ಮುದ್ದೇಬಿಹಾಳ: ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕೊಠಡಿಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿ, ಓರ್ವ ವಿದ್ಯಾರ್ಥಿಯ ಸ್ಥಿತಿ ಗಂಭೀರಗೊಂಡು ಹಲವರಿಗೆ ಗಾಯಗಳಾದ ಘಟನೆ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಕೃಷ್ಣಾ ನದಿ ತೀರದ ಘಾಳಪೂಜಿ ಗ್ರಾಮವೊಂದರಲ್ಲಿ ನಡೆದಿದೆ. ಪರಿಶಿಷ್ಟ ಜಾತಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕೊಠಡಿಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 6ನೇ ತರಗತಿಯ ಓರ್ವ ವಿದ್ಯಾರ್ಥಿಗೆ ಕೈಕಾಲು ಸುಟ್ಟು ಗಂಭೀರ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ವಿಜಯಪುರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೋರ್ವ …
Read More »Daily Archives: ಫೆಬ್ರವರಿ 27, 2024
ನಾಲ್ವರು ಮೊಬೈಲ್ ಸುಲಿಗೆಕೋರರ ಬಂಧನ: 70 ಮೊಬೈಲ್ ವಶ
ಬೆಂಗಳೂರು, ಫೆ.27- ಒಂಟಿಯಾಗಿ ಹೋಗುವ ಸಾರ್ವಜನಿಕರನ್ನು ಗುರಿಯಾಗಿಟ್ಟುಕೊಂಡು ಮೊಬೈಲ್ ಸುಲಿಗೆ ಮಾಡಿ ಪರಾರಿಯಾಗುತ್ತಿದ್ದ ನಾಲ್ವರು ದರೋಡೆಕೋರರನ್ನು ನಗರ ಪೊಲೀಸರು ಬಂಧಿಸಿ 70 ಮೊಬೈಲ್‍ಗಳನ್ನು ವಶಪಡಿಸಿಕೊಂಡಿದ್ದಾರೆ. ಕೆಆರ್ ಪುರ: ಮಹದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬರು ನಡೆದುಕೊಂಡು ಹೋಗುತ್ತಿರುವಾಗ ಹಿಂದಿನಿಂದ ಬೈಕ್‍ನಲ್ಲಿ ಬಂದ ದರೋಡೆಕೋರರು ಅವರ ಕೈಯಲಿದ್ದ ಮೊಬೈಲ್ ಪೋನ್ ಕಿತ್ತುಕೊಂಡು ಪರಾರಿಯಾಗಿದ್ದ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಆರೋಪಿಗಳಿಂದ 20 ಲಕ್ಷ ಬೆಲೆ ಬಾಳುವ ಒಟ್ಟು …
Read More »ಅಬಕಾರಿ ಹಗರಣ: ದೆಹಲಿ ಸಿಎಂ ಕೇಜ್ರಿವಾಲ್‌ಗೆ 8ನೇ ಬಾರಿ ಸಮನ್ಸ್ ನೀಡಿದ ಇ.ಡಿ
ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾರಿ ನಿರ್ದೇಶನಾಲಯವು ಸತತ 8 ನೇ ಬಾರಿಗೆ ಸಮನ್ಸ್ ನೀಡಿದೆ. 7 ನೇ ಬಾರಿಯೂ ವಿಚಾರಣೆಗೆ ಹಾಜರಾಗದ ಹಿನ್ನೆಲೆ ಮತ್ತೆ ಸಮನ್ಸ್ ಜಾರಿ ಮಾಡಲಾಗಿದೆ. ಮಾರ್ಚ್ 4 ರಂದು ವಿಚಾರಣೆಗೆ ಹಾಜರಾಗುವಂತೆ ತಿಳಿಸಲಾಗಿದೆ. ಕೇಜ್ರಿವಾಲ್ ಅವರು ವಿಚಾರಣೆಗೆ ಹಾಜರಾಗದ ಕುರಿತು ಜಾರಿ ನಿರ್ದೇಶನಾಲಯ (ಇಡಿ)ವನ್ನು ನಗರ ನ್ಯಾಯಾಲಯವು ಸಂಪರ್ಕಿಸಿ ಮಾಹಿತಿ ಪಡೆದಿದ್ದು, ಮಾರ್ಚ್ 16 ರಂದು …
Read More »ಸಮುದ್ರದಲ್ಲಿ ಮೋದಿ ನವಿಲುಗರಿ ನೆಟ್ಟರೆ ಚಿಗುರುತ್ತಾ: ಖರ್ಗೆ
ಹುಬ್ಬಳ್ಳಿ, ಫೆಬ್ರವರಿ 27: ಪ್ರಧಾನಿ ನರೇಂದ್ರ ಮೋದಿ (Narendra Modi)ಸಮುದ್ರದ ಆಳದಲ್ಲಿ ನವಿಲುಗರಿ ನೆಟ್ಟರೆ ಚಿಗುರುತ್ತಾ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಮಜುನ ಖರ್ಗೆ (Mallikarjun Kharge) ವ್ಯಂಗ್ಯವಾಡಿರುವುದಕ್ಕೆ ಬಿಜೆಪಿ ನಾಯಕ ಜಗದೀಶ್ ಶೆಟ್ಟರ್ (Jagadish Shettar) ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಮಲ್ಲಿಕಾರ್ಜುನ ಖರ್ಗೆ ಟೀಕೆಗೆ ಅರ್ಥವೇ ಇಲ್ಲ. ನಮ್ಮ ಧರ್ಮ, ಸಂಸ್ಕೃತಿ, ಪರಂಪರೆಯನ್ನು ಉಳಿಸುವ ಕೆಲಸವನ್ನು ಮೋದಿ ಮಾಡುತ್ತಿದ್ದಾರೆ. ಇಡೀ ದೇಶ ಆರಾಧನೆ ಮಾಡುವ ಪವಿತ್ರ ಸ್ಥಳಗಳನ್ನು ಅಭಿವೃದ್ಧಿ ಮಾಡುತ್ತಿದ್ದಾರೆ …
Read More »ಎರಡು ದಿನಗಳೊಳಗೆ ಸರಕಾರಕ್ಕೆ ಜಾತಿ ಗಣತಿ ವರದಿ?
ಬೆಂಗಳೂರು: ಬಹುನಿರೀಕ್ಷಿತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿ ಜನಗಣತಿ) ವರದಿ ಸಲ್ಲಿಕೆಗೆ ಕಾಲ ಸನ್ನಿಹಿತವಾಗಿದ್ದು, ಎರಡು ದಿನಗಳಲ್ಲಿ ಸರಕಾರದ ಕೈ ಸೇರುವ ಸಾಧ್ಯತೆ ಇದೆ. ವರದಿಯು ಮುದ್ರಣ ಹಂತದಲ್ಲಿದ್ದು, ಎರಡು ದಿನಗಳೊಳಗೆ ಸರಕಾರಕ್ಕೆ ಸಲ್ಲಿಕೆಯಾಗಲಿದೆ. ಈ ಮೂಲಕ ಎಂಟು ವರ್ಷಗಳ ಕುತೂಹಲ ಮತ್ತು ನಿರೀಕ್ಷೆಗಳಿಗೆ ತೆರೆಬೀಳಲಿದೆ. ಬಹುತೇಕ ಅತ್ತ ಅಧಿವೇಶನ ಮುಗಿಯುತ್ತಿದ್ದಂತೆ, ಇತ್ತ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವರದಿ ಸಲ್ಲಿಸುವ ಸಾಧ್ಯತೆ ಇದೆ …
Read More »ಅಡ್ಡ ಮತದಾನ ಮಾಡಿದ ಎಸ್.ಟಿ.ಸೋಮಶೇಖರ್: ʼಕೈʼ ಅಭ್ಯರ್ಥಿಗೆ ಮತ
ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ ಯಶವಂತಪುರ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಅವರು ಕಾಂಗ್ರೆಸ್ ಅಭ್ಯರ್ಥಿ ಪರ ಮತ ಹಾಕಿದ್ದಾರೆ ಎಂದು ವರದಿಯಾಗಿದೆ. ಅಡ್ಡ ಮತದಾನ ಮಾಡುವ ಮೂಲಕ ಸ್ವಪಕ್ಷಕ್ಕೆ ದೊಡ್ಡ ಹೊಡೆತ ನೀಡಿದ್ದಾರೆ. “ಮತ ಚಲಾಯಿಸುವ ಮೊದಲು ಎಸ್.ಟಿ.ಸೋಮಶೇಖರ್ ಅವರು, “ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಆಗಲು ಪ್ರಯತ್ನಿಸಿದ್ದೆ. ಆದರೆ ಅವರು ಕಾಲಾವಕಾಶ ನೀಡಲಿಲ್ಲ. ಅಭಿವೃದ್ಧಿಗೆ ಯಾರು ಅನುದಾನ ಕೊಡುತ್ತಾರೋ ಅವರಿಗೆ ಮತ ಹಾಕುತ್ತೇನೆ ಎಂದು ಹೇಳಿದ್ದರು. ಬಿಜೆಪಿ …
Read More »3 ರಾಜ್ಯಗಳ 15 ಸ್ಥಾನಗಳಿಗೆ ಇಂದು ಚುನಾವಣೆ
ಹೊಸದಿಲ್ಲಿ: ರಾಜ್ಯಸಭೆಯ 56 ಸ್ಥಾನಗಳ ಪೈಕಿ 41 ನಾಯಕರು ಈಗಾಗಲೇ ಅವಿರೋಧವಾಗಿ ಆಯ್ಕೆಯಾಗಿದ್ದು, ಮಂಗಳವಾರ ಉಳಿದ 15 ಸ್ಥಾನಗಳಿಗಾಗಿ ಚುನಾವಣೆ ನಡೆಯಲಿದೆ. ಈ 15 ಸ್ಥಾನಗಳು ಉತ್ತರಪ್ರದೇಶ, ಹಿಮಾಚಲ ಪ್ರದೇಶ ಮತ್ತು ಕರ್ನಾಟಕದ್ದಾಗಿವೆ. ಉತ್ತರಪ್ರದೇಶದಲ್ಲಿ 10 ಸ್ಥಾನಗಳಿದ್ದು, 11 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಎಸ್‌ಪಿ ತನ್ನ 3 ಅಭ್ಯರ್ಥಿಗಳನ್ನು (ಜಯಾ ಬಚ್ಚನ್, ರಾಮ್‌ಜಿಲಾಲ್ ಸುಮನ್, ಅಲೋಕ್ ರಂಜನ್) ಮರುನಾಮ ನಿರ್ದೇಶನ ಮಾಡಿದೆ. ಇನ್ನು, ಬಿಜೆಪಿ 7ರ ಬದಲಾಗಿ 8 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಒಂದು …
Read More »“ಕಾಗದ ರಹಿತ ಪರೀಕ್ಷೆ’ಯತ್ತ ರಾಜೀವ್‌ಗಾಂಧಿ ಆರೋಗ್ಯ ವಿವಿ
ಬೆಂಗಳೂರು: “ಕಾಗದ ರಹಿತ ಪರೀಕ್ಷೆ’ ಯತ್ತ ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯ ಚಿತ್ತಹರಿಸಿದೆ. ಮಾರ್ಚ್‌ನಲ್ಲಿ ಈ ಸ್ವರೂಪದಲ್ಲಿ ಪ್ರಾಯೋಗಿಕ ಪರೀಕ್ಷೆ ನಡೆಯಲಿದ್ದು, ಅದಕ್ಕಾಗಿಯೇ ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿ ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿದೆ. ಈಗಾಗಲೇ “ಡಿಜಿ ಟಲ್ ವ್ಯಾಲ್ಯೂವೇಷನ್’ ಮೂಲಕ ಚರಿತ್ರೆ ನಿರ್ಮಿಸಿರುವ ವಿವಿ ಈಗ ಕಾಗದ ರಹಿತ ಪರೀಕ್ಷೆ ಮೂಲಕ ದೇಶದ ವಿವಿಗಳ ಇತಿಹಾಸದಲ್ಲೇ ಭಿನ್ನ ರೀತಿಯ ಪ್ರಯೋಗಕ್ಕೆ ಹೆಜ್ಞೆ ಇರಿಸಿದೆ. ಫೆಲೋಶಿಫ್ ಮತ್ತು ಫಿಸಿಯೋಥೆರಪಿ ವಿಭಾಗದಲ್ಲಿ ಕಾಗದ …
Read More »BJP-JDS ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ: ಸತೀಶ್ ಜಾರಕಿಹೊಳಿ
ಬೆಳಗಾವಿ: ಕಾಂಗ್ರೆಸ್ ಸರಕಾರದ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಬಿಜೆಪಿ-ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು ಯಮಕನಮರಡಿ ಮತಕ್ಷೇತ್ರದ ವ್ಯಾಪ್ತಿಯ ಹುದಲಿ ಗ್ರಾಮದಲ್ಲಿ ಸೋಮವಾರ ಗ್ರಾಮದೇವಿ ಜಾತ್ರಾ ಅಂಗವಾಗಿ ಚರಂಡಿ, ಸಿಸಿ ರಸ್ತೆ ಹಾಗೂ ರಸ್ತೆ ಡಾಂಬರೀಕರಣ ಹಾಗೂ ಸುಮಾರು 5 ಕೋಟಿ ರೂಪಾಯಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದರು. ಕಾಂಗ್ರೆಸ್ ಪಕ್ಷದ ಅಧಿಕಾರದಲ್ಲಿ ರಾಜ್ಯಾದ್ಯಂತ ಆಗುತ್ತಿರುವ ಗ್ರಾಮಗಳ ಅಭಿವೃದ್ಧಿ ಕಾರ್ಯಗಳನ್ನು ನೋಡಿ …
Read More »ರಸ್ತೆ ಅಪಘಾತ: ಯುವಕ ಸಾವು, ಓರ್ವನಿಗೆ ಗಾಯ
ಮಸ್ಕಿ: ತಾಲೂಕಿನ ಮುದಬಾಳ ಕ್ರಾಸ್ ಸಮೀಪ ನಿಂತಿದ್ದ ಟಿಪ್ಪರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಒಬ್ಬ ಯುವಕ ಸ್ಥಳದಲ್ಲಿಯೇ ಸಾವನಪ್ಪಿದ್ದು ಮತ್ತೊಬ್ಬನಿಗೆ ಗಾಯಗಳಾದ ಘಟನೆ ಸೋಮವಾರ ರಾತ್ರಿ ಸಂಭವಿಸಿದೆ. ಮೃತ ಯುವಕ ಮಂಜುನಾಥ ಭೋವಿ (26) ಎಂದು ಗುರುತಿಸಲಾಗಿದೆ. ಗಾಯಗೊಂಡ ಯುವಕ ಬಾಬು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾನೆ. ಮಂಜುನಾಥ ಮತ್ತು ಬಾಬು ಮಸ್ಕಿಯ ಭ್ರಮರಾಂಭ ಬಾರ್ ಆಯಂಡ್ ರೆಸ್ಟೋರೆಂಟ್ ನಲ್ಲಿ ವ್ಯವಸ್ಥಾಪಕರಾಗಿ ಕೆಲಸ ಮಾಡುತ್ತಿದ್ದರು. ಎಂದಿನಂತೆ ಕೆಲಸ ಮುಗಿಸಿಕೊಂಡು ಸ್ವ …
Read More »