ವಿಜಯಪುರ, (ಜನವರಿ, 08): ಈ ಹಿಂದೆ ಯಡಿಯೂರಪ್ಪ ಸರ್ಕಾರದ ಅವಧಿಯಲ್ಲಿ ಕೊರೋನಾ ಸಂದರ್ಭದಲ್ಲಿ 40 ಸಾವಿರ ಕೋಟಿ ರೂ. ಭ್ರಷ್ಟಾಚಾರ ಅಗಿದೆ ಎನ್ನುವ ಗಂಭೀರ ಆರೋಪ ಮಾಡಿದ ಬಳಿಕ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್(Basangpuda Patil Yatnal), ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಬಂದಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ದಾ ಅವರನ್ನು ಭೇಟಿ ಮಾಡಿ ಮಹತ್ವದ ಚರ್ಚೆ ಮಾಡಿದ್ದಾರೆ. ಅಲ್ಲದೇ ಕರ್ನಾಟಕ ರಾಜ್ಯ …
Read More »Daily Archives: ಜನವರಿ 8, 2024
ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿದ್ದು ಹೇಳಿಕೆ – ನಾನು ಹಾಗೆ ಹೇಳಿಲ್ಲ ಎಂದ ಸಚಿವೆ ಹೆಬ್ಬಾಳ್ಕರ್
ಬೆಳಗಾವಿ : ಕನ್ನಡ ಸಮಾವೇಶದಲ್ಲಿ(Kannada samavesh) ನಾನು ಹೇಳಿದ್ದ ಮಾತನ್ನು ತಪ್ಪಾಗಿ ಅರ್ಥೈಸಲಾಗಿದೆ, ಇದರಿಂದ ಗಡಿಭಾಗದ ಕನ್ನಡಿಗರ ಉತ್ಸಾಹಕ್ಕೆ ತಡೆ ಉಂಟುಮಾಡಲಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್(Laxmi hebbalkar) ಸ್ಪಷ್ಟನೆ ನೀಡಿದ್ದಾರೆ. ಕಾರದಗಾದ ಕನ್ನಡ ಸಮಾವೇಷದಲ್ಲಿ ಭಾಗಿಯಾಗಿದ್ದ ಲಕ್ಷ್ಮಿ ಹೆಬ್ಬಾಳ್ಕರ್ ತಮ್ಮ ಭಾಷಣದಲ್ಲಿ ‘ ಸ್ವಾತಂತ್ರ್ಯ ಪೂರ್ವದಲ್ಲಿ ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿತ್ತು..’ ಎಂದು ಹೇಳಿಕೆ ನೀಡಿದ್ದಾರೆ ಎಂದು ಸುದ್ದಿಯಾಗಿತ್ತು. ಈ ಬಗ್ಗೆ ಆಕ್ರೋಶ ಕೂಡ ವ್ಯಕ್ತವಾಗಿದ್ದು , ಯಲಹಂಕ ಶಾಸಕ …
Read More »ಡಿಜೆ ಹಳ್ಳಿ, ಕೆಜಿ ಹಳ್ಳಿ ಪ್ರಕರಣವನ್ನು ರಾಜ್ಯ ಸರ್ಕಾರ ದುರ್ಬಲಗೊಳಿಸುತ್ತಿದೆ: ಪ್ರಹ್ಲಾದ ಜೋಶಿ
ಡಿಜೆ ಹಳ್ಳಿ ಮತ್ತು ಕೆ.ಜಿ.ಹಳ್ಳಿ ಹಿಂಸಾಚಾರ ಪ್ರಕರಣವನ್ನು ದುರ್ಬಲಗೊಳಿಸಲು ರಾಜ್ಯ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ಆರೋಪಿಸಿದ್ದಾರೆ. ಬೆಂಗಳೂರು: ಡಿಜೆ ಹಳ್ಳಿ ಮತ್ತು ಕೆ.ಜಿ.ಹಳ್ಳಿ ಹಿಂಸಾಚಾರ ಪ್ರಕರಣವನ್ನು ದುರ್ಬಲಗೊಳಿಸಲು ರಾಜ್ಯ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ಆರೋಪಿಸಿದ್ದಾರೆ. ಶಿಗ್ಗಾವ ತಾಲ್ಲೂಕಿನ ತಡಸ ಗ್ರಾಮದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾವು ವಿಕಸಿತ ಭಾರತ ಮಾಡಲು …
Read More »ಉಪ ತಹಶೀಲ್ದಾರ್ ಕಿರುಕುಳ ಆರೋಪ, ಕಂಪ್ಯೂಟರ್ ಆಪರೇಟರ್ ಆತ್ಮಹತ್ಯೆ
ಉಪ ತಹಶೀಲ್ದಾರ್ ಕಿರುಕುಳ ಆರೋಪ ಕೇಳಿ ಬಂದಿದ್ದು ಕಂಪ್ಯೂಟರ್ ಆಪರೇಟರ್ ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಲ್ಲಹಳ್ಳಿ ನಾಡಕಚೇರಿಯಲ್ಲಿ ನಡೆದಿದೆ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಹುಲ್ಲಹಳ್ಳಿಯಲ್ಲಿ ಕಂಪ್ಯೂಟರ್ ಆಪರೇಟರ್ ಆಗಿದ್ದ ವಿಕಲಚೇತನ ಪರಮೇಶ್ ಎಂಬುವವರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಾನಸಿಕವಾಗಿ ಹಿಂಸೆ ನೀಡುತ್ತಿದ್ದಾರೆಂದು ಆರೋಪಿಸಿ ಉಪ ತಹಶೀಲ್ದಾರ್ ಶಿವಕುಮಾರ್ ವಿರುದ್ದ ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಿರುಕುಳ ಆರೋಪ ಮಾಡಿ ವಿಷ ಕುಡಿದು ವಿಕಲಚೇತನ ಪರಮೇಶ್ ಆತ್ಮಹತ್ಯೆಗೆ …
Read More »ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರ ಸಾವು
ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗದ ಕೃಷ್ಣಪ್ಪನ ಕೊಪ್ಪಲು ಗ್ರಾಮದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚನ್ನಪಟ್ಟಣ ಮೂಲದ ಅಮಾನುಲ್ಲಾ ಖಾನ್(60) ಮುನಾವರ್(50) ಮೃತ ದುರ್ದೈವಿಗಳು. ಅಪರಿಚಿತ ವಾಹನವೊಂದು ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಘಟನೆ ಸಂಭವಿಸಿದೆ. ಹುಲಿಯೂರುದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »ಗದಗ: ನಟ ಯಶ್ ಬರ್ತಡೇ ಬ್ಯಾನರ್ ಕಟ್ಟುವಾಗ ವಿದ್ಯುತ್ ಪ್ರವಹಿಸಿ ಮೂವರು ಯುವಕರು ಸಾವು
ಗದಗ, ಜ.08: ರಾಕಿಂಗ್ ಸ್ಟಾರ್ ಯಶ್ ಬರ್ತಡೇ ಹಿನ್ನೆಲೆ ಹುಟ್ಟಹಬ್ಬದ ಶುಭಾಶಯ ಕೋರುವ ಬ್ಯಾನರ್ ಕಟ್ಟುವಾಗ ವಿದ್ಯುತ್ ಪ್ರವಹಿಸಿ ಮೂವರು ಅಭಿಮಾನಿಗಳು ಮೃತಪಟ್ಟ (Death) ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದಿದೆ. ಹನಮಂತ ಹರಿಜನ (21), ಮುರಳಿ ನಡವಿನಮನಿ (20), ನವೀನ್ ಗಾಜಿ (19) ಮೃತ ಯುವಕರು. ಇನ್ನು ಘಟನೆಯಲ್ಲಿ ಮಂಜುನಾಥ್ ಹರಿಜನ, ದೀಪಕ ಹರಿಜನ, ಪ್ರಕಾಶ ಮ್ಯಾಗೇರಿ ಎಂಬುವರಿಗೆ ಗಂಭೀರ ಗಾಯಗಳಾಗಿವೆ. ಸ್ಯಾಂಡಲ್ …
Read More »ಪಟ್ಟಣ ಪಂಚಾಯಿತಿ ಸದಸ್ಯನ ವಿರುದ್ಧ ಮದುವೆ ಮಾಡಿಸೋದಾಗಿ ವಂಚನೆ, ಲೈಂಗಿಕ ಕಿರುಕುಳ ಆರೋಪ; ಕಟ್ಟುಕಥೆ ಎಂದ ಸದಸ್ಯ
ಬಾಗಲಕೋಟೆ, : ಜಿಲ್ಲೆಯ ಹುನಗುಂದ(Hunagunda) ತಾಲ್ಲೂಕಿನ ಅಮೀನಗಢ ಪಟ್ಟಣ ಪಂಚಾಯಿತಿ ಸದಸ್ಯ ಸಂಜು ಐಹೊಳಿ ವಿರುದ್ಧ ಮದುವೆ ಮಾಡಿಸುವುದಾಗಿವಂಚನೆ ಹಾಗೂ ಲೈಂಗಿಕಕಿರುಕುಳದ ಆರೋಪ ಕೇಳಿಬಂದಿದೆ. ಅಮೀನಗಢ ಪಟ್ಟಣದ ಯುವತಿ ಭಾಗ್ಯಲಕ್ಷ್ಮಿ ಯಂಕಂಚಿ ಎಂಬ ಯುವತಿ, ತನ್ನ ಪ್ರಿಯಕರನೊಂದಿಗೆ ಮದುವೆ ಮಾಡಿಸುವುದಾಗಿ ಬರೊಬ್ಬರಿ 9 ಲಕ್ಷ ರೂ. ಹಣ ಪಡೆದು ವಂಚನೆ ಮಾಡಿದ್ದಾನೆ ಎಂದು ಯುವತಿ ಆರೋಪಿಸಿದ್ದಾಳೆ. ಇದಕ್ಕೆ ಆರೋಪಕ್ಕೆ ಗುರಿಯಾದ ವೃತ್ತಿಯಲ್ಲಿ ವಕೀಲ, ಪಟ್ಟಣ ಪಂಚಾಯತಿ ಸದಸ್ಯ ಹಾಗೂ ಜಯಕರ್ನಾಟಕ …
Read More »ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಕೇಸ್; ಬೆಂಕಿ ಹಚ್ಚಿದವರು ಅಮಾಯಕರಾ?: ಬೊಮ್ಮಾಯಿ
ಹಾವೇರಿ: ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ (DJ Halli, KG Halli Riots) ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳು ಅಮಾಯಕರು ಎಂಬ ನಿರ್ಣಯಕ್ಕೆ ಬಂದಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಆಕ್ರೋಶ ಹೊರಹಾಕಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಎರಡು ಪೊಲೀಸ್ ಠಾಣೆಗಳಿಗೆ ಬೆಂಕಿ ಹಚ್ಚಿದವರು ಅಮಾಯಕರಾ? ಸಾರ್ವಭೌಮತ್ವಕ್ಕೆ ಸವಾಲು ಎಸೆಯುವ ಶಕ್ತಿಗೆ ಅಮಾಯಕರು ಅಂತಾರಾ ಎಂದು ಪ್ರಶ್ನಿಸಿದ್ದಾರೆ. ಪೊಲೀಸರ ಕ್ರಮ …
Read More »ನಾನು ಕೇಂದ್ರ ಮಂತ್ರಿ ಆಗಲ್ಲ, ನನ್ನ ಗುರಿಯೇ ಬೇರೆ:H.D.K.
ಬೆಂಗಳೂರು: ನಾನು ಕೇಂದ್ರ ಮಂತ್ರಿ (Union Minister) ಆಗುವ ಬಗ್ಗೆ ಚಿಂತೆ ಮಾಡಿಲ್ಲ. ಬರುವ ಲೋಕಸಭಾ ಚುನಾವಣೆಯಲ್ಲಿ (Lok Sabha Election 2024) ಕಾಂಗ್ರೆಸ್ ಪಕ್ಷವನ್ನು ಸೋಲಿಸಿ ರಾಜ್ಯದ 28 ಲೋಕಸಭೆ ಕ್ಷೇತ್ರಗಳನ್ನು ಗೆಲ್ಲುವುದೇ ನಮ್ಮ ಗುರಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಸ್ಪಷ್ಟಪಡಿಸಿದರು. ಮಾಜಿ ಪ್ರಧಾನಿ ಎಚ್.ಡಿ. ದೇವೆಗೌಡರ ನಿವಾಸಕ್ಕೆ ಭೇಟಿ ನೀಡಿದ್ದ ಕೇಂದ್ರದ ಕೃಷಿ ಹಾಗೂ ಬುಡಕಟ್ಟು ವ್ಯವಹಾರಗಳ …
Read More »ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ
ಪುತ್ತೂರು: ಕಾಲೇಜು ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಈಶ್ವರಮಂಗಲ ಸಮೀಪದ ಸುಳ್ಯಪದವು ಕನ್ನಡ್ಕದಲ್ಲಿ ನಡೆದಿದೆ. ಕನ್ನಡ್ಕ ನಿವಾಸಿ, ಫಿಲೋಮಿನಾ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ದೀಕ್ಷಾ (16) ಮೃತ ಬಾಲಕಿ. ದೀಕ್ಷಾ ಮನೆಯ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಈಕೆ ವಾಣಿಜ್ಯ ವಿಭಾಗದಲ್ಲಿ ಕಲಿಯುತ್ತಿದ್ದು, ಸೋಮವಾರ ಲ್ಯಾಬ್ ಪರೀಕ್ಷೆಯಿತ್ತು ಎಂದು ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ಪೊಲೀಸ್ ತನಿಖೆ ನಂತರವಷ್ಟೇ ತಿಳಿದುಬರಬೇಕಿದೆ. ಪುತ್ತೂರು …
Read More »