Breaking News

Yearly Archives: 2023

ಕುಡಿದ ಮತ್ತಿನಲ್ಲಿ ಹೆಂಡತಿ- ಮಕ್ಕಳ ಮೇಲೆ ಕೊಡಲಿಯಿಂದ ಹಲ್ಲೆ

ಹುಬ್ಬಳ್ಳಿ: ಗಂಡನೊಬ್ಬ ಕುಡಿದ ಮತ್ತಿನಲ್ಲಿ ಹೆಂಡತಿ ಹಾಗೂ ಮೂವರು ಮಕ್ಕಳ ಮೇಲೆ ಕೊಡಲಿ, ಸುತ್ತಿಗೆಯಿಂದ ಮಾರಣಾಂತಿಕ ಹಲ್ಲೆ ಮಾಡಿ ತಾನು ಕೂಡ ನೇಣಿಗೆ ಶರಣಾದ ಘಟನೆ ತಾಲೂಕಿನ ಸುಳ್ಳ ಗ್ರಾಮದಲ್ಲಿ ಬುಧವಾರ ಬೆಳಗಿನ ಜಾವ ನಡೆದಿದೆ. ಸುಳ್ಳ ಗ್ರಾಮದ ಪಕ್ಕೀರಪ್ಪ ಮಾದರ ಎಂಬಾತ ಇಂದು ಬೆಳಗಿನ ನಾಲ್ಕು ಗಂಟೆ ಸುಮಾರಿಗೆ ಮನೆಯಲ್ಲಿನ ಟಿವಿ ಸೌಂಡ್ ಜಾಸ್ತಿ ಮಾಡಿ ಮಾರಕಾಸ್ತ್ರದಿಂದ ಹೆಂಡತಿ ಮುದಕವ್ವನ ಮೇಲೆ ಹಲ್ಲೆ ನಡೆಸಿದಾಗ ಜೋರಾಗಿ ಕಿರುಚಿದ್ದಾಳೆ. ಆಗ …

Read More »

ಧಾರವಾಡದ ಕಸೂತಿ ಕಲೆಯ ಸೀರೆಯುಟ್ಟು ಬಜೆಟ್ ಮಂಡಿಸಿದ ಸಚಿವೆ ನಿರ್ಮಲಾ ಸೀತಾರಾಮನ್

ಧಾರವಾಡ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ 5ನೇ ಬಜೆಟ್ ಮಂಡನೆ ಮಾಡುತ್ತಿದ್ದು ಧಾರವಾಡ ಜಿಲ್ಲೆಯ ನವಲಗುಂದ ಕಸೂತಿ ಕಲೆ ಇರುವ ಕೆಂಪು (ಮರೂನ್ ಕಲರ್) ಬಣ್ಣದ ಸೀರೆಯುಟ್ಟಿರುವುದು ವಿಶೇಷ. ಈ ಸೀರೆಗೆ ಕಸೂತಿ ಹಾಕಿ ವಿಶೇಷವಾಗಿ ರೂಪಿಸಿದ್ದು ಧಾರವಾಡ ನಗರದ ನಾರಾಯಣಪುರದಲ್ಲಿ ಇರುವ ಆರತಿ ಹಿರೇಮಠ ಮಾಲೀಕತ್ವದ ಆರತಿ ಕ್ರಾಪ್ಟ್ಸ್ ನ ಮಹಿಳಾಮಣಿಗಳು ಅನ್ನುವುದು ಇನ್ನೂ ವಿಶೇಷ.   ಜಿಲ್ಲೆಯ ಸಂಸದರು, ಕೇಂದ್ರ ಸಚಿವರು ಆಗಿರುವ …

Read More »

ತಾಂತ್ರಿಕ ಸಮಸ್ಯೆ: ವಿದ್ಯಾರ್ಥಿಗಳು ಅತಂತ್ರ

ಬೆಳಗಾವಿ: ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ (ಯುಯುಸಿಎಂಎಸ್)‌ ಸ್ಟೂಡೆಂಟ್‌ ಪೋರ್ಟಲ್‌ನಲ್ಲಿ ಆಗಾಗ ಕಾಣಿಸಿಕೊಳ್ಳುತ್ತಿರುವ ತಾಂತ್ರಿಕ ಸಮಸ್ಯೆ ಇಲ್ಲಿನ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ (ಆರ್‌ಸಿಯು) ವಿದ್ಯಾರ್ಥಿಗಳನ್ನು ಹೈರಾಣಾಗಿಸಿದೆ.   ಆರ್‌ಸಿಯು ವ್ಯಾಪ್ತಿಯಲ್ಲಿ 400 ಪದವಿ ಕಾಲೇಜುಗಳಿದ್ದು, 1 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಬಿ.ಎ, ಬಿಬಿಎ, ಬಿಸಿಎ, ಬಿ.ಎಸ್ಸಿ, ಬಿಎಸ್‌ಡಬ್ಲ್ಯು 1, 3 ಮತ್ತು 5ನೇ ಸೆಮಿಸ್ಟರ್‌ ವಿದ್ಯಾರ್ಥಿಗಳಿಂದ ಪರೀಕ್ಷಾ ಅರ್ಜಿ ಆಹ್ವಾನಿಸಲಾಗಿದ್ದು, ಜ.6ರಿಂದ 31ರವರೆಗೆ ಈ …

Read More »

ಕಾಂಗ್ರೆಸ್‌ ಟಿಕೆಟ್: 130 ಸ್ಥಾನಗಳಿಗೆ ಅಭ್ಯರ್ಥಿಗಳ ಪಟ್ಟಿ ಸಿದ್ಧ?

ಬೆಂಗಳೂರು: ಕಾಂಗ್ರೆಸ್‌ ಚುನಾವಣಾ ಸಮಿತಿ ಸಭೆ ಗುರುವಾರ (ಫೆ. 2) ನಡೆಯಲಿದ್ದು, ಅದಕ್ಕೂ ಮೊದಲೇ 120ರಿಂದ 130 ಕ್ಷೇತ್ರಗಳಿಗೆ ಪಕ್ಷದ ಸಂಭವನೀಯ ಅಭ್ಯರ್ಥಿಗಳನ್ನು ಗುರುತಿಸಿ, ಪಟ್ಟಿ ಸಿದ್ಧಪಡಿಸಲು ರಾಜ್ಯ ಕಾಂಗ್ರೆಸ್‌ ನಿರ್ಧರಿಸಿದೆ.   ಸಂಭವನೀಯ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಲು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಮತ್ತು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಬುಧವಾರ ಚರ್ಚೆ ನಡೆಸಲಿದ್ದಾರೆ. ‘ಸುರ್ಜೇವಾಲಾ ಅವರು ಬೆಳಿಗ್ಗೆ …

Read More »

ಮತದಾರರೇ ಭ್ರಷ್ಟರಾಗಿದ್ದಾರೆ ನಾನು ಚುನಾವಣೆಗೆ ನಿಲ್ಲಲಾರೆ: ಹಳ್ಳಿ ಹಕ್ಕಿ

ಧಾರವಾಡ: ಇಂದು ಸ್ಥಿತಿವಂತರೂ ಮತ ಮಾರಿಕೊಳ್ಳುವ ಕೆಟ್ಟ ಪರಿಸ್ಥಿತಿಗೆ ಬಂದಿದ್ದೇವೆ. ರಾಜಕಾರಣ ಹಾಗೂ ರಾಜಕಾರಣಿಗಳು ಇಂದಿನ ಜನರನ್ನು ಭ್ರಷ್ಟಗೊಳಿಸಿದೆ. ಜನರೂ ಭ್ರಷ್ಟರಾಗಿದ್ದಾರೆ. ಚುನಾವಣೆಗೆ ಬೆಲೆಯೇ ಇಲ್ಲದಂತಾಗಿದೆ. ಹೀಗಾಗಿ ಇಂತಹ ಸಂದರ್ಭದಲ್ಲಿ ನಾನು ಚುನಾವಣೆಗೆ ಸ್ಪರ್ಧಿಸಲಾರೆ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಹೇಳಿದರು. ನಗರದ ಬೇಂದ್ರೆ ಭವನದಲ್ಲಿ ಮಂಗಳವಾರ ಸಂಜೆ ಜರುಗಿದ ಕಾರ್ಯಕ್ರಮದಲ್ಲಿ ವರಕವಿ ಡಾ.ದ.ರಾ.ಬೇಂದ್ರೆ ಅವರ 127 ನೇ ಜನ್ಮದಿನಾಚರಣೆ ಪ್ರಯುಕ್ತ ಡಾ.ದ.ರಾ.ಬೇಂದ್ರೆ ರಾಷ್ಟೀಯ ಸ್ಮಾರಕ ಟ್ರಸ್ಟ ವತಿಯಿಂದ ಕೊಡ …

Read More »

ಇಂದು ಕೇಂದ್ರ ಸರ್ಕಾರದ ಬಹುನಿರೀಕ್ಷಿತ ಬಜೆಟ್ ಮಂಡನೆ ಇಂದಿನಿಂದ ಏನೇನು? ಬದಲಾವಣೆ? ಇಲ್ಲಿದೆ ಕೆಲವೊಂದು ಮಾಹಿತಿ

ಡಿಟಿಎಚ್‌, ಕೇಬಲ್‌ ಟಿವಿ ದರ ದುಬಾರಿ ಟಿವಿ ಚಾನೆಲ್‌ಗ‌ಳ ದರ ನಿಗದಿಗೆ ಸಂಬಂಧಿಸಿ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್‌)ದ ಹೊಸ ಆದೇಶ ಇಂದಿನಿಂದ ಚಾಲ್ತಿಗೆ ಬರಲಿದೆ. ಅದರಂತೆ ಗ್ರಾಹಕರು ಟಿವಿ ಚಾನೆಲ್‌ಗ‌ಳಿಗೆ ಸುಮಾರು ಶೇ.30ರಷ್ಟು ಹೆಚ್ಚು ಶುಲ್ಕ ತೆರಬೇಕಾಗುತ್ತದೆ ಎಂದು ಡಿಟಿಎಚ್‌ ಮತ್ತು ಕೇಬಲ್‌ ಆಪರೇಟರ್‌ಗಳು ಸುಳಿವು ನೀಡಿದ್ದಾರೆ. ದರ ಹೆಚ್ಚಳದಿಂದ ಗ್ರಾಹಕರನ್ನು ಕಳೆದುಕೊಳ್ಳುತ್ತೇವೆಂಬ ಭೀತಿಯನ್ನೂ ಅವರು ವ್ಯಕ್ತಪಡಿಸಿದ್ದಾರೆ. ಹೆಚ್ಚುವರಿ ಶುಲ್ಕ ಕ್ರೆಡಿಟ್‌ ಕಾರ್ಡ್‌ ಮೂಲಕ ನೀವು ಬಾಡಿಗೆ ಪಾವತಿಸುತ್ತಿದ್ದರೆ ಇನ್ನು …

Read More »

ಸೋಮಶೇಖರ ರೆಡ್ಡಿ ವಿರುದ್ಧ ಅತ್ತಿಗೆ ಸ್ಪರ್ಧೆ

ಗಂಗಾವತಿ: ಬಳ್ಳಾರಿ ನಗರ ಕ್ಷೇತ್ರದಲ್ಲಿ ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ ವಿರುದ್ಧ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರ ಪತ್ನಿ ಅರುಣಾ ಲಕ್ಷ್ಮೀ ಸ್ಪರ್ಧಿಸಲಿದ್ದಾರೆ. ಈ ಬಗ್ಗೆ ಕಲ್ಯಾಣ ರಾಜ್ಯ ಪ್ರಗತಿ ಪಾರ್ಟಿ ಸಂಸ್ಥಾಪಕ ಜನಾರ್ದನ ರೆಡ್ಡಿ ಮಂಗಳವಾರ ಗಂಗಾವತಿಯಲ್ಲಿ ಘೋಷಣೆ ಮಾಡಿ, ಸವಾಲು ಹಾಕಿದ್ದಾರೆ.   ಇತಿಹಾಸ ಪ್ರಸಿದ್ಧ ಆನೆಗೊಂದಿಯಿಂದ ಪಕ್ಷ ದ ಪ್ರಚಾರ ರಥಯಾತ್ರೆಗೆ ಕುಟುಂಬ ಸಮೇತರಾಗಿ ಚಾಲನೆ ನೀಡಿದ ಅವರು, ಸೋದರನ ವಿರುದ್ಧ ತೊಡೆ ತಟ್ಟಿದರು. ಶ್ರೀರಾಮಚಂದ್ರನಿಗೆ ಆತ್ಮಸ್ಥೈರ್ಯ ತುಂಬಿದ …

Read More »

ಚುನಾವಣೆ ಸಮೀಪಿಸುತ್ತಿದ್ದಂತೆ ವೈಯಕ್ತಿಕ ಟೀಕೆ ಟಿಪ್ಪಣಿ ಮಾಡುವುದು ಬೇಡ.: ಬಾಲಚಂದ್ರ ಜಾರಕಿ

ಬೆಳಗಾವಿ: ಮೂರೂ ಕುಟುಂಬಗಳು ರಾಜಕೀಯವಾಗಿ ಬೆಳೆದಿವೆ. ಚುನಾವಣೆ ಸಮೀಪಿಸುತ್ತಿರುವುದರಿಂದ ರಮೇಶ ಜಾರಕಿಹೊಳಿ, ಡಿ.ಕೆ. ಶಿವಕುಮಾರ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ಅವರು ವೈಯಕ್ತಿಕ ದ್ವೇಷ, ನಿಂದನೆ ಮಾಡುವುದು ಬೇಡ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕೈಮುಗಿದು ಮನವಿ ಮಾಡಿದರು.   ಗೋಕಾಕ ತಾಲೂಕಿನ‌ ಖಂಡ್ರಟ್ಟಿ ಗ್ರಾಮದಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚುನಾವಣೆ ಸಮೀಪಿಸುತ್ತಿದ್ದಂತೆ ವೈಯಕ್ತಿಕ ಟೀಕೆ ಟಿಪ್ಪಣಿ ಮಾಡುವುದು ಬೇಡ. ರಾಜಕೀಯವಾಗಿ ಎಲ್ಲರೂ ಬೆಳೆದಿದ್ದೀರಿ, ಬಹಿರಂಗ ಹೇಳಿಕೆ ನೀಡುವುದು ಬೇಡ. …

Read More »

ಸಿದ್ದರಾಮಯ್ಯ ಈ ಬಾರಿ ಎಲ್ಲೇ ಸ್ಪರ್ಧಿಸಿದರೂ ಸೋಲುವುದು ಮಾತ್ರ ಖಚಿತ: .ಶ್ರೀರಾಮುಲು

ಮಾಜಿ ಸಿಎಂ ಸಿದ್ದರಾಮಯ್ಯ ಈ ಬಾರಿ ಎಲ್ಲೇ ಸ್ಪರ್ಧಿಸಿದರೂ ಸೋಲುವುದು ಮಾತ್ರ ಖಚಿತ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಸಿದ್ದರಾಮಯ್ಯನವರು ಮೊದಲು ಬಾದಾಮಿಯಿಂದ ಸ್ಪರ್ಧಿಸುತ್ತಾರೆ ಎನ್ನಲಾಗಿತ್ತು. ಈಗ ಕೋಲಾರ, ವರುಣಾದಿಂದ ಸ್ಪರ್ಧೆ ಮಾಡುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಇನ್ನೂ ಅವರಿಗೆ ಕ್ಷೇತ್ರ ಯಾವುದು ಎಂಬುದೇ ಸ್ಥಿರವಾಗಿಲ್ಲ. ಈ ಬಾರಿ ಅವರು ಎಲ್ಲೇ ಸ್ಪರ್ಧಿಸಿದರೂ ಸೋಲುವುದು ನಿಶ್ಚಿತ ಎಂದರು. ಅಧಿಕಾರಕ್ಕಾಗಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಯಾತ್ರೆ ಮಾಡುತ್ತಿವೆ. …

Read More »

ರಾಜ್ಯದ 2023-24ನೇ ಸಾಲಿನ ಬಜೆಟ್‌ ರೈತ ಪರ ಆಗಿರಲಿದೆ ಎಂದ ಬೊಮ್ಮಾಯಿ

ಧಾರವಾಡ: ರಾಜ್ಯದ 2023-24ನೇ ಸಾಲಿನ ಬಜೆಟ್‌ ರೈತ ಪರ ಆಗಿರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ನಗರ ದ ಕೃಷಿ ವಿವಿ ಆವರಣದಲ್ಲಿ ಮಂಗಳವಾರ ಕೃಷಿ ಇಲಾಖೆ, ಕೃಷಿ ವಿವಿಯ ನೂತನ ಯೋಜನೆಗಳ ಚಾಲನಾ ಕಾರ್ಯಕ್ರಮ ಹಾಗೂ ಕೃಷಿ ಪಂಡಿತ, ಕೃಷಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.   ಮುಖ್ಯಮಂತ್ರಿ ಸ್ಥಾನದಲ್ಲಿ ಇರುವವರೆಗೂ ರೈತರ ಪರ ಕೆಲಸ ಮಾಡುತ್ತೇನೆ. ರೈತರ ಮಕ್ಕಳು ವಿದ್ಯಾಭ್ಯಾಸ ಮಾಡಲೆಂದೇ “ವಿದ್ಯಾಸಿರಿ’ ಯೋಜನೆ ಆರಂಭಿಸಿದೆ. …

Read More »