Breaking News

Daily Archives: ಫೆಬ್ರವರಿ 11, 2024

ಪಟ್ಟಾ ಜಮೀನು ಪರಭಾರೆ ಅವ್ಯವಹಾರ: ತನಿಖೆಗೆ ಸೂಚನೆ

ಲಿಂಗಸುಗೂರು: ಕೃಷ್ಣಾ ನದಿಯ ನಡುಗಡ್ಡೆ ಪ್ರದೇಶದ ಐತಿಹಾಸಿಕ ಜಲದುರ್ಗ ಜಹಗೀರಿ ಪಟ್ಟಾ ಜಮೀನುಗಳಿಗೆ ನಕಲಿ ದಾಖಲೆ ಸೃಷ್ಠಿಸಿ ಪರಭಾರೆ ಮಾಡುತ್ತಿರುವ ಕುರಿತಂತೆ ಪ್ರಜಾವಾಣಿ ಸರಣಿ ವರದಿ ಆಧರಿಸಿ ಅವ್ಯವಹಾರ ತನಿಖೆ ನಡೆಯಿಸಿ ತಿಂಗಳಲ್ಲಿ ವರದಿ ಸಲ್ಲಿಸಲು ಉಪ ವಿಭಾಗಾಧಿಕಾರಿ ಶಿಂಧೆ ಅವಿನಾಶ ಸಂಜೀವನ್‍ ಸೂಚಿಸಿದ್ದಾರೆ.   ‘ಜಹಗೀರಿ ಜಮೀನಿಗೆ ನಕಲಿ ದಾಖಲೆ ಸೃಷ್ಟಿ’ ಹಾಗೂ ‘ನಕಲಿ ದಾಖಲೆ ಸೃಷ್ಟಿಸಿ ಆಸ್ತಿ ಕಬಳಿಕೆ’ ಶೀರ್ಷಿಕೆಯಡಿ ಪ್ರಜಾವಾಣಿ ವರದಿ ಮಾಡಿತ್ತು. ಇದರಿಂದ ಎಚ್ಚೆತ್ತುಕೊಂಡ …

Read More »

ವಾ.ಕ.ರ.ಸಾ ಸಂಸ್ಥೆʼಯ ಧಾರವಾಡ ಘಟಕದಲ್ಲಿ ʻQRʼ ಕೋಡ್ ಬಳಸಿ ಟಿಕೆಟ್ ನೀಡುವ ವ್ಯವಸ್ಥೆ ಜಾರಿ

ಧಾರವಾಡ : , 2024 ರಿಂದ ಜಾರಿಗೆ ಬರುವಂತೆ ವಾ.ಕ.ರ.ಸಾ ಸಂಸ್ಥೆಯ ಧಾರವಾಡ ಘಟಕದ ಅನುಸೂಚಿಗಳ ವಾಹನಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಚಿಲ್ಲರೆ ಸಮಸ್ಯೆ ನೀಗಿಸುವ ಹಾಗೂ ಡಿಜಿಟಲ್ ಪೇಮೆಂಟ್ ಪ್ರೋತ್ಸಾಹಿಸಿ ಸಮಯ ಉಳಿತಾಯ ಮಾಡುವ ಉದ್ದೇಶದಿಂದ ಯು.ಪಿ.ಆಯ್ ಮುಖಾಂತರ ಕ್ಯೂ.ಆರ್ ಕೋಡ್ ಬಳಸಿ ಟಿಕೇಟ್ ನೀಡುವ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ.   ಮುಂಬರುವ ಕೆಲವೇ ದಿನಗಳಲ್ಲಿ ವಿಭಾಗದ ವ್ಯಾಪ್ತಿಯ ಘಟಕಗಳಾದ ಸವದತ್ತಿ, ರಾಮದುರ್ಗ, ಹಳಿಯಾಳ, ದಾಂಡೇಲಿಯಲ್ಲಿಯೂ ಸಹ ಈ ವ್ಯವಸ್ಥೆ …

Read More »

ವೈಫಲ್ಯಗಳನ್ನು ಮುಚ್ಚಿಹಾಕಲು ‘ನನ್ನ ತೆರಿಗೆ ನನ್ನ ಹಕ್ಕು’ ಎಂಬ ಹೊಸ ನಾಟಕ: ಬಿ.ವೈ.ವಿಜಯೇಂದ್ರ

ಬೆಂಗಳೂರು: ರಾಜ್ಯದ ರಾಜಕೀಯ ಇತಿಹಾಸದಲ್ಲಿ ಮೊದಲ ಬಾರಿಗೆ ಒಂದು ಅಭಿವೃದ್ಧಿಶೂನ್ಯ ಸರಕಾರವನ್ನು ನಾವು ನೋಡುತ್ತಿದ್ದೇವೆ; ಇದು ನಿಜಕ್ಕೂ ದುರದೃಷ್ಟ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಕ್ಷೇಪಿಸಿದರು. ಮೈಸೂರಿನಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ತಮ್ಮ ವೈಫಲ್ಯಗಳನ್ನು ಮುಚ್ಚಿಹಾಕಲು ‘ನನ್ನ ತೆರಿಗೆ ನನ್ನ ಹಕ್ಕು’ ಎಂಬ ಹೊಸ ನಾಟಕವನ್ನು ರಾಜ್ಯದ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆಸಲಾಗುತ್ತಿದೆ ಎಂದು ವಿಶ್ಲೇಷಿಸಿದರು. ‘ನನ್ನ ತೆರಿಗೆ ನನ್ನ ಹಕ್ಕು’ ಎಂಬ …

Read More »

ಸಂಸತ್​ನಲ್ಲಿ ನಿರ್ಮಲಾ ಸೀತಾರಾಮನ್ ಅತಿ ದೊಡ್ಡ ಸುಳ್ಳು ಹೇಳಿದ್ದಾರೆ: ಪರಮೇಶ್ವರ್

ಬೆಂಗಳೂರು,  ಅನುದಾನದಲ್ಲಿ ಕೇಂದ್ರ ಸರ್ಕಾರವು ಕರ್ನಾಟಕಕ್ಕೆ ತಾರತಮ್ಯ ಮಾಡುತ್ತಿದೆ ಎಂದು ಕಾಂಗ್ರೆಸ್ ಆರೋಪಿಸುತ್ತಿದೆ. ಈ ವಿಚಾರವಾಗಿಬಿಜೆಪಿ-ಕಾಂಗ್ರೆಸ್ನಡುವೆ ಆರೋಪ-ಪ್ರತ್ಯಾರೋಪಗಳ ನಡುವೆ ಸಂಸತ್​ ಅಧಿವೇಶನದಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಅಂಕಿ-ಅಂಶಗಳ ಮೂಲಕ ಕಾಂಗ್ರೆಸ್ ಆರೋಪಿಗಳಿಗೆ ತಿರುಗೇಟು ನೀಡಿದ್ದರು. ಈ ವಿಚಾರವಾಗಿ ಮಾತನಾಡಿದ ರಾಜ್ಯ ಗೃಹಮಂತ್ರಿ ಡಾ.ಜಿ.ಪರಮೇಶ್ವರ್ (Dr.G.Parameshwar), ನಿರ್ಮಲಾ ಸೀತಾರಾಮನ್ ಅವರು ಸಂಸತ್​ನಲ್ಲಿ ಅತಿ ದೊಡ್ಡ ಸುಳ್ಳು ಹೇಳಿದ್ದಾರೆ ಎಂದಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಪರಮೇಶ್ವರ್, ಕೇಂದ್ರದಿಂದ ಒಂದೇ ಒಂದು ರೂಪಾಯಿ ನಮಗೆ …

Read More »

ಅಮಿತ್ ಶಾ ವಿರುದ್ಧ ಕಾಂಗ್ರೆಸ್ ಪೋಸ್ಟರ್ ಅಭಿಯಾನ

ಮೈಸೂರು, : ಜಿಲ್ಲೆಗೆ ಕೇಂದ್ರ ಗೃಹ ಸಚಿವುಅಮಿತ್ ಶಾ (Amit Shah)ಆಗಮನ ಹಿನ್ನೆಲೆ ಮೈಸೂರು ಕಾಂಗ್ರೆಸ್ (Congress) ಘಟಕದಿಂದ ಪ್ರತಿಭಟನೆಗೆ ಸಿದ್ಧತೆ ನಡೆಸಲಾಗಿದೆ. ಮೈಸೂರು (Mysuru) ಗ್ರಾಮಾಂತರ ಅಧ್ಯಕ್ಷ ಡಾ.ಬಿ.ಜೆ. ವಿಜಯಕುಮಾರ್ ನೇತೃತ್ವದಲ್ಲಿ “ನನ್ನ ತೆರಿಗೆ ನನ್ನ ಹಕ್ಕು” ಘೋಷಣೆಯೊಂದಿಗೆ “ಬರದಿಂದ ನಲುಗುತ್ತಿರುವ ನಾಡಿಗೆ ಬರಿಗೈಯಲ್ಲಿ ಬಂದಿರಾ?” ಎಂಬ ಪ್ರಶ್ನೆಯೊಂದಿಗೆ ಪೋಸ್ಟರ್ ಅಭಿಯಾನ ನಡೆಸಲು ಕಾರ್ಯಕರ್ತರು ಸಜ್ಜಾಗಿದ್ದಾರೆ. ಬೆಳಗ್ಗೆ 11 ಗಂಟೆಗೆ ಮೈಸೂರಿನ ಫೀಲ್ಡ್ ಮಾರ್ಷಲ್‌ ಕಾರ್ಯಪ್ಪ ವೃತ್ತದಲ್ಲಿ ಅಮಿತ್ ಶಾ ವಿರುದ್ಧ ಪೋಸ್ಟರ್ ಅಭಿಯಾನ ನಡೆಸಲು …

Read More »