Breaking News

Monthly Archives: ಫೆಬ್ರವರಿ 2024

ವಿಪಕ್ಷ ನಾಯಕನ ಸ್ಥಾನಕ್ಕೆ ಆರ್.ಅಶೋಕ್ ಅಯೋಗ್ಯ; ತಮ್ಮ ಬಣ್ಣ ತಾವೇ ಬಯಲು ಮಾಡಿಕೊಂಡಿದ್ದಾರೆ; ಪ್ರಮೋದ್ ಮುತಾಲಿಕ್ ವಾಗ್ದಾಳಿ

ಉಡುಪಿ: ಮಂಗಳೂರು ಪಬ್ ದಾಳಿಕೋರರ ಮೇಲೆ ಗೂಂಡಾ ಕಾಯ್ದೆ ಹಾಕಿದ್ದ ಬಗ್ಗೆ ಹೇಳಿಕೆ ನೀಡಿದ್ದ ವಿಪಕ್ಷ ನಾಯಕ ಆರ್.ಅಶೋಕ್ ವಿರುದ್ಧ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ವಾಗ್ದಾಳಿ ನಡೆಸಿದ್ದಾರೆ. ಪಬ್ ನಲ್ಲಿ ದಾಳಿ ನಡೆಸಿದ್ದ ಬಜರಂಗದಳ ಕಾರ್ಯಕರ್ತರ ಮೇಲೆ ಗೂಂಡಾ ಕಾಯ್ದೆ ಹಾಕಿ ಕ್ರಮ ಕೈಗೊಂಡಿದ್ದೆ ಎಂದು ಆರ್.ಅಶೋಕ್ ವಿಧಾನಸಭೆಯಲ್ಲಿ ಹೇಳಿದ್ದರು. ಇದೇ ವಿಚಾರವಾಗಿ ಉಡುಪಿಯಲ್ಲಿ ಮಾತನಾಡಿದ ಪ್ರಮೋದ್ ಮುತಾಲಿಕ್, ಆರ್.ಅಶೋಕ್ ವಿಪಕ್ಷ ನಾಯಕ ಸ್ಥಾನಕ್ಕೆ ಅಯೋಗ್ಯ ಎಂದು ಆಕ್ರೋಶ …

Read More »

ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

ಬೆಂಗಳೂರು : 2023-24ನೇ ಸಾಲಿನಲ್ಲಿ ಮುಖ್ಯಮಂತ್ರಿ ರೈತ ವಿದ್ಯಾನಿಧಿ ಹಾಗೂ ಭೂರಹಿತ ಕೃಷಿ ಕಾರ್ಮಿಕರ ವಿದ್ಯಾನಿಧಿ ಯೋಜನೆಯಡಿ ವಿದ್ಯಾರ್ಥಿ ವೇತನ ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಅರ್ಜಿ ಆಹ್ವಾನಿಸಿದ್ದು, ಆಸಕ್ತರು ಫೆ. 29 ರೊಳಗಾಗಿ SSP ತಂತ್ರಾಂಶದಲ್ಲಿ ಲಾಗಿನ್ ಆಗಿ ಸಲ್ಲಿಸುವುದು ಎಂದು ಪ್ರಕಟಣೆ ತಿಳಿಸಿದೆ. 2023-24ನೇ ಸಾಲಿನಲ್ಲಿ ಇತರೆ ಇಲಾಖೆಗಳ ಯೋಜನೆಯಡಿ ವಿದ್ಯಾರ್ಥಿ ವೇತನ ಪಡೆಯುತ್ತಿರುವ ವಿದ್ಯಾರ್ಥಿಗಳು ಈ ಕಾರ್ಯಕ್ರಮದಡಿ ವಿದ್ಯಾರ್ಥಿ ವೇತನ ಪಡೆಯಲು ಅವಕಾಶವಿರುವುದಿಲ್ಲ. ಸಾಮಾನ್ಯ ವರ್ಗದ …

Read More »

‘ಅಯ್ಯೋ ತಗಡೇ’ ಎಂದ ‘ನಟ ದರ್ಶನ್’ ವಿರುದ್ಧ ‘ಮತ್ತೆರಡು ದೂರು’ ದಾಖಲು

ಬೆಂಗಳೂರು: ಅಯ್ಯೋ ತಗಡೇ ಎಂಬುದಾಗಿ ಹೇಳಿಕೆ ನೀಡಿ, ಗುಮ್ಮಿಸಿಕೊಳ್ಳೋದಕ್ಕೆ ಎಂಬುದಾಗಿ ಮಹಿಳೆಯರಿಗೆ ಅವಮಾನ ಮಾಡಿದಂತ ನಟ ದರ್ಶನ್ ವಿರುದ್ಧ ಈಗ ಮತ್ತೆರಡು ದೂರು ದಾಖಲಿಸಲಾಗಿದೆ. ಬೆಂಗಳೂರು ರಾಜರಾಜೇಶ್ವರಿ ಠಾಣೆಗೆ ತೆರಳಿದಂತ ಗಣೇಶ್ ಗೌಡ ಹಾಗೂ ಜಗದೀಶ್ ಎಂಬುವವರು ನಟ ದರ್ಶನ್ ಅವರು ನೀಡಿದಂತ ಅಯ್ಯೋ ತಗಡೇ ಗುಮ್ಮಿಸಿಕೊಳ್ಳೋದಕ್ಕೆ ಎಂಬ ಅವಹೇಳನಕಾರಿ ಹೇಳಿಕೆಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದಾರೆ. ಈ ಮೂಲಕ ನಟ ದರ್ಶನ್ ವಿರುದ್ಧ ಮತ್ತೆರಡು ದೂರು …

Read More »

ಹೊತ್ತಿ ಉರಿದ ಪ್ಲಾಸ್ಟಿಕ್ ಗೋದಾಮು: ವಾಹನಗಳು ಬೆಂಕಿಗಾಹುತಿ

ಬೆಂಗಳೂರು, ಫೆ.23- ಪ್ಲಾಸ್ಟಿಕ್ ಗೋದಾಮಿನಲ್ಲಿ ಇಂದು ಮುಂಜಾನೆ ಹೊತ್ತಿಕೊಂಡ ಬೆಂಕಿ ಪಕ್ಕದಲ್ಲೇ ಇದ್ದ ಪಾರ್ಕಿಂಗ್ ಸ್ಥಳಕ್ಕೆ ವ್ಯಾಪಿಸಿದ್ದರಿಂದ ಅಲ್ಲಿ ನಿಲ್ಲಿಸಲಾಗಿದ್ದ ಸುಮಾರು 30ರಿಂದ 35 ವಾಹನಗಳು ಸುಟ್ಟು ಕರಕಲಾಗಿರುವ ಘಟನೆ ಚಂದ್ರಾಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.   ಗಂಗೊಂಡನಹಳ್ಳಿಯ ಗೋದಾಮುವೊಂದರಲ್ಲಿ ಹಳೇ ಪ್ಲಾಸ್ಟಿಕ್ ಸಾಮಗ್ರಿಗಳನ್ನು ಸಂಗ್ರಹಿಸಿಡಲಾಗಿತ್ತು. ಗೋದಾಮಿಗೆ ಹೊಂದಿಕೊಂಡಂತೆ ಇದರ ಪಕ್ಕದಲ್ಲಿಯೇ ವಾಹನಗಳನ್ನು ರಾತ್ರಿ ವೇಳೆ ಪೇ- ಪಾರ್ಕಿಂಗ್ ಮಾಡಲಾಗುತ್ತಿತ್ತು. ಚಾಲಕರು ತಮ್ಮ ಮನೆಯ ಬಳಿ ವಾಹನಗಳನ್ನು ನಿಲ್ಲಿಸಲು …

Read More »

ಹುಬ್ಬಳ್ಳಿ: ನಾಲ್ಕು ವರ್ಷಗಳಿಂದ ‘ಶುಚಿ’ ಸ್ಥಗಿತ

ಹುಬ್ಬಳ್ಳಿ: ರಾಜ್ಯದ ಎಲ್ಲಾ ಸರ್ಕಾರಿ ಅನುದಾನಿತ ಶಾಲೆಗಳಲ್ಲಿ ಬಾಲಕಿಯರಿಗೆ ಸ್ಯಾನಿಟರಿ ನ್ಯಾಪ್‌ಕಿನ್‌ ನೀಡುವ ‘ಶುಚಿ ಯೋಜನೆ’ ನಾಲ್ಕು ವರ್ಷಗಳಿಂದ ಸ್ಥಗಿತಗೊಂಡಿದೆ. ಹಣ ನೀಡಿ ಸ್ಯಾನಿಟರಿ ನ್ಯಾಪಕಿನ್ ಖರೀದಿಸಲು ಆಗದ ಬಾಲಕಿಯರು ಮುಟ್ಟಿನ ದಿನಗಳಲ್ಲಿ ಶುಚಿತ್ವಕ್ಕೆ ಬಟ್ಟೆ ಬಳಸುತ್ತಾರೆ. ಇದರಿಂದ ಚರ್ಮರೋಗ, ಮೂತ್ರರೋಗ ಉಂಟಾಗಬಹುದು ಎಂಬ ಆತಂಕ ಅವರಲ್ಲಿ ಕಾಡುತ್ತಿದೆ. ಮುಟ್ಟಿನ ನೈರ್ಮಲ್ಯದ ಕುರಿತು ಜಾಗೃತಿ ಮೂಡಿಸಲು ಮತ್ತು ಸ್ಯಾನಿಟರಿ ನ್ಯಾಪಕಿನ್ ಬಳಕೆ ಪ್ರೋತ್ಸಾಹಿಸಲು 2013- 14ನೇ ಸಾಲಿನಲ್ಲಿ ಆರಂಭವಾದ ಶುಚಿ ಯೋಜನೆ …

Read More »

ರಾಜ್ಯ ಕಾನೂನು ವಿವಿ: 2 ವರ್ಷಗಳಿಂದ ನಡೆದಿಲ್ಲ ಘಟಿಕೋತ್ಸವ

ಹುಬ್ಬಳ್ಳಿ: ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಶೈಕ್ಷಣಿಕ ಮಂಡಳಿ (ಅಕಾಡೆಮಿಕ್‌ ಕೌನ್ಸಿಲ್‌) ರಚನೆ ವಿಳಂಬ ಆಗಿರುವ ಕಾರಣ ಎರಡು ವರ್ಷಗಳಿಂದ ವಿಶ್ವವಿದ್ಯಾಲಯದ ಘಟಿಕೋತ್ಸವ ನಡೆದಿಲ್ಲ. ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ರಾಜ್ಯದ 108 ಕಾನೂನು ಕಾಲೇಜುಗಳಿವೆ. 2021-22 ಮತ್ತು 2022-23ನೇ ಸಾಲಿನ ಘಟಿಕೋತ್ಸವ ಈವರೆಗೆ ನಡೆದಿಲ್ಲ. ಕಾನೂನು ಪದವಿ ಹಾಗೂ ಸ್ನಾತಕೋತ್ತರ ಪದವಿಯ 4 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರಮಾಣ ಪತ್ರದ ನಿರೀಕ್ಷೆಯಲ್ಲಿದ್ದಾರೆ. ರಚನೆಯಾಗದ ಮಂಡಳಿ: ‘ಒಂದು ವರ್ಷಕ್ಕಿಂತ ಹೆಚ್ಚು ಸಮಯದಿಂದ ವಿಶ್ವವಿದ್ಯಾಲಯದಲ್ಲಿ ಶೈಕ್ಷಣಿಕ …

Read More »

ಚನ್ನಮ್ಮನ ಕಿತ್ತೂರು: ‘ನಾನೂ ರಾಣಿ ಚನ್ನಮ್ಮ’ ರಾಷ್ಟ್ರೀಯ ಸಮಾವೇಶ

ಚನ್ನಮ್ಮನ ಕಿತ್ತೂರು (ಬೆಳಗಾವಿ ಜಿಲ್ಲೆ): ಕಿತ್ತೂರು ರಾಣಿ ಚನ್ನಮ್ಮ ಬ್ರಿಟಿಷರ ವಿರುದ್ಧ ವಿಜಯ ಸಾಧಿಸಿ 200 ವರ್ಷಗಳು ತುಂಬಿವೆ. ಇದರ ಪ್ರಯುಕ್ತ ಬುಧವಾರ (ಫೆಬ್ರುವರಿ 21) ಇಲ್ಲಿಯ ಕೋಟೆ ಆವರಣದಲ್ಲಿ ‘ನಾನೂ ರಾಣಿ ಚನ್ನಮ್ಮ’ ಎಂಬ ಅಭಿಯಾನದಡಿ ಒಂದು ದಿನದ ರಾಷ್ಟ್ರೀಯ ಮಹಿಳಾ ಸಮಾವೇಶ ನಡೆಯಲಿದೆ.   ‘ಸಮಾವೇಶಕ್ಕಾಗಿ ಕೋಟೆ ಆವರಣದೊಳಗೆ ಬೃಹತ್ ವೇದಿಕೆ ಸಿದ್ಧಗೊಂಡಿದೆ. ದೇಶದ ವಿವಿಧ ರಾಜ್ಯಗಳಿಂದ 2,000ಕ್ಕೂ ಹೆಚ್ಚು ಮಹಿಳೆಯರು ಸಮಾವೇಶದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ’ ಎಂದು ಸಂಘಟಕರು …

Read More »

ರಾಜ್ಯದ 7 ಸ್ಮಾರ್ಟ್‌ಸಿಟಿಗಳಿಗೆ ಇದುವರೆಗೂ ₹4,557 ಕೋಟಿ ಖರ್ಚು: ಸರ್ಕಾರ

ಬೆಂಗಳೂರು: ರಾಜ್ಯದ 7 ಸ್ಮಾರ್ಟ್‌ಸಿಟಿಗಳಿಗೆ ಇದುವರೆಗೂ ₹4,557 ಕೋಟಿ ಖರ್ಚು ಮಾಡಲಾಗಿದೆ. ₹1,726 ಕೋಟಿ ಮೊತ್ತದ ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್‌ ಹೇಳಿದರು. ಕಾಂಗ್ರೆಸ್‌ನ ಅಬ್ದುಲ್‌ ಜಬ್ಬಾರ್‌ ಪ್ರಶ್ನೆಗೆ ಉತ್ತರಿಸಿದ ಅವರು, ಈಗಾಗಲೇ ಶೇ 90ರಷ್ಟು ಕಾಮಗಾರಿ ಪೂರ್ಣಗೊಂಡಿವೆ. ಕೇಂದ್ರ ಸರ್ಕಾರ ಕಾಮಗಾರಿಗಳ ಅನುಷ್ಠಾನಕ್ಕೆ ಜೂನ್‌-2024ರವರೆಗೆ ಅವಕಾಶ ನೀಡಿದೆ. ಎಲ್ಲ ಕಾಮಗಾರಿಗಳನ್ನೂ ನಾಲ್ಕು ತಿಂಗಳ ಒಳಗೆ ಅನುಷ್ಠಾನಗೊಳಿಸಲಾಗುವುದು ಎಂದರು. ಬರಗಾಲದಿಂದ ರಾಜ್ಯದಲ್ಲಿ 5.11 ಲಕ್ಷ ಎಕರೆ …

Read More »

ಚಿಕ್ಕೋಡಿ ಕ್ಷೇತ್ರಕ್ಕೆ ಪ್ರಿಯಾಂಕಾ, ಚಿಂಗಳೆ ಹೆಸರು ಸೂಚನೆ

ಚಿಕ್ಕೋಡಿ (ಬೆಳಗಾವಿ ಜಿಲ್ಲೆ): ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಪ್ರಿಯಾಂಕಾ ಜಾರಕಿಹೊಳಿ ಅಥವಾ ಲಕ್ಷ್ಮಣರಾವ್‌ ಚಿಂಗಳೆ ಅವರಿಗೆ ಟಿಕೆಟ್‌ ನೀಡುವಂತೆ, ಬೆಂಗಳೂರಿನಲ್ಲಿ ಮಂಗಳವಾರ ರಾತ್ರಿ ನಡೆದ ಜಿಲ್ಲೆಯ ನಾಯಕರ ಸಭೆಯಲ್ಲಿ ನಿರ್ಣಯಿಸಲಾಗಿದೆ ಎಂದು ಪಕ್ಷದ ಮೂಲಗಳು ಖಚಿತಪಡಿಸಿವೆ.   ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರ ಬೆಂಗಳೂರಿನ ನಿವಾಸದಲ್ಲಿ ರಾತ್ರಿ ಚಿಕ್ಕೋಡಿ ಲೋಕಸಭೆ ಟಿಕೆಟ್‌ಗೆ ಸಂಬಂಧಿಸಿದ ಎರಡನೇ ಸಭೆ ನಡೆಯಿತು. ಸಭೆಯಲ್ಲಿ ಚರ್ಚೆ ಮಾಡಿದ ಸಚಿವರು, ಶಾಸಕರು ಹಾಗೂ ನಾಯಕರು …

Read More »

ಗಡಿ ಸಮಸ್ಯೆಗೆ ಪ್ರತ್ಯೇಕ ಪೀಠ ಸ್ಥಾಪಿಸಲಿ: ಸಚಿವ ಶಂಭುರಾಜ್‌ ದೇಸಾಯಿ

ಬೆಳಗಾವಿ: ‘ಕರ್ನಾಟಕ- ಮಹಾರಾಷ್ಟ್ರ ಗಡಿ ವಿವಾದ ಬೇಗ ಬಗೆಹರಿಸಲು ಸುಪ್ರೀಂಕೋರ್ಟ್‌ನಲ್ಲಿ ಪ್ರತ್ಯೇಕ ಪೀಠ ಸ್ಥಾಪಿಸಲು ಬೇಡಿಕೆ ಸಲ್ಲಿಸಲಾಗುವುದು’ ಎಂದು ಮಹಾರಾಷ್ಟ್ರದ ಗಡಿ ಉಸ್ತುವಾರಿ ಸಚಿವ ಶಂಭುರಾಜ್‌ ದೇಸಾಯಿ ಹೇಳಿದ್ದಾರೆ. ಮಹಾರಾಷ್ಟ್ರದ ಮುಂಬೈನಲ್ಲಿ ಬುಧವಾರ ಕಾನೂನು ತಜ್ಞರು, ಎಂಇಎಸ್‌ ಮುಖಂಡರೊಂದಿಗೆ ಸಭೆ ನಡೆಸಿದ ಬಳಿಕ ಅವರು ಮಾಧ್ಯಮಗಳ ಜತೆ ಮಾತಾಡಿದರು. ‘ಈ ಗಡಿ ಸಮಸ್ಯೆ ಇನ್ನೂ ಪರಿಹಾರ ಆಗದಿರುವುದು ಸರಿಯಲ್ಲ. ಈಗಾಗಲೇ ಮೂರು ಬಾರಿ ವಿಚಾರಣೆಗೆ ಪಟ್ಟಿಯಲ್ಲಿ ಬಂದು ಮತ್ತೆ ಕೈಬಿಡಲಾಗಿದೆ. …

Read More »