Breaking News

Yearly Archives: 2023

ಪತ್ನಿಯ ಆಸೆಯಂತೆ ಆಕೆಯ ಸ್ನೇಹಿತೆಯನ್ನು ಮದ್ವೆಯಾದ ಗಂಡ

ನವದೆಹಲಿ: ಮೊದಲ ಪತ್ನಿ ಬದುಕಿರುವಾಗಲೇ ಇನ್ನೊಂದು ಮದುವೆಯಾದರೆ ಗಂಡನ ಕತೆ ಮುಗಿಯಿತು ಅಂತಾನೇ ಅರ್ಥ. ಇಬ್ಬರು ಹೆಂಡಿರ ಮಧ್ಯೆ ಸಿಲುಕಿ ನಲುಗಬೇಕಾಗುತ್ತದೆ. ಆದರೆ, ಇಲ್ಲೊಬ್ಬ ಮಹಿಳೆ ತನ್ನ ಗಂಡನಿಗೆ ತಾನೇ ಮುಂದೆ ನಿಂತು ಎರಡನೇ ಮದುವೆ ಮಾಡಿಸಿದ್ದಾಳೆ. ಅಚ್ಚರಿ ಎನಿಸಿದರೂ ಇದು ಸತ್ಯ.   ಹೌದು, ಮಹಿಳೆಯೊಬ್ಬಳು ತನ್ನ ಗಂಡನಿಗೆ ತನ್ನ ಸ್ನೇಹಿತೆಯ ಜೊತೆ ಎರಡನೇ ಮದುವೆ ಮಾಡಿಸಿದ್ದಾಳೆ. ಅಷ್ಟಕ್ಕೂ ಆಕೆ ತೆಗೆದುಕೊಂಡ ನಿರ್ಧಾರ ಅವಳ ಬಯಕೆಯಂತೆ. ಇನ್ನೊಂದೆಡೆ ಪತ್ನಿಯನ್ನು …

Read More »

ಬಿಜೆಪಿಯಂತೆ ನರಹತ್ಯೆಯ ರಾಜಕೀಯ ಮಾಡಿಲ್ಲ: ಎಚ್.ಡಿ.ಕುಮಾರಸ್ವಾಮಿ

ಧಾರವಾಡ: ‘ಅಧಿಕಾರ ಸಿಕ್ಕಾಗ ರಾಜ್ಯದ ಜನರು ಮತ್ತು ರೈತರ ಪರವಾಗಿ ಜೆಡಿಎಸ್‌ ಧ್ವನಿ ಎತ್ತಿದೆ. ಆದರೆ ಎಂದಿಗೂ ಬಿಜೆಪಿಯವರಂತೆ ಎಂದೂ ನರಹತ್ಯೆಯ ರಾಜಕೀಯ ಮಾಡಿಲ್ಲ’ ಎಂದು ಜೆಡಿಎಸ್ ಮುಖಂಡ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ನಗರದ ಮಹಾನಗರ ಪಾಲಿಕೆ ಕೇಂದ್ರ ಕಚೇರಿ ಆವರಣದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಮಗೆ ಅಧಿಕಾರ ಸಿಕ್ಕಾಗ ರೈತರ ಸಾಲ ಮನ್ನಾ ಮಾಡಿದ್ದೇವೆ. ಪ್ರಾಮಾಣಿಕವಾಗಿ ಜನಗಳ ನೋವಿಗೆ ಸ್ಪಂದಿಸುವ ಕೆಲಸ ಮಾಡಿದ್ದೇವೆ. ಆದರೆ ಬಿಜೆಪಿ ನಾಯಕರಂತೆ ಅಮಾಯಕರನ್ನು ಬಲಿ …

Read More »

ಎಂಇಎಸ್‌ ನಾಯಕರಿಂದ ಮಹಾರಾಷ್ಟ್ರ ಸಿ.ಎಂ ಏಕನಾಥ ಶಿಂದೆ ಭೇಟಿ

ಬೆಳಗಾವಿ: ಮುಂಬೈನಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ, ಗಡಿ ಉಸ್ತುವಾರಿ ಸಚಿವರಾದ ಚಂದ್ರಕಾಂತ್‌ ಪಾಟೀಲ ಹಾಗೂ ಶಂಭುರಾಜ್‌ ದೇಸಾಯಿ ಅವರನ್ನು ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್‌) ಕಾರ್ಯಕರ್ತರು ಮಂಗಳವಾರ ಭೇಟಿಯಾದರು. ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಬೆಳವಣಿಗೆಗಳು ಹಾಗೂ ಫೆ.28ರಂದು ಎಂಇಎಸ್‌ನಿಂದ ಆಯೋಜಿಸಿರುವ ಮುಂಬೈ ಚಲೋ ಹೋರಾಟದ ಕುರಿತು ಚರ್ಚಿಸಿದರು. ಮಹಾರಾಷ್ಟ್ರ ಸರ್ಕಾರದ ಪ್ರಧಾನ ಕಾರ್ಯದರ್ಶಿ ರಾಕೇಶಕುಮಾರ್‌, ಎಂಇಎಸ್‌ ಕಾರ್ಯಾಧ್ಯಕ್ಷ ಮನೋಹರ್‌ ಕಿಣೇಕರ್‌ ಇತರರಿದ್ದರು.

Read More »

K.I.A.D,B, ಭೂಮಿ ಹಂಚಿಕೆ: ಅವ್ಯವಹಾರ ಆರೋಪ

ಬೆಂಗಳೂರು: ‘ಕೆಐಎಡಿಬಿಯಿಂದ ಖಾಸಗಿ ರಿಯಲ್ ಎಸ್ಟೇಟ್ ಸಂಸ್ಥೆಗೆ ಭೂಮಿ ನೀಡಿಕೆಯಲ್ಲಿ ಅವ್ಯವಹಾರವಾಗಿದೆ’ ಎಂದು ವಿಧಾನ ಪರಿಷತ್‍ನಲ್ಲಿ ಜೆಡಿಎಸ್‌ನ ಮರಿತಿಬ್ಬೇಗೌಡ ಮಾಡಿದ ಆರೋಪ ‌ಚರ್ಚೆಗೆ ಗ್ರಾಸವಾಯಿತು. ‘ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಬಡವರಿಗೆ ಮನೆ ಕಟ್ಟಿಕೊಡಲು ದೇವನಹಳ್ಳಿಯ ಹೈಟೆಕ್ ಡಿಫೆನ್ಸ್ ಏರೋಸ್ಪೇಸ್ ಪಾರ್ಕ್‌ನಲ್ಲಿ ಬ್ರಿಗೇಡ್‌ ರಿಯಲ್ ಎಸ್ಟೇಟ್ ಸಂಸ್ಥೆಗೆ ಕೆಐಎಡಿಬಿಯಿಂದ ಭೂಮಿ ನೀಡಲಾಗಿದೆ. ಅದರಲ್ಲಿ ಬಡವರಿಗೆ ಮನೆ ಕಟ್ಟಿಕೊಡುವುದಾಗಿ ಹೇಳಲಾಗಿತ್ತು. ಆದರೆ, ನಿಯಮ ಪಾಲನೆ ಆಗದಿರುವುದರಿಂದ ಸರ್ಕಾರಕ್ಕೆ ನಷ್ಟವಾಗಿದೆ’ ಎಂದು ಮರಿತಿಬ್ಬೇಗೌಡ ದೂರಿದರು. …

Read More »

ಹಲ್ಲೆ ಯತ್ನ: ಕ್ರಮಕ್ಕೆ ಆಗ್ರಹಿಸಿ ಮನವಿ

ಬೆಳಗಾವಿ: ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ ಸಹಕಾರ ಸಕ್ಕರೆ ಕಾರ್ಖಾನೆಯಲ್ಲಿ ಈಚೆಗೆ ರೈತ ಹೋರಾಟಗಾರ, ಕಬ್ಬು ನಿಯಂತ್ರಣ ಮಂಡಳಿ ಸದಸ್ಯ ಸಿದಗೌಡ ಮೋದಗಿ ಅವರ ಮೇಲೆ ಕೆಲವರು ಹಲ್ಲೆಗೆ ಯತ್ನಿಸಿದ್ದಾರೆ. ಆರೋಪಿಗಳ ಮೇಲೆ ಕ್ರಮ ಜರುಗಿಸಬೇಕು ಎಂದು ಕೋರಿ ವಿವಿಧ ಸಂಘಟನೆಗಳು ಸದಸ್ಯರು ಸೋಮವಾರ ನಗರ ಪೊಲೀಸ್‌ ಕಮಿಷನರ್‌ಗೆ ಮನವಿ ಸಲ್ಲಿಸಿದರು.   ‘ಸಿದಗೌಡ ಮೋದಗಿ ಅವರು ಫೆ.4ರಂದು ಕಾರ್ಖಾನೆಗೆ ನಾಮನಿರ್ದೇಶನ ಸಂಬಂಧ ವರದಿ ಮಾಡಿದ ನಂತರ, ಅವರನ್ನು ಕಾರ್ಖಾನೆಯ ಒಂದು ಕೋಣೆಯಲ್ಲಿ ನಾಲ್ಕು …

Read More »

ಬೆಳಗಾವಿ ಶೈಕ್ಷಣಿಕ ಜಿಲ್ಲಾಮಟ್ಟದ ‘ಮಕ್ಕಳ ಕಲಿಕಾ ಹಬ್ಬ’ದಲ್ಲಿ ಗಮನಸೆಳೆದ ಚಟುವಟಿಕೆಗಳು

ಬೆಳಗಾವಿ: ತಾಲ್ಲೂಕಿನ ಮಾಸ್ತಮರ್ಡಿಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಯೋಜಿಸಿರುವ ಬೆಳಗಾವಿ ಶೈಕ್ಷಣಿಕ ಜಿಲ್ಲಾಮಟ್ಟದ ‘ಮಕ್ಕಳ ಕಲಿಕಾ ಹಬ್ಬ’ದಲ್ಲಿ ಎರಡನೇ ದಿನವಾದ ಮಂಗಳವಾರ ನಡೆದ ವಿವಿಧ ಶೈಕ್ಷಣಿಕ ಚಟುವಟಿಕೆ ಗಮನಸೆಳೆದವು.   ಮಾಡು-ಆಡು, ಹಾಡು-ಆಡು, ಕಾಗದ-ಕತ್ತರಿ ಮತ್ತು ಊರು ತಿಳಿಯೋಣ ವಿಭಾಗದಲ್ಲಿ ನಡೆದ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದರು. ವಿಜ್ಞಾನಕ್ಕೆ ಸಂಬಂಧಿಸಿದ ಸರಳ ಪ್ರಯೋಗಗಳನ್ನು ಮಾಡಿದರು. ಗಾಯನ ಮತ್ತಿತರ ಕಲಾಪ್ರಕಾರ ಪ್ರಸ್ತುತಪಡಿಸಿದರು. ಸ್ಥಳೀಯ ಮಟ್ಟದಲ್ಲಿ ಲಭ್ಯವಾಗುವ ಕಚ್ಚಾ ವಸ್ತುಗಳಿಂದ ವಿವಿಧ …

Read More »

ಗೋಕಾಕ ಜಲಪಾತದ ಬಳಿ ಇರುವ ಮಹಾಲಿಂಗೇಶ್ವರ ಜಾತ್ರಾ ಮಹೋತ್ಸವ,ಭವ್ಯ ರಥೋತ್ಸವಕ್ಕೆ ಶಾಸಕ ರಮೇಶ ಜಾರಕಿಹೊಳಿ ಚಾಲನೆ ನೀಡಲಿದ್ದಾರೆ.

ಘಟಪ್ರಭಾ: ಸಮೀಪ ಗೋಕಾಕ ಜಲಪಾತದ ಬಳಿ ಇರುವ ಪ್ರಾಚೀನ ಕಾಲದ ಮಹಾಲಿಂಗೇಶ್ವರ ಜಾತ್ರಾ ಮಹೋತ್ಸವಕ್ಕೆ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ. ಇದೇ 17ರಿಂದ 19ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೂ ನಡೆಯಲಿವೆ. ಪದರು ಶಿಲೆಗಳ ಮಧ್ಯೆ ನಿರ್ಮಾಣ ಮಾಡಿದ್ದು ಈ ದೇವಾಲಯದ ವಿಶೇಷ. ನಿಖರವಾಗಿ ಇದರ ಪುರಾತನ ಕಾಲ ತಿಳಿದುಬಂದಿಲ್ಲ. ಆದರೆ, ದೇವಾಲಯವು ತಡಸಲ ಮಹಾಲಿಂಗೇಶ್ವರನೆಂದು (ತಟಾಕೇಶ್ವರ) ಖ್ಯಾತಿ ಪಡೆದಿದೆ. ಹೀಗಾಗಿ, ಅನಾದಿ ಕಾಲದಿಂದಲೂ ಮಹಾಲಿಂಗೇಶ್ವರ ಇಲ್ಲಿ ಪೂಜೆಗೊಳ್ಳುತ್ತಿದ್ದಾರೆ ಎನ್ನುವುದು ವಾಡಿಕೆ. ಅತ್ಯಂತ ನವಿರಾದ …

Read More »

ಖಾತೆ ಬದಲಾವಣೆಗೆ ಲಂಚ: ಪ್ರಥಮದರ್ಜೆ ಸಹಾಯಕ ಲೋಕಾಯುಕ್ತ ಬಲೆಗೆ

ಬಳ್ಳಾರಿ (ಹೂವಿನಹಡಗಲಿ): ಪಹಣಿಯಲ್ಲಿ ಹೆಸರು ಬದಲಾವಣೆ ಮಾಡಿಕೊಡಲು ಸಾವಿರಾರು ರೂ. ಲಂಚ ಕೇಳಿದ್ದ ಹಡಗಲಿ ತಾಲೂಕು ಕಚೇರಿಯ ಪ್ರಥಮ ದರ್ಜೆ ಸಹಾಯಕ ವೆಂಕಟಸ್ವಾಮಿ ಎನ್ನುವವರು ಮಂಗಳವಾರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ಹಗರನೂರು ಗ್ರಾಮಾದ ನಿವೃತ್ತ ಶಿಕ್ಷಕ ಲಕ್ಕಪ್ಪಾ ಅಂಗಡಿಯವರ ತಾಯಿಗೆ ಸೇರಿದ 4 ಎಕರೆ ಜಮಿನಿಗೆ ಸಂಬಂಧಿಸಿದಂತೆ ಸರ್ವೆನಂ. 330\ಎ ಪಹಣಿ ಕಲಂ 11 ರಲ್ಲಿ ಸರ್ಕಾರಿ ಜಮಿನು ಎಂದು ಬಂದಿದ್ದು ಇದನ್ನು ತಗೆದು ಹಾಕಲು ಅರ್ಜಿದಾರ ಲಕ್ಕಪ್ಪ ಅಂಗಡಿಯ 2014 …

Read More »

ಶೇ.60 ಭರವಸೆಯನ್ನೂ ಈಡೇರಿಸಿಲ್ಲ: ಸಿದ್ದರಾಮಯ್ಯ ವಾಗ್ಧಾಳಿ

ವಿಧಾನಸಭೆ: ಬಿಜೆಪಿ 2018ರ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಪ್ರಣಾಳಿಕೆಯಲ್ಲಿ ನೀಡಿದ್ದ 600 ಭರವಸೆ ಪೈಕಿ ಶೇ.60ರಷ್ಟು ಈಡೇರಿಸಿಲ್ಲ. ಹೀಗಿರುವಾಗ ರಾಜ್ಯಪಾಲರ ಕೈಲಿ ಸುಳ್ಳು ಹೇಳಿಸಿರುವುದು ನಿಜವೋ ಅಲ್ಲವೋ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.   ರಾಜ್ಯಪಾಲರ ಭಾಷಣಕ್ಕೆ ವಂದನೆ ಸಲ್ಲಿಸುವ ನಿರ್ಣಯದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರೈತರು ಬ್ಯಾಂಕ್‌ ಹಾಗೂ ಸಹಕಾರ ಸಂಘಗಳಲ್ಲಿ ಪಡೆದಿರುವ ಒಂದು ಲಕ್ಷ ರೂ. ಸಾಲ ಮನ್ನಾ, 20 ಲಕ್ಷ ಸಣ್ಣ ಮತ್ತು …

Read More »

ಅಸಮರ್ಪಕ ಸಮವಸ್ತ್ರ, ಶೂ ವಿತರಣೆಗೆ ಹೈಕೋರ್ಟ್‌ ತರಾಟೆ

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಸಮರ್ಪಕವಾಗಿ ಸಮವಸ್ತ್ರ ಮತ್ತು ಶೂ ವಿತರಿಸಿರುವ ಬಗ್ಗೆ ಅಗತ್ಯ ದಾಖಲೆಗಳೊಂದಿಗೆ ಮಾಹಿತಿ ನೀಡದ ರಾಜ್ಯ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿರುವ ಹೈಕೋರ್ಟ್‌, ಹಿರಿಯ ಅಧಿಕಾರಿಯೊಬ್ಬರನ್ನು ಜೈಲಿಗೆ ಕಳುಹಿಸಿದರೆ ಎಲ್ಲ ಸರಿಹೋಗುತ್ತದೆ ಎಂದು ಎಚ್ಚರಿಕೆ ನೀಡಿದೆ.   ಸರ್ಕಾರಿ ಶಾಲೆಗಳಲ್ಲಿ ಪ್ರಾಥಮಿಕ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳಿಗೆ ಎರಡು ಜೊತೆ ಸಮವಸ್ತ್ರ, ಒಂದು ಜೊತೆ ಶೂ ಮತ್ತು ಎರಡು ಜೊತೆ ಕಾಲು ಚೀಲ ನೀಡಬೇಕು ಎಂದು …

Read More »