ಯಾದಗಿರಿ, : ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ ದುರ್ಮರಣ(died)ಹೊಂದಿರುವಂತಹ ಘಟನೆ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿ ಬಳಿ ನಡೆದಿದೆ. ಸವಾರರಾದ ಶಿವನಗೌಡ ಹೊಸಮನಿ(25), ಲಕ್ಷ್ಮಣ(24) ಸಾವನ್ನಪ್ಪಿರುವವರು. ಮೃತರು ಶಹಾಪುರ ತಾಲೂಕಿನ ಬೊಮ್ಮನಹಳ್ಳಿಯ ನಿವಾಸಿಗಳು. ಕೆಂಭಾವಿಯಿಂದ ಬೊಮ್ಮನಹಳ್ಳಿ ಗ್ರಾಮಕ್ಕೆ ಬೈಕ್ ಮೇಲೆ ತೆರಳುವಾಗ ಘಟನೆ ಸಂಭವಿಸಿದೆ. ಕೆಂಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮತ್ತೊಂದು ಪ್ರಕರಣದಲ್ಲಿ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಅಪರಿಚಿತ ವ್ಯಕ್ತಿಯ ಶವ …
Read More »Daily Archives: ಫೆಬ್ರವರಿ 19, 2024
ತಿಷ್ಠಿತ ಹೋಟೆಲ್ಗಳಲ್ಲಿ ಹಣ ಕದಿಯುತ್ತಿದ್ದ ಆರೋಪಿ ಬಂಧನ
ಬೆಂಗಳೂರು, ಫೆ.19: ಪ್ರತಿಷ್ಠಿತ ಹೋಟೆಲ್ಗಳಲ್ಲಿ (Hotels) ಹಣ ಕದಿಯುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಬನಶಂಕರಿ ನಿವಾಸಿ ಎಂ.ಎಸ್.ರವಿಕುಮಾರ್ ಬಂಧಿತ ಆರೋಪಿ. ಈತ ಪ್ರತಿಷ್ಠಿತ ಹೋಟೆಲ್ಗಳನ್ನೇ ಟಾರ್ಗೆಟ್ ಮಾಡಿ ಹಣ ಎಗರಿಸ್ತಿದ್ದ. ಮೊದಲಿಗೆ ತನಗೆ ವಯಸ್ಸಾಗಿದೆ, ಆರ್ಥಿಕ ಸಂಕಷ್ಟದ ನೆಪವೊಡ್ಡಿ ಸಿಂಪತಿ ಗಿಟ್ಟಿಸಿ ಹೋಟೆಲ್ನಲ್ಲಿ ಕೆಲಸ ಪಡೆಯುತ್ತಿದ್ದ. ಬಳಿಕ ಹೋಟೆಲ್ ಕ್ಯಾಷಿಯರ್ ಆಗಿ ಕೆಲಸ ಮಾಡುತ್ತಲೇ ಹೊಂಚುಹಾಕಿ ಹಣ ಎಗರಿಸ್ತಿದ್ದ. ಆರೋಪಿ ರವಿಕುಮಾರ್, ಕಳೆದ ವರ್ಷ ಫೆ.19ರಂದು ಕೆ.ಆರ್.ಪುರದ ಭಟ್ಟರಹಳ್ಳಿಯ ಹೋಟೆಲ್ನಲ್ಲಿ …
Read More »ಭಾರತದಲ್ಲಿ ಅತಿ ಹೆಚ್ಚು ಇವಿ ಚಾರ್ಜಿಂಗ್ ಸ್ಟೇಷನ್‌ಗಳು ಇರುವ ರಾಜ್ಯ ಕರ್ನಾಟಕ
ಬೆಂಗಳೂರು, ಫೆಬ್ರವರಿ 19: ಕರ್ನಾಟಕ (Karnataka) ರಾಜ್ಯ ಒಂದರಲ್ಲೇ 5,059 ಸಾರ್ವಜನಿಕ ಎಲೆಕ್ಟ್ರಿಕ್ ವಾಹನ ಚಾರ್ಜಿಂಗ್ ಸ್ಟೇಷನ್‌ಗಳು(Public Electric Vehicle Charging Stations) ಇರುವ ಮೂಲಕ ರಾಜ್ಯ ದೇಶದಲ್ಲೇ ನಂಬರ್ ಒನ್ ಸ್ಥಾನದಲ್ಲಿದೆ. ಕೇಂದ್ರ ವಿದ್ಯುತ್ ಸಚಿವಾಲಯದ ಅಡಿಯಲ್ಲಿನ ಬ್ಯೂರೋ ಆಫ್ ಎನರ್ಜಿ ಎಫಿಷಿಯನ್ಸಿ (ಬಿಇಇ) ಅಂಕಿಅಂಶಗಳ ಪ್ರಕಾರ, ಬೆಂಗಳೂರು ನಗರ ಜಿಲ್ಲೆಯಲ್ಲಿ 4,281ಸಾರ್ವಜನಿಕ ಚಾರ್ಜಿಂಗ್ ಕೇಂದ್ರಗಳವೆ. ಅಂದರೆ ಶೇ 85 ರಷ್ಟು ಸಾರ್ವಜನಿಕ ಚಾರ್ಜಿಂಗ್ ಸ್ಟೇಷನ್‌ಗಳು ಬೆಂಗಳೂರಿನಲ್ಲಿವೆ. ಕರ್ನಾಟಕದಲ್ಲಿ 2017 ರಲ್ಲಿ ಮೊದಲ …
Read More »ಕೈಕೊಟ್ಟ ರೀಲ್ಸ್ ಸುಂದರಿ! ಶಿವಮೊಗ್ಗ ಯುವಕನಿಗೆ ಬ್ಯಾಂಕ್ ಉದ್ಯೋಗಿ ಲವ್ ಮ್ಯಾರೇಜ್ ದೋಖಾ, 20 ಲಕ್ಷ ವಂಚನೆ ದೂರು ದಾಖಲು
ಆರಂಭದ ಒಂದೆರಡು ತಿಂಗಳು ಸಂಸಾರ ಮಾಡಿ ಬಳಿಕ ಯುವತಿಯು ತನ್ನ ಅಸಲಿ ಆಟ ಶುರುವಿಟ್ಟುಕೊಂಡಿದ್ದಾಳೆ. ಯುವಕನ ಜೊತೆ ಕಿರಿಕ್ ಮಾಡಿ ಸುಂದರಿಯು ಕೈಕೊಟ್ಟಿದ್ದಾಳೆ. ಪದೇ ಪದೇ ಯುವಕನಿಗೆ ನೀನು ಕೀಳು ಜಾತಿ ಹೀಯಾಳಿಸುತ್ತಿದ್ದಳಂತೆ. ಪ್ರೀತಿಸಿ ಮದುವೆಯಾದ ಬಳಿಕ ಮತ್ತೊಬ್ಬ ಯುವಕನ ಜೊತೆ ಓಡಾಟ ಶುರುವಾಗಿತ್ತಂತೆ. ಯುವತಿ ಕುಟುಂಬದವರು ಸುಮಾರು 20 ಲಕ್ಷ ರೂಪಾಯಿ ವಂಚನೆ ಮಾಡಿದ್ದಾರೆಂದು ಯುವಕನು ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು ಮಾಡಿದ್ದಾನೆ. ಕಳೆದ ಆರು …
Read More »ಸರ್ಕಾರಿ ದಾಖಲೆಗಳನ್ನು ತಿದ್ದಿ ಅಕ್ರಮ: ಪೌರಾಯುಕ್ತ, ಕಂದಾಯ ಸಿಬ್ಬಂದಿ ವಿರುದ್ಧ ಎಫ್ಐಆರ್
ಮೈಸೂರು, ಫೆ.19: ಸರ್ಕಾರಿ ದಾಖಲೆಗಳನ್ನು ತಿದ್ದಿ ಬೊಕ್ಕಸಕ್ಕೆ ನಷ್ಟ ಉಂಟು ಮಾಡಿದ ಹಿನ್ನೆಲೆ ಪೌರಾಯುಕ್ತ, ಕಂದಾಯ ಸಿಬ್ಬಂದಿಯ ವಿರುದ್ಧ ಸೆಕ್ಷನ್ 420 ಅಡಿ ಪ್ರಕರಣ ದಾಖಲಾಗಿದೆ. ಸರ್ಕಾರಿ ದಾಖಲೆಗಳನ್ನು (Government Documents) ತಿದ್ದಿ ಕೆಲವು ಕಡತಗಳನ್ನು ನಾಪತ್ತೆ ಮಾಡಲಾಗಿದೆ. ನಿವೇಶನಗಳ ಖಾತೆ ಮಾಡುವ ವೇಳೆ ನಿಯಮಗಳನ್ನು ಗಾಳಿಗೆ ತೂರಿ ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟುಮಾಡಲಾಗಿದೆ. ಈ ಹಿನ್ನೆಲೆ ಇಬ್ಬರು ಅಧಿಕಾರಿಗಳ ವಿರುದ್ದ ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ (Nanjangud Town Police …
Read More »ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವಕ್ಕೆ ಡೇಟ್ ಫಿಕ್ಸ್
ಬೆಂಗಳೂರು, ಫೆ.19: ವಿಶ್ವ ವಿಖ್ಯಾತ, ಐತಿಹಾಸಿಕ ಪ್ರಸಿದ್ಧ ಬೆಂಗಳೂರು ಕರಗ (Bengaluru Karaga) ಮಹೋತ್ಸವಕ್ಕೆ ಡೇಟ್ ಫಿಕ್ಸ್ ಆಗಿದೆ. ಏಪ್ರಿಲ್ 15 ರಿಂದ ಏಪ್ರಿಲ್ 23ರವರೆಗೆ ಬೆಂಗಳೂರು ಕರಗ ಉತ್ಸವ ನಡೆಯಲಿದೆ. ಏಪ್ರಿಲ್ 23ರ ಚೈತ್ರ ಪೌರ್ಣಮಿಯಂದು ಕರಗ ಶಕ್ತ್ಯೋತ್ಸವ ನಡೆಯಲಿದೆ. ಈ ಬಾರಿಯೂ ಪೂಜಾರಿ ಎ.ಜ್ಞಾನೇಂದ್ರ (A Jnanendra) ಅವರು ಕರಗ ಹೊರಲಿದ್ದಾರೆ. ಜ್ಞಾನೇಂದ್ರ ಅವರು 14ನೇ ಬಾರಿ ಬೆಂಗಳೂರು ಕರಗ ಹೊರುತ್ತಿದ್ದಾರೆ. ನಿನ್ನೆ (ಫೆ.18) ನಡೆದ ಸಭೆಯಲ್ಲಿ ಧರ್ಮರಾಯ …
Read More »ವಿಜಯಪುರ: ವಸತಿ ಶಾಲೆಗಳ ಪ್ರವೇಶ ದ್ವಾರದಲ್ಲಿ ಕುವೆಂಪು ಕವಿತೆಯ ಬರಹ ಬದಲಾವಣೆ! ಚರ್ಚೆಗೆ ಗ್ರಾಸವಾಯ್ತು ಸರ್ಕಾರದ ನಡೆ
ವಿಜಯಪುರ, : ರಾಜ್ಯದ ಸಮಾಜ ಕಲ್ಯಾಣ ಇಲಾಖೆಯ (Department of Social Welfare, Karnataka) ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳ (Residential Schools) ಪ್ರವೇಶ ದ್ವಾರದಲ್ಲಿ ಕುವೆಂಪು ಅವರ ಕವಿತೆಯ ಸಾಲುಗಳನ್ನು ಬದಲಾಯಿಸಿ ಬೇರೆಯೇ ಧ್ಯೇಯವಾಕ್ಯ ಅಳವಡಿಸಲಾಗಿದೆ. ವಿಜಯಪುರ (Vijayapura)ಜಿಲ್ಲೆಯ ವಸತಿ ಶಾಲೆಗಳ ಪ್ರವೇಶ ದ್ವಾರದಲ್ಲಿ ಕುವೆಂಪು (Kuvempu)ಅವರ ಕವಿತೆಯ ‘ಜ್ಞಾನ ದೇಗುಲವಿದು, ಕೈ ಮುಗಿದು ಒಳಗೆ ಬಾ’ ಎಂಬ ಬರಹಕ್ಕೆ ಬದಲಾಗಿ, ‘ಜ್ಞಾನ ದೇಗುಲವಿದು, ದೈರ್ಯವಾಗಿ ಪ್ರಶ್ನಿಸಿ’ ಎಂದು ಬರೆಯಿಸಲಾಗಿದೆ. ವಿಜಯಪುರ …
Read More »1 ಕೋಟಿ 5 ಲಕ್ಷ 74 ಸಾವಿರ ರೂ. ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡ ವಿಶ್ವವಿದ್ಯಾಲಯ
ಫೆಬ್ರವರಿ 19: ಹಂಪಿ ಕನ್ನಡ ವಿಶ್ವವಿದ್ಯಾಲಯ (Hampi Kannada University) 1 ಕೋಟಿ 5 ಲಕ್ಷ 74 ಸಾವಿರ ರೂ. ವಿದ್ಯುತ್ ಬಿಲ್ (Current Bill) ಬಾಕಿ ಉಳಿಸಿ ಕೊಂಡಿದ್ದು, ಗುಲ್ಬರ್ಗಾ ವಿದ್ಯುತ್ ಸರಬರಾಜು ಕಂಪನಿ ನಿಯಮಿತ (GESCOM) ನೋಟಿಸ್ ನೀಡಿದೆ. ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿದ್ದರಿಂದ, ಜೆಸ್ಕಾಂ ಅಧಿಕಾರಿಗಳು ವಿಶ್ವವಿದ್ಯಾಲಯಕ್ಕೆ ವಿದ್ಯುತ್ ಸರಬರಾಜು ಅನ್ನು ಸ್ಥಗಿತಗೊಳಿಸಿತ್ತು. ಆದರೆ “ನುಡಿ ಹಬ್ಬ” ಇದ್ದ ಕಾರಣ ವಿದ್ಯುತ್ ಸರಬರಾಜು ಮಾಡಿ ಎಂದು ವಿಶ್ವವಿದ್ಯಾಲಯ …
Read More »ಅಕ್ಷರಕ್ಕೆ ಭಾವನೆ ತುಂಬಿದ ಮಾಂತ್ರಿಕ ಗುಲ್ಜಾರ್ಗೆ ಜ್ಞಾನಪೀಠ ಪ್ರಶಸ್ತಿ
ಹಿಂದಿ ಚಿತ್ರರಂಗದ ಮೇರು ಚಿತ್ರಸಾಹಿತಿ, ಭಾರತದ ಪ್ರಸ್ತುತ ಅತ್ಯುತ್ತಮ ಉರ್ದು ಕವಿ ಗುಲ್ಜಾರ್ ಅವರಿಗೆ ಜ್ಞಾನಪೀಠ ಪ್ರಶಸ್ತಿ ದೊರೆತಿದೆ. ಗುಲ್ಜಾರ್ ಸಾಗಿ ಬಂದ ಹಾದಿ ಎಂಥಹುದು ಗೊತ್ತೆ?ಕೇಂದ್ರ ಸರ್ಕಾರವು (Central Government) ಇಂದು ಖ್ಯಾತ ಚಿತ್ರಸಾಹಿತಿ ಗುಲ್ಜಾರ್ ಹಾಗೂ ವಿದ್ವಾಂಸ ಜಗದ್ಗುರು ರಾಮಭದ್ರಾಚಾರ್ಯ ಅವರಿಗೆ ಜ್ಞಾನಪೀಠ ಪ್ರಶಸ್ತಿ ಘೋಷಿಸಲಾಗಿದೆ. ಒಬ್ಬರು ಸಂಸ್ಕೃತ ವಿದ್ವಾಂಸರಾದರೆ ಮತ್ತೊಬ್ಬರು ಭಾರತದ ಈಗಿನ ಅತ್ಯುತ್ತಮ ಉರ್ದು ಕವಿ. ಬಾಲಿವುಡ್ ಸಿನಿಮಾ ಸಾಹಿತ್ಯವನ್ನು ತಮ್ಮ ಲೇಖನಿ ಮೂಲಕ …
Read More »ಮರೆಯಾಗಿರುವ ನಮ್ಮ ಮಣ್ಣಿನ ಬ್ಯಾಂಕುಗಳು ಕರ್ಣಾಟಕ ಬ್ಯಾಂಕ್‌ನಲ್ಲಿ ವಿಲೀನವಾಗಬೇಕು: ಡಿಕೆಶಿ
ಮಂಗಳೂರು: ಯಾರ ಪ್ರಮಾದವೋ ಏನೋ, ನಮ್ಮ ಮಣ್ಣಿನಲ್ಲಿ ಹುಟ್ಟಿದ ಸಿಂಡಿಕೇಟ್, ಕಾರ್ಪೋರೇಶನ್ ಬ್ಯಾಂಕ್‌ಗಳು ಕಣ್ಮರೆಯಾಗಿವೆ. ಹೀಗಾಗಿ ನಮ್ಮ ಮಣ್ಣಿನಲ್ಲಿ ಹುಟ್ಟಿ ಕಣ್ಮರೆಯಾಗಿರುವ ಬ್ಯಾಂಕುಗಳು ಹಾಗೂ ಇತರೆ ಬ್ಯಾಂಕ್‌ಗಳನ್ನು ಕರ್ಣಾಟಕ ಬ್ಯಾಂಕ್ (Karnataka Bank) ಜತೆ ವಿಲೀನ ಮಾಡಿಕೊಳ್ಳುವಂತಾಗಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ನಗರದಲ್ಲಿ ನಡೆದ ಕರ್ಣಾಟಕ ಬ್ಯಾಂಕ್ ಶತಮಾನೋತ್ಸವ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಿಮ್ಮ ಮುಂದಿನ ಗುರಿ ನಾವು ಕಳೆದುಕೊಂಡಿರುವ ನಮ್ಮ ಮಣ್ಣಿನ ಬ್ಯಾಂಕುಗಳನ್ನು ಮತ್ತೆ ಕರ್ಣಾಟಕ …
Read More »