Breaking News

Daily Archives: ಮಾರ್ಚ್ 12, 2024

ಯಾವ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ ಎಂದ ಹೆಬ್ಬಾಳ್ಕರ್‌

ಕೆ.ಜಿ.ಹಳ್ಳಿ (ಮಾಲೂರು): ಗ್ಯಾರಂಟಿ ಸಮಾವೇಶಗಳನ್ನು (Guarantee Samavesha) ನಾವು ಕಾಟಾಚಾರಕ್ಕೆ, ಕೇವಲ ಹೆಸರಿಗಾಗಿ ಮಾಡುತ್ತಿಲ್ಲ. ಯೋಜನೆಗಳು ಯಾರಿಗೆ ತಲುಪಲಿಲ್ಲ ಎಂದು ತಿಳಿದುಕೊಂಡು ಅವುಗಳನ್ನು ಎಲ್ಲರಿಗೂ ತಲುಪಿಸುವ ಉದ್ದೇಶಕ್ಕಾಗಿ ಸಮಾವೇಶ ಮಾಡಲಾಗುತ್ತಿದೆ. ಯಾರಿಗೆ ತಲುಪಿಲ್ಲ ಎಂದು ತಿಳಿಸಿದರೆ ಅವರಿಗೆ ಖುದ್ದಾಗಿ ತಲುಪಿಸುವ ಕೆಲಸವನ್ನು ಮಾಡುತ್ತೇವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್‌ (Lakshmi Hebbalkar) ಹೇಳಿದ್ದಾರೆ. ಮಾಲೂರು ತಾಲೂಕಿನ ಕೆ.ಜಿ.ಹಳ್ಳಿಯಲ್ಲಿ ಸೋಮವಾರ ನಡೆದ ಟೆಕಲ್ ಹೋಬಳಿ …

Read More »

ಪ್ರತಾಪ್​, ಕಟೀಲ್​ಗೆ ಇಲ್ಲ ಟಿಕೆಟ್ ಬೆಳಗಾವಿಗೆ ಜಗದೀಶ್ ಶೆಟ್ಟರ್​, ಚಿಕ್ಕೋಡಿಗೆ ರಮೇಶ್ ಕತ್ತಿ ಅಭ್ಯರ್ಥಿ?:ವಿಜಯೇಂದ್ರ

ಬೆಂಗಳೂರು : ಮುಂಬರುವ ಲೋಕಸಭಾ ಚುನಾವಣೆಗೆ ರಾಜ್ಯದ 22 ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳ ಹೆಸರುಗಳು ಸೋಮವಾರ ಅಂತಿಮಗೊಂಡಿದೆ ಎನ್ನಲಾಗಿದೆ. ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ (ಸಿಇಸಿ) ಸೋಮವಾರ ಅಭ್ಯರ್ಥಿಗಳನ್ನು ನಿರ್ಧರಿಸಲು ತನ್ನ ಎರಡನೇ ಸಭೆ ನಡೆಸಿತು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಚುನಾವಣಾ ಸಮಿತಿಯು ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ. ಕರ್ನಾಟಕದ ಬಿಜೆಪಿ ನಾಯಕರ ಜೊತೆ ಸಭೆ ನಡೆಸಿರುವ ಬಿಜೆಪಿ ವರಿಷ್ಠರು 22 ಅಭ್ಯರ್ಥಿಗಳ ಆಯ್ಕೆಗೆ ಗ್ರೀನ್​ ಸಿಗ್ನಲ್​ ಕೊಟ್ಟಿದೆ. ಆದರೆ, ಕೆಲವು …

Read More »

ಅಂತಿಮವಾಯ್ತು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿ!

ಬೆಂಗಳೂರು, ಮಾರ್ಚ್ 12: ಲೋಕಸಭಾ ಚುನಾವಣೆಗೆ ಮೈತ್ರಿಯಾಗಿರುವ ಬಿಜೆಪಿ ಹಾಗೂ ಜೆಡಿಎಸ್‌ ನಾಯಕರು 28 ಲೋಕಸಭಾ ಕೇತ್ರಗಳನ್ನ ಗೆಲ್ಲುವ ಮೂಲಕ ಆಡಳಿತರೂಢ ಕಾಂಗ್ರೆಸ್‌ ಠಕ್ಕರ್‌ ಕೊಡಲು ಮುಂದಾಗಿದೆ. 28 ಲೋಕಸಭಾ ಕ್ಷೇತ್ರಗಳ ಫೈಕಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಮಾತ್ರ ಕಾಂಗ್ರೆಸ್‌ ಸಂಸದರಿದ್ದಾರೆ.   ಆದರೆ, ಈ ಬಾರಿ ಈ ಕ್ಷೇತ್ರವನ್ನ ಗೆಲ್ಲಲು ದಳಪತಿಗಳು ಮಾಸ್ಟರ್‌ ಪ್ಲಾನ್‌ ಮಾಡಿದ್ದಾರೆ.ಹೌದು, ಜಯದೇವ ಹೃದ್ರೋಗ ಸಂಸ್ಥೆಯ ಮಾಜಿ ನಿರ್ದೇಶಕ ಡಾ. ಸಿಎನ್ ಮಂಜುನಾಥ್ ಅವರನ್ನು …

Read More »

21 ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಪಟ್ಟಿ ಇಲ್ಲಿದೆ ನೋಡಿ

ಈ ಹಿನ್ನೆಲೆ ಕೆಪಿಸಿಸಿ ‌ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಹಾಗೂ ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೆವಾಲಾ ಸೇರಿದಂತೆ ಹಲವು ನಾಯಕರ ಜೊತೆಗೆ ಸಭೆ ನಡೆಸಿದ್ದು, ಸಭೆಯಲ್ಲಿ 21 ಲೋಕಸಭೆ ಕ್ಷೇತ್ರದ ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಚರ್ಚೆ ನಡೆದಿದೆ. ಈ ಆಕಾಂಕ್ಷಿಗಳ ಪಟ್ಟಿಯನ್ನ ಹೈಕಮಾಂಡ್‌ ಮುಂದೆ ಇಟ್ಟಿದ್ದು, ಕಾಂಗ್ರೆಸ್‌ ಹೈಕಮಾಂಡ್‌ ಯಾರಿಗೆ ಮಣೆ ಹಾಕುತ್ತೆ ಎಂಬುದನ್ನ ಕಾದುನೋಡ್ಬೇಕಾಗಿದೆ. ಕರ್ನಾಟಕದ 7 ಕ್ಷೇತ್ರಕ್ಕೆ ಅಭ್ಯರ್ಥಿಗಳ ಪಟ್ಟಿ …

Read More »

ಅಪಾಯಕಾರಿ ಕಾಟನ್ ಕ್ಯಾಂಡಿ,ಗೋಬಿ ಮಂಚೂರಿಯನ್ನು ಮಾರಾಟ ಮಾಡುವಂತಿಲ್ಲ: ದಿನೇಶ್ ಗುಂಡೂರಾವ್

ಬೆಂಗಳೂರು : ಅಪಾಯಕಾರಿ ಕಾಟನ್ ಕ್ಯಾಂಡಿ,ಗೋಬಿ ಮಂಚೂರಿಯನ್ನು ಮಾರಾಟ ಮಾಡುವಂತಿಲ್ಲ ಎಂದು ಆರೋಗ್ಯ ಸಚಿವ‌ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ವಿಧಾನಸೌಧ ದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಸಚಿವರು,ಗೋಬಿ ಮಂಚೂರಿ, ಕಾಟನ್ ಕ್ಯಾಂಡಿಯಲ್ಲಿ ಅಪಾಯಕಾರಿ ಕೃತಕ ಬಣ್ಣ ಬಳಕೆ ಹೆಚ್ಚಾಗಿರುವುದು ಆಹಾರ ತಪಾಸಣೆಯಲ್ಲಿ ಕಂಡು ಬಂದಿದೆ ಎಂದು ಹೇಳಿದರು. ಒಂದು ವೇಳೆ ಯಾರಾದರೂ ಇವುಗಳನ್ನು ಮಾರಾಟ ಮಾಡಿದರೆ ಅಥವಾ ಅಪಾಯಕಾರಿ ಕೃತಕ ಬಣ್ಣ ಬಳಕೆ ಮಾಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ …

Read More »

ಮೈಸೂರಿನಿಂದ ಯದುವೀರ್ ಒಡೆಯರ್ ಕಣಕ್ಕೆ

ಮೈಸೂರು: ಬಹುನಿರೀಕ್ಷಿತ 2024ರ ಲೋಕಸಭಾ ಚುನಾವಣೆ ಕಾವು ಜೋರಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ಸನ್ನು ಸೋಲಿಸಲು ಬಿಜೆಪಿ ಜತೆ ಜೆಡಿಎಸ್​ ಮೈತ್ರಿ ಮಾಡಿಕೊಂಡಿದೆ. ಗೆಲ್ಲೋ ಕುದುರೆಗಳಿಗೆ ಮಾತ್ರ ಟಿಕೆಟ್​ ಎಂದು ರಾಜ್ಯ ಬಿಜೆಪಿ ನಾಯಕರು ಈಗಾಗಲೇ ಘೋಷಣೆ ಮಾಡಿದ್ದಾರೆ. ಇಂದು ಕೂಡ ಅಭ್ಯರ್ಥಿಗಳ ಆಯ್ಕೆ ಸಂಬಂಧ ಬಿಜೆಪಿ ಹೈವೋಲ್ಟೇಜ್​​ ಮೀಟಿಂಗ್​ ನಡೆಸಿದೆ. ಸದ್ಯದ ಮೂಲಗಳ ಪ್ರಕಾರ ಎರಡು ಹಂತಗಳಲ್ಲಿ ಬಿಜೆಪಿ ಟಿಕೆಟ್​ ಘೋಷಣೆ ಆಗಲಿದೆ ಎಂದು ತಿಳಿದು ಬಂದಿದೆ. ಇನ್ನೂ, ರಾಜ್ಯದಲ್ಲಿ ಭಾರೀ …

Read More »

ಚುನಾವಣೆ ಬಿಸಿ ಏರತೊಡಗಿದ್ದು ದಿನ ಕಳೆದಂತೆ ವಿಭಿನ್ನ ಲೆಕ್ಕಾಚಾರ

ಬೆಳಗಾವಿ : ಲೋಕಸಭಾ ಚುನಾವಣೆ ಬಿಸಿ ಏರತೊಡಗಿದ್ದು ದಿನ ಕಳೆದಂತೆ ವಿಭಿನ್ನ ಲೆಕ್ಕಾಚಾರ ಹೊರಬರುತ್ತಿವೆ. ಈ ನಡುವೆ ಬೆಳಗಾವಿ ಹಾಗೂ ಚಿಕ್ಕೋಡಿ ಲೋಕಸಭಾ ಬಿಜೆಪಿ ಟಿಕೆಟ್ ಯಾರಿಗೆ ಎಂಬ ಚರ್ಚೆ ಜೋರಾಗಿದೆ. ಸಧ್ಯ ಮೂಲಗಳ ಪ್ರಕಾರ ಬೆಳಗಾವಿಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅದವರನ್ನೇ ಕಣಕ್ಕೆ ಇಳಿಸಲು ಬಿಜೆಪಿ ನಿರ್ಧರಿಸಿದೆ ಎನ್ನಲಾಗಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಕೈ ತಪ್ಪಿದ್ದಕ್ಕೆ ಕಾಂಗ್ರೆಸ್ ಸೇರಿ ಬಿಜೆಪಿಗೆ ಹೊಡೆತ ನೀಡಿದ್ದ ಶೆಟ್ಟರ್ ಅವರಿಗೆ …

Read More »