ಬೆಂಗಳೂರು : ಮುಂದಿನ ವಿಧಾನ ಸಭೆ ಚುನಾವಣೆ ಹಿನ್ನೆಲೆ ಸಂಕ್ರಾಂತಿ ಹಬ್ಬಕ್ಕೆ ಭರ್ಜರಿ ಗಿಫ್ಟ್ ಪಾಲಿಟಿಕ್ಸ್ ಶುರುವಾಗಿದ್ದು, ಮನೆಮನೆಗಳಿಗೆ ಸಿವಿ ರಾಮನ್ ನಗರದಲ್ಲಿ ಸ್ಥಳೀಯ ಶಾಸಕ ರಘು ಜನ್ರಿಗೆ ತಟ್ಟೆ, ಲೋಟ, ಸ್ಪೂನ್ ನೀಡಲಾಗಿದೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ. ಸಿಲಿಕಾನ್ ಸಿಟಿಯ ಕೆಲ ಭಾಗಗಳಲ್ಲಿ ರಾಜಕೀಯ ನಾಯಕರು ಚುನಾವಣೆಗಾಗಿ ಸಕಲ ಸಿದ್ದತೆಯಲ್ಲಿ ತೊಡಗಿದ್ದು, ಜನರಿಗೆ ಗಿಫ್ಟ್ ನೀಡುವ ಮೂಲಕ ಮತ ಪಡೆಯೋದಕ್ಕೆ ಮುಂದಾಗಿದ್ದಾರೆ. ಅದರಲ್ಲೂ …
Read More »Yearly Archives: 2023
ಜನಾರ್ದನ ರೆಡ್ಡಿ ವಿರುದ್ಧ ಸ್ಪರ್ಧೆಗೆ ಸಿದ್ಧ: ಸೋಮಶೇಖರ್ ರೆಡ್ಡಿ
ಬಳ್ಳಾರಿ: ಹೊಸ ಪಕ್ಷವನ್ನು ಸ್ಥಾಪಿಸಿರುವ ಜನಾರ್ದನ ರೆಡ್ಡಿ ವಿರುದ್ಧವೇ ಅವರ ಸಹೋದರ ಸೋಮಶೇಖರ ರೆಡ್ಡಿ ಅವರು ಅಸಮಾಧಾನ ಹೊರ ಹಾಕಿದ್ದಾರೆ(Karnataka Election). ಪಕ್ಷ ಕಟ್ಟುವುದು ಬೇಡವೆಂದರೂ ಕೇಳಲಿಲ್ಲ ನಮ್ಮ ಸಹೋದರ. ಪಕ್ಷ ಕಟ್ಟಿರುವುದಕ್ಕೆ ಏನು ಮಾಡುವುದಕ್ಕೆ ಆಗುತ್ತದೆ. ಬಳ್ಳಾರಿ ನಗರ ಕ್ಷೇತ್ರದಿಂದ ಬಿಜೆಪಿಯಿಂದ ನಾನು ಸ್ಪರ್ಧಿಸುವುದು ನಿಶ್ಚಿತ. ಜನಾರ್ದನ ರೆಡ್ಡಿ ಬಂದು ನಿಂತರೂ ನಾನು ಸ್ಪರ್ಧಿಸುತ್ತೇನೆ, ಇದಕ್ಕಿಂತ ನಾನು ಇನ್ನೇನು ಹೇಳಬೇಕು ಎಂದು ಅವರು ಕೇಳಿದ್ದಾರೆ. ಯಾವತ್ತಿಗೂ ಬಿಜೆಪಿ ಪಾರ್ಟಿ ಬಿಡುವುದಿಲ್ಲ, …
Read More »ಹಿಂಡಲಗಾ ಕೈದಿ ಕೇಂದ್ರ ಸಚಿವರಿಗೆ ಕೊಲೆ ಮಾಡುವುದಾಗಿ ಜೀವ ಬೆದರಿಕೆ
ಬೆಳಗಾವಿ: ಬೆಳಗಾವಿಯ ಹಿಂಡಲಗಾ ಸೆಂಟ್ರಲ್ ಜೈಲಿನ ಕೈದಿಯಿಂದಲೇ ಶನಿವಾರ ಬೆಳಗ್ಗೆ ನಿತಿನ್ ಗಡ್ಕರಿಗೆ ಕರೆ ಮಾಡಿ, ಬಾಂಬ್ ಇಟ್ಟು ಕೊಲೆ ಮಾಡುವುದಾಗಿ ಜೀವ ಬೆದರಿಕೆ ಹಾಕಿದ ಘಟನೆ ನಡೆದಿದೆ. ಈ ಮಾಹಿತಿ ಸಿಕ್ಕ ಕೂಡಲೆ ಶನಿವಾರ ರಾತ್ರಿ ನಾಗ್ಪುರದ ಪೊಲೀಸ್ ಅಧಿಕಾರಿಗಳ ತಂಡ ಕಾರ್ಯಾಚರಣೆ ನಡೆಸಿದೆ. ಆದರೆ ಎಲ್ಲರನ್ನೂ ಕಾಡುತ್ತಿದ್ದ ಪ್ರಶ್ನೆ ಒಂದೇ. ಕೈದಿಯೊಬ್ಬ, ಕೇಂದ್ರ ಮಂತ್ರಿಗೆ ಜೈಲಿನಿಂದ ಕರೆ ಮಾಡಿದ್ದು ಹೇಗೆ ಎಂದು ಜೀವ ಬೆದರಿಕೆ ಸಂಬಂಧ ಮಹಾರಾಷ್ಟ್ರದ ನಾಗ್ಪುರದ …
Read More »IAS ಪಾಸ್ ಮಾಡಲು ಎಷ್ಟು ಗಂಟೆ ಓದಬೇಕು? ಸೆಲೆಬ್ರಿಟಿ ಅಧಿಕಾರಿ ಟೀನಾ ಡಾಬಿ ಕೊಟ್ಟ ಉತ್ತರ ವೈರಲ್
ನವದೆಹಲಿ: ಐಎಎಸ್ ಅಧಿಕಾರಿಯಾಗಲು ದಿನಕ್ಕೆ ಎಷ್ಟು ಗಂಟೆ ಅಧ್ಯಯನ ಮಾಡಬೇಕು ಎಂ ವಿದ್ಯಾರ್ಥಿನಿಯ ಪ್ರಶ್ನೆಗೆ ಸೆಲೆಬ್ರಿಟಿ ಐಎಎಸ್ ಅಧಿಕಾರಿ ಟೀನಾ ಡಾಬಿ ಅವರು ನೀಡಿರುವ ಉತ್ತರ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಟೀನಾ ಡಾಬಿ ಅವರು ಪ್ರಸ್ತುತ ರಾಜಸ್ಥಾನದ ಜೈಸಲ್ಮೇರ್ನ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಪಯೋನಿರ್ ಜೈಸನ್ ಶಕ್ತಿ (ಮಹಿಳೆಯರು ಮೊದಲು) ಕಾರ್ಯಕ್ರಮದ ಭಾಗವಾಗಿ ಜೈಸಲ್ಮೇರ್ನ ಇಂಧಿರಾ ಗಾಂಧಿ ಇಂದೋರ್ ಸ್ಟೇಡಿಯಂನಲ್ಲಿ ವಿದ್ಯಾರ್ಥಿನಿಯರಿಗೆ ವೃತ್ತಿ ಸಮಾಲೋಚನೆ ಕುರಿತು ಹಮ್ಮಿಕೊಳ್ಳಲಾಗಿದ್ದ …
Read More »ಒಂದೇ ಬಾರಿಗೆ 4 ಕರುಗಳಿಗೆ ಜನ್ಮನೀಡಿ ಅಚ್ಚರಿ ಮೂಡಿಸಿದ ಹಸು!
ಬಾಗಲಕೋಟೆ: ಪ್ರಪಂಚದಲ್ಲಿ ಪ್ರತಿದಿನವೂ ಚಿತ್ರ-ವಿಚಿತ್ರ ಘಟನೆಗಳು ನಡೆಯುತ್ತಲೇ ಇರುತ್ತವೆ. ಕೆಲ ವಿಷಯಗಳನ್ನು ನಂಬಲು ಸಹ ಸಾಧ್ಯವಾಗುವುದಿಲ್ಲ. 2 ಮುಖ, 5 ಕಾಲಿನ ಕರುಗಳು ಮತ್ತು ಪ್ರಾಣಿಗಳನ್ನು ನೀವು ನೋಡೇ ಇರುತ್ತೀರಿ. ಒಂದೇ ಬಾರಿಗೆ 2 ಕರುಗಳಿಗೆ ಜನ್ಮನೀಡಿದ ಹಸುಗಳನ್ನೂ ನೀವು ಕಂಡಿರುತ್ತೀರಿ. ಆದರೆ ಬಾಗಲಕೋಟೆ ಜಿಲ್ಲೆಯಲ್ಲಿ ಹಸುವೊಂದು ಒಂದೇ ಬಾರಿಗೆ 4 ಕರುಗಳಿಗೆ ಜನ್ಮ ನೀಡಿದ್ದು, ಅಚ್ಚರಿ ಮೂಡಿಸಿದೆ. ಹೌದು, ಅಚ್ಚರಿಯಾದರೂ ಇದು ನಿಜ.ಬಾಗಲಕೋಟೆಜಿಲ್ಲೆಯ ಆಸಂಗಿ ಗ್ರಾಮದಲ್ಲಿ ಹಸುವೊಂದು ಒಂದೇ ಬಾರಿಗೆ …
Read More »ರಾಜ್ಯದ ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ್ದಾರೆ. C.M.
ಬೆಂಗಳೂರು: ಸ್ತ್ರೀ ಸಾಮರ್ಥ್ಯ ಯೋಜನೆಯನ್ನು ಇದೇ ತಿಂಗಳು ಪ್ರಾರಂಭ ಮಾಡಲಾಗುತ್ತಿದೆ. ಪ್ರತಿ ಗ್ರಾಮದಲ್ಲಿ 2 ಸ್ತ್ರೀ ಶಕ್ತಿ ಸಂಘಕ್ಕೆ 5 ಲಕ್ಷ ರೂ.ವರೆಗೆ ಸಹಾಯಧನ ನೀಡಲಾಗುವುದು. ಜನವರಿ ಅಂತ್ಯ ಹಾಗೂ ಫೆಬ್ರವರಿ ಪ್ರಾರಂಭದಲ್ಲಿ ಚಾಲನೆ ನೀಡಲಾಗುವುದು. ಯುವಕರಿಗೆ, ಮಹಿಳೆಯರಿಗೆ ಶಕ್ತಿ ತುಂಬುವ ಕಾರ್ಯಕ್ರಮ ರೂಪಿಸಲಾಗಿದೆ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ಈ ಮೂಲಕ ರಾಜ್ಯದ ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ್ದಾರೆ. ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, …
Read More »ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ವಿದ್ಯಾರ್ಥಿನಿ- ಶಿಕ್ಷಕನ ‘ಖಾಸಗಿ’ ವಿಡಿಯೊ
ಬೆಳಗಾವಿ ಜಿಲ್ಲೆ): ತಾಲ್ಲೂಕಿನ ನಂದಗಡ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರ ಪ್ರೌಢಶಾಲೆಯ ಶಿಕ್ಷಕ, ವಿದ್ಯಾರ್ಥಿನಿಯ ಜತೆಗೆ ಇರುವ ‘ಖಾಸಗಿ ವಿಡಿಯೊ’ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ‘ಖಾಸಗಿ ಪ್ರೌಢಶಾಲೆಯ ಶಿಕ್ಷಕ ಅದೇ ಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿ ಜತೆಗೆ ಸಲುಗೆ ಬೆಳೆಸಿದ್ದ. ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಪ್ರೀತಿಯಲ್ಲಿ ಬೀಳಿಸಿಕೊಂಡಿದ್ದ. ಕೆಲವು ತಿಂಗಳಿಂದ ಶಾಲಾ ಸಮಯದ ಬಳಿಕವೂ ವಿದ್ಯಾರ್ಥಿನಿಯನ್ನು ಶಾಲೆಯಲ್ಲೇ ಇರಿಸಿಕೊಳ್ಳುತ್ತಿದ್ದ. ಈಚೆಗೆ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ವಿದ್ಯಾರ್ಥಿನಿಯನ್ನು ತನ್ನೊಂದಿಗೆ ಕರೆದುಕೊಂಡು ಹೋಗಿದ್ದ. ಆ ಸಂದರ್ಭದಲ್ಲಿ ಇಬ್ಬರೂ …
Read More »ಗಾಂಧಿ-ಗೋಡ್ಸೆ ಟ್ರೇಲರ್ ಬಿಡುಗಡೆ; ಕುತೂಹಲ ಮೂಡಿಸಿರುವ ರಾಜ್ಕುಮಾರ್ ಸಂತೋಷಿ ಸಿನಿಮಾ
ಘಾಯಲ್’, ‘ದಾಮಿನಿ’, ‘ಬರ್ಸಾತ್’, ‘ಖಾಕೀ’ ಸೇರಿದಂತೆ ಹಲವು ಬಾಲಿವುಡ್ ಚಿತ್ರಗಳನ್ನು ನಿರ್ದೇಶಿಸಿರುವ ರಾಜ್ಕುಮಾರ್ ಸಂತೋಷಿ ಆಕ್ಷನ್ ಕಟ್ ಹೇಳಿರುವ ಸಿನಿಮಾ ‘ಗಾಂಧಿ ಗೋಡ್ಸೆ : ಏಕ್ ಯುದ್ಧ್’. ಕೆಲವು ದಿನಗಳ ಹಿಂದಷ್ಟೇ ಟೀಸರ್ ಮೂಲಕ ಸದ್ದು ಮಾಡಿದ್ದ ಈ ಚಿತ್ರ, ಇದೀಗಿ ಟ್ರೇಲರ್ ಮುಖೇನ ಮತ್ತೊಮ್ಮೆ ಸುದ್ದಿಯಲ್ಲಿದೆ. ಅದಕ್ಕೆ ಕಾರಣ, ಚಿತ್ರದಲ್ಲಿ ಮಹಾತ್ಮಾ ಗಾಂಧೀಜಿ ಮತ್ತು ನಾಥೂರಾಮ್ ಗೋಡ್ಸೆ ನಡುವಿನ ಸೈದ್ಧಾಂತಿಕ ಸಂಘರ್ಷ, ವೈಚಾರಿಕ ಭಿನ್ನಾಭಿಪ್ರಾಯಗಳ ಬಗ್ಗೆ ನೇರವಾಗಿ ಬೆಳಕು …
Read More »ಮಟಮಟ ಮಧ್ಯಾಹ್ನ ಮಲಗಿದ ಸ್ಥಿತಿಯಲ್ಲೇ ಹೆಣವಾದ ಕೊಪ್ಪಳದ ಪ್ರೇಮಿಗಳು! ಬೆಚ್ಚಿಬಿದ್ದ ಸ್ಥಳೀಯರು
ಕೊಪ್ಪಳ: ಕುಕನೂರು ತಾಲೂಕಿನ ಬಳಗೇರಿ ಗ್ರಾಮದ ಮನೆಯೊಂದರಲ್ಲಿ ಚಾಪೆ ಮೇಲೆ ಮಲಗಿದ ಸ್ಥಿತಿಯಲ್ಲೇ ರಕ್ತದ ಮಡುವಿನಲ್ಲಿ ಯುವಕ ಮತ್ತು ಯುವತಿ ಶವ ಪತ್ತೆಯಾಗಿದ್ದು, ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದೆ. ಬಳಿಗೇರಿ ಗ್ರಾಮದ ಸುಮಾ ಮತ್ತು ಪ್ರಕಾಶ ಭಜಂತ್ರಿ ಮೃತ ದುರ್ದೈವಿಗಳು. ಇಂದು(ಶನಿವಾರ) ಮಧ್ಯಾಹ್ನ ಇವರಿಬ್ಬರೂ ದುರಂತ ಅಂತ್ಯ ಕಂಡಿದ್ದಾರೆ. ಪ್ರೀತಿ ಮಾಡುವಂತೆ ಸುಮಾಳ ಹಿಂದೆ ಪ್ರಕಾಶ ಭಜಂತ್ರಿ ದುಂಬಾಲು ಬಿದ್ದಿದ್ದ. ಈ ವಿಷಯ ಹುಡುಗಿ ಮನೆಯವರಿಗೂ ತಿಳಿದಿತ್ತು. ಇದಕ್ಕೆ ಮನೆಯವರು …
Read More »ವೇಷದ ಜತೆಗೆ ಭಾಷೆಯನ್ನೂ ಬದಲಾಯಿಸಿದ್ದ ಸ್ಯಾಂಟ್ರೋ ರವಿ! ಈತನ ಮಾತು ಕೇಳಿ ಪೊಲೀಸರೇ ಅರೆಕ್ಷಣ ಗಲಿಬಿಲಿ
ಮೈಸೂರು: ಅತ್ಯಾಚಾರ, ಪತ್ನಿಗೆ ವಂಚನೆ ಪ್ರಕರಣದ ಆರೋಪಿ ಸ್ಯಾಂಟ್ರೋ ರವಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಗುಜರಾತ್ನ ಅಹಮದಾಬಾದ್ನಲ್ಲಿ ತಲೆಮರೆಸಿಕೊಂಡಿದ್ದ. 11 ದಿನದ ಬಳಿಕ ಪೊಲೀಸರು ಆತನನ್ನು ಪತ್ತೆ ಮಾಡಿ ಮೈಸೂರಿಗೆ ಕರೆತಂದಿದ್ದಾರೆ. ಬಂಧನದ ವೇಳೆಯೂ ಅಹಮದಾಬಾದ್ನಲ್ಲಿ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಲು ಯತ್ನಿಸಿದ್ದ. ಪೊಲೀಸರಿಗೆ ತನ್ನ ಗುರುತು ಸಿಗಬಾರದು ಎಂಬ ಕಾರಣಕ್ಕೆ ಆತ ತನ್ನ ವೇಷ ಬದಲಾಯಿಸಿದ್ದು ಮಾತ್ರವಲ್ಲದೆ ಭಾಷೆಯನ್ನೂ ಬದಲಾಯಿಸಿದ್ದ! ತಲೆಯ ವಿಗ್ ತೆಗೆದು ಮೀಸೆ ಬೋಳಿಸಿಕೊಂಡಿದ್ದ ಸ್ಯಾಂಟ್ರೋ ರವಿಯನ್ನ ಗುರುತಿರುಸುವುದು ಕಷ್ಟವಾಗಿತ್ತು. …
Read More »