Breaking News

Monthly Archives: ಫೆಬ್ರವರಿ 2024

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..

! ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲ್ಲೂಕಿನ ಗಡಾ ಗ್ರಾಮದ ಶ್ರೀ ಕರೇಮ್ಮಾ ದೇವಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ …

Read More »

ಗಮನ ಸೆಳೆದ ತರಕಾರಿಯಿಂದ ಬನಶಂಕರಿ ದೇವಿಯ ಪೂಜೆ

ರಬಕವಿ ಬನಹಟ್ಟಿ: ಇಲ್ಲಿನ ಹಳೆಯ ನೀರಿನ ಟ್ಯಾಂಕ್ ಹತ್ತಿರದ ಬನಶಂಕರಿ ದೇವಸ್ಥಾನದ ಜಾತ್ರೆಯ ಅಂಗವಾಗಿ ಶುಕ್ರವಾರ ದೇವಿಗೆ ವಿಶೇಷವಾದ ತರಕಾರಿ ಪೂಜೆಯನ್ನು ಸಲ್ಲಿಸಲಾಯಿತು. ಒಟ್ಟು 60ಕ್ಕೂ ಹೆಚ್ಚು ವಿವಿಧ ರೀತಿಯ ತರಕಾರಿಗಳನ್ನು ತಂದು ದೇವಿಗೆ ಪೂಜೆಯನ್ನು ಸಲ್ಲಿಸಲಾಯಿತು. ಮಧ್ಯ ರಾತ್ರಿ 12ಕ್ಕೆ ಆರಂಭಗೊಂಡ ತರಕಾರಿ ಅಲಂಕಾರ ಬೆಳಗಿನ ಜಾವದವರೆಗೆ ನಡೆಯಿತು. ಜಾತ್ರೆಯ ಅಂಗವಾಗಿ ಶನಿವಾರ ಬೆಳಗ್ಗೆ ದೇವಸ್ಥಾನದಲ್ಲಿ ವಿಶೇಷ ಅಭಿಷೇಕ, ಪೂಜೆ, ಹೋಮ, ಸಕಲವಾಧ್ಯ ಮೇಳದೊಂದಿಗೆ ಶ್ರೀ ಬನಶಕರಿದೇವಿ ಪಲ್ಲಕ್ಕಿ ಉತ್ಸವ, ಮುತ್ತೈದೆಯರಿಗೆ …

Read More »

ಆಗಸ್ಟ್ ನಿಂದ Gmail ಸ್ಥಗಿತ? ಸ್ಪಷ್ಟನೆ ನೀಡಿದ ಗೂಗಲ್

ಹೊಸದಿಲ್ಲಿ: ಪ್ರಸಿದ್ಧ ಸಂವಹನ ಮಾಧ್ಯಮ ಜಿಮೇಲ್ ಸ್ಥಗಿತವಾಗುತ್ತದೆ ಎನ್ನುವ ಅಂತೆ ಕಂತೆಗಳ ಸುದ್ದಿಗಳ ನಡುವೆ ಮಾತೃಸಂಸ್ಥೆ ಗೂಗಲ್ ಇಂದು ಇದರ ಬಗ್ಗೆ ಸ್ಪಷ್ಟನೆ ನೀಡಿದೆ. ಜಿಮೇಲ್ ಯಾವುದೇ ಕಾರಣಕ್ಕೂ ರದ್ದಾಗುತ್ತಿಲ್ಲ ಎಂದು ಖಚಿತ ಪಡಿಸಿದೆ. ಗೂಗಲ್ ಸಂಸ್ಥೆಯು ಶೀಘ್ರದಲ್ಲಿಯೇ ಜಿಮೇಲ್ ನ್ನು ಸ್ಥಗಿತಗೊಳಿಸುತ್ತದೆ ಎಂಬ ಸುದ್ದಿಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಈ ಪೋಸ್ಟ್ ನಲ್ಲಿ ಗೂಗಲ್ ಸಂಸ್ಥೆಯ ಇಮೇಲ್ ಒಂದರ ಸ್ಕ್ರೀನ್ ಶಾಟ್ ಕೂಡಾ ಹರಿದಾಡಿತ್ತು. ಇದರ ಬಳಕೆದಾರರ ಆತಂಕಕ್ಕೆ …

Read More »

ವಿಧಾನಪರಿಷತ್’ನಲ್ಲಿ ‘ರಾಜ್ಯ ಸರ್ಕಾರ’ಕ್ಕೆ ಮುಖಭಂಗ: ‘ಹಿಂದೂ ಧಾರ್ಮಿಕ ವಿಧೇಯಕ’ ತಿರಸ್ಕೃತ

ಬೆಂಗಳೂರು: ರಾಜ್ಯ ಸರ್ಕಾರಕ್ಕೆ ಮತ್ತೆ ವಿಧಾನ ಪರಿಷತ್ತಿನಲ್ಲಿ ಇಂದು ಮುಜುಗರ ಉಂಟಾಗಿದೆ. ಇಂದು ಮಂಡಿಸಲಾಗಿದ್ದಂತ ಹಿಂದೂ ಧಾರ್ಮಿಕ ದತ್ತಿ ಹಾಗೂ ಧರ್ಮದಾಯ ವಿಧೇಯಕವು ತಿರಸ್ಕೃತಗೊಂಡಿದೆ. ಇಂದು ವಿಧಾನ ಪರಿಷತ್ತಿನಲ್ಲಿ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಹಿಂದೂ ಧಾರ್ಮಿಕ ದತ್ತಿ ಹಾಗೂ ಧರ್ಮದಾಯ ವಿಧೇಯಕವನ್ನು ಮಂಡಿಸಿದರು. ಆ ಬಳಿಕ ಉಪ ಸಭಾಪತಿ ಪ್ರಾಣೇಶ್ ಅವರು ಧ್ವನಿ ಮತಕ್ಕೆ ಹಾಕಿದರು. ವಿಧಾನ ಪರಿಷತ್ ನಲ್ಲಿ ಹಿಂದೂ ಧಾರ್ಮಿಕ ವಿಧೇಯಕದ ಪರವಾಗಿ 7 ಮತಗಳು, …

Read More »

ಸಚಿವ ಸಂತೋಷ್‌ ಲಾಡ್ ಹುಟ್ಟುಹಬ್ಬ: ವಿಜಯ ಪ್ರಕಾಶ್‌, ಸಲ್ಮಾನ್ ಅಲಿ ಗಾಯನ

ಹೊಸಪೇಟೆ (ವಿಜಯನಗರ): ಬುದ್ಧ, ಬಸವ ತತ್ವದ ಅನುಯಾಯಿಯೂ ಆಗಿರುವ ಕಾರ್ಮಿಕ ಸಚಿವ ಸಂತೋಷ್‌ ಲಾಡ್ ಅವರ ಹುಟ್ಟುಹಬ್ಬದ ಪ್ರಯುಕ್ತ ಸಂತೋಷ್‌ ಲಾಡ್ ಫೌಂಡೇಶನ್ ವತಿಯಿಂದ ಕಾಯಕಯೋಗಿ ಬಸವಣ್ಣ ಮತ್ತು ಸಂವಿಧಾನ ಶಿಲ್ಪಿ ಅಂಬೇಡ್ಕರ್‌ ಕುರಿತ ಗೀತೆಗಳ ಬಿಡುಗಡೆ ಸಮಾರಂಭ ಫೆ.27ರಂದು ನಗರದಲ್ಲಿ ನಡೆಯಲಿದೆ.   ‘ನಗರದ ಪುನೀತ್‌ ರಾಜ್‌ಕುಮಾರ್ ಮೈದಾನದಲ್ಲಿ ಅಂದು ಸಂಜೆ 4ರ ಬಳಿಕ ‘ಅಭಿಮಾನ ಸಮರ್ಪಣೆ’ ಕಾರ್ಯಕ್ರಮ ನಡೆಯಲಿದೆ. ಚಲನಚಿತ್ರ ಸಾಹಿತಿ ವಿ.ನಾಗೇಂದ್ರ ಪ್ರಸಾದ್‌ ರಚನೆಯ ಈ ಗೀತೆಗಳ …

Read More »

ಖೇಲೊ ಇಂಡಿಯ ವೇಟ್‌ ಲಿಫ್ಟಿಂಗ್: ಮಂಗಳೂರು ವಿವಿ ದ್ವಿತೀಯ ರನ್ನರ್ ಅಪ್

ಮೂಡುಬಿದಿರೆ: ಅರುಣಾಚಲ ಪ್ರದೇಶದಲ್ಲಿ ಶುಕ್ರವಾರ ಮುಕ್ತಾಯಗೊಂಡ ಖೇಲೊ ಇಂಡಿಯಾ ಅಖಿಲ ಭಾರತ ಅಂತರ ವಿವಿ ವೇಟ್‌ ಲಿಫ್ಟಿಂಗ್ ಚಾಂಪಿಯನ್ ಷಿಪ್‌ನಲ್ಲಿ ಮಂಗಳೂರು ವಿವಿಯು ಮಹಿಳಾ ವಿಭಾಗದಲ್ಲಿ ದ್ವಿತೀಯ ರನ್ನರ್ ಅಪ್ ಪ್ರಶಸ್ತಿ ಪಡೆದಿದೆ. 5 ವಿದ್ಯಾರ್ಥಿನಿಯ ತಂಡದಲ್ಲಿ ಆಳ್ವಾಸ್ ಕಾಲೇಜಿನ 4 ಮಂದಿ, ಒಬ್ಬರು ಎಸ್‌ಡಿಎಂ ಕಾಲೇಜು ವಿದ್ಯಾರ್ಥಿನಿ ಇದ್ದರು. ಮಂಗಳೂರು ವಿವಿಯು ಈ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹತೆ ಪಡೆದ ರಾಜ್ಯದ ಏಕೈಕ ವಿಶ್ವವಿದ್ಯಾಲಯ.

Read More »

ನಿಂತ ಬೆಳೆಗಳಿಗೆ, ಕುಡಿಯುವ ನೀರು ಕಾಯ್ದಿರಿಸಲು ಕಾಲುವೆಗೆ ನೀರು : ಸಚಿವ ಶಿವರಾಜ್ ತಂಗಡಗಿ

ಬಳ್ಳಾರಿ : ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷರು ಆಗಿರುವ ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ತುಂಗಭದ್ರಾ ಯೋಜನೆಯ 121ನೇ ತುರ್ತು ನೀರಾವರಿ ಸಲಹಾ ಸಮಿತಿ ಸಭೆ ನಡೆಯಿತು. ಬೆಂಗಳೂರಿನ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶುಕ್ರವಾರ (ಫೆ.23ರಂದು) ನಡೆದ ಸಭೆಯಲ್ಲಿ, ತುಂಗಭದ್ರಾ ಯೋಜನೆಯ ವಿಜಯನಗರ ಕಾಲುವೆಗಳಿಗೆ ನಿಂತ ಬೆಳೆಗಳನ್ನು ಸಂರಕ್ಷಿಸಲು ಹಾಗೂ ಬೇಸಿಗೆ ಕಾಲದಲ್ಲಿ ಕುಡಿಯುವ ನೀರನ್ನು ಕಾಯ್ದಿರಿಸುವ ಕುರಿತಂತೆ …

Read More »

ಪಶು ಆಸ್ಪತ್ರೆಗಳ ಮರು ಸ್ಥಳಾಂತರಕ್ಕೆ ಕೋರ್ಟ್ ಆದೇಶ

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯಲ್ಲಿರುವ 28 ಪಶುವೈದ್ಯಕೀಯ ಕೇಂದ್ರಗಳ ಸ್ಥಳಾಂತರ ವಿಚಾರದಲ್ಲಿ ಮಧ್ಯ ಪ್ರವೇಶಿಸಿರುವ ಹೈಕೋರ್ಟ್, ಮೊದಲಿದ್ದ ಜಾಗದಲ್ಲೇ ಪಶುವೈದ್ಯಕೀಯ ಕೇಂದ್ರಗಳು ಕಾರ್ಯನಿರ್ವಹಿಸಬೇಕು ಹಾಗೂ ಕೇಂದ್ರಗಳಿಗೆ ವೈದ್ಯರು, ಸಿಬ್ಬಂದಿಯನ್ನು ಮರುನಿಯೋಜನೆ ಮಾಡಬೇಕು ಎಂದು ನಿರ್ದೇಶಿಸಿದೆ.   ಪಶುವೈದ್ಯ ಕೇಂದ್ರಗಳನ್ನು ಬೇರೆಡೆ ಸ್ಥಳಾಂತರಿಸಲು ಮುಂದಾಗಿದ್ದ ಸರ್ಕಾರ ಮತ್ತು ಬಿಬಿಎಂಪಿ ಕ್ರಮವನ್ನು ಪ್ರಶ್ನಿಸಿ ಅನಿಮಲ್ ರೈಟ್ಸ್ ಫಂಡ್ ಹಾಗೂ ಯಲಹಂಕ ಕ್ಷೇತ್ರದ ಶಾಸಕ ಎಸ್.ಆರ್. ವಿಶ್ವನಾಥ್ ಸೇರಿ ಹಲವರು ಪ್ರತ್ಯೇಕವಾಗಿ ಸಲ್ಲಿಸಿದ ಪಿಐಎಲ್‌ಗಳ ವಿಚಾರಣೆ …

Read More »

ಮಂಡ್ಯ ಬಿಡುವ ಮಾತೇ ಇಲ್ಲ;ಸುಮಲತಾ

ಮಂಡ್ಯ: ಇಂಡಿಯಾ ಲೋಕಸಭಾ ಚುನಾವಣೆಗೆ ಮುನ್ನ ಮಂಡ್ಯ ಭಾರಿ ಸದ್ದು ಮಾಡುತ್ತಿದೆ. ಹಾಲಿ ಸಂಸದೆ ಸುಮಲತಾ ಅವರ ಕಾರಣಕ್ಕಾಗಿ ಮಂಡ್ಯ ಲೋಕಸಭಾ ಕ್ಷೇತ್ರ ಸದ್ಯ ಗಮನ ಸೆಳೆಯುತ್ತಿದ್ದು, ಯಾರೆಲ್ಲಾ ಸ್ಪರ್ಧೆ ಮಾಡುತ್ತಾರೆ ಎನ್ನುವ ಕುತೂಹಲ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.ಜೆಡಿಎಸ್‌ ಎನ್‌ಡಿಎ ಒಕ್ಕೂಟ ಸೇರಿಕೊಂಡಿದ್ದು ಸೀಟು ಹಂಚಿಕೆ ಬಗ್ಗೆ ಚರ್ಚೆ ನಡೆಯುತ್ತಿದೆ. ಮಂಡ್ಯದಲ್ಲಿ ಜೆಡಿಎಸ್ ಬಲಿಷ್ಠವಾಗಿದ್ದು, ಮಂಡ್ಯ ಸೀಟಿಗಾಗಿ ಬೇಡಿಕೆ ಇಟ್ಟಿದೆ ಎನ್ನುವ ವದಂತಿಗಳ ನಡುವೆ, ಬಿಜೆಪಿಗೆ ಬೆಂಬಲ ನೀಡಿರುವ ಸುಮಲತಾ …

Read More »

ಬಿಜೆಪಿ-ಜೆಡಿಎಸ್ ಮೈತ್ರಿ ವಿಫಲವಾಗುತ್ತದೆ: ವಿಶ್ವನಾಥ್

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ನಡೆಯಲ್ಲ ಎಂದು ಹಳ್ಳಿ ಹಕ್ಕಿ ಖ್ಯಾತಿಯ ಎಂಎಲ್ಸಿ ಹೆಚ್. ವಿಶ್ವನಾಥ್ ಅವರು ಭವಿಷ್ಯ ‌ನುಡಿದಿದ್ದಾರೆ. ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡ ಕಾರಣ ಕಾಂಗ್ರೆಸ್ 2019ರ ಲೋಕಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋತಿತ್ತು. ಅದೇ ಕಾರಣಕ್ಕೆ ನಾವೆಲ್ಲ ಬಿಜೆಪಿಗೆ ಹೋಗಬೇಕಾಯಿತು ಎಂದು ನೆನಪು ಮಾಡಿಕೊಂಡರು. ಕಾಂಗ್ರೆಸ್-ಜೆಡಿಎಸ್ ಮೈತ್ರಿ ತಲಾ ಒಂದು ಲೋಕಸಭಾ ಕ್ಷೇತ್ರದಲ್ಲಿ ಮಾತ್ರ ಗೆಲುವು ಕಂಡಿದ್ದವು. 2024 ಲೋಕಸಭಾ ಚುನಾವಣೆಗಾಗಿ ಬಿಜೆಪಿ-ಜೆಡಿಎಸ್ ನಡುವೆ ಮೈತ್ರಿ ಏರ್ಪಟ್ಟಿರುವುದು …

Read More »