ಬೆಳಗಾವಿ: ‘ಸಮರ್ಥನಂ’ ಅಂಗವಿಕಲರ ಸಂಸ್ಥೆ ಆಯೋಜಿಸಿದ ರಾಷ್ಟ್ರಮಟ್ಟದ ಅಂಧರ ಕ್ರಿಕೆಟ್ ಟೂರ್ನಿ ಹಾಗೂ ‘ಪ್ರಜಾವಾಣಿ’ ಅಮೃತ ಮಹೋತ್ಸವಕ್ಕೆ ಸಿದ್ಧತೆಗಳು ಪೂರ್ಣಗೊಂಡಿವೆ. ಇಲ್ಲಿನ ಆಟೊ ನಗರದಲ್ಲಿರುವ ಕರ್ನಾಟಕ ರಾಜ್ಯ ಕ್ರಿಕೆಟ್ ಅಕಾಡೆಮಿ ಮೈದಾನದಲ್ಲಿ ಫೆ.5ರಿಂದ 9ರವರೆಗೆ ಟಿ-20 ಲೀಗ್ ಪಂದ್ಯಗಳು ನಡೆಯಲಿವೆ. ದೇಶದ ಏಳು ನಗರಗಳಲ್ಲಿ ಈ ಲೀಗ್ ಪಂದ್ಯಗಳು ನಡೆಯಲಿವೆ. ಆ ಪೈಕಿ ‘ಬಿ’ ಗುಂಪಿನ 10 ಪಂದ್ಯಗಳನ್ನು ಬೆಳಗಾವಿಯಲ್ಲಿ ಅಯೋಜಿಸಲಾಗಿದೆ. ಕರ್ನಾಟಕ, ಮಹಾರಾಷ್ಟ್ರ, ಗೋವಾ, ಪಶ್ಚಿಮ ಬಂಗಾಳ …
Read More »Yearly Archives: 2023
ಬಿಜೆಪಿಗೆ 130 ಸ್ಥಾನ ಖಚಿತ, ಗೆಲುವು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಬಿಎಸ್‌ವೈ
ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ನಮ್ಮ ಪಕ್ಷ 130ರಿಂದ 140 ಸ್ಥಾನಗಳನ್ನು ಪಡೆಯಲಿದೆ. ಗೆಲುವು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಹೇಳಿದರು. ಬಿಜೆಪಿ ವಿಶೇಷ ಕಾರ್ಯಕಾರಿಣಿ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ನಮ್ಮ ಪಕ್ಷ (ಬಿಜೆಪಿ) 130ರಿಂದ 140 ಸ್ಥಾನಗಳನ್ನು ಗೆಲ್ಲುವ ಮೂಲಕ ಮತ್ತೆ ಅಧಿಕಾರಕ್ಕೆ ಬರುತ್ತೇವೆ. ನಮ್ಮ ಗೆಲುವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಕಾಂಗ್ರೆಸ್‌ನಲ್ಲಿ …
Read More »ನಿಪ್ಪಾಣಿ: ‘ಹೆಚ್ಚು ಅಂಕ ಗಳಿಕೆಗೆ ಒತ್ತಡ ಹೇರದಿರಿ’
ನಿಪ್ಪಾಣಿ: ‘ಮಕ್ಕಳು ಶಾರೀರಿಕವಾಗಿ ಹಾಗೂ ಮಾನಸಿಕವಾಗಿ ಸದೃಢರಾಗಿರಬೇಕು. ಆಗ ದೇಶ-ವಿದೇಶಗಳಲ್ಲಿ ಗುರುತಿಸಿಕೊಳ್ಳುವಂತಹ ಕಾರ್ಯ ಮಾಡಲು ಸಶಕ್ತರಾಗುವರು’ ಎಂದು ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು. ಸ್ಥಳೀಯ ಶಿವಶಂಕರ ಜೊಲ್ಲೆ ಪಬ್ಲಿಕ್ (ಸಿಬಿಎಸ್‍ಇ) ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ‘ಮಕ್ಕಳಿಗೆ ಅತಿ ಹೆಚ್ಚು ಅಂಕ ಪಡೆಯುವಂತೆ ಒತ್ತಡ ಹೇರಬಾರದು. ಮಕ್ಕಳಿಗೆ ನಿತ್ಯ ಯೋಗ, ಪ್ರಾಣಾಯಮ ಮಾಡುವಂತೆ ಹೇಳಬೇಕು ಹಾಗೂ ಅವರು …
Read More »ಬೈಲಹೊಂಗಲ: “ಅನ್ಯಭಾಷೆಗಳ ಆಕ್ರಮಣ ತಡೆಯಲಿ”
ಬೈಲಹೊಂಗಲ: ‘ಬೆಳಗಾವಿ ಅಪ್ಪಟ ಕನ್ನಡ ಕೇಂದ್ರ. ಈ ನಾಡಿನ ಸಾಂಸ್ಕೃತಿಕ ಇತಿಹಾಸದಲ್ಲಿ ಮಹತ್ವದ ಸ್ಥಾನ ಪಡೆದಿದೆ. ಕನ್ನಡ ಭಾಷೆಯ ಉಳಿವು, ಪ್ರಸಾರ ಬೆಳವಣಿಗೆಯಲ್ಲಿ ಈ ನಾಡಿನ ಜನತೆ ಸದಾ ಮುಂಚೂಣಿಯಲ್ಲಿದ್ದಾರೆ. ವಿಶೇಷವಾಗಿ ಗಡಿ ಪ್ರದೇಶಗಳಲ್ಲಿರುವ ಕನ್ನಡ ಶಾಲೆಗಳ ಸ್ಥಿತಿ ಸುಧಾರಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು. ಅನ್ಯಭಾಷೆಗಳ ಆಕ್ರಮಣವನ್ನು ತಗ್ಗಿಸಬೇಕು’ ಎಂದು ಸಮ್ಮೇಳನದ ಅಧ್ಯಕ್ಷ ಡಾ.ಶಾಂತಿನಾಥ ದಿಬ್ಬದ ಹೇಳಿದರು. ತಾಲ್ಲೂಕಿನ ದೇವಲಾಪೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಶುಕ್ರವಾರ …
Read More »ಬೆಳಗಾವಿ: ಎಸ್ಪಿ ಅಧಿಕಾರ ಸ್ವೀಕಾರ
ಬೆಳಗಾವಿ: ಜಿಲ್ಲೆಯ ನೂತನ ಹೆಚ್ಚುವರಿ ಎಸ್ಪಿ ಆಗಿ ಎಂ.ವೇಣುಗೋಪಾಲ ಅವರು ಶುಕ್ರವಾರ ಅಧಿಕಾರ ವಹಿಸಿಕೊಂಡರು. 1994ರ ಬ್ಯಾಚ್‌ನ ಅಧಿಕಾರಿ ಆಗಿರುವ ವೇಣುಗೋಪಾಲ ಅವರು, ಇದಕ್ಕೂ ಮುನ್ನ ಮಂಡ್ಯ ಜಿಲ್ಲಾ ಹೆಚ್ಚುವರಿ ಎಸ್ಪಿ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಲೋಕಾಯುಕ್ತ, ಸಿಸಿಆರ್‌ಬಿ ಗುಪ್ತಚರ ವಿಭಾಗಗಳಲ್ಲೂ ಕೆಲಸ ಮಾಡಿದ ಅನುಭವ ಅವರಿಗಿದೆ.
Read More »ಪ್ರಮೋದ್ ಮುತಾಲಿಕ್ ಗೆ ಸಿಎಂ ಟಾಂಗ್
ವಿಜಯಪುರ; ; ರಾಜ್ಯದ ಇತಿಹಾಸದಲ್ಲಿ 5 ವರ್ಷಗಳಲ್ಲಿ ಮುಖ್ಯಮಂತ್ರಿಯಾಗಿ ಅತಿ ಹೆಚ್ಚು ಸಾಲ ಮಾಡಿರುವ ಖ್ಯಾತಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರದ್ದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ವಿಜಯಪುರದ ಸೈನಿಕ್ ಸ್ಕೂಲ್ ಹೆಲಿಪ್ಯಾಡ್‍ಗೆ ಬಂದಿಳಿದು ಕಾರ್ಯಕ್ರಮಕ್ಕೆ ತೆರಳುವ ಮುನ್ನ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಕಳೆದ ಬಜೆಟ್ ಘೋಷಣೆ ಗಳ ಪೈಕಿ ಕೇವಲ 10 ರಷ್ಟು ಕಾಮಗಾರಿಗಳು ಜಾರಿಯಾಗಿವೆ 3 ಲಕ್ಷ ಕೋಟಿ ಸಾಲ ಇದೆ ಎಂದಿರು. ಬಜೆಟ್ …
Read More »ವಾಣಿ ಜಯರಾಂ ಖ್ಯಾತ ಹಿನ್ನೆಲೆ ಗಾಯಕಿ ಅನುಮಾನಾಸ್ಪದ ಸಾವು
ಚೆನ್ನೈ: ಪದ್ಮಭೂಷಣ ಪುರಸ್ಕೃತೆ, ಖ್ಯಾತ ಗಾಯಕಿ ವಾಣಿ ಜಯರಾಂ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ತಮಿಳುನಾಡಿನ ಚೆನ್ನೈನ ನಿವಾಸದಲ್ಲಿ ವಾಣಿ ಜಯರಾಂ ಅವರ ಶವ ಪತ್ತೆಯಾಗಿದ್ದು, ಸಾವಿನ ಬಗ್ಗೆ ಹಲವು ಅನುಮಾನ ವ್ಯಕ್ತವಾಗಿದೆ. ವಾಣಿಜಯರಾಂ ಅವರಿಗೆ 77 ವರ್ಷ ವಯಸ್ಸಾಗಿತ್ತು. ಕನ್ನಡ, ತೆಲುಗು,ತಮಿಳು, ಹಿಂದಿ, ಮಲಯಾಳಂ ಸೇರಿದಂತೆ ಹಲವು ಭಾಷೆಗಳಲ್ಲಿ 10,000ಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದ ವಾಣಿ ಜಯರಾಂ ಇದೀಗ ಶವವಾಗಿ ಪತ್ತೆಯಾಗಿರುವುದು ಚಿತ್ರರಂಗಕ್ಕೆ ಆಘಾತವನ್ನುಂಟುಮಾಡಿದೆ. 2023ರ ಗಣರಾಜ್ಯೋತ್ಸವದ ದಿನದಂದು …
Read More »ಆಂಬುಲೆನ್ಸ್ ಹಾಗೂ ಟ್ರ್ಯಾಕ್ಟರ್ ಭೀಕರ ಅಪಘಾತ; ರೋಗಿ ದುರ್ಮರಣ
ಬೆಳಗಾವಿ: ಕಬ್ಬು ತುಂಬಿದ ಟ್ರ್ಯಾಕ್ಟರ್ ಹಾಗೂ ಆಂಬ್ಯುಲೆನ್ಸ್ ನಡುವೆ ಸಂಭವಿದ ಭೀಕರ ಅಪಘಾತದಲ್ಲಿ ರೋಗಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಬಳಿ ನಡೆದಿದೆ. ಅಕ್ಬರಸಾಬ್ ನೇಸರಗಿ (28) ಮೃತ ದುರ್ದೈವಿ. ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ. ಬೈಕ್ ಸ್ಕಿಡ್ ಆಗಿ ಬಿದ್ದು ಗಾಯಗೊಂಡಿದ್ದ ಅಕ್ಬರ್ ಸಾಬ್ ನೇಸರಗಿಯನ್ನು ಆಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ ಟ್ರ್ಯಾಕ್ಟರ್ ಹಾಗೂ ಆಂಬುಲೆನ್ಸ್ ಡಿಕ್ಕಿಹೊಡೆದಿದ್ದು, ಅದಾಗಲೇ ಅಪಘಾತದಿಂದ ಜೀವನ್ಮರಣದ ನಡುವೆ ಹೋರಾಡುತ್ತಿದ್ದ ಅಕ್ಬರಸಾಬ್ ಕೊನೆಯುಸಿರೆಳೆದಿದ್ದಾನೆ. ಉಳಿದ …
Read More »ಜಾತ್ರೆ ಸಂದರ್ಭದಲ್ಲಿ ಅಕ್ರಮ ಸರಾಯಿ ಮಾರಾಟ 3 ಜನರ ಬಂಧನ
ಸವದತ್ತಿ: ಜಾತ್ರೆ ಸಂದರ್ಭದಲ್ಲಿ ಅಕ್ರಮ ಸರಾಯಿ ಮಾರಾಟ ಅವ್ಯಾಹತವಾಗಿ ನಡೆಯುತ್ತಿದೆ ಎನ್ನುವ ದೂರಿನ ಹಿನ್ನೆಲೆಯಲ್ಲಿ ಸವದತ್ತಿ ಪೊಲೀಸರು ಸರಣಿ ದಾಳಿ ಮುಂದುವರಿಸಿದ್ದಾರೆ. ವಿವಿಧೆಡೆ ದಾಳಿ ನಡೆಸಿ ಈವರೆಗೆ 5 ಪ್ರಕರಣ ದಾಖಲಿಸಿರುವ ಪೊಲೀಸರು, ಮೂವರನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ. ದಾಳಿ ಮುಂದುವರಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದು, ಇನ್ನಷ್ಟು ಪ್ರಕರಣಗಳು ದಾಖಲಾಗುವ ಸಾಧ್ಯತೆ ಇದೆ. ಸವದತ್ತಿ ಯಲ್ಲಮ್ಮ ದೇವಸ್ಥಾನ ಸುತ್ತಮುತ್ತ ಮತ್ತು ತಾಲೂಕಿನ ಹಳ್ಳಿ ಹಳ್ಳಿಗಳಲ್ಲಿ ಅಕ್ರಮ ಸರಾಯಿ ಮಾರಾಟ …
Read More »ಒಂದೂವರೆ ವರ್ಷದ ನಂತರ ಬೆಳಗಾವಿ ಮಹಾನಗರ ಪಾಲಿಕೆ ಸದಸ್ಯರಿಗೆ ಅಧಿಕಾರಿ ಸಿಗುವ ಯೋಗ
ಬೆಳಗಾವಿ: ಒಂದೂವರೆ ವರ್ಷದ ನಂತರ ಬೆಳಗಾವಿ ಮಹಾನಗರ ಪಾಲಿಕೆ ಸದಸ್ಯರಿಗೆ ಅಧಿಕಾರಿ ಸಿಗುವ ಯೋಗ ಕೂಡಿ ಬಂದಿದೆ. ಫೆ. 6ರಂದು ಮೇಯರ್- ಉಪ ಮೇಯರ್ ಚುನಾವಣೆ ನಡೆಯಲಿದ್ದು, ಆಕಾಂಕ್ಷಿಗಳು ತುದಿಗಾಲಲ್ಲಿ ನಿಂತಿದ್ದಾರೆ. ಆದರೆ ಸ್ಮಾರ್ಟ್‌ಟಿಸಿಯ ಪ್ರಥಮ ಪ್ರಜೆ ಯಾರಾಗಲಿದ್ದಾರೆ ಎಂಬುದು ಮಾತ್ರ ಇನ್ನೂ ನಿಗೂಢವಾಗಿದೆ. ಚುನಾವಣಾ ಪ್ರಕ್ರಿಯೆಗೆ ಕೋರ್ಟ್ ಅನುಮತಿ ನೀಡಿ ಎರಡು ವಾರಗಳಾಗಿದ್ದು, ಅಂದಿನಿಂದಲೂ ತೆರೆಮರೆಯಲ್ಲಿ ಇನ್ನಿಲ್ಲದ ಕಸರತ್ತುಗಳು ನಡೆದಿವೆ. ಯಾರಿಗೆ ಕುರ್ಚಿ ಎಂಬುದನ್ನು ಈಗಲೇ ಘೋಷಣೆ …
Read More »