Breaking News

Daily Archives: ಫೆಬ್ರವರಿ 28, 2024

ಲೋಕಸಭಾ ಚುನಾವಣೆ: ಚಿಕ್ಕೋಡಿಯಿಂದ ಸ್ಪರ್ಧಿಸಲು ಅಮಿತ್‌ ಕೋರೆ ಆಸಕ್ತಿ

ಬೆಳಗಾವಿ: ‘ಲೋಕಸಭಾ ಚುನಾವಣೆಗೆ ಚಿಕ್ಕೋಡಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಹಲವರು ಪ್ರಯತ್ನ ನಡೆಸಿದ್ದಾರೆ. ಟಿಕೆಟ್ ಸಿಕ್ಕರೆ ನನ್ನ ಪುತ್ರ ಅಮಿತ್ ಸ್ಪರ್ಧಿಸಬಹುದು’ ಎಂದು ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಹೇಳಿದರು. ‘ಈ ಹಿಂದೆಯೇ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬೆಳಗಾವಿ ಉತ್ತರ ಕ್ಷೇತ್ರದಿಂದ ಸ್ಪರ್ಧಿಸಲು ಅಮಿತ್‌ಗೆ ಅವಕಾಶ ಬಂದಿತ್ತು. ಆಗ ಅಸಕ್ತಿ ಇರಲಿಲ್ಲ. ಆದರೆ, ಈಗ ಗೆಳೆಯರು ಸ್ಪರ್ಧಿಸಲು ಒತ್ತಡ ಹೇರಿದ್ದಾರೆ’ ಎಂದು ಅವರು ಸೋಮವಾರ ಸುದ್ದಿಗಾರರಿಗೆ ತಿಳಿಸಿದರು. ‘ಚಿಕ್ಕೋಡಿ …

Read More »

ಶೈಕ್ಷಣಿಕ ಸುಧಾರಣೆಗೆ ಆದ್ಯತೆ: ಸಚಿವೆ

ಬೆಳಗಾವಿ: ‘2024-2028ರ ಅವಧಿಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಶೈಕ್ಷಣಿಕ ಕ್ರಾಂತಿ ಮಾಡುವುದು ನನ್ನ ಉದ್ದೇಶ. ಅದಕ್ಕೆ ನಾನು ಬದ್ಧಳಾಗಿದ್ದೇನೆ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ತಿಳಿಸಿದರು. ಬೆಳಗಾವಿ ಗ್ರಾಮೀಣ ಕ್ಷೇತ್ರದ ತುಮ್ಮರಗುದ್ದಿ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಸೋಮನಟ್ಟಿ ಗ್ರಾಮದ ಸರ್ಕಾರಿ‌ ಕನ್ನಡ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಿರ್ಮಿಸಿದ ಹೆಚ್ಚುವರಿ ಕೊಠಡಿಗಳನ್ನು‌ ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು. ‘ಕಳೆದ ಅವಧಿಯಲ್ಲಿ ಸಾಕಷ್ಟು …

Read More »

ಕನ್ನಡದಲ್ಲೇ ಕನ್ನಡಿಗ-ಕನ್ನಡತಿ ಲಗ್ನ

ಬೆಳಗಾವಿ: ಗಡಿನಾಡು ಬೆಳಗಾವಿಯಲ್ಲಿ ಸೋಮವಾರ ಕನ್ನಡಮಯವಾದ ಮದುವೆ ನೆರವೇರಿತು. ಸಂಪ್ರದಾಯದ ಕಟ್ಟು‍ಪಾಡು ಮೀರಿದ ಜೋಡಿ ಅಚ್ಚುಕಟ್ಟಾಗಿ, ಕನ್ನಡವನ್ನೇ ಅನುಸರಿಸಿ ಹೊಸಬಾಳಿಗೆ ಕಾಲಿಟ್ಟಿತು. ಖಾಸಗಿ ಕಂಪನಿಯ ಉದ್ಯೋಗಿಗಳಾದ ಬೆಳಗಾವಿ ತಾಲ್ಲೂಕಿನ ಶಿಂಧೋಳಿಯ ದೀಪಕ್‌ ಮುಂಗರವಾಡಿ ಮತ್ತು ಚನ್ನಮ್ಮನ ಕಿತ್ತೂರು ತಾಲ್ಲೂಕಿನ ದೇವಗಾಂವದ ರಾಜೇಶ್ವರಿ ವಾಂಗಿ ಅವರ ಮದುವೆ ಕನ್ನಡ ಸಾಹಿತ್ಯ ಸಮ್ಮೇಳನದ ವಾತಾವರಣ ನೆನಪಿಸಿತು. ಜೋಡಿಯು ಉಂಗುರದಿಂದ ಹಿಡಿದು ಕಲ್ಯಾಣ ಮಂಟಪದವರೆಗೆ ಸಂಪೂರ್ಣವಾಗಿ ಕನ್ನಡ ಅನುಸರಿಸಿತು. ಪ್ರವೇಶದ್ವಾರದ ಬಳಿ ಕಿತ್ತೂರು ರಾಣಿ …

Read More »

ಸಂಚಾರ ನಿಯಮ ಪಾಲಿಸದವರ ವಿರುದ್ಧ ಕ್ರಮ: ಸಿಪಿಐ ರವೀಂದ್ರ

ಅಥಣಿ: ‘ಪೊಲೀಸ್ ಇಲಾಖೆಯಿಂದ ನಿರಂತರವಾಗಿ ಜಾಗೃತಿ ಮೂಡಿಸಿದರೂ, ಹಲವು ಚಾಲಕರು ಮತ್ತು ಸವಾರರು ಸಂಚಾರ ನಿಯಮ ಪಾಲಿಸದ್ದರಿಂದ ಅಪಘಾತ ಹೆಚ್ಚುತ್ತಿವೆ. ಮುಂದಿನ ದಿನಗಳಲ್ಲಿ ಸಂಚಾರ ನಿಯಮ ಪಾಲಿಸದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದು ಸಿಪಿಐ ರವೀಂದ್ರ ನಾಯ್ಕೋಡಿ ಎಚ್ಚರಿಕೆ ನೀಡಿದರು. ಇಲ್ಲಿನ ಪೊಲೀಸ್ ಠಾಣೆ ಆವರಣದಲ್ಲಿ ಭಾನುವಾರ ನಡೆದ ಆಟೋರಿಕ್ಷಾ ಹಾಗೂ ಖಾಸಗಿ ವಾಹನಗಳ ಚಾಲಕರ ಸಭೆಯಲ್ಲಿ ಮಾತನಾಡಿದ ಅವರು, ‘ಕಳೆದೊಂದು ವಾರದಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ನಡೆದ ಅಪಘಾತಗಳಲ್ಲಿ 25ಕ್ಕೂ …

Read More »

ನೋಟರಿಗಳಿಗೆ ಸೌಲಭ್ಯ ಒದಗಿಸಲು ಪ್ರಯತ್ನ: ಕಡಾಡಿ

ಬೆಳಗಾವಿ: ‘ಜನರಿಗೆ ತ್ವರಿತವಾಗಿ ನ್ಯಾಯ ಒದಗಿಸುವಲ್ಲಿ ಪ್ರಮುಖ ಪಾತ್ರ ವಹಿಸುವ ನೋಟರಿಗಳಿಗೆ ಜಿಲ್ಲೆ ಮತ್ತು ತಾಲ್ಲೂಕು ಮಟ್ಟದಲ್ಲಿ ಅಗತ್ಯ ಸೌಕರ್ಯ ಕಲ್ಪಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು’ ಎಂದು ರಾಜ್ಯಸಭಾ ಸದಸ್ಯ ಈರ‌ಣ್ಣ ಕಡಾಡಿ ಭರವಸೆ ನೀಡಿದರು.   ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ರಾಜ್ಯ ನೋಟರಿಗಳ ಸಂಘ ಭಾನುವಾರ ಹಮ್ಮಿಕೊಂಡಿದ್ದ 14ನೇ ರಾಜ್ಯಮಟ್ಟದ ನೋಟರಿಗಳ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು. ‘ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗವು ದೇಶವನ್ನು ಸರಿಯಾದ ದಿಕ್ಕಿನಲ್ಲಿ …

Read More »

ಹಳ್ಳಿಗಳ ಅಭಿವೃದ್ಧಿಗೆ ಕಾಂಗ್ರೆಸ್‌ ಆದ್ಯತೆ: ಸತೀಶ ಜಾರಕಿಹೊಳಿ

ಹುದಲಿ: ‘ಕಾಂಗ್ರೆಸ್‌ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಾಗಲೆಲ್ಲ ಹಳ್ಳಿಗಳ ಅಭಿವೃದ್ಧಿಗೆ ಆದ್ಯತೆ ನೀಡಿದೆ. ನನ್ನ ಕ್ಷೇತ್ರದ ಹಳ್ಳಿಗಳಿಗೆ ನಾನು ಕಳೆದ 15 ವರ್ಷಗಳಲ್ಲಿ ಸಾಕಷ್ಟು ಅನುದಾನ ನೀಡಿದ್ದೇನೆ. ಕುಡಿಯುವ ನೀರು, ರಸ್ತೆ, ಶಾಲೆಗಳಿಗೆ ಪ್ರಾಧಾನ್ಯತೆ ಕೊಟ್ಟಿದ್ದೇನೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.   ಯಮಕನಮರಡಿ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ, ಬೆಳಗಾವಿ ತಾಲ್ಲೂಕಿನ ಹುದಲಿ ಗ್ರಾಮದಲ್ಲಿ ಗ್ರಾಮದೇವಿ ಜಾತ್ರೆ ಅಂಗವಾಗಿ ಚರಂಡಿ, ಸಿಸಿ ರಸ್ತೆ ಹಾಗೂ ರಸ್ತೆ …

Read More »

ಲೋಕಸಭಾ ಚುನಾವಣೆ: ಗೆಲ್ಲುವ ಕುದುರೆಗೆ ನಿಲ್ಲದ ಹುಡುಕಾಟ

ಬೆಳಗಾವಿ: ಬೆಳಗಾವಿ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರಗಳನ್ನು ಈ ಬಾರಿ ಹೇಗಾದರೂ ಮಾಡಿ ಗೆಲ್ಲಲೇಬೇಕು ಎಂದು ಕಾಂಗ್ರೆಸ್ ಸಿದ್ಧತೆ ನಡೆಸಿದೆ. ಆದರೆ, ಬಿಜೆಪಿಯಲ್ಲಿ ಮಾತ್ರ ಇನ್ನೂ ‘ಗುಮ್ಮನ ಗುಸುಕ’ ಎಂಬ ಸ್ಥಿತಿ ಇದೆ. ಯಾರನ್ನು ಕೇಳಿದರೂ ‘ಗೆಲ್ಲುವ ಕುದುರೆ ಹುಡುಕಾಟ’ ಎಂಬ ಉತ್ತರ ಸಿಗುತ್ತದೆ.   ‘ನಾವು ಆಕಾಂಕ್ಷಿಗಳು’ ಎಂದು ಇಬ್ಬರು ಮಾತ್ರ ಮಾಧ್ಯಮದ ಮುಂದೆ ಹೇಳಿಕೆ ಕೊಟ್ಟಿದ್ದಾರೆ. ಕಾರ್ಯಕರ್ತರು, ಸಮುದಾಯದವರು ಸೇರಿ ಯಾರೂ ಸಹ ಇಂಥವರಿಗೇ ಟಿಕೆಟ್‌ ಕೊಡಬೇಕು ಎಂಬ …

Read More »

‘ಪೊಲೀಸ್ ಇಲಾಖೆಯಲ್ಲಿ ಕೆಲಸ‌ ಮಾಡುವವರು ಸಂದರ್ಭಕ್ಕೆ ತಕ್ಕಂತೆ ಧೈರ್ಯದಿಂದ ಕೆಲಸ ಮಾಡಬೇಕು’ : ಕಮಿಷನರ್ ಎಸ್.ಎನ್.ಸಿದ್ರಾಮಪ್ಪ

ಬೆಳಗಾವಿ: ‘ಪೊಲೀಸ್ ಇಲಾಖೆಯಲ್ಲಿ ಕೆಲಸ‌ ಮಾಡುವವರು ಸಂದರ್ಭಕ್ಕೆ ತಕ್ಕಂತೆ ಧೈರ್ಯದಿಂದ ಕೆಲಸ ಮಾಡಬೇಕು’ ಎಂದು ನಗರ ಪೊಲೀಸ್ ಕಮಿಷನರ್ ಎಸ್.ಎನ್.ಸಿದ್ರಾಮಪ್ಪ ಕರೆ ನೀಡಿದರು. ಇಲ್ಲಿನ ಪೊಲೀಸ್ ಕವಾಯತು ಮೈದಾನದಲ್ಲಿ ತಮ್ಮ ಸೇವಾನಿವೃತ್ತಿ ಹಿನ್ನೆಲೆಯಲ್ಲಿ ಪೊಲೀಸರಿಂದ ಬುಧವಾರ ಗೌರವವಂದನೆ ಸ್ವೀಕರಿಸಿ ಅವರು ಮಾತನಾಡಿದರು‌.   ‘ಬೆಳಗಾವಿಯಲ್ಲಿ ನಡೆಯುವ ಗಣೇಶ ಉತ್ಸವದ ವಿಸರ್ಜನೆಯಂಥ ಸಂದರ್ಭ ನಾವು 18ರಿಂದ 20 ತಾಸು ಕೆಲಸ ಮಾಡಬೇಕಾಗುತ್ತದೆ. ಹಾಗಾಗಿ ಆರೋಗ್ಯ ಕಾಪಾಡಿಕೊಳ್ಳಬೇಕು. ನಿಯಮಿತವಾಗಿ ವ್ಯಾಯಾಮ ಮಾಡಬೇಕು. ಪೊಲೀಸ್ ಇಲಾಖೆ …

Read More »

ಊರಿನ ಸುತ್ತಲೂ ಕ್ರಷರ್ ಮಷಿನ್‌ಗಳ ಕರ್ಕಶ ಧ್ವನಿ. ದೂಳಿನ ಹಾವಳಿ.

ಚಿಕ್ಕೋಡಿ: ಊರಿನ ಸುತ್ತಲೂ ಕ್ರಷರ್ ಮಷಿನ್‌ಗಳ ಕರ್ಕಶ ಧ್ವನಿ. ದೂಳಿನ ಹಾವಳಿ. ಗ್ರಾಮದೊಳಗೆ ತಿಪ್ಪೆಗಳ ಸಾಲು. ಗ್ರಾಮ ಪಂಚಾಯಿತಿ ಕಚೇರಿ ಹತ್ತಿರವೇ ಕಸದ ರಾಶಿ. ತ್ಯಾಜ್ಯ ವಿಲೇವಾರಿ ಘಟಕದ ಬಳಿಯಂತೂ ಕಸವೋ ಕಸ. ವೀಳ್ಯದೆಲೆಗೆ ಪ್ರಸಿದ್ಧವಾದ ತಾಲ್ಲೂಕಿನ ಜೈನಾಪೂರ ಗ್ರಾಮದ ಸದ್ಯದ ನೋಟವಿದು. ಅಂದಾಜು 8,000 ಜನಸಂಖ್ಯೆ ಹೊಂದಿರುವ ಗ್ರಾಮದಲ್ಲಿ 3 ವಾರ್ಡ್‌ಗಳಿದ್ದು, 10 ಸದಸ್ಯರಿದ್ದಾರೆ. ಈ ಪಂಚಾಯಿತಿ ವ್ಯಾಪ್ತಿಯ ತೋರಣಹಳ್ಳಿ ಗ್ರಾಮದಲ್ಲಿ 5,000 ಜನಸಂಖ್ಯೆ ಇದ್ದು, 6 ಸದಸ್ಯರಿದ್ದಾರೆ. ಜೈನಾಪೂರದಲ್ಲಿ …

Read More »

ವಾಕಿಂಗ್ ಹೋದವರ ಮೇಲೆ ಕರಡಿ ದಾಳಿ.

ಶಿವಮೊಗ್ಗ: ಚಿರತೆ, ಕಾಡಾನೆ ಕಾಡು ಬಿಟ್ಟು ನಾಡಿನತ್ತ ಹೆಜ್ಜೆ ಹಾಕುತ್ತಿರುವುದು ಹೊಸತೇನು ಅಲ್ಲ ಆದರೆ ಈ ಬಾರಿ ಕರಡಿಯೊಂದು ನಗರ ಪ್ರದೇಶದಲ್ಲಿ ಕಂಡು ಬಂದಿದ್ದು ಬೆಳ್ಳಂಬೆಳಗ್ಗೆ ವಾಕಿಂಗ್ ಹೋಗುವವರ ಮೇಲೆ ದಾಳಿ ನಡೆಸಿದ ಘಟನೆ ಶಿವಮೊಗ್ಗ ನಗರದ ಗೋಪಾಲಗೌಡ ಬಡಾವಣೆಯಲ್ಲಿ ಬುಧವಾರ ಬೆಳಿಗ್ಗೆ ಸಂಭವಿಸಿದೆ.   ಘಟನೆಯಲ್ಲಿ ತುಕಾರಂ ಶೆಟ್ಟಿ ಎಂಬುವವರ ಹೊಟ್ಟೆಯ ಭಾಗಕ್ಕೆ ತರಚಿದ ಗಾಯಗಳಾಗಿವೆ. ಸೋಮವಾರ ಬೆಳಗ್ಗೆ ತುಕಾರಾಂ ಶೆಟ್ಟಿ ಅವರು ವಾಕಿಂಗ್ ಹೋದ ವೇಳೆ ಕರಡಿಯನ್ನು ಬೀದಿ …

Read More »