Breaking News

Yearly Archives: 2023

ಮತ್ತೆ ಸ್ಯಾಟಲೈಟ್‌ ಫೋನ್‌ ಸದ್ದು: ಕರ್ನಾಟಕ-ಕೇರಳ ಗಡಿಯಲ್ಲಿ ಸಿಗ್ನಲ್‌ ಪತ್ತೆ

ಮಂಗಳೂರು (ಜ.07): ಮಂಗಳೂರಿನಲ್ಲಿ ಕುಕ್ಕರ್‌ ಬಾಂಬ್‌ ಸ್ಫೋಟ ಹಾಗೂ ಆ ಪ್ರಕರಣಕ್ಕೆ ಸಂಬಂಧಿಸಿದಂತೆ ಐಸಿಸ್‌ ಉಗ್ರಗಾಮಿ ಸಂಘಟನೆ ಜತೆ ನಂಟು ಹೊಂದಿದ ಆರೋಪದ ಹಿನ್ನೆಲೆಯಲ್ಲಿ ಇಬ್ಬರು ವಿದ್ಯಾರ್ಥಿಗಳನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಬಂಧಿಸಿದ ಬೆನ್ನಲ್ಲೇ ರಾಜ್ಯದ ಗಡಿ ಭಾಗದಲ್ಲಿ ಗುರುವಾರ ಸ್ಯಾಟಲೈಟ್‌ ಫೋನ್‌ ಸಿಗ್ನಲ್‌ ಪತ್ತೆಯಾಗಿದೆ. ನೆರೆಯ ಕೇರಳ ರಾಜ್ಯದ ಕಾಸರಗೋಡು, ಪಾಣಾಜೆ ಗಡಿ ಪ್ರದೇಶಗಳಲ್ಲಿ ಸ್ಯಾಟಲೈಟ್‌ ಫೋನ್‌ ಬಳಕೆ ಆಗಿರುವುದು ಪತ್ತೆಯಾಗಿದೆ. ಕೇಂದ್ರ ಗುಪ್ತಚರ ಇಲಾಖೆಯು ಸ್ಯಾಟಲೈಟ್‌ …

Read More »

ಕ್ಲೀನ್ ಚಿಟ್ ಸಿಕ್ಕ ನಂತರ ಸಾಕ್ಷ್ಯ ಒದಗಿಸಿದ್ದರ ಹಿಂದೆ ಷಡ್ಯಂತ್ರ ಅಡಗಿದೆ: ಕೆಎಸ್ ಈಶ್ವರಪ್ಪ ಅನುಮಾನ

ಶಿವಮೊಗ್ಗ: ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ನನಗೆ ಕ್ಲೀನ್ ಚಿಟ್ ಸಿಕ್ಕ ನಂತರ ಈಗ ಸಾಕ್ಷ್ಯ ಒದಗಿಸುತ್ತಾರೆ ಎಂದರೆ ಇದರ ಹಿಂದೆ ಷಡ್ಯಂತ್ರ ಅಡಗಿದೆ ಎಂದು ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅನುಮಾನ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಯಾರೂ ಏನೂ ಕೊಡ್ತಾರೆ, 25 ಸಾವಿರಕ್ಕೂ 50 ಸಾವಿರ ಕೊಡುತ್ತಾರೆ ಅಂದರೆ ಅದಕ್ಕೆಲ್ಲಾ ನಾನು ಪ್ರತಿಕ್ರಿಯಿಸುವುದಿಲ್ಲ ಎನ್ನುತ್ತಲೆ ಸಂತೋಷ್ ಪಾಟೀಲ್ ಕುಟುಂಬದವರು ಈಗ ಸಾಕ್ಷ್ಯ ನೀಡುತ್ತಿರುವುದಕ್ಕೆ ಅಸಮಾಧಾನ ಹೊರ ಹಾಕಿದರು‌. …

Read More »

ಬೆಳಗಾವಿ: ವಿದ್ಯಾರ್ಥಿಗಳ ಹೆಣಗಾಟ; ಸಾರಿಗೆ ಅಧಿಕಾರಿಗಳಿಗೆ ಶಾಪ..

: ಸಮರ್ಪಕ ಬಸ್‌ ವ್ಯವಸ್ಥೆ ಮೊದಲೇ ಇಲ್ಲ, ಇದ್ದ ಬಸ್‌ಗಳಂತೂ ಸರಿಯಾದ ಸಮಯಕ್ಕೆ ಬರದೇ ವಿದ್ಯಾರ್ಥಿಗಳು ನಿಗದಿತ ತರಗತಿಗಳಿಂದ ವಂಚಿತವಾದರೇ ಪ್ರಯಾಣಿಕರಿಗೆ ನಿತ್ಯವೂ ಭಾರಿ ತೊಂದರೆಯನ್ನು ಅನುಭವಿಸುವಂತಾಗಿದ್ದು ಸಾರಿಗೆ ಇಲಾಖೆ ಪ್ರಯಾಣಿಕರ ಕೆಂಗಣ್ಣಿಗೆ ಗುರಿಯಾಗಿದೆ. ಗ್ರಾಮೀಣ ಭಾಗದಿಂದ ನಗರ, ಪಟ್ಟಣದ ಶಾಲಾ-ಕಾಲೇಜು ಹೋಗುವ ವಿದ್ಯಾರ್ಥಿಗಳು ಬಸ್‌ಗಾಗಿ ಗಂಟೆಗಟ್ಟಲೇ ಕಾಯುತ್ತಿದ್ದಾರೆ. ಹಾಗೆಯೇ ಮನೆಗೆ ಮರಳಿ ಹೋಗುವಾಗಲೂ ಸರಿಯಾದ ಸಮಯಕ್ಕೆ ಬಸ್‌ ಬಾರದೇ ಬಸ್‌ ನಿಲ್ದಾಣದಲ್ಲಿಯೇ ಕಾಲ ಕಳೆಯಬೇಕಾಗಿದೆ. ಗ್ರಾಮೀಣ ಪ್ರದೇಶಗಳಿಗೆ ಸಂಚರಿಸುವ …

Read More »

ಇಂಗ್ಲಿಷ್ ಅನಿವಾರ್ಯವಾದರೂ ಕನ್ನಡತನವನ್ನು ಎಂದಿಗೂ ಬಿಟ್ಟು ಕೊಡಬಾರದು: ಬಿಎಸ್‌ವೈ

ಹಾವೇರಿ : ನಗರ ಪ್ರದೇಶಗಳಲ್ಲಿ ಕನ್ನಡ ಮಾತನಾಡಲು ಹಿಂಜರಿಯುವ ಸ್ಥಿತಿ ಆತಂಕಕಾರಿ. ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಇಂಗ್ಲಿಷ್ ಅನಿವಾರ್ಯವಾದರೂ ಕನ್ನಡತನವನ್ನು ಎಂದಿಗೂ ಬಿಟ್ಟುಕೊಡಬಾರದು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು. 86ನೇ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಕೇಂದ್ರ ಸರ್ಕಾರದ ವಿಶೇಷ ಅಂಚೆ ಲಕೋಟೆ ಬಿಡುಗಡೆಗೊಳಿಸಿ ಅವರು ಮಾತನಾಡಿ, ಕನ್ನಡದ ನೆಲ, ಜಲ, ಗಡಿ ವಿಚಾರದಲ್ಲಿ ಸರ್ಕಾರ ಎಂದೂ ಉದಾಸೀನ ಮಾಡುವುದಿಲ್ಲ. ಕನ್ನಡ ಕೇವಲ ಭಾಷೆಯಲ್ಲ. ಅದು …

Read More »

ಅಖಿಲ ಭಾರತ ಮಹಿಳಾ ಕಬಡ್ಡಿ ಟೂರ್ನಿ: ಲಕ್ಷ-ಲಕ್ಷ ಬಹುಮಾನ ಗೆದ್ದ ಮಹಿಳಾ ತಂಡಗಳು..

ಬಾಗಲಕೋಟೆ: ಇತ್ತೀಚಿನ ದಿನಗಳಲ್ಲಿ ಕ್ರೀಡೆಗಳು ನಶಿಸಿ ಹೋಗುತ್ತಿದ್ದು, ಇವುಗಳ ಮಧ್ಯೆ ಕಳೆದ ಮೂರ್ನಾಲ್ಕು ವರ್ಷಗಳಿಂದ ಕೊರೋನಾ ಹಾವಳಿಯಿಂದ ರಾಷ್ಟ್ರ ಮಟ್ಟದ ಪಂದ್ಯಾವಳಿಗಳೇ ವಿರಳವಾಗಿದ್ದವು, ಆದರೆ ಇದೀಗ ಮಹಿಳಾ ಕಬಡ್ಡಿಗೂ ಉತ್ತೇಜನ ನೀಡಬೇಕೆಂಬ ಉದ್ದೇಶದಿಂದಲೇ ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪೂರದಲ್ಲಿ ಅಖಿಲ ಭಾರತ ಮಹಿಳಾ ಕಬಡ್ಡಿ ಪಂದ್ಯಾವಳಿ ಆಯೋಜಿಸಲಾಗಿತ್ತು. ಒಂದೆಡೆ ಗಂಡು ಮಕ್ಕಳಿಗೆ ತಾವೇನು ಕಮ್ಮಿ ಇಲ್ಲವೆಂಬಂತೆ ಭರ್ಜರಿ ಕಬಡ್ಡಿ ಆಡಿದ ಯುವತಿಯರು, ಮತ್ತೊಂದೆಡೆ ಯುವತಿಯರ ಕಬಡ್ಡಿ ಆಟ ಕಂಡು ಚಪ್ಪಾಳೆ ತಟ್ಟಿ …

Read More »

ಸಿದ್ದರಾಮಯ್ಯ ತವರಲ್ಲಿ ಕೇಸರಿ ರಣಕಹಳೆ: ದಲಿತ ಮತಗಳನ್ನು ಸೆಳೆಯಲು ಬಿಜೆಪಿ ಪ್ಲಾನ್

ಕರ್ನಾಟಕದಲ್ಲಿ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯಲು ಬಿಜೆಪಿ ಎಲ್ಲಾ ರೀತಿಯ ಪ್ರಯತ್ನಗಳನ್ನು ನಡೆಸುತ್ತಿದೆ. ಹಳೇ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆ ಬಿಜೆಪಿ ನಾಯಕರು ಹೆಚ್ಚು ಒತ್ತು ನೀಡುತ್ತಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಬಂದು ಹೋದ ಮೇಲೆ ಬಿಜೆಪಿ ನಾಯಕರು ಫುಲ್ ಆಕ್ಟೀವ್ ಆಗಿದ್ದಾರೆ. ಹಳೇ ಮೈಸೂರಿನ ದಲಿತ ಮತಗಳ ಮೇಲೆ ಬಿಜೆಪಿ ಕಣ್ಣಿಟ್ಟಿದ್ದು, ಮೀಸಲು ಕ್ಷೇತ್ರಗಳ ಜತೆ ಇತರೆ ಕ್ಷೇತ್ರಗಳ ಮೇಲೆ ಕೂಡ ಬಿಜೆಪಿ ಕಣ್ಣಿಟ್ಟಿದೆ. ಈ …

Read More »

ಜನವರಿ 12ರಂದು ಹುಬ್ಬಳ್ಳಿಗೆ ಆಗಮಿಸಲಿರುವ ಮೋದಿ: ನಗರದಲ್ಲಿ ಭರದಿಂದ ಸಾಗಿದ ಸಿದ್ಧತೆ ಕಾರ್ಯ

ಹುಬ್ಬಳ್ಳಿ, : ವಾಣಿಜ್ಯನಗರಿ ಹುಬ್ಬಳ್ಳಿಗೆ ಜನವರಿ 12ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 26ನೇ ರಾಷ್ಟ್ರೀಯ ಯುವಜನೋತ್ಸವ ಉದ್ಘಾಟನೆ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ನಗರದಲ್ಲಿ ಸ್ವಚ್ಛತೆ ಹಾಗೂ ಸಿದ್ಧತೆ ಕಾರ್ಯಗಳು ಭರದಿಂದ ಸಾಗಿದೆ. ಹುಬ್ಬಳ್ಳಿಯ ರೈಲ್ವೆ ಮೈದಾನಕ್ಕೆ ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ರಮನ್ ಗುಪ್ತಾ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ನಿಟ್ಟಿನಲ್ಲಿ ರೈಲ್ವೆ ಮೈದಾನದಲ್ಲಿ …

Read More »

ಬಾಲಕಿಯ ಮೇಲೆ ಅಣ್ಣ – ತಮ್ಮಂದಿರಿಂದ ಅತ್ಯಾಚಾರ: ಆರೋಪಿಗಳ ಮನೆ ಮೇಲೆ ದಾಳಿ, ವಾಹನಗಳು ಧ್ವಂಸ

ವರಂಗಲ್ (ತೆಲಂಗಾಣ): ತೆಲಂಗಾಣದ ವರಂಗಲ್​ ಜಿಲ್ಲೆಯಲ್ಲಿ ಮಾನಗೇಡಿ ಕೃತ್ಯಯೊಂದು ಬೆಳಕಿಗೆ ಬಂದಿದೆ. ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ಇಬ್ಬರು ಸಹೋದರರು ಸೇರಿಕೊಂಡು ಅತ್ಯಾಚಾರ ಎಸಗಿದ್ದು, ಈಗಾಗಲೇ ಇಬ್ಬರೂ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲದೇ, ಈ ದುಷ್ಕೃತ್ಯ ಎಸಗಿದ ಕಾಮುಕರ ಮನೆಗಳ ಮೇಲೆ ಸಂತ್ರಸ್ತೆಯ ಕುಟುಂಬ ಸದಸ್ಯರು ಹಾಗೂ ಸಂಬಂಧಿಕರು ದಾಳಿ ಮಾಡಿ, ಮನೆ ಮುಂದೆ ನಿಲ್ಲಿಸಿದ್ದ ವಾಹನಗಳನ್ನು ಧ್ವಂಸಗೊಳಿಸಿದ್ದಾರೆ. ವರಂಗಲ್​ ಪಟ್ಟಣದ ಆರೋಪಿಗಳಾದ ಅಜ್ಮದ್ ಅಲಿ (26) ಮತ್ತು ಅಬ್ಬು (22) …

Read More »

ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ ಪಾಲ್ಗೊಳುವದರಿಂದ ಸದೃಢ ಆರೋಗ್ಯವಂತರಾಗಿ ಸನತ ಜಾರಕಿಹೊಳಿ

ಗೋಕಾಕ : ಪಠ್ಯದಷ್ಟೆ ಪತ್ಯೇತರ ಚುಟುವಟಿಕೆಗಳು ವಿದ್ಯಾರ್ಥಿಗಳ ಸರ್ವಾಂಗೀಣ ಬೆಳೆಯವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ಇಲ್ಲಿನ ಸರಕಾರಿ ಐಟಿಐ ಕಾಲೇಜಿನ ಪ್ರಾಚಾರ್ಯ ಎಸ್.ಎಸ್.ಖಿಲಾರಿ ಹೇಳಿದರು. ಶುಕ್ರವಾರದಂದು ನಗರದ ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಪಾಲಿಟೆಕ್ನಿಕ್ ನ ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ ಪಾಲ್ಗೊಳುವದರಿಂದ ಸದೃಢ ಆರೋಗ್ಯವಂತರಾಗಿ ಶೈಕ್ಷಣಿಕ ಪ್ರಗತಿಗೆ ಸಹಕಾರಿಯಾಗುತ್ತದೆ. ತಮ್ಮಲ್ಲಿರುವ ಪ್ರತಿಭೆಗಳನ್ನು ಗುರುತಿಸಿ ವೇದಿಕೆಗಳ ಮೂಲಕ ಪ್ರದರ್ಶಸಿಸುವ ಮುಖೇನ ಪ್ರೋತ್ಸಾಹಿಸಿಕೊಳ್ಳಿ. …

Read More »

ಕೆ.ಆರ್‌.ಪೇಟೆಯಲ್ಲಿ ಬಸ್‌ ಉರುಳಿ 32 ಮಂದಿಗೆ ಗಾಯ, ಹುಕ್ಕೇರಿ ಸಮೀಪ ಹೊತ್ತಿ ಉರಿದ ಬಸ್

ಮಂಡ್ಯ/ಚಿಕ್ಕೋಡಿ: ಚಾಲಕನ ನಿಯಂತ್ರಣ ತಪ್ಪಿ ಕೆಎಸ್​ಆರ್​ಟಿಸಿ ಬಸ್ ಉರುಳಿ ಬಿದ್ದು 32 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಮಂಡ್ಯದ ಕೆ.ಆರ್.ಪೇಟೆ ತಾಲೂಕಿನ ಮುರುಕನಹಳ್ಳಿ ಬಳಿಯ ಚನ್ನರಾಯಪಟ್ಟಣ- ಮೈಸೂರು ಹೆದ್ದಾರಿಯಲ್ಲಿ ನಡೆದಿದೆ. ಗದಗದಿಂದ ಮೈಸೂರಿಗೆ ಹೋಗುತ್ತಿದ್ದ ಸಾರಿಗೆ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಬ್ಬಿಣದ ತಡೆಗೋಡೆಗೆ ಡಿಕ್ಕಿ ಹೊಡೆದಿದೆ. ಬಸ್ ವೇಗದಲ್ಲಿದ್ದರಿಂದ ತಡೆಗೋಡೆ ಮುರಿದಿದೆ. ಬಸ್ ಪಲ್ಟಿಯಾಗಿ ರಸ್ತೆ ಬದಿಯ ಜಮೀನಿಗೆ ಉರುಳಿ ಬಿದ್ದಿದೆ. ಗಾಯಾಳುಗಳನ್ನು ಕೆ ಆರ್ …

Read More »