Breaking News

Yearly Archives: 2024

ಬೆಳಗಾವಿಯವರೆಗೆ ಸೇವೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ಶೆಟ್ಟರ್ ಪತ್ರ

ಬೆಳಗಾವಿ: ‘ಬೆಂಗಳೂರು-ಧಾರವಾಡ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಸೇವೆಯನ್ನು ಬೆಳಗಾವಿಯವರೆಗೆ ವಿಸ್ತರಿಸಿ’ ಎಂದು ಸಂಸದ ಜಗದೀಶ ಶೆಟ್ಟರ್‌ ಅವರು, ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಭಾನುವಾರ ಪತ್ರ ಬರೆದಿದ್ದಾರೆ. ‘ಬೆಂಗಳೂರು-ಧಾರವಾಡ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಸೇವೆಯನ್ನು ಬೆಳಗಾವಿಯವರೆಗೆ ವಿಸ್ತರಿಸಬೇಕೆಂಬ ಜನರ ಬೇಡಿಕೆ ಬಹಳ ದಿನಗಳಿಂದ ಇದೆ. ಈ ಹಿಂದೆ ಬೆಳಗಾವಿಯವರೆಗೆ ಕೈಗೊಂಡಿದ್ದ ರೈಲಿನ ಪ್ರಾಯೋಗಿಕ ಸಂಚಾರವೂ ಯಶಸ್ವಿಯಾಗಿತ್ತು. ಆದರೆ, ತಾಂತ್ರಿಕ ಕಾರಣ ನೀಡಿದ ರೈಲ್ವೆ ಅಧಿಕಾರಿಗಳು …

Read More »

ಸರಣಿ ಅಪಘಾತ: ಇಬ್ಬರು ಸಾವು

ನಿಪ್ಪಾಣಿ: ನಗರದ ಹೊರವಲಯದ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ತವನಿಧಿ ಘಟ್ಟದ ಕೆಳಗೆ ಭಾನುವಾರ ಸಂಜೆ ಸಂಭವಿಸಿದ ಸರಣಿ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಸ್ಥಳೀಯ ನಿವಾಸಿ ಜಬಿನ್ ಮಕಾನದಾರ(58), ಚಿಕ್ಕೋಡಿ ತಾಲ್ಲೂಕಿನ ಖಡಕಲಾಟದ ಗಣಪತಿ ಮಾನೆ(45), ರೇಖಾ ಗಾಡಿವಡ್ಡರ(35), ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ಪಟ್ಟಣಕೋಡೊಲಿಯ ದಿಲದಾರ್ ಮುಲ್ಲಾ(61) ಮೃತರು. ಇದೇ ಘಟನೆಯಲ್ಲಿ ಗಾಯಗೊಂಡ 4 ಮಂದಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ‘ಬೆಳಗಾವಿಯಿಂದ ಕೊಲ್ಹಾಪುರಕ್ಕೆ ಹೋಗುತ್ತಿದ್ದ ಕಂಟೇನರ್ ಘಟ್ಟದಿಂದ ಇಳಿಯುತ್ತಿದ್ದಂತೆ ನಿಯಂತ್ರಣ ತಪ್ಪಿ, ರಸ್ತೆಯ …

Read More »

ಅಮೆರಿಕ ಮಾಜಿ ಅಧ್ಯಕ್ಷ ‘ಡೊನಾಲ್ಡ್ ಟ್ರಂಪ್’ ಮೇಲೆ ಮತ್ತೆ ಗುಂಡಿನ ದಾಳಿ

ಫ್ಲೋರಿಡಾ: ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾನುವಾರ ಫ್ಲೋರಿಡಾದ ವೆಸ್ಟ್ ಪಾಮ್ ಬೀಚ್ನಲ್ಲಿ ಗಾಲ್ಫ್ ಆಡುತ್ತಿದ್ದಾಗ ಮತ್ತೆ ಗುಂಡಿನ ದಾಳಿ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಬಂಧಿತನನ್ನು ರಯಾನ್ ವೆಸ್ಲಿ ರೌತ್ ಎಂದು ಗುರುತಿಸಲಾಗಿದೆ.   ಟ್ರಂಪ್ ನ್ನು ಕೊಲ್ಲಲು ಪ್ರಯತ್ನಿಸುತ್ತಿರುವುದು ಇದು ಎರಡನೇ ಬಾರಿ. ಪಾಮ್ ಬೀಚ್ ಕೌಂಟಿ ಶೆರಿಫ್ ರಿಕ್ ಬ್ರಾಡ್ಶಾ ಮಾತನಾಡಿ, ಮಧ್ಯಾಹ್ನ 2 ಗಂಟೆ ಸುಮಾರಿಗೆ ಟ್ರಂಪ್ನಿಂದ 300 ರಿಂದ 500 ಗಜಗಳ …

Read More »

ಶೀಘ್ರವೇ ಮೋದಿ 3.0 ಸರ್ಕಾರದಿಂದ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಜಾರಿ; ಇದು ಬಿಜೆಪಿ ಗ್ಯಾರೆಂಟಿ!

ನವದೆಹಲಿ: 3ನೇ ಅವಧಿಗೆ ಅಧಿಕಾರಕ್ಕೆ ಬಂದಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ತನ್ನ ಅಧಿಕಾರಾವಧಿಯಲ್ಲಿ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಜಾರಿಗೆ ತರಲಿದೆ. ಇದರೊಂದಿಗೆ ಮೋದಿ ಸರ್ಕಾರ ಪ್ರತಿಪಕ್ಷಗಳಿಗೆ ಭಾರಿ ಹೊಡೆತ ನೀಡುವ ನಿರೀಕ್ಷೆಯಿದೆ. ಜನಗಣತಿ ಪ್ರಕ್ರಿಯೆ ಕೂಡ ಶೀಘ್ರದಲ್ಲೇ ಆರಂಭವಾಗಲಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಇದರೊಂದಿಗೆ, ಚುನಾವಣೆಯ ನಂತರ ಕಡಿಮೆ ಸಮಯದಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನವನ್ನು ಪುನಃಸ್ಥಾಪಿಸಲಾಗುತ್ತದೆ. ಸರ್ಕಾರಿ ಮೂಲಗಳು ನ್ಯೂಸ್ …

Read More »

ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿಯಿಂದ ಆರಂಭಕಾರ ಶುಭಮನ್‌ ಗಿಲ್‌ ಸೇರಿದಂತೆ ಕೆಲವರಿಗೆ ವಿಶ್ರಾಂತಿ

ಹೊಸದಿಲ್ಲಿ: ಬಿಸಿಸಿಐನ “ವರ್ಕ್‌ಲೋಡ್‌ ಮ್ಯಾನೇಜ್‌ಮೆಂಟ್‌ ಪಾಲಿಸಿ’ ಯಂತೆ ಪ್ರವಾಸಿ ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿಯಿಂದ ಆರಂಭಕಾರ ಶುಭಮನ್‌ ಗಿಲ್‌ ಸೇರಿದಂತೆ ಕೆಲವರಿಗೆ ವಿಶ್ರಾಂತಿ ನೀಡಲು ನಿರ್ಧರಿಸಲಾಗಿದೆ. 3 ಪಂದ್ಯಗಳ ಟಿ20 ಸರಣಿ ಅ. 7ರಂದು ಆರಂಭವಾಗಲಿದ್ದು, ಇದು ಮುಗಿದ ಮೂರೇ ದಿನದಲ್ಲಿ ನ್ಯೂಜಿಲ್ಯಾಂಡ್‌ ವಿರುದ್ಧದ ಟೆಸ್ಟ್‌ ಸರಣಿ ಮೊದಲ್ಗೊಳ್ಳಲಿದೆ. ಹೀಗಾಗಿ ಗಿಲ್‌ ಅವರಿಗೆ ಹೆಚ್ಚಿನ ವಿಶ್ರಾಂತಿ ಲಭಿಸುತ್ತದೆ ಎಂಬುದು ಬಿಸಿಸಿಐ ಲೆಕ್ಕಾಚಾರ. ಇದನ್ನು ಬಿಸಿಸಿಐ ಮೂಲವೂ ದೃಢಪಡಿಸಿದೆ. ಉಳಿದಂತೆ ಜಸ್‌ಪ್ರೀತ್‌ ಬುಮ್ರಾ …

Read More »

ಗ್ಯಾರಂಟಿಗೆ ದಲಿತರ ಹಣ: ಒಪ್ಪಿಕೊಂಡ ಸಿಎಂ ಸಿದ್ದು!

ಬೆಂಗಳೂರು: “ತಪ್ಪಾಗಿದೆ, ಸರಿಪಡಿಸಿ ಕೊಳ್ಳೋಣ…’ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಮೀಸಲಿಟ್ಟ ಅನುದಾನ ಗ್ಯಾರಂಟಿ ಯೋಜನೆಗಳಿಗೆ ಬಳಕೆ ಆಗಿದೆ ಎಂಬ ವಿಪಕ್ಷಗಳ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ರೀತಿ ಪ್ರತಿಕ್ರಿಯಿಸುವ ಮೂಲಕ ತಪ್ಪಾಗಿರುವುದನ್ನು ಒಪ್ಪಿಕೊಂಡಿದ್ದಾರೆ.   ವಿಧಾನಸೌಧದ ಮುಂಭಾಗ ರವಿವಾರ ಪ್ರಜಾಪ್ರಭುತ್ವ ದಿನದ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಜನಸಂಖ್ಯೆಗೆ ಅನುಗುಣವಾಗಿ ಅಭಿವೃದ್ಧಿ ಹಣ ನೀಡಲು ದೇಶದಲ್ಲೇ ಮೊದಲ ಬಾರಿಗೆ ಕಾನೂನು ತಂದವರು ನಾವು. …

Read More »

ಸಿಎಂ ಸ್ಥಾನಕ್ಕೆ ಅರವಿಂದ್ ಕೇಜ್ರಿವಾಲ್ ರಾಜೀನಾಮೆ ಘೋಷಿಸಿದ ಬೆನ್ನಲ್ಲೇ ಅಣ್ಣಾ ಹಜಾರೆ ಮಹತ್ವದ ಹೇಳಿಕೆ!

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಸಿಎಂ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ನಂತರ ದೆಹಲಿ ರಾಜಕೀಯ ವಲಯದಲ್ಲಿ ಅಲ್ಲೋಲ ಕಲ್ಲೋಲ ಉಂಟಾಗಿದೆ. ಕೇಜ್ರಿವಾಲ್ ಸಿಎಂ ಸ್ಥಾನಕ್ಕೆ ರಾಜೀನಾಮೆ ಘೋಷಣೆ ಮಾಡಿರೋದು (Anna Hazare) ಅಚ್ಚರಿ ಮೂಡಿಸಿದೆ. ಈತನ್ಮಧ್ಯೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ಘೋಷಣೆ ಮಾಡಿದ ನಂತರ ಇದೀಗ ಕೇಜ್ರಿವಾಲ್ ಅವರ ನಿರ್ಧಾರಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅವರು …

Read More »

ಸ್ಯಾಂಡಲ್ ವುಡ್ ನಲ್ಲಿ ಲೈಂಗಿಕ ಶೋಷಣೆ: ಸಮಿತಿ ರಚನೆ ಸಂಬಂಧ ಇಂದು ಮಹತ್ವದ ಸಭೆ

ಕನ್ನಡ ಚಿತ್ರರಂಗದಲ್ಲಿ ಕೇಳಿ ಬರುತ್ತಿರುವ ಲೈಂಗಿಕ ಶೋಷಣೆ ಬಗ್ಗೆ ಸತ್ಯಾಸತ್ಯತೆ ತಿಳಿಯಲು ಸಮಿತಿ ರಚಿಸುವ ಕುರಿತಾಗಿ ಇಂದು ಮಹತ್ವದ ಸಭೆ ನಡೆಯಲಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಸೆಪ್ಟೆಂಬರ್ 16ರಂದು ಬೆಳಿಗ್ಗೆ ಸಭೆ ನಡೆಸಲಿದೆ. ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್.ಎಂ. ಸುರೇಶ್ ಅವರು ರಾಜ್ಯ ಮಹಿಳಾ ಆಯೋಗದ ಮನವಿ ಮೇರೆಗೆ ಸಭೆ ಕರೆದಿದ್ದು, ಕನ್ನಡ ಚಿತ್ರರಂಗದಲ್ಲಿ ನಡೆಯುತ್ತಿದೆ ಎನ್ನಲಾದ ಲೈಂಗಿಕ ಶೋಷಣೆಯ ಕುರಿತಾಗಿ ಚರ್ಚೆ ನಡೆಸಲಾಗುವುದು. ಇದುವರೆಗೆ ಮಂಡಳಿಗೆ ಲೈಂಗಿಕ …

Read More »

‘PSI ಪರಶುರಾಂ’ ಸಾವಿಗೆ ಹೃದಯಾಘಾತ ಕಾರಣ: ‘ಮರಣೋತ್ತರ ಪರೀಕ್ಷೆ ವರದಿ’ಯಲ್ಲಿ ಬಹಿರಂಗ

ಯಾದಗಿರಿ: ರಾಜ್ಯದಲ್ಲಿ ಪಿಎಸ್‌ಐ ಪರಶುರಾಂ ದಿಢೀರ್ ಸಾವು, ಕೋಲಾಹಲವನ್ನೇ ಸೃಷ್ಠಿಸಿತ್ತು. ಈಗ ಅವರ ಮರಣೋತ್ತರ ಪರೀಕ್ಷೆಯ ವರದಿ ಪೊಲೀಸರ ಕೈ ಸೇರಿದೆ. ಅದರಲ್ಲಿ ಪಿಎಸ್‌ಐ ಪರಶುರಾಂ ಸಾವಿಗೆ ಹೃದಯಾಘಾತವೇ ಕಾರಣ ಎಂಬುದಾಗಿ ಬಹಿರಂಗವಾಗಿದೆ. ಯಾದಗಿರಿಯ ನಗರ ಠಾಣೆಯ ಕಾನೂನು ಸುವ್ಯವಸ್ಥೆ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಪರಶುರಾಮ್ ಅವರ ಅನುಮಾನಾಸ್ಪದ ಸಾವಿನ ಕುರಿತು ಹಲವು ಊಹಾಪೋಹಗಳು ಎದ್ದಿದ್ದವು. ಈಗ ಇವುಗಳಿಗೆ ತೆರೆ ಬಿದ್ದಿದೆ. ಪಿಎಸ್‌ಐ ಪರಶುರಾಮ್ ಅವರದ್ದು ಆತ್ಮಹತ್ಯೆಯಲ್ಲ, ಹೃದಯಾಘಾತದಿಂದಾದ …

Read More »

ಇಬ್ಬರು ಯುವಕರ ಮೇಲೆ ಸುಳ್ಳು ಡ್ರಗ್ಸ್ ಕೇಸ್: ಬೆಂಗಳೂರಿನ 4 ಪೊಲೀಸ್ ಅಧಿಕಾರಿಗಳ ಅಮಾನತು!

ಇಬ್ಬರ ಯುವಕರ ವಿರುದ್ಧ ಸುಳ್ಳು ಡ್ರಗ್ಸ್ ಪ್ರಕರಣ ದಾಖಲಿಸಿದ್ದ ಬೆಂಗಳೂರಿನ ಬನಶಂಕರಿ ಪೊಲೀಸ್ ಠಾಣೆಯ ನಾಲ್ವರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಬನಶಂಕರಿ ಪೊಲೀಸ್ ಠಾಣೆಯ ಸಬ್ ಇನ್ ಸ್ಪೆಕ್ಟರ್ ಶ್ರೀಧರ್ ಗೌರಿ, ಸಹಾಯಕ ಸಬ್ ಇನ್ ಸ್ಪೆಕ್ಟರ್ ಎಸ್.ಕೆ.ರಾಜು ಮತ್ತು ಕಾನ್ ಸ್ಟೇಬಲ್ ಗಳಾದ ಸತೀಶ್ ಬಗಾಲಿ ಹಾಗೂ ತಿಮ್ಮಣ್ಣ ಪೂಜಾರಿ ಅವರನ್ನು ಅಮಾನತು ಮಾಡಲಾಗಿದೆ. ಆಗಸ್ಟ್ 9ರಂದು ಕದಿರೇನಹಳ್ಳಿಯ ಸೀಮೆಂಟ್ ರಸ್ತೆಯಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಇವರ …

Read More »