Breaking News

Daily Archives: ಫೆಬ್ರವರಿ 28, 2024

ಪಾ’ಕೈ’ಸ್ತಾನ ಎಂದು ವ್ಯಂಗ್ಯ: ಕ್ರಮದ ಎಚ್ಚರಿಕೆ ನೀಡಿದ ಕಾಂಗ್ರೆಸ್​ಗೆ ಪಾಕ್​ನಲ್ಲಿ ದೂರು ಕೊಡ್ತೀರಾ ಎಂದ ಬಿಜೆಪಿ

ಬೆಂಗಳೂರು, ಫೆ.28: ರಾಜ್ಯಸಭೆ ಚುನಾವಣೆ ನಡೆದಿದ್ದು, ಅದರಲ್ಲಿ ನೂತನ ಸಂಸದರಾಗಿ ನಿನ್ನೆ(ಫೆ.27) ಕಾಂಗ್ರೆಸ್‌ನ (Congress)ನಾಸಿರ್‌ ಹುಸೇನ್‌ಆಯ್ಕೆಯಾಗಿದ್ದಾರೆ. ಈ ಹಿನ್ನಲೆ ಅವರ ಬೆಂಬಲಿಗರು ವಿಧಾನಸೌಧದಲ್ಲಿ ಸಂಭ್ರಮಾಚರಣೆ ಮಾಡುವ ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗಿದ್ದರು. ಈ ಕುರಿತು ಹಲವು ಬಿಜೆಪಿ(BJP) ನಾಯಕರು ಕಿಡಿಕಾರಿದ್ದರು. ಜೊತೆಗೆ ಇಂದು ವಿಧಾನಸಭೆ ಕಲಾಪದಲ್ಲೂ ಕೂಡ ಸದನದ ಬಾವಿಗಿಳಿದು ಧರಣಿ ನಡೆಸಿದ್ದರು. ಇದರ ಜೊತೆಗೆ ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿಯೂ ಕೂಡ ಬಿಜೆಪಿ ಮತ್ತು ಕಾಂಗ್ರೆಸ್ ಕಿತ್ತಾಟ ನಡೆಸಿದೆ. ಪಾ’ಕೈ’ಸ್ತಾನ …

Read More »

ಶವ ಇಟ್ಟು ಪ್ರತಿಭಟನೆ: ಅತಿಕ್ರಮಣ ತೆರವು

ಚಿಕ್ಕೋಡಿ: ‘ಅತಿಕ್ರಮಿಸಿದ ಜಾಗವನ್ನು ತೆರವು ಮಾಡಬೇಕು’ ಎಂದು ಆಗ್ರಹಿಸಿ ತಾಲ್ಲೂಕಿನ ಮಾಂಜರಿ ಗ್ರಾಮದಲ್ಲಿ ಮಂಗಳವಾರ ವಾಣಿಜ್ಯ ಸಂಕೀರ್ಣದಲ್ಲಿ ಶವ ಇಟ್ಟು ಪ್ರತಿಭಟನೆ ಮಾಡಿದ ಘಟನೆ ನಡೆದಿದೆ. ಮಾಂಜರಿ ನಿವಾಸಿ ಪುರಂದರ ಜೋಗೆ (85) ಅನಾರೋಗ್ಯದ ಕಾರಣ ಮಂಗಳವಾರ ನಿಧನರಾದರು. ಇದೇ ಊರಿನ ಸಿಕಂದರ್‌ ಕಿಲ್ಲೇದಾರ ಎನ್ನುವವರು ಪುರಂದರ ಅವರ ಜಾಗವನ್ನು ಅತಿಕ್ರಮಣ ಮಾಡಿಕೊಂಡಿದ್ದಾರೆ. ಅದನ್ನು ತೆರವುಗೊಳಿಸಿ ಮೂಲ ಮಾಲೀಕರಿಗೆ ನೀಡಬೇಕು ಎಂದು ಧರಣಿ ನಿರತರು ಆಗ್ರಹಿಸಿದರು. ‘ಪುರಂದರ ಅವರು ತಮ್ಮ …

Read More »

ಬೆಳಗಾವಿ: ಕೆರೆ ಅಭಿವೃದ್ಧಿ, ಹಸ್ತಾಂತರ

ಬೆಳಗಾವಿ: ‘ಪ್ಯಾಸ್‌’ ಫೌಂಡೇಷನ್‌ ವತಿಯಿಂದ ಅಭಿವೃದ್ಧಿ ಪಡಿಸಿದ ಮಚ್ಚೆ ಗ್ರಾಮದ ಕೆರೆಯನ್ನು ಈಚೆಗೆ ಸಣ್ಣ ನೀರಾವರಿ ಇಲಾಖೆಗೆ ಹಸ್ತಾಂತರಿಸಲಾಯಿತು. 2021ರಲ್ಲಿ ಈ ಕೆರೆಯನ್ನು ದತ್ತು ಪಡೆದಿದ್ದ ಫೌಂಡೇಷನ್‌ ತನ್ನ ಸಿಎಸ್‌ಆರ್ ಅನುದಾನದಲ್ಲಿ ಅಭಿವೃದ್ಧಿ ಮಾಡಿದೆ. ಎಕೆಪಿ ಫೆರೋಕಾಸ್ಟ್ಸ್ ಗ್ರೂಪ್‌ನ ಮುಖ್ಯಸ್ಥ ರಾಮ್ ಭಂಡಾರಿ, ಪರಾಗ್ ಭಂಡಾರಿ ಮತ್ತು ಗೌತಮ್ ಭಂಡಾರಿ ಅವರ ಸಹಾಯದಿಂದ ಪ್ರತಿಷ್ಠಾನವು ಯೋಜನೆ ಪೂರ್ಣಗೊಳಿಸಿ ಗ್ರಾಮಸ್ಥರಿಗೆ ನೀಡಿದೆ. ನಾಲ್ಕು ಎಕರೆ ವಿಸ್ತೀರ್ಣ ಹೊಂದಿದ ಕೆರೆಯನ್ನು ₹17 ಲಕ್ಷ …

Read More »

ಚಿಂಚಲಿ ಮಾಯಕ್ಕ ಜಾತ್ರೆ ಇಂದಿನಿಂದ

ರಾಯಬಾಗ: ಕರ್ನಾಟಕ ಹಾಗೂ ಮಹಾರಾಷ್ಟ್ರ ಭಕ್ತರ ಆರಾಧ್ಯ ದೇವತೆ ಚಿಂಚಲಿ ಮಾಯಕ್ಕದೇವಿ ಜಾತ್ರೆ ಫೆ.28ರಿಂದ ಮಾರ್ಚ್‌ 3ರವರೆಗೆ ಐದು ದಿನ ವೈಭವೋಪೇತವಾಗಿ ಜರುಗಲಿದೆ. ಮಾಯಕಾರತಿ, ಮಹಾಕಾಳಿ, ಮಾಯವ್ವ ಎಂಬೆಲ್ಲ ಹೆಸರಿನಿಂದ ಪೂಜಿಸಲ್ಪಡುವ ಮಾಯಕ್ಕ ದೇವಿ ಜಾತ್ರೆಗೆ ಚಿಂಚಲಿ ಪಟ್ಟಣ ಸಂಭ್ರಮದಿಂದ ಸಜ್ಜುಗೊಂಡಿದೆ. ಈ ಜಾತ್ರೆಗೆ ನೆರೆಯ ತಮಿಳುನಾಡು, ಗೋವಾ, ಆಂಧ್ರಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳ ಲಕ್ಷಲಕ್ಷ ಭಕ್ತರು ಆಗಮಿಸುತ್ತಾರೆ. ಜಾತ್ರೆಗೆ ಸುಮಾರು 5 ಲಕ್ಷಕ್ಕೂ ಹೆಚ್ಚು ಭಕ್ತರು ಆಗಮಿಸುವುದು ಪ್ರತಿವರ್ಷದ ವಾಡಿಕೆ. …

Read More »

ರಸ್ತೆಯಲ್ಲೇ ಹರಿಯುವ ಚರಂಡಿ ನೀರು, ಸೌಲಭ್ಯಗಳಿಲ್ಲದೆ ನಲುಗಿದ ಬರದೂರು

ಮುಂಡರಗಿ: ತಾಲ್ಲೂಕಿನ ಮೇವುಂಡಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬರದೂರು ಗ್ರಾಮದಲ್ಲಿ ವಾಹನ ಹಾಗೂ ಪಾದಚಾರಿಗಳ ಸುಗಮ ಸಂಚಾರಕ್ಕೆ ಅಗತ್ಯ ರಸ್ತೆ, ಸಾರ್ವಜನಿಕರು ಬಳಸಿದ ಗಲೀಜು ನೀರು ಹರಿದು ಹೋಗುವುದಕ್ಕೆ ಸೂಕ್ತ ಚರಂಡಿ ವ್ಯವಸ್ಥೆ ಸೇರಿದಂತೆ ಅಗತ್ಯ ಸೌಲಭ್ಯಗಳಿಲ್ಲದೆ ಗ್ರಾಮದ ಜನರು ಹಲವು ದಶಕಗಳಿಂದ ಪರದಾಡುತ್ತಿದ್ದಾರೆ.   ತಾಲ್ಲೂಕು ಕೇಂದ್ರ ಸ್ಥಳದಿಂದ ಕೇವಲ ಐದು ಕಿ.ಮೀ. ದೂರದಲ್ಲಿರುವ ಬರದೂರು ಗ್ರಾಮವು ಮೂಲಸೌಲಭ್ಯಗಳಿಂದ ವಂಚಿತವಾಗಿದ್ದು, ಗ್ರಾಮಸ್ಥರು ಹಲವಾರು ಸಮಸ್ಯೆಗಳ ನಡುವೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಗೆ …

Read More »

ಯಾರಾದ್ರೂ ಪಾಕ್ ಪರ ಘೋಷಣೆ ಕೂಗಿದ್ರೆ ಒದ್ದು ಒಳಗೆ ಹಾಕುತ್ತೇವೆ : ಡಿಸಿಎಂ

ಬೆಂಗಳೂರು : ವಿಧಾನಸೌಧದಲ್ಲಿಕ ಯಾರೂ ಪಾಕ್‌ ಪರ ಘೋಷಣೆ ಕೂಗಿಲ್ಲ, ಒಂದು ವೇಳೆ ಪಾಕ್‌ ಪರ ಘೋಷಣೆ ಕೂಗಿದ್ರೆ ಒದ್ದು ಒಳಗೆ ಹಾಕುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ. ಸುದ್ದಿಗಾರರೊಂದಗಿಎ ಮಾತನಾಡಿದ ಅವರು, ವಿಧಾನಸೌಧದಲ್ಲಿ ಯಾರಾದ್ರೂ ಪಾಕ್‌ ಪರ ಘೋಷಣೆ ಕೂಗಿದ್ರೆ ಒದ್ದು ಒಳಗೆ ಹಾಕುತ್ತೇವೆ. ಸಂಪೂರ್ಣ ತನಿಖೆ ನಡೆಸಿ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ. ಈ ವಿಚಾರದಲ್ಲಿ ರಾಜಕೀಯ ಮಾಡಿ ಗೊಂದಲ ಸೃಷ್ಟಿಸಲು ಯತ್ನಿಸಲಾಗುತ್ತಿದೆ. ಯಾರೆಲ್ಲಾ ಸುಳ್ಳು …

Read More »

ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಭಿನ್ನಮತ, ಬಂಡಾಯ ಶಮನಕ್ಕೆ ಸಿಎಂ ಬದಲಾವಣೆಗೆ ಮುಂದಾದ ಹೈಕಮಾಂಡ್!

ಶಿಮ್ಲಾ: ರಾಜ್ಯಸಭಾ ಚುನಾವಣೆ ನಡೆದ ಬಳಿಕ ಹಿಮಾಚಲ ಪ್ರದೇಶದಲ್ಲಿ ಆಡಳಿತದಲ್ಲಿರುವ (Himachal Pradesh Congress Crisis) ಕಾಂಗ್ರೆಸ್‌ನಲ್ಲಿ ಭಿನ್ನಮತ ಭುಗಿಲೆದ್ದಿದೆ. ಹಿಮಾಚಲ ಪ್ರದೇಶದಲ್ಲಿ ಸಂಪೂರ್ಣ ಬಹುಮತವಿದ್ದರೂ ಸಹ ಕಾಂಗ್ರೆಸ್ ತನ್ನ ಅಭ್ಯರ್ಥಿ ಅಭಿಷೇಕ್ ಮನು ಸಿಂಘ್ವಿ ಅವರನ್ನು ರಾಜ್ಯಸಭೆಯಲ್ಲಿ ಗೆಲ್ಲಿಸಲು ಅಸಾಧ್ಯವಾದ ಬೆನ್ನಲ್ಲೇ ಪರಿಸ್ಥಿತಿಯ ಲಾಭ ಪಡೆದುಕೊಂಡ ಬಿಜೆಪಿ ಆಡಳಿತಾರೂಢ ಕಾಂಗ್ರೆಸ್‌ಗೆ ಇಕ್ಕಟ್ಟಿನ ಪರಿಸ್ಥಿತಿ ತಂದೊಡ್ಡಿದೆ. ಕಾಂಗ್ರೆಸ್‌ ಶಾಸಕರು ಅಡ್ಡಮತ ಹಾಕಿದ ಪರಿಣಾಮ ಬಿಜೆಪಿಗೆ ಪ್ಲಸ್ ಆಗುತ್ತಿದ್ದಂತೆ ಹಿಮಾಚಲ ಪ್ರದೇಶದ …

Read More »

ರಾಷ್ಟ್ರಧ್ವಜಕ್ಕೆ ಅವಮಾನ ಮಾಡಬೇಡಿ : ಸಭಾಧ್ಯಕ್ಷ ಯು.ಟಿ.ಖಾದರ್

ಬೆಂಗಳೂರು,ಫೆ.28- ರಾಷ್ಟ್ರಧ್ವಜಕ್ಕೆ ಅವಮಾನ ಮಾಡಬೇಡಿ ಒಂದು ವೇಳೆ ಮಾಡಿದರೆ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಸಭಾಧ್ಯಕ್ಷ ಯು.ಟಿ.ಖಾದರ್ ವಿಧಾನಸಭೆಯಲ್ಲಿ ತಿಳಿಸಿದರು. ಇಂದು ಬೆಳಿಗ್ಗೆ ಸದನ ಸಮಾವೇಶಗೊಂಡಾಗ ಸೋಮವಾರ ಸಕಾಲಕ್ಕೆ ಆಗಮಿಸಿದ್ದ ಶಾಸಕರ ಹೆಸರುಗಳನ್ನು ಪ್ರಕಟಿಸಿದ ನಂತರ ಸಭಾಧ್ಯಕ್ಷರು ಅಧಿಕಾರಿಗಳಿಂದ ನನಗೆ ಮಾಹಿತಿ ಬಂದಿದೆ. ರಾಷ್ಟ್ರಧ್ವಜವನ್ನು ಸದನದೊಳಗೆ ತಂದಿದ್ದಾರೆ ಎಂಬ ಮಾಹಿತಿ ಇದೆ. ನನ್ನ ಜವಾಬ್ದಾರಿ, ಕರ್ತವ್ಯವನ್ನು ನಿಭಾಯಿಸಬೇಕು. ಯಾರೂ ಕೂಡ ಅವಮಾನ ಮಾಡಬಾರದು. ಸದನದ ಹೊರಗೆ ನಡೆದಿರುವ ಘಟನೆ ಬಗ್ಗೆ …

Read More »

ಪಾಕಿಸ್ತಾನ ಪರ ಘೋಷಣೆ : ವಿಧಾನಪರಿಷತ್‍ನಲ್ಲೂ ಕೋಲಾಹಲ

ಬೆಂಗಳೂರು,ಫೆ.28- ವಿಧಾನಸೌಧದ ಆವರಣದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಕಿಡಿಗೇಡಿಗಳನ್ನು ತಕ್ಷಣವೇ ಬಂಧಿಸಬೇಕೆಂದು ಒತ್ತಾಯಿಸಿ ಪ್ರತಿಪಕ್ಷ ಬಿಜೆಪಿ ವಿಧಾನಪರಿಷತ್‍ನಲ್ಲಿ ಗದ್ದಲ ಕೋಲಾಹಲ ಸೃಷ್ಟಿಸಿತು. ಬೆಳಗ್ಗೆ ಕಲಾಪ ಆರಂಭವಾಗುತ್ತಿದ್ದಂತೆ ಸಭಾಪತಿ ಬಸವರಾಜ ಹೊರಟ್ಟಿ ಅವರು ದಿನದ ಕಲಾಪವನ್ನು ಕೈಗೆತ್ತಿಕೊಳ್ಳಲು ಮುಂದಾದರು. ಈ ವೇಳೆ ಪ್ರತಿಪಕ್ಷದ ನಾಯಕ ಕೋಟಾ ಶ್ರೀನಿವಾಸ್ ಪೂಜಾರಿ ವಿಷಯ ಪ್ರಸ್ತಾಪಿಸಿದ್ದು, ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಗದ್ದಲ ಏರ್ಪಟ್ಟು ಸದನವನ್ನು ಕೆಲ ಮುಂದೂಡಲಾಯಿತು. ವಿಷಯ ಪ್ರಸ್ತಾಪಿಸಿದ ಕೋಟಾ ಶ್ರೀನಿವಾಸ್ …

Read More »

14 ಬಿಜೆಪಿ ಶಾಸಕರನ್ನು ವಿಧಾನಸಭಾ ಕಲಾಪದಿಂದ ಅಮಾನತುಗೊಳಿಸಿ ಸ್ಪೀಕರ್ ಆದೇಶ!

ಶಿಮ್ಲಾ: ಹಿಮಾಚಲ ಪ್ರದೇಶದ ರಾಜಕೀಯ ಹೈಡ್ರಾಮ (Himachal Pradesh Political Crisis) ಕ್ಷಣದಿಂದ ಕ್ಷಣಕ್ಕೆ ಕುತೂಹಲ ಪಡೆಯುತ್ತಿದ್ದು, ಇದೀಗ ನಡೆದ ಭಾರೀ ಬೆಳವಣಿಗೆಯೊಂದರಲ್ಲಿ 14 ಬಿಜೆಪಿ ಶಾಸಕರನ್ನು ಸ್ಪೀಕರ್ ಅಮಾನತುಗೊಳಿಸಿದ್ದಾರೆ. ಹಿಮಾಚಲ ಪ್ರದೇಶದಲ್ಲಿ ಸಂಪೂರ್ಣ ಬಹುಮತವಿದ್ದರೂ ಸಹ ಕಾಂಗ್ರೆಸ್ ತನ್ನ ಅಭ್ಯರ್ಥಿ ಅಭಿಷೇಕ್ ಮನು ಸಿಂಘ್ವಿ ಅವರನ್ನು ರಾಜ್ಯಸಭೆಯಲ್ಲಿ ಗೆಲ್ಲಿಸಲು ಅಸಾಧ್ಯವಾದ ಬೆನ್ನಲ್ಲೇ ಕಾಂಗ್ರೆಸ್‌ಗೆ ಉಂಟಾದ ಇಕ್ಕಟ್ಟಿನ ಪರಿಸ್ಥಿತಿಯ ಮಧ್ಯೆ ಈ ಬೆಳವಣಿಗೆ ನಡೆದಿದ್ದು, ಬಜೆಟ್ ಅಧಿವೇಶನ ನಡೆಯುತ್ತಿರುವಾಗಲೇ ಹಿಮಾಚಲ …

Read More »