ಬೆಂಗಳೂರು : ಮಕ್ಕಳು ಹಾಗೂ ಗರ್ಭಿಣಿಯರಿಗೆ ಪೌಷ್ಠಿಕ ಆಹಾರ ಸರಬರಾಜು ಮಾಡಲು ಅನರ್ಹ ಸಂಸ್ಥೆಗಳಿಗೆ ನೀಡಿದ ಗುತ್ತಿಗೆಯಲ್ಲಿ ಸುಮಾರು 600 ಕೋಟಿ ರೂ. ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ವಕೀಲ ಎಸ್ ನಟರಾಜ ಶರ್ಮಾ ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಇಲಾಖೆಯಲ್ಲಿ ಜವಾಬ್ದಾರಿ ಹೊತ್ತ ಮೂವರ ವಿರುದ್ಧ ದೂರು ನೀಡಲಾಗಿದೆ. ಇಲಾಖೆಯು ಅಂಗನವಾಡಿಯಲ್ಲಿ ಮಕ್ಕಳಿಗೆ ಹಾಗೂ ಗರ್ಭಿಣಿಯರಿಗೆ ಪೌಷ್ಠಿಕ ಆಹಾರ ಸರಬರಾಜು ಮಾಡಲು ನೀಡಿರುವ ಟೆಂಡರ್ ವಿಚಾರದಲ್ಲಿ ಗೋಲ್‌ಮಾಲ್ ನಡೆದಿದೆ …
Read More »Yearly Archives: 2023
ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಆರಂಭಕ್ಕೂ ಮುನ್ನ ಹೋಟೆಲ್ನಿಂದ ನಿರ್ಗಮಿಸಿದ ಯತ್ನಾಳ್, ಜಾರಕಿಹೊಳಿ
ಬೆಂಗಳೂರು: ಪ್ರತಿಪಕ್ಷ ನಾಯಕರ ಆಯ್ಕೆ ಹಿನ್ನೆಲೆ ಕರೆಯಲಾಗಿರುವ ರಾಜ್ಯ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಆರಂಭಗೊಂಡಿದ್ದು, ಪ್ರತಿಪಕ್ಷ ನಾಯಕರ ಆಯ್ಕೆ ಕುರಿತು ಹೈಕಮಾಂಡ್ನಿಂದ ಆಗಮಿಸಿರುವ ವೀಕ್ಷಕರು ಅಭಿಪ್ರಾಯ ಸಂಗ್ರಹ ಕಾರ್ಯ ನಡೆಸಲಿದ್ದಾರೆ. ನಂತರ ಹೈಕಮಾಂಡ್ಗೆ ವರದಿ ಸಲ್ಲಿಸಲಿದ್ದು, ನಂತರ ಹೈಕಮಾಂಡ್ನಿಂದ ಹೆಸರು ಪ್ರಕಟವಾಗಲಿದೆ. ನಗರದ ಐಟಿಸಿ ಗಾರ್ಡೇನಿಯಾ ಹೋಟೆಲ್ನಲ್ಲಿ ರಾಜ್ಯ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯುತ್ತಿದೆ. ಸಭೆ ಆರಂಭಕ್ಕೂ ಮುನ್ನ ಹೋಟೆಲ್ಗೆ ಬಂದಿದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ …
Read More »ನಾನು ಆಡಿದ ಮಾತಿನಿಂದ ಬೆಳಗಾವಿಯ ಪತ್ರಕರ್ತ ಸಹೋದರರಿಗೆ ನೋವಾಗಿದ್ದರೆ ನಾನು ವಿಷಾಧಿಸುತ್ತೇನೆ: ಹೆಬ್ಬಾಳಕರ್
ಬೆಳಗಾವಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ನವೆಂಬರ್ 11ರಂದು ಬೆಳಗಾವಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನಾನು ಆಡಿದ ಮಾತಿನಿಂದ ಬೆಳಗಾವಿಯ ಪತ್ರಕರ್ತ ಸಹೋದರರಿಗೆ ನೋವಾಗಿದ್ದರೆ ನಾನು ವಿಷಾಧಿಸುತ್ತೇನೆ. ಅಲ್ಲಿ ನಾನು ಸಕಾರಾತ್ಮಕ ದೃಷ್ಟಿಕೋನದಿಂದ ಮಾತನಾಡಿದ್ದೇನೆಯೇ ಹೊರತು ಬೇರೆ ಯಾವುದೇ ಉದ್ದೇಶದಿಂದಲ್ಲ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಪತ್ರಕರ್ತರು ರಾಜಕೀಯಕ್ಕಿಂತ ಅಭಿವೃದ್ಧಿ ವಿಷಯದ ಮೇಲೆ …
Read More »ಒಂದೇ ವೇದಿಕೆ ಹಂಚಿಕೊಂಡ ಮೂವರು ನಾಯಕರು
ಬೆಂಗಳೂರು: ಇಲ್ಲಿನ ಖಾಸಗಿ ಹೊಟೇಲ್‌ನಲ್ಲಿ ಗುರುವಾರ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಮತ್ತು ರಮಣಶ್ರೀ ಪ್ರತಿಷ್ಠಾನ ಆಯೋಜಿಸಿದ್ದ ಹದಿನೆಂಟನೇ ವರ್ಷದ ‘ರಮಣಶ್ರೀ ಶರಣ ಪ್ರಶಸ್ತಿ’ ಪ್ರದಾನ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ವಿ.ಸೋಮಣ್ಣ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡರು. ಮೂವರು ನಾಯಕರು ಒಂದೇ ವೇದಿಕೆ ಹಂಚಿಕೊಂಡಿರುವುದು ವಿಧಾನಸಭಾ ಚುನಾವಣೆಯ ಬಳಿಕ ಇದೇ ಮೊದಲು. ವಿ.ಸೋಮಣ್ಣ ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸಿ ಸೋತಿದ್ದರು. ಅದಾದ ಬಳಿಕ …
Read More »ಪ್ರಿಯಕರನಿಂದಲೇ ಪ್ರೇಯಸಿಯ ಕೊಲೆ,
ಹಾಸನ: ತನ್ನಿಂದ ದೂರಾಗುತ್ತಿದ್ದಾಳೆ ಎಂದು ಕೋಪಗೊಂಡ ಪ್ರಿಯಕರನೋರ್ವ ತನ್ನ ಪ್ರಿಯತಮೆಯನ್ನು ಭೀಕರವಾಗಿ ಕೊಲೆಗೈದ ಘಟನೆ ಗುರುವಾರ ಹಾಸನದಲ್ಲಿ ನಡೆದಿದೆ. ಆಲೂರು ತಾಲ್ಲೂಕಿನ ಕವಳಿಕೆರೆ ನಿವಾಸಿ ಸುಚಿತ್ರ (20) ಸಾವನ್ನಪ್ಪಿದ್ದಾರೆ. ಹಾಸನ ತಾಲ್ಲೂಕಿನ ಶಂಕರನಹಳ್ಳಿಯ ನಿವಾಸಿ ತೇಜಸ್ ಕೊಲೆ ಆರೋಪಿ. ಪ್ರಕರಣದ ವಿವರ: ಮೊಸಳೆ ಹೊಸಹಳ್ಳಿ ಗ್ರಾಮದ ಹೊರಭಾಗದಲ್ಲಿರುವ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಇಬ್ಬರು ಬಿಇ ವ್ಯಾಸಂಗ ಮಾಡುತ್ತಿದ್ದರು. ಕಳೆದ ಒಂದು ವರ್ಷದಿಂದ ಪ್ರೀತಿಸುತ್ತಿದ್ದರು. ಕೆಲ ದಿನಗಳಿಂದ ಇಬ್ಬರ ಪ್ರೀತಿಯಲ್ಲಿ ಬಿರುಕು ಮೂಡಿದೆ. ಇದರಿಂದ …
Read More »ಭಾರತ-ಆಸೀಸ್ ಪಂದ್ಯ; ಟಿಕೆಟ್‌ಗಾಗಿ ಮುಗಿಬಿದ್ದ ಯುವಜನತೆ
ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ನಡೆಯಲಿರುವ ಭಾರತ-ಆಸ್ಟ್ರೇಲಿಯಾ ನಡುವಿನ ಕ್ರಿಕೆಟ್ ಪಂದ್ಯದ ಟಿಕೆಟ್‌ಗಳ ಮಾರಾಟ ಪ್ರಕ್ರಿಯೆ ಆಫ್‌ಲೈನ್‌ನಲ್ಲಿ ಪ್ರಾರಂಭವಾಗಿದ್ದು, ಖರೀದಿಗೆ ಯುವಜನತೆ ಮುಗಿಬಿದ್ದ ದೃಶ್ಯ ಕಂಡುಬಂತು. ವಿಶಾಖಪಟ್ಟಣಂ(ಆಂಧ್ರಪ್ರದೇಶ): ನಗರದಲ್ಲಿ ನಡೆಯಲಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಟಿ20 ಪಂದ್ಯದ ಟಿಕೆಟ್‌ಗಳ ಮಾರಾಟ ಆಫ್‌ಲೈನ್‌ನಲ್ಲಿ ಶುರುವಾಗಿದೆ. ಇದೇ ತಿಂಗಳ 23ರಂದು ನಗರದ ಎಸಿಎ-ವಿಡಿಸಿಎ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದೆ. ಆನ್‌ಲೈನ್ ಟಿಕೆಟ್‌ಗಳ ಮಾರಾಟ ಈಗಾಗಲೇ ಪೂರ್ಣಗೊಂಡಿದೆ. ಇಂದಿನಿಂದ ಆಫ್‌ಲೈನ್‌ನಲ್ಲಿ ಸೇಲ್ ನಡೆಯುತ್ತಿದ್ದು, ಕ್ರಿಕೆಟ್ ಪ್ರೇಮಿಗಳು ಕೌಂಟರ್‌ಗಳತ್ತ ಮುಗಿಬಿದ್ದರು. …
Read More »ದಂಡ ಕಟ್ಟಿದ್ದೇನೆ, ಕರೆಂಟ್ ಕಳ್ಳ ಎನ್ನುವುದನ್ನು ನಿಲ್ಲಿಸಿ: H.D.K.
ಬೆಂಗಳೂರು: “ದೀಪಾವಳಿ ಸಂದರ್ಭದಲ್ಲಿ ನಮ್ಮ ಮನೆಯಲ್ಲಿ ನಡೆದ ಅಚಾತುರ್ಯದ ಬಗ್ಗೆ ನಾನು ವಿಷಾದ ವ್ಯಕ್ತಪಡಿಸುತ್ತೇನೆ. ಈಗಾಗಲೇ ನನಗೆ ಕರೆಂಟ್ ಕಳ್ಳ ಎನ್ನುವ ಲೇಬಲ್ ಅನ್ನು ಸಿಎಂ, ಡಿಸಿಎಂ ಹಾಗೂ ಅವರ ಪಟಾಲಂ ಸೇರಿ ಇಟ್ಟಿದ್ದಾರೆ. ನನ್ನನ್ನು ಕರೆಂಟ್ ಕಳ್ಳ ಎನ್ನುವ ಇವರ ಆರೋಪಗಳಿಗೆಲ್ಲ ನಾನು ಹೆದರಲ್ಲ. ನಿಮ್ಮಷ್ಟು ಕಳ್ಳತನ ನಾನು ಮಾಡಿಲ್ಲ. ಬೆಸ್ಕಾಂ ನೀಡಿರುವ ಬಿಲ್ ಹಾಗೂ ದಂಡ ಕಟ್ಟಿದ್ದೇನೆ. ಇನ್ನು ಮುಂದೆ ಕರೆಂಟ್ ಕಳ್ಳ ಎನ್ನುವುದನ್ನು ನಿಲ್ಲಿಸಬೇಕು” ಎಂದು ಮಾಜಿ …
Read More »ಜಮೀರ್ ಹೇಳಿಕೆ ಖಂಡನೀಯ, ಇಂಥ ತಪ್ಪಾಗದಂತೆ ಎಚ್ಚರಿಕೆ ವಹಿಸಲಿ: ವಿಜಯೇಂದ್ರ
ಬೆಂಗಳೂರು: “ಜಮೀರ್ ಅಹಮದ್ ಯಾವುದೋ ಒಂದು ಸಮುದಾಯದ ಜವಾಬ್ದಾರಿ ತಗೊಂಡಿಲ್ಲ. ನೀವು ನಿಮ್ಮ ಅಂತರಾಳದ ಮಾತು ಆಡಿದ್ದೀರಿ. ಈ ಹೇಳಿಕೆ ನಿಜಕ್ಕೂ ದುರದೃಷ್ಟಕರ. ಇನ್ನು ಮುಂದೆ ಈ ರೀತಿ ಮಾತಾಡದಂತೆ ಎಚ್ಚರಿಕೆ ವಹಿಸಿ” ಎಂದು ಸಚಿವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಲಹೆ ನೀಡಿದರು. ಜಮೀರ್ ಅಹಮ್ಮದ್ ಅವರು ತೆಲಂಗಾಣ ವಿಧಾನಸಭಾ ಚುನಾವಣೆಯ ಪ್ರಚಾರದ ವೇಳೆ ಮಾತನಾಡಿದ್ದಾರೆ ಎನ್ನಲಾದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ಕುರಿತು ಶಿವಾನಂದ ವೃತ್ತದಲ್ಲಿರುವ ಅಪಾರ್ಟ್ಮೆಂಟ್ನಲ್ಲಿ …
Read More »ಈ ಸಾರಿ ವರ್ಲ್ಡ್ ಕಪ್ ನಮ್ದೇ’: ರಜಿನಿಕಾಂತ್ ವಿಶ್ವಾಸ
ಅಹಮದಾಬಾದ್(ಗುಜರಾತ್): ತಮಿಳು ಸೂಪರ್ ಸ್ಟಾರ್ ರಜಿನಿಕಾಂತ್ ಅವರು ಕ್ರಿಕೆಟ್ನ ಕಟ್ಟಾ ಅಭಿಮಾನಿ. ತಮ್ಮ ನೆಚ್ಚಿನ ಕ್ರಿಕೆಟಿಗರ ಬಗ್ಗೆಯೂ ಆಗಾಗ ಅವರು ಮಾತನಾಡುತ್ತಾರೆ. ಇತ್ತೀಚೆಗೆ ನಡೆದ ಭಾರತ-ನ್ಯೂಜಿಲೆಂಡ್ ಸೆಮಿ ಫೈನಲ್ ಪಂದ್ಯಕ್ಕೆ ಕುಟುಂಬಸಮೇತರಾಗಿ ಆಗಮಿಸಿ ಸಂಭ್ರಮಿಸಿದ್ದರು. ಮುಂಬೈನಿಂದ ಚೆನ್ನೈಗೆ ಮರಳಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿಶ್ವಕಪ್ ಫೈನಲ್ ಕುರಿತು ಆಸಕ್ತಿದಾಯಕ ವಿಷಯಗಳನ್ನು ಹಂಚಿಕೊಂಡರು. ರಜಿನಿಕಾಂತ್ ನ್ಯೂಜಿಲೆಂಡ್ ವಿರುದ್ಧದ ಪಂದ್ಯದ ಕುರಿತು ಮಾತನಾಡುತ್ತಾ, ನಾವು ಮೊದಲು ಸ್ವಲ್ಪ ಹೊತ್ತು ಟೆನ್ಷನ್ ಆಗಿದ್ದೆವು. ಪ್ರತಿ ವಿಕೆಟ್ …
Read More »ಡಿಸೆಂಬರ್ ನಿಂದ ಒಂದು ಲೋಟ ರಾಗಿ ಮಾಲ್ಟ್ ಶಾಲಾ ವಿದ್ಯಾರ್ಥಿ’ಗಳಿಗೆ
ಬೆಂಗಳೂರು: ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಅಪೌಷ್ಠಿಕತೆಯನ್ನು ನಿವಾರಿಸೋ ನಿಟ್ಟಿನಲ್ಲಿ ಶೀಘ್ರವೇ ಪೌಷ್ಠಿಕಾಂಶ ಯುಕ್ತ ಆಹಾರ ನೀಡೋದಾಗಿ ಸರ್ಕಾರ ಹೇಳಿತ್ತು. ಅದರ ಭಾಗವಾಗಿ ಡಿಸೆಂಬರ್ ನಿಂದ ಒಂದು ಲೋಟ ರಾಗಿ ಮಾಲ್ಟ್ ವಿತರಿಸೋದಕ್ಕೆ ನಿರ್ಧರಿಸಿದೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡೀದಂತ ಶಿಕ್ಷಣ ಸಚಿವ ಮಧು ಎಸ್ ಬಂಗಾರಪ್ಪ ಅವರು, ರಾಜ್ಯದ ಸರ್ಕಾರಿ, ಅನುದಾನಿತ ಶಾಲಾ ಮಕ್ಕಳಿಗೆ ಬಿಸಿಯೂಟದ ಜೊತೆಗೆ ವಾರದಲ್ಲಿ 2 ದಿನ ಮೊಟ್ಟ, ಚಿಕ್ಕಿ-ಬಾಳೆಹಣ್ಣು ನೀಡಲಾಗುತ್ತಿದೆ. ಇದಲ್ಲದೇ ಡಿಸೆಂಬರ್ …
Read More »