ಬೆಂಗಳೂರು: ಬೆಳಗಾವಿ ಅಧಿವೇಶನದ ವೇಳೆ ಪ್ರತಿಭಟನೆಗಳನ್ನು ನಡೆಸದಂತೆ ಸಂಘಟನೆಗಳ ಮನವೊಲಿಸಲು ಕೋರಿ ಸಭಾಪತಿ ಬಸವರಾಜ ಹೊರಟ್ಟಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಸಚಿವರುಗಳಿಗೆ ಸಲಹಾ ಪತ್ರ ಬರೆದಿದ್ದಾರೆ. ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ 4, 2023ರಿಂದ ಡಿಸೆಂಬರ್ 15ರವರೆಗೆ 10 ದಿನಗಳ ಕಾಲ ಚಳಿಗಾಲದ ಅಧಿವೇಶನ ನಡೆಸಲು ಸರ್ಕಾರ ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ಹೊರಟ್ಟಿ ಅವರು ಸಿದ್ದರಾಮಯ್ಯ ಸೇರಿದಂತೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ, ಕಂದಾಯ ಸಚಿವ ಕೃಷ್ಣ ಬೈರೇಗೌಡ ಹಾಗೂ ಶಿಕ್ಷಣ ಸಚಿವ …
Read More »Yearly Archives: 2023
ಬ್ಯಾಡ್ ಮ್ಯಾನರ್ಸ್’ ಸಿನಿಮಾ ಪ್ರಚಾರಾರ್ಥವಾಗಿ ಉತ್ತರ ಕರ್ನಾಟಕಕ್ಕೆ ಭೇಟಿ ಕೊಟ್ಟಿರೋದು ಖುಷಿ: ಅಭಿಷೇಕ್ ಅಂಬರೀಶ್
ಬೆಳಗಾವಿ: ‘ಬ್ಯಾಡ್ ಮ್ಯಾನರ್ಸ್’ ಸಿನಿಮಾ ಪ್ರಚಾರಾರ್ಥವಾಗಿ ಉತ್ತರ ಕರ್ನಾಟಕಕ್ಕೆ ಭೇಟಿ ಕೊಟ್ಟಿರೋದು ಖುಷಿ ವಿಚಾರ. ಇದೇ 24ಕ್ಕೆ ಬ್ಯಾಡ್ ಮ್ಯಾನರ್ಸ್ ಬಿಡುಗಡೆ ಆಗುತ್ತಿದ್ದು, ಎಲ್ಲರೂ ಸಿನಿಮಾ ನೋಡಿ ಪ್ರೋತ್ಸಾಹಿಸುವಂತೆ ನಟ ಅಭಿಷೇಕ್ ಅಂಬರೀಶ್ ಕೋರಿದರು. ಬೆಳಗಾವಿ ಖಾಸಗಿ ಹೊಟೇಲ್ನಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ನಟ ಅಭಿಷೇಕ್ ಅಂಬರೀಶ್, ಬ್ಯಾಡ್ ಮ್ಯಾನರ್ಸ್ನಲ್ಲಿ ಬೆಳಗಾವಿ ಜಿಲ್ಲೆಯವರು ಅಭಿನಯಿಸಿದ್ದಾರೆ. ಕಲಾವಿದರು ಇಲ್ಲಿಗೆ ಬರೋದಿಲ್ಲ ಎಂಬ ದೂರು ಇದೆ. ಹೀಗಾಗಿ ಬೆಳಗಾವಿಗೆ ಬಂದು ಪ್ರಚಾರ …
Read More »“ಕೊಲ್ಲಾಪುರಿ ಬ್ರಾಂಡ್ನ ಚಪ್ಪಲಿ ತಯಾರಾಗುವುದು ಅಥಣಿಯಲ್ಲಿ. ಆದರೆ ಹೆಸರು ಬಂದಿದ್ದು ಮಾತ್ರ ಕೊಲ್ಲಾಪುರ್ ಅಂತ
ಚಿಕ್ಕೋಡಿ(ಬೆಳಗಾವಿ): ದೇಶ, ವಿದೇಶಗಳಲ್ಲಿ ಹೆಸರುವಾಸಿಯಾಗಿರುವ ಕೊಲ್ಲಾಪುರ್ ತೊಗಲಿನ ಚಪ್ಪಲಿ ತಯಾರಕರ ಪರಿಸ್ಥಿತಿ ಸದ್ಯ ದುಸ್ಥಿತಿಯಾಗಿದ್ದು, ಸರ್ಕಾರವು ಬರುವ ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ ಚರ್ಮೋದ್ಯೋಗ ನಡೆಸುತ್ತಿರುವ ಕುಟುಂಬಗಳ ಕುರಿತು ಚರ್ಚಿಸಿ ನಮಗೆ ನ್ಯಾಯ ಒದಗಿಸಿ ಕೊಡಬೇಕೆಂದು ಕುಶಲಕರ್ಮಿಗಳು ಒತ್ತಾಯಿಸುತ್ತಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮಧುಬಾವಿ ಗ್ರಾಮ ಹಾಗೂ ತಾಲೂಕಿನ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚಪ್ಪಲಿಯನ್ನು ತಯಾರಿಸಿ ಮಾರುಕಟ್ಟೆಗಳಿಗೆ ಮಾರಾಟ ಮಾಡುತ್ತಾರೆ. ಆದರೆ ಆಧುನಿಕತೆಯಿಂದ ದಿನದಿನಕ್ಕೆ ಚರ್ಮದಿಂದ ತಯಾರಿಸಿದ ಚಪ್ಪಲಿ ಬೇಡಿಕೆ ಕಡಿಮೆಯಾಗುತ್ತಿದ್ದು ಮತ್ತು …
Read More »ಬೆಳಗಾವಿ ಅಧಿವೇಶನ: ₹300 ಕೋಟಿ ವೆಚ್ಚದಲ್ಲಿ ಶಾಸಕರು, ಅಧಿಕಾರಿಗಳ ವಾಸ್ತವ್ಯಕ್ಕೆ ಪಂಚತಾರಾ ಹೊಟೇಲ್ ನಿರ್ಮಾಣಕ್ಕೆ ಚಿಂತನೆ
ಬೆಂಗಳೂರು: ಪ್ರತಿವರ್ಷ ವಿಧಾನಮಂಡಲದ ಚಳಿಗಾಲದ ಅಧಿವೇಶನ ಬೆಳಗಾವಿಯಲ್ಲಿ ನಡೆಯುತ್ತದೆ. ಈ ಸಂದರ್ಭದಲ್ಲಿ ಶಾಸಕರು ಹಾಗೂ ಅಧಿಕಾರಿಗಳ ವಾಸ್ತವ್ಯಕ್ಕೆ ಕೋಟಿ ಕೋಟಿ ಲೆಕ್ಕದಲ್ಲಿ ಹಣ ಖರ್ಚು ಮಾಡಲಾಗುತ್ತದೆ. ಇದೀಗ ಇಂಥ ಖರ್ಚು ಕಡಿಮೆಗೊಳಿಸುವುದು, ವಾಸ್ತವ್ಯದ ಅನಾನುಕೂಲತೆ, ವೆಚ್ಚವನ್ನು ತಗ್ಗಿಸಲು ಬೆಳಗಾವಿ ಸುವರ್ಣಸೌಧದ ಸಮೀಪದಲ್ಲೇ ಪಂಚತಾರಾ ಹೊಟೇಲ್ ನಿರ್ಮಿಸಲು ಸರ್ಕಾರ ಮುಂದಾಗಿದೆ. ಡಿ.4 ರಿಂದ ಡಿ.15 ರವರೆಗೆ 10 ದಿನಗಳ ಕಾಲ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದೆ. ಕಳೆದ ವರ್ಷ ನಡೆದ ಅಧಿವೇಶನಕ್ಕೆ ಅಂದಾಜು …
Read More »ಹುಬ್ಬಳ್ಳಿ-ಬೆಂಗಳೂರು ಸೂಪರ್ ಫಾಸ್ಟ್ ರೈಲು ರದ್ದು
ಹುಬ್ಬಳ್ಳಿ: ಉತ್ತರ ಕರ್ನಾಟಕ ಜನರ ಅಚ್ಚುಮೆಚ್ಚಿನ ರೈಲು ಎಂದೇ ಖ್ಯಾತಿ ಗಳಿಸಿದ್ದ ಹುಬ್ಬಳ್ಳಿ-ಬೆಂಗಳೂರು ಸೂಪರ್ ಫಾಸ್ಟ್ ರೈಲಿನ ಸಂಚಾರ ರದ್ದು ಮಾಡಲಾಗಿದೆ. ಬೆಂಗಳೂರಿನಿಂದ ಹುಬ್ಬಳ್ಳಿಗೆ ವೇಗದೂತದಂತೆ ಬರುತ್ತಿದ್ದ ಈ ರೈಲು ಅಂದರೆ ಎಲ್ಲರಿಗೂ ಅಚ್ಚು-ಮೆಚ್ಚು. ಆದರೆ, ಏಕಾಏಕಿ ಈ ರೈಲು ಸಂಚಾರವನ್ನು ರದ್ದು ಮಾಡಿ ನೈರುತ್ಯ ರೈಲ್ವೆ ಇಲಾಖೆ ಆದೇಶ ಹೊರಡಿಸಿದೆ. ಬೆಂಗಳೂರು-ಹುಬ್ಬಳಿ ಸೂಪರ್ ಫಾಸ್ಟ್ ರೈಲು ಉತ್ತರ ಕರ್ನಾಟಕ ಮಂದಿಗೆ ಅತಿ ವೇಗದ ರೈಲು. ಈ ರೈಲು ಅಂದ್ರೆ ಈ …
Read More »ನಿಗಮ, ಮಂಡಳಿ ನೇಮಕಾತಿ ಗೊಂದಲ ಸಿಎಂ, ಡಿಸಿಎಂ ನಡುವೆ ಒಮ್ಮತ ಮೂಡಿಸಲು ಸುರ್ಜೇವಾಲ ಕಸರತ್ತು
ಬೆಂಗಳೂರು: ನಿಗಮ, ಮಂಡಳಿ ನೇಮಕಾತಿ ಗೊಂದಲ ಮುಂದುವರಿದಿದೆ. ಮಂಗಳವಾರ ತಡರಾತ್ರಿಯವರೆಗೆ ರಣದೀಪ್ ಸಿಂಗ್ ಸುರ್ಜೇವಾಲ ಖಾಸಗಿ ಹೊಟೇಲ್ನಲ್ಲಿ ನಿಗಮ, ಮಂಡಳಿಗಳಿಗೆ ನೇಮಕಾತಿ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜೊತೆ ಸಮಾಲೋಚಿಸಿದ್ದಾರೆ. ಈ ಸಂದರ್ಭದಲ್ಲಿ ಸುರ್ಜೇವಾಲ ಅವರು ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅಭಿಪ್ರಾಯ ಆಲಿಸಿದರು. ಸುದೀರ್ಘವಾಗಿ ಚರ್ಚಿಸಿದರೂ ಅಂತಿಮ ನಿರ್ಧಾರಕ್ಕೆ ಬರಲು ಸಾಧ್ಯವಾಗಿಲ್ಲ. ನಿಗಮ, ಮಂಡಳಿ ನೇಮಕಾತಿ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕರು ಹಾಗೂ ಕಾರ್ಯಕರ್ತರಲ್ಲಿ ಅಸಮಾಧಾನ ತೀವ್ರಗೊಂಡಿದೆ. …
Read More »ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ರಜನೀಶ್ ಗೋಯಲ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ.
ಬೆಂಗಳೂರು: ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ(ಸಿಎಸ್) ಹಿರಿಯ ಐಎಎಸ್ ಅಧಿಕಾರಿ ರಜನೀಶ್ ಗೋಯಲ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ. ಸದ್ಯಕ್ಕೆ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಗೋಯಲ್, ಡಿಸೆಂಬರ್ 1ರಂದು ಅಧಿಕಾರ ಸ್ವೀಕರಿಸುವರು. ಪ್ರಸ್ತುತ ಮುಖ್ಯ ಕಾರ್ಯದರ್ಶಿಯಾಗಿರುವ ವಂದಿತಾ ಶರ್ಮಾ ಅವರ ಅಧಿಕಾರಾವಧಿ ನವೆಂಬರ್ 30ರಂದು ಕೊನೆಗೊಳ್ಳಲಿದೆ. ಹಿರಿತನದ ಆಧಾರದಡಿ ರಜನೀಶ್ ಗೋಯಲ್ ಅವರನ್ನು ಮುಂದಿನ ಮುಖ್ಯ ಕಾರ್ಯದರ್ಶಿಯನ್ನಾಗಿ ಆಯ್ಕೆ …
Read More »ರಾಜ್ಯಾಧ್ಯಕ್ಷ ಸ್ಥಾನದಿಂದ ವಜಾಗೊಳಿಸಿದ್ದನ್ನ ಪ್ರಶ್ನಿಸಿ ನಾನು ಕೋರ್ಟ್ಗೆ ಹೋಗುತ್ತೇನೆ: ಸಿಎಂ ಇಬ್ರಾಹಿಂ
ಬೆಂಗಳೂರು: ಜೆಡಿಎಸ್ ನನ್ನನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ವಜಾಗೊಳಿಸಿದ್ದು ತಪ್ಪು. ಹಾಗೂ ವಜಾಗೊಳಿಸಬೇಕೆಂದಿದ್ದರೆ ಸಭೆ ಕರೆದು 2/3 ಬೆಂಬಲದೊಂದಿಗೆ ಮಾಡಬೇಕು. ಯಾವುದೇ ನಿಯಮ ಪಾಲನೆ ಮಾಡದೇ ನನ್ನನ್ನು ಏಕಾಏಕಿ ಸ್ಥಾನದಿಂದ ತೆಗೆದು ಹಾಕಿದ್ದಾರೆ. ಈ ಬಗ್ಗೆ ನಾನು ಕೋರ್ಟ್ಗೆ ಹೋಗುತ್ತೇನೆ ಎಂದು ಹಿರಿಯ ರಾಜಕೀಯ ಮುಖಂಡ ಸಿ.ಎಂ. ಇಬ್ರಾಹಿಂ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಜೆಡಿಎಸ್ನಿಂದ ಅಮಾನತು ಮಾಡಿರುವ ವಿಚಾರದ ಕುರಿತು ಪ್ರತಿಕ್ರಿಯಿಸಿ, ಇನ್ನು ಏನು ಉಚ್ಚಾಟನೆ ರೀ, …
Read More »ಅಕಾಲಿಕವಾಗಿ ಮೃತಪಟ್ಟ ತಮ್ಮ ಮಗನ ನೆನಪಿಗಾಗಿ ದಂಪತಿ ಗೋಶಾಲೆಯನ್ನು ನಿರ್ಮಿಸುವ ಮೂಲಕ ಇತರರಿಗೆ ಮಾದರಿ
ಹಾವೇರಿ: ಕೆಲ ತಿಂಗಳ ಹಿಂದೆ ಸಂದೇಶ ಸೇಟ್(21) ಯುವಕ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಸಂದೇಶನ ಅಕಾಲಿಕ ಸಾವು ತಂದೆ – ತಾಯಿಗೆ ಆಘಾತ ಉಂಟು ಮಾಡಿತ್ತು. ಸಂದೇಶ ಜೀವಂತವಾಗಿದ್ದರೆ ಇಂದಿಗೆ 22ನೇ ವರ್ಷಕ್ಕೆ ಕಾಲಿಡುತ್ತಿದ್ದರು. ಆದರೆ ಜನ್ಮದಿನ ಆಚರಿಸಿಕೊಳ್ಳಬೇಕಾಗಿದ್ದ ಮಗ ಈಗ ನೆನಪು ಮಾತ್ರ. ಹಾಗಾಗಿ ಕುಟುಂಬಸ್ಥರು ಸಂದೇಶನ ಹೆಸರನ್ನು ಚಿರಸ್ಥಾಯಿಯಾಗಿಸಲು ಮುಂದಾಗಿದ್ದಾರೆ. ಸಂದೇಶ ಸೇಟ್ಹೌದು, ಕುಟುಂಬ ಇದೀಗ ಸಂದೇಶ ಹೆಸರಿನಲ್ಲಿ ಹಾವೇರಿ ಸಮೀಪದ ಗಾಂಧಿಪುರ ಗ್ರಾಮದಲ್ಲಿ ಗೋಶಾಲೆಯೊಂದನ್ನು ತೆರೆದಿದೆ. ಸಂದೇಶ …
Read More »ಬರಗಾಲದ ನಡುವೆ ರಾಜ್ಯದಲ್ಲಿ ಬಿತ್ತನೆಯಾಗಿದ್ದೆಷ್ಟು, ಫಸಲು ನಷ್ಟವಾಗಿದ್ದೆಷ್ಟು?
ಬೆಂಗಳೂರು: ರಾಜ್ಯದಲ್ಲಿ ಹಲವು ವರ್ಷಗಳ ನಂತರ ಮಳೆ ಕೊರತೆಯಿಂದ ಭೀಕರ ಬರಗಾಲ ಎದುರಾಗಿದ್ದು, ಇದರಿಂದ ರೈತರು ಕಂಗಾಲಾಗಿದ್ದಾರೆ. ರಾಜ್ಯದಲ್ಲಿ ಸರಿಯಾಗಿ ಮಳೆಯಾಗದ ಕಾರಣ ಸರ್ಕಾರ ಈ ಮೊದಲು 216 ಬರಪೀಡಿತ ತಾಲೂಕುಗಳೆಂದು ಘೋಷಣೆ ಮಾಡಿತ್ತು. ನಂತರ 7 ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಲಾಗಿದೆ. ಈಗಾಗಲೇ 216 ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಲಾಗಿದೆ. ಈಗ ಮತ್ತೂ 7 ತಾಲೂಕುಗಳನ್ನು ಬರಪೀಡಿತ ಎಂದು ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಈ ಮೂಲಕ …
Read More »