Breaking News

Yearly Archives: 2023

ತಡವಾಗಿ ಬಂದ ವೈದ್ಯರು; ಆಸ್ಪತ್ರೆ ಆವರಣದಲ್ಲಿಯೇ ಮಗುವಿಗೆ ಜನ್ಮ ಕೊಟ್ಟ ಮಹಿಳೆ

ವಿಜಯಪುರ: ಬೆಳಗ್ಗೆ ಸಮಯಕ್ಕೆ ಸರಿಯಾಗಿ ಸಿಬ್ಬಂದಿ ಆಸ್ಪತ್ರೆಗೆ ಬಾರದ ಹಿನ್ನೆಲೆ ಮಹಿಳೆ ಆಸ್ಪತ್ರೆ ಆವರಣದಲ್ಲಿಯೇ ಮಗುವಿಗೆ ಜನ್ಮ ನೀಡಿ ನರಳಾಡುತ್ತಿದ್ದ ಘಟನೆ ವಿಜಯಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದಿದೆ. ಹೆರಿಗೆಗೆ ನೋವು ಕಾಣಿಸಿಕೊಂಡಿದ್ದ ಹಿನ್ನೆಲೆ ಮಹಿಳೆ ವಿಜಯಪುರ ತಾಲೂಕಿನ ನಾಗಠಾಣ ಪ್ರಾಥಮಿಕ ಆರೋಗ್ಯ ಕೇಂದ್ರದ ಆಸ್ಪತ್ರೆಗೆ ಬಂದಿದ್ದಾರೆ. ಬೆಳಗ್ಗೆಯೇ ಆಸ್ಪತ್ರೆಗೆ ಬಂದಿದ್ದು ಸಿಬ್ಬಂದಿ ಸಮಯಕ್ಕೆ ಸರಿಯಾಗಿ ಆಸ್ಪತ್ರೆಗೆ ಬಾರದ ಹಿನ್ನೆಲೆ ಹೊರಗಡೆಯೇ ಹೆರಿಗೆಯಾಗಿದೆ. ಅರ್ಧ ಗಂಟೆಯಾದರೂ ಶಿಶುವಿನ ಹುರಿ ಕಟ್ ಮಾಡದ …

Read More »

ಮದ್ಯಪಾನವನ್ನೇ ಮುಂದಿಟ್ಟುಕೊಂಡು ಸರ್ಕಾರಗಳು ರಾಜಕಾರಣ ಮಾಡುತ್ತಿವೆ! ಮುತಾಲಿಕ್

ಉಡುಪಿ: ರಾಜ್ಯ ಸರ್ಕಾರ ಮದ್ಯಪಾನದ ವಯಸ್ಸನ್ನು 21 ರಿಂದ 18 ವರ್ಷಕ್ಕೆ ಇಳಿಕೆ ಮಾಡಿರುವು ಆಘಾತಕಾರಿ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಮದ್ಯ ಸೇವನೆ ಅಪಾಯಕಾರಿ ಎಂಬುದು ಎಲ್ಲರಿಗೂ ಗೊತ್ತಿದೆ. ದೇಶದಾದ್ಯಂತ ಮದ್ಯಪಾನವನ್ನು ನಿಷೇಧ ಮಾಡಬೇಕೆಂದು ಗಾಂಧೀಜಿ 75 ವರ್ಷದ ಹಿಂದೆಯೇ ಸಲಹೆ ಕೊಟ್ಟಿದ್ದರು. ಆದರೆ ಮದ್ಯಪಾನವನ್ನೇ ಅನುಸರಿಸಿ ಸರಕಾರಗಳು ರಾಜಕಾರಣ ಮಾಡುತ್ತಿವೆ ಎಂದು ಪ್ರಮೋದ್ ಮುತಾಲಿಕ್ ಆಕ್ರೋಶ ಹೊರಹಾಕಿದರು. ವಿದ್ಯಾರ್ಥಿಗಳು, ಕಾರ್ಮಿಕರು, ರೈತರು ಮಧ್ಯಪಾನಕ್ಕೆ ಬಲಿಯಾಗುತ್ತಿದ್ದಾರೆ. …

Read More »

ಪ್ರಜಾಕೀಯ ಪಕ್ಷಕ್ಕೆ ಸಿಕ್ಕಿತು ‘ಆಟೋ ರಿಕ್ಷಾ’ ಚಿಹ್ನೆ!

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಚುನಾವಣೆಯ ಕಾವು ರಂಗೇರುತ್ತಿದೆ. ಈಗಾಗಲೇ ಎಲ್ಲಾ ಪಕ್ಷಗಳು ರಾಜ್ಯದಾದ್ಯಂತ ಪ್ರಚಾರ ಕಾರ್ಯ ಆರಂಭಿಸಿವೆ. ಹೊಸ ಹೊಸ ಅಭ್ಯರ್ಥಿಗಳು ಚುನಾವಣೆಯಲ್ಲಿ ಸ್ಪರ್ಧಿಸುವ ಉದ್ಧೇಶದಿಂದ ಕ್ಷೇತ್ರದಲ್ಲಿ ನಿರಂತರ ಓಡಾಟ ನಡೆಸುತ್ತಿದ್ದಾರೆ. ಇದೆಲ್ಲದರ ನಡುವೆ ಜನರಿಗೆ ಕುತೂಹಲ ಕೆರಳಿಸಿರುವುದು ನಟ ಉಪೇಂದ್ರ ಅವರ ಉತ್ತಮ ಪ್ರಜಾಕೀಯ ಪಕ್ಷ. ಇದೀಗ ಪ್ರಜಾಕೀಯ ಪಕ್ಷಕ್ಕೆ ಆಟೋ ರಿಕ್ಷಾ ಚಿಹ್ನೆ ಲಭಿಸಿದೆ. ಈ ಕುರಿತು ಚುನಾವಣಾ ಆಯೋಗ ಆದೇಶ ಹೊರಡಿಸಿದ್ದು, ತಮ್ಮ ಪಕ್ಷದ ಚಿಹ್ನೆಯನ್ನು ನಟ …

Read More »

ಮುಂದಿನ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ : ಮಾಜಿ ಸಿಎಂ ಬಿಎಸ್ ವೈ ಘೋಷಣೆ

ಬೆಂಗಳೂರು : ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆಸಿಸುವ ಮಾತೇ ಇಲ್ಲ ಎಂದು . ರಾಜ್ಯಾದ್ಯಂತ ಪ್ರವಾಸ ಮಾಡಿ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರಲು ಪ್ರಯತ್ನಿಸುವೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಬಿ.ಎಸ್. ಯಡಿಯೂರಪ್ಪ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ರಾಜ್ಯದಲ್ಲಿ ಬಿಜೆಪಿ ತರಲು ಪ್ರಯತ್ನಿಸಲಾಗುವುದು. ರಾಜ್ಯಾದ್ಯಂತ ಪ್ರವಾಸ ಮಾಡಿ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರಲು ಪ್ರಯತ್ನಿಸುವೆ ಎಂದು ಹೇಳಿದ್ದಾರೆ. ನಮ್ಮೆಲ್ಲರಿಗೂ ಹೆಚ್.ದೇವೇಗೌಡರೇ ಆದರ್ಶವಾಗಿದ್ದಾರೆ. ಇದು ನನ್ನ …

Read More »

SC/ST ಮೀಸಲಾತಿ ಹೆಚ್ಚಳ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದ SC/ST ಕಾಯ್ದೆ 2023ರ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್)ಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್,… ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದ SC/ST ಕಾಯ್ದೆ 2023ರ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್)ಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್, ಈ ಸಂಬಂಧ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. …

Read More »

ನನ್ನ ಮರ್ಮಾಂಗಕ್ಕೆ ಗುದ್ದುತ್ತಿದ್ದ” ಪ್ರಸಿದ್ಧ ನಿರ್ಮಾಪಕನ ವಿಕೃತ ಮನಸ್ಥಿತಿ ಬಿಚ್ಚಿಟ್ಟ ನಟಿ

ರವಿಚಂದ್ರನ್ – ಶಿವರಾಜ್ ಕುಮಾರ್ ನಟನೆಯ ಕೋದಂಡರಾಮ, ಕಿಚ್ಚ ಸುದೀಪ್ ಅಭಿನಯದ ನಮ್ಮಣ್ಣ ಸೇರಿದಂತೆ ಕನ್ನಡ ಸಿನಿಮಾಗಳಲ್ಲಿ ನಾಯಕಿಯಾಗಿ ನಟಿಸಿದ್ದ ನಟಿ ಫ್ಲೋರಾ ಸೈನಿ ಅಲಿಯಾಸ್ ಆಶಾ ಸೈನಿ ಅವರ ವೈಯಕ್ತಿಕ ಜೀವನದ ದುರಂತ ಕಥೆಯಿದು. ಪ್ರಸಿದ್ಧ ನಿರ್ಮಾಪಕ ಗೌರಂಗ್ ದೋಷಿ ಜೊತೆ ಅನುಭವಿಸಿದ ನರಕಯಾತನೆ ಬಗ್ಗೆ ಅವರು ಹೇಳಿಕೊಂಡಿದ್ದಾರೆ. ಅವರ ಬಾಯ್‌ಫ್ರೆಂಡ್‌ ಆಗಿದ್ದ ಪ್ರಸಿದ್ಧ ನಿರ್ಮಾಪಕ ಗೌರಂಗ್ ದೋಷಿ ಅವರ ಜೊತೆ ತಾವು ಅನುಭವಿಸಿದ ಚಿತ್ರಹಿಂಸೆಯನ್ನು ಫ್ಲೋರಾ ಸೈನಿ …

Read More »

ನನಗೆ ಬೆದರಿಕೆ ಕರೆ ಬಂದಾಗ ಯಡಿಯೂರಪ್ಪ ರಕ್ಷಣೆ ಕೊಟ್ಟಿದ್ದರು:ಯು.ಟಿ ಖಾದರ್

ಬೆಂಗಳೂರು: ಇಂದು ವಿಧಾನಸಭೆ ಕಲಾಪದಲ್ಲಿ ಬಿ.ಎಸ್‌ ಯಡಿಯೂರಪ್ಪ ಕೊನೆಯ ಅಧಿವೇಶದ ಭಾಷಣ ಮಾಡಿದ್ದರು. ಇದಕ್ಕೆ ಯು.ಟಿ.ಖಾದರ್​ ಪ್ರತಿಕ್ರಿಯೆ ನೀಡಿದ್ದಾರೆ. ನನಗೆ ಬೆದರಿಕೆ ಕರೆ ಬಂದಾಗ ಯಡಿಯೂರಪ್ಪ ರಕ್ಷಣೆ ಕೊಟ್ಟಿದ್ದರು ಎಂದು ವಿಧಾನಸಭೆಯಲ್ಲಿ ವಿಪಕ್ಷ ಉಪನಾಯಕ ಯು.ಟಿ.ಖಾದರ್ ಹೇಳಿಕೆ ನೀಡಿದ್ದಾರೆ. ಬಿ.ಎಸ್‌ ಯಡಿಯೂರಪ್ಪ ರಕ್ಷಣೆ ಕೊಟ್ಟಿದ್ದರಿಂದ ಮುಕ್ತವಾಗಿ ಓಡಾಡಲು ಸಾಧ್ಯವಾಯ್ತು. ಜನರ ಕೆಲಸ ಫುಟ್​​ಬಾಲ್ ರೀತಿ ಆಗಬಾರದು. ಆಧಿಕಾರಿಗಳು ಕೆಲಸ ಮಾಡಬೇಕು, ನಾವು ನೇರಾನೇರ ಇರಬೇಕು. ಎಲ್ಲವನ್ನೂ ಗಳಿಸಿ ಪರಿಸ್ಥಿತಿ ವಿಷಮವಾದರೆ …

Read More »

ಬೆಳಗಾವಿ: ಪ್ರಧಾನಿ ಮೋದಿ ಆಗಮನಕ್ಕೆ ವಾಹನ ನೀಡಲು ಅಧಿಕಾರಿಗಳ ನಿರಾಕರಣೆ!

ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿ ಫೆ. 27ರಂದು ಬೆಳಗಾವಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಶಿಷ್ಟಾಚಾರದ ಕರ್ತವ್ಯಕ್ಕಾಗಿ ಸರ್ಕಾರಿ ಇಲಾಖೆಯ ವಾಹನಗಳು ಅಗತ್ಯ ಇವೆ. ಆದರೆ ಸಂಬಂಧಿಸಿದ ಇಲಾಖೆಯಿಂದ ವಾಹನಗಳನ್ನು ಬಿಡುಗಡೆ ಮಾಡಲು ಅಧಿಕಾರಿಗಳು ನಿರಾಸಕ್ತಿ ತೋರುತ್ತಿದ್ದಾರೆ.   ಪ್ರಧಾನಿ ನರೇಂದ್ರ ಮೋದಿ ಆಗಮನ ಹಿನ್ನೆಲೆಯಲ್ಲಿ 70ಕ್ಕೂ ಹೆಚ್ಚು ಇನ್ನೋವಾ ಹಾಗೂ ಸುಮೋ, ಬೊಲೆರೋ ಸೇರಿದಂತೆ ಇತರೆ ವಾಹನಗಳ ಅಗತ್ಯವಿದೆ. ಈ ಬಗ್ಗೆ ಈಗಾಗಲೇ ಜಿಲ್ಲಾಧಿಕಾರಿ ಡಾ. ನಿತೇಶ ಪಾಟೀಲ ಆದೇಶ ಹೊರಡಿಸಿದ್ದಾರೆ. ಆದರೆ …

Read More »

ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ ಭಾಗ-2 ಶೀಘ್ರದಲ್ಲೇ ತೆರೆಗೆ

ಬೆಂಗಳೂರು: ಇತ್ತೀಚೆಗೆ, ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ ಚಿತ್ರದ ನಿರ್ಮಾಪಕರು ಚಿತ್ರದ ಭಾಗ-2 ಶೀಘ್ರದಲ್ಲೇ ತೆರೆಗೆ ಬರಲು ಸಿದ್ಧವಾಗಿದೆ ಎಂದು ಖಚಿತಪಡಿಸಿದ್ದಾರೆ ಮತ್ತು ಚಿತ್ರದ ಪ್ರೀ-ಪ್ರೊಡಕ್ಷನ್ ಕೆಲಸಗಳು ಪ್ರಸ್ತುತ ಭರದಿಂದ ಸಾಗುತ್ತಿವೆ.   ಈ ಮಧ್ಯೆ, ಕಾಂತಾರ ಭಾಗ-2ರಲ್ಲಿ ವಿಶೇಷ ಪಾತ್ರದಲ್ಲಿ ನಟಿಸಲು ಚಿತ್ರತಂಡ ರಜನಿಕಾಂತ್ ಅವರನ್ನು ಸಂಪರ್ಕಿಸಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆದರೆ, ಚಿತ್ರತಂಡ ಈ ಬಗ್ಗೆ ಯಾವುದೇ ಮಾಹಿತಿಯನ್ನು ಹಂಚಿಕೊಂಡಿಲ್ಲ. ಹಾಗಾಗಿ ಚಿತ್ರತಂಡದಿಂದ ಅಧಿಕೃತ ಪ್ರಕಟಣೆ …

Read More »

ಕನ್ನಡಕ್ಕೆ ಅಗ್ರಸ್ಥಾನ: ಮಸೂದೆ ಅಂಗೀಕಾರ

ಬೆಂಗಳೂರು: ರಾಜ್ಯದಲ್ಲಿ ಕನ್ನಡಕ್ಕೆ ಅಗ್ರಸ್ಥಾನ, ಕನ್ನಡಿಗರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಉತ್ತಮ ಅವಕಾಶ ಕಲ್ಪಿಸಲು ‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಕಾಯ್ದೆ-2022’ ರೂಪಿಸುವ ಉದ್ದೇಶದಿಂದ ಸರ್ಕಾರ ಮಂಡಿಸಿದ ಮಸೂದೆ ವಿಧಾನಸಭೆಯಲ್ಲಿ ಗುರುವಾರ ಅಂಗೀಕಾರಗೊಂಡಿತು.   ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್‌ ಕುಮಾರ್‌ ಮಸೂದೆಯನ್ನು ಮಂಡಿಸಿದರು. ಸೆಪ್ಟೆಂಬರ್‌ನಲ್ಲಿ ನಡೆದ ಅಧಿವೇಶನದಲ್ಲಿ ಇದೇ ಮಸೂದೆಯನ್ನು ಮಂಡಿಸಲಾಗಿತ್ತು. ಆಗ ಸಾರ್ವಜನಿಕ ವಲಯದಿಂದ ಕೆಲವು ಆಕ್ಷೇಪಣೆಗಳು, ಸಲಹೆಗಳು ಬಂದ ಕಾರಣ, ಅದರಲ್ಲಿನ ಕೆಲವು …

Read More »