Breaking News

Yearly Archives: 2023

ಈ ಬಾರಿ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ:B.S.Y.

ಶಿವಮೊಗ್ಗ: ಬಿಜೆಪಿಯ ರಾಷ್ಟ್ರೀಯ ವರಿಷ್ಠರು ರಾಜ್ಯದ ಬಗ್ಗೆ ಹೆಚ್ಚಿನ ಗಮನ ನೀಡಿದ್ದು, ಈ ಬಾರಿ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದರು.   ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯ ಡಿಜಿಟಲ್‌ ವಾಲ್‌ ಪೇಂಟಿಂಗ್‌ ಕಾರ್ಯಕ್ಕೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಮೋದಿಯವರಂತಹ ನಾಯಕ ಸಿಕ್ಕಿರುವುದು ನಮ್ಮ ಪುಣ್ಯ. ಅವರ ನಾಯಕತ್ವದಲ್ಲಿ ರಾಜ್ಯದ ಮತದಾರರು ಬಿಜೆಪಿ ಅಧಿಕಾರಕ್ಕೆ ತರುವ ಸಂಕಲ್ಪ ಮಾಡಬೇಕು. ಪ್ರಧಾನಿ …

Read More »

ಡಿ.ಕೆ.ಶಿವಕುಮಾರ್ ಅವರೇ ಸಿಡಿ ಷಡ್ಯಂತ್ರದ ರೂವಾರಿ, CD ಕೇಸ್ ಸಿಬಿಐಗೆ ವಹಿಸುವಂತೆ ಮನವಿ*

ಬೆಂಗಳೂರು: ಸಿಡಿ ಷಡ್ಯಂತ್ರದ ಮೂಲಕ ನನ್ನ ತೇಜೋವಧೆ ಮಾಡಲಾಗಿದೆ. ಡಿ.ಕೆ.ಶಿವಕುಮಾರ್ ಅವರೇ ಸಿಡಿ ಷಡ್ಯಂತ್ರದ ರೂವಾರಿ, ಎಲ್ಲ ರಾಜಕಾರಣಿಗಳ ಸಿಡಿ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ವಿರುದ್ಧ ಗಂಭೀರ ಆರೋಪ ಮಾಡಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಸಿಡಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾದ ರಮೇಶ್ ಜಾರಕಿಹೊಳಿ, ಸಿಡಿ ಕೇಸ್ ಸಿಬಿಐಗೆ …

Read More »

ಗ್ರಾಹಕರೇ ಗಮನಿಸಿ : ನಾಳೆಯಿಂದ ಬದಲಾಗಲಿವೆ ಈ ನಿಯಮಗಳು

ನವದೆಹಲಿ : 2023 ರ ವರ್ಷದ ಮೊದಲ ತಿಂಗಳು ಕೊನೆಗೊಳ್ಳಲಿದೆ. ನಂತರ ಹೊಸ ತಿಂಗಳು ಹೊಸ ಬದಲಾವಣೆಗಳೊಂದಿಗೆ ಪ್ರಾರಂಭವಾಗುತ್ತದೆ. ಫೆಬ್ರವರಿ 1 ರಿಂದ ಅನೇಕ ನಿಯಮಗಳು ಬದಲಾಗಲಿವೆ. ಅವುಗಳ ಪರಿಣಾಮವು ಸಾಮಾನ್ಯ ಜನರ ಮೇಲೂ ಪರಿಣಾಮ ಬೀರಲಿವೆ.   ವರದಿಯ ಪ್ರಕಾರ. ಸಂಚಾರ, ಪ್ಯಾಕೇಜಿಂಗ್, ಗೇಮಿಂಗ್, ಆದಾಯ ತೆರಿಗೆ ಇಲಾಖೆ ಮತ್ತು ಸಂಬಳಕ್ಕೆ ಸಂಬಂಧಿಸಿದ ಹೊಸ ನಿಯಮಗಳು ಫೆಬ್ರವರಿ 1 ರಿಂದ ಪ್ರಾರಂಭವಾಗಲಿವೆ. ಹೀಗಾಗಿ ಹೊಸ ನಿಯಮಗಳನ್ನು ಮುಂಚಿತವಾಗಿ ತಿಳಿದುಕೊಳ್ಳುವುದು …

Read More »

ಬೆಳಗಾವಿಯಲ್ಲಿ ಕಾಂಗ್ರೆಸ್ 12 ಸೀಟು ಗೆಲ್ಲುವುದು ಖಚಿತ ಎಂದ ಎಂ.ಬಿ.ಪಾಟೀಲ್

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಆರೋಪಗಳ ಬಗ್ಗೆ, ಅವರ ಮಾತಿನ ಬಗ್ಗೆ ನಾನೇನೂ ಪ್ರತಿಕ್ರಿಯೆ ನೀಡಲ್ಲ. ಅದಕ್ಕೆ ಉತ್ತರ ಕೊಡಬೇಕಾದದ್ದು ಅಧ್ಯಕ್ಷರು. ಅವರೇ ಉತ್ತರ ಕೊಡುತ್ತಾರೆ ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಂ.ಬಿ.ಪಾಟೀಲ್, ಯಾರನ್ನೂ ಯಾರೂ ಮುಗಿಸಲು ಆಗಲ್ಲ. ಎಲ್ಲವನ್ನೂ ಜನ ತೀರ್ಮಾನ ಮಾಡುತ್ತಾರೆ ಎಂದು ಹೇಳಿದರು. ಇದೇ ವೇಳೆ ಬೆಳಗಾವಿಯಲ್ಲಿ ನಾವು 12 ಸ್ಥಾನ ಗೆಲ್ಲುವುದು ಖಚಿತ. ಮುಂಬೈ ಕರ್ನಾಟಕದಲ್ಲಿ ಹೆಚ್ಚಿನ ಸೀಟು …

Read More »

ಧಾರ್ಮಿಕ ಕೃತಿಗಳನ್ನು ಪ್ರತಿಯೊಬ್ಬರೂ ಓದಿ

ಹಂದಿಗುಂದ: ‘ಧಾರ್ಮಿಕ ಹಾಗೂ ಆಧ್ಯಾತ್ಮಿಕ ಪುಸ್ತಕಗಳು ಒಳ್ಳೆಯ ಸಮಾಜ ನಿರ್ಮಾಣಕ್ಕೆ ಸಹಕಾರಿ. ಪ್ರತಿಯೊಬ್ಬರೂ ಈ ಗ್ರಂಥಗಳನ್ನು ಓದುವ ರೂಢಿ ಬೆಳೆಸಿಕೊಳ್ಳಿ’ ಎಂದು ಸಾಹಿತಿ ವಿ.ಎಸ್.ಮಾಳಿ ಹೇಳಿದರು. ಹಂದಿಗುಂದ ಗ್ರಾಮದಲ್ಲಿ ಸಿದ್ಧೇಶ್ವರ ಜಾತ್ರಾ ಮಹೋತ್ಸವ ಹಾಗೂ ಸಿದ್ದೇಶ್ವರ ಶಿವಯೋಗಿಗಳವರ ನೂತನ ಮಠದ ಲೋಕಾರ್ಪಣಾ ಕಾರ್ಯಕ್ರಮದ ಎರಡನೆಯ ದಿನವಾದ ಸೋಮವಾರ, ಜಿಲ್ಲಾ ಮಟ್ಟದ ಶರಣ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮದಲ್ಲಿ ಅತಿಥಿ ಸ್ಥಾನವಹಿಸಿ ಮಾತನಾಡಿದರು.   ‘ಬಾಗೇನಾಡಿನ ಹಾಲುಮತದ ಪ್ರಮುಖ ಐದು ದೈವಗಳಾದ ಆಲಖನೂರಿನ …

Read More »

ರೈತರಿಗಾಗಿ ಬೃಹತ್‌ ಗೋದಾಮು ಸಿದ್ಧ

ಮುನವಳ್ಳಿ: ‘ಸುತ್ತಲಿನ ಹಳ್ಳಿಗಳ ರೈತರ ಧಾನ್ಯ ಸಂಗ್ರಹಕ್ಕಾಗಿ ನಬಾರ್ಡ್‌ ನೆರವಿನೊಂದಿಗೆ ಗೋದಾಮು ನಿರ್ಮಿಸಲಾಗಿದೆ. ರೈತರು ಇದರ ಸದುಪಯೋಗ ಮಾಡಿಕೊಳ್ಳಬೇಕು’ ಎಂದು ಶಾಸಕ ಮಹಾದೇವಪ್ಪ ಯಾದವಾಡ ಹೇಳಿದರು. ಕಟಕೋಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸೇವಾ ಕೇಂದ್ರದಿಂದ ನಬಾರ್ಡ್‌ ಯೋಜನೆಯ ಅಡಿಯಲ್ಲಿ ನಿರ್ಮಿಸಲಾದ ತೋರಗಲ್, ಚುಂಚನೂರ, ತೊರನಗಟ್ಟಿ ಹಾಗೂ ಕಟಕೋಳ ಸಹಕಾರ ಸಂಘಗಳ ನೂತನ ಗೋದಾಮನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು.   ‘ಗೋದಾಮು ಇಲ್ಲದ ಕಾರಣ ರೈತರು ತಮ್ಮ …

Read More »

ಬೈಪಾಸ್ ರಸ್ತೆ ಅಭಿವೃದ್ಧಿ ಕಾರ್ಯಕ್ಕೆ ಈಗ ವಿದ್ಯುತ್ ಕಂಬಗಳೇ ಅಡ್ಡಿ

ಎಂ.ಕೆ.ಹುಬ್ಬಳ್ಳಿ: ಪಟ್ಟಣದ ಹೊರವಲಯದ ಬೈಪಾಸ್ ರಸ್ತೆ ಅಭಿವೃದ್ಧಿ ಕಾರ್ಯಕ್ಕೆ ಈಗ ವಿದ್ಯುತ್ ಕಂಬಗಳೇ ಅಡ್ಡಿಯಾಗಿವೆ. ಎರಡು ಇಲಾಖೆಗಳ ಅಧಿಕಾರಿಗಳ ನಡುವಿನ ತಿಕ್ಕಾಟದಲ್ಲಿ ಪ್ರಯಾಣಿಕರು ಪರದಾಡುವಂತಾಗಿದೆ. ಅಚ್ಚರಿಯೆಂದರೆ, ವಿದ್ಯುತ್‌ ಕಂಬಗಳು ರಸ್ತೆ ಮಧ್ಯದಲ್ಲೇ ಬರುತ್ತವೆ ಎಂದು ಗೊತ್ತಿದ್ದರೂ ರಸ್ತೆ ಸುಧಾರಣಾ ಕಾರ್ಯ ಶುರು ಮಾಡಲಾಗಿದೆ.   ‘ತಂದೆ- ತಾಯಿ ಜಗಳದಲ್ಲಿ ಕೂಸು ಬಡವಾಯಿತು’ ಎಂಬ ಗಾದೆ ಮಾತು ಈಗ ಪಟ್ಟಣದ ಜನರಿಗೆ ಅನ್ವಯಿಸುತ್ತಿದೆ. ಎಂ.ಕೆ.ಹುಬ್ಬಳ್ಳಿಯ ಬೈಪಾಸ್ ರಸ್ತೆ ಹಲವು ವರ್ಷಗಳಿಂದ ಹಾಳಾಗಿ, ಸಂಚಾರ …

Read More »

ಕವಿಯತ್ರಿಯರ ಸಮ್ಮೇಳನ ಸಂಪನ್ನ

ಬೆಳಗಾವಿ: ಇಲ್ಲಿನ ಶಿವಬಸವ ನಗರದ ಡಾ.ಎಸ್‌.ಜಿ. ಬಾಳೇಕುಂದ್ರಿ ತಾಂತ್ರಿಕ ಸಂಸ್ಥೆ ಸಭಾಂಗಣದಲ್ಲಿ ಮೂರು ದಿನಗಳ ಕಾಲ ನಡೆದ 22ನೇ ಅಖಿಲ ಭಾರತ ಕವಯತ್ರಿಯರ ಸಮ್ಮೇಳನ ಸೋಮವಾರ ಸಂಪನ್ನಗೊಂಡಿತು. ಪಂಜಾಬ್‌ನ ಅಮೃತಸರದಲ್ಲಿ 23ನೇ ಸಮ್ಮೇಳನ ನಡೆಸುವ ನಿರ್ಣಯ ಕೈಗೊಳ್ಳಲಾಯಿತು.   ಪದಾಧಿಕಾರಿಗಳ ಆಯ್ಕೆ: ಆಲ್‌ ಇಂಡಿಯಾ ಪೋಯಿಟ್‌ ಕಾನ್ಫರೆನ್ಸ್‌(ಎಐಪಿಸಿ) ರಾಷ್ಟ್ರೀಯ ಅಧ್ಯಕ್ಷೆಯಾಗಿ ಅಸ್ಸಾಂನ ಮೋನೋಮತಿ ಕುರಮಿ, ಉಪಾಧ್ಯಕ್ಷರಾಗಿ ವಿಜಯಲಕ್ಷ್ಮಿ ಕೋಸಗಿ, ಮಂಗಲಾ ಮೆಟಗುಡ್ಡ, ಜ್ಯೋತಿ ಬದಾಮಿ, ಡಾ.ಕೆ.ಪಿ.ಸುಧೀರಾ, ಮಹಾ ಪ್ರಧಾನ ಕಾರ್ಯದರ್ಶಿಯಾಗಿ ಡಾ.ಸರೋಜಾ …

Read More »

ಪಂಚಮಸಾಲಿ ಮೀಸಲಾತಿ: ಆಯೋಗದ ವರದಿ ಸಲ್ಲಿಸಲು ಸಮಯ ಕೇಳಿದ ಸರ್ಕಾರ

ಬೆಂಗಳೂರು: ಪಂಚಮಸಾಲಿ ಸಮುದಾಯವನ್ನು ಪ್ರವರ್ಗ-2ಎಗೆ ಸೇರ್ಪಡೆ ಮಾಡುವ ಕುರಿತ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಲ್ಲಿಸಿರುವ ಮಧ್ಯಂತರ ವರದಿಯನ್ನು ಫೆ.3ರಂದು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು ಎಂದು ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.   ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲು ನೀಡುವ ಸಂಬಂಧ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಇತ್ತೀಚೆಗೆ ಸಲ್ಲಿಸಿರುವ ಮಧ್ಯಂತರ ವರದಿಯನ್ನು ಕಾನೂನುಬಾಹಿರವೆಂದು ಆದೇಶಿಸುವಂತೆ ಕೋರಿ ಬೆಂಗಳೂರಿನ ಡಿ.ಜಿ. ರಾಘವೇಂದ್ರ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನ್ಯಾಯಮೂರ್ತಿ …

Read More »

ನಾಳೆಯ ಕೇಂದ್ರ ಬಜೆಟ್‌ನಲ್ಲಿ ನಮಗೇನು?

ಬಹುನಿರೀಕ್ಷಿತ ಕೇಂದ್ರ ಬಜೆಟನ್ನು ಫೆ. 1ರಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಮಂಡಿಸಲಿದ್ದಾರೆ. ಪ್ರಸಕ್ತ ವರ್ಷ ಕರ್ನಾಟಕ ಸಹಿತ 9 ರಾಜ್ಯಗಳ ಚುನಾವಣೆಗಳು ನಡೆಯಲಿವೆ. ಜತೆಗೆ ಮುಂದಿನ ವರ್ಷ ಲೋಕಸಭಾ ಚುನಾವಣೆಯೂ ಇದೆ. ವೇತನದಾರರಿಗೆ ವೈಯಕ್ತಿಕ ಆದಾಯ ತೆರಿಗೆಯಲ್ಲಿ ಅನುಕೂಲವಾಗಬಹುದೇ, ಗೃಹ ಸಾಲ ಪಡೆಯುವವರಿಗೇನು ಸಿಗಲಿದೆ ಎಂಬ ನಿರೀಕ್ಷೆ ಸಹಜ. ಇವೆಲ್ಲದಕ್ಕೆ ಪೂರಕವಾಗಿ ಜ. 31ರಂದು ಆರ್ಥಿಕ ಸಮೀಕ್ಷೆ ಮಂಡನೆಯಾಗಲಿದೆ. ಐ.ಟಿ. ವಿನಾಯಿತಿ 6 ಲಕ್ಷ ರೂ? ಆದಾಯ ತೆರಿಗೆ …

Read More »