Breaking News

Daily Archives: ಫೆಬ್ರವರಿ 24, 2024

ವಿಮಾನವೇರಿ ಹಿರಿ ಹಿರಿ ಹಿಗ್ಗಿದ ಹಿರಿಜೀವಗಳು.

ಬೆಳಗಾವಿ: ಆಕಾಶದೆತ್ತರಕ್ಕೆ ತಲೆ ಎತ್ತಿ ವಿಮಾನವನ್ನು ನೋಡುತ್ತಿದ್ದ ವೃದ್ಧಾಶ್ರಮದ ಈ ಅಜ್ಜ, ಅಜ್ಜಿಯರು ಜೀವನದಲ್ಲಿಯೇ ಮೊದಲ ಬಾರಿಗೆ ವಿಮಾನವನ್ನೇ ಹತ್ತಿ ಮುಂಬೆ„ಗೆ ಪ್ರಯಾಣಿಸಿದಾಗ ಇವರ ಸಂತಸಕ್ಕೆ ಪಾರವೇ ಇರಲಿಲ್ಲ. ವಿಮಾನ ಹತ್ತಿದ ಕೂಡಲೇ ಹಿರಿ ಹಿರಿ ಹಿಗ್ಗಿ ಸಂಭ್ರಮಿಸಿದರು.   ಬೆಳಗಾವಿ ಸಮೀಪದ ಕಿಣಯೇ ಬಳಿಯ ಶಾಂತಾಯಿ ವೃದ್ಧಾಶ್ರಮದ ಈ ಅಜ್ಜ-ಅಜ್ಜಿಯರು ಇಳಿವಯಸ್ಸಿನಲ್ಲಿ ಗುರುವಾರ ಮಧ್ಯಾಹ್ನ 1:30ಕ್ಕೆ ಸ್ಟಾರ್‌ ಏರ್‌ ಜೆಟ್‌ ವಿಮಾನದಲ್ಲಿ ಪ್ರಯಾಣ ಬೆಳೆಸಿದರು. ಜೀವನದಲ್ಲಿಯೇ ಎಂದೂ ವಿಮಾನ ನೋಡಿರದ …

Read More »

ರಸ್ತೆ ದುರಸ್ತಿ ಕಾರ್ಯಕ್ಕೆ ಚಾಲನೆ

ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರು ಖಾನಾಪುರ ತಾಲೂಕಿನ ಕಣಕುಂಬಿ ಬಳಿ ಬೆಳಗಾವಿ- ಚೋರ್ಲಾ -ಗೋವಾ ರಸ್ತೆ ದುರಸ್ತಿ ಕಾರ್ಯಕ್ಕೆ ಚಾಲನೆ ನೀಡಿದರು. ಗೋವಾದಿಂದ ರಣಕುಂಡಿ ಕ್ರಾಸ್‌ ವರೆಗಿನ ಈ ರಸ್ತೆ 43.ಕಿ.ಮೀಟರ್‌ ಉದ್ದವಾಗಿದ್ದು, 58.90 ಕೋಟಿ ರೂಪಾಯಿ ವೆಚ್ಚದಲ್ಲಿ ಸುಧಾರಣೆ ಕಾರ್ಯ ಕೈಗೊಳ್ಳುತ್ತಿದ್ದು, 11 ತಿಂಗಳ ಅವಧಿಯಲ್ಲೇ ರಸ್ತೆ ದುರಸ್ತಿ ಕಾರ್ಯ ಮುಗಿಸುವ ಗುರಿ ಹೊಂದಲಾಗಿದೆ ಎಂದು ಹೇಳಿದರು.

Read More »

ಹೆಬ್ಬಾಳಕರ್ ಅವರು ಬೆಳಗಾವಿ ಕ್ಷೇತ್ರದಲ್ಲಿ ಗೆಲ್ಲುವ ಅವಕಾಶ ತೋರಿಸಿದರೆ ಅವರ ಪುತ್ರನಿಗೆ ಟಿಕೆಟ್

ಬೆಳಗಾವಿ: ‘ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಇಬ್ಬರು ಹಾಗೂ ಚಿಕ್ಕೋಡಿ ಕ್ಷೇತ್ರಕ್ಕೆ ಮೂವರ ಹೆಸರನ್ನು ಅಂತಿಮಗೊಳಿಸಿ ಹೈಕಮಾಂಡಿಗೆ ಕಳುಹಿಸಲಾಗಿದೆ’ ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಖಾನಾಪುರ ತಾಲೂಕಿನ ಕಣಕುಂಬಿ ಯಲ್ಲಿ ಶನಿವಾರ ಸುದ್ದಿಗಾರರ ಜೊತೆಗೆ ಮಾತನಾಡಿ ‘ಅಭ್ಯರ್ಥಿಗಳ ಆಯ್ಕೆ ಪಕ್ಷದ ವರಿಷ್ಠರಿಗೆ ಬಿಟ್ಟಿದ್ದು. ನಮ್ಮ ಕುಟುಂಬದ ಯಾವ ಸದಸ್ಯರೂ ಚುನಾವಣೆಗೆ ಸ್ಪರ್ಧೆ ಮಾಡುವದಿಲ್ಲ ಎಂದು ಪುನರುಚ್ಚರಿಸಿದರು. ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರು ಬೆಳಗಾವಿ ಕ್ಷೇತ್ರದಲ್ಲಿ ಗೆಲ್ಲುವ ಅವಕಾಶ …

Read More »

ಎಲ್ಲೆ ಇದ್ದರೂ ಬೆಳಗಾವಿ ಗ್ರಾಮೀಣ ಕ್ಷೇತ್ರಕ್ಕೆ ಕೈ ಮುಗಿದು ಮುಂದಿನ ಕೆಲಸ ಆರಂಭಿಸುತ್ತೇನೆ: ಹೆಬ್ಬಾಳಕರ್

ಬೆಳಗಾವಿ: ಎಲ್ಲೆ ಇದ್ದರೂ ಬೆಳಗಾವಿ ಗ್ರಾಮೀಣ ಕ್ಷೇತ್ರಕ್ಕೆ ಕೈ ಮುಗಿದು ಮುಂದಿನ ಕೆಲಸ ಆರಂಭಿಸುತ್ತೇನೆ. ಈ ಕ್ಷೇತ್ರಕ್ಕೆ ಒಳ್ಳೆಯ ಕೆಲಸ ತರುವುದೇ ನನ್ನ ಉದ್ದೇಶ. ಮೊದಲ ಬಾರಿಗೆ ಈ ಕ್ಷೇತ್ರದಿಂದ ಮಂತ್ರಿಯಾಗಿರುವ ಸೌಭಾಗ್ಯಕ್ಕಾಗಿ ನಾನು ಎಲ್ಲರಿಗೂ ಕೃತಜ್ಞಳಾಗಿದ್ದೇನೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಾಳೇಕುಂದ್ರಿ ಕೆ ಎಚ್ ಗ್ರಾಮದಲ್ಲಿ ಶ್ರೀ ಮಹಾಲಕ್ಷ್ಮಿ ಮಂದಿರದ ನೂತನ ಕಟ್ಟಡದ ನಿರ್ಮಾಣಕ್ಕಾಗಿ ಶನಿವಾರ ಕಟ್ಟಡ …

Read More »

ಜೈಲಿಗೆ ಹಾಕಿದರೆ ರಾಜ್ಯ ಉರಿದೀತು: ನಾರಾಯಣ ಗೌಡಎಚ್ಚರಿಕೆ

ಬೆಳಗಾವಿ: ನಮ್ಮ ಮೇಲೆ ಮೊಕದ್ದಮೆ ಹಾಕಿ ಜೈಲಿಗೆ ಕಳುಹಿಸುವ ಪ್ರಯತ್ನವನ್ನು ಸರಕಾರ ಮಾಡಿದರೆ ಇಡೀ ಕರ್ನಾಟಕ ಹೊತ್ತಿ ಉರಿಯುತ್ತದೆ ಎಂದು ಕರ್ನಾಟಕ ರಕ್ಷಣ ವೇದಿಕೆ ಅಧ್ಯಕ್ಷ ಟಿ.ಎ. ನಾರಾಯಣ ಗೌಡ ಎಚ್ಚರಿಕೆ ನೀಡಿದರು. ನಗರದಲ್ಲಿ ಶನಿವಾರ ನಡೆದ ಕರ್ನಾಟಕ ರಕ್ಷಣ ವೇದಿಕೆಯ ರಾಜ್ಯ ಕಾರ್ಯಕಾರಿಣಿ ಸಭೆ ಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ನಮ್ಮವರೇ ನಮ್ಮ ಧ್ವನಿ ಅಡಗಿಸುವ ಕೆಲಸ ಮಾಡಿಕೊಂಡು ಬಂದಿದ್ದಾರೆ. ಈಗಿನ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್‌ ಅಷ್ಟೇ ನಮ್ಮನ್ನು ಜೈಲಿಗೆ …

Read More »

ಬಿಜೆಪಿ-ಜೆಡಿಎಸ್ ಟಿಕೆಟ್ ಹಂಚಿಕೆ ಇನ್ನೂ ಅಂತಿಮವಾಗಿಲ್ಲ:ಜೋಶಿ

ಹುಬ್ಬಳ್ಳಿ: ಲೋಕಸಭೆ ಚುನಾವಣೆಗೆ ಕರ್ನಾಟಕದಿಂದ ಬಿಜೆಪಿ-ಜೆಡಿಎಸ್ ಮಧ್ಯೆ ಟಿಕೆಟ್ ಹಂಚಿಕೆ ಕುರಿತು ಮಾತುಕತೆ ಇನ್ನೂ ಅಂತಿಮವಾಗಿಲ್ಲ, ಸೀಟು ಹಂಚಿಕೆ ಸರಿಯಾಗಿಯೇ ಆಗುತ್ತದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು ದೆಹಲಿಯಲ್ಲಿ ಬಿಜೆಪಿ ವರಿಷ್ಠರನ್ನು ಭೇಟಿ ಮಾಡಿದ್ದಾರೆ. ಆದರೆ, ಯಾವುದೇ ಟಿಕೆಟ್ ಹಂಚಿಕೆ ಬಗ್ಗೆ ತೀರ್ಮಾನ ಆಗಿಲ್ಲ, ಮಂಡ್ಯ ಸಂಸದೆ ಸುಮಲತಾ ಬಿಜೆಪಿಯಲ್ಲಿಯೇ ಇರುತ್ತಾರೆ ಎಂದರು.

Read More »

ಗೂಂಡಾಗಿರಿ ಮಾಡುವ ಜೊತೆಗೆ ಸ್ವಲ್ಪ ಅಭಿವೃದ್ಧಿಯನ್ನು ಮಾಡಿದ್ದರೆ ಈಗ ಊರಿಗಿಂತ ಮುಂಚೆ ಮತದಾರರಿಗೆ ಕುಕ್ಕರ್ ಹಂಚುವ ಪ್ರಮೇಯ ಬರುತ್ತಿರಲಿಲ್ಲಾ: ಬಿಜೆಪಿ

ಬೆಂಗಳೂರು: ಲೋಕಸಭಾ ಚುನಾವಣೆ ಸನ್ನಿಹದಲ್ಲಿರುವಂತೆಯೇ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದ ಡಿ. ಕೆ. ಸುರೇಶ್ ವಿರುದ್ಧ ಮತದಾರರಿಗೆ ಕುಕ್ಕರ್ ಆಮಿಷದ ಆರೋಪ ಕೇಳಿಬಂದಿದೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ಬಿಜೆಪಿ, ಕುಕ್ಕರ್ ಬಾಂಬ್ ಬ್ಲಾಸ್ಟ್ ಮಾಡಿದ ಬ್ರದರ್ಸ್ ಗಳ ಬ್ರದರ್ ರಿಂದ ಕುಕ್ಕರ್ ಹಂಚಲಾಗುತ್ತಿದೆ. ದೇಶ ವಿಭಜನೆ ಮಾಡುವ ಸಂಚು ರೂಪಿಸಿದ್ದ ಬೆಂಗಳೂರು ಗ್ರಾಮಾಂತರ ಸಂಸದ ಡಿಕೆ ಸುರೇಶ್ ಅವರಿಗೆ ಚುನಾವಣೆ ಘೋಷಣೆ ಮುನ್ನವೇ …

Read More »

ಲೋಕಸಭೆ ಚುನಾವಣೆಗೆ ಮುನ್ನ ‘ಹಿಂದಿನ ತಪ್ಪುಗಳನ್ನು’ ಸರಿಪಡಿಸಿಕೊಳ್ಳಲು ರಾಜ್ಯ ಬಿಜೆಪಿ ಮುಂದು!

ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಗೆ ಬಿಜೆಪಿ ನಾಯಕರು ಶುಕ್ರವಾರ ಚಿಂತನ-ಮಂಥನ ನಡೆಸಿದ್ದು, ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ಮಾಡಿದ ತಪ್ಪುಗಳು ಮರುಕಳಿಸದಂತೆ ನಿರ್ಧರಿಸಿದ್ದಾರೆ, ವಿಶೇಷವಾಗಿ ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಕೋಟಾದ ಸೂಕ್ಷ್ಮ ವಿಷಯದ ಬಗ್ಗೆ ಕಾಳಜಿ ವಹಿಸಲು ನಿರ್ಧರಿಸಿದ್ದಾರೆ.   ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಹಿಂದಿನ ಬಿಜೆಪಿ ಸರ್ಕಾರವು ಈ ಸಮುದಾಯಗಳ ಕೋಟಾವನ್ನು ವರ್ಗೀಕರಿಸಿತ್ತು, ಆದರೆ ಕೇಸರಿ ಪಕ್ಷವು ಕೇವಲ 66 ವಿಧಾನಸಭಾ ಸ್ಥಾನಗಳಲ್ಲಿ ಗೆಲುವು ಕಂಡಿತ್ತು. ಜೆಡಿಎಸ್ …

Read More »

ದೆಹಲಿಯಲ್ಲಿ ಜಂಟಿಯಾಗಿ ಕಣಕ್ಕೆ ಇಳಿಯಲಿದೆ ಆಪ್, ಕಾಂಗ್ರೆಸ್

ಹೊಸದಿಲ್ಲಿ: ಇಂಡಿಯಾ ಒಕ್ಕೂಟದ (INDIA bloc) ಆಮ್ ಆದ್ಮಿ ಪಕ್ಷ (AAP) ಮತ್ತು ಕಾಂಗ್ರೆಸ್ (congress) ನಡುವೆ ದೆಹಲಿಯ (delhi) ಲೋಕಸಭಾ (loksabha) ಸ್ಥಾನಗಳ ಸೀಟು ಹಂಚಿಕೆ ಒಪ್ಪಂದ ಅಂತಿಮಗೊಳಿಸಲಾಗಿದೆ. ಆಪ್ ನಾಲ್ಕು ಸ್ಥಾನಗಳಲ್ಲಿ ಸ್ಪರ್ಧಿಸಲಿದ್ದು, ಕಾಂಗ್ರೆಸ್ ಮೂರು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ. ಈ ಬಗ್ಗೆ ಎರಡೂ ಪಕ್ಷಗಳು ಜಂಟಿಯಾಗಿ ಶೀಘ್ರದಲ್ಲೇ ಅಧಿಕೃತ ಘೋಷಣೆ ಮಾಡಲಿವೆ. ಎಎಪಿ ಅಭ್ಯರ್ಥಿಗಳು ಹೊಸದಿಲ್ಲಿ (New Delhi), ದಕ್ಷಿಣ ದೆಹಲಿ (South Delhi), ಪಶ್ಚಿಮ …

Read More »

ಲೋಕಸಭಾ ಚುನಾವಣೆ 2024: ಪಕ್ಷದ ಸಾಮಾನ್ಯ ಕಾರ್ಯಕರ್ತನಿಗೆ ಬೆಳಗಾವಿ ಟಿಕೆಟ್; ಸತೀಶ್ ಜಾರಕಿಹೊಳಿ

ಬೆಳಗಾವಿ, ಫೆಬ್ರವರಿ 24: ಲೋಕಸಭೆ ಚುನಾವಣೆ (Lok Sabha Election) ಹತ್ತಿರವಾಗುತ್ತಿದ್ದು, ಕಣಕ್ಕೆ ಇಳಿಸಲು ಕಾಂಗ್ರೆಸ್ (Congress)​ ಅಭ್ಯರ್ಥಿಗಳ ಹುಡುಕಾಟದಲ್ಲಿದೆ. ಬೆಳಗಾವಿ ಲೋಕಸಭಾ ಕ್ಷೇತ್ರದಿಂದ (Belagavi Lok Sabha Constituency) ನಾನಾಗಲಿ ಅಥವಾ ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ (Chikkodi Lok Sabha Constituency) ನನ್ನ ಪುತ್ರಿ ಪ್ರಿಯಾಂಕಾ ಜಾರಕಿಹೊಳಿಯಾಗಲಿ ಸ್ಪರ್ಧೆ ಮಾಡುವುದಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಸ್ಪಷ್ಟಪಡಿಸಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಜಾರಕಿಹೊಳಿ ಕುಟುಂಬದ ಯಾರನ್ನೂ ಕಣಕ್ಕಿಳಿಸುವ ಯೋಚನೆ ಇಲ್ಲ ಎಂದರು. ನಾವು ಸಾಮಾನ್ಯ ಕಾರ್ಯಕರ್ತನನ್ನು …

Read More »