ಬಡ್ಡಿ ಕೊಡುವುದಾಗಿ ಹಣ ಪಡೆದು ಗೃಹರಕ್ಷಕ ಸಿಬ್ಬಂದಿಗೆ ಕಾನ್ಸ್ಟೇಬಲ್ನಿಂದ ವಂಚನೆ ಬಡ್ಡಿ ಕೊಡುವುದಾಗಿ ನಂಬಿಸಿ ಗೃಹ ರಕ್ಷಕ ಸಿಬ್ಬಂದಿಯಿಂದ 35 ಸಾವಿರ ರೂ. ಹಣ ಪಡೆದು ಕಾನ್ಸ್‌ಟೇಬಲ್ ವಂಚನೆ ಮಾಡಿರುವಂತಹ ಘಟನೆ ನಗರದಲ್ಲಿ ನಡೆದಿದೆ. ನೆಲಮಂಗಲ ಸಂಚಾರಿ ಠಾಣೆಯ ಕಾನ್ಸ್‌ಟೇಬಲ್ ಕಾರ್ತಿಕ್ರಿಂದ ಗೃಹರಕ್ಷಕ ದಳದ ಸಿಬ್ಬಂದಿ ರಾಜುಗೆ ವಂಚನೆ ಮಾಡಲಾಗಿದೆ. ನೆಲಮಂಗಲ ಟೌನ್ ಠಾಣೆಗೆ ಹೋಂಗಾರ್ಡ್ ರಾಜು ದೂರು ನೀಡಿದ್ದಾರೆ. ನೆಲಮಂಗಲ, ಜನವರಿ 08: ಬಡ್ಡಿ ಕೊಡುವುದಾಗಿ ನಂಬಿಸಿ ಗೃಹ ರಕ್ಷಕ …
Read More »Daily Archives: ಜನವರಿ 8, 2024
ಹುಂಡಿ ಹಣ ಆಯಾ ದೇವಾಲಯಕ್ಕೆ ಬಳಕೆಯಾಗಲಿ: ಸಚಿವ ರಾಮಲಿಂಗಾ ರೆಡ್ಡಿ
ಧಾರವಾಡ: ಹುಂಡಿಯಲ್ಲಿ ಸಂಗ್ರಹವಾಗುವ ಹಣ ಆಯಾ ದೇವಸ್ಥಾನಕ್ಕೆ (Temple) ಬಳಸಬೇಕು ಎಂದು ಮುಜರಾಯಿ ಇಲಾಖೆ ಹಾಗೂ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (Ramalinga reddy) ಹೇಳಿದರು. ಇಂದು ಧಾರವಾಡದ (Dharwad) ನೂತನ ಸಿಬಿಟಿ ನಿಲ್ದಾಣಕ್ಕೆ (CBT Bus Stop) ಶಂಕುಸ್ಥಾಪನೆ ನೆರವೇರಿಸಿದರು. ಧಾರವಾಡದ ಸಿಬಿಟಿ ಬಸ್ ನಿಲ್ದಾಣ ನಿರ್ಮಾಣವಾಗಿ 50 ವರ್ಷಗಳಾಗಿವೆ. ಹೀಗಾಗಿ ಹೊಸ ಬಸ್ ನಿಲ್ದಾಣಕ್ಕೆ ಸರ್ಕಾರ ಮುಂದಾಗಿದೆ. 13.11 ಕೋಟಿ ರೂ. ವೆಚ್ಚದಲ್ಲಿ ನಿಲ್ದಾಣ ನಿರ್ಮಾಣವಾಗಲಿದೆ. ಒಂದು ವರ್ಷದಲ್ಲಿ …
Read More »ಕೆಆರ್‌ಎಸ್‌ಗೆ ಧಕ್ಕೆ ಆದರೆ ಆಗುವ ಅನಾಹುತದ ಅರಿವಿದೆಯೇ? ಹೈ ಕೋರ್ಟ್ ಪ್ರಶ್ನೆ, ಗಣಿಗಾರಿಕೆ ನಿಷೇಧ!
ಬೆಂಗಳೂರು : ಕೆಆರ್‌ಎಸ್ ಆಣೆಕಟ್ಟಿಗೆ(KRS dam) ಹಾನಿಯಾದರೆ ಆಗುವ ಅನಾಹುತದ ಅರಿವಿದೆಯೇ ಎಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ(Justice prasanna B Varale) ಮತ್ತು ನ್ಯಾಯಮೂರ್ತಿ ಕೃಷ್ಣ ದೀಕ್ಷಿತ ಅವರಿದ್ದ ವಿಭಾಗೀಯ ಪೀಠ ಪ್ರಶ್ನಿಸಿದೆ. ಕೆಆರ್‌ಎಸ್ ಸುತ್ತ ಗಣಿಗಾರಿಕೆ ವಿಚಾರವಾಗಿ ಜಿಲ್ಲಾಧಿಕಾರಿಗಳು ವಿಧಿಸಿದ್ದ ಷರತ್ತು ವಿರೋಧಿಸಿ ಗಣಿ ಮಾಲೀಕರು ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಸಂಬಂಧ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ ಕೆಆರ್‌ಎಸ್ ಡ್ಯಾಮ್ ಸುತ್ತ …
Read More »ಶೀಘ್ರದಲ್ಲೇ ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ನಿಶ್ಚಿತಾರ್ಥ!
ಬೆಂಗಳೂರು: ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ (Rashmika Mandanna) ಹಾಗೂ ವಿಜಯ್ ದೇವರಕೊಂಡ (Vijay Deverakonda) ಪ್ರೀತಿ ಮಾಡುತ್ತಿದ್ದಾರೆ. ಅವರು ಡೇಟಿಂಗ್ ನಲ್ಲಿದ್ದಾರೆ ಎಂಬ ಗಾಸಿಪ್ ಗಳು ಹರಿದಾಡುತ್ತಲೇ ಇವೇ. ಇದರ ಬೆನ್ನಲ್ಲೇ ಇದೀಗ ಈ ಇಬ್ಬರು ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಹೌದು ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಫೆಬ್ರವರಿಯಲ್ಲಿ ನಿಶ್ಚಿತಾರ್ಥ ಮಾಡಿಕೊಳ್ಳುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಆದರೆ ಈ ಜೋಡಿ ಇದುವೆರೆಗೆ ತಾವಿಬ್ಬರೂ ಸಂಬಂಧದಲ್ಲಿ …
Read More »ಅನ್ಯಕೋಮಿನವರ ವ್ಯಾಪಾರಕ್ಕೆ ನಿರ್ಬಂಧ ಹೇರಿದ್ದ ಬ್ಯಾನರ್ ತೆರವು
ವಿಜಯಪುರ: ಮಕರ ಸಂಕ್ರಮಣದಂದು (Makara Sankranti) ಬಹಳ ವಿಜೃಂಭಣೆಯಿಂದ ನಡೆಯುವ ಜಾತ್ರೆ ಎಂದರೆ ಅದು ಉತ್ತರ ಕರ್ನಾಟಕದ ವಿಜಯಪುರದಲ್ಲಿರುವ ಶ್ರೀ ಸಿದ್ದೇಶ್ವರ ಜಾತ್ರೆ(Shri Siddeshwara). ಸಾವಿರಾರು ಜನರು ಸೇರುವ ಈ ಜಾತ್ರೆಗೆ, ದೇವರಿಗೆ ತನ್ನದೇ ಆದ ವೈಶಿಷ್ಟ್ಯಯಿದೆ. ಈ ಜಾತ್ರೆಯಲ್ಲಿ ಮುಸ್ಲಿಮರಿಗೆ ವ್ಯಾಪಾರ ವಹಿವಾಟಿಗೆ ಅವಕಾಶ ನೀಡಬಾರದು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು. ಹಲವು ಹಿಂದೂಪರ ಸಂಘಟನೆಗಳು ಈ ಕುರಿತು ನಿನ್ನೆ ಬ್ಯಾನರ್ ಹಾಕಿದ್ದು ಸದ್ಯ ಸಿದ್ದೇಶ್ವರ ಸಂಸ್ಥೆಯ ಸಿಬ್ಬಂದಿ …
Read More »ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ತರಾಟೆಗೆ ತೆಗೆದುಕೊಂಡ:H.D.K.
ಬೆಳಗಾವಿ: ಸ್ವಾತಂತ್ರ್ಯ ಪೂರ್ವದಲ್ಲಿ ಬೆಳಗಾವಿಯು ಮಹಾರಾಷ್ಟ್ರಕ್ಕೆ ಸೇರಿತ್ತು ಎಂಬ ವಿವಾದಾತ್ಮಕ ಹೇಳಿಕೆ ನೀಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್(Lakshmi Hebbalkar) ಅವರನ್ನು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ(HD Kumaraswamy) ಅವರು ತರಾಟೆಗೆ ತೆಗೆದುಕೊಂಡಿದ್ದಾರೆ. ಜೆಡಿಎಸ್ ಪಕ್ಷದ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಸಚಿವರಾಗಿ ಇಂತಹ ಅಸಂಬದ್ಧ ಹೇಳಿಕೆಗಳನ್ನು ನೀಡುವವರಿಗೆ ಮುಖ್ಯಮಂತ್ರಿ ಕರೆದು ಬುದ್ದಿ ಹೇಳಬೇಕು. ಇದು ಮುಗಿದು ಹೋಗಿರುವ ಸಂಗತಿ. ಮತ್ತೆ ಅದನ್ನು ಕೆಣಕುವುದು ಯಾಕೆ? ಬಹುಶಃ …
Read More »ಭಾರೀ ಮಳೆಗೆ 9ರ ಬಾಲಕಿ ಬಲಿ
ತಮಿಳುನಾಡು: ಭಾರೀ ಮಳೆಗೆ (Rain) ಮನೆಯ ಗೊಡೆ ಕುಸಿದು ಬಾಲಕಿ (Girl) ಮೃತಪಟ್ಟ ಘಟನೆ ತಮಿಳುನಾಡಿನ (Tamil Nadu) ತಿರುವಾರೂರ್‌ನಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಮೋನಿಷಾ (9) ಎಂದು ಗುರುತಿಸಲಾಗಿದೆ. ಧಾರಾಕಾರ ಮಳೆಯಿಂದಾಗಿ ಮನೆಯ ಗೋಡೆಯ ಒಂದು ಭಾಗ ಬಿದ್ದಿದೆ. ಈ ವೇಳೆ ಮನಿಷಾ ಸ್ಥಳದಲ್ಲೇ ಮೃತಪಟ್ಟರೇ, ಆಕೆಯ ಸಹೋದರ ಮೋಹನ್ ದಾಸ್ (12) ಗಾಯಗೊಂಡಿದ್ದಾನೆ. ಈ ಹಿನ್ನೆಲೆಯಲ್ಲಿ ಮೋಹನ್ ದಾಸ್‌ನನ್ನು ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಳೆಯಿಂದಾಗಿ …
Read More »ಮೃತರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ: ಅಭಿಮಾನಿಗಳ ಮನೆಗಳಿಗೆ ಯಶ್ ಭೇಟಿ
ಗದಗ: ರಾಕಿಂಗ್ ಸ್ಟಾರ್ ಯಶ್ (Rocking star Yash) ಜನ್ಮದಿನದ ಹಿನ್ನೆಲೆಯಲ್ಲಿ ತಮ್ಮ ಊರಿನ ಬೀದಿಯಲ್ಲಿ ಬರ್ತಡೇ ಬ್ಯಾನರ್ ಅಳವಡಿಸುವಾಗ ವಿದ್ಯುತ್ ಪ್ರವಹಿಸಿ ಮೂವರು ಯುವಕರು ದುರ್ಮರಣಕ್ಕೀಡಾದ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದಿತ್ತು. ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಸರ್ಕಾರ ಮೃತರ ಕುಟುಂಬಕ್ಕೆ 2 ಲಕ್ಷ ರೂ., ಗಾಯಾಳುಗಳಿಗೆ 50 ಸಾವಿರ ರೂ. ಪರಿಹಾರ ನೀಡಲಾಗುವುದು ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್ …
Read More »ಬಿಜೆಪಿಯವರದ್ದು ಮೂರು ಅಜೆಂಡಾ ಇದೆ: ಮಂಕಾಳ ವೈದ್ಯ
ಕಾರವಾರ: ಬಿಜೆಪಿಯವರದ್ದು ಮೂರು ಅಜೆಂಡಾ ಇದೆ. ಸುಳ್ಳು ಹೇಳೋದು, ಗಲಭೆ ಮಾಡೋದು, ದೇವರ ಹೆಸರಲ್ಲಿ ಸುಳ್ಳು ಹೇಳಿಕೊಂಡು ರಾಜಕಾರಣ ಮಾಡುವುದು ಎಂದು ಸಚಿವ ಮಂಕಾಳ ವೈದ್ಯ (Mankal Vaidya) ವಾಗ್ದಾಳಿ ನಡೆಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು (BJP) ರಾಜಕಾರಣಕ್ಕೋಸ್ಕರ (Politics) ಏನು ಬೇಕಾದರೂ ಮಾಡುತ್ತಾರೆ. ಬಿಜೆಪಿಯವರದ್ದು ಬೋಗಸ್ ಭಕ್ತಿ. ರಾಮಮಂದಿರ ಉದ್ಘಾಟನೆ ಆಗದೇ ಮಂತ್ರಾಕ್ಷತೆ ಕೊಡುತ್ತಿದ್ದಾರೆ. ಪೂಜೆಯೇ ಆಗದೇ ಮಂತ್ರಾಕ್ಷತೆ ಹೇಗೆ ಕೊಡುತ್ತಾರೆ? ಅಕ್ಷತೆ ಕೊಟ್ಟು, ಮಂತ್ರಾಕ್ಷತೆ ಕೊಟ್ಟು …
Read More »ಕಾಂಗ್ರೆಸ್‌ನ ರಾಮ ವಿರೋಧಿ ತಂತ್ರ ಉಲ್ಟಾ ಹೊಡೆದಿದೆ – ಬೊಮ್ಮಾಯಿ ಟೀಕೆ
ಬೆಂಗಳೂರು : ರಾಮ ಮಂದಿರ ಉದ್ಟಾಟನೆ(Ram Mandir Inauguration) ದಿನ ಹತ್ತಿರ ಬರುತ್ತಿದ್ದಂತೆ ರಾಮ ವಿರೋಧಿ ನೀತಿ (Anti Ram Strategies)ಅನುಸರಿಸುತ್ತಿದ್ದ ಕಾಂಗ್ರೆಸ್‌ಗೆ ಈಗ ಜನ ತಮ್ಮನ್ನ ವಿರೋಧಿಸುತ್ತಿದ್ದಾರೆ ಎಂಬುದು ಅರ್ಥವಾಗಿದೆ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದರು. ಬೆಂಗಳೂರಿನಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ನೇತೃತ್ವದಲ್ಲಿ ಹೊಟೇಲ್ ರಮಾಡದಲ್ಲಿ ಲೋಕಸಭೆ ಚುನಾವಣೆ ವಿಚಾರವಾಗಿ ಸಭೆ ನಡೆದಿದ್ದು , ಸಭೆಯಲ್ಲಿ ರಾಷ್ಟ್ರ ಹಾಗೂ ರಾಜ್ಯ ರಾಜಕೀಯದ ಬಗ್ಗೆ …
Read More »