Breaking News

Monthly Archives: ಫೆಬ್ರವರಿ 2024

ಟಿಎಪಿಸಿಎಂಎಸ್ ಶ್ರೇಯೋಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ- ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ

ಅವಿರೋಧವಾಗಿ ಆಯ್ಕೆಯ ರೂವಾರಿ ಬಾಲಚಂದ್ರ ಜಾರಕಿಹೊಳಿ ಅವರನ್ನು ಸತ್ಕರಿಸಿದ ಸಂಘದ ಆಡಳಿತ ಮಂಡಳಿಯ ನೂತನ ಸದಸ್ಯರು ಗೋಕಾಕ- ಗೋಕಾಕ ತಾಲ್ಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘದ ಅಭಿವೃದ್ಧಿಗೆ ಎಲ್ಲ ರೀತಿಯ ಸಹಾಯ- ಸಹಕಾರ ನೀಡುವುದಾಗಿ ಕೆಎಂಎಫ್ ನಿರ್ದೇಶಕರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಶುಕ್ರವಾರದಂದು ತಾಲ್ಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘದ ಮಂಡಳಿಯ ಸದಸ್ಯರು ನೀಡಿರುವ ಸತ್ಕಾರವನ್ನು ಸ್ವೀಕರಿಸಿ ಮಾತನಾಡಿದ ಅವರು, ರೈತರ …

Read More »

ನಟ ದರ್ಶನ್‌ಗೆ ಸಾಲು ಸಾಲು ಸಂಕಷ್ಟ, ಅಭಿಮಾನಿಗಳಿಗೆ ಟೆನ್ಷನ್!

ಚಾಲೆಂಜಿಂಗ್ ಸ್ಟಾರ್ ದರ್ಶನ್ ಏನೇ ಮಾಡಿದ್ರೂ ಈಗ ವಿವಾದದ ಸುಳಿಯಲ್ಲಿ ಸಿಲುಕುತ್ತಾ ಇದ್ದಾರೆ. ಅದ್ರಲ್ಲೂ ನಿರ್ಮಾಪಕ ಉಮಾಪತಿ ಬಗ್ಗೆ ಬಾಯಿಗೆ ಬಂದಂತೆ ದರ್ಶನ್ ಅವರು ಮಾತನಾಡಿದ್ದಾರೆ ಅಂತಾ ಆರೋಪ ಕೇಳಿಬರುತ್ತಿದೆ. ಇದೇ ಸಮಯದಲ್ಲಿ ನಟ ದರ್ಶನ್‌ರ ವಿರುದ್ಧ ಪೊಲೀಸ್ ಠಾಣೆಗೆ ಸಾಲು ಸಾಲು ಕಂಪ್ಲೇಂಟ್ ರಿಜಿಸ್ಟರ್ ಆಗುತ್ತಿದ್ದು, ಈಗ ಹೊಸ ತಲೆನೋವು ಶುರುವಾಗಿದೆ.ಎಲ್ಲವೂ ಚೆನ್ನಾಗಿಯೇ ಇತ್ತು, ನಟ ದರ್ಶನ್ ಅವರು ತಮ್ಮ ‘ಕಾಟೇರ’ ಸಿನಿಮಾ ಮೂಲಕ ಇಂಡಸ್ಟ್ರಿ ಹಿಟ್ ನೀಡಿ …

Read More »

ಪ್ರತಿ ಜಿಲ್ಲೆಯ ಒಂದು ವಸತಿ ಶಾಲೆಗೆ ಸಿಬಿಎಸ್ ಸಿ ಪಠ್ಯಕ್ರಮ: ಮಹದೇವಪ್ಪ

ಬೆಂಗಳೂರು: ರಾಜ್ಯದ ವಸತಿ ಶಾಲೆಗಳಲ್ಲಿ (Residential School) ಸಿಬಿಎಸ್ ಸಿ (cbsc) ಪಠ್ಯಕ್ರಮ ಅಳವಡಿಸಲಾಗುವುದು. ಈ ನಿಟ್ಟಿನಲ್ಲಿ ಈಗಾಗಲೇ ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ (Social welfare department) ಸಚಿವ ಹೆಚ್‌.ಸಿ.ಮಹದೇವಪ್ಪ (H.C.Mahadevappa) ಹೇಳಿದರು.   ವಿಧಾನ ಪರಿಷತ್ (Legislative Council) ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ ನ (congres) ಅನಿಲ್ ಕುಮಾರ್ ಪ್ರಶ್ನೆಗೆ ಉತ್ತರಿಸಿದ ಅವರು, ವಸತಿ ಶಾಲೆಗಳಲ್ಲಿ ಸದ್ಯ ರಾಜ್ಯ ಪಠ್ಯಕ್ರಮ ಇದೆ. ಪ್ರತಿ …

Read More »

ದಲಿತ ಯೋಜನೆಗಳ‌ ಮಾಲೀಕ ನೀನಲ್ಲ: ಸಿಎಂ ವಿರುದ್ಧ ಬಿಜೆಪಿ ಪ್ರತಿಭಟನೆ

ಹಾವೇರಿ: ಏನಿಲ್ಲಾ ಏನಿಲ್ಲಾ ಸಿದ್ದರಾಮಯ್ಯ, ದಲಿತ ಯೋಜನೆಗಳ‌ ಮಾಲೀಕ ನೀನಲ್ಲ ಎಂಬ ಫಲಕವನ್ನು ಹಿಡಿದು ಬಿಜೆಪಿ ಕಾರ್ಯಕರ್ತರು (BJP Protest) ವಿಶಿಷ್ಟವಾಗಿ ಪ್ರತಿಭಟನೆ ನಡೆಸಿದರು. ಹಾವೇರಿ ಬಿಜೆಪಿ ಕಚೇರಿಯಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿ, ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಮಾನವ ಸರಪಳಿ ಮಾಡಿ ರಾಜ್ಯ ಸರ್ಕಾರದ (Government Of Karnataka) ವಿರುದ್ಧ ಧಿಕ್ಕಾರ ಕೂಗಿದರು. ಬಿಜೆಪಿ ಜಿಲ್ಲಾಧ್ಯಕ್ಷ ಅರುಣ್‌ಕುಮಾರ್ ಪೂಜಾರ್ ನೇತೃತ್ವದಲ್ಲಿ ಮಾಜಿ ಶಾಸಕರು ಹಾಗೂ ಮುಖಂಡರು ಪ್ರತಿಭಟನೆ ನಡೆಸಿದರು. ಈ …

Read More »

ಸಿಎಂ‌ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಮತ್ತು‌ ರಾಹುಲ್ ಗಾಂಧಿಗೆ ಕೋರ್ಟ್ ಸಮನ್ಸ್

ಬೆಂಗಳೂರು: ಬಿಜೆಪಿ ವಿರುದ್ಧ ಅವಹೇಳನಕಾರಿ ಜಾಹೀರಾತು ನೀಡಿದ ಆರೋಪದ ಮೇಲೆ ಕಾಂಗ್ರೆಸ್ ನಾಯಕರಿಗೆ ಕೋರ್ಟ್ ಸಮನ್ಸ್ ನೀಡಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ರಾಹುಲ್‌ ಗಾಂಧಿಗೆ ಸಮನ್ಸ್ ಜಾರಿಗೊಳಿಸಿದೆ. ಅಲ್ಲದೆ, ಮಾರ್ಚ್ 28ಕ್ಕೆ ಸಿದ್ದರಾಮಯ್ಯ, ಡಿಕೆಶಿ ಹಾಗೂ ರಾಹುಲ್ ಗಾಂಧಿ ಕೋರ್ಟ್ ಗೆ ಖುದ್ದು ಹಾಜರಾಗುವಂತೆ ಸಮನ್ಸ್ ನಲ್ಲಿ ಸೂಚಿಸಲಾಗಿದೆ.   ವಿಧಾನಸಭೆಯ ಚುನಾವಣಾ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದಿಂದ ಡಬ್ಬಲ್ ಎಂಜಿನ್ ಸರ್ಕಾರ ಹಾಗೂ 40% ಸರ್ಕಾರ ಎಂದು …

Read More »

ಜನಾರ್ದನ ರೆಡ್ಡಿ ಬೆಂಬಲ ನಮಗೆ ಇದೆ: ಡಿಕೆಶಿ

ಬೆಂಗಳೂರು: ಶಾಸಕ ಗಾಲಿ ಜನಾರ್ದನ ರೆಡ್ಡಿ (Gali Janardhan Reddy) ಸೇರಿದಂತೆ ನಮ್ಮ 138 ಶಾಸಕರು ಒಂದಾಗಿದ್ದಾರೆ, ನಮ್ಮ ಮನೆಯನ್ನು ಭದ್ರವಾಗಿಟ್ಟುಕೊಳ್ಳುವುದು ಹೇಗೆ ಅಂತ ಗೊತ್ತು ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಹೇಳಿದರು. ಸುದ್ದಿಗಾರರೊಂದಿಗೆ ಮಾತಾಡಿದ ಅವರು, ರಾಜ್ಯಸಭಾ ಚುನಾವಣೆಗೆ ನಮ್ಮ ಪಕ್ಷ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ವಿರೋಧ ಪಕ್ಷದವರು ಏನೆಲ್ಲ ಕಸರತ್ತು ನಡೆಸಿದ್ದಾರೆನ್ನುವುದರ ಮೇಲೂ ನಿಗಾ ಇಡಲಾಗಿದೆ. ಜನರ್ದನ ರೆಡ್ಡಿ ಬೆಂಬಲ ನಮಗಿದೆ ಎಂದು …

Read More »

ಸಿಎಂಗೆ ಅಮ್ಮಾ.. ತಾಯಿ ಅಂತಾ ಬೇಡುವ ಸ್ಥಿತಿ ಉದ್ಭವವಾಗಿದೆ: ಹೆಚ್‌ಡಿಕೆ ವ್ಯಂಗ್ಯ

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ (Chief Minister) ಅಮ್ಮಾ.. ತಾಯಿ.. ಅಂತಾ ದಯನೀಯ ಸ್ಥಿತಿಯಲ್ಲಿ ಬೇಡುವ ಸನ್ನಿವೇಶ ಉದ್ಭವವಾಗಿದೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ವ್ಯಂಗ್ಯವಾಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಗೌರವ ಎಲ್ಲಿಗೆ ತೆಗೆದುಕೊಂಡು ಹೋಗ್ತಿದ್ದಾರೆ? ಈ ರಾಜ್ಯದ ಸರ್ಕಾರವನ್ನು ಭಿಕ್ಷುಕರ ಸರ್ಕಾರವನ್ನಾಗಿ ಮಾಡಲು ಹೊರಟಿದ್ದಿರಾ? ಕೆಲವರು ಮನೆಗಳ ಮುಂದೆ ಹೋದಾಗ ರಾತ್ರಿ ಊಟ ಉಳಿದಿದ್ರೆ ಕೊಡಿ ಅಂತಾ ಭಿಕ್ಷೆ ಕೇಳ್ತಾರೆ, ಅದೇ ರೀತಿ ಸಿಎಂ …

Read More »

ಸಾಧನಾ ಪಟ್ಟಿ ಹೇಳುತ್ತಾ ವಿದಾಯದ ಭಾಷಣ ಮಾಡಿದ ಸುಮಲತಾ ಅಂಬರೀಶ್‌!

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌- ಬಿಜೆಪಿ ಮೈತ್ರಿ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಸಂಸದೆ ಸುಮಲತಾ ಅಂಬರೀಶ್‌ (‌Sumalatha Ambareesh) ಅವರು, ಕಾಂಗ್ರೆಸ್‌ನತ್ತ ವಲಸೆ ಹೋಗುತ್ತಾರಾ? ಅಥವಾ ಪಕ್ಷೇತರವಾಗಿ ಸ್ಪರ್ಧೆ ಮಾಡುತ್ತಾರಾ ಎಂಬ ಪ್ರಶ್ನೆ ಮೂಡಿತ್ತು. ಈ ನಡುವೆ ಲೋಕಸಭೆಗೆ ನನ್ನ ಸ್ಪರ್ಧೆ ಖಚಿತ ಎಂದು ಹೇಳಿದ್ದ ಸುಮಲತಾ ಅವರು, ಇದೀಗ ದಿಶಾ ಸಭೆಯಲ್ಲಿ ಸಾಧನಾ ಪಟ್ಟಿ ಬಿಡುಗಡೆ ಮಾಡುವ ಮೂಲಕ ವಿದಾಯದ ಭಾಷಣ ಮಾಡಿರುವುದು ಕಂಡುಬಂದಿದೆ. ಮಂಡ್ಯ ಜಿಲ್ಲಾ ಪಂಚಾಯಿತಿ ಕಚೇರಿಯ ಕಾವೇರಿ …

Read More »

ಗ್ರಾಮಸ್ಥರಿಂದ ಕುಡಿಯುವ ನೀರಿಗಾಗಿ ಖಾಲಿ ಕೊಡಗಳ ಪ್ರದರ್ಶನ

ವಾಡಿ: ಚಿತ್ತಾಪುರ ಮೀಸಲು ಮತಕ್ಷೇತ್ರದ ಕೆಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಹಾಹಾಕಾರ ಬಗೆಲೆದ್ದಿದ್ದು ಗ್ರಾಮಸ್ಥರು ಖಾಲಿ ಕೊಡೆಗಳ ಪ್ರದರ್ಶನ ನಡೆಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಎಸ್ ಯುಸಿಐ) ಪಕ್ಷದ ನೇತೃತ್ವದಲ್ಲಿ ಶುಕ್ರವಾರ ಹಳಕರ್ಟಿ ಗ್ರಾಮದ ನೂರಾರು ಜನ ಮಹಿಳೆಯರು ಗ್ರಾಮ ಪಂಚಾಯಿತಿ ಕಚೇರಿಗೆ ಆಗಮಿಸಿ ಕುಡಿಯುವ ನೀರು, ಶೌಚಾಲಯ, ಚರಂಡಿ ಸ್ವಚ್ಛತೆ ಸೇರಿದಂತೆ ವಿವಿಧ ಬೇಡಿಕೆಗಳಿಗಾಗಿ ಒತ್ತಾಯಿಸಿದರು. ಗ್ರಾಪಂ ಪಿಡಿಒ ಹಾಗೂ ಜನಪ್ರತಿನಿಧಿಗಳ ವಿರುದ್ಧ …

Read More »

ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಹಿಂದೂಗಳ ಮೇಲೆ ಹಲ್ಲೆ ಹೆಚ್ಚುತ್ತಿದೆ: ಜೋಶಿ

ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷ ಯಾವ ರಾಜ್ಯದಲ್ಲಿ ಅಧಿಕಾರದಲ್ಲಿ ಇರುತ್ತದೆಯೋ ಅಲ್ಲೆಲ್ಲಾ ಹಿಂದೂಗಳ ಮೇಲೆ, ಯಾತ್ರಾರ್ಥಿಗಳ ಮೇಲೆ ಹಲ್ಲೆ, ಬೆದರಿಕೆ ಪ್ರಕರಣಗಳು ನಡೆಯುತ್ತವೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹರಿಹಾಯ್ದರು. ಹೊಸಪೇಟೆಯಲ್ಲಿ ಅಯೋಧ್ಯೆಯ ಯಾತ್ರಿಗಳಿಗೆ ಬೆದರಿಕೆ ಹಾಕಿದ ಕುರಿತು ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಹೀಗಾಗುತ್ತದೆ ಎಂದರು. ಕಾಂಗ್ರೆಸ್ ಮತ್ತು ಮಮತಾ ಬ್ಯಾನರ್ಜಿ ಅಂತಹವರು ತುಷ್ಟೀಕರಣಕ್ಕಾಗಿ, ಮತ ಬ್ಯಾಂಕ್‌ ಗಾಗಿ ಉತ್ತೇಜನ ಕೊಡುತ್ತಾರೆ. ಬೆದರಿಕೆ ಹಾಕಿದವರನ್ನು …

Read More »