Breaking News

Daily Archives: ಫೆಬ್ರವರಿ 26, 2024

ಮಹದಾಯಿ ಹೋರಾಟಗಾರರಿಂದ ಪ್ರಹ್ಲಾದ್​ ಜೋಶಿ ಕಾರಿಗೆ ಮುತ್ತಿಗೆ

ಹುಬ್ಬಳ್ಳಿ, ಫೆಬ್ರವರಿ 26: ನವಲಗುಂದ-ನರಗುಂದ ಮಹದಾಯಿ (Mahadayi) ಹೋರಾಟಗಾರರ ಆಕ್ರೋಶ ಮತ್ತೆ ಭುಗಿಲೆದಿದ್ದು, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ(Pralhad Joshi) ಅವರ ಕಾರಿಗೆ ಮುತ್ತಿಗೆ ಹಾಕಿ, ಚುನಾವಣೆಗೂ ಮುನ್ನ ಕಳಸಾ-ಬಂಡೂರಿ ಕಾಮಗಾರಿ (Kalasa-banduri work) ಆರಂಭಿಸುವಂತೆ ಒತ್ತಾಯಿಸಿದರು. ಕಳಸಾ-ಬಂಡೂರಿ ಕಾಮಗಾರಿ ವಿಳಂಬ ಮಾಡುತ್ತಿರುವುದಕ್ಕೆ ರೈತರು ಹುಬ್ಬಳ್ಳಿಯ ಸಚಿವ ಪ್ರಹ್ಲಾದ್​ ಜೋಶಿ ನಿವಾಸದ ಎದುರು ಜಮಾವಣೆಗೊಂಡು ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ ಕಾಮಗಾರಿ ಆರಂಭವಾಗದೆ, ಮತ ಕೇಳಲು ಬನ್ನಿ ಪಾಠ ಕಲಿಸುತ್ತೇವೆ ಎಂದು ಗುಡುಗಿದರು. ರೈತರ ಎಚ್ಚರಿಕೆಗೆ ತಬ್ಬಿಬ್ಬಾದ ಕೇಂದ್ರ ಸಚಿವ …

Read More »

ರಾಜ್ಯಸಭೆ ಚುನಾವಣೆರೆಡ್ಡಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್

ಬೆಂಗಳೂರು: ರಾಜ್ಯಸಭೆ ಚುನಾವಣೆ ಭಾರೀ ಕುತೂಹಲವನ್ನು ಮುಡಿಸಿದ್ದು, ಈಗ ಕೆ‌ ಆರ್ ಪಿಪಿ ಶಾಸಕ ಗಾಲಿ‌ ಜನಾರ್ದನ ರೆಡ್ಡಿಗೆ ಇನ್ನಿಲ್ಲ‌ ಬೇಡಿಕೆ ಶುರುವಾಗಿದೆ. ಅವರಿಗೆ ಮೂರು ಪಕ್ಷದ ಮುಖಂಡರು ಸಂಪರ್ಕಿಸಿದ್ದು, ತಮ್ಮ ತಮ್ಮ ಅಭ್ಯರ್ಥಿಗಳ ಪರವಾಗಿ ಮತ ನೀಡುವಂತೆ ಕೇಳಿದ್ದಾರೆ. ಬಿಜೆಪಿ-ಜೆಡಿಎಸ್-ಕಾಂಗ್ರೆಸ್ ನ ಘಟಾನುಘಟಿ ನಾಯಕರು ಸಂಪರ್ಕಿಸಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಅವರು ನೀಡಿರುವ ಹೇಳಿಕೆ ರಾಜಯಕೀಯ ಸಂಚಲನಕ್ಕೆ ಕಾರಣವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರು, …

Read More »

ವಿಜಯಪುರ ಬಿಜೆಪಿ ಅಭ್ಯರ್ಥಿ ನಾನೇ, ಆಸ್ತಿ ಏರಿಕೆ ಬಗ್ಗೆಯೂ ಸ್ಪಷ್ಟನೆ ಕೊಟ್ಟ ರಮೇಶ ಜಿಗಜಿಣಗಿ

ವಿಜಯಪುರ, ಫೆ.26:ಲೋಕಸಭೆ ಚುನಾವಣೆಗೆ(Lok Sabha Election 2024) ಅಣಿಯಾಗುತ್ತಿರುವ ಬಿಜೆಪಿ (BJP) ಹೈಕಮಾಂಡ್ ಮತ್ತೊಮ್ಮೆ ಕೇಂದ್ರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ರಣತಂತ್ರಗಳನ್ನು ರೂಪಿಸುತ್ತಿದೆ. ಇದರ ಜೊತೆಗೆ ಅಭ್ಯರ್ಥಿಗಳ ಆಯ್ಕೆಗೆ ಕಸರತ್ತು ನಡೆಸುತ್ತಿದೆ. ಕರ್ನಾಟಕದಲ್ಲೂ ಬಿಜೆಪಿ-ಜೆಡಿಎಸ್ ಮೈತ್ರಿ ಹಿನ್ನೆಲೆ ಸೀಟು ಹಂಚಿಕೆ ಮಾತುಕತೆ ನಡೆಯುತ್ತಿದೆ. ಅದರಂತೆ, ಈ ಬಾರಿ ಬಿಜೆಪಿ ವಿಜಯಪುರ (Vijayapur) ಕ್ಷೇತ್ರವನ್ನು ಜೆಡಿಎಸ್​ಗೆ ಬಿಟ್ಟುಕೊಡುತ್ತದೆ ಎನ್ನುವ ಮಾತುಗಳು ಕೇಳಿಬರುತ್ತಿವೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಕ್ಷೇತ್ರದ ಹಾಲಿ ಸಂಸದ ರಮೇಶ್ ಜಿಗಜಿಣಗಿ (Ramesh Jigajinagi) ವಿಜಯಪುರ ಲೋಕಸಭಾ ಕ್ಷೇತ್ರದ …

Read More »

ನಮ್ಮದು ಸಣ್ಣ ಪಕ್ಷ ನಾವು ಏನು ಮಾಡಬೇಕೋ ಮಾಡುತ್ತೇವೆ: ಹೆಚ್‌ಡಿಕೆ

ಕೋಲಾರ: ನಮ್ಮದು ಸಣ್ಣ ಪಕ್ಷ ನಾವು ಏನು ಮಾಡಬೇಕೋ ಮಾಡುತ್ತೇವೆ. ಸುಮಲತಾ ದೊಡ್ಡವರು ಅವರ ಕುರಿತು ಮಾತಾಡಲಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌.ಡಿ. ಕುಮಾರಸ್ವಾಮಿ (HD Kumaraswamy) ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯ (Mandya) ಲೋಕಸಭಾ ಕ್ಷೇತ್ರ ಜೆಡಿಎಸ್‌ (JDS) ಕೈ ತಪ್ಪಿ ಹೋಗಿದೆ ಎಂದು ಕೆಲವರು ಮಾತನಾಡುತ್ತಿದ್ದಾರೆ. ಆದರೆ ಇನ್ನೂ ಸೀಟ್‌ ಹಂಚಿಕೆ ಆಗಿಲ್ಲ. ಸೀಟು ಹೊಂದಾಣಿಕೆ ಆಗಬೇಕು ಎಂದ ಅವರು, ಸುಮಲತಾ ಅವರ ಬಗ್ಗೆ ನಾವು …

Read More »

ಬಿಜೆಪಿಯಿಂದ ಸಂವಿಧಾನಕ್ಕೆ ಧಕ್ಕೆ ಬಂದಿದೆ ಎಂದ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಫೆಬ್ರವರಿ 25: ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ಏನು ಆತಂಕ ಬಂದಿದೆ ಎಂಬುವುದನ್ನು ಜನರಿಗೆ ತಿಳಿಸುವ ಕೆಲಸ ಮಾಡಿದ್ದೇವೆ. ಬಿಜೆಪಿಯಿಂದ ಸಂವಿಧಾನಕ್ಕೆ ಧಕ್ಕೆ ಬಂದಿದೆ ಎಂದು ಸಿಎಂ ಸಿದ್ದರಾಮಯ್ಯ(Siddaramaiah)ವಾಗ್ದಾಳಿ ಮಾಡಿದ್ದಾರೆ. ಸಂವಿಧಾನ ಜಾರಿಯಾಗಿ 75ನೇ ವರ್ಷ ಹಿನ್ನೆಲೆಯಲ್ಲಿ ಸಮಾಜಕಲ್ಯಾಣ ಇಲಾಖೆಯಿಂದ ನಗರದ ಅರಮನೆ ಮೈದಾನದಲ್ಲಿ ಸಂವಿಧಾನ ಮತ್ತು ರಾಷ್ಟ್ರೀಯ ಐಕ್ಯತಾ ಸಮಾವೇಶದಲ್ಲಿ ಭಾಗಿ ಮಾತನಾಡಿದ ಅವರು, ಮೋದಿ ಸರ್ಕಾರದಿಂದ ಬಂದಿರುವ ಆತಂಕವನ್ನು ಜನರಿಗೆ ತಿಳಿಸಿದ್ದೇವೆ. ಡಾ.ಬಿ.ಅರ್.ಅಂಬೇಡ್ಕರ್​ ನಮ್ಮ ದೇಶಕ್ಕೆ ಸಂವಿಧಾನವನ್ನು ಕೊಟ್ಟಿದ್ದಾರೆ. …

Read More »

ನಾಲ್ಕನೇ ತರಗತಿ ಬಾಲಕಿಗೆ ಐರನ್​ ಬಾಕ್ಸ್​ನಿಂದ ಸುಟ್ಟು ಮಲತಾಯಿ

ಬೆಂಗಳೂರು, ಫೆ.25: ಬೆಂಗಳೂರು ಉತ್ತರ ತಾಲ್ಲೂಕಿನಅಂಚೆಪಾಳ್ಯ(Anchepalya) ಗ್ರಾಮದಲ್ಲಿ. ನಾಲ್ಕನೇ ತರಗತಿ ಓದುತ್ತಿರುವ ಪುಟ್ಟ ಬಾಲಕಿಗೆ ನಿತ್ಯ ಒಂದಲ್ಲ ಒಂದು ವಿಚಾರಕ್ಕೆ ಮಲತಾಯಿ(Stepmother) ಮಮತಾ ಎಂಬುವವರು ಕಿರುಕುಳ ನೀಡುತ್ತಿದ್ದಳಂತೆ. ಮಮತಾ ಗಂಡ ಶ್ರೀನಿವಾಸ್ ಕೆಲಸಕ್ಕೆ ಎಂದು ಮನೆಯಿಂದ ಹೊರಡುತ್ತಿದಂತೆ ಮೃಗಿಯ ವರ್ತನೆ ತೋರುತ್ತಿದ್ದ ಮಮತಾ, ಬಾಲಕಿ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸುತ್ತಿದ್ದಳಂತೆ. ಒಂದು ಸಣ್ಣ ಮಗು ಎಂಬುದನ್ನು ಸಹ ನೋಡದೆ ಐರನ್ ಬಾಕ್ಸ್​ನಿಂದ ಸುಟ್ಟಿರುವುದಲ್ಲದೆ, ಕಾದ ಕಬ್ಬಿಣದ ಸಲಾಕೆಯಿಂದ ಮಗುವಿನ …

Read More »

ಚಾರ್ಮಾಡಿ ಅರಣ್ಯದಲ್ಲಿ ಟ್ರಕ್ಕಿಂಗ್​ಗೆ ಹೋದ DYSP ಸಂಬಂಧಿಕರು ನಾಪತ್ತೆ

ದಕ್ಷಿಣ ಕನ್ನಡ, ಫೆ.25: ಚಾರ್ಮಾಡಿ ಅರಣ್ಯಕ್ಕೆ ಟ್ರಕ್ಕಿಂಗ್​ಗೆ ಹೋದ ಡಿವೈಎಸ್​ಪಿ(DYSP) ಸಂಬಂಧಿಕರು ನಾಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಬೆಳ್ತಂಗಡಿತಾಲೂಕಿನಲ್ಲಿ ನಡೆದಿದೆ. ಬೆಂಗಳೂರು ಮೂಲದ ಮೂವರು ಯುವಕರು, ಇಂದು ಸಂಜೆ ಚಿಕ್ಕಮಗಳೂರು(Chikkamagalauru) ಜಿಲ್ಲೆಯ ಕಳಸ ಅರಣ್ಯ ವ್ಯಾಪ್ತಿಯ ದುರ್ಗದಹಳ್ಳಿಯಿಂದ ಚಾರಣಕ್ಕೆ ತೆರಳಿದ್ದರು. ರಾತ್ರಿ ವೇಳೆಗೆ ಇಬ್ಬರು ಯುವಕರು ಮಿಸ್ಸಿಂಗ್ ಆಗಿದ್ದಾರೆ. ಓರ್ವ ಯುವಕ ನೀಡಿದ ಮಾಹಿತಿ ಮೇರೆಗೆ ಧರ್ಮಸ್ಥಳ ಮತ್ತು ಬೆಳ್ತಂಗಡಿ ಪೊಲೀಸರು, ಅರಣ್ಯಾಧಿಕಾರಿಗಳ ಹುಡುಕಾಟ ನಡೆಸಿದ್ದಾರೆ. ಈ ವೇಳೆ ನಾಪತ್ತೆಯಾದ …

Read More »

ಮಂಗಳೂರಿನಲ್ಲಿ ಯುವತಿ ನಾಪತ್ತೆ ಪ್ರಕರಣ: ಬಜರಂಗದಳ ದಾಳಿಗೆ ಹೆದರಿ ನಾಪತ್ತೆಯಾಗಿರುವ ಅನುಮಾನ

ಮಂಗಳೂರು, ಫೆಬ್ರವರಿ 26: ಪಿಹೆಚ್​ಡಿ ವಿದ್ಯಾರ್ಥಿನಿ ಚೈತ್ರಾ ಹೆಬ್ಬಾರ್ ನಾಪತ್ತೆ ಪ್ರಕರಣ (Missing Case) ಇದೀಗ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಬಜರಂಗದಳದ (Bajrang Dal) ದಾಳಿಗೆ ಹೆದರಿ ವಿದ್ಯಾರ್ಥಿನಿ ದಿಢೀರ್ ನಾಪತ್ತೆಯಾದರೇ ಎಂಬ ಅನುಮಾನ ಇದೀಗ ಕಾಡತೊಡಗಿದೆ. ಶಾರೂಖ್ ಜೊತೆ ಸಂಪರ್ಕದಲ್ಲಿರುವ ವಿಷಯ ಬಹಿರಂಗವಾಯಿತು ಎಂಬ ಕಾರಣಕ್ಕೆ ಫೆಬ್ರವರಿ 17ರ ಬೆಳಿಗ್ಗೆಯೇ ವಿದ್ಯಾರ್ಥಿನಿ ಪರಾರಿಯಾಗಿರಬಹುದು ಎಂಬ ಕುರಿತು ಪೊಲೀಸರು (Mangaluru Police) ಕಲೆಹಾಕಿರುವ ಮಾಹಿತಿಯಿಂದ ತಿಳಿದುಬಂದಿದೆ. ಶಾರೂಖ್​ಗೂ ರೂಮ್ ಕಡೆ ಬಾರದಂತೆ ತಿಳಿಸಿ ಚೈತ್ರಾ …

Read More »

ಲೋಕಸಭಾ ಚುನಾವಣೆ: ಬಿಜೆಪಿ ಬಗ್ಗೆ ಅಚ್ಚರಿಯ ಕಾರ್ಣಿಕ ನುಡಿದ ಜಿಗಣೆಹಳ್ಳಿ ಮೈಲಾರಲಿಂಗೇಶ್ವರ ಸ್ವಾಮಿ

ಚಿಕ್ಕಮಗಳೂರು, ಫೆಬ್ರವರಿ 26: ಲೋಕಸಭೆ ಚುನಾವಣೆಗೆ (Lok Sabha Elections 2024) ಇನ್ನೇನು ಕೆಲವೇ ತಿಂಗಳು ಬಾಕಿ ಇದೆ ಎನ್ನುವಾಗಲೇ, ಮತ್ತೆ ಕೇಂದ್ರದಲ್ಲಿ ಬಿಜೆಪಿಯೇ (BJP) ಅಧಿಕಾರದ ಗದ್ದುಗೆ ಹಿಡಿಯಲಿದೆ ಎಂಬರ್ಥದಲ್ಲಿ ಜಿಗಣೆಹಳ್ಳಿ ಮೈಲಾರಲಿಂಗೇಶ್ವರ ಸ್ವಾಮಿ ಕಾರ್ಣಿಕ (Jiganehalli Mailaralingeshwara Karanika) ನುಡಿದಿದ್ದಾರೆ. ಜತೆಗೆ, ಮಳೆ-ಬೆಳೆ ಚೆನ್ನಾಗಿ ಆಗಲಿದೆ ಎಂಬ ಆಶಾವಾದದ ನುಡಿಯನ್ನೂ ಮೈಲಾರಲಿಂಗೇಶ್ವರ ಸ್ವಾಮಿ ಕಾರ್ಣಿಕ ನುಡಿಯಲ್ಲಿ ಹೇಳಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಜಿಗಣೆಹಳ್ಳಿ ಮೈಲಾರಲಿಂಗೇಶ್ವರ ಸ್ವಾಮಿ ಕಾರ್ಣಿಕ …

Read More »

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನ ಕಾಯಿಲೆಗೆ 2ನೇ ಬಲಿ,

ಕಾರವಾರ, ಫೆ.26: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನ ಕಾಯಿಲೆಗೆ ( Kyasanur Forest Disease- KFD) 2ನೇ ಬಲಿಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕೊರ್ಲಕೈ ಗ್ರಾಮದ 60 ವರ್ಷದ ವೃದ್ಧೆ ಮಂಗನ ಕಾಯಿಲೆಗೆ ಬಲಿಯಾಗಿದ್ದಾರೆ (Death). 20 ದಿನದಿಂದ ಮಂಗನ ಕಾಯಿಲೆಯಿಂದ ಬಳಲುತ್ತಿದ್ದ ವೃದ್ಧೆ ಶಿವಮೊಗ್ಗದ ಮೆಗ್ಗಾನ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಸಿದ್ದಾಪುರ ತಾಲೂಕಿನಲ್ಲಿ KFD ಪ್ರಕರಣಗಳ ಸಂಖ್ಯೆ 43ಕ್ಕೇರಿದೆ. 20 ದಿನಗಳಿಂದ ಮಂಗನ ಕಾಯಿಲೆಯಿಂದ ಬಳಲುತ್ತಿದ್ದ …

Read More »