Breaking News

Daily Archives: ಜನವರಿ 12, 2024

ಪತ್ರಿಕೆಗಳಲ್ಲಿ ಜಾಹೀರಾತು ಕೊಟ್ಟ ತಕ್ಷಣ ಗ್ಯಾರಂಟಿಗಳು ಜನರಿಗೆ ತಲುಪಿದೆ ಅಂತಲ್ಲ: ವಿಜಯೇಂದ್ರ

ರಾಯಚೂರು: ಪತ್ರಿಕೆಗಳಲ್ಲಿ ಜಾಹೀರಾತು ಕೊಟ್ಟ ತಕ್ಷಣ ಗ್ಯಾರಂಟಿಗಳು ಜನರಿಗೆ ತಲುಪಿದೆ ಅಂತಲ್ಲ. ಮುಂದೆ ಚುನಾವಣೆಯಲ್ಲಿ ತಕ್ಕ ಉತ್ತರವನ್ನು ನೀಡುತ್ತಾರೆ ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು. ಕಾಂಗ್ರೆಸ್ ಸರ್ಕಾರ 5 ಗ್ಯಾರಂಟಿ ಅನುಷ್ಠಾನಕ್ಕೆ ತಂದಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ಭಾರತೀಯ ಜನತಾ ಪಾರ್ಟಿಯ ಪರವಾಗಿ ಅಲೆಯಿದೆ. ಹೀಗಾಗಿ ಕಾಂಗ್ರೆಸ್ ನಾಯಕರು ಆತಂಕದಲ್ಲಿದ್ದಾರೆ. ರಾಮಮಂದಿರ ಹಾಗೂ ಅಲ್ಪಸಂಖ್ಯಾತರ ತುಷ್ಟೀಕರಣ ವಿಚಾರದಲ್ಲಿ ಕಾಂಗ್ರೆಸ್ ನಾಯಕರು ನಡವಳಿಕೆಯನ್ನು ಮತದಾರರು ಗಮನಿಸುತ್ತಿದ್ದಾರೆ …

Read More »

ಸರ್ವೋತ್ತಮ ಜಾರಕಿಹೊಳಿ ಅವರು ಸಾರಿಗೆಯ ಬಸ್ಸಗಳಿಗೆ ಹಸಿರು ನಿಶಾನೆ ತೋರಿಸುವ ಮೂಲಕ ಕರ್ನಾಟಕ ದರ್ಶನ ಪ್ರವಾಸಕ್ಕೆ ಚಾಲನೆ ನೀಡಿ ಮಕ್ಕಳಿಗೆ ಶುಭ‌ ಕೋರಿದರು.

ಗೋಕಾಕ್- ಮಕ್ಕಳಿಗೆ ರಾಜ್ಯದ ನೆಲ,ಜಲ, ಇತಿಹಾಸ, ಪರಂಪರೆ ಹಾಗೂ ಸಂಸ್ಕೃತಿಯನ್ನು ಪರಿಚಯಿಸಲು ಕರ್ನಾಟಕ ದರ್ಶನದಂತಹ ಶೈಕ್ಷಣಿಕ ಪ್ರವಾಸ ಮಹತ್ತರ ಪಾತ್ರ ವಹಿಸುತ್ತದೆ ಎಂದು ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ಶುಕ್ರವಾರ ಇಲ್ಲಿಯ ಎನ್ಎಸ್ಎಫ್ ಕಾರ್ಯಾಲಯದ ಆವರಣದಲ್ಲಿ ಮೂಡಲಗಿ ವಲಯದ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಹಮ್ಮಿಕೊಂಡ ಶೈಕ್ಷಣಿಕ ಪ್ರವಾಸ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮಕ್ಕಳಲ್ಲಿ ಉತ್ತಮ ಪರಿಸರ, ವಾತಾವರಣವನ್ನು ನಿರ್ಮಿಸುವಲ್ಲಿ ಶೈಕ್ಷಣಿಕ ಪ್ರವಾಸ ಉತ್ತಮ ಅಡಿಪಾಯವಾಗಿದೆ ಎಂದು …

Read More »

ಲೋಕಸಭಾ ಚುನಾವಣೆ: ಪಕ್ಷದ ಅಭ್ಯರ್ಥಿ ಗೆಲ್ಲಿಸದ ಸಚಿವರ ತಲೆದಂಡ- ಡಾ.ಜಿ.ಪರಮೇಶ್ವರ್

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸದ ಸಚಿವರ ತಲೆದಂಡ ಆಗಲಿದೆ ಎಂಬ ಎಚ್ಚರಿಕೆಯನ್ನು ಹೈಕಮಾಂಡ್ ಕೊಟ್ಟಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಗೆ ಗೆಲ್ಲಲು ಹೈಕಮಾಂಡ್ ಪ್ರತಿ ಸಚಿವರಿಗೆ ಜವಾಬ್ದಾರಿ ನೀಡಿದೆ. ಇದನ್ನು ನಿಭಾಯಿಸದ ಸಚಿವರ ತಲೆ ದಂಡ ಆಗಲಿದೆ ಎಂದು ಹೈಕಮಾಂಡ್ ತಿಳಿಸಿದೆ ಎಂದರು. ಮುಂಬರುವ ಲೋಕಸಭಾ ಚುನಾವಣೆ ಕುರಿತು ದೆಹಲಿಯಲ್ಲಿ ನಿನ್ನೆ ರಾಜ್ಯದ ಎಲ್ಲ ಸಚಿವರ ಜೊತೆಗೆ …

Read More »

ಯತ್ನಾಳ್ ವಿರುದ್ಧದ ಕೇಸ್​ಗೆ ಹೈಕೋರ್ಟ್ ತಡೆ,ಪ್ರಕರಣ ರದ್ದು ಕೋರಿ ರಮೇಶ್ ಜಾರಕಿಹೊಳಿ ಅರ್ಜಿ

ಬೆಂಗಳೂರು/ವಿಜಯಪುರ, (ಜನವರಿ 12): ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್ (Basangouda Patil Yatnal) ವಿರುದ್ಧದ ಕೇಸ್​ಗೆ ಕರ್ನಾಟಕ ಹೈಕೋರ್ಟ್ (Karnataka high Court) ತಡೆ ನೀಡಿದೆ. ವಿಧಾನಸಭಾ ಚುನಾವಣೆ (Karnataka Assembly Elections 2023) ವೇಳೆ‌ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆಂದು ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಡಿಯಲ್ಲಿ ಕೇಸ್ ದಾಖಲಾಗಿತ್ತು. ಆದ್ರೆ, ಇದೀಗ ಈ ಪ್ರಕರಣಕ್ಕೆ ಹೈಕೋರ್ಟ್ ಏಕಸದಸ್ಯ ಪೀಠ, ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ. ಕೋರ್ಟ್​ ಮೆಟ್ಟಿಲೇರಿದ …

Read More »

ಯುವ ಜನತೆ ಖಾತೆಗೆ ಇಂದೇ ಯುವ ನಿಧಿ ಕಾಸು ವರ್ಗಾವಣೆ! ನೀವಿನ್ನೂ ನೋಂದಣಿ ಮಾಡಿಲ್ವಾ?

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ 5ನೇ ಗ್ಯಾರಂಟಿ (Congress Guarantee Scheme) ಘೋಷಣೆಯಾಗಿರುವ ʼಯುವ ನಿಧಿʼ (Yuva Nidhi Scheme) ಯೋಜನೆಯಡಿ ಫಲಾನುಭವಿಗಳಿಗೆ ನಗದು ವರ್ಗಾವಣೆ ಕಾರ್ಯಕ್ರಮಕ್ಕೆ ಶಿವಮೊಗ್ಗ ನಗರ ಸಜ್ಜಾಗಿದೆ. ಸ್ವಾಮಿ ವಿವೇಕಾನಂದ ಜನ್ಮ ದಿನವಾದ ಶುಕ್ರವಾರ (ಜ. 12) ಶಿವಮೊಗ್ಗದ ಫ್ರೀಡಂ ಪಾರ್ಕ್‌ನಲ್ಲಿ ಕಾರ್ಯಕ್ರಮ ನಡೆಯಲಿದೆ. ಸುಮಾರು 85 ಸಾವಿರಕ್ಕೂ ಅಧಿಕ ಜನರಿಗೆ ಆಸನಗಳ ವ್ಯವಸ್ಥೆ ಮಾಡಲಾಗಿದೆ. ಡಿಪ್ಲೊಮಾ ಮತ್ತು ಪದವೀಧರ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ಉದ್ಯೋಗ ಭತ್ಯೆ …

Read More »