ಗೋಕಾಕ: ನಮ್ಮ ದೇಶದ ಮತದಾರರನ್ನು ಸಬಲೀಕರಣ, ಜಾಗೃಕ, ಸುರಕ್ಷಿತ ಮತ್ತು ಮಾಹಿತಿದಾರರನ್ನಾಗಿ ಮಾಡುವುದು. ಚುನಾವಣೆಯ ಸಮಯದಲ್ಲಿ ದೇಶದ ಮತದಾರರ ಸಕ್ರಿಯ ಭಾಗವಹಿಸುವಿಕೆಯನ್ನು ಉತ್ತೇಜಿಸುವುದು ಹಾಗೂ ಜವಾಬ್ದಾರಿಯುರ ನಾಗರಿಕರಾಗಲು ಅವರಿಗೆ ಸಹಕರಿಸುವುದು ರಾಷ್ಟ್ರೀಯ ಮತದಾರರ ದಿನದ ಧ್ಯೇಯವಾಗಿದೆ ಎಂದು ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಮುರಳೀಧರ ದೇಶಪಾಂಡೆ ಹೇಳಿದರು. ಬುಧವಾರದಂದು ನಗರದ ಜೆಎಸ್‍ಎಸ್ ಕಾಲೇಜಿನಲ್ಲಿ ತಾಲೂಕಾಡಳಿತ, ತಾಪಂ, ನಗರಸಭೆ, ಶಿಕ್ಷಣ ಇಲಾಖೆ ಸೇರಿದಂತೆ ಇತರ ಇಲಾಖೆಗಳು ಆಶ್ರಯದಲ್ಲಿ ಹಮ್ಮಿಕೊಂಡ 13ನೇ ರಾಷ್ಟ್ರೀಯ ಮತದಾರರ …
Read More »Yearly Archives: 2023
ಮೂಡಲಗಿ ತಾಲ್ಲೂಕು ರಡ್ಡಿ ಸಮಾಜಕ್ಕೆ ೨೨ ಗುಂಟೆ ನಿವೇಶನ – ಶಾಸಕ ಬಾಲಚಂದ್ರ ಜಾರಕಿಹೊಳಿ*
*ಮೂಡಲಗಿ*: ಮೂಡಲಗಿ ತಾಲೂಕಿನ ರಡ್ಡಿ ಸಮಾಜ ಭಾಂದವರಿಗೆ ಸಮುದಾಯ ಭವನ ನಿರ್ಮಿಸಲು ಪುರಸಭೆಯಿಂದ 22 ಗುಂಟೆ ನಿವೇಶನ ನೀಡಲಾಗುವುದು ಎಂದು ಶಾಸಕ ಹಾಗೂ ಕೆ.ಎಮ್.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಭರವಸೆ ನೀಡಿದರು. ಬುಧವಾರದಂದು ಮೂಡಲಗಿ ಪಟ್ಟಣದ ಬಸವ ರಂಗ ಮಂಟಪದಲ್ಲಿ ತಾಲೂಕಾ ಮಟ್ಟದ ರಡ್ಡಿ ಬಳಗ ಹಮ್ಮಿಕೊಂಡಿದ್ದ ದಾರ್ಶನಿಕ ಕವಿ, ಮಹಾಯೋಗಿ ವೇಮನರ 611ನೇ ಜಯಂತ್ಯುತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಮಾಜ ಬಾಂಧವರು ಈ ಸಮುದಾಯ …
Read More »ಗೋಕಾಕ : ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ.!
ಗೋಕಾಕ : ಗೋಕಾಕ ತಾಲೂಕಿನ ವಾಲ್ಮೀಕಿ ನಗರದಲ್ಲಿ ಕುಡಿದ ಅಮಲಿನಲ್ಲಿ ಅಣ್ಣ ತಮ್ಮಂದಿರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಕುಡಿದ ಅಮಲಿನಲ್ಲಿ ತಿಲಕ ಎಂಬಾತ ಚೇತನ ಎಂಬ ಯುವಕನನ್ನು ಕೊಲೆ ಮಾಡಿದ್ದಾನೆ. ಗೋಕಾಕ ಫಾಲ್ಸ್ ನ ಸಮೀಪವಿರುವ ವಾಲ್ಮೀಕಿ ನಗರದಲ್ಲಿ ಇಬ್ಬರು ಒಂದೇ ಮನೆಯಲ್ಲಿ ವಾಸವಾಗಿದ್ದರು. ಇಬ್ಬರು ಕುಡಿದ ಅಮಲಿನಲ್ಲಿ ಜಗಳ ಮಾಡಿಕೊಂಡಿದ್ದಾರೆ. ಈ ವೇಳೆ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ಗೋಕಾಕ ಗ್ರಾಮೀಣ ಪೊಲೀಸ್ …
Read More »ಕ್ರಿಕೆಟ್ ಆಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ*
*ಕ್ರಿಕೆಟ್ ಆಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ* *ನಾಗನೂರ*- ನಾಗನೂರ ಪ್ರಿಮಿಯರ್ ಲೀಗ್ ಏರ್ಪಡಿಸಿದ್ದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕ್ರಿಕೆಟ್ ಆಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮೊದಲಿಂದಲೂ ಕ್ರಿಕೆಟ್ ಬಗ್ಗೆ ಅಪಾರ ಅಭಿಮಾನವನ್ನು ಜೊತೆಗೆ ಕ್ರಿಕೆಟ್ ಆಟಗಾರರಾಗಿರುವ ಬಾಲಚಂದ್ರ ಜಾರಕಿಹೊಳಿ ಅವರು ಅಭಿಮಾನಿಗಳ ಒತ್ತಾಯದ ಮೇರೆಗೆ ಬ್ಯಾಟಿಂಗ್ ಮಾಡುವ ಮೂಲಕ ನೆರೆದ ಸಭಿಕರನ್ನು ರಂಜಿಸಿದರು. ಹಿರಿಯ ಸಹಕಾರಿ ಬಿ.ಆರ್. ಪಾಟೀಲ ಹಾಗೂ ಮಾಜಿ ಸಚಿವ ಆರ್. …
Read More »10 ದಿನಗಳಲ್ಲಿ ಸಿದ್ಧಗೊಂಡ ಕರ್ನಾಟಕದ ಸ್ತಬ್ಧಚಿತ್ರ ‘ನಾರಿ ಶಕ್ತಿ’
ನವದೆಹಲಿ: ಗಣರಾಜ್ಯೋತ್ಸವ ಪಥ ಸಂಚಲನದಲ್ಲಿ ಕರ್ನಾಟಕದ ಪರವಾಗಿ ಪಾಲ್ಗೊಳ್ಳಲಿರುವ ‘ನಾರಿ ಶಕ್ತಿ ಸ್ತಬ್ಧಚಿತ್ರವು 10 ದಿನಗಳಲ್ಲಿ ಸಂಪೂರ್ಣವಾಗಿ ಸಿದ್ಧಗೊಂಡಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಪಿ.ಎಸ್. ಹರ್ಷ ತಿಳಿಸಿದರು. ಮಂಗಳವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸ್ತ್ರೀ ಸಬಲೀಕರಣವನ್ನು ಪ್ರತಿಬಿಂಬಿಸುವ ಸ್ತಬ್ಧಚಿತ್ರವು ಜನವರಿ 26ರಂದು ರಾಜಧಾನಿಯ ಕರ್ತವ್ಯ ಪಥದಲ್ಲಿ ಸಾಗುವುದರೊಂದಿಗೆ ಕರ್ನಾಟಕದ ಹಿರಿಮೆಯ ಕೀರ್ತಿ ಪತಾಕೆಯನ್ನು ಹಾರಿಸಲಿದೆ. ಇದರೊಂದಿಗೆ ಸತತವಾಗಿ 14 ವರ್ಷಗಳಿಂದ ಸ್ತಬ್ಧಚಿತ್ರದೊಂದಿಗೆ ಪಾಲ್ಗೊಂಡ …
Read More »ಕೊಲಿಜಿಯಂನಲ್ಲಿ ಸರ್ಕಾರದ ಹಸ್ತಕ್ಷೇಪ ದುರುದ್ದೇಶಪೂರಿತ: ನ್ಯಾ. ಸಂತೋಷ್ ಹೆಗ್ಡೆ
ಮೈಸೂರು: ‘ನ್ಯಾಯಮೂರ್ತಿಗಳ ನೇಮಕಾತಿ ವ್ಯವಸ್ಥೆ ‘ಕೊಲಿಜಿಯಂ’ನಲ್ಲಿ ತನ್ನ ಪ್ರತಿನಿಧಿ ಇರಬೇಕು ಎನ್ನುವ ಕೇಂದ್ರ ಸರ್ಕಾರದ ನಿಲುವಿನಲ್ಲಿ ದುರುದ್ದೇಶವಿದೆ’ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಆಕ್ರೋಶ ವ್ಯಕ್ತಪಡಿಸಿದರು. ‘ನ್ಯಾಯಾಂಗವನ್ನು ಹಿಡಿತದಲ್ಲಿಡಲು ಬಯಸುವವರು ಕೊಲಿಜಿಯಂ ಅನ್ನು ವಿರೋಧಿಸುವ ಮೂಲಕವೇ ನಿಯಂತ್ರಿಸುವುದಕ್ಕೆ ಪ್ರಯತ್ನಿಸುತ್ತಿದ್ದಾರೆ. ಇಂತಹ ಅಪಾಯಕಾರಿ ನಡೆ ಖಂಡನೀಯ’ ಎಂದು ಮಂಗಳವಾರ ಮಾಧ್ಯಮ ಸಂವಾದದಲ್ಲಿ ಪ್ರತಿಪಾದಿಸಿದರು. ‘ನ್ಯಾಯಾಂಗದಲ್ಲೂ ನ್ಯೂನತೆಗಳಿದ್ದು, ಸುಧಾರಣೆಯಾಗಬೇಕು. ಆದರೆ ಹೊರಗಿನವರಿಗೆ ಲಗಾಮು ನೀಡಬೇಕು ಎನ್ನುವ ಸರ್ಕಾರದ ಯೋಜನೆ ನ್ಯಾಯಾಂಗದ …
Read More »ಗ್ರಾಮದಲ್ಲಿ ಸೂಕ್ತ ರಸ್ತೆ ಹಾಗೂ ಚರಂಡಿ ಇಲ್ಲದ ಕಾರಣ ಜನ ತೊಂದರೆ
ಸಾಂಬ್ರಾ: ಸಮೀಪದ ಸುಳೇಭಾವಿ ಗ್ರಾಮದಲ್ಲಿ ಅಭಿವೃದ್ಧಿ ಕಾಮಗಾರಿಗಳು ಆಮೆಗತಿಯಲ್ಲಿ ಸಾಗುತ್ತಿವೆ. ಇನ್ನು ಕೆಲವು ಶಿಲ್ಕು ಬಿದ್ದಿವೆ. ಇದಕ್ಕೆ ನಿದರ್ಶನವೆಂದರೆ ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರ, ರಸ್ತೆ ಹಾಗೂ ಚರಂಡಿ ಕಾಮಗಾರಿಗಳು. ಗ್ರಾಮದಲ್ಲಿ ಸೂಕ್ತ ರಸ್ತೆ ಹಾಗೂ ಚರಂಡಿ ಇಲ್ಲದ ಕಾರಣ ಜನ ತೊಂದರೆ ಅನುಭವಿಸುವಂತಾಗಿದೆ. ಕೆಲವು ಕಡೆ ಗ್ರಾಮ ಪಂಚಾಯಿತಿ ಅನುದಾನದಲ್ಲಿ ಚರಂಡಿ ಕಾಮಗಾರಿ ಆರಂಭಿಸಲಾಗಿದೆ. ವರ್ಷಗಳು ಕಳೆದರೂ ಅವು ಮುಗಿದಿಲ್ಲ. ಇದರಿಂದ ಮಳೆಗಾಲದಲ್ಲಿ ಚರಂಡಿ ಎಲ್ಲೆಂದರಲ್ಲಿ ಕಟ್ಟಿಕೊಂಡು ಜನ …
Read More »ಚಿಕ್ಕೋಡಿ: ಲಂಚ ಪಡೆಯುವ ವೇಳೆ ಸಿಕ್ಕಿಬಿದ್ದ ಉಪನೋಂದಣಾಧಿಕಾರಿ
ಚಿಕ್ಕೋಡಿ (ಬೆಳಗಾವಿ ಜಿಲ್ಲೆ): ಜಮೀನು ಖರೀದಿಯ ನೋಂದಣಿ ಮಾಡಿಕೊಡಲು ₹30 ಸಾವಿರ ಲಂಚ ತೆಗೆದುಕೊಳ್ಳುತ್ತಿದ್ದ ಚಿಕ್ಕೋಡಿ ಉಪನೋಂದಣಾಧಿಕಾರಿ ಜಿ.ಪಿ. ಶಿವರಾಜು, ಮಂಗಳವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಮಹಾರಾಷ್ಟ್ರದ ಇಚಲಕರಂಜಿಯ ರಾಜು ಲಕ್ಷ್ಮಣ ಪಾಚ್ಚಾಪುರೆ ಎನ್ನುವವರು ಚಿಕ್ಕೋಡಿ ತಾಲ್ಲೂಕಿನ ಡೊಣೆವಾಡ ಗ್ರಾಮದಲ್ಲಿ ಜಮೀನು ಖರೀದಿಸಿದ್ದರು. ನೋಂದಣಿ ಶುಲ್ಕ, ಮುದ್ರಾಂಕ ಶುಲ್ಕವೂ ಸೇರಿದಂತೆ ಎಲ್ಲವನ್ನು ತುಂಬಿದ್ದರು. ಆದರೆ, ಜಮೀನನ್ನು ಅವರ ಹೆಸರಿಗೆ ಮಾಡಿಕೊಡಲು ಉಪನೋಂದಣಾಧಿಕಾರಿ ₹ 30 ಸಾವಿರ ಲಂಚ ಕೇಳಿದ್ದರು. ಈ …
Read More »ಖಾನಾಪುರ: ವೃದ್ಧೆಗೆ ನ್ಯುಮೋನಿಯಾ- ಜಿಲ್ಲಾಸ್ಪತ್ರೆಗೆ ದಾಖಲು
ಖಾನಾಪುರ ತಾಲ್ಲೂಕಿನ ನಾವಗಾ ಹೊರವಲಯದ ಅರಣ್ಯದಲ್ಲಿ ಸೋಮವಾರ ಪತ್ತೆಯಾದ 90 ವರ್ಷದ ವೃದ್ಧೆ ನ್ಯುಮೋನಿಯಾದಿಂದ ಬಳಲುತ್ತಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ಸೇರಿಸಲಾಗಿದೆ. ‘ತೀವ್ರ ನಿತ್ರಾಣಗೊಂಡ ಅಜ್ಜಿ ಸರಿಯಾಗಿ ಮಾತನಾಡುವಷ್ಟು ಚೇತರಿಸಿಕೊಂಡಿಲ್ಲ. ತನ್ನ ಹೆಸರು ಅಂಬವ್ವ ಕಾಟಗಾರಿ, ಊರಿನ ಹೆಸರು ಉಗರಖೋಡ ಎಂದಷ್ಟೇ ಹೇಳಿದ್ದಾರೆ. ಅವರ ಗುರುತು ಪತ್ತೆಗೆ ಯತ್ನ ನಡೆದಿದೆ’ ಎಂದು ಪೊಲೀಸರು ತಿಳಿಸಿದ್ದಾರೆ. ‘ನಾಲ್ಕೈದು ದಿನಗಳಿಂದ ಅನ್ನ-ನೀರು ಸೇವಿಸದೇ ಚಳಿಯಲ್ಲಿ ಬಿದ್ದಿದ್ದರಿಂದ ಅಜ್ಜಿ ದೇಹ …
Read More »ಛತ್ರಪತಿ ಶಿವಾಜಿ, ಹಿಂದೂ ದೇವತೆಗಳ ಅಶ್ಲೀಲ ಚಿತ್ರಣ: ಜಾಲತಾಣದಲ್ಲಿ ಪೋಸ್ಟ್
ಬೆಳಗಾವಿ: ಛತ್ರಪತಿ ಶಿವಾಜಿ ಹಾಗೂ ಹಿಂದೂ ದೇವತೆಗಳ ಚಿತ್ರಗಳಿಗೆ ಅಶ್ಲೀಲ ಚಿತ್ರಗಳನ್ನು ಅಂಟಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿದೆ. ಈ ಚಿತ್ರಗಳು ಮಂಗಳವಾರ ನಗರದ ಹಲವರ ಮೊಬೈಲ್‌ಗಳಿಗೂ ಬಂದಿವೆ. ಸಾಮಾಜಿಕ ಜಾಲತಾಣಗಳಲ್ಲಿ ಇಸ್ಲಾಮ್ ಜಿಂದಾಬಾದ್ 786, ಕಿಂಗ್ ಕಿ ಜಾನ್, ಇಟ್ಸ್ ಅರ್ಮಾನ್ ಟೈಗರ್, ಆರ್.ಎಕ್ಸ್.ಇಮ್ರಾನ್, ಪ್ರಸಾದ್… ಎಂಬ ಹೆಸರಿನ ಖಾತೆಗಳಲ್ಲಿ ಈ ಪೋಸ್ಟರ್‌ಗಳು ಅಪ್ಲೋಡ್ ಆಗಿವೆ. ಕೆಲವು ಎರಡು ದಿನಗಳ ಹಿಂದೆ ಅಪ್ಲೋಡ್ ಮಾಡಿದ್ದು, ಇನ್ನು ಕೆಲವನ್ನು ಮಂಗಳವಾರವೇ ಹಾಕಲಾಗಿದೆ. ಈ …
Read More »