ಉಪ್ಪಿನಬೆಟಗೇರಿ: ಧಾರವಾಡ ತಾಲ್ಲೂಕಿನ ತಡಕೋಡ ಗ್ರಾಮದಲ್ಲಿ ಇತ್ತೀಚೆಗೆ ಸ್ಥಳೀಯ ಯುವಕನೊಬ್ಬ ರಾಮಮಂದಿರ ಮೇಲೆ ಹಸಿರು ಬಾವುಟ ಅಂಟಿಸಿದಂತೆ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದರಿಂದ ಗ್ರಾಮದಲ್ಲಿ ಏರ್ಪಟ್ಟ ಅಶಾಂತಿ ಹಿನ್ನೆಲೆಯಲ್ಲಿ ತಡಕೋಡ ಗ್ರಾಮ ಪಂಚಾಯ್ತಿಯಲ್ಲಿ ಗುರುವಾರ ಧಾರವಾಡ ಜಿಲ್ಲಾ ಎಸ್ಪಿ ಅವರ ನೇತೃತ್ವದಲ್ಲಿ ಶಾಂತಿಪಾಲನಾ ಸಭೆ ಜರುಗಿತು. ಎಸ್ಪಿ ಡಾ.ಗೋಪಾಲ ಬ್ಯಾಕೋಡ ಮಾತನಾಡಿ, ‘ಎಲ್ಲ ಸಮುದಾಯದ ಜನರು ಶಾಂತಿ ಸುವ್ಯವಸ್ಥೆ ಕಾಪಾಡಬೇಕು. ಕೋಮು ಸೌಹಾರ್ದಕ್ಕೆ ಧಕ್ಕೆಯಾಗುವ ಚಟುವಟಿಕೆಗಳಿಗೆ ಆಸ್ಪದ …
Read More »Daily Archives: ಫೆಬ್ರವರಿ 2, 2024
ಸಂಗೀತ ಸಾಮ್ರಾಟ್ ಸವಾಯಿ ಗಂಧರ್ವರ ಸ್ಮಾರಕಸೂಕ್ತ ನಿರ್ವಹಣೆ ಇಲ್ಲದೆ ಸೊರಗಿದೆ.
ಕುಂದಗೋಳ: ಇಲ್ಲಿನ ಸಂಗೀತ ಸಾಮ್ರಾಟ್ ಸವಾಯಿ ಗಂಧರ್ವರ ಸ್ಮಾರಕಸೂಕ್ತ ನಿರ್ವಹಣೆ ಇಲ್ಲದೆ ಸೊರಗಿದೆ. ಕಿತ್ತುಹೋದ ಸ್ಮಾರಕದ ಚಾವಣಿ, ಆರಣದಲ್ಲಿ ಬೆಳೆದ ಕಳೆ ಕಸ, ಬಿದ್ದಿರುವ ಸಾರಾಯಿ ಪಾಕೀಟು, ಪ್ಲಾಸ್ಟಿಕ್, ದೂಳು ತುಂಬಿದ ಆವರಣ ಇದು ಪಟ್ಟಣದ ಹಿಂದೂಸ್ತಾನಿ ಸಂಗೀತಕ್ಕೆ ತನ್ನದೆ ಆದ ಕೊಡುಗೆ ನೀಡಿದ ಸಂಗೀತ ಸಾಮ್ರಾಟ್ ಸವಾಯಿ ಗಂಧರ್ವರ ಸ್ಮಾರಕ ಭವನದ ದುಃಸ್ಥಿತಿಯನ್ನು ಹೇಳುತ್ತಿವೆ. 2010ರಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಂದ ಭವನದ ಶಂಕುಸ್ಥಾಪನೆಯಾಗಿ, ಜಗದೀಶ ಶೆಟ್ಟರ್ …
Read More »ಫಕೀರ ಸಿದ್ಧರಾಮ ಶ್ರೀಗೆ ನಾಣ್ಯಗಳ ತುಲಾಭಾರ
ಹುಬ್ಬಳ್ಳಿ: ಗದಗ ಜಿಲ್ಲೆಯ ಶಿರಹಟ್ಟಿಯ ಭಾವೈಕ್ಯ ಸಂಸ್ಥಾನ ಮಹಾಪೀಠದ ಫಕೀರ ಸಿದ್ಧರಾಮ ಸ್ವಾಮೀಜಿಯವರ ಅಮೃತ ಮಹೋತ್ಸವದ ಪ್ರಯುಕ್ತ ಹುಬ್ಬಳ್ಳಿಯ ನೆಹರೂ ಮೈದಾನದಲ್ಲಿ ಗುರುವಾರ ಆನೆಯಂಬಾರಿ ಸಹಿತ ಸ್ವಾಮೀಜಿಗೆ 5,555 ಕೆಜಿ ನಾಣ್ಯಗಳಿಂದ ಭಕ್ತರು ತುಲಾಭಾರ ನೆರವೇರಿಸಿದರು. ವಿಶೇಷವಾಗಿ ನಿರ್ಮಿತ ತಕ್ಕಡಿಯಲ್ಲಿ ಒಂದು ಬದಿ ಆನೆಯಂಬಾರಿಯಲ್ಲಿದ್ದ ಸ್ವಾಮೀಜಿ, ಇನ್ನೊಂದು ಬದಿ ನಾಣ್ಯಗಳನ್ನು ಇಡುತ್ತಿದ್ದಂತೆ ಅಪಾರ ಸಂಖ್ಯೆ ಭಕ್ತರು ‘ಫಕೀರೇಶ್ವರ ಮಹಾರಾಜಕೀ ಜೈ’ ಎಂಬ ಘೋಷಣೆ ಹಾಕಿದರು. ಎರಡು ಕ್ವಿಂಟಲ್ ತೇಗದ ಕಟ್ಟಿಗೆ …
Read More »ಫೆಬ್ರುವರಿ 4ರಂದು ಬೆಸ್ತರ ಬೃಹತ್ ಸಮಾವೇಶ- ವಿಪ ಸದಸ್ಯ ಸಾಯಬಣ್ಣ ತಳವಾರ
ಬೆಳಗಾವಿ: ‘ಬೆಳಗಾವಿ ಜಿಲ್ಲಾ ಕೋಳಿ ಬೆಸ್ತ ಸಮಾಜ ಸಂಘ, ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕತಿ ಇಲಾಖೆ ಆಶ್ರಯದಲ್ಲಿ ನಗರದ ಸರ್ದಾರ್ ಮೈದಾನದಲ್ಲಿ ಫೆಬ್ರುವರಿ 4ರಂದು ನಿಜಶರಣ ಅಂಬಿಗರ ಚೌಡಯ್ಯ ಅವರ ಜಯಂತಿ ಹಾಗೂ ಸಮಾಜದ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ’ ಎಂದು ವಿಧಾನ ಪರಿಷತ್ ಸದಸ್ಯ ಸಾಯಬಣ್ಣ ತಳವಾರ ಹೇಳಿದರು. ‘ಕೋಲಿ, ಕಬ್ಬಲಿಗ, ಬೆಸ್ತ ಮುಂತಾಗಿ ಎಲ್ಲ ಉಪನಾಮಗಳನ್ನೂ ಒಳಗೊಂಡು ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕು ಎಂದು ಮೂರು …
Read More »‘ವಚನ ಕಟ್ಟು ರಕ್ಷಿಸಿದ ಮಾಚಿದೇವ’
ಸವದತ್ತಿ: ‘ಹನ್ನೆರಡನೇ ಶತಮಾನದ ಬಸವಣ್ಣನವರ ಕಾಲದಲ್ಲಿನ ವಚನ ಕಟ್ಟುಗಳನ್ನು ರಕ್ಷಿಸುವಲ್ಲಿ ಮಾಚಿದೇವ ಪ್ರಮುಖ ಪಾತ್ರ ವಹಿಸಿದ್ದರು. ಜೊತೆಗೆ ಸಕಲ ಶರಣರ ವಸ್ತ್ರಗಳನ್ನು ಶುಚಿಗೊಳಿಸುವಲ್ಲಿ ತಲ್ಲೀನರಾಗಿದ್ದರು’ ಎಂದು ತಹಶೀಲ್ದಾರ್ ಎಂ.ಎನ್.ಹೆಗ್ಗನ್ನವರ ಹೇಳಿದರು. ಇಲ್ಲಿನ ತಹಶೀಲ್ದಾರ್ ಕಚೇರಿಯಲ್ಲಿ ಗುರುವಾರ ಮಡಿವಾಳ ಮಾಚಿದೇವರ ಜಯಂತಿ ಆಚರಿಸಿ ಮಾತನಾಡಿದ, ವಚನಗಳ ರಕ್ಷಣೆ ವೇಳೆ ಮಾಚಿದೇವರು ವೀರಭದ್ರನ ಅವತಾರ ತಾಳಿದ್ದು ವಿಶೇಷ. ಇಂದು ಮಡಿವಾಳ ಸಮುದಾಯ ಸಮಾಜದ ಮುಖ್ಯವಾಹಿನಿಗೆ ಬರುತ್ತಿರುವುದು ಶ್ಲಾಘನೀಯವೆಂದರು. ಶಾಸಕರ ಸಹೋದರ ಅಶ್ವತ್ ವೈದ್ಯ …
Read More »ಇ ಗ್ರಂಥಾಲಯದಲ್ಲಿ ರೈತ ಆತ್ಮಹತ್ಯೆ
ಹುಕ್ಕೇರಿ: ಸ್ಥಳೀಯ ಕೋರ್ಟ್ ಆವರಣದಲ್ಲಿರುವ ಇ- ಗ್ರಂಥಾಲಯದ ಸಂಗ್ರಹ ಕೊಠಡಿಯಲ್ಲಿ ವಕೀಲೆಯೊಬ್ಬರ ಪತಿ, ರೈತ ಲಗಮಪ್ಪ ಹೊಸೂರಿ(48) ಗುರುವಾರ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ‘ತಾಲ್ಲೂಕಿನ ನೇರ್ಲಿ ಗ್ರಾಮದವರಾದ ಲಗಮಪ್ಪ ಜಾಬಾಪುರದಲ್ಲಿ ವಾಸಿಸುತ್ತಿದ್ದರು. ಗ್ರಾಮದಲ್ಲಿ ಕೃಷಿ ಮಾಡಿಕೊಂಡಿದ್ದ ಅವರು, ವಿವಿಧ ಸಂಘ ಸಂಸ್ಥೆಗಳಲ್ಲಿ ಮತ್ತು ಕೈಗಡವಾಗಿ ₹5.20 ಲಕ್ಷ ಸಾಲ ಮಾಡಿದ್ದರು’ ಎಂದು ಅವರ ಪತ್ನಿ ಅನಿತಾ ಕುಲಕರ್ಣಿ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ‘ಸಾಲ ತೀರಿಸಲಾಗದೆ ಬೇಸತ್ತು ಮಧ್ಯಾಹ್ನದ ವೇಳೆ …
Read More »‘ನಾನು ಚಿಕ್ಕೋಡಿ ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧಿಸುವುದಿಲ್ಲ. ಹೈಕಮಾಂಡ್ ಹೇಳಿದಂತೆ ಕೇಳಲು ನಾನು ಫುಟ್‌ಬಾಲ್ ಅಲ್ಲ: ಪ್ರಕಾಶ ಹುಕ್ಕೇರಿ
ಚಿಕ್ಕೋಡಿ: ‘ನಾನು ಚಿಕ್ಕೋಡಿ ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧಿಸುವುದಿಲ್ಲ. ವಿಧಾನ ಪರಿಷತ್ ಸದಸ್ಯನಾಗಿ ಇರುತ್ತೇನೆ. ಹೈಕಮಾಂಡ್ ಹೇಳಿದಂತೆ ಕೇಳಲು ನಾನು ಫುಟ್‌ಬಾಲ್ ಅಲ್ಲ’ ಎಂದು ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ-2 ಪ್ರಕಾಶ ಹುಕ್ಕೇರಿ ಪ್ರಶ್ನಿಸಿದರು. ತಾಲ್ಲೂಕಿನ ಕೇರೂರು ಗ್ರಾಮದಲ್ಲಿ ಗುರುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘2014ರಲ್ಲಿ ರಾಜ್ಯದಲ್ಲಿ ಸಚಿವನಾಗಿದ್ದ ವೇಳೆ ಒಮ್ಮೆ ಒದ್ದರು, ದೆಹಲಿಗೆ ಹೋಗಿ ಬಿದ್ದೆ. ಅಲ್ಲಿಂದ ಒದ್ದರು, ವಿಧಾನ ಪರಿಷತ್‌ಗೆ ಬಂದೆ. ಈಗ ಮತ್ತೆ …
Read More »ಸತೀಶ್ ಜಾರಕಿಹೊಳಿ ಅವರ ಅಧ್ಯಕ್ಷತೆಯಲ್ಲಿಫೆ.3 ರಂದು ರಾಯಬಾಗ ತಾಲೂಕಿನ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ
ಫೆ.3 ರಂದು ರಾಯಬಾಗ ತಾಲೂಕಿನ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ಬೆಳಗಾವಿ, ಫೆ.2(ಕರ್ನಾಟಕ ವಾರ್ತೆ): ರಾಯಬಾಗ ತಾಲೂಕಿನ ವಿವಿಧ ಇಲಾಖೆಯ ತಾಲೂಕಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ ಶನಿವಾರ (ಫೆ.03) ನಂದಿಕುರಳಿ ರಸ್ತೆಯಲ್ಲಿ ಬರುವ ಹೆಸ್ಕಾಂ ವಿಭಾಗೀಯ ಕಚೇರಿಯ ಸಭಾ ಭವನದಲ್ಲಿ ಮಧ್ಯಾಹ್ನ 3 ಗಂಟೆಗೆ ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಆದಕಾರಣ ತಾಲೂಕಿನ ಸಾರ್ವಜನಿಕರು ತಮಗೆ ಸಂಬಂಧಿಸಿದ ಕುಂದುಕೊರತೆಗಳ …
Read More »ಫೆ.5ರಂದು ಗ್ಯಾರಂಟಿ ಫಲಾನುಭವಿಗಳ ಬೃಹತ್ ಸಮಾವೇಶ
ಬೆಳಗಾವಿ: ಸರ್ಕಾರದ ಐದು ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮಿ, ಶಕ್ತಿ ಹಾಗೂ ಯುವನಿಧಿ ಫಲಾನುಭವಿಗಳ ಸಮಾವೇಶವನ್ನು ಫೆ.5 ರಂದು ನಗರದ ಸರ್ದಾರ್ ಪ್ರೌಢಶಾಲೆ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು. ನಗರದಲ್ಲಿ ಶುಕ್ರವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಎಲ್ಲ ಯೋಜನೆಗಳ ಫಲಾನುಭವಿಗಳನ್ನು ಕರೆದು ಸಮಾವೇಶ ನಡೆಸಲಾಗುವುದು. ಫಲಾನುಭವಿಗಳನ್ನು ಗುರುತಿಸಿ ಆಹ್ವಾನಿಸಲು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು …
Read More »ಜಿಲ್ಲಾಸ್ಪತ್ರೆಯಲ್ಲಿ ‘ಅಮೃತಧಾರೆ’ ಎದೆಹಾಲು ಸಂಗ್ರಹ ಬ್ಯಾಂಕ್ ಉದ್ಘಾಟನೆಯಾಗಿ ಎರಡು ತಿಂಗಳಾದರೂ ಕಾರ್ಯಾರಂಭ ಮಾಡಿಲ್ಲ.
ಬೆಳಗಾವಿ: ಇಲ್ಲಿನ ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆಯ (ಬಿಮ್ಸ್) ಜಿಲ್ಲಾಸ್ಪತ್ರೆಯಲ್ಲಿ ‘ಅಮೃತಧಾರೆ’ ಎದೆಹಾಲು ಸಂಗ್ರಹ ಬ್ಯಾಂಕ್ ಉದ್ಘಾಟನೆಯಾಗಿ ಎರಡು ತಿಂಗಳಾದರೂ ಕಾರ್ಯಾರಂಭ ಮಾಡಿಲ್ಲ. ಎದೆಹಾಲಿನ ಕೊರತೆಯಿಂದ ಬಳಲುತ್ತಿರುವ ಶಿಶುಗಳಿಗೆ ನೆರವಾಗಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಬೆಳಗಾವಿ, ಕಲಬುರಗಿ, ಶಿವಮೊಗ್ಗ ಮತ್ತು ಬೆಂಗಳೂರಿನಲ್ಲಿ ಎದೆಹಾಲು ಸಂಗ್ರಹ ಬ್ಯಾಂಕ್ ಆರಂಭಿಸಲು ಮುಂದಾಗಿತ್ತು. ವಿಧಾನಮಂಡಲ ಚಳಿಗಾಲದ ಅಧಿವೇಶನಕ್ಕೆ ಬೆಳಗಾವಿಗೆ ಬಂದಿದ್ದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ 2023ರ ಡಿಸೆಂಬರ್ 13ರಂದು ಉದ್ಘಾಟಿಸಿದ್ದರು. ‘ಬೆಳಗಾವಿಯೊಂದಿಗೆ …
Read More »