Breaking News

Monthly Archives: ಫೆಬ್ರವರಿ 2024

ಪರಿಶಿಷ್ಟರ ಅನುದಾನ ಅನ್ಯಕಾರ್ಯಕ್ಕೆ ಬಳಸಬೇಡಿ: ದಸಂಸ

ಚಿಕ್ಕೋಡಿ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ಪಟ್ಟಣದ ಬಸವ ವೃತ್ತದಲ್ಲಿ ಬುಧವಾರ ಪ್ರತಿಭಟನೆ ನಡೆಸಲಾಯಿತು. ಪರಿಶಿಷ್ಟರಿಗೆ ಮೀಸಲಿಟ್ಟ ಅನುದಾನವನ್ನು ಬೇರೆ ಕೆಲಸಗಳಿಗೆ ಬಳಸಬಾರದು. ಪರಿಶಿಷ್ಟರಿಗೆ ನೀಡಿದ ಜಮೀನನ್ನು ಪರಭಾರೆ ಮಾಡಬಾರದು. ದೌರ್ಜನ್ಯ ತಡೆಗೆ ಪ್ರತಿಯಾಗಿ ಪ್ರಕರಣ ದಾಖಲಿಸಬಾರದು ಎಂಬುದೂ ಸೇರಿದಂತೆ ವಿವಿಧ ಬೇಡಿಕೆಗಳ ಮನವಿಯನ್ನು ಉಪ ವಿಭಾಗಾಧಿಕಾರಿ ಮಹೆಬೂಬಿ ಅವರಿಗೆ ಸಲ್ಲಿಸಿದರು. ಬಸವ ವೃತ್ತದ ಬಳಿಯಲ್ಲಿ ಕೆಲ ಕಾಲ ನಿಪ್ಪಾಣಿ- ಮುಧೋಳ ಹಾಗೂ ಸಂಕೇಶ್ವರ- …

Read More »

ಅಂಕಲಗಿ | ‘ನಗೆ ಹಬ್ಬ’ ಕಾರ್ಯಕ್ರಮ 26ರಂದು

ಅಂಕಲಗಿ: ಇಲ್ಲಿನ ಸಪ್ತಪದಿ ಕಲ್ಯಾಣ ಮಂಟಪದಲ್ಲಿ ಫೆ.26ರಂದು ಸಂಜೆ 5 ಗಂಟೆಗೆ ಗಂಗಾವತಿ ಪ್ರಾಣೇಶ ಹಾಗೂ ಅವರ ತಂಡದವರು ‘ನಗೆ ಹಬ್ಬ’ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ‘ಪ್ರಾಣೇಶ ತಂಡದಲ್ಲಿ ಬಸವರಾಜ ಮಹಾಮನಿ, ನರಸಿಂಹ ಜೋಶಿ, ಅಜೇಯ ಸಂಕೇಶ್ವರ, ತುಕಾರಾಮ ಬೀದರ್‌ ಅವರಿದ್ದಾರೆ. ಅಂಕಲಗಿಯ ಅಡವಿ ಸಿದ್ಧೇಶ್ವರ ಮಠದ ಅಮರಸಿದ್ಧೇಶ್ವರ ಸ್ವಾಮೀಜಿ ಕಾರ್ಯಕ್ರಮದ ಸಾನ್ನಿಧ್ಯ ವಹಿಸುವರು’ ಎಂದು ಪ್ರಾಯೋಜಕ ಸುರೇಶ ಪಟ್ಟಣಶೆಟ್ಟಿ ತಿಳಿಸಿದ್ದಾರೆ.

Read More »

ಚನ್ನಮ್ಮನ ಕಿತ್ತೂರು: ‘ನಾನೂ ರಾಣಿ ಚನ್ನಮ್ಮ’ ಸಮಾವೇಶ ಅಭಿಯಾನ

(ಬೆಳಗಾವಿ ಜಿಲ್ಲೆ): ಇಲ್ಲಿನ ಕೋಟೆ ಆವರಣದಲ್ಲಿ ದೇಶದ 75ಕ್ಕೂ ಹೆಚ್ಚು ಸಂಘಟನೆಗಳು ಬುಧವಾರ ಹಮ್ಮಿಕೊಂಡಿದ್ದ ‘ನಾನೂ ರಾಣಿ ಚನ್ನಮ್ಮ’ ರಾಷ್ಟ್ರೀಯ ಮಹಿಳಾ ಸಮಾವೇಶದಲ್ಲಿ 15 ರಾಜ್ಯಗಳ ಮಹಿಳಾ ಮುಖಂಡರು ಭಾಗವಹಿಸಿ ಸ್ತ್ರೀಶಕ್ತಿ ಪ್ರದರ್ಶಿಸಿದರು.   ರಾಜಗುರು ಸಂಸ್ಥಾನ ಕಲ್ಮಠದ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ ರಾಣಿ ಚನ್ನಮ್ಮನ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಜ್ಯೋತಿ ಮೆರವಣಿಗೆಗೆ ಚಾಲನೆ ನೀಡಿದರು. ‘ನಮ್ಮ ಭೂಮಿ ನಮ್ಮ ಹಕ್ಕು. ಅದನ್ನು ಪಡೆದೇ ತೀರುತ್ತೇವೆ. ಸಂವಿಧಾನ ರಕ್ಷಿಸಲು ನಾವು ಬದ್ಧರಾಗಿದ್ದೇವೆ. …

Read More »

ಭಾರತದಲ್ಲಿ ತಾಯಿಗಿದೆ ಪರಮೋಚ್ಛ ಸ್ಥಾನ: ಸಿದ್ಧರಾಮ ಸ್ವಾಮೀಜಿ

ಹಂದಿಗುಂದ: ‘ತಾಯಿ ಬಗ್ಗೆ ಎಷ್ಟೇ ವರ್ಣಿಸಿದರೂ ಕಡಿಮೆಯೇ. ನಮ್ಮ ದೇಶದಲ್ಲಿ ತಾಯಿ ಪರಮೋಚ್ಛ ಸ್ಥಾನ ನೀಡಲಾಗಿದೆ’ ಎಂದು ಗದಗ-ಡಂಬಳದ ತೋಂಟದಾರ್ಯ ಸಂಸ್ಥಾನಮಠದ ತೋಂಟದ ಸಿದ್ಧರಾಮ ಸ್ವಾಮೀಜಿ ಹೇಳಿದರು. ಹಂದಿಗುಂದದಲ್ಲಿ ನಡೆದ ಸಿದ್ಧೇಶ್ವರ ಮಠದ ಶಿವಾನಂದ ಸ್ವಾಮೀಜಿ ಪೂರ್ವಾಶ್ರಮದ ತಾಯಿ ಶಿವಗಂಗಮ್ಮ ಮಠದ ಅವರ ಅಮೃತ ಮಹೋತ್ಸವ ಮತ್ತು ಮಾತೃವಂದನೆ ಕಾರ್ಯಕ್ರಮದಲ್ಲಿ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು. ಶಿವಾನಂದ ಸ್ವಾಮೀಜಿ, ‘ಪ್ರತಿಯೊಬ್ಬರೂ ಹೆತ್ತವರ ಬಗ್ಗೆ ಕಾಳಜಿ ಮಾಡಬೇಕು. ಎಲ್ಲವನ್ನೂ ಮಾಡಿ ನಾನೇನು …

Read More »

13,000 ಕೋಟಿ ವೆಚ್ಚದ 36 ರಾಷ್ಟ್ರೀಯ ಹೆದ್ದಾರಿ ಯೋಜನೆ ಉದ್ಘಾಟಿಸಿದ ಗಡ್ಕರಿ

ಬೆಳಗಾವಿ: ‘ದೇಶದ ಪ್ರಮುಖ ನಗರಗಳನ್ನು ಸಂಪರ್ಕಿಸುವಂತೆ ಗ್ರೀನ್‌ ಕಾರಿಡಾರ್‌ ನಿರ್ಮಿಸುವುದು ನಮ್ಮ ಆದ್ಯತೆ. ಇಂಥ ಹೆದ್ದಾರಿಗಳು ಪ್ರಯಾಣದ ಸಮಯ, ವೆಚ್ಚ ಕಡಿಮೆ ಆಗುವುದಲ್ಲದೇ ಅಭಿವೃದ್ಧಿಗೆ ಪೂರಕವಾಗಿವೆ’ ಎಂದು ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದರು.   ನಗರದಲ್ಲಿ ಗುರುವಾರ ವಿವಿಧ ರಾಷ್ಟ್ರೀಯ ಹೆದ್ದಾರಿಗಳ ಉದ್ಘಾಟನೆ ಹಾಗೂ 18 ಹೊಸ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ‘ಕರ್ನಾಟಕ ರಾಜ್ಯ ಅತ್ಯಂತ ಸಂಪದ್ಭರಿತವಾಗಿದೆ. ಹೀಗಾಗಿ, ಕೇಂದ್ರವು …

Read More »

ನಿತಿನ್‌ ಗಡ್ಕರಿ ಹೆದ್ದಾರಿಗಳ ಬಾದ್‌ಶಹಾ:ಸತೀಶ ಜಾರಕಿಹೊಳಿ

ಬೆಳಗಾವಿ: ನಗರದಲ್ಲಿ ಗುರುವಾರ ನಡೆದ 36 ರಾಷ್ಟ್ರೀಯ ಹೆದ್ದಾರಿಗಳ ಲೋಕಾರ್ಪಣೆ ಹಾಗೂ 18 ಹೊಸ ಕಾಮಗಾರಿಗಳಿಗೆ ಶಂಕುಸ್ಥಾಪನೆ ಸಮಾರಂಭದಲ್ಲಿ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರು ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರನ್ನು ಹಾಡಿ ಹೊಗಳಿದರು.   ‘ನಿತಿನ್‌ ಗಡ್ಕರಿ ಅವರು ಹೆದ್ದಾರಿ ಸಚಿವರಾದ ಮೇಲೆ ಹೆದ್ದಾರಿಗಳ ಅಭಿವೃದ್ಧಿ ಪರ್ವ ಶುರುವಾಗಿದೆ. ಪಕ್ಷಾತೀತವಾಗಿ ಅವರು ಕೆಲಸ ಮಾಡುತ್ತಾರೆ. ಕೇಂದ್ರ ಹಾಗೂ ರಾಜ್ಯದಲ್ಲಿ ಬೇರೆಬೇರೆ ಸರ್ಕಾರಗಳು …

Read More »

ಮರಕ್ಕೆ ಕಾರು ಡಿಕ್ಕಿ: ಆರು ಮಂದಿ ಸ್ಥಳದಲ್ಲೇ ಸಾವು,

ಖಾನಾಪುರ (ಬೆಳಗಾವಿ ಜಿಲ್ಲೆ): ತಾಲ್ಲೂಕಿನ ನಂದಗಢ ಪೊಲೀಸ್ ಠಾಣೆ ವ್ಯಾಪ್ತಿಯ ಮಂಗೇನಕೊಪ್ಪದ ಹದ್ದಿನಲ್ಲಿ ಗುರುವಾರ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದಿದ್ದು ಸ್ಥಳದಲ್ಲೇ ಆರು ಮಂದಿ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಇನ್ನೂ ನಾಲ್ವರಿಗೆ ತೀವ್ರ ಗಾಯಗಳಾಗಿವೆ. ಧಾರವಾಡ ಹಾಗೂ ಹಾವೇರಿಯ ಎರಡು ಕುಟುಂಬದವರು ಈ ಕಾರಿನಲ್ಲಿದ್ದರು.   ಧಾರವಾಡದವರಾದ ಕಾರ್‌ ಚಾಲಕ ಶಾರೂಖ್‌ ಪೆಂಡಾರಿ (30), ಇಕ್ಬಾಲ್‌ ಜಮಾದಾರ (50), ಹಾವೇರಿಯವರಾದ ಸಾನಿಯಾ ಲಂಗೋಟಿ (37), ಉಮ್ರಾ ಬೇಗಮ್‌ ಲಂಗೋಟಿ (17), ಶಬನಮ್‌ ಲಂಗೋಟಿ …

Read More »

ಲೋಕಸಭೆ ಚುನಾವಣೆಯಲ್ಲಿ ನನ್ನ ಪುತ್ರಿ ಪ್ರಿಯಾಂಕಾ ಸ್ಪರ್ಧಿಸಲ್ಲ: ಸತೀಶ ಜಾರಕಿಹೊಳಿ

ಬೆಳಗಾವಿ: ‘ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ನನ್ನ ಪುತ್ರಿ ಪ್ರಿಯಾಂಕಾಗೆ ಟಿಕೆಟ್‌ ನೀಡುವ ವಿಷಯ ಚರ್ಚೆಯಾಗಿದೆ. ಆದರೆ, ಟಿಕೆಟ್‌ ಕೊಡಲು ನಾವು ಪಕ್ಷದ ವರಿಷ್ಠರಿಗೆ ಶಿಫಾರಸು ಮಾಡಿಲ್ಲ. ಅವರು ಚುನಾವಣೆಗೆ ಸ್ಪರ್ಧಿಸಲ್ಲ’ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಸ್ಪಷ್ಟಪಡಿಸಿದರು.   ‘ಚಿಕ್ಕೋಡಿ ಕ್ಷೇತ್ರದಲ್ಲಿ ಕಾಂಗ್ರೆಸ್‌ ಟಿಕೆಟ್‌ಗೆ ಲಕ್ಷ್ಮಣರಾವ್‌ ಚಿಂಗಳೆ, ಗಜಾನನ ಬುಟಾಳಿ ಸೇರಿ ಹಲವು ಆಕಾಂಕ್ಷಿಗಳಿದ್ದಾರೆ. ಚಿಕ್ಕೋಡಿ ಕ್ಷೇತ್ರದಿಂದ ಸ್ಪರ್ಧಿಸಲು ಸಾಮಾನ್ಯ ಕಾರ್ಯಕರ್ತರಿಗೆ ಟಿಕೆಟ್‌ ಕೊಡುತ್ತೇವೆ ಹೊರತು ನಮ್ಮ …

Read More »

ಯುವ ರಾಜಕುಮಾರ್ ಅಭಿನಯದ ʻಯುವʼ ಚಿತ್ರದ ಆಡಿಯೋ ಹಕ್ಕು ಅಧಿಕ ಮೊತ್ತಕ್ಕೆ ಮಾರಾಟ.

ಯಶಸ್ವಿ ಚಿತ್ರಗಳ ಮೂಲಕ ಸ್ಯಾಂಡಲ್‌ವುಡ್‌ನಲ್ಲಿ(Sandalwood) ಕೀರ್ತಿಪತಾಕೆಯನ್ನು ವಿಶ್ವದಾಧ್ಯಂತ ಪಸರಿಸಿದ ಹೊಂಬಾಳೆ(Hombale) ಫಿಲಂಸ್‌(Films) ಇದೀಗ ಮತ್ತೊಂದು ಅದ್ದೂರಿ ಚಿತ್ರ ನಿರ್ಮಾಣಕ್ಕೆ ಮುಂದಾಗಿದ್ದು, ದೊಡ್ಮನೆ ಮೊಮ್ಮಗ ಯುವ ರಾಜಕುಮಾರ್(Yuva Rajkumar) ಹೊಂಬಾಳೆ ಫಿಲಂಸ್‌ ಬ್ಯಾನರ್‌ನಲ್ಲಿ ತಯಾರಾಗುತ್ತಿರುವ ‘ಯುವ’ ಈ ಚಿತ್ರಕ್ಕೆ ನಾಯಕ‌ರಾಗಿ ಅಭಿನಯಿಸುವ ಮೂಲಕ ಕನ್ನಡ(Kannada) ಚಿತ್ರರಂಗಕ್ಕೆ ಎಂಟ್ರಿಕೊಡುತ್ತಿದ್ದಾರೆ.   “ಕೆ.ಜಿ.ಎಫ್”(KGF), “ಕಾಂತಾರ”(Kantara) ದಂತಹ ಯಶಸ್ವಿ ಚಿತ್ರಗಳನ್ನು ನಿರ್ಮಿಸಿದ ಹೆಗ್ಗಳಿಗೆ ಹೊಂಬಾಳೆ ಫಿಲಂಸ್ ಹೊಂದಿದೆ. ಇದೀಗ ಇದೇ ಬ್ಯಾನರ್‌ನಲ್ಲಿ ದೊಡ್ಮನೆಯ ಮತ್ತೊಂದು ಕುಡಿ …

Read More »

ದೇವಾಲಯಗಳಿಗೆ ಕನ್ನ ಹಾಕುವ ಬದಲು ವಿಧಾನಸೌಧದ ಮುಂದೆ ಹುಂಡಿ ಇಟ್ಟು ಬಿಡಿ

ಬೆಂಗಳೂರು: ರಾಜ್ಯ ಸರ್ಕಾರಕ್ಕೆ ಸರ್ಕಾರಿ ನೌಕರರಿಗೂ ಸಂಬಳ ಕೊಡಲು ಕಷ್ಟವಾಗುವ ಸ್ಥಿತಿ ಬಂದಿದೆ. ಶ್ರೀಮಂತ ದೇವಾಲಯಕ್ಕೆ ಸರಕಾರ ಕನ್ನ ಹಾಕಲು ಮುಂದಾಗಿದೆ. ದೇವಾಲಯಕ್ಕೆ ಕನ್ನ ಹಾಕುವ ಬದಲು ವಿಧಾನಸೌಧದ ಮುಂದೆ ಒಂದು ಹುಂಡಿ ಇಟ್ಟು ಬಿಡಿ. ದಾನಿಗಳು ಅಲ್ಲೇ ಬಂದು ದಾನ ಮಾಡುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಲೇವಡಿ ಮಾಡಿದ್ದಾರೆ.   ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 224 ಕ್ಷೇತ್ರಕ್ಕೆ ಒಂದೇ ಒಂದು ರೂಪಾಯಿ ಅನುದಾನವನ್ನೂ ಸರ್ಕಾರ ಕೊಡುತ್ತಿಲ್ಲ. ರಾಜ್ಯದ ಹಣೆಬರಹ …

Read More »