌. ಮುಂದೆ ತಮ್ಮ ಜೀವನದ ಏಕೈಕ ಗುರಿ ಬೋಧಕ ವೃತ್ತಿ ಮಾಡಬೇಕು ಎಂದುಕೊಂಡಿದ್ದಾರೆ. ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 22ನೇ ಘಟಿಕೋತ್ಸವದಲ್ಲಿ ಚಿನ್ನದ ಹುಡುಗನಾಗಿ ಹೊರಹೊಮ್ಮಿದ್ದಾರೆ. ಎಂಜಿನಿಯರಿಂಗ್‌ ಮುಗಿಯುತ್ತಿದ್ದಂತೆ ಪಿಎಚ್‌. ಡಿಗಾಗಿ ಮುರಳಿ ತಯಾರಿ ನಡೆಸಿದ್ದಾರೆ. ನಂತರದಲ್ಲಿ ಬೋಧಕ ವೃತ್ತಿ ಮಾಡಬೇಕು ಎಂದುಕೊಂಡಿದ್ದಾರೆ. ಇಷ್ಟೊಂದು ಚಿನ್ನದ ಪದಕ ಪಡೆದಿದ್ದು ಖುಷಿ ಆಗಿದೆ. ಕಷ್ಟಪಟ್ಟು ಶ್ರಮವಹಿಸಿ …

Read More »

ಬಿಜೆಪಿಯನ್ನೇ ಬೆಂಬಲಿಸಿ: ವೀರಶೈವ-ಲಿಂಗಾಯತರಿಗೆ ಯಡಿಯೂರಪ್ಪ ಮನವಿ

ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿಗೆ ತಮ್ಮ ಬೆಂಬಲವನ್ನು ಮುಂದುವರೆಸಿ ಪಕ್ಷದ ಗೆಲುವನ್ನು ಖಚಿತಪಡಿಸಿಕೊಳ್ಳಲು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಶನಿವಾರ ಪ್ರಬಲ ವೀರಶೈವ-ಲಿಂಗಾಯತ ಸಮುದಾಯಕ್ಕೆ ಮನವಿ ಮಾಡಿದ್ದಾರೆ.   ಸುದ್ದಿಗಾರರೊಂದಿಗೆ ಮಾತನಾಡಿದ 79ರ ಹರೆಯದ ಲಿಂಗಾಯತ ಸಮುದಾಯದ ಪ್ರಬಲ ನಾಯಕರಾದ ನೀವು ಚುನಾವಣಾ ರಾಜಕೀಯದಿಂದ ನಿವೃತ್ತರಾದ ನಂತರವೂ ಸಮುದಾಯ ಬಿಜೆಪಿಯನ್ನು ಬೆಂಬಲಿಸುತ್ತದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಮನೆಯಲ್ಲಿ ಕುಳಿತುಕೊಳ್ಳುವ ಪ್ರಶ್ನೆಯೇ ಇಲ್ಲ, ವಿಧಾನಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಮತ …

Read More »

ಮಾರ್ಚ್ 11 ಕ್ಕೆ ಪ್ರಧಾನಿ ಮೋದಿ ರಾಜ್ಯಕ್ಕೆ ಭೇಟಿ : ಧಾರವಾಡ `IIT’ ನೂತನ ಕಟ್ಟಡ ಉದ್ಘಾಟನೆ

ಧಾರವಾಡ : ಮಾ.11 ರಂದು ಮಧ್ಯಾಹ್ನ 3 ಗಂಟೆಗೆ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರು ಐಐಟಿ ಕಟ್ಟಡ ಹಾಗೂ ರಾಜ್ಯದ ಹಾಗೂ ಕೇಂದ್ರದ ಪ್ರಮುಖ ಯೋಜನೆಗಳ ಶಂಕುಸ್ಥಾಪನೆ ಹಾಗೂ ಲೋಕಾರ್ಪಣೆಗೊಳಿಸುವರು ಎಂದು ಕೇಂದ್ರ ಸಂಸದೀಯ ವ್ಯವಹಾರಗಳ, ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಲ್ಹಾದ ಜೋಶಿ ಅವರು ಹೇಳಿದರು.   ಮುಮ್ಮಿಗಟ್ಟಿಯ ಐಐಟಿಯ ನೂತನ ಕಟ್ಟಡದ ನಿರ್ಮಾಣ ಹಂತದ ಕಾಮಗಾರಿಯನ್ನು ವೀಕ್ಷಿಸಿ, ಪರಿಶೀಲಿಸಿದ ಅವರು ಮಾತನಾಡುತ್ತಾ, ಶೀಘ್ರವೇ ಉಳಿದೆಲ್ಲ ಕೆಲಸವನ್ನು ಬೇಗನೆ …

Read More »

ರಾಜ್ಯದ `SSLC-PUC’ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಈ ವರ್ಷವೂ ಸಿಗಲಿದೆ ಕೃಪಾಂಕ!

ಬೆಂಗಳೂರು : ಎಸ್ ಎಸ್‌ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ಈ ವರ್ಷವೂ 10, 12 ನೇ ತರಗತಿ ವಿದ್ಯಾರ್ಥಿಗಳಿಗೆ ಕೃಪಾಂಕ ನೀಡಲು ನಿರ್ಧರಿಸಲಾಗಿದೆ. ಕೊರೊನಾ ಕಾರಣದಿಂದ ಕಲಿಕೆ ಮೇಲೆ ಉಂಟಾಗಿರುವ ಪರಿಣಾಮದಿಂದ ಇನ್ನೂ ಪೂರ್ಣ ಪ್ರಮಾಣದಲ್ಲಿ ವಿದ್ಯಾರ್ಥಿಗಳು ಚೇತರಿಸಿಕೊಳ್ಳದ ಕಾರಣ ಈ ವರ್ಷವೂ ಒಟ್ಟಾರೆ ಕನಿಷ್ಟ ಅಂಕ ಗಳಿಸುವ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಶೇ. 10, ಪಿಯುಸಿ ವಿದ್ಯಾರ್ಥಿಗಳಿಗೆ ಶೇ. 5 …

Read More »