Breaking News

Monthly Archives: ಜನವರಿ 2024

ನನ್ನ ರಾಜೀನಾಮೆ ಕೇಳಲು ನೀವ್ಯಾರು..’: ಕಿಡಿಕಾರಿದ ಮಧು ಬಂಗಾರಪ್ಪ

ಶಿವಮೊಗ್ಗ: ವಿಜಯೇಂದ್ರ ಮೊನ್ನೆ ಮೊನ್ನೆ ಯಡಿಯೂರಪ್ಪ ಪರ ಮತ ಕೇಳಿರಬೇಕು. ನಾನು ಆಗಲೇ ನಿಮ್ಮ ತಂದೆಯವರ ಪರ ಪ್ರಚಾರ ಮಾಡಿದ್ದೆ. ವಿಜಯೇಂದ್ರಗೆ ಒಂದು ಕಿವಿ ಮಾತು ಹೇಳುತ್ತೇನೆ. 2004 ರಲ್ಲಿ ಮೊದಲ ಚುನಾವಣೆಗೆ ನಿಂತಿದ್ದೆ. ನಾನು ನಾಮಪತ್ರ ಬೆಳಗ್ಗೆ ಸಲ್ಲಿಸಿ ಸಂಜೆ ಯಡಿಯೂರಪ್ಪ ನವರ ನಾಮಪತ್ರ ಸಲ್ಲಿಸಲು ಹೋಗಿದ್ದೆ. 1999 ಯಡಿಯೂರಪ್ಪ ನವರು ಸೋತಿದ್ದಾಗ ಬಂಗಾರಪ್ಪನವರು ಬಿಜೆಪಿಗೆ ಹೋಗಿದ್ದರು. ಅವತ್ತು ಒಂದು ಸಭೆ ನಡೆದಿತ್ತು. ಆ ಸಭೆಯಲ್ಲಿ ವಿಜಯೇಂದ್ರ ಇರಲಿಲ್ಲ …

Read More »

ಶಾಲಾ ಪೂರ್ವ ಶಿಕ್ಷಣದಿಂದ ವಂಚಿತರಾಗುತ್ತಿರುವ ಮಕ್ಕಳು; ಕಡ್ಡಾಯ ಶಿಕ್ಷಣ ಮಾಯ..

ದೋಟಿಹಾಳ: ಸ್ವಾತಂತ್ರ‍್ಯ ಸಿಕ್ಕು 75 ವರ್ಷ ಕಳೆದರೂ ಇನ್ನೂ ರಾಜ್ಯದ ಎಷ್ಟೋ 3-6 ವರ್ಷದೊಳಗಿನ ಮಕ್ಕಳಿಗೆ ಶಾಲಾ ಪೂರ್ವ ಶಿಕ್ಷಣ ಸಿಗುತ್ತಿಲ್ಲ ಎಂಬುವುದೇ ಒಂದು ದುರಂತವಾಗಿದೆ. ಇದಕ್ಕೆ ತಾಜಾ ಉದಾಹರಣೆ, ಕೊಪ್ಪಳ ಜಿಲ್ಲೆಯ ಗಡಿಭಾಗದಲ್ಲಿರುವ ಕುಷ್ಟಗಿ ತಾಲೂಕಿನ ಕಿಲ್ಲಾರಹಟ್ಟಿ ಗ್ರಾಪಂ ವ್ಯಾಪ್ತಿಯ ರಾಮ್‌ಜೀ ನಾಯಕ್ ತಾಂಡದ 3-6 ವರ್ಷದ ಒಳಗಿನ ಮಕ್ಕಳ ಸ್ಥಿತಿ.   ರಾಮಜೀ ನಾಯಕ್ ತಾಂಡದಲ್ಲಿ 3-6 ವರ್ಷದ ಒಳಗಿನ ಸುಮಾರು 18-20 ಮಕ್ಕಳು ಇದ್ದಾರೆ. ಈ ಮಕ್ಕಳಿಗೆ …

Read More »

ರಾಮ ಮಂದಿರ ಉದ್ಘಾಟನೆಗೆ ಯಾರಿಗೆ ಆಹ್ವಾನ ಕೊಟ್ಟಿದ್ದಾರೆ ಅವರು ಹೋಗಲಿ,:C.M.

ಕೊಪ್ಪಳ: ಅಯೋಧ್ಯಾ ರಾಮ ಮಂದಿರ ಉದ್ಘಾಟನೆಗೆ ಯಾರಿಗೆ ಆಹ್ವಾನ ಕೊಟ್ಟಿದ್ದಾರೆ, ಯಾರಿಗೆ ಬಿಟ್ಟಿದ್ದಾರೆಂದು ನನಗೆ ಗೊತ್ತಿಲ್ಲ. ಯಾರಿಗೆ ಕೊಟ್ಟಿದ್ದಾರೊ ಅವರು ಹೋಗಲಿ, ಯಾರಿಗೆ ಬಿಡುತ್ತಾರೋ ಬಿಡಲಿ. ಯಾರಿಗೆ ಆಹ್ವಾನ ಕೊಡುತ್ತಾರೆಂದು ಅವರಿಗೆ ಸೇರಿದ್ದು ಎಂದು ಕೊಪ್ಪಳದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದರು.   ಜ.22 ಸರ್ಕಾರಿ ರಜೆ ಘೋಷಣೆ ಮಾಡುವ ವಿಚಾರವಾಗಿ ಮಾತನಾಡಿ, ಅಯೋಧ್ಯಾ ರಾಮ ಮಂದಿರ ಉದ್ಘಾಟನೆ ಕೇಂದ್ರ ಸರ್ಕಾರ ಮಾಡುತ್ತದೆ. ಅವರು ಬೇಕಾದರೆ ರಜೆ ಮಾಡಲಿ ಎಂದರು. ಹುಬ್ಬಳ್ಳಿಯ …

Read More »

ಹಣ ದುಪ್ಪಟ್ಟು ಮಾಡುವುದಾಗಿ ವಂಚಿಸಿದ್ದ ಖತರ್ನಾಕ್‌ ಗ್ಯಾಂಗ್ ಬಂಧನ

ಬೆಳಗಾವಿ: ಹಣ ದುಪ್ಪಟ್ಟು ಮಾಡುವುದಾಗಿ 25 ಲಕ್ಷ ರೂ.‌ವಂಚಿಸಿದ್ದ ಮಹಿಳೆ ಸೇರಿ 7 ಜನರ ಖತರ್ನಾಕ್‌ ಗ್ಯಾಂಗ್ ಬಂಧಿಸುವಲ್ಲಿ ಕಾಕತಿ ಪೊಲೀಸರು ಯಶಸ್ವಿಯಾಗಿದ್ದಾರೆ. ‌ ಮೂಲತಃ ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರದ ಹಾಲಿ ಸಂಕೇಶ್ವರದ ದೀಪಾ ಅವಟಗಿ, ಹುಕ್ಕೇರಿಯ ಶಿವಾನಂದ ಮಠಪತಿ, ಅಪ್ಪಯ್ಯ ಪೂಜಾರಿ, ಸುನಿಲ್ ವಿಭೂತಿ, ಸಚಿನ್ ಕುಮಾರ್ ಅಂಬ್ಲಿ, ಭರತೇಶ ಅಗಸರ, ಶಶಾಂಕ‌ ರಾವಸಾಹೇಬ ದೊಡ್ಡನ್ನವರ ಅವರನ್ನು ಬಂಧಿಸಲಾಗಿದೆ. 11.50 ಲಕ್ಷ ರೂ.‌ನಗದು ಹಣ ಹಾಗೂ ಎರಡು ವಾಹನ ಸೇರಿ …

Read More »

ಚಿಕ್ಕೋಡಿ-ಮತ್ತೆ ಕೇಳುತ್ತಿದೆ ಅಖಂಡ ಭಾರತದ ಕೂಗು: ಈಶ್ವರಪ್ಪ

ಚಿಕ್ಕೋಡಿ: ದೇಶವನ್ನು ಲೂಟಿ ಮಾಡಿದವರಿಗೆ ಭಾರತೀಯ ಸಂಸ್ಕೃತಿ ನಾಶ ಮಾಡಲು ಬಿಜೆಪಿ ಬಿಡಲ್ಲ. ಕಾಂಗ್ರೆಸ್‌ ಅಧಿಕಾರದ ಆಸೆಯಿಂದ ದೇಶ ತುಂಡು ತುಂಡಾಯಿತು. ಜನೇವರಿ 22 ರಾಮ ಮಂದಿರ ಉದ್ಘಾಟನೆ ದಿನದಂದು ಸ್ವಾತಂತ್ರ್ಯ ಹೋರಾಟಗಾರರ ಆತ್ಮಕ್ಕೆ ಶಾಂತಿ ಸಿಗಲಿದೆ ಎಂದು ಬಿಜೆಪಿ ಮುಖಂಡ ಮತ್ತು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್‌.ಈಶ್ವರಪ್ಪ ಹೇಳಿದರು.   ನಗರದಲ್ಲಿ ಶ್ರೀ ರಾಮಸೇನೆಯಿಂದ ಆಯೋಜಿಸಿದ್ದ ಮೋದಿ ಗೆಲ್ಲಿಸಿ ಭಾರತ ಉಳಿಸಿ ಅಭಿಯಾನ ಉದ್ಘಾಟಿಸಿ ಅವರು ಮಾತನಾಡಿದರು. ಅಖಂಡ ಭಾರತ ನಿರ್ಮಾಣಕ್ಕೆ …

Read More »

ಪ್ರೇಮ ವಿಚಾರಕ್ಕೆ ಕಲ್ಲು ತೂರಾಟ. ಮನೆ, ವಾಹನಗಳು ಧ್ವಂಸ, ಬಿಗುವಿನ ವಾತಾವರಣ

ಬೆಳಗಾವಿ: ಯುವಕ ಹಾಗೂ ಅಪ್ರಾಪ್ತ ಬಾಲಕಿಯ ನಡುವಿನ ಪ್ರೇಮ ವಿಚಾರಕ್ಕೆ ಸಂಬಂಧಿಸಿದಂತೆ ಮಧ್ಯಸ್ಥಿಕೆ ವಹಿಸಿದ್ದ ವ್ಯಕ್ತಿಯ ಮನೆಯ ಮೇಲೆ 25 ರಿಂದ 30 ಜನರ ಗುಂಪೊಂದು ಸೋಮವಾರ ರಾತ್ರಿ ಏಕಾಏಕಿ ದಾಳಿ ನಡೆಸಿ ಮನೆ ಧ್ವಂಸಗೊಳಿಸಿ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ಬೆಳಕಿಗೆ ಬಂದಿದ್ದು, ಬೆಳಗಾವಿ ತಾಲೂಕಿನ ನಾವಗೆ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.   ತಾಲೂಕಿನ ಕರ್ಲೆ ಗ್ರಾಮದ ಹೈಸ್ಕೂಲ್ ವಿದ್ಯಾರ್ಥಿನಿ ಹಾಗೂ ನಾವಗೆ ಗ್ರಾಮದ ಕಾಲೇಜು …

Read More »

ಶಾಲೆಯ ಬೀಗ‌ ಮುರಿದ ಕಳ್ಳ

ದಾಂಡೇಲಿ : ನಗರದ ಸೆಂಟ್ ಮೈಕಲ್ ಕಾನ್ವೆಂಟ್ ಪ್ರೌಢಶಾಲೆ ಮತ್ತು ಇ.ಎಂ.ಎಸ್ ಆಂಗ್ಲ ಮಾಧ್ಯಮ ಶಾಲೆಯ ಬೀಗ‌ ಮುರಿದು ಕಳ್ಳತನ ಮಾಡಿರುವ ಘಟನೆ ಮಂಗಳವಾರ ನಸುಕಿನ ವೇಳೆಯಲ್ಲಿ ನಡೆದಿದೆ. ಸೆಂಟ್ ಮೈಕಲ್ ಕಾನ್ವೆಂಟ್ ಪ್ರೌಢಶಾಲೆಯಲ್ಲಿ ಶಾಲೆಯ ಮುಂಭಾಗದ ಬಾಗಿಲಿನ ಬೀಗ ಮುರಿದು ಆನಂತರ ಕಚೇರಿ ಕೊಠಡಿಯ ಬೀಗ ಮುರಿದು ಒಳ ನುಗ್ಗಿರುವ ಕಳ್ಳರು, ಅಲ್ಲಿದ್ದ ಗೋಡ್ರೇಜ್ ಕಬಾಟಿನ ಬೀಗ ಒಡೆದು ಸರಿಸುಮಾರು 5 ರಿಂದ 7 ಸಾವಿರ ರೂಪಾಯಿ ನಗದನ್ನು ಕಳ್ಳತನ …

Read More »

ಲೋಕಾಯುಕ್ತ ಅಧಿಕಾರಿ ಹೆಸರಲ್ಲಿ ಹಣ ವಸೂಲಿ : ವಂಚಕ ಸೆರೆ

ಬೆಂಗಳೂರು,ಜ.2- ಸಿನಿಮಾ ನೋಡಿ ಪ್ರೇರಣೆಗೊಂಡು ಲೋಕಾಯುಕ್ತ ಅಧಿಕಾರಿ ಎಂದು ಹೇಳಿ ಹಣಕ್ಕಾಗಿ ಬೇಡಿಕೆ ಇಟ್ಟು ಸರ್ಕಾರಿ ಅಧಿಕಾರಿಗಳು ಕೆಲಸ ಮಾಡದಂತೆ ಮಾನಸಿಕವಾಗಿ ತೊಂದರೆ ನೀಡುತ್ತಿದ್ದ ವ್ಯಕ್ತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶ ಮೂಲದ ಶ್ರೀನಾಥ ರೆಡ್ಡಿ(34) ಬಂಧಿತ ವಂಚಕ. ಈತ 10ನೇ ತರಗತಿ ವ್ಯಾಸಂಗ ಮಾಡಿದ್ದು, ಆಂಧ್ರಪ್ರದೇಶದಲ್ಲೂ ಸರ್ಕಾರಿ ನೌಕರರಿಗೆ ಇದೇ ರೀತಿ ಕರೆ ಮಾಡಿ ಬೆದರಿಸಿ ಹಣ ವಸೂಲಿ ಮಾಡಿರುವುದು ತನಿಖೆಯಿಂದ ತಿಳಿದುಬಂದಿದೆ. ಅನಾ ಮಧೇಯ ವ್ಯಕ್ತಿಯೊಬ್ಬ ಸರ್ಕಾರಿ …

Read More »

ಹಿಂದೂ ಕರಸೇವಕರ ಬಂಧನ: ಬಿಜೆಪಿ-ಕಾಂಗ್ರೆಸ್‌ ಜಟಾಪಟಿ

ಇಡೀ ವಿಶ್ವವೇ ಎದುರು ನೋಡುತ್ತಿರುವ ಅಯೋಧ್ಯೆಯ ರಾಮಮಂದಿರ ಉದ್ಘಾಟನೆಗೆ ಎಲ್ಲಾ ಸಿದ್ಧತೆಗಳು ನಡೆಯುತ್ತಿದ್ದು, ರಾಮಮಂದಿರ ಉದ್ಘಾಟನೆಗೆ ಕೆಲವೇ ದಿನಗಳು ಬಾಕಿಯಳಿದಿರುವ ಬೆನ್ನಲ್ಲೇ ಕರ್ನಾಟಕದಲ್ಲಿ ಮತ್ತೊಮ್ಮೆ ಹಿಂದೂ ಕಾರ್ಯಕರ್ತರು ಹಾಗೂ ಕಾಂಗ್ರೆಸ್‌ ನಡುವೆ ಜಟಾಪಟಿ ಶುರುವಾಗುವ ಸಾಧ್ಯತೆಗಳು ಹೆಚ್ಚಾಗಿದೆ.   ಹುಬ್ಬಳ್ಳಿಯಲ್ಲಿ 1992 ರಲ್ಲಿ ಬಾಬರಿ ಮಸೀದಿ ಧ್ವಂಸದ ನಂತರ ಹುಬ್ಬಳ್ಳಿಯಲ್ಲಿ ನಡೆದ ರಾಮಮಂದಿರ ಆಂದೋಲನದಲ್ಲಿ ಭಾಗಿಯಾಗಿದ್ದ ವ್ಯಕ್ತಿಯನ್ನು ಬಂಧಿಸಿರುವ ಬೆನ್ನಲ್ಲೇ ಕಾಂಗ್ರೆಸ್‌ ಹಾಗೂ ಬಿಜೆಪಿ ನಡುವಿನ ರಾಜಕೀಯ ಸಮರ ಶುರುವಾಗಿದೆ. …

Read More »

ಶಾಲೆಯಲ್ಲಿ ಮಾರಕಾಸ್ತ್ರ ಹಿಡಿದ ಮಕ್ಕಳು : ಮುಚ್ಚಿಡುವ ಯತ್ನದಲ್ಲಿ ಶಿಕ್ಷಣ ಇಲಾಖೆ..?

ರಾಯಚೂರಿನಲ್ಲಿ 7 ಮತ್ತು 9 ನೇ ತರಗತಿ ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆದಿದೆ. ಶಾಲೆಗೆ ಪೆನ್ ಬದಲು ಗನ್ ತೆಗೆದುಕೊಂಡು ಬಂದಿದ್ದಾನೆ ಶಾಲಾ ವಿದ್ಯಾರ್ಥಿ. ರಾಯಚೂರು ನಗರದ ಶ್ರೀಮಲ್ ರಿಖನ್ ಚಂದ್ ಸುಖಾಣಿ ಪ್ರೌಢ ಶಾಲೆಯಲ್ಲಿ ಘಟನೆ ನಡೆದಿದೆ. ಗನ್, ಚಾಕು ಹಾಗೂ ಮಾರಾಕಾಸ್ತ್ರಗಳನ್ನು ತಂದಿದ್ದಾನೆ ವಿದ್ಯಾರ್ಥಿ. 7ನೇ ತರಗತಿ ವಿದ್ಯಾರ್ಥಿ ಶಾಲೆಗೆ ಗನ್ ತೆಗೆದುಕೊಂಡು ಬಂದಿದ್ದು, ಶಾಲೆಯಲ್ಲಿ ಭಯದ ವಾತಾವರಣ ನಿರ್ಮಾಣ ಆಗಿದೆ. ರಾಯಚೂರು ನಗರ ಪಶ್ಚಿಮ ಠಾಣೆ …

Read More »