ಬೆಳಗಾವಿ: ಸತತ ಮೂರು ಬಾರಿ ಇತಿಹಾಸ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಸವದತ್ತಿ ಯಲ್ಲಮ್ಮ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಬಿಜೆಪಿ ಶಾಸಕ ದಿ|ಆನಂದ ಮಾಮನಿ ಅವರ ಸ್ಥಾನವನ್ನು ತುಂಬುವ ವರು ಯಾರು? -ಇದು ಸವದತ್ತಿ ಕ್ಷೇತ್ರದಾದ್ಯಂತ ಈಗ ಎಲ್ಲರ ಬಾಯಲ್ಲಿ ಕೇಳಿಬರುತ್ತಿರುವ ಕುತೂಹಲದ ಪ್ರಶ್ನೆ. ಮಾಮನಿ ಅವರ ಸ್ಥಾನ ತುಂಬುವವರು ಬಿಜೆಪಿಯವರೇ ಅಥವಾ ಕಾಂಗ್ರೆಸ್‌ನವರೇ ಎಂಬ ಚರ್ಚೆ ನಿರಂತರವಾಗಿ ನಡೆದಿದೆ. ಕ್ಷೇತ್ರದಲ್ಲಿ ಇದುವರೆಗೆ ಬಿಜೆಪಿ ಹಾಗೂ ಕಾಂಗ್ರೆಸ್‌ದಿಂದ ಟಿಕೆಟ್ ಯಾರಿಗೆ ಎಂಬುದು ಅಂತಿಮವಾಗಿಲ್ಲ. ಎರಡೂ …
Read More »Yearly Archives: 2023
ವಿದ್ಯಾರ್ಥಿಗಳಲ್ಲಿ ವೈಚಾರಿಕ ಪ್ರಜ್ಞೆ ಬೆಳೆಸಿದ ಡಾ| ಹಿಮ್ಮಡಿ; ದಳವಾಯಿ
ರಾಯಬಾಗ: ಒಬ್ಬ ಅಧ್ಯಾಪಕನನ್ನು ಆತನ ವಿದ್ಯಾರ್ಥಿಗಳು ಮಾತ್ರ ಸರಿಯಾಗಿ ಬಲ್ಲವರಾಗಿರುತ್ತಾರೆ. ಹಿಮ್ಮಡಿಯವರ ವಿದ್ಯಾರ್ಥಿ ಬಳಗ ನೋಡಿದರೆ, ಅವರ ಬೋಧನೆ ಎಂತಹದ್ದು ಎನ್ನುವುದು ಸ್ಪಷ್ಟವಾಗಿ ತಿಳಿಯುತ್ತದೆ ಎಂದು ಬೆಂಗಳೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ.ರಾಜಪ್ಪ ದಳವಾಯಿ ಹೇಳಿದರು. ಪಟ್ಟಣದ ಮಹಾವೀರ ಭವನದಲ್ಲಿ ಡಾ| ಯಲ್ಲಪ್ಪ ಹಿಮ್ಮಡಿ ಅವರ ಸೇವಾ ನಿವೃತ್ತಿ ಪ್ರಯುಕ್ತ ವಿದ್ಯಾರ್ಥಿ ಬಳಗದಿಂದ ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳಿಂದ ವಿಚಾರ ಸಮರ್ಪಣೆ, ಗುರುವಿಗೆ ವಂದನೆ, ಶಿಷ್ಯರಿಗೆ ಅಭಿನಂದನೆ ಹಾಗೂ ಡಾ|ಹಿಮ್ಮಡಿ ದಂಪತಿಗೆ ಅಭಿನಂದನೆ ಸಮರ್ಪಣೆ …
Read More »ಮೀಸಲು ಕ್ಷೇತ್ರಗಳಲ್ಲೇ ಕೈ ಟಿಕೆಟ್‌ಗೆ ಹೆಚ್ಚು ಫೈಟ್: 51 ಕ್ಷೇತ್ರಗಳಿಗೆ 350 ಮಂದಿ ಅರ್ಜಿ
ಬೆಂಗಳೂರು: ರಾಜ್ಯ ವಿಧಾನಸಭೆಯ ಮೀಸಲು ಕ್ಷೇತ್ರಗಳಲ್ಲೇ ಕಾಂಗ್ರೆಸ್ ಟಿಕೆಟ್‌ಗೆ ಹೆಚ್ಚಿನ ಪೈಪೋಟಿ ನಡೆದಿದೆ. ಹಾಲಿ ಶಾಸಕರು, ಮಾಜಿ ಸಚಿವರು ಪ್ರತಿನಿಧಿಸುವ ಕ್ಷೇತಗಳಲ್ಲೂ ಟಿಕೆಟ್ ಬಯಸಿರುವವರ ಪಟ್ಟಿ ದೊಡ್ಡದಿದೆ. ಹಲವು ಕ್ಷೇತ್ರಗಳಲ್ಲಿ ಆಕಾಂಕ್ಷಿಗಳು ಒಂದು ಡಜನ್ ಮೀರಿರುವುದೇ ಈಗ “ಆಯ್ಕೆ’ ಬಹುದೊಡ್ಡ ತಲೆನೋವಾಗಿದೆ. ರಾಜ್ಯದ 224 ವಿಧಾನಸಭಾ ಕ್ಷೇತ್ರಗಳ ಪೈಕಿ 36 ಪರಿಶಿಷ್ಟ ಜಾತಿ ಹಾಗೂ 15 ಪರಿಶಿಷ್ಟ ಪಂಗಡಕ್ಕೆ ಮೀಸಲಾದ ಒಟ್ಟು 51 ಕ್ಷೇತ್ರಗಳಿವೆ. ಈ ಮೀಸಲು ಕ್ಷೇತ್ರಗಳಲ್ಲಿ ಸಿಂಹಪಾಲು …
Read More »ಮನೆಮನೆಗೂ ತೆರಳಿ ಕಮಲ ಮತ್ತು ಮೋದಿ ಹೆಸರಲ್ಲಿ ಪ್ರಚಾರ ಮಾಡಬೇಕು’ ಎಂದು ಗೃಹ ಸಚಿವ ಅಮಿತ್ ಶಾ
ಬಳ್ಳಾರಿ): ‘ಮನೆಮನೆಗೂ ತೆರಳಿ ಕಮಲ ಮತ್ತು ಮೋದಿ ಹೆಸರಲ್ಲಿ ಪ್ರಚಾರ ಮಾಡಬೇಕು’ ಎಂದು ಗೃಹ ಸಚಿವ ಅಮಿತ್ ಶಾ ಸಂಡೂರಿನಲ್ಲಿ ಗುರುವಾರ ಬಳ್ಳಾರಿ ವಿಭಾಗದ ನಾಲ್ಕು ಜಿಲ್ಲೆಗಳ ಪ್ರಮುಖರಿಗೆ ತಾಕೀತು ಮಾಡಿದ್ದಾರೆ. ಸಂಡೂರಿನಲ್ಲಿ ನಡೆದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸಿದ ಬಳಿಕ ನಡೆದ ಬಳ್ಳಾರಿ, ವಿಜಯನಗರ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳ ಬಿಜೆಪಿ ಪ್ರಮುಖರ ಸಭೆಯಲ್ಲಿ ಬಿಡುವಿಲ್ಲದ ಪ್ರಚಾರದಲ್ಲಿ ತೊಡಗುವಂತೆ ಪಕ್ಷದ ಟಿಕೆಟ್ ಆಕಾಂಕ್ಷಿಗಳಿಗೂ ಸೂಚಿಸಿದ್ದಾರೆ ಎಂದು ವಿಶ್ವಸನೀಯ ಮೂಲಗಳು …
Read More »ಕಮಿಷನ್ ಕಿರುಕುಳ: ಗ್ರಾ.ಪಂ ಸದಸ್ಯೆ ರಾಜೀನಾಮೆ
ರಾಯಬಾಗ : ತಾಲ್ಲೂಕಿನ ಮೇಖಳಿ ಗ್ರಾಮ ಪಂಚಾಯಿತಿಯಲ್ಲಿ ಭ್ರಷ್ಟಾಚಾರ, ಕಮಿಷನ್ ಕಿರುಕುಳಕ್ಕೆ ಬೇಸತ್ತು ಗ್ರಾಮ ಪಂಚಾಯಿತಿ ಸದಸ್ಯೆಯೊಬ್ಬರು ರಾಜೀನಾಮೆ ನೀಡಿದ್ದಾಗಿ ತಿಳಿಸಿದ್ದಾರೆ. ಬಿಜಿಪಿ ಶಾಸಕ ಡಿ.ಎಂ. ಐಹೊಳೆ ಅವರ ಕ್ಷೇತ್ರವ್ಯಾಪ್ತಿ ಇದಾಗಿದ್ದು, ಕಮಿಷನ್ ಆರೋಪ ಕೇಳಿ ಬಂದಿದೆ. ‘ಗ್ರಾಮದ ಅಭಿವೃದ್ಧಿ ಕಾಮಗಾರಿಯ ಅನುಮೋದನೆಗಾಗಿ ಪಂಚಾಯಿತಿ ಅಧಿಕಾರಿಗಳು ಪ್ರತಿ ಸದಸ್ಯರಿಗೆ ಕಮಿಷನ್ ನೀಡುವಂತೆ ಒತ್ತಾಯಿಸುತ್ತಿದ್ದಾರೆ’ ಎಂದು ಆರೋಪಿಸಿ, ಸದಸ್ಯೆ ಸುಧಾ ಸಿದ್ದಪ್ಪ ರಾಜಂಗಳೆ ಸದಸ್ಯತ್ವಕ್ಕೆ ಮಂಗಳವಾರ ರಾಜೀನಾಮೆ ಸಲ್ಲಿಸಿದ್ದಾರೆ. ’14 …
Read More »ಬೆಳಗಾವಿಯ ಮಾರಿಹಾಳಪೊಲೀಸ್‌ರಿಂದ ಇಬ್ಬರು ಕೊಲೆ ಆರೋಪಿತರ ಬಂಧನ
ಬೆಳಗಾವಿ: ಬೆಳಗಾವಿಯ ಮಾರಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯ ಬಸರೀಕಟ್ಟಿ ಗ್ರಾಮದಲ್ಲಿ ಫೆ.20ರ ರಾತ್ರಿ ವೇಳೆಯಲ್ಲಿ ಮಾರುತಿ@ಪವನ ತಂದೆ ಪರಶುರಾಮ ಖನ್ನುಕರ, (32) ಎನ್ನುವವನನ್ನು ಕೊಲೆ ಮಾಡಿದ ಆರೋಪದಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಯಾರೋ ದುಷ್ಕರ್ಮಿಗಳು ಮಾರುತಿಯನ್ನು ಕೊಲೆ ಮಾಡಿದ ಬಗ್ಗೆ ಆತನ ತಂದೆ ಪರಶುರಾಮ ಬಸವಂತ ಖನ್ನುಕರ್ ಮಾರಿಹಾಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪೊಲೀಸ್ ಆಯುಕ್ತರು, ಡಿಸಿಪಿ (ಕಾ&ಸು) ಬೆಳಗಾವಿ ನಗರ ಹಾಗೂ ಗೋಪಾಲಕೃಷ್ಣ ಗೌಡರ ಎಸಿಪಿ ಬೆಳಗಾವಿ …
Read More »7 ಐಪಿಎಸ್ ಅಧಿಕಾರಿಗಳ ವರ್ಗಾವಣೆ; ಯಾರು, ಎಲ್ಲಿಗೆ? ಇಲ್ಲಿದೆ ವಿವರ.
ಬೆಂಗಳೂರು: ಮಂಗಳೂರು ನಗರ ಪೊಲೀಸ್ ಆಯುಕ್ತ ಸೇರಿದಂತೆ 7 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಗುರುವಾರ ಆದೇಶಿಸಿದೆ. ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಅವರನ್ನು ಡಿಐಜಿ ರೈಲ್ವೆ ಹುದ್ದೆಗೆ ನಿಯೋಜಿಸಿದ ಸರ್ಕಾರ, ಮಂಗಳೂರು ನಗರ ನೂತನ ಪೊಲೀಸ್ ಆಯುಕ್ತರಾಗಿ ಹಿರಿಯ ಎಸ್‌ಪಿ ಕುಲದೀಪ್ ಕುಮಾರ್ ಜೈನ್ ಅವರನ್ನು ನೇಮಿಸಿದೆ. ಬೆಂಗಳೂರು ನಗರಕ್ಕೆ ಹೊಸದಾಗಿ ದಕ್ಷಿಣ (ಸಂಚಾರ) ವಿಭಾಗವನ್ನು ಸೃಜಿಸಿ ಮಹಮ್ಮದ್ ಸುಜೀತಾ ನೇಮಕ ಮಾಡಿದೆ. …
Read More »ಬದುಕಿರುವಾಗಲೇ 2 ಕೋಟಿ ರೂ. ಇನ್ಶೂರೆನ್ಸ್ ಹಣಕ್ಕಾಗಿ ತಾಯಿ,ಮಗನ ಮಾಸ್ಟರ್ ಪ್ಲ್ಯಾನ್: ಬಯಲಾಯ್ತು ಅಸಲಿ ಕಥೆ
ಮಹಾರಾಷ್ಟ್ರ: ಮಹಿಳೆಯೊಬ್ಬರು ತನ್ನ 29 ವರ್ಷದ ಮಗ ಸಾವನ್ನಪ್ಪಿದ್ದಾನೆಂದು ಸುಳ್ಳು ದಾಖಲೆ ಸೃಷ್ಟಿಸಿ 2 ಕೋಟಿ ವಿಮೆ ಪಡೆಯಲು ಪ್ರಯತ್ನಿಸಿದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ದಿನೇಶ್ 2015ರಲ್ಲಿ ಎಲ್ಐಸಿ ಪಾಲಿಸಿಯನ್ನು ಖರೀದಿಸಿ ಪ್ರೀಮಿಯಂ ಪಾವತಿಸಿದ್ದರು. ದಿನೇಶ್ 2016 ಡಿಸೆಂಬರ್ 25 ರಂದು ಅಹಮದ್ ನಗರ ಜಿಲ್ಲೆಯ ನಗರ ಪುಣೆ ಹೆದ್ದಾರಿಯಲ್ಲಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾನೆಂದು 2017 ಮಾರ್ಚ್ 14 ರಂದು ಆತನ ತಾಯಿ ನಂದಾಬಾಯಿ ತಕ್ಸಾಲೆ ಇನ್ಶೂರೆನ್ಸ್ ಹಣಕ್ಕೆ ಅರ್ಜಿಸಲ್ಲಿಸಿದ್ದರು. ವಿಮೆ …
Read More »ಸಾಲದ ಹೊರೆಗೆ ಒಂದೇ ಕುಟುಂಬದ ಮೂವರು ಪ್ರಾಣ ತ್ಯಾಗ
ಹಾವೇರಿ : ತರಕಾರಿ ಮಾರಾಟ ಮಾಡಿ ಮಗಳನ್ನು ಸಾಕಿ ವಿದ್ಯಾಭ್ಯಾಸ ನೀಡಿ ಮದುವೆ ಮಾಡಿಕೊಟ್ಟಿದ್ದ ಕುಟುಂಬ ಇದೀಗ ಮಗಳ ಜತೆಗೆ ಆತ್ಮಹತ್ಯೆ ಮಾಡಿಕೊಂಡಿದೆ. ಒಂದೇ ಕುಟುಂಬದ ಮೂವರು ಸದಸ್ಯರ ಆತ್ಮಹತ್ಯೆಗೆ ಕಾರಣ ಹೊಸ ಮನೆ, ಮಗಳ ಮದುವೆ ಎನ್ನಲಾಗಿದೆ. ತಂದೆ ಹನುಮಂತಗೌಡ ಪಾಟೀಲ (54) ತಾಯಿ ಲಲಿತಾ ಪಾಟೀಲ(50) ಮತ್ತು ಮಗಳು ನೇತ್ರಾ ಪಾಟೀಲ(22) ಮೃತರು. ನೇಣು ಬಿಗಿದುಕೊಂಡು ಒಂದೇ ಕುಟುಂಬದ ಮೂವರು ಮನೆಯೊಳಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾವಿಗೆ …
Read More »ಸೈಬರ್ ಅಪರಾಧಗಳಿಂದಾಗಿ ಪ್ರತಿ ದಿನ ಕೋಟಿ-ಕೋಟಿ ಹಣ ಕಳೆದುಕೊಳ್ಳುತ್ತಿರುವ ಕರ್ನಾಟಕದ ಜನ
ಬೆಂಗಳೂರು, ಫೆಬ್ರವರಿ 23: ಕರ್ನಾಟಕದಲ್ಲಿ ಸೈಬರ್ ಅಪರಾಧಗಳು ದಿನೇದಿನೇ ಹೆಚ್ಚಾಗುತ್ತಿವೆ. ಈ ಕಾರಣದಿಂದಾಗಿ, ಕರ್ನಾಟಕವು ಪ್ರತಿ ವರ್ಷ ಕೋಟ್ಯಾಂತರ ಹಣವನ್ನು ಕಳೆದುಕೊಳ್ಳುತ್ತಿದೆ. ಇದರಲ್ಲಿ ರಾಜಧಾನಿ ಬೆಂಗಳೂರು ಮೊದಲ ಸ್ಥಾನದಲ್ಲಿದೆ. ಮೈಸೂರು ಹಾಗೂ ಮಂಡ್ಯ ನಂತರದ ಸ್ಥಾನದಲ್ಲಿವೆ. ಬೆಚ್ಚಿಬೀಳಿಸುವ ಈ ಮಾಹಿತಿಯನ್ನು ರಾಜ್ಯ ಗೃಹ ಇಲಾಖೆ ನೀಡಿದೆ. ಪೊಲೀಸ್ ಅಧಿಕಾರಿಯೊಬ್ಬರ ಪ್ರಕಾರ, ಅಪರಾಧ ವರದಿ ಮಾಡುವಲ್ಲಿ ವಿಳಂಬವಾಗುತ್ತಿದೆ. ರಾಜ್ಯಗಳ ನಡುವೆ ಸಮನ್ವಯದ ಕೊರತೆ ಇದೆ. ಇದೆಲ್ಲ ಸೇರಿದಂತೆ ವಿವಿಧ ಕಾರಣಗಳಿಂದಾಗಿ ಸೈಬರ್ …
Read More »