ವಿಜಯಪುರ: “ಜಿಲ್ಲೆಯ ನೂತನ ತಾಲೂಕು ತಿಕೋಟಾದ ಕನಮಡಿಯಲ್ಲಿ ಪಂಚಮಸಾಲಿ ಸಮಾಜದ ಮೀಸಲಾತಿ ಹೋರಾಟ ಮಾಡಿ ಸರ್ಕಾರದ ಗಮನ ಸೆಳೆಯಲು ನಿರ್ಧರಿಸಲಾಗಿದೆ” ಎಂದು ಕೂಡಲಸಂಗಮದ ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ತಿಳಿಸಿದರು. ವಿಜಯಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ತಿಕೋಟಾ ತಾಲೂಕಿನಲ್ಲಿ ಅತೀ ಹೆಚ್ಚು ಪಂಚಮಸಾಲಿ ಸಮಾಜದವರು ಇರುವ ಗ್ರಾಮವೆಂದರೆ ಅದು ಕನಮಡಿ ಗ್ರಾಮ, ಇಲ್ಲಿಯೇ ಪಂಚಮಸಾಲಿ ಸಮಾಜದ ಮೀಸಲಾತಿ ಹಕ್ಕೊತ್ತಾಯ ಬೃಹತ್ ಸಮಾವೇಶ ಮಾಡಲಿದ್ದೇವೆ” ಎಂದರು. “ರಾಣಿ ಚೆನ್ನಮ್ಮ ಅವರ ಜಯಂತ್ಯುತ್ಸವ ಮಾಡಬೇಕೆಂದು …
Read More »Yearly Archives: 2023
ಬರಲಿದೆ ನೇಮಕಾತಿ ಪರೀಕ್ಷೆ ಅಕ್ರಮ ತಡೆಗೆ ಕಠಿಣ ಕಾಯ್ದೆ; ಅಕ್ರಮ ಎಸಗಿದ್ರೆ ಆಸ್ತಿ ಮುಟ್ಟುಗೋಲು
ಬೆಂಗಳೂರು : ನೇಮಕಾತಿ ಪರೀಕ್ಷೆಗಳಲ್ಲಿನ ಅಕ್ರಮ ರಾಜ್ಯ ಸರ್ಕಾರದ ನಿದ್ದೆಗೆಡಿಸುತ್ತಿದೆ. ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಪರೀಕ್ಷೆ ಅಕ್ರಮ ಸಾಕಷ್ಟು ಸದ್ದು ಮಾಡಿತ್ತು. ಸಾಲು ಸಾಲು ನೇಮಕಾತಿ ಪರೀಕ್ಷೆ ಅಕ್ರಮಗಳಿಂದ ಅನೇಕ ಯೋಗ್ಯ ಅಭ್ಯರ್ಥಿಗಳು ಅವಕಾಶ ವಂಚಿತರಾಗುತ್ತಿದ್ದಾರೆ. ನೇಮಕಾತಿ ಪರೀಕ್ಷೆಗಳಲ್ಲಿ ನಡೆಯುವ ಅಕ್ರಮ ತಡೆಯಲು ರಾಜ್ಯ ಸರ್ಕಾರ ಇದೀಗ ಪ್ರತ್ಯೇಕ ಕಾಯ್ದೆ ತರಲು ತೀರ್ಮಾನಿಸಿದೆ. ಅಷ್ಟಕ್ಕೂ ಈ ಉದ್ದೇಶಿತ ಕಾಯ್ದೆಯಲ್ಲಿನ ಕಠಿಣ ನಿಯಮಗಳೇನು? ಎಂಬ ವರದಿ ಇಲ್ಲಿದೆ. ಪಿಎಸ್ಐ ನೇಮಕಾತಿ …
Read More »ನನಗೆ ರಾಜಾಧ್ಯಕ್ಷ ಸ್ಥಾನ ನೀಡಿ ಟಿ20 ಮ್ಯಾಚ್ ಆಡಲು ಅವಕಾಶ ಮಾಡಿಕೊಟ್ಟಿದ್ದಾರೆ: ಬಿ ವೈ ವಿಜಯೇಂದ್ರ
ಮೈಸೂರು: ನಮ್ಮ ರಾಷ್ಟ್ರೀಯ ಅಧ್ಯಕ್ಷರು ನನಗೆ ರಾಜಾಧ್ಯಕ್ಷ ಸ್ಥಾನದ ಜವಾಬ್ದಾರಿಯನ್ನ ನೀಡಿ ಟಿ20 ಮ್ಯಾಚ್ ಆಡಲು ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು. ಮೈಸೂರಿನಲ್ಲಿ ಮಾತನಾಡಿದ ಅವರು, ಕ್ರಿಕೆಟ್ನಂತೆ ರಾಜಕೀಯದಲ್ಲೂ ಟೀಂ ವರ್ಕ್ ಇರಬೇಕು ಎಂದು ಹೇಳುತ್ತಾರೆ. ನಾವು ಒಂದು ತಂಡವಾಗಿ ಕೆಲಸ ಮಾಡಿದರೆ ಯಶಸ್ಸನ್ನು ಸಾಧಿಸಲು ಸಾಧ್ಯ ಎಂದರು. ಬರುವ ದಿನಗಳಲ್ಲಿ ನನ್ನ ಟಿ20 ಮ್ಯಾಚ್ ಅನ್ನು ನೀವೇ ನೋಡಲಿದ್ದೀರಿ. ರಾಜಕೀಯವಾಗಿ ನನ್ನನ್ನು ಗುರುತಿಸಿದ್ದು …
Read More »ವಿದ್ಯುತ್ ತಂತಿ ತುಳಿದು ತಾಯಿ-ಮಗಳು ಸಾವು: ಐವರು ಸಿಬ್ಬಂದಿ ಅಮಾನತು
ಬೆಂಗಳೂರು: ವೈಟ್ ಫೀಲ್ಡ್ ವಿಭಾಗ ವ್ಯಾಪ್ತಿಯ ಕಾಡುಗೋಡಿಯ 4ನೇ ಪೂರ್ವ ಉಪ ವಿಭಾಗದ ಕಾಡುಗೋಡಿ ಹೋಪ್ ಫಾರ್ಮ್ ಸಿಗ್ನಲ್ ಸಮೀಪ ಪಾದಚಾರಿ ರಸ್ತೆ ಮೇಲೆ ತುಂಡಾಗಿ ಬಿದ್ದಿದ್ದ 11ಕೆವಿ ವಿದ್ಯುತ್ ತಂತಿ ತುಳಿದು ತಾಯಿ ಮತ್ತು ಮಗಳು ಮೃತಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ ಮೇಲ್ನೋಟಕ್ಕೆ ಕರ್ತವ್ಯಲೋಪ ಕಂಡ ಬಂದ ಹಿನ್ನೆಲೆಯಲ್ಲಿ ಬೆಸ್ಕಾಂನ ಐವರು ಸಿಬ್ಬಂದಿಯನ್ನು ಅಮಾನತುಗೊಳಿಸಿ, ಇಬ್ಬರು ಹಿರಿಯ ಅಧಿಕಾರಿಗಳಿಗೆ ಕಾರಣ ಕೇಳಿ ಶೋಕಾಸ್ ನೊಟೀಸ್ ಜಾರಿಗೊಳಿಸಲಾಗಿದೆ. ಭಾನುವಾರ ನಸುಕಿನ …
Read More »ಅನ್ನಭಾಗ್ಯ ಅಕ್ಕಿಯನ್ನು ಸರಿಯಾದ ಪ್ರಮಾಣದಲ್ಲಿ ಕೊಡುತ್ತಿಲ್ಲ: ರಡ್ಡೇರಹಟ್ಟಿ ಗ್ರಾಮದ ಜನರ ಆರೋಪ
ಚಿಕ್ಕೋಡಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಹತ್ವಾಕಾಂಕ್ಷಿ ಯೋಜನೆಯಾದ ಅನ್ನಭಾಗ್ಯ ಯೋಜನೆಯಲ್ಲಿ ಅಕ್ಕಿ ನೀಡುವ ಪ್ರಮಾಣದಲ್ಲಿ ಕಡಿತ ಮಾಡಿರುವ ಆರೋಪ ಕೇಳಿಬಂದಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ರಡ್ಡೇರಹಟ್ಟಿ ಗ್ರಾಮದಲ್ಲಿ ಐದು ಕೆಜಿ ಅಕ್ಕಿ ಬದಲು ನಾಲ್ಕೂವರೆ ಕೆಜಿ ಅಕ್ಕಿ ವಿತರಣೆ ಮಾಡಿದ್ದು, ಗ್ರಾಮಸ್ಥರು ಅಧಿಕಾರಿಗಳ ವಿರುದ್ಧ ಆರೋಪ ಮಾಡಿದ್ದಾರೆ. ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಪಡಿತರ ಚೀಟಿದಾರರಿಗೆ ಅಕ್ಕಿಯನ್ನು ವಿತರಣೆ ಮಾಡಲಾಗುತ್ತಿದೆ, ಇಲ್ಲಿ ಪ್ರತಿ ಒಂದು ಕಾರ್ಡಿಗೆ ಅರ್ಧ ಕೆಜಿ …
Read More »ಅಥಣಿಯಲ್ಲಿ ನಕಲಿ ದಾಖಲೆ ಸೃಷ್ಟಿಸಿ ಆಯುರ್ವೇದ ಕಾಲೇಜು ಸ್ಥಾಪನೆ ಮಾಡಲಾಗಿದೆ ಎಂದು ಡಾ ನಂದೀಶ ತೇರದಾಳ ಆರೋಪಿಸಿದ್ದಾರೆ.
ಚಿಕ್ಕೋಡಿ (ಬೆಳಗಾವಿ) : ರಾಜೀವ್ ಗಾಂಧಿ ಆರೋಗ್ಯ ಮತ್ತು ವಿಜ್ಞಾನ ವಿಶ್ವವಿದ್ಯಾಲಯ ಸಿಂಡಿಕೇಟ್ ಸದಸ್ಯರಾದ ಆನಂದ ಕಿರಶ್ಯಾಳ ಅವರು ಅಥಣಿಯಲ್ಲಿ ಕಾನೂನು ನಿಯಮಗಳನ್ನು ಗಾಳಿಗೆ ತೂರಿ, ನಕಲಿ ದಾಖಲೆಗಳನ್ನು ಸೃಷ್ಟಿಸಿ, ಪಟ್ಟಣದಲ್ಲಿ ಆಯುರ್ವೇದ ಕಾಲೇಜು ನಿರ್ಮಾಣ ಮಾಡಿದ್ದಾರೆ. ಇದರಲ್ಲಿ ಹಲವು ಅಧಿಕಾರಿಗಳು ಶಾಮಿಲಾಗಿದ್ದಾರೆ. ಕೆಲವು ಹಿರಿಯ ಅಧಿಕಾರಿಗಳೇ ಭ್ರಷ್ಟಾಚಾರಕ್ಕೆ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಆರೋಪಿಸಿರುವ ತೇರದಾಳ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ. ನಂದೀಶ ತೇರದಾಳ, ನಕಲಿ ವೈದ್ಯಕೀಯ ಕಾಲೇಜು ಸ್ಥಾಪನೆ ಬಗ್ಗೆ …
Read More »ತವರಿನಲ್ಲಿ ವಿಶ್ವಕಪ್ ಕೈಚೆಲ್ಲಿದ ಭಾರತ: 6ನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದ ಆಸೀಸ್
ಅಹಮದಾಬಾದ್ (ಗುಜರಾತ್): ಆಸ್ಟ್ರೇಲಿಯಾ ತಂಡ 6ನೇ ಬಾರಿಗೆ ಏಕದಿನ ವಿಶ್ವಕಪ್ ಗೆದ್ದುಕೊಂಡಿದೆ. ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ವಿಶ್ವಕಪ್ ಫೈನಲ್ನಲ್ಲಿ ಭಾರತ ನೀಡಿದ್ದ 241 ರನ್ಗಳ ಸಾಧಾರಣ ಗುರಿಯನ್ನು ಆಸೀಸ್ 7 ಓವರ್ ಉಳಿಸಿಕೊಂಡು 6 ವಿಕೆಟ್ನಿಂದ ಗೆದ್ದಿದೆ. 2003ರಲ್ಲಿ ಕಾಂಗರೂ ಪಡೆ ವಿರುದ್ಧ ಸೋಲು ಕಂಡಿದ್ದ ಭಾರತ, ಇದೀಗ 20 ವರ್ಷದ ನಂತರವೂ ವಿಶ್ವಕಪ್ ಫೈನಲ್ನಲ್ಲಿ ಸೋಲು ಕಂಡಿದೆ. 2003ರ ವಿಶ್ವಕಪ್ನಲ್ಲಿ ರಿಕಿ ಪಾಂಟಿಂಗ್ 140 ರನ್ ಗಳಿಸಿ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ
ಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಮೂಡಲಗಿ ತಾಲೂಕಿನ ತೋಕರಟ್ಟಿ ಗ್ರಾಮದಲ್ಲಿ ಶ್ರೀ ಹನುಮಾನ್ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ …
Read More »ಬಿಜೆಪಿ ಸಭೆ ಬಹಿಷ್ಕರಿಸಿದ ಬೆನ್ನಲ್ಲೇ ಆಕ್ರೋಶ ಹೊರ ಹಾಕಿದ ಯತ್ನಾಳ್ ಟ್ವೀಟ್ ವೈರಲ್
ಬೆಂಗಳೂರು: ವಿಧಾನಸಭೆ ಮತ್ತು ವಿಧಾನ ಪರಿಷತ್ ವಿಪಕ್ಷ ನಾಯಕರ ಆಯ್ಕೆಗಾಗಿ ನಡೆದ ಶಾಸಕಾಂಗ ಸಭೆಯಿಂದ ಹೊರ ನಡೆದ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಆಕ್ರೋಶ ಹೊರ ಹಾಕಿದ್ದಾರೆ. ಟ್ವೀಟ್ ಮಾಡಿರುವ ಯತ್ನಾಳ್ ಅವರು, “ನ ದೈನ್ಯಂ, ನ ಪಲಾಯನಂ… ಒಬ್ಬ ಯೋಧ ಯಾವುದನ್ನೂ ದೂರಲು ಅಥವಾ ವಿಷಾದಿಸಲು ಸಾಧ್ಯವಿಲ್ಲ. ಅವನ ಜೀವನವು ಅಂತ್ಯವಿಲ್ಲದ ಸವಾಲು, ಮತ್ತು ಸವಾಲುಗಳು ಬಹುಶಃ ಒಳ್ಳೆಯದು ಅಥವಾ ಕೆಟ್ಟದ್ದಾಗಿರಲು ಸಾಧ್ಯವಿಲ್ಲ. ಸವಾಲುಗಳು ಸರಳವಾಗಿ ಸವಾಲುಗಳು.” ಎಂದು …
Read More »ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ : 71 ‘ಪೊಲೀಸ್ ಇನ್ಸ್ ಪೆಕ್ಟರ್’ ಗಳ ವರ್ಗಾವಣೆ
ಬೆಂಗಳೂರು : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ನಡೆದಿದ್ದು, 71 ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಬಗ್ಗೆ ಐಪಿಎಸ್ ಅಧಿಕಾರಿ ಸೌಮೇಂದು ಮುಖರ್ಜಿ ಆದೇಶ ಹೊರಡಿಸಿದ್ದು ಪೊಲೀಸ್ ಸಿಬ್ಬಂದಿ ಮಂಡಳಿಯ ಸಭೆಯ ನಿರ್ಣಯದಂತೆ ಈ ಕೆಳಕಂಡ ಪೊಲೀಸ್ ಇನ್ಸ್ಪೆಕ್ಟರ್ (ಸಿವಿಲ್) ರವರುಗಳನ್ನು ಆಡಳಿತಾತ್ಮಕ ಕಾರಣಗಳಿಗಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಅವರುಗಳ ಹೆಸರಿನ ಮುಂದೆ ಸೂಚಿಸಿರುವ ಸ್ಥಳಕ್ಕೆ ವರ್ಗಾವಣೆ ಮಾಡಿ …
Read More »