ದೆಹಲಿ : ಇಂದಿನ ಆಧುನಿಕ ಯುಗದಲ್ಲಿ ತಂತ್ರಗಳು ಮತ್ತು ಯಂತ್ರಗಳ ಬಳಕೆಯಿಂದ ಪ್ರತಿಯೊಂದು ಕೆಲಸವೂ ನಿಮಿಷಗಳಲ್ಲಿ ಮುಗಿಯುತ್ತದೆ. ಈ ಕಾರಣದಿಂದಲೇ ಈಗ ಕೃಷಿಯಲ್ಲೂ ಯಾಂತ್ರೀಕರಣಕ್ಕೆ ಉತ್ತೇಜನ ಸಿಕ್ಕಿದೆ. ಪ್ರತಿಯೊಂದು ರೀತಿಯ ಕೃಷಿ ಕೆಲಸಗಳಿಗೆ ಯಂತ್ರಗಳು ಮತ್ತು ತಂತ್ರಗಳನ್ನ ಕಂಡುಹಿಡಿಯಲಾಗುತ್ತಿದೆ. ಏತನ್ಮಧ್ಯೆ, ಬೆಳೆಗೆ ಸಿಂಪಡಿಸಲು ಮತ್ತು ಮೇಲ್ವಿಚಾರಣೆಗಾಗಿ ಕೃಷಿ ಡ್ರೋನ್ಗಳ ಬಳಕೆಯನ್ನ ಉತ್ತೇಜಿಸಲಾಗುತ್ತಿದೆ. 31 ಮಾರ್ಚ್ 2023 ರ ವೇಳೆಗೆ ಸುಮಾರು 5,000 ಡ್ರೋನ್ಗಳನ್ನ ಲಭ್ಯಗೊಳಿಸುವುದು ಗುರಿಯಾಗಿದೆ. ಕಿಸಾನ್ ಪುಷ್ಕರ್ ಯೋಜನೆಯಡಿ, …
Read More »Yearly Archives: 2023
ಕೇಂದ್ರ ಸರ್ಕಾರದ ಅಂಗಳಕ್ಕೆ ಪಂಚಮಸಾಲಿ ಮೀಸಲಾತಿ ವಿಚಾರ: ಜೆ.ಪಿ.ನಡ್ಡಾ ಜತೆ ಚರ್ಚೆ ಸಾಧ್ಯತೆ
ಬೆಂಗಳೂರು: ರಾಜ್ಯ ಸರ್ಕಾರದ ಮೇಲೆ ತೀವ್ರ ಒತ್ತಡ ಸೃಷ್ಟಿಸಿರುವ ಪಂಚಮಸಾಲಿ ಸಮುದಾಯದ ಮೀಸಲಾತಿ ವಿಚಾರ ಇದೀಗ ಕೇಂದ್ರ ಸರ್ಕಾರದ ಅಂಗಳಕ್ಕೆ ತಲುಪಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಜ.19ರಂದು ವಿಜಯಪುರಕ್ಕೆ ಆಗಮಿಸಲಿದ್ದು, ಈ ವೇಳೆ ಮೀಸಲಾತಿ ವಿಚಾರದ ಬಗ್ಗೆ ಮಾಜಿ ಸಚಿವ ಬಸನಗೌಡ ಪಾಟೀಲ ಯತ್ನಾಳ ಸೇರಿ ಸಮುದಾಯದ ಪ್ರಮುಖ ಮುಖಂಡರ ಜತೆ ಚರ್ಚಿಸುವ ಸಾಧ್ಯತೆ ಇದೆ. ಇಲ್ಲವಾದರೆ, ಕೂಡಲಸಂಗಮ ಪೀಠದ ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ಸೇರಿ ಸಮುದಾಯದ …
Read More »ಬ್ರ್ಯಾಂಚ್ ಕೆನಾಲ್‌ಗೆ ನೀರು; ರೈತರಲ್ಲಿ ಸಂತಸ
ಚಿಕ್ಕೋಡಿ: ಕಸ ಕಡ್ಡಿಯಿಂದ ಹೂಳು ತುಂಬಿಕೊಂಡು ನೀರು ಸೋರಿಕೆಯಾಗುತ್ತಿದ್ದ ಚಿಕ್ಕೋಡಿ ಸಿಬಿಸಿ ಕಾಲುವೆ ಸದ್ಯ ಸಂಪೂರ್ಣ ದುರಸ್ತಿಗೊಂಡಿದೆ. ಇದರಿಂದ ಕೊನೆ ಹಳ್ಳಿಯ ತನಕ ನೀರು ತಲುಪುತ್ತದೆ ಎನ್ನುವ ಆಶಾಭಾವನೆ ರೈತರಲ್ಲಿ ಮೂಡಿದೆ. ಚಿಕ್ಕೋಡಿ ಸಿಬಿಸಿ ಕಾಲುವೆಯಲ್ಲಿ ಕಸ, ಕಡ್ಡಿ ಹಾಗೂ ಕಾಲುವೆಗೆ ಬರುವ ನೀರು ಸೋರಿಕೆಯಿಂದ ರೈತರಿಗೆ ಸಮರ್ಪಕ ನೀರು ತಲುಪುತ್ತಿರಲಿಲ್ಲ. ನೀರಾವರಿ ಇಲಾಖೆಗೆ ಹಲವು ಬಾರಿ ಮನವಿ ಮಾಡಿ ರೈತರು ಕೂಡ ಬೇಸತ್ತು ಹೋಗಿದ್ದರು. ಈಗ ಪರಿಷತ್ ಸದಸ್ಯ ಪ್ರಕಾಶ …
Read More »ಬೆಳಗಾವಿ: ಕನ್ನಡಕ್ಕಾಗಿ ಬದುಕು ತೇಯ್ದ ಡಾ| ಕರ್ಕಿ
ಬೆಳಗಾವಿ: ನಾಡಿನ ಖ್ಯಾತ ಸಾಹಿತಿ ಡಾ. ಡಿ. ಎಸ್. ಕರ್ಕಿಯವರಿಗೆ ಇದುವರೆಗೆ ಯಾವ ಪ್ರಶಸ್ತಿಯನ್ನೂ ನೀಡಿಲ್ಲ, ಈಗ ಮರಣೋತ್ತರವಾದರೂ ಅವರಿಗೆ ಪಂಪ ಪ್ರಶಸ್ತಿ ನೀಡಬೇಕು ಎಂದು ಜಾನಪದ ವಿದ್ವಾಂಸರಾದ ಡಾ| ಬಸವರಾಜ ಜಗಜಂಪಿ ಆಗ್ರಹಿಸಿದರು. ಎಸ್. ಜಿ. ಬಾಳೇಕುಂದ್ರಿ ತಾಂತ್ರಿಕ ಮಹಾವಿದ್ಯಾಲಯದ ಸಭಾಗೃಹದಲ್ಲಿ ರವಿವಾರ ಡಾ. ಡಿ. ಎಸ್. ಕರ್ಕಿ ಪ್ರತಿ,ಷ್ಠಾನದ ವತಿಯಿಂದ ಹಮ್ಮಿಕೊಂಡಿದ್ದ ಡಾ. ಡಿ. ಎಸ್. ಕರ್ಕಿಯವರ 115ನೇ ಜನ್ಮ ದಿನೋತ್ಸವ ಹಾಗೂ ರಾಜ್ಯ ಮಟ್ಟದ ಕಾವ್ಯ ಪ್ರಶಸ್ತಿ …
Read More »ಸೇವ್ ಮಹದಾಯಿ..; ಗೋವಾ ವಿಧಾನಸಭೆಯಲ್ಲಿ ಪ್ರತಿಪಕ್ಷಗಳಿಂದ ಕೋಲಾಹಲ
ಪಣಜಿ: ಗೋವಾ ವಿಧಾನಸಭೆಯಲ್ಲಿ ಸೋಮವಾರ ಬೆಳಗ್ಗೆ ರಾಜ್ಯಪಾಲರ ಭಾಷಣದ ವೇಳೆ ಪ್ರತಿಪಕ್ಷಗಳಿಂದ ಗದ್ದಲ ಉಂಟಾಯಿತು. ಇದರ ನಂತರ, ಮಾರ್ಷಲ್‍ಗಳು ಧರಣಿ ನಿರತ ವಿರೋಧ ಪಕ್ಷದ ಶಾಸಕರನ್ನು ಸಭಾಂಗಣದಿಂದ ಹೊರಕ್ಕೆ ಕರೆದೊಯ್ದರು. ಪ್ರತಿಪಕ್ಷದ ಶಾಸಕರು ”ಸೇವ್ ಮಹದಾಯಿ ಸೇವ್ ಗೋವಾ” ಬ್ಯಾನರ್ ಗಳೊಂದಿಗೆ ಸದನದ ಬಾವಿಗಿಳಿದು ಬಂದು ಘೋಷಣೆಗಳನ್ನು ಕೂಗಲು ಪ್ರಾರಂಭಿಸಿದರು. ಮಹದಾಯಿ ಸಮಸ್ಯೆ ಮತ್ತು ಇತರ ವಿಷಯಗಳ ಕುರಿತು ಪ್ರತಿಪಕ್ಷಗಳು ಸರ್ಕಾರವನ್ನು ಸುತ್ತುವರಿಯಲು ಸಿದ್ಧವಾಗಿವೆ ಮತ್ತು ಸೋಮವಾರದಿಂದ ಪ್ರಾರಂಭಗೊಂಡಿರುವ ನಾಲ್ಕು …
Read More »ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪ್ರತಿ ಮನೆಯ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ರೂ.!
ಬೆಂಗಳೂರು: ವಿಧಾನಸಭೆ ಚುನಾವಣೆಯನ್ನು ಗುರಿಯಾಗಿಸಿ, ಮಹಿಳೆಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಆಯೋಜಿಸಿರುವ ‘ನಾ ನಾಯಕಿ’ ಕಾರ್ಯಕ್ರಮದಲ್ಲಿ ಪ್ರತಿ ಮನೆಯ ಗೃಹಿಣಿಗೆ ‘ಗೃಹ ಲಕ್ಷ್ಮಿ’ ಯೋಜನೆಯನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಬಿಡುಗಡೆ ಮಾಡಿದ್ದಾರೆ. ರಾಜ್ಯದಲ್ಲಿ ಮಹಿಳೆಯರ ಸಬಲೀಕರಣಕ್ಕೆ ಅಗತ್ಯ ಯೋಜನೆಗಳನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಮಹಿಳೆಯರಿಗಾಗಿ ಪ್ರತ್ಯೇಕ ಪ್ರಣಾಳಿಕೆಯನ್ನು ಘೋಷಣೆ ಮಾಡಲು ರಾಜ್ಯ ಕಾಂಗ್ರೆಸ್ ತೀರ್ಮಾನಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ …
Read More »ಯತ್ನಾಳ್ಗೆ ಬಿಜೆಪಿಯ ಕೇಂದ್ರ ಶಿಸ್ತು ಸಮಿತಿಯಿಂದ ನೋಟಿಸ್
ಬೆಂಗಳೂರು: ಪಂಚಮಸಾಲಿ ಮೀಸಲಾತಿ ವಿಚಾರದಲ್ಲಿ ಬಿಜೆಪಿ ಸಚಿವ ಮುರುಗೇಶ್ ನಿರಾಣಿ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನಡುವೆ ವಾಕ್ಸಮರ ತಾರಕಕ್ಕೇರಿತ್ತು. ಇಬ್ಬರು ನಾಯಕರ ನಡುವೆ ಸಾಕಷ್ಟು ಟೀಕೆ, ಆರೋಪ-ಪ್ರತ್ಯಾರೋಪಗಳಿಗೆ ಕಾರಣವಾಗಿತ್ತು. ಇದು ಬಿಜೆಪಿ ಸರ್ಕಾರಕ್ಕೆ ಮುಜುಗರವನ್ನೂ ತಂದಿತ್ತು. ಇದೀಗ ಮುರುಗೇಶ್ ನಿರಾಣಿ ಸೇರಿದಂತೆ ಮುಖ್ಯಮಂತ್ರಿ, ಸಚಿವರು ಸೇರಿದಂತೆ ಪಕ್ಷದ ಹಿರಿಯ ನಾಯಕರ ವಿರುದ್ಧ ಸಾರ್ವಜನಿಕವಾಗಿ ಮುಜುಗರ ತರುವಂತಹ ಟೀಕೆ ಮಾಡುತ್ತಾ ಬಂದಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ಗೆ ಕೇಂದ್ರ ಶಿಸ್ತು …
Read More »ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ ಪಂಚಮಸಾಲಿ ಹೋರಾಟ; ಸಿಎಂ ಬೊಮ್ಮಾಯಿ ಮೋಸ ಮಾಡಿದ್ದಾರೆ ಎಂದು ಕಿಡಿ!
ಬೆಂಗಳೂರು: ಇಂದು ಕೂಡ ಫ್ರೀಡಂ ಪಾರ್ಕ್ನಲ್ಲಿ ಪಂಚಮಸಾಲಿ ಮೀಸಲಾತಿ ಕೂಗು ಕೇಳಿಬರುತ್ತಿದ್ದು ಮತ್ತೊಮ್ಮೆ ಮೀಸಲಾತಿ ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಪಂಚಮಸಾಲಿ ಸಮುದಾಯವನ್ನು ಪ್ರವರ್ಗ 2ಎಗೆ ಸೇರ್ಪಡೆ ಮಾಡುವಂತೆ ಆಗ್ರಹಿಸಿ ಮುಂದುವರಿದ ಧರಣಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧ ಸಮುದಾಯದ ಜನರು, ಸ್ವಾಮೀಜಿ ಆಕ್ರೋಶ ವ್ಯಕ್ತಪಡಿಸುತ್ತಿದ್ದು ಮೀಸಲಾತಿ ಸಿಗುವರೆಗೂ ಹೋರಾಟ ಮಾಡುವುದಾಗಿ ಸರ್ಕಾರಕ್ಕೆ ಯತ್ನಾಳ್ ಎಚ್ಚರಿಕೆ ಕೂಡ ನೀಡಿದ್ದಾರೆ. ಇಂದಿನ ಪ್ರತಿಭಟನೆಯಲ್ಲಿ ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ ಕೂಡ ಭಾಗವಹಿಸುವ …
Read More »5ಜಿ ಕಾಲದಲ್ಲೂ ಹಿಂಡಲಗಾ ಜೈಲಿನಲ್ಲಿ 2ಜಿ ಜಾಮರ್!
ಬೆಳಗಾವಿ: 5G ಕಾಲಕ್ಕೆ ನಾವೆಲ್ಲ ಬಂದಿದ್ದರೂ, ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಮಾತ್ರ ಇನ್ನೂ 2ಜಿ ಜಾಮರ್ ಕಾರ್ಯನಿರ್ವಹಿಸುತ್ತಿದೆ. ತಂತ್ರಜ್ಞಾನ ಅಪ್ಡೇಟ್ ಮಾಡದ ಕಾರಣ ಖೈದಿಗಳು ಅಕ್ರಮ ಚಟುವಟಿಕೆಯಲ್ಲಿ ಹೆಚ್ಚಾಗಿ ತೊಡಗಿಕೊಂಡಿದ್ದಾರೆ. ಹಿಂಡಲಗಾ ಜೈಲಿನಿಂದ ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಜೀವ ಬೆದರಿಕೆ ಕರೆ ಹೋದ ಹಿನ್ನೆಲೆಯಲ್ಲಿ ತನಿಖೆ ನಡೆದಾಗ ಈ ಸ್ಫೋಟಕ ಮಾಹಿತಿ ಹೊರಬಿದ್ದು ಎಲ್ಲರನ್ನೂ ಆಶ್ಚರ್ಯಕ್ಕೆ ಈಡು ಮಾಡಿದೆ. ಜೈಲಿನಿಂದಲೇ ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಮಂಗಳೂರು ಮೂಲದ …
Read More »ರಾಜ್ಯಕ್ಕೆ ಪ್ರಿಯಾಂಕಾ ಗಾಂಧಿ ಆಗಮನ; ಕಾಂಗ್ರೆಸ್ನಿಂದ ಭರ್ಜರಿ ಘೋಷಣೆ ಸಾಧ್ಯತೆ
ಬೆಂಗಳೂರು: ಚುನಾವಣೆ ಹತ್ತಿರ ಬರುತ್ತಿದ್ದಂತೆಯೇ ಕಾಂಗ್ರೆಸ್ ಈಗ ಯೋಜನೆಗಳ ಮಹಾಪೂರವನ್ನೇ ಹರಿಸಲು ಮುಂದಾಗಿದೆ ಎನ್ನಲಾಗುತ್ತಿದೆ. ಈಗಾಗಲೇ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಪ್ರತೀ ಮನೆಗೂ 200 ಯೂನಿಟ್ ವಿದ್ಯುತ್ಅನ್ನು ಉಚಿತವಾಗಿ ನೀಡುವ ಬಗ್ಗೆ ಘೋಷಣೆ ಮಾಡಿದೆ. ಇದೀಗ ಪ್ರಿಯಾಂಕಾ ಗಾಂಧಿ ರಾಜ್ಯಕ್ಕೆ ಭೇಟಿ ನೀಡಲಿದ್ದು ಈ ಹಿನ್ನೆಲೆಯಲ್ಲಿ ಭರ್ಜರಿ ಘೋಷಣೆಗಳನ್ನು ಮಾಡಲು ಕಾಂಗ್ರೆಸ್ ಸಿದ್ಧವಾಗಿದೆ. ವಿಶೇಷವಾಗಿ ಮಹಿಳೆಯರಿಗೆ ಹಲವು ಯೋಜನೆ ಘೋಷಣೆ ಮಾಡಲು ಸಿದ್ಧವಾಗಿರುವ ಕಾಂಗ್ರೆಸ್ ಪ್ರಿಯಾಂಕಾ ಗಾಂಧಿ ರಾಜ್ಯಕ್ಕೆ ಬಂದ …
Read More »