Breaking News

Daily Archives: ಫೆಬ್ರವರಿ 20, 2024

ಕರ್ನಾಟಕ ಸೇರಿದಂತೆ ದೇಶದ ವಿವಿಗಳಿಗೆ ಕೇಂದ್ರದಿಂದ 3600 ಕೋಟಿ ರೂ. ಅನುದಾನ ಬಿಡುಗಡೆ: ಪ್ರಲ್ಹಾದ್ ಜೋಶಿ

ಬೆಳಗಾವಿ, ಫೆಬ್ರವರಿ 20: ಕರ್ನಾಟಕ, ಜಮ್ಮು-ಕಾಶ್ಮೀರ ಸೇರಿದಂತೆ ದೇಶದ ಅನೇಕ ವಿಶ್ವ ವಿದ್ಯಾಲಯಗಳಿಗೆ ಕೇಂದ್ರ ಸರ್ಕಾರ 3600 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ತಿಳಿಸಿದರು. ಬೆಳಗಾವಿಯಲ್ಲಿ (Belagavi) ಮಂಗಳವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಪ್ರಧಾನಮಂತ್ರಿ ಉಷಾ ಯೋಜನೆ’ಯಡಿ (PM Usha Yojana) 78 ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಅನುದಾನ ನೀಡಿದ್ದು, ಇಂದೇ ಅದರ ಬಿಡುಗಡೆಯಾಗುತ್ತಿದೆ ಎಂದು ಹೇಳಿದರು. ಕರ್ನಾಟಕದ …

Read More »

ಫಾಲ್ಸ್ ನೋಡಲು ಹೋಗಿ ಬೈಕ್ ಸಮೇತ ಪ್ರಪಾತಕ್ಕೆ ಬಿದ್ದ ವ್ಯಕ್ತಿ

ಬೆಳಗಾವಿ, ಫೆ.20: ಜಿಲ್ಲೆಯ ಖಾನಾಪುರ ತಾಲೂಕಿನ ಚಿಕಲೆ ಗ್ರಾಮದ ಫಾಲ್ಸ್​​​ ನೋಡಲು ಹೋಗಿ ಬೈಕ್ ಸಮೇತ 100 ಅಡಿ ಪ್ರಪಾತಕ್ಕೆ ಬಿದ್ದಿದ್ದ ಸವಾರನನ್ನು ರಕ್ಷಿಸಲಾಗಿದೆ. ಬೆಳಗಾವಿ ಕ್ಯಾಂಪ್ ಪ್ರದೇಶದ ವಿನಾಯಕ ಬುತ್ತುಲ್ಕರ್ ರಕ್ಷಣೆ ಮಾಡಲಾದ ವ್ಯಕ್ತಿ. ಖಾನಾಪುರ ಗೋವಾ ಗಡಿ ಭಾಗದಲ್ಲಿರುವ ಪ್ರಸಿದ್ಧ ಚಿಕಲೆ ಫಾಲ್ಸ್ ನೋಡಲು ಸ್ನೇಹಿತರ ಜೊತೆಗೆ ಬಂದಿದ್ದಾಗ ವಿನಾಯಕ ಬೈಕ್ ಸಮೇತ ಪ್ರಪಾತಕ್ಕೆ ಬಿದ್ದಿದ್ದರು. ಬೈಕ್ ಮೇಲೆ ಹೋಗುವಾಗ ಆಯತಪ್ಪಿ ನೂರು ಅಡಿ ಪ್ರಪಾತಕ್ಕೆ ಬಿದ್ದಿದ್ದರು. ಇದನ್ನು …

Read More »

ಬೆಳಗಾವಿ ಪಾಲಿಕೆಯ ಮಹತ್ವದ ದಾಖಲೆ, ಲ್ಯಾಪ್‌ಟಾಪ್​​ಗಳನ್ನೇ ಕದ್ದ ಕಳ್ಳ

Belagavi City Corporation Theft: ಬೆಳಗಾವಿ ಪಾಲಿಕೆ ಮತ್ತೆ ಸುದ್ದಿಯಲ್ಲಿದೆ. ನೂತನ ಆಯುಕ್ತ ಅಧಿಕಾರ ವಹಿಸಿಕೊಂಡ ಎರಡೇ ದಿನಕ್ಕೆ ನಿನ್ನೆ ಭಾನುವಾರ ಪಾಲಿಕೆ ಕಚೇರಿಯಲ್ಲಿ ಕಳ್ಳತನ ಆಗಿದೆ. ಪಾಲಿಕೆ ಕಚೇರಿಯಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಸದೇ ಇರೋದು, ಮಹತ್ವದ ದಾಖಲೆಗಳಿರುವ ಲ್ಯಾಪ್‌ಟಾಪ್ ಗಳನ್ನ ಕಳ್ಳತನ ಮಾಡಿರೋದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಸದಾ ಒಂದಿಲ್ಲೊಂದು ವಿವಾದಗಳ ಸುಳಿಗೆ ಸಿಲುಕುವ ಬೆಳಗಾವಿ ಮಹಾನಗರ ಪಾಲಿಕೆ (Belagavi City Corporation) ಮತ್ತೆ ಸುದ್ದಿಯಲ್ಲಿದೆ. ಈ ಬಾರಿ …

Read More »

ಪುತ್ರನ ಅಂತ್ಯಕ್ರಿಯೆಗೆ ಪರದಾಡುತ್ತಿದ್ದ ತಾಯಿ ಸಹಾಯಕ್ಕೆ ಧಾವಿಸಿದ ಯಂಗ್ ಬೆಲಗಾಮ್ ಫೌಂಡೇಶನ್; ಸಿಎಂ ಸಿದ್ದರಾಮಯ್ಯ ನೆನೆದು ಕಣ್ಣೀರು ಹಾಕಿದ ಅಜ್ಜಿ

ಬೆಳಗಾವಿ,: ಅನಾರೋಗ್ಯದಿಂದ ಸಾವನ್ನಪ್ಪಿದ ಮಗನ ಅಂತ್ಯಕ್ರಿಯೆಗೆ (Last Rites) ದುಡ್ಡಿಲ್ಲದೇ ಪರದಾಡುತ್ತಿದ್ದ ತಾಯಿಗೆ ಬೆಳಗಾವಿಯ (Belagavi) ವಿಜಯ ಮೋರೆ ಅವರ ಯಂಗ್ ಬೆಲಗಾಮ್ ಫೌಂಡೇಶನ್ ನೆರವು ನೀಡುವ ಮೂಲಕ ಮಾನವೀಯತೆ ಮೆರೆದಿದೆ. ಹಣವಿಲ್ಲದೇ ಪರದಾಡುತ್ತಿದ್ದ ಹೆತ್ತತಾಯಿಯ ನೆರವಿಗೆ ಬಂದ ಯಂಗ್ ಬೆಲಗಾಮ್ ಫೌಂಡೇಶನ್ ಹಿಂದೂ ಸಂಪ್ರದಾಯದಂತೆ ವಿಧಿವಿಧಾನಗಳನ್ನ ಮುಗಿಸಿ ಅಂತ್ಯಕ್ರಿಯೆ ನೆರವೇರಿಸಿದ್ದಾರೆ. ಸವದತ್ತಿ ತಾಲೂಕಿನ ಮರಕುಂಬಿ ಗ್ರಾಮದ ವಿಶ್ವನಾಥ ಶಿವಲಿಂಗಪ್ಪ ಗುರಕ್ಕನವರ(34) ಎಂಬುವವರು ಅನಾರೋಗ್ಯದಿಂದಾಗಿ ಬೆಳಗಾವಿಯ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಮೃತ ವಿಶ್ವನಾಥನ …

Read More »

ಬಿಜೆಪಿ-ಜೆಡಿಎಸ್ ಅಭ್ಯರ್ಥಿಯಿಂದ ಬ್ಲಾಕ್‌ಮೇಲ್ : ಕಾಂಗ್ರೆಸ್ ದೂರು

ಬೆಂಗಳೂರು: ಮುಂಬರುವ ರಾಜ್ಯಸಭಾ ಚುನಾವಣೆಯಲ್ಲಿ (Rajyasabha Election) ತನಗೆ ಅಡ್ಡಮತ ಚಲಾಯಿಸುವಂತೆ ಬಿಜೆಪಿ (BJP) ಹಾಗೂ ಜಾತ್ಯಾತೀತ ಜನತಾದಳ (JDS) ಅಭ್ಯರ್ಥಿ ಕುಪೇಂದ್ರ ರೆಡ್ಡಿ (Kupendra Reddy) ಷಡ್ಯಂತ್ರ ನಡೆಸುತ್ತಿದ್ದಾರೆ ಎಂದು ಕಾಂಗ್ರೆಸ್ (Congress) ನಾಯಕರು ದೂರು ದಾಖಲು ಮಾಡಿದ್ದಾರೆ. ಕಾಂಗ್ರೆಸ್ ಶಾಸಕ ಗಣಿಗ ರವಿಕುಮಾರ್ (Ganiga Ravikumar), ಪೊನ್ನಣ್ಣ (Ponnanna) ಹಾಗೂ ಕೋನರೆಡ್ಡಿ (Konareddy) ನೇತೃತ್ವದ ನಿಯೋಗದಿಂದ ಬೆಂಗಳೂರು (Benagaluru) ಪೊಲೀಸ್ ಆಯುಕ್ತ ಬಿ. ದಯಾನಂದ್ (B. Dayanand) ಅವರಿಗೆ …

Read More »

ಪ್ರತಿಪಕ್ಷದಿಂದ ಸಭಾತ್ಯಾಗ – ಇದು ನಾಚಿಕೆಗೇಡು ಎಂದ ಸಿಎಂ!

ಬೆಂಗಳೂರು : ಬಜೆಟ್‌ (Karnataka Budget 2024) ಮೇಲಿನ ಚರ್ಚೆಯ ಎರಡನೇ ದಿನವಾದ ಮಂಗಳವಾರ ಸಿಎಂ ಸಿದ್ದರಾಮಯ್ಯ (CM Siddaramaiah) ಭಾಷಣದ ವೇಳೆ ಕುಪಿತರಾದ ಬಿಜೆಪಿ (BJP) ನಾಯಕರು ಸಾಮೂಹಿಕವಾಗಿ ಸಭಾತ್ಯಾಗ (Session walkout) ಮಾಡಿದರು. ಇದನ್ನು ಲೇವಡಿ ಮಾಡಿದ ಸಿಎಂ ಸಿದ್ದರಾಮಯ್ಯ ನಾಚಿಕೆಯಿಂದ ಬಿಜೆಪಿವರು ಹೊರಗೆ ಹೋಗುತ್ತಿದ್ದಾರೆ ಎಂದು ಟೀಕಿಸಿದರು.   ಕೇಂದ್ರ ಬೆಜಟ್‌ ನಲ್ಲಿ ಕರ್ನಾಟಕ ರಾಜ್ಯಕ್ಕೆ ಯಾವುದೇ ಹೆಚ್ಚಿನ ನೆರವು ನೀಡಿಲ್ಲ. ಜೊತೆಗೆ ತೆರಿಗೆ ಹಂಚಿಕೆಯಲ್ಲಿಯೂ …

Read More »

ರೈತರ ಖಾತೆಗೆ 10,000ರೂ. – 2 ಕಂತುಗಳಲ್ಲಿ ನೇರ ನಗದು ವರ್ಗಾವಣೆ

ರಾಜ್ಯದ ರೈತರ ಏಳಿಗೆಗಾಗಿ ಸಿದ್ದು ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಅವುಗಳಲ್ಲಿ ರೈತ ಸಿರಿ ಯೋಜನೆ ಪ್ರಮುಖವಾದುದು. ಸಿರಿಧಾನ್ಯ ಬೆಳೆಗಾರರಿಗೆ ಪ್ರೋತ್ಸಾಹ ನೀಡುವ ಸಲುವಾಗಿ ಜಾರಿಗೆ ತಂದಿರುವ ಯೋಜನೆ ಇದಾಗಿದ್ದು, ಸಿರಿಧಾನ್ಯ ಬೆಳೆಯುವ ರೈತರಿಗೆ ಪ್ರತಿ ಹೆಕ್ಟೇರ್‌ಗೆ 10,000 ಪ್ರೋತ್ಸಾಹ ಧನವನ್ನು 2 ಕಂತುಗಳಲ್ಲಿ ನೇರ ನಗದು ವರ್ಗಾವಣೆ ಮೂಲಕ ರೈತರ ಬ್ಯಾಂಕ್‌ ಖಾತೆಗೆ ಜಮೆ ಮಾಡಲಾಗುವುದು.   ಮೊದಲ ಕಂತಿನಲ್ಲಿ 6,000, 2ನೇ ಕಂತಿನಲ್ಲಿ 4,000 ಹಣ …

Read More »

ತೀಯ ಪಿಯುಸಿ, ಎಸ್‌ಎಸ್‌ಎಲ್ಸಿ ಪರೀಕ್ಷೆ ದಿನಾಂಕ ಪ್ರಕಟ

ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್ಸೆಸ್ಸೆಲ್ಸಿ ಪರೀಕ್ಷೆಗಳ ದಿನಾಂಕವನ್ನು ಪ್ರಕಟಿಸಲಾಗಿದೆ. ಈ ಬಗ್ಗೆ ಮಾಹಿತಿ ನಿಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ,2023-24ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳು ಮಾರ್ಚ್ 1 ರಿಂದ 22ರ ವರೆಗೆ ನಡೆಯಲಿವೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಮಾರ್ಚ್ 25 ರಿಂದ ಎಪ್ರಿಲ್ 6ರವರೆಗೆ ನಡೆಯಲಿವೆ ಎಂದು ತಿಳಿಸಿದರು.  

Read More »

ಮಾ.9ರ ಬಳಿಕ ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆ ಸಾಧ್ಯತೆ.!

ಮಾರ್ಚ್ 9ರ ಬಳಿಕ ಭಾರತೀಯ ಚುನಾವಣೆ ಆಯೋಗ ಲೋಕಸಭಾ ಚುನಾವಣೆ ದಿನಾಂಕವನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಭಾರತೀಯ ಚುನಾವಾಣಾ ಆಯೋಗ ಉನ್ನತ ಅಧಿಕಾರಿಗಳು ಅಂತಿಮ ಪರಿಶೀಲನೆಗಾಗಿ ರಾಜ್ಯಗಳಿಗೆ ತೆರಳುತ್ತಿದೆ. ಚುನಾವಣಾ ಸಮಿತಿ ಮಾ.9ರ ಬಳಿಕ ಚುನಾವಣೆ ದಿನಾಂಕ ಘೋಷಿಸುವ ಸಾಧ್ಯತೆ ಇದ” ಎಂದು ವರದಿಯಾಗಿದೆ. ಏಪ್ರಿಲ್ ಅಥವಾ ಮೇ ತಿಂಗಳಿನಲ್ಲಿ ಭಾರತದಲ್ಲಿ 18ನೇ ಲೋಕಸಭೆಯ ಸದಸ್ಯರ ಆಯ್ಕೆಗೆ ಸಾರ್ವತ್ರಿಕ ಚುನಾವಣೆ ನಡೆಸುವ ಸಾಧ್ಯತೆ ಇದೆ ಎಂದು ವರದಿ ತಿಳಿಸಿದೆ.

Read More »

ಬಿಪಿಎಲ್‌ ಕಾರ್ಡುದಾರರಿಗೆ ಬಂಪರ್‌: ಕೇಂದ್ರದಿಂದ ಮಹತ್ವದ ಯೋಜನೆ

ಕೇಂದ್ರ ಸರಕಾರದ ಆಯುಷ್ಮಾನ್‌ ಯೋಜನೆಯ ಅಡಿಯಲ್ಲಿ ಕೇವಲ ಸರಕಾರಿ ಆಸ್ಪತ್ರೆಗಳಲ್ಲಿ ಮಾತ್ರವಲ್ಲ, ಖಾಸಗಿ ಆಸ್ಪತ್ರೆಗಳಲ್ಲಿಯೂ ಕೂಡ ಉಚಿತ ಚಿಕಿತ್ಸೆಗೆ ಅವಕಾಶವಿದೆ. ಬಿಪಿಎಲ್‌ ಕಾರ್ಡು ಹೊಂದಿರುವವರು 5 ಲಕ್ಷ ರೂಪಾಯಿ ಹಾಗೂ ಎಪಿಎಲ್‌ ಕಾರ್ಡುದಾರರು ಅಥವಾ ಕಾರ್ಡು ಹೊಂದದೇ ಇರುವವರು ಕೂಡ 1.5 -2 ಲಕ್ಷ ರೂಪಾಯಿಯ ವರೆಗೆ ಚಿಕಿತ್ಸೆ ಪಡೆದುಕೊಳ್ಳಲು ಅವಕಾಶವಿದೆ.   ನೀವು abdm.gov.in / ಗೆ ಭೇಟಿ ನೀಡುವ ಮೂಲಕ ನೀವು ಆಯುಷ್ಮಾನ್‌ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

Read More »