ಹುಬ್ಬಳ್ಳಿ : ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಬಿಜೆಪಿಗೆ (BJP) ಬರುತ್ತಾರೆ ಎನ್ನುವ ಬಗ್ಗೆ ಅನುಮಾನ ಕಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ವ್ಯಂಗ್ಯವಾಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ಸದನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರು 2024ರ ಲೋಕಸಭೆಯ ಚುನಾವಣೆಯ ವೇಳೆಯೂ ಬಿಜೆಪಿಯವರೇ (BJP) ಎಂದು ಹೇಳಿದ್ದಾರೆ. ಇದನ್ನು ನೋಡಿದರೇ ಖರ್ಗೆ ಅವರೇ ಬಿಜೆಪಿಗೆ ಬರುತ್ತಾರೆ ಎನ್ನುವ ಅನುಮಾನ ಬರುತ್ತಿದೆ ಎಂಬ ಅನುಮಾನ …
Read More »Monthly Archives: ಫೆಬ್ರವರಿ 2024
ಮೋದಿ ಕಂಡರೆ ಬಿಜೆಪಿಗರು ಇಲಿಗಳಂತಾಗುತ್ತಾರೆ: ತಂಗಡಗಿ
ಕೊಪ್ಪಳ: ಪ್ರಧಾನಿ (PM) ನರೇಂದ್ರ ಮೋದಿಯವರನ್ನು (narendra modi) ನೋಡಿದರೆ ರಾಜ್ಯ ಬಿಜೆಪಿ (BJP) ನಾಯಕರೆಲ್ಲ ಇಲಿಗಳಂತಾಗುತ್ತಾರೆ ಎಂದು ಸಚಿವ ಶಿವರಾಜ್ ತಂಗಡಗಿ (shivaraj tangadagi) ಹೇಳಿದರು. ಕೊಪ್ಪಳದ (Koppal) ಕನಕಗಿರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇವಲ ಧ್ವಜ ಹಿಡಿದು ಓಡಾಡುವುದನ್ನು ಬಿಟ್ಟು ಬಿಜೆಪಿಯವರು ದೆಹಲಿಗೆ (delhi) ಹೋಗಿ ರಾಜ್ಯದ ತೆರಿಗೆ ಪಾಲು ಕೇಳಲಿ. ನಾವು ಯಾರ ಆಸ್ತಿಯನ್ನು ಕೇಳುತ್ತಿಲ್ಲ. ಬಿಜೆಪಿಯವರು ಡಿ.ಕೆ. ಸುರೇಶ್ (d.k. suresh) ಬಗ್ಗೆ ಮಾತಾಡುವ …
Read More »ಸಿದ್ಧಗಂಗಾ ಮಠದ ಶಿವಕುಮಾರಶ್ರೀಗೆ ಮರಣೋತ್ತರ ಭಾರತ ರತ್ನ ಸಿಗಲಿ: ಸುರ್ಜೇವಾಲ ಒತ್ತಾಯ
ಬೆಂಗಳೂರು, ಫೆಬ್ರವರಿ 3: ಸಿದ್ಧಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿಗೆ ಮರಣೋತ್ತರ ಭಾರತ ರತ್ನ ನೀಡಬೇಕೆಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ(Randeep Surjewala)ಒತ್ತಾಯಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಅನ್ನ, ಅಕ್ಷರ, ಜ್ಞಾನದಂತಹ ತ್ರಿವಿಧ ದಾಸೋಹ ನೀಡಿದ ಮಹಾಪುರುಷ ಸಿದ್ಧಗಂಗಾ ಮಠದ ಶಿವಕುಮಾರಶ್ರೀಗೆ ಮರಣೋತ್ತರ ಭಾರತರತ್ನ ಸಿಗಲಿ. ಲಕ್ಷಾಂತರ ಮಕ್ಕಳಿಗೆ ಉಚಿತ ಅನ್ನ, ಶಿಕ್ಷಣ ನೀಡಿದ ಮಹನೀಯರು. ಈ ಗೌರವಕ್ಕೆ ಅವರಂತಹ …
Read More »ಮುಂದಿನ ವಾರದಿಂದ 29 ರೂ.ಗೆ ಸಿಗಲಿದೆ ಭಾರತ್ ಬ್ರಾಂಡ್ ಅಕ್ಕಿ
ನವದೆಹಲಿ,ಫೆ.3- ಬೆಲೆ ಏರಿಕೆ ಬಿಸಿಯಿಂದ ತತ್ತರಿಸಿ ರುವ ಜನಸಾಮಾನ್ಯರಿಗೆ ಅನುಕೂಲ ಕಲ್ಪಿಸಲು ಮುಂದಿನ ವಾರದಿಂದಲೇ ಭಾರತ್ ಬ್ರ್ಯಾಂಡ್ ಅಕ್ಕಿ ಮಾರಾಟ ಆರಂಭಿಸುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ. ಕೇಂದ್ರ ಸರ್ಕಾರವೇ ನೇರವಾಗಿ ಜನಸಾಮಾನ್ಯರಿಗೆ ಪ್ರತಿ ಕೆಜಿಗೆ 29 ರೂ.ನಂತೆ ಅಕ್ಕಿ ಮಾರಾಟ ಮಾಡಲು ನಿರ್ಧರಿಸಿದೆ. ಅಲ್ಲದೇ ಸಗಟು ಖರೀದಿದಾರರು ತಮ್ಮ ಬಳಿ ಹೊಂದಿರುವ ಅಕ್ಕಿ ಸಂಗ್ರಹದ ಪ್ರಮಾಣವನ್ನೂ ಬಹಿರಂಗಪಡಿಸಬೇಕು ಎಂದು ಕೇಂದ್ರ ಸರ್ಕಾರ ಸೂಚಿಸಿದೆ. ಈ ಬಗ್ಗೆ ಕೇಂದ್ರ ಆಹಾರ ಇಲಾಖೆಯ …
Read More »ದೆಹಲಿ ಸಿಸಿಬಿ ಪೊಲೀಸರಿಂದ ಕೇಜ್ರಿಗೆ ನೋಟಿಸ್
ನವದೆಹಲಿ, ಫೆ.3- ನಮ್ಮ ಸರ್ಕಾರವನ್ನು ಅಸ್ಥಿರಗೊಳಿ ಸಲು ಸಂಚು ರೂಪಿಸಿರುವ ಬಿಜೆಪಿ ಆಮ್ ಆದ್ಮಿ ಪಕ್ಷದ ಏಳು ಶಾಸಕರನ್ನು ಖರೀದಿಸಲು ಪ್ರಯತ್ನಿಸುತ್ತಿದೆ. ಇವರಿಗೆ ತಲಾ 25 ಕೋಟಿ ರೂ. ಆಫರ್ ನೀಡಿದೆ ಎಂದು ಆರೋಪಿಸಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ದೆಹಲಿ ಅಪರಾಧ ವಿಭಾಗದ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಕಳೆದ ವಾರ ಪತ್ರಿಕಾಗೋಷ್ಠಿಯಲ್ಲಿ ದೆಹಲಿ ಸಚಿವೆ ಅತಿಶಿ, ಬಿಜೆಪಿ ತನ್ನ ಏಳು ಶಾಸಕರಿಗೆ ಪಕ್ಷ ತೊರೆಯಲು …
Read More »ಪೂನಂ ಪಾಂಡೆ ಸತ್ತಿಲ್ಲ, ಸಾವಿನ ಸುದ್ದಿಗೆ ಹೊಸ ಟ್ವಿಸ್ಟ್..!
ಮುಂಬೈ,ಫೆ.3- ಸ್ವಯಂ ಸಾವಿನ ಸುದ್ದಿ ಹರಿಯಬಿಟ್ಟು ವ್ಯಾಪಕ ಚರ್ಚೆಗೆ ಗ್ರಾಸವಾಗಿದ್ದ ಬಾಲಿವುಡ್ ನಟಿ ಹಾಗೂ ಮಾಡೆಲ್ ಪೂನಂ ಪಾಂಡೆ ಇಂದು ದಿಢೀರ್ ಪ್ರತ್ಯಕ್ಷವಾಗಿ ನಾನು ಬದುಕಿದ್ದೇನೆ ಎಂದು ಹೇಳಿದ್ದಾರೆ. ಜೊತೆಗೆ ಗರ್ಭಕಂಠ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸಲು ಈ ರೀತಿ ಮಾಡಿದ್ದಾಗಿ ಸ್ಪಷ್ಟನೆ ನೀಡಿದ್ದಾರೆ. ನಿನ್ನೆ ಇದ್ದಕ್ಕಿದ್ದಂತೆ ಸುದ್ದಿಯೊಂದು ಹರಿದಾಡಿದ್ದು, ಉತ್ತರಪ್ರದೇಶದಲ್ಲಿ ಪೂನಂ ಪಾಂಡೆ ನಿಧನರಾಗಿದ್ದಾರೆ ಎಂಬ ಮಾಹಿತಿ ತಿಳಿದುಬಂತು. ಹಲವು ಗೊಂದಲಗಳ ನಡುವೆಯೇ ಪೂನಂ ಪಾಂಡೆ ಅವರ …
Read More »ರಾಜಕೀಯಕ್ಕೆ ಬರ್ತಾರಾ ಡಾ.ಮಂಜುನಾಥ್..?
ಬೆಂಗಳೂರು,ಫೆ.3- ರಾಜಕೀಯ ಪ್ರವೇಶ ಮಾಡುವ ಆಲೋಚನೆ ಮಾಡಿಲ್ಲ ಎಂದು ಜಯದೇವ ಆಸ್ಪತ್ರೆಯ ನಿವೃತ್ತ ನಿರ್ದೇಶಕರಾದ ಡಾ.ಸಿ.ಎನ್. ಮಂಜುನಾಥ್ ಇಂದಿಲ್ಲಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೈದ್ಯಕೀಯ ವೃತ್ತಿಯಲ್ಲಿ ಮುಂದುವರೆಯುವುದಾಗಿ ಹೇಳಿದರು. ರಾಜಕೀಯ ಪ್ರವೇಶ ಅಥವಾ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಲಿದ್ದಾರೆ ಎಂಬ ಊಹಾಪೋಹವನ್ನು ಅವರು ಅಲ್ಲೆಗೆಳೆದರು. ಕೆಂಪೇಗೌಡ ಆಸ್ಪತ್ರೆಯನ್ನು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನಾಗಿ ಮಾಡುವ ಉದ್ದೇಶವನ್ನು ಒಕ್ಕಲಿಗರ ಸಂಘ ಹೊಂದಿದ್ದು, ಅದರ ಸಂಪೂರ್ಣ ಜವಾಬ್ದಾರಿಯನ್ನು ವಹಿಸಿಕೊಳ್ಳುವಂತೆ ಒಕ್ಕಲಿಗರ ಸಂಘದ ಕೋರಿಕೆ …
Read More »ಅಖಿಲ ಭಾರತ ಪೊಲೀಸ್ ಆರ್ಚರಿ ಚಾಂಪಿಯನ್‍ಷಿಪ್ : ರಾಜಸ್ಥಾನ್ ಮಹಿಳಾ ತಂಡಕ್ಕೆ ಚಿನ್ನ
ಬೆಂಗಳೂರು, ಫೆ.3- ಕೋರಮಂಗಲದ ಕೆಎಸ್‍ಆರ್‍ಪಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 12ನೇ ಅಖಿಲ ಭಾರತ ಪೊಲೀಸ್ ಆರ್ಚರಿ ಚಾಂಪಿಯನ್‍ಷಿಪ್‍ನಲ್ಲಿ ರಿಕರ್ವ್ ತಂಡದ ಪುರುಷ ವಿಭಾಗದಲ್ಲಿ ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ಕ್ರೀಡಾಪಟುಗಳಾದ ತುಷಾರ್ ಪ್ರಭಾಕರ್ ಶೆಲ್ಕೆ, ನೀರಜ್ ಚೌಹಾಣ್, ಮುಖೇಶ್ ಬೋರೊ, ಜಿತೇಂದರ್ ಸಿಂಗ್ 6 ಪಾಯಿಂಟ್ ಗಳಿಸಿದ್ದಾರೆ. ಸಿಆರ್‍ಪಿಎಫ್ ತಂಡದ ಬಸಂತ್ ಕುಮಾರ್, ಕಮಲ್ ಸಾಗರ್, ಹೈದಬ್ ತಿರಿಯಾ, ವಿನಾಯಕ್ ವರ್ಮ ಅವರು 2 ಪಾಯಿಂಟ್‍ಗಳನ್ನು ಗಳಿಸಿರುತ್ತಾರೆ. ಈ ಹಂತದಲ್ಲಿ …
Read More »ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡಮತದಾನ ಸಾಧ್ಯತೆ ಇಲ್ಲ : ಸತೀಶ್ ಜಾರಕಿಹೊಳಿ
ಬೆಂಗಳೂರು,ಫೆ.2- ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನವಾಗುವ ಸಾಧ್ಯತೆಗಳಿಲ್ಲ. ನಮ್ಮ ಮತ ನಮಗೆ, ಅವರ ಮತ ಅವರಿಗೆ ಬೀಳಲಿವೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಲ್ಕು ಸ್ಥಾನಗಳಲ್ಲಿ ಕಾಂಗ್ರೆಸ್‍ಗೆ 3, ಬಿಜೆಪಿ-ಜೆಡಿಎಸ್‍ಗೆ 1 ಸ್ಥಾನದ ಹಂಚಿಕೆಯಾಗಬಹುದು. ಹೆಚ್ಚುವರಿ ಅಭ್ಯರ್ಥಿಯನ್ನು ಕಣಕ್ಕಿಳಿಸುವುದರಿಂದ ಅಡ್ಡ ಮತದಾನವಾಗುವ ಆತಂಕ ಇಲ್ಲ. ಅಗತ್ಯವಾಗಿ ಲಕ್ಷ್ಮಣ ಸವದಿ ಹಾಗೂ ಇತರರ ಹೆಸರುಗಳನ್ನು ತೇಲಿಬಿಡಲಾಗುತ್ತಿದೆ ಎಂದರು. ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾಗಾಂಧಿ ಕರ್ನಾಟಕ …
Read More »ಚರ್ಚೆಗೆ ಗ್ರಾಸವಾದ ಈಶ್ವರಾನಂದ ಪುರಿ ಸ್ವಾಮೀಜಿ ಹೇಳಿಕೆ
ಬೆಂಗಳೂರು,ಫೆ.3- ಮುಜರಾಯಿ ದೇವಸ್ಥಾನದಲ್ಲಿ ಗರ್ಭಗುಡಿ ಪ್ರವೇಶಕ್ಕೆ ಅವಕಾಶ ನೀಡದೆ ಅಸ್ಪೃಶ್ಯತೆ ಹಾಗೂ ತಾರತಮ್ಯ ಮಾಡಲಾಯಿತು ಎಂದು ಚಿತ್ರದುರ್ಗದ ಕನಕಪೀಠದ ಈಶ್ವರಾನಂದ ಪುರಿ ಸ್ವಾಮೀಜಿ ನೀಡಿರುವ ಹೇಳಿಕೆ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಶ್ರೀಗಳು ನಿನ್ನೆ ನೀಡಿದ ಹೇಳಿಕೆಗೆ ದೇವಸ್ಥಾನದ ಅರ್ಚಕರು ಸ್ಪಷ್ಟನೆ ನೀಡಿ ನಮ್ಮಲ್ಲಿ ಆ ರೀತಿ ಯಾವುದೇ ತಾರತಮ್ಯವಿಲ್ಲ. ಪ್ರತಿ ವರ್ಷ ವೈಕುಂಠ ಏಕಾದಶಿ ದರ್ಶನಕ್ಕೆ ನಾವೇ ಶ್ರೀಗಳನ್ನು ಆಹ್ವಾನ ಮಾಡುತ್ತೇವೆ. ದೇವಸ್ಥಾನದಿಂದ ಸಕಲ ಗೌರವ, ಸನ್ಮಾನಗಳನ್ನು ಮಾಡಿ ವಿನಯಪೂರಕವಾಗಿ …
Read More »