Breaking News

Yearly Archives: 2023

ಇನ್ನೊಂದು ವಾರದಲ್ಲ ‘15,000 ಶಾಲಾ ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿ’ ಪ್ರಕಟ – ಸಚಿವ ಬಿ.ಸಿ ನಾಗೇಶ್

ಬೆಂಗಳೂರು: ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ (6-8 ತರಗತಿ) ಪರಿಷ್ಕೃತ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ( Karnataka Teacher Recruitment 2023 ) ಇನ್ನೊಂದು ವಾರದಲ್ಲಿ ಪ್ರಕಟಿಸಲಾಗುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ನಾಗೇಶ್ ( Minister BC Nagesh ) ತಿಳಿಸಿದರು. ಇಲಾಖೆ ಪ್ರಕಟಿಸಿದ್ದ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪ ವ್ಯಕ್ತಪಡಿಸಿ ಕೆಲವು ವಿವಾಹಿತ …

Read More »

ಸರ್ಕಾರಿ ನೌಕರರು ಮಾರ್ಚ್‌ 1 ರಿಂದ ಕರ್ತವ್ಯಕ್ಕೆ ಗೈರಾಗುವುದಕ್ಕೆ ಕರೆ ಕೊಟ್ಟ ರಾಜ್ಯ ಸರ್ಕಾರಿ ನೌಕರರ ಸಂಘ

ಬೆಂಗಳೂರು: ಏಳನೇ ವೇತನ ಆಯೋಗ ಜಾರಿ ಸೇರಿದಂತೆ ಹಲವು ಸೌಲಭ್ಯಗಳನ್ನು ಜಾರಿಗೆ ತರುವುದರಲ್ಲಿ ರಾಜ್ಯ ಸರ್ಕಾರ ವಿಫಲವಾಗಿರುವ ಹಿನ್ನಲೆಯಲ್ಲಿ, ರಾಜ್ಯ ಸರ್ಕಾರದ ವಿರುದ್ದ ಕಿಡಿಕಾರಿರುವ ರಾಜ್ಯ ಸರ್ಕಾರಿ ನೌಕರರ ಸಂಘವು ಮಾರ್ಚ್‌ 1 ರಿಂದ ಕರ್ತವ್ಯಕ್ಕೆ ಗೈರಾಗುವ ಹೋರಾಟ ನಡೆಸಲು ಕರೆ ನೀಡಿದೆ.   ಇಂದು ನಡೆದ ಸರ್ಕಾರಿ ನೌಕರರ ಸಂಘದ ಸುಮಾರು 8 ಸಾವಿರ ಚುನಾಯಿತ ಪ್ರತಿನಿಧಿಗಳ ಸಭೆಯಲ್ಲಿ ಈ ಬಗ್ಗೆ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ. ಈ ಬಗ್ಗೆ ಸರ್ಕಾರಿ …

Read More »

ಬೆಳಗಾವಿಗೆ ಪ್ರಧಾನಿ ಭೇಟಿ: ಸಕಲ ಸಿದ್ಧತೆಗೆ ಸೂಚನೆ

ಬೆಳಗಾವಿ: ‘ಪ್ರಧಾನಿ ನರೇಂದ್ರ ಮೋದಿ ಫೆ.27ರಂದು ನಗರದ ನವೀಕೃತ ರೈಲು ನಿಲ್ದಾಣ ಲೋಕಾರ್ಪಣೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಡೆಸುವ ನಿಟ್ಟಿನಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚಿಸಿದರು.   ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸೋಮವಾರ ನಡೆದ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ರೈಲ್ವೆ, ಕೃಷಿ ಸೇರಿದಂತೆ ವಿವಿಧ ಇಲಾಖೆಗಳ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಲಿದ್ದು, ಫಲಾನುಭವಿಗಳು …

Read More »

20 ಪ್ರಕರಣಗಳಲ್ಲಿ ಬೇಕಾಗಿದ್ದ ನಾಲ್ವರ ಬಂಧನ

ಬೆಳಗಾವಿ: ಅಪಹರಣ, ದರೋಡೆ, ಕೊಲೆ ಸೇರಿದಂತೆ ಜಿಲ್ಲೆಯ ವಿವಿಧೆಡೆ 20ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಬೇಕಾಗಿದ್ದ ನಾಲ್ವರು ಆರೋಪಿಗಳ ತಂಡವನ್ನು ಹಾರೂಗೇರಿ ಪೊಲೀಸರ ತಂಡ ಸೋಮವಾರ ಬಂಧಿಸಿದೆ. ರಾಯಬಾಗ ತಾಲ್ಲೂಕಿನ ಖಣದಾಳ ಗ್ರಾಮದ ಭುಜಂಗ ತುಕಾರಾಮ್‌ ಜಾಧವ, ವಾಸುದೇವ ಸಹದೇವ ನಾಯಕ, ಚಿಕ್ಕೋಡಿ ತಾಲ್ಲೂಕಿನ ಕೇರೂರ ಗ್ರಾಮದ ಈರಯ್ಯ ಸಾತಯ್ಯ ಹಿರೇಮಠ, ಅಥಣಿ ತಾಲ್ಲೂಕಿನ ನಂದಗಾಂವದ ಶಿವಾನಂದ ನಾಣಪ್ಪ ಸಲಾಖನ್‌ ಬಂಧಿತರು.   ಫೆ.11ರಂದು ನಾಲ್ವರೂ ಸೇರಿಕೊಂಡು ಖಣದಾಳದ ಶಾಂತವ್ವ ಆಜೂರೆ …

Read More »

ಮೂವರು ಅಂತರರಾಜ್ಯ ಕಳ್ಳರ ಬಂಧನ

ಕಾಗವಾಡ (ಬೆಳಗಾವಿ ಜಿಲ್ಲೆ): ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕೃಷ್ಣಾನದಿ ಹಾಗೂ ಬಾವಿಗಳಲ್ಲಿ ಅಳವಡಿಸಿದ್ದ ನೀರೆತ್ತುವ ಪಂಪ್‌ಸೆಟ್‌, ಮೋಟಾರುಗಳನ್ನು ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಮಹಾರಾಷ್ಟ್ರದ ಮೂವರು ಆರೋಪಿಗಳನ್ನು ಸ್ಥಳೀಯ ಪೋಲಿಸರು ಸೋಮವಾರ ಬಂಧಿಸಿದ್ದಾರೆ.   ಯೋಗೇಶ ಕರೋಲಿ, ಸತೀಶ್‌ ಸೂರ್ಯವಂಶಿ, ವಿಜಯ ಬಿಷೆ ಬಂಧಿತರು. ಇಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್ಪಿ ಡಾ.ಸಂಜೀವ್‌ ಪಾಟೀಲ, ‘ಅಥಣಿ ಡಿವೈಎಸ್ಪಿ‌ ಶ್ರೀಪಾದ ಜಲ್ದೆ, ಸಿಪಿಐ ರವೀಂದ್ರ ನಾಯ್ಕೋಡಿ ಮತ್ತು ಕಾಗವಾಡ ಪಿಎಸ್‌ಐ ಎಚ್.ಕೆ. …

Read More »

ರೂಪಾ-ಸಿಂಧೂರಿ ಜಗಳ: ಇಬ್ಬರನ್ನೂ ಎತ್ತಂಗಡಿ ಮಾಡಿದ ಸರ್ಕಾರ

ಬೆಂಗಳೂರು: ಕಳೆದೆರಡು ದಿನಗಳಿಂದ ಪ್ರಮುಖ ಸುದ್ದಿಯಾಗುತ್ತಿರುವ ರೂಪಾ ಮೌದ್ಗಿಲ್ ಮತ್ತು ರೋಹಿಣಿ ಸಿಂಧೂರಿ ನಡುವಿನ ಜಗಳ ಇದೀಗ ಮತ್ತೊಂದು ರೂಪ ಪಡೆದಿದೆ. ಮಧ್ಯಪ್ರವೇಶ ಮಾಡಿರುವ ರಾಜ್ಯ ಸರ್ಕಾರ ಇಬ್ಬರನ್ನೂ ಯಾವುದೇ ಸ್ಥಳ ತೋರಿಸದೆ ಎತ್ತಂಗಡಿ ಮಾಡಿದ್ದು, ರೂಪಾ ಪರಿ ಮೌನೀಶ್ ಮೌದ್ಗಿಲ್ ಅವರನ್ನೂ ವರ್ಗಾವಣೆ ಮಾಡಲಾಗಿದೆ.   ಇಂದು ಧಾರ್ಮಿಕ ದತ್ತಿ ಇಲಾಖೆ ಆಯುಕ್ತರಾಗಿದ್ದ ರೋಹಿಣಿ ಸಿಂಧೂರಿ ಅವರನ್ನು ಹಾಗೂ ಕರಕುಶಲ ನಿಗಮದ ವ್ಯವಸ್ಥಾಪಕ ನಿರ್ದೇಶಕಿಯಾಗಿದ್ದ ಡಿ. ರೂಪಾ ಮೌದ್ಗಿಲ್ …

Read More »

ಗೃಹಸಚಿವರ ಸ್ವಕ್ಷೇತ್ರದಲ್ಲಿ ವಿಧಾನಸಭಾ ಚುನಾವಣೆ ಮತದಾನ ಬಹಿಷ್ಕಾರ!

ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಸ್ವಕ್ಷೇತ್ರವಾದ ತೀರ್ಥಹಳ್ಳಿ ತಾಲೂಕಿನ ಮೇಗರವಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಬರುವ ಶತಮಾನಕ್ಕೂ ಹಳೆಯದಾದ ಮೇಗರವಳ್ಳಿ ಸಮೀಪದ ಅಣ್ಣುವಳ್ಳಿಗೆ ಸಂಪರ್ಕ ಕಲ್ಪಿಸುವ ದಾರಿ ಮತ್ತು ಹಳ್ಳದ ಕಾಲುಸೇತುವೆಯನ್ನು ಕಳೆದ ನಾಲೈದು ವರ್ಷಗಳಿಂದ ಬಂದ್ ಮಾಡಲಾಗಿದೆ. ಪ್ರಸ್ತುತ ಸುಮಾರು 3-4 ಕಿ.ಮೀ. ದೂರ ಕ್ರಮಿಸಿ ಮೇಗರವಳ್ಳಿ ತಲುಪಬೇಕಾಗಿದೆ. ಇದರಿಂದ ಶಾಲಾ ಮಕ್ಕಳು, ವೃದ್ಧರು, ಅನಾರೋಗ್ಯ ಪೀಡಿತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಬಗ್ಗೆ ಸಾಕಷ್ಟು ಬಾರಿ ಜನಪ್ರತಿನಿಧಿಗಳಿಗೆ …

Read More »

ನಾರಾಯಣ ಗುರು ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ ಆದೇಶ ಹೊರಡಿಸಿದ ಸರ್ಕಾರ

ಬೆಂಗಳೂರು: ರಾಜ್ಯದ ಬಿಲ್ಲವ/ಈಡಿಗ ಸಮುದಾಯಗಳ ಬಹುದಿನದ ಬೇಡಿಕೆಯಾಗಿದ್ದ ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ, ಸರ್ಕಾರ ಆದೇಶ ಹೊರಡಿಸಿದೆ ಈ ಬಗ್ಗೆ ಮುಖ್ಯಮಂತ್ರಿ ಬಸವವಾರಜ ಬೊಮ್ಮಾಯಿ ಅವರು ಮಾಹಿತಿ ನೀಡಿದ್ದು, ನಾರಾಯಣ ಗುರು ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ ಆದೇಶ ಹೊರಡಿಸಿದ್ದು, ಈ ನಿಗಮವು ಈಡಿಗ/ಬಿಲ್ಲವ ಸೇರಿದಂತೆ ಇತರ ಪ್ರಮುಖ 26 ಉಪಜಾತಿಗಳ ಸರ್ವತೋಮುಖ ಅಭಿವೃದ್ಧಿಗಾಗಿ ಕೆಲಸ ನಿರ್ವಹಿಸಲಿದೆ ಎಂದಿದ್ದರು.   ಸರ್ಕಾರದ ಆದೇಶದಲ್ಲಿ ಹೊಸ ಕೆನೆಪದರ ಮತ್ತು ಭಾರತದ …

Read More »

ರಾಜ್ಯದಿಂದ 102 ಎಐಸಿಸಿ ಸದಸ್ಯರ ಪಟ್ಟಿ ಬಿಡುಗಡೆ

ಬೆಂಗಳೂರು: ರಾಜ್ಯದಿಂದ 102 ಮಂದಿ ಎಐಸಿಸಿ (ಅಖಿಲ ಭಾರತ ಕಾಂಗ್ರೆಸ್‌ ಕಮಿಟಿ) ಸದಸ್ಯರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಕರ್ನಾಟಕ ಕಾಂಗ್ರೆಸ್‌ ಶಿಫಾರಸು ಮಾಡಿದ್ದ 150 ಮಂದಿಯ ಪಟ್ಟಿಯಲ್ಲಿ 102 ಮಂದಿಗೆ ಮಾತ್ರ ಮನ್ನಣೆ ನೀಡಿದೆ. ಕೆಲವು ಹೆಸರುಗಳು ದಿಲ್ಲಿಯಲ್ಲಿ ಸೇರ್ಪಡೆಯಾಗಿರುವ ಬಗ್ಗೆ ಪಕ್ಷದೊಳಗೆ ಅಸಮಾಧಾನದ ಹೊಗೆ ಕಾಣುತ್ತಿದೆ. ಎಐಸಿಸಿ ಅಧಿವೇಶನವು ಇದೇ 24ರಿಂದ ಛತ್ತೀಸ್‌ಗಢದ ರಾಯಪುರದಲ್ಲಿ ನಡೆಯಲಿದೆ. ಮಲ್ಲಿಕಾರ್ಜುನ ಖರ್ಗೆ ಅವರು ಎಐಸಿಸಿ ಅಧ್ಯಕ್ಷರಾದ ಬಳಿಕ ನಡೆಯತ್ತಿರುವ ಮೊದಲ ಅಧಿವೇಶನ …

Read More »

ಭ್ರಷ್ಟಾಚಾರದ ಬಗ್ಗೆ ದಾಖಲೆ ಸಮೇತ ಬನ್ನಿ: ಸಿಎಂ ಬೊಮ್ಮಾಯಿ

ವಿಧಾನಸಭೆ: ರಾಜ್ಯ ಸರ್ಕಾರದ ವಿರುದ್ಧ ನಿರಂತರ ಭ್ರಷ್ಟಾಚಾರ ಆರೋಪ ಮಾಡುತ್ತಿರುವ ಕಾಂಗ್ರೆಸ್‌ಗೆ ಸದನದಲ್ಲಿ ತಿರುಗೇಟು ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, “ದಾಖಲೆಗಳಿದ್ದರೆ ಲೋಕಾಯುಕ್ತಗೆ ಕೊಡಿ’ ಎಂದು ಸವಾಲು ಹಾಕಿದರು.   ಅಲ್ಲದೆ, ವಿಧಾನಸಭೆ ಚುನಾವಣೆಗೆ ಜನರ ಮುಂದೆ ರಿಪೋರ್ಟ್‌ ಕಾರ್ಡ್‌ ಇಟ್ಟುಕೊಂಡು ಹೋಗುತ್ತೇವೆ. ಮತ್ತೂಮ್ಮೆ ಸಕಾರಾತ್ಮಕ ಮತದೊಂದಿಗೆ ಮರಳಿ ಬರುತ್ತೇವೆ ನೋಡುತ್ತಿರಿ ಎಂದೂ ಹೇಳಿದರು. ಸೋಮವಾರ ರಾಜ್ಯಪಾಲರ ಭಾಷಣಕ್ಕೆ ವಂದನೆ ಸಲ್ಲಿಸುವ ನಿರ್ಣಯದ ಮೇಲಿನ ಚರ್ಚೆಗೆ ಸರ್ಕಾರದ ಪರವಾಗಿ ಉತ್ತರ …

Read More »