ಬೆಳಗಾವಿ: ಬೆಳಗಾವಿಯ ದಂಡು ಮಂಡಳಿ ಸಿಇಒ ಕರ್ನಲ್ ಆನಂದ್ (40) ಅವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಇಂದು ಬೆಳಗ್ಗೆ ಸಂಭವಿಸಿದೆ. ಬೆಳಗಾವಿಯ ಕ್ಯಾಂಪ್ ಪ್ರದೇಶದಲ್ಲಿರುವ ಕೆ.ಆನಂದ್ ಅವರ ಸರ್ಕಾರಿ ನಿವಾಸದಲ್ಲಿ ನಿಗೂಢವಾಗಿ ಮೃತಪಟ್ಟಿದ್ದಾರೆ. ಕಳೆದ ಒಂದೂವರೆ ವರ್ಷಗಳಿಂದ ದಂಡು ಮಂಡಳಿ ಸಿಇಒ ಆಗಿ ಸೇವೆ ಸಲ್ಲಿಸುತ್ತಿರುವ ಆನಂದ್ ಅವರು ಇಂಡಿಯನ್ ಡಿಫೆನ್ಸ್ ಎಸ್ಟೇಟ್ ಸರ್ವಿಸ್ಗೆ ಸೇರಿದ್ದರು. ಮೃತ ಆನಂದ ತಮಿಳುನಾಡು ಮೂಲದವರಾಗಿದ್ದು, ವಿವಾಹ ಆಗಿಲ್ಲ, ತಂದೆ-ತಾಯಿ ತಮಿಳುನಾಡಿನಲ್ಲಿದ್ದಾರೆ. ಬೆಳಗಾವಿಯ ಸರ್ಕಾರಿ ನಿವಾಸದಲ್ಲಿ …
Read More »Yearly Archives: 2023
ದೈವಕ್ಕೆ ಪೂಜೆ ಸಲ್ಲಿಸಿ ‘ಬೆಂಗಳೂರು ಕಂಬಳ ನಮ್ಮ ಕಂಬಳ’ಕ್ಕೆ ಸಾಂಕೇತಿಕ ಚಾಲನೆ
ಬೆಂಗಳೂರು: ರಾಷ್ಟ್ರಮಟ್ಟದಲ್ಲಿ ಕರಾವಳಿಯ ಸಂಸ್ಕೃತಿಯನ್ನು ಪ್ರತಿಬಿಂಬಿಸಲು ರಾಜ್ಯ ರಾಜಧಾನಿಯಲ್ಲಿ ಎರಡು ದಿನಗಳ ಕಾಲ ಹಮ್ಮಿಕೊಂಡಿರುವ ಜಾನಪದ ಕ್ರೀಡೆ ಕಂಬಳ ಉತ್ಸವಕ್ಕೆ ವಿದ್ಯುಕ್ತ ಚಾಲನೆ ದೊರೆತಿದೆ. ಗಂಗಾರತಿ ಸೇರಿದಂತೆ ಸಾಂಪ್ರದಾಯಿಕ ವಿಧಿ ವಿಧಾನಗಳ ಮೂಲಕ ದೈವಕ್ಕೆ ಪೂಜೆ ಸಲ್ಲಿಸಿ ಸಾಂಕೇತಿಕವಾಗಿ ಕಂಬಳಕ್ಕೆ ಚಾಲನೆ ನೀಡಲಾಯಿತು. ಇದಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಂಸದೆ ಶೋಭಾ ಕರಂದಾಜ್ಞೆ ಹಾಗೂ ಅಶ್ವಿನಿ ಪುನೀತ್ ರಾಜ್ ಕುಮಾರ್ ಸಾಕ್ಷಿಯಾದರು. ‘ಬೆಂಗಳೂರು ಕಂಬಳ ನಮ್ಮ ಕಂಬಳ’ ಹೆಸರಿನಲ್ಲಿ ನಡೆಯುತ್ತಿರುವ ಉತ್ಸವಕ್ಕೆ …
Read More »ಹುತಾತ್ಮ ಕ್ಯಾಪ್ಟನ್ ಪ್ರಾಂಜಲ್ ಕುಟುಂಬಕ್ಕೆ 50 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ
ಬೆಂಗಳೂರು: ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕರು ಹಾಗೂ ಭಾರತೀಯ ಸೇನೆಯ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಹುತಾತ್ಮರಾದ ಯೋಧ ಕ್ಯಾಪ್ಟನ್ ಪ್ರಾಂಜಲ್ ಅವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 50 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ಶುಕ್ರವಾರ ರಾತ್ರಿ 9.30ರ ಹೊತ್ತಿಗೆ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ಪ್ರಾಂಜಲ್ ಅವರ ಪಾರ್ಥೀವ ಶರೀರ ಆಗಮಿಸಿದ್ದು, ಈ ವೇಳೆ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್, ಸಿಎಂ ಸಿದ್ದರಾಮಯ್ಯ ಸೇರಿ ಗಣ್ಯರು ಹುತಾತ್ಮ ಪ್ರಾಂಜಲ್ ಅವರಿಗೆ ಅಂತಿಮ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ ಶ್ರೀ ಬಂಡೇಮ್ಮ ದೇವಿ ದೇವಸ್ಥಾನದ ಆವರಣದಲ್ಲಿ
ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲೂಕಿನ ಅಕ್ಕತಂಗೇರಹಾಳ ಗ್ರಾಮದಲ್ಲಿ ಶ್ರೀ ಬಂಡೇಮ್ಮ ದೇವಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ …
Read More »ಯೋಗೀಶ್ಗೌಡ ಕೊಲೆ ಪ್ರಕರಣ: ವಿನಯ ಕುಲಕರ್ಣಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಮುಂದೂಡಿಕೆ
ಬೆಂಗಳೂರು: ಧಾರವಾಡ ಬಿಜೆಪಿ ಮುಖಂಡ ಯೋಗೀಶ್ಗೌಡ ಕೊಲೆ ಪ್ರಕರಣದಲ್ಲಿ ಸಾಕ್ಷ್ಯ ನಾಶದ ಆರೋಪದಡಿ ದಾಖಲಾಗಿಸಲಾಗಿರುವ ಎರಡು ಪ್ರತ್ಯೇಕ ದೂರುಗಳನ್ನು ದಾಖಲಿಸಿರುವುದು ನಿಯಮ ಬಾಹಿರವಾಗಿದೆ ಎಂದು ಶಾಸಕ ವಿನಯ ಕುಲಕರ್ಣಿ ಪರ ವಕೀಲರು ಹೈಕೋರ್ಟ್‌ಗೆ ತಿಳಿಸಿದರು. ಸುಳ್ಳು ಸಾಕ್ಷ್ಯ ನೀಡುವಂತೆ ಬೆದರಿಕೆ ಹಾಕಲಾಗಿದೆ ಎಂಬ ಆರೋಪದಡಿ ಸಿಬಿಐ ಪ್ರಕರಣವನ್ನು ವಿಚಾರಣೆಗೆ ಪರಿಗಣಿಸಿರುವ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಕ್ರಮ ಪ್ರಶ್ನಿಸಿ ವಿನಯ್ ಕುಲಕರ್ಣಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ …
Read More »ಶನಿವಾರ ಬೆಂಗಳೂರಿನ ಹೆಚ್ಎಎಲ್ಗೆ ಪ್ರಧಾನಿ ಮೋದಿ ಭೇಟಿ
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಬೆಳಗ್ಗೆ ಕರ್ನಾಟಕದ ಬೆಂಗಳೂರಿನ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್‌ಎಎಲ್) ಸೈಟ್‌ಗೆ ಭೇಟಿ ನೀಡಲಿದ್ದಾರೆ. ನವದೆಹಲಿಯಿಂದ ವಿಶೇಷ ವಿಮಾನದಲ್ಲಿ ಹೊರಡಲಿರುವ ಮೋದಿ ಬೆಳಗ್ಗೆ 9.15 ಕ್ಕೆ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಹೆಚ್ಎಎಲ್ ) ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ನಂತರ ಹೆಚ್ಎಎಲ್ ಆಯೋಜಿಸಿರುವ ಕಾರ್ಯಕ್ರಮಕ್ಕೆ ತೆರಳಲಿದ್ದಾರೆ. ಅವರು ತೇಜಸ್ ಜೆಟ್‌ಗಳ ಸೌಲಭ್ಯ ಸೇರಿದಂತೆ ಅವುಗಳ ಉತ್ಪಾದನಾ ಸೌಲಭ್ಯಗಳನ್ನು ಹಾಗೂ ತಾಂತ್ರಿಕ ಸವಲತ್ತುಗಳ ಬಗ್ಗೆ ಪರಿಶೀಲಿಸಲಿದ್ದಾರೆ. …
Read More »ಜಿಮ್ನಲ್ಲಿ ವ್ಯಾಯಾಮ ಮಾಡುತ್ತಿದ್ದ ಡಾಕ್ಟರ್ ಹಠಾತ್ ಹೃದಯಾಘಾತದಿಂದ ಸಾವು
ಚೆನ್ನೈ: ಜಿಮ್ನಲ್ಲಿ ವ್ಯಾಯಾಮ ಮಾಡುತ್ತಿದ್ದ ವೇಳೆ ಹಠಾತ್ ಹೃದಯಾಘಾತ ಸಂಭವಿಸಿ ಮಹಿಳಾ ಡಾಕ್ಟರೊಬ್ಬರು ಸಾವನ್ನಪ್ಪಿರುವ ಘಟನೆ ಚೆನ್ನೈನಲ್ಲಿ ನಡೆದಿದೆ. ದೇಹದ ತೂಕ ಇಳಿಸಲೆಂದು ವರ್ಕೌಟ್ ಮಾಡುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಮೃತರನ್ನು ಅನ್ವಿತಾ(26) ಎಂದು ಗುರುತಿಸಲಾಗಿದೆ. ಇವರು ಚೆನ್ನೈನ ಕಿಲ್ಪಾಕ್ಕಂನ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಎಂಬಿಬಿಎಸ್ ಮುಗಿಸಿದ್ದಾರೆ. ಖ್ಯಾತ ನೇತ್ರಶಾಸ್ತ್ರಜ್ಞರ ಪುತ್ರಿ ಅನ್ವಿತಾ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯೆಯಾಗಿದ್ದರು. ಇಂದು ಕಿಲ್ಪಾಕ್ಕಂನ ನ್ಯೂ ಅವಡಿ ರಸ್ತೆಯಲ್ಲಿರುವ ಖಾಸಗಿ ಫಿಟ್‌ನೆಸ್ ಸೆಂಟರ್‌ನಲ್ಲಿ …
Read More »ಮೈಸೂರಲ್ಲಿ ಹುಲಿ ದಾಳಿಗೆ ಮತ್ತೊಂದು ಬಲಿ: ದನಗಾಹಿ ಮಹಿಳೆ ಕೊಂದು ತಿಂದ ವ್ಯಾಘ್ರ
ಮೈಸೂರು: ಹುಲಿ ದಾಳಿಗೆಮತ್ತೊಬ್ಬ ದನಗಾಹಿ ಮಹಿಳೆ ಬಲಿಯಾಗಿರುವ ಘಟನೆ, ಬಂಡೀಪುರ ರಾಷ್ಟ್ರೀಯ ಉದ್ಯಾನವನದ ನಂಜನಗೂಡು ತಾಲೂಕಿನ ಹೆಡಿಯಾಲ ಸಮೀಪವಿರುವ ಬಳ್ಳೂರುಹುಂಡಿ ಗ್ರಾಮದಲ್ಲಿ ಜರುಗಿದೆ. ಬಳ್ಳೂರು ಹುಂಡಿ ಗ್ರಾಮದ ವೆಂಕಟಯ್ಯ ಎಂಬುವರ ಪತ್ನಿ ರತ್ನಮ್ಮ (52) ಮೃತ ದನಗಾಹಿ ಎಂದು ಗುರುತಿಸಲಾಗಿದೆ. ಶುಕ್ರವಾರ ಮಧ್ಯಾಹ್ನ 3.15ರ ಸುಮಾರಿಗೆ ಮಹದೇವ ನಗರ ಗ್ರಾಮದ ನರ್ಸರಿ ಸಮೀಪದ ಬಳಿ ತಮ್ಮ ಜಮೀನಿನಲ್ಲಿ ರತ್ನಮ್ಮ ಜಾನುವಾರು ಮೇಯಿಸುತ್ತಿದ್ದ ವೇಳೆ ಹುಲಿ ದಾಳಿ ಮಾಡಿ ಹೊತ್ಯೊಯ್ದಿದೆ. ರತ್ನಮ್ಮನರ ಕಿರುಚಾಟ …
Read More »ಬಿಆರ್ಎಸ್ಗೆ ಹರಿದು ಬಂದ ₹683 ಕೋಟಿ ದೇಣಿಗೆ: ಇತರ ಪ್ರಾದೇಶಿಕ ಪಕ್ಷಗಳ ದೇಣಿಗೆ ಎಷ್ಟು?
ಹೈದರಾಬಾದ್ (ತೆಲಂಗಾಣ): ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತೆಲಂಗಾಣದ ಆಡಳಿತಾರೂಢ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಪಕ್ಷಕ್ಕೆ ಭರ್ಜರಿ ದೇಣಿಗೆ ಬಂದಿದೆ. 2022-23ನೇ ಸಾಲಿನಲ್ಲಿ ಬಿಆರ್ಎಸ್ಗೆ ಹಲವಾರು ಮೂಲಗಳಿಂದ ವಿವಿಧ ರೂಪಗಳಲ್ಲಿ 683 ಕೋಟಿ (683,06,70,500 ರೂ.) ರೂಪಾಯಿಗೂ ಅಧಿಕ ದೇಣಿಗೆ ಸಂದಾಯವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಈ ಮೂಲಕ ಕೆ. ಚಂದ್ರಶೇಖರ್ ರಾವ್ ನೇತೃತ್ವದ ಬಿಆರ್‌ಎಸ್ ದೇಶದ ಪ್ರಾದೇಶಿಕ ಪಕ್ಷಗಳ ಪೈಕಿ ಅತ್ಯಧಿಕ ದೇಣಿಗೆ ಸ್ವೀಕರಿಸಿದ ಪಕ್ಷವಾಗಿದೆ. ಬಿಆರ್‌ಎಸ್ …
Read More »‘ಅಂಬರೀಶ್ ಆಶೀರ್ವಾದದಿಂದ ಮಗನ ಸಿನಿಮಾ ಬಿಡುಗಡೆ’: ಅಂಬಿ ಸಮಾಧಿಗೆ ಪೂಜೆ ಸಲ್ಲಿಸಿದ ಸುಮಲತಾ
ಮಂಡ್ಯ: ಇಂದು ಕನ್ನಡಿಗರ ಮೆಚ್ಚಿನ ನಟ ಅಂಬರೀಶ್ ಅವರ 5ನೇ ವರ್ಷದ ಪುಣ್ಯಸ್ಮರಣೆ ಹಿನ್ನೆಲೆ, ಮಂಡ್ಯದಲ್ಲಿ ವಿವಿಧ ಕಾರ್ಯಕ್ರಮಗಳು ಜರುಗಿದವು. ಅಂಬರೀಶ್ ಹುಟ್ಟೂರಾದ ಮದ್ದೂರು ತಾಲೂಕಿನ ದೊಡ್ಡರಸಿನಕೆರೆಗೆ ಪತ್ನಿ, ಸಂಸದೆ ಸುಮಲತಾ ಅಂಬರೀಶ್ ಅವರು ಭೇಟಿ ಕೊಟ್ಟು ಅಂಬಿ ಸಮಾಧಿಗೆ ವಿಶೇಷ ಪೂಜೆ ಸಲ್ಲಿಸಿದರು. ಸುಮಲತಾ ಅವರ ಜೊತೆ ಹಿರಿಯ ನಟ ದೊಡ್ಡಣ್ಣ, ರಾಕ್ಲೈನ್ ವೆಂಕಟೇಶ್ ಸಹ ಭಾಗಿಯಾಗಿದ್ದರು. ಮಾಧ್ಯಮದವರ ಜೊತೆ ಮಾತನಾಡಿದ ಸಂಸದೆ ಸುಮಲತಾ ಅಂಬರೀಶ್, ಇಂದು ಅಂಬರೀಶ್ …
Read More »